Connect with us

crime

ಛಲವಾದಿಯನ್ನು ನಾಯಿಗೆ ಹೋಲಿಸಿದ ಅಶೋಕ್‌ ರೈ; ಕೈ-ಕಮಲ ನಾಯಕರ ನಾಯಿ ಕಾದಾಟ ; ಅಶೋಕ್ ಕುಮಾರ್ ರೈ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

Published

on

ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ (Chalavadi Narayana Swamy) ಹಾಗೂ ಪುತ್ತೂರು ಕಾಂಗ್ರೆಸ್ ಶಾಸಕ (Puttur Congress MLA) ಅಶೋಕ್ ರೈ (Ashok Rai) ನಡುವೆ ವಾಕ್ಸಮರ ಜೋರಾಗಿದೆ. ಉಪ್ಪಿನಂಗಡಿಯಲ್ಲಿ ಬಿಜೆಪಿ ವತಿಯಿಂದ ನಡೆದ ಪಾದಯಾತ್ರೆಯಲ್ಲಿ ಬಾಯಿ ಬಿಟ್ಟರೆ ಬರೇ ಸುಳ್ಳುನ್ನೇ ಹೇಳೋ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ತಾಕತ್ ಅಂತ ಇದ್ರೆ ನಮ್ಮ ವೇದಿಕೆಗೆ ಬಂದು ಯಾವೆಲ್ಲ ಅನುದಾನ ಬಂದಿದೆ ಅದ್ದನ್ನ ತಿಳಿಸಲಿ. ಅಶೋಕ್ ರೈಗಳು ಜನರಿಗೆ ಹೇಳಿದ ಒಂದೊಂದು ಸುಳ್ಳಿಗೆ ಅವರ ಬಟ್ಟೆಯನ್ನ ಬಿಚ್ಚುತ್ತೇನೆ ಅಂತ ಛಲವಾದಿ ನಾರಾಯಣ ಸ್ವಾಮಿ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಅಶೋಕ್ ರೈ, ಟೀಕಿಸೋ ಭರದಲ್ಲಿ ಛಲವಾದಿ ನಾರಾಯಣ ಸ್ವಾಮಿಯವರನ್ನು ನಾಯಿಗೆ (Dog) ಹೋಲಿಸಿದ್ದಾರೆ. ಈ ಛಲವಾದಿ ನಾರಾಯಣ ಸ್ವಾಮಿ ನಾಯಿ ಥರ.. ಪಾಪ ಬೊಗಳಿದೆ, ಅದಕ್ಕೆ ನಾವೇನೂ ಕಲ್ಲು ಎಸೆಯಲು ಹೋಗೋದಿಲ್ಲ ಎಂದು ಹೇಳಿದ್ದಾರೆ. ನಾರಾಯಣ ಸ್ವಾಮಿ ನಾಯಿ ಥರ ನಾಯಿಗೆ ಯಾರು ಒಳ್ಳೇರು, ಯಾರು ಕೆಟ್ಟವರು ಎಂದು ಗೊತ್ತಾಗುದಿಲ್ಲ, ಅದು ಯಾರು ಬಂದರೂ ಬೊಗಳುತ್ತದೆ. ಛಲವಾದಿ ಕೂಡಾ ನಾಯಿನ ತರಹ, ಅವನಿಗೆ ಏನು ಎಂತ ಎಂದು‌ ಗೊತ್ತಾಗೋದಿಲ್ಲ. ಪಾಪ ಬೊಗಳಿದೆ, ಅದಕ್ಕೆ ನಾವೇನೂ ಕಲ್ಲು ಎಸೆಯಲು ಹೋಗೋದಿಲ್ಲ, ಪ್ರಾಣಿ ಅಲ್ವಾ ಎಂದಿದ್ದಾರೆ.

ಶಾಸಕ ಅಶೋಕ್ ರೈ ಅವರು ಕೂಡಲೇ ಬಹಿರಂಗ ಕ್ಷಮೆ ಯಾಚಿಸಬೇಕು-ಕಿಶೋರ್ ಕುಮಾರ್
ಪುತ್ತೂರು: ಛಲವಾದಿ ನಾರಾಯಣಸ್ವಾಮಿ ಕೇವಲ ವಿರೋಧ ಪಕ್ಷದ ನಾಯಕರಲ್ಲ, ಅವರು ಪರಿಶಿಷ್ಟ ಜಾತಿ ಸಮುದಾಯದ ಪ್ರಬಲ ಧ್ವನಿ. ಅವರನ್ನು ನಾಯಿ'ಗೆ ಹೋಲಿಸಿ ಅತ್ಯಂತ ಕೀಳಾಗಿ ಮಾತನಾಡಿರುವ ಶಾಸಕ ಅಶೋಕ್ ರೈ ಅವರು ಕೂಡಲೇ ಸಾರ್ವಜನಿಕವಾಗಿ ಛಲವಾದಿ ನಾರಾಯಣ ಸ್ವಾಮಿಯವರಲ್ಲಿ ಬಹಿರಂಗ ಕ್ಷಮೆ ಯಾಚಿಸಬೇಕು. ಇಲ್ಲವಾದರೆ ದಲಿತ ಸಮುದಾಯ ಮತ್ತು ಬಿಜೆಪಿ ಕಾರ್ಯಕರ್ತರು ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ' ಎಂದು ವಿಧಾನ ಪರಿಷತ್ತಿನ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಎಚ್ಚರಿಸಿದ್ದಾರೆ. ಛಲವಾದಿ ನಾರಾಯಣಸ್ವಾಮಿ ಅವರು ರಾಜ್ಯ ಸರ್ಕಾರದ ಮತ್ತು ಸ್ಥಳೀಯ ಶಾಸಕರ ವೈಫಲ್ಯಗಳ ಬಗ್ಗೆ ವಾಸ್ತವಿಕ ಸತ್ಯವನ್ನು ತಿಳಿಸಿದ್ದರು. ವಿರೋಧ ಪಕ್ಷದ ನಾಯಕರಾಗಿ ಸರ್ಕಾರದ ತಪ್ಪುಗಳನ್ನು ಎತ್ತಿ ತೋರಿಸುವುದು ಅವರ ಕರ್ತವ್ಯ. ಆದರೆ ಸತ್ಯವನ್ನು ಅರಗಿಸಿಕೊಳ್ಳಲಾಗದ ಶಾಸಕ ಅಶೋಕ್ ರೈ ಅವರು, ಈ ಹಿರಿಯ ದಲಿತ ನಾಯಕನನ್ನುನಾಯಿ’ ಎಂದು ಜರೆಯುವ ಮಟ್ಟಕ್ಕೆ ಇಳಿದಿರುವುದು, ಅವರ ಹತಾಶೆ ಮತ್ತು ಅಧಿಕಾರದ ಮದವನ್ನು ತೋರಿಸುತ್ತದೆ. ಇದು ಕೇವಲ ಛಲವಾದಿ ಅವರಿಗಾದ ಅಪಮಾನವಲ್ಲ. ಬದಲಾಗಿ ಇಡೀ ದಲಿತ ಸಮುದಾಯಕ್ಕೆ ಮಾಡಿದ ಘೋರ ಅಪಮಾನವಾಗಿದೆ ಎಂದಿರುವ ಕಿಶೋರ್ ಬೊಟ್ಯಾಡಿ, ಸತ್ಯ ಹೇಳುವವರನ್ನು `ನಾಯಿ’ ಎನ್ನುವುದು ಕಾಂಗ್ರೆಸ್ ಪಕ್ಷದ ಸಂಸ್ಕೃತಿಯೇ, ದಲಿತ ಪರ ಎಂದು ಬೊಬ್ಬೆ ಹೊಡೆಯುವ ಕಾಂಗ್ರೆಸ್ ನಾಯಕರು, ತಮ್ಮ ಶಾಸಕನ ಈ ಕೀಳುಮಟ್ಟದ ಹೇಳಿಕೆಯ ಬಗ್ಗೆ ಈಗೇಕೆ ಮೌನ ವಹಿಸಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಅಶೋಕ್ ಕುಮಾರ್ ರೈ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿರುವ ಛಲವಾದಿ ನಾರಾಯಣಸ್ವಾಮಿಯವರನ್ನು ಮತ್ತು ಪರಿಶಿಷ್ಟ ಜಾತಿ ಸಮುದಾಯದ ಛಲವಾದಿ ಸಮುದಾಯವನ್ನು ಕೀಳುಮಟ್ಟದ ಪದಗಳಿಂದ ನಿಂದಿಸಿ ಸಮುದಾಯಗಳ ನಡುವೆ ದ್ವೇಷ ಭಾವನೆ ಬರುವ ರೀತಿಯಲ್ಲಿ ಸಾರ್ವಜನಿಕವಾಗಿ ಮಾತನಾಡಿರುವ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಎಸ್‌ಸಿ ಮೋರ್ಚಾದ ಅಧ್ಯಕ್ಷ ಲೋಹಿತ್ ಅಮ್ಚಿನಡ್ಕ ಅವರು ನಗರ ಪೊಲೀಸ್ ಠಾಣೆಗೆ ಸೋಮವಾರ ದೂರು ನೀಡಿದ್ದಾರೆರಾಜ್ಯ ಸರ್ಕಾರದ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ ಸಂವಿಧಾನಿಕವಾಗಿ ರಾಜ್ಯದಲ್ಲಿ ಉನ್ನತ ಹುದ್ದೆಯಲ್ಲಿರುವ, ಹಿಂದುಳಿದ ಪರಿಶಿಷ್ಟ ಜಾತಿ ಸಮುದಾಯದ ನಾಯಕರೂ ಆಗಿರುವ ಛಲವಾದಿ ನಾರಾಯಣ ಸ್ವಾಮಿಯವರನ್ನು ಶಾಸಕ ಅಶೋಕ್‌ಕುಮಾರ್ ರೈ ಅವರು ನಾಯಿ’, `ಬುದ್ದಿ ಇಲ್ಲದವನು’, ನಾಲಾಯಕ್’ ಎಂಬ ಅತ್ಯಂತ ಕೀಳುಮಟ್ಟದ ಪದಗಳಲ್ಲಿ ಬೈದು, ಏಕವಚನದಲ್ಲಿ ಅತ್ಯಂತ ನಿಕೃಷ್ಟವಾಗಿ ತೆಗಳಿದ್ದಾರೆ. ಅವರ ಜಾತಿಯ ಹೆಸರನ್ನು ಸೂಚಿಸಿ ಜಾತಿ ನಿಂದನೆಯನ್ನು ಮಾಡುವ ಭಾವನೆಯಲ್ಲಿ ಮಾತನಾಡಿದ್ದಾರೆ. ರಾಜ್ಯದ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣ ಸ್ವಾಮಿ ಅವರು ಪರಿಶಿಷ್ಟ ಜಾತಿಗೆ ಸೇರಿದವರು ಎಂಬ ಕೀಳರಿಮೆ ಭಾವನೆಯಿಂದಲೇ ಶಾಸಕ ಅಶೋಕ್‌ಕುಮಾರ್ ರೈ ಅವರು ಸಮುದಾಯದ ಹೆಸರನ್ನು ಸೂಚಿಸಿ ಸಾರ್ವಜನಿಕವಾಗಿ ಅವರನ್ನು ನಿಂದಿಸಿ ಸುದಾಯಗಳ ಭಾವನೆಯನ್ನು ಕೆರಳಿಸಿ ಸಾರ್ವಜನಿಕವಾಗಿ ದ್ವೇಷ ಭಾವನೆ ಉಂಟಾಗುವಂತೆ ಮಾಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅವರು ದೂರಿನಲ್ಲಿ ಕೋರಿದ್ದಾರೆ.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

crime

ಪುತ್ತೂರು: ಗಣೇಶ ವಿಸರ್ಜನಾ ಶೋಭಾಯಾತ್ರೆ ವೇಳೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ; ಅಜಿತ್ ರೈ ಹೊಸಮನೆ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು

Published

on

ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೇತೃತ್ವದಲ್ಲಿ ಸೆ.17ರಂದು ರಾತ್ರಿ ನಡೆದ ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ನಿಯಮ ಉಲ್ಲಂಘಿಸಿ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಹಿನ್ನೆಲೆ:

  • ಷರತ್ತುಬದ್ಧ ಅನುಮತಿ: ಶೋಭಾಯಾತ್ರೆಗೆ ರಾತ್ರಿ 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕ ಬಳಸಲು ಷರತ್ತುಬದ್ಧ ಅನುಮತಿ ನೀಡಲಾಗಿತ್ತು.
  • ಸಮಯ ಮೀರಿದ ಬಳಿಕವೂ ಬಳಕೆ: ರಾತ್ರಿ ಸುಮಾರು 10.35ರ ವೇಳೆಗೆ ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಜಂಕ್ಷನ್‌ನಲ್ಲಿ ‘ಪಂಚಮುಖಿ ಫ್ರೆಂಡ್ಸ್’ ಹೆಸರಿನ ಸ್ತಬ್ಧಚಿತ್ರದಲ್ಲಿ ಧ್ವನಿವರ್ಧಕ ಬಳಕೆ ಮುಂದುವರಿದಿರುವುದನ್ನು ಗಮನಿಸಿದ ಪೊಲೀಸರು, ಅದನ್ನು ಸ್ವಿಚ್ ಆಫ್ ಮಾಡುವಂತೆ ಸೂಚಿಸಿದ್ದರು.
  • ಆರೋಪವೇನು?: ಪೊಲೀಸರು ಸೂಚನೆ ನೀಡಿದರೂ, ಸ್ಥಳಕ್ಕೆ ಆಗಮಿಸಿದ ಅಜಿತ್ ರೈ ಹೊಸಮನೆ ಹಾಗೂ ಇತರರು ಧ್ವನಿವರ್ಧಕ ಬಂದ್ ಮಾಡದಂತೆ ತಡೆದು, ಪುನಃ ಧ್ವನಿವರ್ಧಕ ಬಳಸುವಂತೆ ಆಯೋಜಕರಿಗೆ ಸೂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಆರೋಪ:

ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ನಿರ್ದೇಶನಗಳು ಹಾಗೂ ಠಾಣೆಯಿಂದ ಆಯೋಜಕರಿಗೆ ನೀಡಲಾಗಿದ್ದ ಷರತ್ತುಗಳ ಕುರಿತು ಸ್ಥಳದಲ್ಲಿದ್ದವರಿಗೆ ಪೊಲೀಸರು ತಿಳಿವಳಿಕೆ ನೀಡಿದರೂ, ಅದನ್ನು ಲೆಕ್ಕಿಸದೆ ಧ್ವನಿವರ್ಧಕ ಬಳಕೆಯನ್ನು ಮುಂದುವರಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ಪೊಲೀಸ್ ಉಪನಿರೀಕ್ಷಕರು ನೀಡಿರುವ ದೂರಿನಲ್ಲಿ ಗಂಭೀರ ಆರೋಪ ಮಾಡಲಾಗಿದೆ.

ಕಾನೂನು ಸುವ್ಯವಸ್ಥೆ ಕರ್ತವ್ಯದಲ್ಲಿದ್ದ ಅಧಿಕಾರಿಯು ಠಾಣೆಗೆ ಹಾಜರಾಗಿ ನೀಡಿದ ದೂರಿನ ಮೇರೆಗೆ ಅಜಿತ್ ರೈ ಹೊಸಮನೆ, ಪಂಚಮುಖಿ ಫ್ರೆಂಡ್ಸ್ ಸ್ತಬ್ಧಚಿತ್ರದ ಆಯೋಜಕರು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ

Continue Reading

crime

ಪುತ್ತೂರು ಮಹಿಳಾ ಠಾಣೆಯಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ

Published

on

ಪುತ್ತೂರು: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ತಮ್ಮ ಹೋರಾಟಕ್ಕೆ ಜಯ ಸಿಗುವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು

ಮೂಲಗಳ ಪ್ರಕಾರ, ಬೆಳಿಗ್ಗೆ 11.30ರ ಸುಮಾರಿಗೆ ಅವರು ತಮ್ಮ ಹಳೆಯ ಕೇಸ್ ಒಂದರ ಸಂಬಂಧ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಗೆ ಬಂದಿದ್ದರು ಎಂದು ತಿಳಿದುಬಂದಿದೆ.

ಈ ಸಂದರ್ಭದಲ್ಲಿ ಮಹಿಳಾ ಠಾಣಾ ಇನ್‌ಸ್ಪೆಕ್ಟರ್‌ ಸುನಿಲ್ ಕುಮಾರ್ ಅವರು ಬೇರೆ ಕಾರ್ಯ ನಿಮಿತ್ತ ಠಾಣೆಯಲ್ಲಿ ಇರಲಿಲ್ಲ. ಹೀಗಾಗಿ, ಲಿಖಿತವಾಗಿ ಹಾಜರಾದ ಬಗ್ಗೆ ಅವರಿಗೆ ನೋಟಿಸ್ ನೀಡಲಾಯಿತು. ಮುಂದಿನ ಸೂಚಿತ ದಿನಾಂಕದಂದು ಮಹೇಶ್ ಶೆಟ್ಟಿ ತಿಮರೋಡಿ ಅವರು ಮತ್ತೆ ಠಾಣೆಗೆ ಹಾಜರಾಗಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಈ ಸಂದರ್ಭ ಸಾಮಾಜಿಕ ಕಾರ್ಯಕರ್ತ ದಿನೇಶ್ ಜೈನ್ ಸೇರಿದಂತೆ ಹಲವರು ಅಭಿಮಾನಿಗಳು ಅವರ ಜೊತೆಗಿದ್ದರು.

ಮಹೇಶ್ ಶೆಟ್ಟಿ ತಿಮರೋಡಿ ಅವರು ಪುತ್ತೂರಿಗೆ ಭೇಟಿ ನೀಡಿದಾಗ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಪಡೆದೇ ಹೋಗುತ್ತಿದ್ದು, ಅದರಂತೆ ಇಂದು ಠಾಣೆಗೆ ತೆರಳಿ ಹಿಂತಿರುಗುವಾಗ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು ಎಂದು ಅವರ ಆಪ್ತ ವಲಯ ತಿಳಿಸಿದೆ.

Continue Reading

crime

ಸಕಲೇಶಪುರ ಲಾಡ್ಜ್‌ನಲ್ಲಿ ಕರಾಳ ರಾತ್ರಿ: ಬಾತ್‌ರೂಮ್‌ನಲ್ಲಿ 23 ವರ್ಷದ ಯುವತಿ ನಿಗೂಢ ಸಾವು, ಜೊತೆಗಿದ್ದ ಯುವಕರು ಎಸ್ಕೇಪ್!

Published

on

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿರುವ ಲಾಡ್ಜ್‌ ಒಂದರಲ್ಲಿ 23 ವರ್ಷದ ವರ್ಷ ಎಂಬ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಈ ಘಟನೆಯು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಘಟನೆಯ ವಿವರಣೆ:

ಪ್ರವಾಸಕ್ಕೆ ತೆರಳಿದ್ದ ಮೂವರು: ಬೆಂಗಳೂರು ಮೂಲದ (ನಾಗಸಂದ್ರ/ಚಿಕ್ಕಬಾಣಾವರ) 23 ವರ್ಷದ ವರ್ಷ ಎಂಬ ಯುವತಿ, ತನ್ನ ಪ್ರಿಯಕರ ರಘು ಹಾಗೂ ಸ್ನೇಹಿತ ದರ್ಶನ್ ಎಂಬುವವರೊಂದಿಗೆ ಶುಕ್ರವಾರ ಪ್ರವಾಸಕ್ಕೆಂದು ಸಕಲೇಶಪುರಕ್ಕೆ ಬಂದಿದ್ದಳು.

ಪ್ರವಾಸಿ ತಾಣಗಳ ವೀಕ್ಷಣೆ: ಶನಿವಾರ, ಭಾನುವಾರ ಹಾಗೂ ಸೋಮವಾರದಂದು ಈ ಮೂವರು ಬೆಟ್ಟದ ಭೈರವೇಶ್ವರ, ಮಜಗಹಳ್ಳಿ ಜಲಪಾತ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಸುತ್ತಾಡಿದ್ದರು.

ಲಾಡ್ಜ್‌ನಲ್ಲಿ ತಂಗಿದ್ದ ದಳ: ವಳಲಹಳ್ಳಿ ಕೂಡಿಗೆಯಲ್ಲಿರುವ ಶ್ರೀದೇವು ಲಾಡ್ಜ್‌ನಲ್ಲಿ ಮೂವರು ಒಂದೇ ರೂಮ್‌ನಲ್ಲಿ ತಂಗಿದ್ದರು.

ಅನುಮಾನಾಸ್ಪದ ಸಾವು: ಮಂಗಳವಾರ ಲಾಡ್ಜ್‌ನ ಬಾತ್‌ರೂಮ್‌ನಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ವರ್ಷ ಅಸುನೀಗಿದ್ದಾರೆ. ಯುವತಿ ಮೃತಪಟ್ಟ ಬಳಿಕ ಜೊತೆಗಿದ್ದ ಯುವಕರು ಆಸ್ಪತ್ರೆಗೆ ದಾಖಲಿಸಿ ನಾಪತ್ತೆಯಾಗಿದ್ದಾರೆ (ಕೆಲವು ಮೂಲಗಳ ಪ್ರಕಾರ ಆಸ್ಪತ್ರೆಗೆ ಕರೆತಂದು ಬಳಿಕ ತೆರಳಿದ್ದಾರೆ).

ಆಸ್ಪತ್ರೆ ಹಾಗೂ ಪೊಲೀಸ್ ತನಿಖೆ: ಕೂಡಲೇ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸಕಲೇಶಪುರ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಾತ್‌ರೂಮ್‌ನಲ್ಲಿ ಯುವತಿ ಮೃತಪಟ್ಟಿರುವುದು ಮತ್ತು ಜೊತೆಗಿದ್ದವರು ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಸಾವಿಗೆ ನಿಖರವಾದ ಕಾರಣವೇನು ಎಂಬುದು ಪೊಲೀಸರ ತನಿಖೆಯಿಂದಷ್ಟೇ ಹೊರಬರಬೇಕಿದೆ.

Continue Reading

Trending

Copyright © 2025 Deevatige

error: Content is protected !!