Belthangady
ಪೌರ ಕಾರ್ಮಿಕರ ಜೀತದಾಳುಗಳೆಂದು ತಿಳಿಯಬೇಡಿ..ಪೌರ ಕಾರ್ಮಿಕರ ಮೇಲೆ ದೌರ್ಜನ್ಯ ನಡೆದರೆ ಹೋರಾಟ ನಡೆಸುತ್ತೇವೆ.-ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕಂಕನಾಡಿ ಎಚ್ಚರಿಕೆ.
ಜಿಲ್ಲೆಯಾದ್ಯಂತ ಪಟ್ಟಣ , ನಗರ , ಪಂಚಾಯತ್ , ಪುರಸಭೆ , ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ ನಡೆಸುವ ಪೌರ ಕಾರ್ಮಿಕರನ್ನು ಜೀತದಾಳುಗಳಂತೆ ದುಡಿಸಲಾಗುತ್ತಿದ್ದು , ಸಂವಿಧಾನಬದ್ಧ ಹಕ್ಕುಗಳನ್ನು ನಿರಾಕರಿಸಿ , ಕಾನೂನುಬದ್ಧ ಸವಲತ್ತುಗಳನ್ನು ನಿರಾಕರಿಸಿ , ಪೌರ ಕಾರ್ಮಿಕರ ಮೇಲೆ ದೌರ್ಜನ್ಯದ ನಡೆಸಲಾಗುತ್ತಿದೆ. ವಿರುದ್ಧ ಸಂಘಟಿತ ಹೋರಾಟ ಅಗತ್ಯವಿದೆ ಎಂದು ಪೌರ ಕಾರ್ಮಿಕರ ಸಂಘದ ದ.ಕ ಜಿಲ್ಲಾಧ್ಯಕ್ಷ ಅನಿಲ್ ಕಂಕನಾಡಿ ಕರೆ ನೀಡಿದರು.

ಅವರು ಆದಿತ್ಯವಾರ ಬೆಳ್ತಂಗಡಿ ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಪಟ್ಟಣ / ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ದ.ಕ ಜಿಲ್ಲಾ ಮಟ್ಟದ ಜಂಟಿ ಸಮಾವೇಶವನ್ನು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಉದ್ಘಾಟಿಸಿ ಮಾತನಾಡಿದರು.

ರಾಜ್ಯದಲ್ಲೇ ಪ್ರಥಮ ಬಾರಿಗೆ ಬೆಳ್ತಂಗಡಿಯಲ್ಲಿ ಪಟ್ಟಣ , ನಗರ ಪಂಚಾಯತ್ , ಪುರಸಭೆ ಮತ್ತು ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ದ.ಕ ಜಿಲ್ಲಾ ಮಟ್ಟದ ಜಂಟಿ ಸಮಾವೇಶ ನಡೆದಿದೆ. ಮುಂದಿನ ದಿನಗಳಲ್ಲಿ ಇಡೀ ರಾಜ್ಯದಾದ್ಯಂತ ಸಂಘಟನೆ ವಿಸ್ತರಿಸಲಾಗುವುದು ಎಂದ ಅವರು ಗ್ರಾಮೀಣ ಪ್ರದೇಶಗಳಲ್ಲಿ ಪೌರ ಕಾರ್ಮಿಕರಿಗೆ ಬದುಕುವ ಕನಿಷ್ಟ ವೇತನ ನೀಡದೆ ಜೀತದಾಳುಗಳಂತೆ ದುಡಿಸಲಾಗುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ ಎಂದ ಅವರು ಕಾರ್ಮಿಕ ಕಾಯ್ದೆಗಳನ್ನು ಉಲ್ಲಂಘಿಸಿ ಕನಿಷ್ಠ ವೇತನ ನೀಡದೆ ದುಡಿಸುತ್ತಿರುವುದು ಸಂವಿಧಾನ ವಿರೋಧಿ ನಡೆಯಾಗಿದೆ ಮತ್ತು ಅಪರಾಧವಾಗಿದೆ. ಪೌರ ಹಕ್ಕುಗಳ ರಕ್ಷಣೆಗಾಗಿ ಸಂಘಟನೆಯನ್ನು ಬಲಿಷ್ಠಗೊಳಿಸಿ , ಹೋರಾಟ ನಡೆಸಬೇಕಾದ ಅಗತ್ಯವಿದೆ. ಹೋರಾಟದಲ್ಲಿ ಸೋಲು ಎಂಬುದಿಲ್ಲ , ಅಂತಿಮವಾಗಿ ಗೆಲುವು ನಮ್ಮದೇ ಎಂಬುದನ್ನು ನಾವು ತೋರಿಸುವ ಅಗತ್ಯವಿದೆ ಎಂದು ಹೇಳಿದರು.

ಪೌರ ಕಾರ್ಮಿಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಪಿ ಆನಂದ್ ಮಾತನಾಡಿ ಪೌರ ಕಾರ್ಮಿಕರ ಶ್ರಮದ ಪ್ರತಿಫಲ ಸಂಜೀವಿನಿ ಒಕ್ಕೂಟ ಮತ್ತು ಅಧಿಕಾರಿಗಳ ಪಾಲಗುತ್ತಿರುವುದು ದುರಂತ. ಸ್ವಚ್ಚತಾ ಕಾರ್ಯಕ್ಕೆ ಸಂಬಂಧಿಸಿದ ಪ್ರಶಸ್ತಿ , ಗೌರವಗಳು ಪೌರ ಕಾರ್ಮಿಕರಿಗೆ ಸಲ್ಲಬೇಕೇ ಹೊರತು ಅಧಿಕಾರಿ , ಜನಪ್ರತಿನಿಧಿಗಳಿಗಲ್ಲ ಎಂದರು. ಮಹಿಳೆ , ಪುರುಷರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದ ಅವರು ಗ್ರಾಮೀಣ ಪ್ರದೇಶಗಳಲ್ಲಿ ದುಡಿಯುತ್ತಿರುವ ಪೌರ ಕಾರ್ಮಿಕರನ್ನು ತಕ್ಷಣ ಖಾಯಂಗೊಳಿಸಲು ಒತ್ತಾಯಿಸಿದ ಅವರು ಕಾರ್ಮಿಕ ಕಾನೂನಿನನ್ವಯ ಪೌರ ಕಾರ್ಮಿಕರಿಗೆ ಕನಿಷ್ಠ ಕೂಲಿ ಜಾರಿಯಾಗಲಿ ಎಂದು ಹೇಳಿದರು.

ದ.ಕ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ದುಡಿಯುತ್ತಿರುವ ಪೌರ ಕಾರ್ಮಿಕರು ತಮ್ಮ ವ್ಯಾಪ್ತಿಯ ಸಮಸ್ಯೆಗಳನ್ನು ಸಭೆಯ ಮುಂದಿಟ್ಟರು. ಸಂಜೀವಿನಿ ಒಕ್ಕೂಟ ಬೇಡ , ನೇರ ಪಾವತಿಯಾಗಬೇಕು. ಅಧಿಕಾರಿಗಳು , ಜನಪ್ರತಿನಿಧಿಗಳು ನಡೆಸುವ ದೌರ್ಜನ್ಯಗಳು , ಕಡಿಮೆ ವೇತನ , ವೇತನ ತಾರತಮ್ಯ , ವಾರದಲ್ಲಿ 2-3 ದಿನ ಕೆಲಸ , ಕಾನೂನುಬದ್ಧ ಸವಲತ್ತುಗಳ ನಿರಾಕರಣೆ ಮೊದಲಾದ ಸಮಸ್ಯೆಗಳ ಬಗ್ಗೆ ಮಾತನಾಡಿದರು .

ಸಪಾಯಿ ಕರ್ಮಾಚಾರಿ ನಿಗಮದ ದ.ಕ ಜಿಲ್ಲಾಧ್ಯಕ್ಷ ಪ್ರೇಮ್ ಬಲ್ಲಾಳ್ ಬಾಗ್ ಮಾತನಾಡಿ ತಮ್ಮ ಹಕ್ಕುಗಳ ರಕ್ಷಣೆಗಾಗಿ ಮತ್ತು ಸಂವಿಧಾನಬದ್ಧ ಮೂಲಭೂತ ಸೌಕರ್ಯಗಳನ್ನು ಪಡೆಯಲು ಮತ್ತು ಗೌರವ ಮತ್ತು ಘನತೆಯ ಬದುಕಿನ ಹಕ್ಕಿಗಾಗಿ ಸಂಘಟನೆಯ ಅಗತ್ಯವಿದೆ ಎಂದರು.
ವೇದಿಕೆಯಲ್ಲಿ ಸ್ವಚ್ಚತಾ ವಾಹನ ಚಾಲಕ ಸಂಘದ ಜಿಲ್ಲಾಧ್ಯಕ್ಷ ವರುಣ್ , ಪೌರ ಕಾರ್ಮಿಕ ಸಂಘದ ಬೆಳ್ತಂಗಡಿ ತಾಲೂಕು ಕಾರ್ಯದರ್ಶಿ ಚಂದ್ರ ಬೋವಿ , ಜತೆ ಕಾರ್ಯದರ್ಶಿ ಸುರೇಶ್ ಕೆ ಅರಳಿ , ಗ್ರಾಮ ಪಂಚಾಯತ್ ಸ್ವಚ್ಚತಾ ಕಾರ್ಮಿಕರ ಸಂಘದ ಅಧ್ಯಕ್ಷೆ ರೇಣುಕಾ ಕುಕ್ಕೇಡಿ , ಕಾರ್ಯದರ್ಶಿ ಸುಮತಿ ವೇಣೂರು ಉಪಸ್ಥಿತರಿದ್ದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್ ಸುದೆಮುಗೇರು ಮಾತನಾಡಿ ನಾವೆಲ್ಲರೂ ಸ್ವಚ್ಚತಾ ರಾಯಭಾರಿಗಳು. ನಮ್ಮೆಲ್ಲರ ಪರಿಶ್ರಮದಿಂದ ನಾಗರಿಕ ಸಮಾಜವಿಂದು ಸ್ವಚ್ಚವಾಗಿದೆ. ಆದರೆ ಪೌರ ಕಾರ್ಮಿಕರನ್ನು ಮಾತ್ರ ನಮ್ಮನಾಳುವ ಸರ್ಕಾರಗಳು ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು ಸಂವಿಧಾನಬದ್ಧ ಹಕ್ಕುಗಳಿಗಾಗಿ ಹಾಗೂ ನಮ್ಮ ಮೇಲೆ ನಡೆಯುವ ವಿವಿಧ ರೀತಿಯ ದಬ್ಬಾಳಿಕೆಯ ವಿರುದ್ಧ ಸಂಘಟಿತರಾಗಬೇಕಾದ ಅಗತ್ಯವಿದೆ ಎಂದು ಹೇಳಿದರು.
ಮೊದಲಿಗೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ಸ್ವಚ್ಚತಾ ವಾಹನದ ಚಾಲಕ ಶಿವಕುಮಾರ್ ಸ್ವಾಗತಿಸಿ ಶಿಕ್ಷಕ , ಕಲಾವಿದ ಪ್ರಶಾಂತ್ ಬೆಳ್ತಂಗಡಿ ಕಾರ್ಯಕ್ರಮ ನಿರೂಪಿಸಿ’ ಧನ್ಯವಾದವಿತ್ತರು.
Belthangady
ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು – ಕಾರ್ಮಿಕರ ಮೇಲೆ ಅನುಮಾನ
ಬೆಳ್ತಂಗಡಿ: ಮನೆಯವರು ಸಂಬಂಧಿಕರ ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು ಸುಮಾರು 15.82 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 1.80 ಲಕ್ಷ ರೂ. ನಗದು ಕಳವು ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಆಲಂದಿಲದಲ್ಲಿ ನಡೆದಿದೆ.
ಆಲಂದಿಲ ನಿವಾಸಿ ನೌಫಾಲ್ ಬಿ.ಎಂ. (34) ಎಂಬವರು ಈ ಬಗ್ಗೆ ದೂರು ನೀಡಿದ್ದಾರೆ.
ಘಟನೆಯ ವಿವರ:
ಅವರು ನೀಡಿದ ದೂರಿನಂತೆ ಸೆ. 13 ರಂದು ಮಧ್ಯಾಹ್ನ ಸುಮಾರು 1.45ಕ್ಕೆ ಪತ್ನಿ, ಮಕ್ಕಳು ಹಾಗೂ ತಾಯಿಯನ್ನು ಸಂಬಂಧಿಕರ ಗೃಹಪ್ರವೇಶ ಕಾರ್ಯಕ್ರಮಕ್ಕೆ ಗುರುವಾಯನಕೆರೆಗೆ ಕಳುಹಿಸಿದ ಬಳಿಕ ನೌಫಾಲ್ ಕೂಡ ಮನೆಗೆ ಬೀಗ ಹಾಕಿ ತರಕಾರಿ ವ್ಯಾಪಾರದ ಕೆಲಸಕ್ಕಾಗಿ ಬೆಳ್ತಂಗಡಿಗೆ ತೆರಳಿದ್ದರು.
ಸೆ.14 ರಂದು ಫಾಲ್ಸ್ ಸೀಲಿಂಗ್ ವೈರಿಂಗ್ ಕೆಲಸಕ್ಕಾಗಿ ಕಾರ್ಮಿಕರನ್ನು ಮನೆಗೆ ಕರೆಸಲಾಗಿತ್ತು. ಮದ್ದಡ್ಕದ ಫಾರೂಕ್ ಎಂಬವರು ಕುದ್ರಡ್ಕದ ಅಶ್ರಫ್ ಹಾಗೂ ಶಿರ್ಲಾಲಿನ ಸುಲೈಮಾನ್ ಅವರನ್ನು ಕರೆದುಕೊಂಡು ಬಂದು ಮನೆಯಲ್ಲಿ ಕೆಲಸ ಮಾಡಿದ್ದರು. ಈ ವೇಳೆ ನೌಫಾಲ್ ಅವರ ತಮ್ಮ ಮಹಮ್ಮದ್ ನೌಷಾದ್ ಮನೆಯಲ್ಲಿದ್ದರು.
ಅದೇ ದಿನ ರಾತ್ರಿ ಸುಮಾರು 8.30ಕ್ಕೆ ನೌಫಾಲ್ ಕುಟುಂಬದೊಂದಿಗೆ ಮನೆಗೆ ವಾಪಸ್ ಬಂದಾಗ, ಬೆಡ್ರೂಂನ ಗೋದ್ರೇಜ್ನಲ್ಲಿ ಇಟ್ಟಿದ್ದ ಚಿನ್ನದ ಬಾಕ್ಸ್ ಕಾಣೆಯಾಗಿರುವುದು ಗಮನಕ್ಕೆ ಬಂದಿದೆ.
ಪರಿಶೀಲನೆ ನಡೆಸಿದಾಗ 32 ಗ್ರಾಂ ಮತ್ತು 26 ಗ್ರಾಂ ತೂಕದ ಎರಡು ಚಿನ್ನದ ಸರಗಳು, ಮಗುವಿನ ಚಿನ್ನದ ಸರ, ಕಾಲುಚೈನು, ಬ್ರೇಸ್ಲೆಟ್ ಸೇರಿದಂತೆ 15 ಲಕ್ಷ 82 ಸಾವಿರ ರೂ. ಮೌಲ್ಯದ ಒಟ್ಟು 113 ಗ್ರಾಂ ತೂಕದ ಚಿನ್ನಾಭರಣ ಹಾಗೂ 1.80 ಲಕ್ಷ ರೂ. ನಗದು ಕಳವಾಗಿರುವುದು ಬೆಳಕಿಗೆ ಬಂದಿದೆ.
ಇದಲ್ಲದೆ ನೌಫಾಲ್ ಅವರ ತಾಯಿಯ ಗೋದ್ರೇಜ್ನಲ್ಲಿದ್ದ ಒಟ್ಟು 7 ಗ್ರಾಂ ತೂಕದ ಮೂರು ಉಂಗುರಗಳೂ ಕಾಣೆಯಾಗಿರುವುದು ಪತ್ತೆಯಾಗಿದೆ.
ಮನೆಯ ಗೋದ್ರೇಜ್ನ ಕೀ ಗೋದ್ರೇಜ್ನಲ್ಲಿಯೇ ಇದ್ದು, ಮನೆಯವರು ಹೊರಗಿದ್ದ ಅವಧಿಯಲ್ಲಿ ಯಾರೋ ಮನೆಗೆ ಪ್ರವೇಶಿಸಿ ಗೋದ್ರೇಜ್ ತೆರೆದು ಕಳವು ಮಾಡಿರುವ ಬಗ್ಗೆ ದೂರಿನಲ್ಲಿ ತಿಳಿಸಲಾಗಿದೆ.
ವೈರಿಂಗ್ ಕೆಲಸಕ್ಕೆ ಬಂದಿದ್ದ ಅಶ್ರಫ್, ಫಾರೂಕ್ ಹಾಗೂ ಸುಲೈಮಾನ್ ಅವರ ಮೇಲೆ ಅನುಮಾನವಿರುವುದಾಗಿ ನೌಫಾಲ್ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸೆ.15 ರಂದು ಕಲಂ 331(3), 331(4), 305 BNS-2023 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
arrest
ಬೆಳ್ತಂಗಡಿ: ದಲಿತ ಕುಟುಂಬದ ಜಮೀನಿಗೆ ಅಕ್ರಮ ಪ್ರವೇಶಿಸಿ ಅಶ್ಲೀಲ ಪ್ರದರ್ಶನ – ಆರೋಪಿ ಬಂಧನ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದಲ್ಲಿ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಸೇರಿದ ಜಮೀನಿಗೆ ಅಕ್ರಮ ಪ್ರವೇಶಿಸಿ ಕೃತ್ಯವೆಸಗಿ, ದಲಿತ ಕುಟುಂಬದ ಮಹಿಳೆಯರ ಮುಂದೆ ಪಂಚೆ ಎತ್ತಿ ಮರ್ಮಾಂಗ ಪ್ರದರ್ಶಿಸಿ ವಿಕೃತಿ ಮೆರೆದ ವಿಲಕ್ಷಣ ಪ್ರಕರಣ ನಡೆದಿದ್ದು, ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ ಪಟ್ಟಾಡಿ ಮನೆಯ ಅಬ್ದುಲ್ ಹನೀಫ್ ಹುಸೇನ್ (50) ಎಂದು ಗುರುತಿಸಲಾಗಿದೆ.
ಘಟನೆ ವಿವರ:
ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಪಡ್ಯಾರಬೆಟ್ಟು ಎಂಬಲ್ಲಿ ಸುಮಾರು 40 ವರ್ಷಗಳಿಗಿಂತಲೂ ಹೆಚ್ಚು ಕಾಲದಿಂದ ವಾಸ್ತವ್ಯವಿದ್ದು ಕೃಷಿ ಚಟುವಟಿಕೆ ನಡೆಸಿಕೊಂಡು ಬರುತ್ತಿದ್ದ ಪರಿಶಿಷ್ಟ ಜಾತಿಯ ಕುಟುಂಬದ ಸ್ವಾಧೀನದ ಜಾಗದಲ್ಲಿ ಸಿಮೆಂಟ್ ಕಂಬ ಹಾಗೂ ತಂತಿ ಬೇಲಿ ಹಾಕಿ ಕುಟುಂಬ ಕೃಷಿ ಕಾರ್ಯದಲ್ಲಿ ತೊಡಗಿತ್ತು.
ಸೆ.7 ರಂದು ಸ್ಥಳೀಯ ನಿವಾಸಿ ಹನೀಫ್ ಎಂಬಾತ ಏಕಾಏಕಿ ಆ ಜಾಗಕ್ಕೆ ಅತಿಕ್ರಮ ಪ್ರವೇಶಿಸಿ, ಜಾತಿ ನಿಂದನೆ ಮಾಡಿ ಅವಾಚ್ಯ ಮತ್ತು ಅಶ್ಲೀಲ ಪದಗಳಿಂದ ನಿಂದಿಸಿದ್ದಾನೆ. ಬಡ ಕುಟುಂಬ ಹಾಕಿದ್ದ ಸಿಮೆಂಟ್ ಬೇಲಿ ಕಂಬ ಹಾಗೂ ತಂತಿ ಬೇಲಿಯನ್ನು ಕಿತ್ತೆಸೆದು, ಅಡಿಕೆ ಹಾಗೂ ಬಾಳೆ ಗಿಡಗಳನ್ನು ಮುರಿದು ದಾಂಧಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.
ಈ ವೇಳೆ ಕೆಲಸದಲ್ಲಿ ತೊಡಗಿದ್ದ ದಲಿತ ಕುಟುಂಬದ ಮಹಿಳೆಯರು ದಾಂಧಲೆಯ ಘಟನೆಯನ್ನು ತಮ್ಮ ಮೊಬೈಲ್ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ ಆರೋಪಿ ಹನೀಫ್ ಮಹಿಳೆಯರ ಎದುರು ಬಂದು ತಾನು ಉಟ್ಟಿದ್ದ ಪಂಚೆಯನ್ನು ಎತ್ತಿ ಒಳ ಉಡುಪನ್ನು ಜಾರಿಸಿ ತನ್ನ ಗುಪ್ತಾಂಗವನ್ನು ತೋರಿಸುತ್ತಾ ಸಾರ್ವಜನಿಕವಾಗಿ ವಿಕೃತಿಯನ್ನು ಮೆರೆದಿದ್ದಾನೆ. “ನಿಮ್ಮನ್ನು ಇದರಿಂದಲೇ ಅತ್ಯಾಚಾರ ಮಾಡುತ್ತೇನೆ, ಈ ಜಾಗ ಬಿಟ್ಟು ಹೋಗದಿದ್ದರೆ ನಿಮ್ಮನ್ನು ಕೊಲ್ಲದೆ ಬಿಡುವುದಿಲ್ಲ” ಎಂದು ಬೆದರಿಕೆ ಹಾಕಿ ಮಹಿಳೆಯರನ್ನು ಬೆನ್ನಟ್ಟಿಕೊಂಡು ಬಂದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ದೂರು ಮತ್ತು ಬಂಧನ:
ಈತನ ವಿಕೃತಿಯಿಂದ ಭಯಗೊಂಡ ಬಡ ಕುಟುಂಬವು ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ವೇಣೂರು ಪೊಲೀಸ್ ಠಾಣೆಗೆ ತೆರಳಿ ವಿಡಿಯೋ ಚಿತ್ರೀಕರಣದ ದೃಶ್ಯಾವಳಿ ಸಾಕ್ಷ್ಯಾಧಾರಗಳೊಂದಿಗೆ ಸೆ.8 ರಂದು ದೂರು ನೀಡಿದೆ.
ದೂರಿನ ಅನ್ವಯ ವೇಣೂರು ಠಾಣೆಯಲ್ಲಿ ದಲಿತ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಹಾಗೂ ಬಿಎನ್ಎಸ್ 329(3), 352, 351(2), 75(1), 324(4) ರಂತೆ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡ ವೇಣೂರು ಪೊಲೀಸರು ಆರೋಪಿಯನ್ನು ಸಂಜೆ ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
40 ವರ್ಷಗಳಿಂದ ಕೃಷಿ ಮಾಡಿಕೊಂಡು ಬಂದಿದ್ದ ಬಡ ಪರಿಶಿಷ್ಟ ಕುಟುಂಬದ ಮೇಲೆ ದೌರ್ಜನ್ಯ ನಡೆಸಿ, ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದ ಆರೋಪಿಗೆ ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರ ಸಂಘಟಿತ ಹೋರಾಟದ ಫಲವಾಗಿ ಕಾನೂನಿನ ತಕ್ಕ ಪಾಠ ಕಲಿಸಿದಂತಾಗಿದ್ದು, ಈ ಹೋರಾಟಕ್ಕೆ ರಾಜ್ಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ.
accident
ಬೆಳ್ತಂಗಡಿ: ಕಾರು ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಭೀಕರ ಅಪಘಾತ; ಕಾರು ಚಾಲಕನಿಗೆ ಗಂಭೀರ ಗಾಯ
ಕೊಕ್ಕಡ: ಧರ್ಮಸ್ಥಳದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳದ ಕಡೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ, ಕಾರು ಹಾಗೂ ಬಸ್ಸಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿರುವ ಘಟನೆ ಸೆ. 12ರ ಶನಿವಾರ ಕೊಕ್ಕಡ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಬಸ್ಸಿನಲ್ಲಿದ್ದ ಮೂವರು ಪ್ರಯಾಣಿಕರು ಹಾಗೂ ಕಾರಿನಲ್ಲಿದ್ದ ಹಲವರು ಗಾಯಗೊಂಡಿದ್ದು, ಈ ವೇಳೆ ಕಾರು ಚಾಲಕನ ಕೈ ಮುರಿತವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
-
accident2 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala9 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
