Connect with us

cyber crime

ದ.ಕ.ಜಿಲ್ಲಾ ಸೈಬರ್ ಕ್ರೈಂ ಠಾಣಾ ಪೊಲೀಸರ ಬಲೆಗೆ ಬಿದ್ದ ಕುಖ್ಯಾತ ವಂಚಕ.

Published

on

ಇನ್ಸೂರೆನ್ಸ್ ಕಂಪನಿಯ ಪ್ರತಿನಿಧಿ ಎಂದು ಪರಿಚಯಿಸಿಕೊಂಡ ಅತಿಬುದ್ಧಿವಂತನೋರ್ವ ಪುತ್ತೂರು ಮೂಲದ ಯಶೋಧರ ಎಂಬವರಿಗೆ ವಿವಿಧ ಮೊಬೈಲ್‌ ನಂಬರುಗಳಿಂದ ಕರೆ ಮಾಡಿ, Insurance ಮಾಡಿಸಿಕೊಡುವುದಾಗಿ ಹಾಗೂ ಆ ಬಗ್ಗೆ ಹಣ ಪಾವತಿಸುವಂತೆ ತಿಳಿಸಿರುತ್ತಾನೆ. ಹಣ ನೀಡಲು ನಿರಾಕರಿಸಿದಾಗ ಇನ್ಸುರೆನ್ಸ್‌ ಕ್ಯಾನ್ಸಲ್‌ ಮಾಡುವುದಾಗಿ ತಿಳಿಸಿ, ಯಶೋಧರ ಅವರ Credit Card ನಂಬರ್‌ ಹಾಗೂ OTP ಪಡೆದು, Credit Card ನಿಂದ 2,37,036/- ಹಣವನ್ನು ಬೇರೆ ಖಾತೆಗೆ ವರ್ಗಾಯಿಸಿರುತ್ತಾನೆ.
ಈ ಬಗ್ಗೆ ಯಶೋಧರ ಅವರು ದಕ್ಷಿಣ ಕನ್ನಡ ಜಿಲ್ಲಾ ಸೈಬರ್‌ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ದೂರು ದಾಖಲಿಸಿಕೊಂಡ ಪೊಲೀಸರು ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಅ.ಕ್ರ: 52/2025, U/S: 66(D) IT ACT & 318(4), 319(2) BNS ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದರು. ಮಹಾರಾಷ್ಟ ಮೂಲದ ಹಾಗೂ ಪ್ರಸ್ತುತ ಮಂಡ್ಯ ಕೃಷ್ಣರಾಜ ಪೇಟೆಯಲ್ಲಿ ವಾಸಿಸುತ್ತಿರುವ ಆರೋಪಿ ಅವಿನಾಶ್‌ ರಮೇಶ್‌ ಗೌಡ (24) ಎಂಬಾತನನ್ನು, ದಿನಾಂಕ: 11-02-2026 ರಂದು ದಸ್ತಗಿರಿ ಮಾಡಿದ್ದು, ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ ನ್ಯಾಯಾಂಗ ಬಂಧನ ವಿಧಿಸಿರುವುದಾಗಿದೆ.

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

crime

ಯುಪಿಯಲ್ಲಿ ಬೆಚ್ಚಿಬೀಳಿಸುವ ಘಟನೆ: ‘ಡಿಜಿಟಲ್ ಅರೆಸ್ಟ್’ ಭೀತಿಯಿಂದ ಗೃಹಿಣಿ ಆತ್ಮಹತ್ಯೆ; ಅಂತ್ಯಕ್ರಿಯೆ ವೇಳೆ ಬಯಲಾಯ್ತು ಸೈಬರ್ ಕ್ರಿಮಿನಲ್‌ಗಳ ಕೃತ್ಯ!

Published

on

ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಮದುವೆ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ದುರಂತವೊಂದು ಸಂಭವಿಸಿದೆ. ಸೈಬರ್ ಅಪರಾಧಿಗಳ ‘ಡಿಜಿಟಲ್ ಅರೆಸ್ಟ್’ (Digital Arrest) ಜಾಲಕ್ಕೆ ಸಿಲುಕಿ ಭಯಭೀತರಾದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಏನಿದು ಘಟನೆ? ಮೃತ ಮಹಿಳೆಯನ್ನು ಶಾಂತಿ ಎಂದು ಗುರುತಿಸಲಾಗಿದೆ. ವಂಚಕರು ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ಆಕೆಗೆ ವಿಡಿಯೋ ಕಾಲ್ ಮಾಡಿ, ಆಕೆಯ ಹೆಸರಿನಲ್ಲಿ ಅಕ್ರಮ ಹಣ ವರ್ಗಾವಣೆ ಅಥವಾ ಯಾವುದೋ ಕಾನೂನುಬಾಹಿರ ಕೃತ್ಯ ನಡೆದಿದೆ ಎಂದು ಬೆದರಿಸಿದ್ದಾರೆ. ಗಂಟೆಗಟ್ಟಲೆ ಆಕೆಯನ್ನು ‘ಡಿಜಿಟಲ್ ಬಂಧನ’ದಲ್ಲಿರಿಸಿ (ವಿಡಿಯೋ ಕಾಲ್‌ನಿಂದ ಕಟ್ ಆಗದಂತೆ ತಡೆದು) ತೀವ್ರ ಮಾನಸಿಕ ಒತ್ತಡ ಹೇರಿದ್ದಾರೆ ಎನ್ನಲಾಗಿದೆ.

ಇದರಿಂದ ತೀವ್ರವಾಗಿ ಹೆದರಿದ ಮಹಿಳೆ, ತನ್ನ ಮದುವೆಯ ವಾರ್ಷಿಕೋತ್ಸವಕ್ಕೆ ಒಂದು ದಿನ ಬಾಕಿ ಇರುವಾಗಲೇ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಯುವ ಮುನ್ನ ತನ್ನ ಪತಿಗೆ ವಾಟ್ಸಾಪ್ ಸಂದೇಶ ಕಳುಹಿಸಿ, “ನನ್ನನ್ನು ಕ್ಷಮಿಸಿ, ನಮ್ಮ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ” ಎಂದು ಬರೆದಿದ್ದಾರೆ.

ದುರಂತ ಬಯಲಾದದ್ದು ಹೇಗೆ? ಮಹಿಳೆಯ ಅಂತ್ಯಕ್ರಿಯೆಯ ಸಮಯದಲ್ಲಿ ಆಕೆಯ ಮೊಬೈಲ್‌ಗೆ ಸತತವಾಗಿ ಕರೆಗಳು ಬಂದಾಗ ಕುಟುಂಬಸ್ಥರಿಗೆ ಅನುಮಾನ ಬಂದಿದೆ. ನಂತರ ಪರಿಶೀಲಿಸಿದಾಗ ಸೈಬರ್ ವಂಚಕರು ಆಕೆಯನ್ನು ಹೇಗೆ ಬೆದರಿಸಿದ್ದರು ಎಂಬ ವಿಷಯ ಬೆಳಕಿಗೆ ಬಂದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಇಂತಹ ‘ಡಿಜಿಟಲ್ ಅರೆಸ್ಟ್’ ವಂಚನೆಗಳು ಹೆಚ್ಚುತ್ತಿದ್ದು, ಸಾರ್ವಜನಿಕರು ಅಪರಿಚಿತ ಕರೆಗಳ ಬಗ್ಗೆ ಜಾಗರೂಕರಾಗಿರಬೇಕು ಎಂದು ಪೊಲೀಸರು ಎಚ್ಚರಿಸಿದ್ದಾರೆ.

ಡಿಜಿಟಲ್ ಅರೆಸ್ಟ್ ಎಂದರೇನು?
ಇದು ಸೈಬರ್ ವಂಚಕರ ಹೊಸ ತಂತ್ರವಾಗಿದ್ದು, ಸಂತ್ರಸ್ತರನ್ನು ಮನೆಯಿಂದ ಹೊರಬರದಂತೆ ಹೆದರಿಸಿ, ವಿಡಿಯೋ ಕರೆ ಮೂಲಕ ಪೊಲೀಸ್, ಸಿಬಿಐ ಅಥವಾ ಇಡಿ ಅಧಿಕಾರಿಗಳಂತೆ ನಟಿಸಿ, ಸುಳ್ಳು ಪ್ರಕರಣಗಳಲ್ಲಿ ಬಂಧಿಸುವುದಾಗಿ ಬೆದರಿಸಿ ಹಣ ಸುಲಿಗೆ ಮಾಡುತ್ತಾರೆ.

ಎಚ್ಚರಿಕೆ:
ಪೊಲೀಸರು ಅಥವಾ ಯಾವುದೇ ತನಿಖಾ ಸಂಸ್ಥೆಗಳು ವಿಡಿಯೋ ಕರೆಗಳ ಮೂಲಕ ಅಥವಾ ವಾಟ್ಸಾಪ್‌ನಲ್ಲಿ ಯಾರನ್ನೂ ‘ಡಿಜಿಟಲ್ ಅರೆಸ್ಟ್’ ಮಾಡುವುದಿಲ್ಲ. ಇಂತಹ ಕರೆಗಳು ಬಂದರೆ ತಕ್ಷಣವೇ 1930 ಗೆ ಕರೆ ಮಾಡಿ ಸೈಬರ್ ಕ್ರೈಮ್‌ಗೆ ದೂರು ನೀಡಿ.

Continue Reading

cyber crime

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ‌ ಕಾಸರಗೋಡು ಗಣೇಶ್‌ ಪ್ರಸಾದ್ ಮಂಗಳೂರು ಪೊಲೀಸರ ವಶಕ್ಕೆ

Published

on

ಸೌಹಾರ್ದತೆಯ ತಾಣವಾದ ಕರಾವಳಿಯಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಕೋಮು ದ್ವೇಷ ಬಿತ್ತಲು ಯತ್ನಿಸುವವರ ವಿರುದ್ಧ ಮಂಗಳೂರು ಪೊಲೀಸರು ಕಠಿಣ ಕ್ರಮ ಮುಂದುವರಿಸಿದ್ದಾರೆ. ಜನವರಿ ತಿಂಗಳಿನಲ್ಲಿ ನಡೆದ ಕಾರ್ಯಕ್ರಮವೊಂದರ ವಿಡಿಯೋಗೆ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ ಕಮೆಂಟ್ ಹಾಕಿದ ಆರೋಪದ ಮೇಲೆ ಕಾಸರಗೋಡು ಮೂಲದ ವ್ಯಕ್ತಿಯನ್ನು ಕಂಕನಾಡಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಕಳೆದ ಜನವರಿ ತಿಂಗಳಿನಲ್ಲಿ ಮಂಗಳೂರಿನ ಇಂಡಿಯಾನಾ ಕನ್ವೆನ್ಷನ್ ಸೆಂಟರ್‌ನಲ್ಲಿ ‘ಕಿರಾತ್’ (ಕುರಾನ್ ಪಠಣ) ಸ್ಪರ್ಧೆ ನಡೆದಿತ್ತು. ಈ ಕಾರ್ಯಕ್ರಮದ ವಿಡಿಯೋವನ್ನು ಪ್ರಮುಖ ಮಾಧ್ಯಮ ಸಂಸ್ಥೆಯಾದ ‘ಉದಯವಾಣಿ’ ತನ್ನ ಫೇಸ್‌ಬುಕ್ ಪುಟದಲ್ಲಿ ಪ್ರಸಾರ ಮಾಡಿತ್ತು. ಈ ವಿಡಿಯೋದ ಅಡಿಯಲ್ಲಿ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ನಿವಾಸಿ ಎಸ್ ಎನ್ ಕಬನುರಾಯ ಅವರ ಮಗ ಗಣೇಶ್ ಪ್ರಸಾದ್ (41 ವರ್ಷ) ಎಂಬಾತನು ತನ್ನ ಫೇಸ್‌ಬುಕ್ ಖಾತೆಯಿಂದ ಅತ್ಯಂತ ಪ್ರಚೋದನಕಾರಿ ಕಮೆಂಟ್ ಮಾಡಿದ್ದನು.“ಮಕ್ಕಳ ತಲೆಯನ್ನು ಬ್ರೈನ್ ವಾಶ್ ಮಾಡಿ ನಾಳೆ ದೇಶಕ್ಕೆ ಬಾಂಬ್ ಇಡೋಕೆ ಕಳಿಸೋದು ಅಷ್ಟೇ” ಎಂಬ ವಿವಾದಾತ್ಮಕ ಹೇಳಿಕೆಯನ್ನು ಪೋಸ್ಟ್ ಮಾಡುವ ಮೂಲಕ ಸಮಾಜದಲ್ಲಿ ಅಶಾಂತಿ ಮತ್ತು ಧರ್ಮಗಳ ನಡುವೆ ದ್ವೇಷ ಹುಟ್ಟುಹಾಕಲು ಯತ್ನಿಸಿದ ಆರೋಪ ಇವನ ಮೇಲಿದೆ.

ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 15/2026 ರಂತೆ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಮಾರ್ಚ್ 27ರಂದು ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ. ಕಲಂ 196 BNS (Bharatiya Nyaya Sanhita): ಧರ್ಮ, ಜಾತಿ ಅಥವಾ ಭಾಷೆಯ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು. ಮತ್ತು ಕಲಂ 66 IT ಕಾಯ್ದೆ: ಮಾಹಿತಿ ತಂತ್ರಜ್ಞಾನ ದುರ್ಬಳಕೆ. ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ.

ನಮ್ಮ ಕರಾವಳಿ ಭಾಗವು ಸೂಕ್ಷ್ಮ ಪ್ರದೇಶವಾಗಿದ್ದು, ಇಲ್ಲಿನ ಶಾಂತಿ ಕದಡಲು ಸಣ್ಣದೊಂದು ಕಿಡಿ ಸಾಕು ಎನ್ನುವುದನ್ನು ಸಮಾಜಘಾತುಕ ಶಕ್ತಿಗಳು ಅರಿತಿವೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಕಮೆಂಟ್ ಮಾಡುವ ಮುನ್ನ ಯೋಚಿಸಿರಿ, ನಿಮ್ಮ ಒಂದು ಕಮೆಂಟ್ ಅಥವಾ ಶೇರ್ ಸಮಾಜದ ಶಾಂತಿಯನ್ನು ಹಾಳುಗೆಡವಬಹುದು ಮತ್ತು ನಿಮ್ಮನ್ನು ಜೈಲು ಪಾಲಾಗಿಸಬಹುದು. ಯಾವುದೇ ಧರ್ಮ ಅಥವಾ ಸಮುದಾಯವನ್ನು ಗುರಿಯಾಗಿಸಿ ಹರಡುವ ಸುಳ್ಳು ಸುದ್ದಿಗಳ ಬಗ್ಗೆ ಎಚ್ಚರಿಕೆ ಇರಲಿ.ಸೈಬರ್ ಕ್ರೈಂ ವಿಭಾಗವು ಪ್ರತಿಯೊಂದು ಪೋಸ್ಟ್ ಮತ್ತು ಕಮೆಂಟ್‌ಗಳ ಮೇಲೆ ತೀವ್ರ ನಿಗಾ ಇರಿಸಿದೆ. ಅನಾಮಧೇಯ ಖಾತೆಗಳ ಮೂಲಕ ದ್ವೇಷ ಹರಡಿದರೂ ತಾಂತ್ರಿಕವಾಗಿ ಪತ್ತೆಹಚ್ಚುವುದು ಈಗ ಸುಲಭವಾಗಿದೆ. ಭಾವೋದ್ವೇಗಕ್ಕೆ ಒಳಗಾಗಿ ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದು ನಿಮ್ಮ ಭವಿಷ್ಯವನ್ನು ಹಾಳು ಮಾಡುತ್ತದೆ. ಸಮಾಜದಲ್ಲಿ ಸಾಮರಸ್ಯ ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಕಾನೂನು ಉಲ್ಲಂಘಿಸುವವರ ಬಗ್ಗೆ ಮಾಹಿತಿ ಇದ್ದಲ್ಲಿ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ.

Continue Reading

cyber crime

AI ತಂತ್ರಜ್ಞಾನ ಬಳಸಿ ಕೋಮುದ್ವೇಷ ಹರಡುವ ವಿಡಿಯೋ ಹಂಚಿಕೆ: ಮಂಗಳೂರಿನ ವ್ಯಕ್ತಿ ಬೆಂಗಳೂರಿನಲ್ಲಿ ಬಂಧನ

Published

on

ಮಂಗಳೂರು: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿಕೊಂಡು ವಿಡಿಯೋ ತಿರುಚಿ, ಸಾಮಾಜಿಕ ಜಾಲತಾಣಗಳಲ್ಲಿ ಕೋಮುದ್ವೇಷಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಂಟ್ವಾಳ ಮೂಲದ ವ್ಯಕ್ತಿಯೊಬ್ಬನನ್ನು ಕಂಕನಾಡಿ ನಗರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಕುಡೆಲ್ ಹೌಸ್ ನಿವಾಸಿ ಮಹಮ್ಮದ್ ರಫೀಕ್ (38) ಎಂದು ಗುರುತಿಸಲಾಗಿದೆ. ಈತ ಫೇಸ್‌ಬುಕ್‌ನಲ್ಲಿ “ನಝೀರ ಮಂಗಳೂರು” ಎಂಬ ಹೆಸರಿನ ಖಾತೆಯ ಮೂಲಕ ವಿವಾದಾತ್ಮಕ ಕೃತ್ಯ ಎಸಗಿರುವುದು ತನಿಖೆಯಲ್ಲಿ ದೃಢಪಟ್ಟಿದೆ.

2025ರ ಅಕ್ಟೋಬರ್‌ನಲ್ಲಿ ಆರೋಪಿಯು ತನ್ನ ಫೇಸ್‌ಬುಕ್ ಖಾತೆಯಲ್ಲಿ AI ತಂತ್ರಜ್ಞಾನ ಬಳಸಿ ಎಡಿಟ್ ಮಾಡಲಾದ ವಿಡಿಯೋವೊಂದನ್ನು ಹಂಚಿಕೊಂಡಿದ್ದನು. ಇದು ಸಮಾಜದಲ್ಲಿ ಶಾಂತಿ ಕದಡುವ ಮತ್ತು ಕೋಮು ಸಂಘರ್ಷಕ್ಕೆ ಪ್ರಚೋದಿಸುವ ಉದ್ದೇಶ ಹೊಂದಿತ್ತು ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಮಂಗಳೂರಿನ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 196, 353(1), ಮತ್ತು 351(2) ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಕೈಗೊಳ್ಳಲಾಗಿತ್ತು.

ತಲೆಮರೆಸಿಕೊಂಡಿದ್ದ ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದ ಪೊಲೀಸರು, ಖಚಿತ ಮಾಹಿತಿಯ ಮೇರೆಗೆ ಮಾರ್ಚ್ 22, 2026 ರಂದು ಬೆಂಗಳೂರಿನಲ್ಲಿ ಆತನನ್ನು ದಸ್ತಗಿರಿ ಮಾಡಿದ್ದಾರೆ. ಬಳಿಕ ಆತನನ್ನು ಮಂಗಳೂರಿಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

Continue Reading

Trending

Copyright © 2025 Deevatige

error: Content is protected !!