Connect with us

accident

ತಡರಾತ್ರಿ ಪ್ರಪಾತಕ್ಕೆ ಜಿಗಿದ ಬಾಕ್ಸೈಟ್ ಸಾಗಾಟದ ಲಾರಿ..ಲಾರಿಯಿಂದ ಜಿಗಿದು ಪ್ರಾಣ ರಕ್ಷಿಸಿದ ಚಾಲಕನ ಸಮಯಪ್ರಜ್ಞೆ.

Published

on

.ಕನ್ಯಾನದಿಂದ ವಿಟ್ಲ ಮೂಲಕ ಸಂಚರಿಸಬೇಕಾಗಿದ್ದ ಬಾಕ್ಸೈಟ್ ಸಾಗಾಟದ ಲಾರಿ ಚಾಲಕನ ಎಡವಟ್ಟಿನಿಂದಾಗಿ ತಡರಾತ್ರಿ ಎರಡು ಗಂಟೆಯ ಸುಮಾರಿಗೆ ರಸ್ತೆ ಬದಲಾಗಿ ಕೇರಳ ರಸ್ತೆಯಲ್ಲಿ ಸಂಚರಿಸಿತ್ತು.

ಕನ್ಯಾನ ಪೇಟೆಯಿಂದ ವಿಜಯಡ್ಕ, ಆನೆಕಲ್ಲು ಮಂಜೇಶ್ವರ ಸಂಪರ್ಕ ರಸ್ತೆಯಲ್ಲಿ ಸಂಚರಿಸಿದ ಚಾಲಕ ಬಳಿಕ ಸಾಲೆತ್ತೂರು ತಲುಪಲು ಬಾಕ್ರಬೈಲು ರಸ್ತೆಯಲ್ಲಿ ಸಂಚಾರ ಬೆಳಿಸಿದ್ದಾನೆ. ತೀರಾ ಅಪಘಾತ ವಲಯವಾಗಿರುವ ತಿರುವು ಮುರುವು ಬಾಕ್ರಬೈಲು ಘಾಟಿ ರಸ್ತೆಯಲ್ಲಿ ಲಾರಿ ಇಳಿಯುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ಬಾಕ್ಸೈಟ್ ಸಾಗಾಟದ ಲಾರಿ ಪ್ರಪಾತಕ್ಕೆ ಜಿಗಿದಿದೆ. ಅಪಘಾತದ ಅಪಾಯವನ್ನರಿತ ಬುದ್ಧಿವಂತ ಚಾಲಕ ತನ್ನ ಸಮಯ ಪ್ರಜ್ಞೆಯಿಂದ ಲಾರಿಯೊಳಗಿಂದ ಗುಡ್ಡಕ್ಕೆ ಜಿಗಿದು ಪ್ರಾಣ ರಕ್ಷಿಸಿಕೊಂಡಿದ್ದಾನೆ.

Continue Reading
Advertisement

accident

ಬಂಟ್ವಾಳ: ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ – ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

Published

on

ಮಂಗಳೂರು: ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ನಡೆದಿದೆ.

ಉಳ್ಳಾಲ ತಾಲೂಕಿನ ಬೋಳಿಯಾರು ಗ್ರಾಮದ ನಿವಾಸಿ ಭಾರತಿ (48) ಅಪಘಾತಕ್ಕೀಡಾದ ಮಹಿಳೆ. ಇವರು ತನ್ನ ಮಗಳು ದೀಪ್ತಿ ಅವರೊಂದಿಗೆ ಸಜಿಪಮುನ್ನೂರಿನ ಗುಳಿಗಜ್ಜನ ಕಟ್ಟೆಗೆ ಕಾಣಿಕೆ ಹಾಕಲು ಬಂದಿದ್ದರು. ಕಾಣಿಕೆ ಮುಗಿಸಿ ವಾಪಸ್ಸಾಗುವಾಗ ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿಯನ್ನು ದಾಟಲು ಪ್ರಯತ್ನಿಸುತ್ತಿದ್ದರು. ಈ ವೇಳೆ ಮೆಲ್ಕಾರ್ ಕಡೆಯಿಂದ ಮುಡಿಪು ಕಡೆಗೆ ಅತೀ ವೇಗವಾಗಿ ಬಂದ ಬಿಳಿ ಬಣ್ಣದ ಕಾರು ಮಹಿಳೆಗೆ ಬಲವಾಗಿ ಡಿಕ್ಕಿ ಹೊಡೆದಿದೆ.

ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ: ಡಿಕ್ಕಿಯ ರಭಸಕ್ಕೆ ಭಾರತಿ ಅವರು ಗಾಳಿಯಲ್ಲಿ ಹಾರಿ ರಸ್ತೆಯ ಬದಿಗೆ ಬಿದ್ದಿದ್ದಾರೆ. ಅಪಘಾತದ ಭೀಕರ ದೃಶ್ಯವು ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಮತ್ತು ವಾಹನ ಸವಾರರು ತಕ್ಷಣ ಸಹಾಯಕ್ಕೆ ಧಾವಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ ಭಾರತಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Continue Reading

accident

ಬೆಳ್ತಂಗಡಿ: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನ ಬಾಗಿಲು ತೆರೆದು ರಸ್ತೆಗೆ ಬಿದ್ದ ಸಹೋದರಿಯರು; ಚಾಲಕ, ನಿರ್ವಾಹಕನ ವಿರುದ್ಧ ಕೇಸ್ ದಾಖಲು

Published

on

ಬೆಳ್ತಂಗಡಿ: ಚಲಿಸುತ್ತಿದ್ದ ಸರ್ಕಾರಿ ಬಸ್ಸಿನ ಬಾಗಿಲು ಆಕಸ್ಮಿಕವಾಗಿ ತೆರೆದ ಪರಿಣಾಮ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿ ಸಹೋದರಿಯರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಎಂಬಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ: ಮಾರ್ಚ್ 31ರಂದು ಬೆಳಗ್ಗೆ ಕಳಿಯ ಗ್ರಾಮದ ನಿವಾಸಿಗಳಾದ ಚರಿಷ್ಮಾ (17) ಮತ್ತು ಚದ್ಮಕಾ (15) ಎಂಬ ಸಹೋದರಿಯರು ಎಂದಿನಂತೆ ಕಾಲೇಜಿಗೆ ಹೋಗಲು ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಬಸ್ ಕಳಿಯದಿಂದ ಬೆಳ್ತಂಗಡಿ ಕಡೆಗೆ ಸಂಚರಿಸುತ್ತಿತ್ತು. ಗೇರುಕಟ್ಟೆ ಸಮೀಪ ತಲುಪುತ್ತಿದ್ದಂತೆ ಬಸ್ಸಿನ ಬಾಗಿಲು ದಿಢೀರನೆ ತೆರೆದುಕೊಂಡಿದ್ದು, ಬಾಗಿಲ ಬಳಿಯಿದ್ದ ಇಬ್ಬರೂ ವಿದ್ಯಾರ್ಥಿನಿಯರು ಹೊರಕ್ಕೆ ಎಸೆಯಲ್ಪಟ್ಟಿದ್ದಾರೆ.

ರಸ್ತೆಗೆ ಬಿದ್ದ ಪರಿಣಾಮ ಇಬ್ಬರೂ ಸಹೋದರಿಯರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವಿದ್ಯಾರ್ಥಿನಿಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಅಜಾಗರೂಕತೆಯ ಆರೋಪ: ಬಸ್ ಚಾಲಕ ದಯಾನಂದ ಅವರು ವಾಹನವನ್ನು ಅತ್ಯಂತ ಅಜಾಗರೂಕತೆಯಿಂದ ಚಲಾಯಿಸುತ್ತಿದ್ದರು ಮತ್ತು ನಿರ್ವಾಹಕ ಕಾಶಿನಾಥ್ ಅವರು ಬಸ್ಸಿನ ಬಾಗಿಲನ್ನು ಸರಿಯಾಗಿ ಹಾಕದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗಾಯಗೊಂಡ ವಿದ್ಯಾರ್ಥಿನಿ ಚರಿಷ್ಮಾ ದೂರಿನಲ್ಲಿ ತಿಳಿಸಿದ್ದಾರೆ. ಕರ್ತವ್ಯ ಲೋಪವೇ ಈ ಅಪಘಾತಕ್ಕೆ ನೇರ ಕಾರಣ ಎಂದು ಆರೋಪಿಸಲಾಗಿದೆ.

ವಿದ್ಯಾರ್ಥಿನಿಯ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಸೆಕ್ಷನ್ 281: ಅಜಾಗರೂಕ ಚಾಲನೆ. ಸೆಕ್ಷನ್ 125: ಜೀವಕ್ಕೆ ಅಪಾಯ ತರುವಂತಹ ನಿರ್ಲಕ್ಷ್ಯದ ಕೃತ್ಯ.ಸೆಕ್ಷನ್ 125(a): ನಿರ್ಲಕ್ಷ್ಯದಿಂದ ಗಾಯ ಉಂಟುಮಾಡುವುದು.ಸೆಕ್ಷನ್‌ಗಳ ಮೂಲಕ ಪ್ರಕರಣ ದಾಖಲಿಸಿಕೊಂಡಿದ್ದಾರೆ:

ಸಾರ್ವಜನಿಕ ಸಾರಿಗೆಯಲ್ಲಿ ಸುರಕ್ಷತೆಯ ಕೊರತೆಯ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

accident

ರಸ್ತೆ ತಿರುವಿನಲ್ಲಿ ದಿಢೀರನೆ ತೆರೆದುಕೊಂಡ ಬಾಗಿಲು..ಸರ್ಕಾರಿ ಬಸ್ಸಿಂದ ಹೊರಕ್ಕೆಸೆಯಲ್ಪಟ್ಟು ಸಹೋದರಿಯರಿಗೆ ಗಂಭೀರ ಗಾಯ.

Published

on

ಬೆಳ್ತಂಗಡಿ : ಸರ್ಕಾರಿ ಬಸ್ಸಿನಲ್ಲಿ ಶಾಲೆಗೆ ತೆರಳುತ್ತಿದ್ದ ಸಹೋದರಿಯರಿಬ್ಬರು
ರಸ್ತೆ ತಿರುವಿನಲ್ಲಿ ಏಕಾಏಕಿ ಬಸ್ಸಿನ ಬಾಗಿಲು ತೆರೆದ ಪರಿಣಾಮ ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡ ಘಟನೆ ಕಳಿಯ ಗ್ರಾಮದ ರೇಷ್ಮೆರೋಡ್ ಎಂ ಆರ್ ಪಿ ಎಲ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

ಬೆಳಿಗ್ಗೆ ಎಂದಿನಂತೆ ಗೇರುಕಟ್ಟೆಯಿಂದ ಬೆಳ್ತಂಗಡಿ ಶಾಲೆಗೆ ತೆರಳಲು ಕೆಎಸ್ ಆರ್ ಟಿ ಸಿ ಬಸ್ ಗೆ ಹತ್ತಿದ್ದ ಸಹೋದರಿಯರು ರೇಷ್ಮೆ ರೋಡ್ ಎಂಬಲ್ಲಿನ ರಸ್ತೆ ತಿರುವಿನಲ್ಲಿ ದಿಢೀರನೆ ಬಸ್ಸಿನ ಬಾಗಿಲು ತೆರೆಯಲ್ಪಟ್ಟು ಹೊರಕ್ಕೆ ಎಸೆಯಲ್ಪಟ್ಟಿದ್ದಾರೆ.

ಸಂಚರಿಸುತ್ತಿದ್ದ ಬಸ್ಸಿನಿಂದ ಕೆಳಗೆ ಎಸೆಯಲ್ಪಟ್ಟ ಸಹೋದರಿಯರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಸ್ಥಳೀಯರು ಬೆಳ್ತಂಗಡಿ ಹಾಗೂ ಉಜಿರೆ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ.

ಸಹೋದರಿಯರ ಪೈಕಿ ಒಬ್ಬಾಕೆ ಎಸ್ ಎಸ್ ಎಲ್.ಸಿ ಪರೀಕ್ಷೆಗೆ ತೆರಳುತ್ತಿದ್ದು ಮತ್ತೊಬ್ಬಳು ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ನ್ಯಾಯತರ್ಪು ಗ್ರಾಮದ ಕಲೈತೊಟ್ಟು ನಾಗರಾಜ ಹಾಗೂ ರೂಪ ದಂಪತಿಗಳ ಪುತ್ರಿಯರು ಗಾಯಾಳುಗಳೆಂದು ತಿಳಿದುಬಂದಿದೆ. ಗಾಯಾಳು ಸಹೋದರಿಯರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Continue Reading

Trending

Copyright © 2025 Deevatige