DEATH
ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಶಸ್ತಿ ಪುರಸ್ಕೃತ ಖ್ಯಾತ ಪತ್ರಕರ್ತ ಸುಂದರ್ ಕಬಕ ಇನ್ನಿಲ್ಲ.
ಬೆಂಗಳೂರಿನ ಹಿರಿಯ ಪತ್ರಕರ್ತರಾಗಿದ್ದ ಕಬಕದ ಕೆ. ಸುಂದರ್ (56) ಅವರು ಶನಿವಾರ ಬೆಳಿಗ್ಗೆ ಮಂಗಳೂರು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಿಧನರಾದರು.
ಕರ್ನಾಟಕದಲ್ಲಿ ಉದಯ ಟಿವಿ ಆರಂಭವಾದ ಸಂದರ್ಭದಲ್ಲಿ ಟಿವಿ ವರದಿಗಾರನಾಗಿ ವೃತ್ತಿ ಆರಂಭಿಸಿದ ಸುಂದರ್ ಅವರು ಬಳಿಕ , ಸುಪ್ರಭಾತ ಟಿವಿ, ಈಟಿವಿ ನ್ಯೂಸ್, ಜನಶ್ರೀ ನ್ಯೂಸ್ ನಲ್ಲಿ ಹಿರಿಯ ಹುದ್ದೆಯನ್ನು ನಿರ್ವಹಿಸಿ, ರಾಜ್ಯ ಮಟ್ಟದ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದಾರೆ. ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ವಿವಿಧ ಹುದ್ದೆಯನ್ನು ಅಲಂಕರಿಸಿ ಮಾದ್ಯಮ ಮಿತ್ರರಾಗಿ ಸೇವೆ ಸಲ್ಲಿಸಿದ್ದಾರೆ. ರಾಜಕೀಯ ವರದಿಗಾರಿಕೆಯಲ್ಲಿ ನೈಪುಣ್ಯತೆ ಹೊಂದಿದ ಇವರು ಬಹುತೇಕ ಮಾಜಿ ಮುಖ್ಯ ಮಂತ್ರಿಗಳ ಆಪ್ತರಲ್ಲಿ ಒಬ್ಬರಾಗಿದ್ದರು. ಇವರ ಮಾದ್ಯಮ ಸೇವೆಯನ್ನು ಗುರುತಿಸಿ ಹಲವಾರು ಪ್ರಶಸ್ತಿಗಳು ಇವರಿಗೆ ಲಭಿಸಿದ್ದು, ಪ್ರತಿಷ್ಠಿತ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಶಸ್ತಿ ಪುರಸ್ಕೃತರು ಆಗಿದ್ದಾರೆ. ಮಾದಯಮ ಸೇವೆಯಲ್ಲಿ ಇರುವ ಸಂದರ್ಭಕ್ಕೆ ಅನಾರೋಗ್ಯಕ್ಕೆ ತುತ್ತಾದ ಇವರು ಕಣ್ಣಿನ ದೃಷ್ಠಿಯನ್ನು ಕಳೆದುಕೊಂಡ ನಂತರ ಪತ್ರಿಕಾರಂಗಕ್ಕೆ ವಿದಾಯ ಹೇಳಿದ್ದರು.
ಪುತ್ತೂರು ತಾಲೂಕಿನ ಕಬಕದವರಾದ ಸುಂದರ್ ಅವರು ಮಂಗಳೂರು ವಿ.ವಿ ಕಾಲೇಜಿನಲ್ಲಿ ಪದವಿ ಪಡೆದು ಬಳಿಕ ಕೊಣಾಜೆ ಮಂಗಳೂರು ವಿ.ವಿಯಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. ಪತ್ರಿಕೋದ್ಯಮ ಸ್ನಾತಕೋತ್ತರ ಅಧ್ಯಯನದ ಬಳಿಕ ಬೆಂಗಳೂರು ಪಯಣಿಸಿದ ಸುಂದರ ಅವರು ಮೂರು ದಶಕಗಳ ಕಾಲ ಬೆಂಗಳೂರಿನಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದರು. ಅಪಾರ ಮಿತ್ರ ಬಳಗವಿದ್ದ ಸುಂದರ್ ಪರೋಪಕಾರಿಯಾಗಿ ಸ್ನೇಹಜೀವಿಯಾಗಿ ಬದುಕಿದವರು.
ಸುಂದರ್ ಕಬಕ ಮರಣದ ವಾರ್ತೆ ನೋವನ್ನುಂಟು ಮಾಡಿದೆ, ಅವರು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಅನನ್ಯವಾದುದು, ಅವರ ಆತ್ಮಕ್ಕೆ ದೇವರು ಚಿರಶಾಂತಿಯನ್ನು ಅನುಗ್ರಹಿಸಲಿ ಎಂದು ಕರ್ನಾಟಕ ರಾಜ್ಯ ಜರ್ನಲಿಸ್ಟ್ ಯೂನಿಯನ್ ಇದರ ಜಿಲ್ಲಾ ಸಮಿತಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
ಸುಂದರ್ ಕಬಕ ಅವರ ಅಕಾಲಿಕ ಮರಣದಿಂದ ಮಾದ್ಯಮ ಕ್ಷೇತ್ರದೊಂದಿಗೆ ಒಡನಾಟದಲ್ಲಿದ್ದ ಓರ್ವ ಸಹೋದ್ಯೋಗಿ ಮಿತ್ರನನ್ನು ಕಳೆದುಕೊಂಡಂತಾಗಿದೆ. ಅವರ ಅಕಾಲಿಕ ವಿದಾಯ ನೋವುಂಟು ಮಾಡಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ. ಅವರ ಅಗಲಿಕೆಯಿಂದ ನೊಂದಿರುವ ಕುಟುಂಬಕ್ಕೆ ನನ್ನ ಸಾಂತ್ವನಗಳನ್ನು ದೀವಟಿಗೆ ಡಿಜಿಟಲ್ ಮೀಡಿಯಾ ಬಳಗ ಸಲ್ಲಿಸುತ್ತಿದೆ.
Bantawala
ದಕ್ಷಿಣ ಕನ್ನಡ: ರಾಯಿ ಸಮೀಪ ನದಿಯಲ್ಲಿ ಕೊಚ್ಚಿಹೋಗಿದ್ದ ವ್ಯಕ್ತಿಯ ಮೃತದೇಹ ಸಂಗಬೆಟ್ಟುವಿನಲ್ಲಿ ಪತ್ತೆ
ಮಂಗಳೂರು: ಬಂಟ್ವಾಳ ತಾಲೂಕಿನ ರಾಯಿ ಸಮೀಪ ಶನಿವಾರ ತಡರಾತ್ರಿ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಹೋಗಿದ್ದ 48 ವರ್ಷದ ವ್ಯಕ್ತಿಯೊಬ್ಬರ ಮೃತದೇಹವು ಸೋಮವಾರ ಬೆಳಿಗ್ಗೆ ಸಂಗಬೆಟ್ಟು ಪ್ರದೇಶದಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರನ್ನು ರಾಯಿ ನಿವಾಸಿ ಜೀವನ್ ಪಿಂಟೊ (48) ಎಂದು ಗುರುತಿಸಲಾಗಿದೆ.
ಘಟನೆಯ ವಿವರ: ಶನಿವಾರ ತಡರಾತ್ರಿ ಜೀವನ್ ಪಿಂಟೊ ಅವರು ತೋಡಿನ ಆಚೆಗಿರುವ ತಮ್ಮ ಮಾವನ ಮನೆಗೆ ತೆರಳಲು ಕಾಲುಸಂಕದ ಮೇಲೆ ನದಿ ದಾಟುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿತ್ತು. ಘಟನಾ ಸ್ಥಳದಲ್ಲಿ ಅವರ ಚಪ್ಪಲಿ ಹಾಗೂ ಟಾರ್ಚ್‌ಲೈಟ್ ಪತ್ತೆಯಾಗಿದ್ದರೂ, ಅವರು ನೀರಿಗೆ ಬಿದ್ದಿದ್ದಾರೋ ಅಥವಾ ಬೇರೆಡೆ ತೆರಳಿದ್ದಾರೋ ಎಂಬುದು ಅಧಿಕೃತವಾಗಿ ದೃಢಪಟ್ಟಿರಲಿಲ್ಲ.

ಸತತ ಶೋಧ ಕಾರ್ಯಾಚರಣೆ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಮತ್ತು ನದಿಯಲ್ಲಿ ಹರಿಯುತ್ತಿರುವ ಪ್ರಬಲ ನೀರಿನ ಸೆಳೆತದ ನಡುವೆಯೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಹಾಗೂ ಸ್ಥಳೀಯ ಮುಳುಗುತಜ್ಞರು ಮತ್ತು ಗ್ರಾಮಸ್ಥರು ಕಳೆದ ಎರಡು ದಿನಗಳಿಂದ ಜಂಟಿಯಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದರು.
ಸತತ ಕಾರ್ಯಾಚರಣೆಯ ಫಲವಾಗಿ ಸೋಮವಾರ ಬೆಳಿಗ್ಗೆ ಸಂಗಬೆಟ್ಟು ಸಮೀಪ ಅವರ ಮೃತದೇಹ ಪತ್ತೆಯಾಗಿದೆ. ತಕ್ಷಣವೇ ಮೃತದೇಹವನ್ನು ನದಿಯಿಂದ ಹೊರತೆಗೆದ ಅಧಿಕಾರಿಗಳು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಕಾನೂನು ಹಾಗೂ ಮರಣೋತ್ತರ ಪರೀಕ್ಷೆಯ ಪ್ರಕ್ರಿಯೆಗಳನ್ನು ಕೈಗೊಂಡಿದ್ದಾರೆ.
accident
ಉಚ್ಚಿಲ: ಜಿಒಎಸ್ ಆಫ್ ಮಾಡದೆ ಟ್ರಾನ್ಸ್‌ಫಾರ್ಮರ್ ಏರಿದ ಮೆಸ್ಕಾಂ ಲೈನ್‌ಮ್ಯಾನ್ ವಿದ್ಯುತ್ ಆಘಾತದಿಂದ ಸಾವು
ಉಳ್ಳಾಲ: ಜಿಒಎಸ್ (ಗ್ರೂಪ್ ಆಪರೇಟೆಡ್ ಸ್ವಿಚ್) ಆಫ್ ಮಾಡದೆ ವಿದ್ಯುತ್ ಟ್ರಾನ್ಸ್‌ಫಾರ್ಮರ್ (ಟಿಸಿ) ಏರಿದ ಮೆಸ್ಕಾಂ ಲೈನ್‌ಮ್ಯಾನ್ ಒಬ್ಬರು ವಿದ್ಯುತ್ ಆಘಾತಕ್ಕೊಳಗಾಗಿ ಸಾವನ್ನಪ್ಪಿರುವ ದುರಂತ ಘಟನೆ ಉಳ್ಳಾಲ ತಾಲೂಕಿನ ಉಚ್ಚಿಲ ನಯಾಪಟ್ಟಣ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಅಂಬಿಕಾರೋಡ್ ಪಿಲಾರು ನಿವಾಸಿ ಶೇಖ್ ಝುಮೀರ್ (49) ಮೃತಪಟ್ಟ ದುರದೃಷ್ಟಕರ ವ್ಯಕ್ತಿ.
ಘಟನೆಯ ವಿವರ:
ಉಚ್ಚಿಲ ನಯಾಪಟ್ಟಣದ ಟ್ರಾನ್ಸ್‌ಫಾರ್ಮರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಬಗ್ಗೆ ಮೆಸ್ಕಾಂಗೆ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಶೇಖ್ ಝುಮೀರ್ ಹಾಗೂ ಅವರ ಸಹೋದ್ಯೋಗಿ ಸಂಗಪ್ಪ ಎಂಬುವರು ಇಂದು ಬೆಳಿಗ್ಗೆ ಸ್ಥಳಕ್ಕೆ ತೆರಳಿ ದುರಸ್ತಿ ಕಾರ್ಯದಲ್ಲಿ ತೊಡಗಿದ್ದರು.
ಜಿಒಎಸ್ (GOS) ಆಫ್ ಆಗಿದೆ ಎಂದು ತಪ್ಪಾಗಿ ಗ್ರಹಿಸಿದ ಝುಮೀರ್, ಟ್ರಾನ್ಸ್‌ಫಾರ್ಮರ್ ಏರಿದ್ದಾರೆ. ಈ ವೇಳೆ ತೀವ್ರ ವಿದ್ಯುತ್ ಆಘಾತಕ್ಕೊಳಗಾಗಿ ಕೆಳಗೆ ಬಿದ್ದಿದ್ದಾರೆ. ತಕ್ಷಣವೇ ತೀವ್ರ ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.
ಮೃತ ಝುಮೀರ್ ಅವರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
DEATH
ಉಪ್ಪಿನಂಗಡಿ: ನೇತ್ರಾವತಿ ನದಿ ದಡದಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ – ವಾರೀಸುದಾರರ ಪತ್ತೆಗೆ ಪೋಲಿಸ್ ಮನವಿ
ಉಪ್ಪಿನಂಗಡಿ: ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ಹಿರ್ತಡ್ಕ ಎಂಬಲ್ಲಿ ಹರಿಯುವ ನೇತ್ರಾವತಿ ನದಿಯ ದಡದಲ್ಲಿ ಅಪರಿಚಿತ ಗಂಡಸಿನ ಮೃತದೇಹವೊಂದು ಪತ್ತೆಯಾಗಿದೆ.
ಆಗಸ್ಟ್ 02, 2026ರಂದು ಮಧ್ಯಾಹ್ನ ಸುಮಾರು 03:00 ಗಂಟೆಯ ವೇಳೆಗೆ ನದಿ ದಡದಲ್ಲಿ ಶವ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು ಮೃತದೇಹವನ್ನು ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೊಲೀಸರ ಮನವಿ:
ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಿಂದ ಪ್ರಕಟಣೆ ಹೊರಡಿಸಲಾಗಿದ್ದು, ಸಾರ್ವಜನಿಕರಲ್ಲಿ ಈ ಕೆಳಗಿನಂತೆ ಕೋರಲಾಗಿದೆ:
ಇತರ ಪೊಲೀಸ್ ಠಾಣೆಗಳಿಗೆ: ಯಾವುದೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ಗಂಡಸು ಕಾಣೆಯಾದ ಬಗ್ಗೆ ದೂರು ದಾಖಲಾಗಿದ್ದಲ್ಲಿ ತಕ್ಷಣವೇ ಉಪ್ಪಿನಂಗಡಿ ಠಾಣೆಗೆ ಮಾಹಿತಿ ನೀಡಲು ಕೋರಲಾಗಿದೆ.
ಸಾರ್ವಜನಿಕರಿಗೆ/ವಾರೀಸುದಾರರಿಗೆ: ಯಾರಾದರೂ ವ್ಯಕ್ತಿ ನಾಪತ್ತೆಯಾಗಿದ್ದು, ಮೃತರ ವಾರೀಸುದಾರರು ಅಥವಾ ಗುರುತು ತಿಳಿದವರು ಇದ್ದಲ್ಲಿ ತಕ್ಷಣವೇ ಉಪ್ಪಿನಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ವಿನಂತಿಸಲಾಗಿದೆ.
ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: ಉಪ್ಪಿನಂಗಡಿ ಪೊಲೀಸ್ ಠಾಣೆ: 9480805362
-
Bantawala3 weeks agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime6 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime4 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala4 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
accident2 weeks agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
Bantawala7 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Bantawala4 weeks agoಮಂಚಿ ಮೋಂತಿಮಾರು: ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಕತ್ತಿಯಿಂದ ಮಾರಣಾಂತಿಕ ದಾಳಿ; ಯುವತಿ ಗಂಭೀರ
