Connect with us

crime

ಅಂತರ್‌ ರಾಜ್ಯ ಡ್ರಗ್‌ ಪೆಡ್ಲರ್‌ ಅಜ್ಮಲ್@‌ ಅಜ್ಜುನನ್ನು ಖೆಡ್ಡಾಕ್ಕೆ ಕೆಡವಿದ ದ.ಕ. ಪೊಲೀಸರು; ಅಜ್ಜುನ ಬಂಧನವಾಗುತ್ತಿದ್ದಂತೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ ಗ್ರಾಮಸ್ಥರು

Published

on

ದ.ಕ ಜಿಲ್ಲೆಗೆ ದಕ್ಷ ಅಧಿಕಾರಿಗಳು ಅಧಿಕಾರ ಸ್ವೀಕರಿಸಿಕೊಂಡ ಬಳಿಕ ಮಾದಕ ವಸ್ತುಗಳ ಸಾಗಾಟ ಮತ್ತು ಮಾರಾಟದ ವಿರುದ್ಧ ಹಲವು ಕಠಿಣ ಕ್ರಮಗಳನ್ನು ಕೈಗೊಳ್ಳುವ ಮಹತ್ವದ ಕಾರ್ಯಕ್ರಮಗಳ ಭಾಗವಾಗಿ ಯಾವುದೇ ಕಾಲೇಜು ಕ್ಯಾಂಪಸ್ ಗಳಲ್ಲೂ ಮಾದಕ ವಸ್ತುಗಳು ಪೂರೈಕೆಯಾಗದ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದಾರೆ. ಡ್ರಗ್ಗ್ ಪೆಡ್ಲರ್‌ಗಳ ಹೆಡೆಮುರಿಕಟ್ಟುವ ಮೂಲಕ ಡ್ರಗ್ಗ್ ಸಾಗಾಣಿಕೆಗೆ ಕಡಿವಾಣ ಹಾಕಿದ್ದಾರೆ. ಕರಾವಳಿಯಲ್ಲಿ ನಡೆಯುತ್ತಿರುವ ಕೊಲೆ, ಸುಲಿಗೆ, ಕಳ್ಳತನ ದೊಂಬಿ ಯಾವುದೇ ಅಪರಾಧಿಕ ಕೃತ್ಯಗಳಿಗೆ ಮಾದಕ ಸೇವನೆಯೇ ಪ್ರಮುಖ ಕಾರಣವೆಂದು ಕಂಡುಕೊಂಡ ಅಧಿಕಾರಿಗಳು ಆ ಜಾಲದ ಹಿಂದೆ ಬಿದ್ದಿದ್ದಾರೆ. ಡ್ರಗ್‌ ಪೆಡ್ಲರ್‌ಗಳನ್ನು ಅಡಗುತಾಣಗಳಿಂದ ಹುಡುಕಿ ಹುಡುಕಿ ಅವರ ಹೆಡೆಮುರಿಕಟ್ಟಿ ಪ್ರಮುಖ ಕುಳಗಳ ಅಡ್ಡೆಯನ್ನು, ಸಾಗಿ ಬರುವ ದಾರಿಯನ್ನೂ ಪತ್ತೆಹಚ್ಚಿ ವ್ಯಸನಕ್ಕೆ ಬಲಿ ಬೀಳುವ ಯುವಜನತೆಗೆ ದೈರ್ಯ ಮತ್ತು ಸಂದೇಶದ ಮೂಲಕ ಜಾಗೃತಿಯನ್ನು ನೀಡುವ ಕೆಲಸ ನಿರಂತರವಾಗಿ ನಡೆಯುತ್ತಲೇ ಇದೆ. ಇದೀಗ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ವಿಶೇಷ ತಂಡವು ಅಂತರರಾಜ್ಯ ಮಾದಕ ವಸ್ತು ಮಾರಾಟ ಜಾಲದ ಪ್ರಮುಖ ಕಿಂಗ್‌ಪಿನ್ ನನ್ನು ಪತ್ತೆಹಚ್ಚಿ ತಮ್ಮ ಖೆಡ್ಡಾಕ್ಕೆ ಕೆಡವುದರ ಮೂಲಕ ಆತ ಎಂತಹ ಅಪಾಯಕಾರಿ ಜಂತು ಎಂಬುವುದಕ್ಕೆ ಆತನ ಬಂಧನಕ್ಕೆ ಜನರ ಸಂಭ್ರಮಾಚರಣೆಯೇ ಸಾಕ್ಷಿಯಾಗಿದೆ.


ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸರು ಇತ್ತೀಚೆಗೆ ನಡೆಸಿದ ಕಾರ್ಯಾಚರಣೆಯಲ್ಲಿ ಅಂತರರಾಜ್ಯ ಮಾದಕ ವಸ್ತು ಮಾರಾಟ ಜಾಲದ ಪ್ರಮುಖ ಕಿಂಗ್‌ಪಿನ್ ಮೊಹಮ್ಮದ್ ಅಜ್ಮಲ್ ಅಲಿಯಾಸ್ ಅಜ್ಜು ಎಂಬಾತನ ಬಂಧನವಾಗಿರುವ ಸುದ್ದಿ ಪ್ರಸಾರವಾಗುತ್ತಲೇ ಆತನ ಊರಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆದಿದೆ.

ಕೇರಳದ ಕೋಝಿಕೋಡ್‌ನ ವಡಕರ ತಾಲೂಕಿನ ವೇಲಂ ಚೆನ್ನಿಲೊಟ್ಟು ನಿವಾಸಿ ಅಜ್ಜು ಕರ್ನಾಟಕ, ಕೇರಳ ಮತ್ತು ಗೋವಾ ರಾಜ್ಯಗಳನ್ನೊಳಗೊಂಡ ಅಂತರರಾಜ್ಯ ಮಾದಕ ವಸ್ತು ಮಾರಾಟ ಜಾಲದ ಪ್ರಮುಖ ಕಿಂಗ್‌ಪಿನ್ ಆಗಿದ್ದು, ಈತನ ಬಂಧನದಿಂದಾಗಿ ಕರಾವಳಿ ಭಾಗದಲ್ಲಿ ಮತ್ತು ನೆರೆಯ ರಾಜ್ಯಗಳಲ್ಲಿ ಸಕ್ರಿಯವಾಗಿದ್ದ ಡ್ರಗ್ಸ್ ಮಾಫಿಯಾಗೆ ದೊಡ್ಡ ಹೊಡೆತ ಬಿದ್ದಂತಾಗಿದೆ. ವಿಶೇಷವಾಗಿ ಯುವಜನತೆಯನ್ನು ಗುರಿಯಾಗಿಸಿಕೊಂಡು ನಡೆಯುತ್ತಿದ್ದ ಎಂಡಿಎಂಎ (MDMA) ನಂತಹ ನಿಷೇಧಿತ ವಸ್ತುಗಳ ಸರಬರಾಜು ಜಾಲದ ಕೊಂಡಿ ಕಳಚಿದಂತಾಗಿದೆ.


ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ವಿಶೇಷ ತಂಡವು ಈತನನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಈತ ಕರ್ನಾಟಕ, ಕೇರಳ ಮತ್ತು ಗೋವಾ ರಾಜ್ಯಗಳನ್ನೊಳಗೊಂಡ ಅಂತರರಾಜ್ಯ ಮಾದಕ ವಸ್ತು ಮಾರಾಟ ಜಾಲದ ಪ್ರಮುಖ ಕಿಂಗ್‌ಪಿನ್ ಎಂದು ಗುರುತಿಸಲಾಗಿದೆ. ಈತನ ಮೇಲೆ ಈಗಾಗಲೇ ಹಲವು ಗಂಭೀರ ಪ್ರಕರಣಗಳು ದಾಖಲಾಗಿದ್ದು, ದೀರ್ಘಕಾಲದಿಂದ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ ಎನ್ನಲಾಗಿದೆ.


ಮಾದಕ ಜಾಲದ ಪ್ರಮುಖ ಕೊಂಡಿ ಅಜ್ಜುವಿನೊಂದಿಗೆ ಕೇರಳದ ವಯನಾಡ್ ಜಿಲ್ಲೆಯ ನಿವಾಸಿ ಇಸ್ಮಾಯಿಲ್ ಮತ್ತು ಕೇರಳದ ಕೋಝಿಕೋಡ್ ಜಿಲ್ಲೆಯ ನಿವಾಸಿ ಸಂಶೀರ್ ರವರ ಬಂಧನವಾಗಿದ್ದು, ಸದ್ರಿ ಆರೋಪಿಗಳು ಕೇರಳ ,ಗೋವಾ, ಹಾಗೂ ಕರ್ನಾಟಕ ರಾಜ್ಯಗಳಿಗೆ ಮಾದಕ ವಸ್ತುವನ್ನು ಸರಬರಾಜು ಮಾಡುತ್ತಿದ್ದು, ಕೇರಳ ರಾಜ್ಯದ ಕೋಝಿಕೋಡು, ಕಣ್ಣೂರು, ವಯನಾಡ್‍ ಜಿಲ್ಲೆಗಳಲ್ಲಿ ಪ್ರಕರಣ ದಾಖಲಾಗಿ, ತಲೆಮರೆಸಿಕೊಂಡಿದ್ದರು. ಅಲ್ಲದೆ ಮುಹಮ್ಮದ್‌ ಅಜ್ಮಲ್‌ ಸಿ @ ಅಜ್ಜು ಎಂಬಾತನು ಇತ್ತೀಚೆಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದಾಖಲಾದ ಅ.ಕ್ರ: 04/2026 ಕಲಂ 8C, 21(b),NDPS Act 1985 ರ ಪ್ರಕರಣದ ಆರೋಪಿಯಾಗಿರುತ್ತಾನೆ. ಅಜ್ಮಲ್‍ ಸಹಚರನಾದ ಇಸ್ಮಾಯಿಲ್‌ನ ಮೇಲೆ ಕೂಡ ಕೇರಳ ರಾಜ್ಯದ ಕೋಝಿಕೋಡು ಜಿಲ್ಲೆಯಲ್ಲಿ ಮಾದಕ ವಸ್ತು ಸಾಗಾಟದ ಪ್ರಕರಣ ದಾಖಲಾಗಿರುವುದಾಗಿದೆ.

ಡ್ರಗ್‌ ಪೆಡ್ಲರ್‌ ಅಜ್ಮಲ್‌ ಬಂಧನಕ್ಕೆ ಗ್ರಾಮಸ್ಥರಿಂದ ಹೈವೆ ಬದಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ವಿಡಿಯೋ ನೋಡಲು ಕೆಳಗೆ ಕ್ಲಿಕ್‌ ಮಾಡಿ


ಸದ್ರಿ ಪ್ರಕರಣಗಳ ಪತ್ತೆ ಕಾರ್ಯದಲ್ಲಿ ಪುತ್ತೂರು ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶ್ರೀ ಪ್ರಮೋದ್‍ ಕುಮಾರ್‍, ಪುತ್ತೂರು ಗ್ರಾಮಾಂತರ ಠಾಣಾ ಪ್ರಭಾರ ಪೊಲೀಸ್ ನಿರೀಕ್ಷಕರಾದ ಸುನಿಲ್‍ ಕುಮಾರ್, ದ.ಕ ಜಿಲ್ಲಾ ಡಿ.ಎಸ್‍.ಬಿ ವಿಭಾಗದ ಪೊಲೀಸ್‍ ನಿರೀಕ್ಷಕರಾದ ನಂದ ಕುಮಾರ್‍, ಪುತ್ತೂರು ಗ್ರಾಮಾಂತರ ಠಾಣಾ ಉಪನಿರೀಕ್ಷಕರಾದ ಗುಣಪಾಲ ಹಾಗೂ ಸುಶ್ಮಾ ಜೆ ಭಂಡಾರಿ ಹಾಗೂ ವಿಶೇಷ ತಂಡದ ಸಿಬ್ಬಂದಿಗಳಾದ ಅದ್ರಾಮ, ಪ್ರಶಾಂತ್‍ ರೈ, ಪ್ರಶಾಂತ್‍ ಎಂ, ಪ್ರವೀಣ್‍ ರೈ, ಹರ್ಷಿತ್‍, ಹಾಗೂ ಪುತ್ತೂರು ಗ್ರಾಮಾಂತರ ಠಾಣಾ ಸಿಬ್ಬಂಧಿಗಳಾದ ಪರಮೇಶ್ವರ ಗೌಡ, ಹರೀಶ್‍, ಸುಬ್ರಹ್ಮಣ್ಯ, ಬೀಮಸೇನ್‍, ಭವಿತ್ ರೈ, ನಾಗಾರಾಜ್‍, ಕಾರ್ತಿಕ್‍ ಜಿಲ್ಲಾ ಗಣಕ ಯಂತ್ರ ಸಿಬ್ಬಂದಿಗಳಾದ ದಿವಾಕರ್‍, ಸಂಪತ್‍ ಮತ್ತು ಗೃಹ ರಕ್ಷಕ ಸಿಬ್ಬಂದಿಗಳು ಕಾರ್ಯನಿರ್ವಹಿಸಿರುತ್ತಾರೆ.

ಇದನ್ನೂ ಓದಿ

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

crime

ಪುತ್ತೂರು: ಗಣೇಶ ವಿಸರ್ಜನಾ ಶೋಭಾಯಾತ್ರೆ ವೇಳೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ; ಅಜಿತ್ ರೈ ಹೊಸಮನೆ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು

Published

on

ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೇತೃತ್ವದಲ್ಲಿ ಸೆ.17ರಂದು ರಾತ್ರಿ ನಡೆದ ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ನಿಯಮ ಉಲ್ಲಂಘಿಸಿ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಹಿನ್ನೆಲೆ:

  • ಷರತ್ತುಬದ್ಧ ಅನುಮತಿ: ಶೋಭಾಯಾತ್ರೆಗೆ ರಾತ್ರಿ 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕ ಬಳಸಲು ಷರತ್ತುಬದ್ಧ ಅನುಮತಿ ನೀಡಲಾಗಿತ್ತು.
  • ಸಮಯ ಮೀರಿದ ಬಳಿಕವೂ ಬಳಕೆ: ರಾತ್ರಿ ಸುಮಾರು 10.35ರ ವೇಳೆಗೆ ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಜಂಕ್ಷನ್‌ನಲ್ಲಿ ‘ಪಂಚಮುಖಿ ಫ್ರೆಂಡ್ಸ್’ ಹೆಸರಿನ ಸ್ತಬ್ಧಚಿತ್ರದಲ್ಲಿ ಧ್ವನಿವರ್ಧಕ ಬಳಕೆ ಮುಂದುವರಿದಿರುವುದನ್ನು ಗಮನಿಸಿದ ಪೊಲೀಸರು, ಅದನ್ನು ಸ್ವಿಚ್ ಆಫ್ ಮಾಡುವಂತೆ ಸೂಚಿಸಿದ್ದರು.
  • ಆರೋಪವೇನು?: ಪೊಲೀಸರು ಸೂಚನೆ ನೀಡಿದರೂ, ಸ್ಥಳಕ್ಕೆ ಆಗಮಿಸಿದ ಅಜಿತ್ ರೈ ಹೊಸಮನೆ ಹಾಗೂ ಇತರರು ಧ್ವನಿವರ್ಧಕ ಬಂದ್ ಮಾಡದಂತೆ ತಡೆದು, ಪುನಃ ಧ್ವನಿವರ್ಧಕ ಬಳಸುವಂತೆ ಆಯೋಜಕರಿಗೆ ಸೂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಆರೋಪ:

ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ನಿರ್ದೇಶನಗಳು ಹಾಗೂ ಠಾಣೆಯಿಂದ ಆಯೋಜಕರಿಗೆ ನೀಡಲಾಗಿದ್ದ ಷರತ್ತುಗಳ ಕುರಿತು ಸ್ಥಳದಲ್ಲಿದ್ದವರಿಗೆ ಪೊಲೀಸರು ತಿಳಿವಳಿಕೆ ನೀಡಿದರೂ, ಅದನ್ನು ಲೆಕ್ಕಿಸದೆ ಧ್ವನಿವರ್ಧಕ ಬಳಕೆಯನ್ನು ಮುಂದುವರಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ಪೊಲೀಸ್ ಉಪನಿರೀಕ್ಷಕರು ನೀಡಿರುವ ದೂರಿನಲ್ಲಿ ಗಂಭೀರ ಆರೋಪ ಮಾಡಲಾಗಿದೆ.

ಕಾನೂನು ಸುವ್ಯವಸ್ಥೆ ಕರ್ತವ್ಯದಲ್ಲಿದ್ದ ಅಧಿಕಾರಿಯು ಠಾಣೆಗೆ ಹಾಜರಾಗಿ ನೀಡಿದ ದೂರಿನ ಮೇರೆಗೆ ಅಜಿತ್ ರೈ ಹೊಸಮನೆ, ಪಂಚಮುಖಿ ಫ್ರೆಂಡ್ಸ್ ಸ್ತಬ್ಧಚಿತ್ರದ ಆಯೋಜಕರು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ

Continue Reading

crime

ಪುತ್ತೂರು ಮಹಿಳಾ ಠಾಣೆಯಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ

Published

on

ಪುತ್ತೂರು: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ತಮ್ಮ ಹೋರಾಟಕ್ಕೆ ಜಯ ಸಿಗುವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು

ಮೂಲಗಳ ಪ್ರಕಾರ, ಬೆಳಿಗ್ಗೆ 11.30ರ ಸುಮಾರಿಗೆ ಅವರು ತಮ್ಮ ಹಳೆಯ ಕೇಸ್ ಒಂದರ ಸಂಬಂಧ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಗೆ ಬಂದಿದ್ದರು ಎಂದು ತಿಳಿದುಬಂದಿದೆ.

ಈ ಸಂದರ್ಭದಲ್ಲಿ ಮಹಿಳಾ ಠಾಣಾ ಇನ್‌ಸ್ಪೆಕ್ಟರ್‌ ಸುನಿಲ್ ಕುಮಾರ್ ಅವರು ಬೇರೆ ಕಾರ್ಯ ನಿಮಿತ್ತ ಠಾಣೆಯಲ್ಲಿ ಇರಲಿಲ್ಲ. ಹೀಗಾಗಿ, ಲಿಖಿತವಾಗಿ ಹಾಜರಾದ ಬಗ್ಗೆ ಅವರಿಗೆ ನೋಟಿಸ್ ನೀಡಲಾಯಿತು. ಮುಂದಿನ ಸೂಚಿತ ದಿನಾಂಕದಂದು ಮಹೇಶ್ ಶೆಟ್ಟಿ ತಿಮರೋಡಿ ಅವರು ಮತ್ತೆ ಠಾಣೆಗೆ ಹಾಜರಾಗಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಈ ಸಂದರ್ಭ ಸಾಮಾಜಿಕ ಕಾರ್ಯಕರ್ತ ದಿನೇಶ್ ಜೈನ್ ಸೇರಿದಂತೆ ಹಲವರು ಅಭಿಮಾನಿಗಳು ಅವರ ಜೊತೆಗಿದ್ದರು.

ಮಹೇಶ್ ಶೆಟ್ಟಿ ತಿಮರೋಡಿ ಅವರು ಪುತ್ತೂರಿಗೆ ಭೇಟಿ ನೀಡಿದಾಗ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಪಡೆದೇ ಹೋಗುತ್ತಿದ್ದು, ಅದರಂತೆ ಇಂದು ಠಾಣೆಗೆ ತೆರಳಿ ಹಿಂತಿರುಗುವಾಗ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು ಎಂದು ಅವರ ಆಪ್ತ ವಲಯ ತಿಳಿಸಿದೆ.

Continue Reading

crime

ಸಕಲೇಶಪುರ ಲಾಡ್ಜ್‌ನಲ್ಲಿ ಕರಾಳ ರಾತ್ರಿ: ಬಾತ್‌ರೂಮ್‌ನಲ್ಲಿ 23 ವರ್ಷದ ಯುವತಿ ನಿಗೂಢ ಸಾವು, ಜೊತೆಗಿದ್ದ ಯುವಕರು ಎಸ್ಕೇಪ್!

Published

on

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿರುವ ಲಾಡ್ಜ್‌ ಒಂದರಲ್ಲಿ 23 ವರ್ಷದ ವರ್ಷ ಎಂಬ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಈ ಘಟನೆಯು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಘಟನೆಯ ವಿವರಣೆ:

ಪ್ರವಾಸಕ್ಕೆ ತೆರಳಿದ್ದ ಮೂವರು: ಬೆಂಗಳೂರು ಮೂಲದ (ನಾಗಸಂದ್ರ/ಚಿಕ್ಕಬಾಣಾವರ) 23 ವರ್ಷದ ವರ್ಷ ಎಂಬ ಯುವತಿ, ತನ್ನ ಪ್ರಿಯಕರ ರಘು ಹಾಗೂ ಸ್ನೇಹಿತ ದರ್ಶನ್ ಎಂಬುವವರೊಂದಿಗೆ ಶುಕ್ರವಾರ ಪ್ರವಾಸಕ್ಕೆಂದು ಸಕಲೇಶಪುರಕ್ಕೆ ಬಂದಿದ್ದಳು.

ಪ್ರವಾಸಿ ತಾಣಗಳ ವೀಕ್ಷಣೆ: ಶನಿವಾರ, ಭಾನುವಾರ ಹಾಗೂ ಸೋಮವಾರದಂದು ಈ ಮೂವರು ಬೆಟ್ಟದ ಭೈರವೇಶ್ವರ, ಮಜಗಹಳ್ಳಿ ಜಲಪಾತ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಸುತ್ತಾಡಿದ್ದರು.

ಲಾಡ್ಜ್‌ನಲ್ಲಿ ತಂಗಿದ್ದ ದಳ: ವಳಲಹಳ್ಳಿ ಕೂಡಿಗೆಯಲ್ಲಿರುವ ಶ್ರೀದೇವು ಲಾಡ್ಜ್‌ನಲ್ಲಿ ಮೂವರು ಒಂದೇ ರೂಮ್‌ನಲ್ಲಿ ತಂಗಿದ್ದರು.

ಅನುಮಾನಾಸ್ಪದ ಸಾವು: ಮಂಗಳವಾರ ಲಾಡ್ಜ್‌ನ ಬಾತ್‌ರೂಮ್‌ನಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ವರ್ಷ ಅಸುನೀಗಿದ್ದಾರೆ. ಯುವತಿ ಮೃತಪಟ್ಟ ಬಳಿಕ ಜೊತೆಗಿದ್ದ ಯುವಕರು ಆಸ್ಪತ್ರೆಗೆ ದಾಖಲಿಸಿ ನಾಪತ್ತೆಯಾಗಿದ್ದಾರೆ (ಕೆಲವು ಮೂಲಗಳ ಪ್ರಕಾರ ಆಸ್ಪತ್ರೆಗೆ ಕರೆತಂದು ಬಳಿಕ ತೆರಳಿದ್ದಾರೆ).

ಆಸ್ಪತ್ರೆ ಹಾಗೂ ಪೊಲೀಸ್ ತನಿಖೆ: ಕೂಡಲೇ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸಕಲೇಶಪುರ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಾತ್‌ರೂಮ್‌ನಲ್ಲಿ ಯುವತಿ ಮೃತಪಟ್ಟಿರುವುದು ಮತ್ತು ಜೊತೆಗಿದ್ದವರು ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಸಾವಿಗೆ ನಿಖರವಾದ ಕಾರಣವೇನು ಎಂಬುದು ಪೊಲೀಸರ ತನಿಖೆಯಿಂದಷ್ಟೇ ಹೊರಬರಬೇಕಿದೆ.

Continue Reading

Trending

Copyright © 2025 Deevatige

error: Content is protected !!