Connect with us

Uncategorized

ಧರೆಗುರುಳಿದ ರಸ್ತೆ ಬದಿಯ ತೆಂಗಿನ ಮರ..ವಿದ್ಯುತ್ ಕಂಬಗಳು, ತಂತಿಗಳು ಧರಾಶಾಹಿ..ಮೂವತ್ತು ಸೆಕೆಂಡ್ ಅಂತರದಲ್ಲಿ ಬಚಾವಾದ ವಿದ್ಯಾರ್ಥಿಗಳು ತುಂಬಿದ್ದ ಬಸ್..

Published

on

ಶಾಲಾ ವಿದ್ಯಾರ್ಥಿಗಳ, ಪ್ರಯಾಣಿಕರ ಅದೃಷ್ಟವೇನೋ ಇಂದಿನ ದಿನದಲ್ಲಿ ಚೆನ್ನಾಗಿತ್ತು..


ಕೂದಲೆಳೆ ಅಂತರದಲ್ಲಿ ಭಾರಿ ಅನಾಹುತವೊಂದು ತಪ್ಪಿದ ಘಟನೆ ವಿಟ್ಲ ಹೊರವಲಯದ ಕೋಡಪದವು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.

ಎಂದಿನಂತೆ ಶಾಲಾ ವಿದ್ಯಾರ್ಥಿಗಳೇ ತುಂಬಿದ್ದ ಸರ್ಕಾರಿ ಬಸ್ ತಾಳಿತ್ತನೂಜಿ ಎಂಬಲ್ಲಿಂದ ವಿಟ್ಲದ ಕಡೆಗೆ ಹೋಗುತ್ತಿತ್ತು..ಕೋಡಪದವು-ಮಜ್ಜೋಣಿ ಸಂಪರ್ಕ ರಸ್ತೆಯ ಗಂಡಿ ಎಂಬಲ್ಲಿಗೆ ತಲುಪುತ್ತಿದ್ದಂತೆ ಕೇವಲ ಮೂವತ್ತು ಸೆಕೆಂಡ್ ಅಂತರದಲ್ಲಿ ಬಸ್ಸಿನ ಮುಂಭಾಗದಲ್ಲಿ ತೆಂಗಿನ ಮರ ಬಿದ್ದ ರಭಸಕ್ಕೆ ವಿದ್ಯುತ್ ಕಂಬಗಳು ರಸ್ತೆಗೆ ಅಪ್ಪಳಿಸಿತ್ತು.


ಚಾಲಕನ ಕಣ್ಣೆದುರಲ್ಲೇ ನಡೆದ ದುರ್ಘಟನೆಯಿಂದ ಪ್ರಯಾಣಿಕರ, ವಿದ್ಯಾರ್ಥಿಗಳ ತೀವ್ರ ಆತಂಕಕ್ಕೆ ಕಾರಣವಾಗಿತ್ತು. ತಕ್ಷಣವೇ ಜಮಾಯಿಸಿದ ಸ್ಥಳೀಯರು ಅರ್ಧ ಗಂಟೆಯಲ್ಲೇ ಮರವನ್ನು ಮತ್ತು ವಿದ್ಯುತ್ ತಂತಿಗಳನ್ನು ತೆರವುಗೊಳಿಸಿ ಬಸ್ಸಿನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.


ಇನ್ನಾದರೂ ರಸ್ತೆ ಬದಿ ತೀರಾ ಅಪಾಯಕಾರಿ ನಿಂತಿರುವ ಮರಗಳನ್ನು ಲೋಕೋಪಯೋಗಿ ಇಲಾಖೆ ಮತ್ತು ಅರಣ್ಯ ಇಲಾಖೆಗಳ ಅಧಿಕಾರಿಗಳು ತೆರವುಗೊಳಿಸುವ ಮೂಲಕ ಸಂಭವಿಸಬಹುದಾದ ದುರಂತಗಳನ್ನು ತಡೆಯಬೇಕಾಗಿದೆ.

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

Bantawala

75 ವರ್ಷಗಳ ರಸ್ತೆ ಸಮಸ್ಯೆ ಬಗೆಹರಿಸಿದ ಅಧಿಕಾರಿಗಳು – ಉಕ್ಕುಡ ಕಲ್ಲಜರಿಯಲ್ಲಿ ಅಕ್ರಮ ಗೇಟ್ ತೆರವು.

Published

on

​ವಿಟ್ಲ : ಕಸಬಾ ಗ್ರಾಮದ ಉಕ್ಕುಡ ಕಲ್ಲಜರಿ ಪ್ರದೇಶದಲ್ಲಿ ಕಳೆದ 75 ವರ್ಷಗಳಿಂದ ಸಂಪರ್ಕ ರಸ್ತೆಯಿಲ್ಲದೆ ತೀವ್ರ ಸಂಕಷ್ಟ ಅನುಭವಿಸುತ್ತಿದ್ದ ಮೂರು ಬಡ ಕುಟುಂಬಗಳಿಗೆ ಕೊನೆಗೂ ಮುಕ್ತಿ ಸಿಕ್ಕಿದೆ.

ಸರ್ಕಾರಿ ಜಮೀನಿನಲ್ಲಿ ಹಾದುಹೋಗುತ್ತಿದ್ದ ರಸ್ತೆಗೆ ಖಾಸಗಿ ವ್ಯಕ್ತಿಯೊಬ್ಬರು ಅಕ್ರಮವಾಗಿ ಗೇಟ್ ಅಳವಡಿಸಿ ತಡೆಯೊಡ್ಡಿದ್ದ ಗೇಟನ್ನು ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದೆ. ​ದೂರಿನ ಹಿನ್ನೆಲೆ:​ಸ್ಥಳೀಯ ನಿವಾಸಿ ಶ್ರೀಮತಿ ಜಯಂತಿ ಎಂಬುವರು ಈ ಅಕ್ರಮ ತಡೆಯ ತೆರವಿಗಾಗಿ ವಿಟ್ಲ ಪಟ್ಟಣ ಪಂಚಾಯತಿಗೆ ಅಗತ್ಯ ದಾಖಲೆಗಳ ಸಹಿತ ದೂರು ನೀಡಿದ್ದರು. ದೂರಿನ ಗಂಭೀರತೆಯನ್ನು ಪರಿಗಣಿಸಿದ ಪಟ್ಟಣ ಪಂಚಾಯತ್ ಆಡಳಿತವು ಬಂಟ್ವಾಳ ತಹಶೀಲ್ದಾರರಿಗೆ ಮನವಿ ಸಲ್ಲಿಸಿ ಸೂಕ್ತ ಕ್ರಮಕ್ಕೆ ವಿನಂತಿಸಿತ್ತು.

​ತಹಶೀಲ್ದಾರ್ ಆದೇಶ ಮತ್ತು ಪರಿಶೀಲನೆ:​ಮನವಿಗೆ ತಕ್ಷಣ ಸ್ಪಂದಿಸಿದ ಬಂಟ್ವಾಳ ತಹಶೀಲ್ದಾರರು, ಸ್ಥಳ ತನಿಖೆ ನಡೆಸಿ ಅಕ್ರಮ ಗೇಟ್ ತೆರವುಗೊಳಿಸುವಂತೆ ವಿಟ್ಲ ಕಂದಾಯ ನಿರೀಕ್ಷಕರಿಗೆ ಹಾಗೂ ಭೂ ಮಾಪಕರಿಗೆ ಅಧಿಕೃತ ಆದೇಶ ನೀಡಿದ್ದರು. ​ಅಧಿಕಾರಿಗಳು ನಡೆಸಿದ ಸಮೀಕ್ಷೆ ಹಾಗೂ ಕಂದಾಯ ನಿರೀಕ್ಷಕರ ವರದಿಯ ಪ್ರಕಾರ, ಸರ್ವೇ ನಂ. 727/1ರಲ್ಲಿ ಬರುವ ರಸ್ತೆಯು ಸರ್ಕಾರಿ ಜಮೀನಿನಲ್ಲಿದೆ ಎಂಬುದು ದೃಢಪಟ್ಟಿದೆ. ​ರಸ್ತೆ ಅಭಿವೃದ್ಧಿಗೆ ಮಾತ್ರ ಅವಕಾಶ:​ಈ ಜಮೀನನ್ನು ರಸ್ತೆಯನ್ನು ಅಭಿವೃದ್ಧಿಪಡಿಸಲು ಮತ್ತು ಸಾರ್ವಜನಿಕರ ರಸ್ತೆ ಸಂಪರ್ಕಕ್ಕಾಗಿ ಮಾತ್ರ ಬಳಸಿಕೊಳ್ಳಲು ತಹಶೀಲ್ದಾರ್ ಕಚೇರಿಯಿಂದ ಸ್ಪಷ್ಟ ಆದೇಶ ನೀಡಲಾಗಿದೆ. ಬೇರೆ ಯಾವುದೇ ಉದ್ದೇಶಕ್ಕಾಗಿ ಈ ಸರ್ಕಾರಿ ಜಮೀನನ್ನು ಬಳಸಲು ಅವಕಾಶವಿರುವುದಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ​

ಅಕ್ರಮ ಗೇಟ್ ತೆರವು – ಕುಟುಂಬಗಳ ಕೃತಜ್ಞತೆ:​ತಹಶೀಲ್ದಾರ್ ಆದೇಶದಂತೆ ಇಂದು ಕಂದಾಯ ಅಧಿಕಾರಿಗಳು ಹಾಗೂ ವಿಟ್ಲ ಪಟ್ಟಣ ಪಂಚಾಯತ್ ಆಡಳಿತದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಕ್ರಮವಾಗಿ ಹಾಕಲಾಗಿದ್ದ ಗೇಟನ್ನು ತೆರವುಗೊಳಿಸಿ, ಅರ್ಜಿದಾರರಿಗೆ ರಸ್ತೆ ಸಂಪರ್ಕ ಕಲ್ಪಿಸಿಕೊಟ್ಟಿದ್ದಾರೆ. ​ದಶಕಗಳಿಂದ ಅನುಭವಿಸುತ್ತಿದ್ದ ನರಕಯಾತನೆಗೆ ಮುಕ್ತಿ ದೊರೆತಿದ್ದರಿಂದ ಹರ್ಷ ವ್ಯಕ್ತಪಡಿಸಿರುವ ಬಡ ಕುಟುಂಬಗಳು, ಸಕಾಲದಲ್ಲಿ ಸ್ಪಂದಿಸಿ ನ್ಯಾಯ ಒದಗಿಸಿದ ಅಧಿಕಾರಿಗಳಿಗೆ ಹಾಗೂ ಪಟ್ಟಣ ಪಂಚಾಯತ್ ಆಡಳಿತಕ್ಕೆ ಹೃದಯಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿವೆ.

Continue Reading

Belthangady

ಸೌಜನ್ಯ ಪ್ರಕರಣದ ತನಿಖಾ ಸಮಿತಿ ಪುನಾರಚನೆ: ಸಿಐಡಿ ಐಜಿಪಿ ಚೇತನ್ ಸಿಂಗ್ ರಾಥೋಡ್ ಮುಖ್ಯಸ್ಥರಾಗಿ ನೇಮಕ

Published

on

ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಿ ತಿದ್ದುಪಡಿ ಆದೇಶ ಹೊರಡಿಸಿದೆ.

ಕರ್ನಾಟಕ ಸರ್ಕಾರದ ಒಳಾಡಳಿತ ಇಲಾಖೆ (ಅಪರಾಧಗಳು) ದಿನಾಂಕ 30-10-2026 ರಂದು ಆದೇಶ ಸಂಖ್ಯೆ: ಹೆಚ್‌ಸಿಡಿ 228 ಸಿಒಡಿ 2026 ರಂತೆ ಈ ತಿದ್ದುಪಡಿ ಆದೇಶವನ್ನು ಪ್ರಕಟಿಸಿದೆ.

ಸೆಪ್ಟೆಂಬರ್ 24, 2026 ರಂದು ಹೊರಡಿಸಿದ್ದ ಮೂಲ ಆದೇಶದ ಕೋಷ್ಟಕದ ಕ್ರಮ ಸಂಖ್ಯೆ 01 ಮತ್ತು 05 ರಲ್ಲಿದ್ದ ಅಧಿಕಾರಿಗಳನ್ನು ಬದಲಾಯಿಸಲಾಗಿದೆ.

ತಿದ್ದುಪಡಿ ಆದೇಶದ ಪ್ರಕಾರ:

  1. ಶ್ರೀ ಚೇತನ್ ಸಿಂಗ್ ರಾಥೋಡ್, ಐಪಿಎಸ್, ಐಜಿಪಿ, ಸಿಐಡಿ, ಬೆಂಗಳೂರು – ಮುಖ್ಯಸ್ಥರಾಗಿ ನೇಮಕ
  2. ಶ್ರೀ ಶ್ರೀನಿಧಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಹಾಸನ ಜಿಲ್ಲೆ – ಸದಸ್ಯರಾಗಿ ನೇಮಕ

ಈ ಇಬ್ಬರು ಅಧಿಕಾರಿಗಳನ್ನು ಹೊರತುಪಡಿಸಿ ಉಳಿದ ಆದೇಶದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಎಸ್.ಅಂಬಿಕಾ ಅವರ ಸಹಿಯಿರುವ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಈ ಆದೇಶದ ಪ್ರತಿಯನ್ನು ಡಿಜಿ & ಐಜಿಪಿ, ಸಿಐಡಿ ಮುಖ್ಯಸ್ಥರು ಸೇರಿದಂತೆ ಸಂಬಂಧಪಟ್ಟ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ರವಾನಿಸಲಾಗಿದೆ.

Continue Reading

complaint

ವಿಟ್ಲ: ಪರವಾನಿಗೆ ಇಲ್ಲದೆ ವಸತಿ ಪ್ರದೇಶದಲ್ಲಿ ಹೋಟೆಲ್ ನಿರ್ಮಾಣ; ಪಟ್ಟಣ ಪಂಚಾಯತ್‌ನಿಂದ ಕಟ್ಟುನಿಟ್ಟಿನ ನೋಟೀಸ್ ಜಾರಿ! ಮುಂದುವರಿಯುತ್ತಿರುವ ಕಾಮಗಾರಿ ?

Published

on

ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಯಾವುದೇ ಅಧಿಕೃತ ಅನುಮತಿ ಪಡೆಯದೆ, ವಸತಿ ಉದ್ದೇಶದ ಜಮೀನಿನಲ್ಲಿ ವಾಣಿಜ್ಯ ಉದ್ದೇಶಕ್ಕಾಗಿ ಶೀಟ್ ಅಳವಡಿಸಿ ಹೋಟೆಲ್ ನಿರ್ಮಾಣ ಮಾಡುತ್ತಿರುವ ಅನಧಿಕೃತ ಕಾಮಗಾರಿಯ ವಿರುದ್ಧ ಪಟ್ಟಣ ಪಂಚಾಯತ್ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಕಾಮಗಾರಿ ಮಾತ್ರ ಸದ್ದಿಲ್ಲದೆ ನಡೆಯುತ್ತಲೇ ಇದೆ ಎಂದು ದೂರುದಾರರು ಆರೋಪಿಸಿದ್ದಾರೆ.

ಘಟನೆಯ ವಿವರ:

ವಿಟ್ಲದ ಅಡ್ಡದಬೀದಿ ನಿವಾಸಿ ಶ್ರೀ ಸಂತೋಷ್ ಕುಮಾರ್ ಅವರು ತಮ್ಮ ಮನೆಯ ಹತ್ತಿರ ವಸತಿ ಉದ್ದೇಶದ ಜಮೀನಿನಲ್ಲಿ ಶೀಟ್ ಅಳವಡಿಸಿ ಹೋಟೆಲ್ ಹಾಗೂ ವಾಣಿಜ್ಯ ಉದ್ದೇಶದ ಚಟುವಟಿಕೆಗಳನ್ನು ನಡೆಸುತ್ತಿದ್ದು, ಇದರಿಂದ ಸದರಿ ಪ್ರದೇಶ ಕಲುಷಿತಗೊಳ್ಳುತ್ತಿದೆ ಎಂದು ಸ್ಥಳೀಯರಾದ ಶ್ರೀ ಅಬ್ದುಲ್ ರವರು 2026ರ ಆಗಸ್ಟ್ 04 ರಂದು ವಿಟ್ಲ ಪಟ್ಟಣ ಪಂಚಾಯತ್‌ಗೆ ದೂರು ನೀಡಿದ್ದರು.

ದೂರಿನ ಮೇರೆಗೆ ಎಚ್ಚೆತ್ತ ಪಂಚಾಯತ್ ಆಡಳಿತವು, ತಮ್ಮ ಕಚೇರಿಯ ಕಿರಿಯ ಅಭಿಯಂತರರಿಂದ ಸ್ಥಳ ಪರಿಶೀಲನೆ ನಡೆಸಿ 2026ರ ಸೆಪ್ಟೆಂಬರ್ 01 ರಂದು ವರದಿ ಪಡೆದುಕೊಂಡಿದೆ.

ಪಂಚಾಯತ್‌ನಿಂದ ಎಚ್ಚರಿಕೆ ಹಾಗೂ ಸೂಚನೆ:

ವರದಿಯ ಆಧಾರದ ಮೇಲೆ ಶ್ರೀ ಸಂತೋಷ್ ಕುಮಾರ್ ಅವರಿಗೆ ವಿಟ್ಲ ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿಯು ನೋಟೀಸ್ ಜಾರಿ ಮಾಡಿದ್ದು, ಕೂಡಲೇ ಶೀಟ್ ಅಳವಡಿಸುವ ಹಾಗೂ ನಿರ್ಮಾಣ ಕೆಲಸವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಸೂಚಿಸಿದ್ದಾರೆ. ಆದರೆ ಪಟ್ಟಣ ಪಂಚಾಯತ್‌ ಕೃಪಾಕಟಾಕ್ಷದಲ್ಲಿ ಕಾಮಗಾರಿ ನಡೆಯುತ್ತಲೇ ಇದೆ ಎಂದು ದೂರುದಾರರು ಆಕ್ರೋಶಿತರಾಗಿದ್ದಾರೆ.

ಯಾವುದೇ ನಿರ್ಮಾಣ ಕಾಮಗಾರಿಯನ್ನು ಮುಂದುವರಿಸಲು ನಿಯಮಾನುಸಾರ ಸೂಕ್ತ ದಾಖಲೆಗಳೊಂದಿಗೆ ಕಚೇರಿಯಿಂದ ಪೂರ್ವಾನುಮತಿ ಪಡೆದುಕೊಳ್ಳಬೇಕು. ತಪ್ಪಿದಲ್ಲಿ, 1964ರ ಪುರಸಭಾ ಕಾಯ್ದೆಯನ್ವಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ನೋಟೀಸ್‌ನಲ್ಲಿ ಕಟ್ಟು ನಿಟ್ಟಾಗಿ ಎಚ್ಚರಿಕೆ ನೀಡಲಾಗಿದೆ.

Continue Reading

ads (2)
ads (3)
ads (4)
ads (5)
ads (6)
ads (1)
ads (8)
ads (7)

Trending

Copyright © 2025 Deevatige

error: Content is protected !!