Connect with us

Politics

ಮೊದಲ ಬಾರಿ ಆಯ್ಕೆಯಾದ ಶಾಸಕರಿಗೆ ಸಚಿವ ಸ್ಥಾನ ಇಲ್ಲ- ಸಿ.ಎಂ. ಸಿದ್ದರಾಮಯ್ಯ

Published

on

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾದ ಶಾಸಕರಿಗೆ ಸಚಿವ ಸ್ಥಾನ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಾರ್ಕಳದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಪಕ್ಷದ ಹೈಕಮಾಂಡ್‌ನ ನಿರ್ಣಯವಾಗಿದ್ದು, ಅದನ್ನು ಪಾಲಿಸಲಾಗುವುದು ಎಂದು ಹೇಳಿದ್ದು, ಈ ನಿರ್ಣಯದಿಂದ ಹೊಸ ಶಾಸಕರಿಗೆ ನಿರಾಸೆಯಾಗಿದೆ.

ಇತ್ತೀಚೆಗೆ ಹೊಸದಾಗಿ ಆಯ್ಕೆಯಾದ 38 ಕಾಂಗ್ರೆಸ್ ಶಾಸಕರ ಪೈಕಿ 31 ಮಂದಿ ಹೈಕಮಾಂಡ್‌ಗೆ ಪತ್ರ ಬರೆದು, ಸಂಪುಟ ಪುನಾರಚನೆಯ ಸಂದರ್ಭದಲ್ಲಿ ಕನಿಷ್ಠ 5 ಮಂದಿ ಮೊದಲ ಬಾರಿಯ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದರು. ಇದು 2028ರ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಬಲಪಡಿಸಲು ಸಹಾಯಕವಾಗುತ್ತದೆ ಎಂದು ಅವರು ವಾದಿಸಿದ್ದರು. ಆದರೆ ಸಿಎಂ ಸಿದ್ದರಾಮಯ್ಯ ಈ ಬೇಡಿಕೆಗೆ ನಿರಾಸೆಯ ಉತ್ತರ ನೀಡಿದ್ದಾರೆ.
ಶಾಸಕರು ತಮ್ಮ ಆಸೆಗಳನ್ನು ವ್ಯಕ್ತಪಡಿಸುವುದು ಸಹಜ ಮತ್ತು ತಪ್ಪಲ್ಲ. ಎಲ್ಲರಿಗೂ ಸಚಿವರಾಗಬೇಕು ಎಂಬ ಆಕಾಂಕ್ಷೆ ಇರುತ್ತದೆ. ಆದರೆ ಮೊದಲ ಬಾರಿಯ ಶಾಸಕರಿಗೆ ಮಂತ್ರಿ ಸ್ಥಾನ ನೀಡಬಾರದು ಎಂಬ ನಿರ್ಣಯ ಪಕ್ಷದಲ್ಲಿ ತೆಗೆದುಕೊಳ್ಳಲಾಗಿದೆ.
ಇದು ಹೈಕಮಾಂಡ್‌ನ ಸೂಚನೆಯಾಗಿದ್ದು, ಅದನ್ನು ಅನುಸರಿಸಲಾಗುವುದು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ ಬಣದ ಕೆಲವು ಶಾಸಕರು ಒಂದು ವಾರದ ಡೆಡ್‌ಲೈನ್ ನೀಡಿ ಹೈಕಮಾಂಡ್ ಭೇಟಿಗೆ ಸಜ್ಜಾಗುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಲು ಸಿದ್ದರಾಮಯ್ಯ ನಿರಾಕರಿಸಿದರು. “ನಾನಿಲ್ಲಿ ರಾಜಕೀಯ ಮಾತನಾಡುವುದಿಲ್ಲ. ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ” ಎಂದರು.
ಈ ನಿರ್ಣಯದಿಂದ ಹೊಸ ಶಾಸಕರಿಗೆ ನಿರಾಸೆಯಾಗಿದ್ದು, ಪಕ್ಷದೊಳಗಿನ ಆಂತರಿಕ ಒತ್ತಡಗಳು ಮತ್ತು ಸಂಪುಟ ವಿಸ್ತರಣೆಯ ಚರ್ಚೆಗಳು ಮುಂದುವರೆದಿವೆ. ಹೈಕಮಾಂಡ್‌ನ ಅಂತಿಮ ನಿರ್ಧಾರಕ್ಕೆ ಕಾಯಲಾಗುತ್ತಿದೆ.

ಸಚಿವ ಸಂಪುಟ‌ ಪುನಾರಚನೆಗೆ 31 ಶಾಸಕರ ಒತ್ತಾಯದ ಪತ್ರ ಬಹಿರಂಗವಾಗಿತ್ತು. ದಿನಾಂಕ ಇಲ್ಲದ ಪತ್ರ ಬಿಡುಗಡೆ ಆಗಿದ್ದು, ಕಾಂಗ್ರೆಸ್ ಒಳಗೆ ಕುತೂಹಲ ಹೆಚ್ಚಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಲ್ಲಿ 38 ಶಾಸಕರು‌ ಹೊಸದಾಗಿ ಗೆದ್ದಿದ್ದೇವೆ. ಬೇರೆ ರಾಜ್ಯಗಳಲ್ಲಿ ಮೊದಲ ಬಾರಿಗೆ ಗೆದ್ದವರು ಸಿಎಂ ಆಗಿದ್ದಾರೆ. ಮೊದಲ ಬಾರಿ ಗೆದ್ದ ಶಾಸಕರಿಗೂ ಸಚಿವ ಸ್ಥಾನ ನೀಡಿ ಅವಕಾಶ ಕೊಡಬೇಕು. ಕನಿಷ್ಠ 5 ಹೊಸ ಮುಖಗಳಿಗೆ ಸಚಿವ ಸ್ಥಾನ ನೀಡುವಂತೆ ಪತ್ರದಲ್ಲಿ ಮನವಿ ಮಾಡಲಾಗಿತ್ತು.

ಕರ್ನಾಟಕದಲ್ಲಿ ಹೊಸ ಮುಖಗಳನ್ನು ಜನರು ಬಯಸಿದ್ದರು. ಹಾಗಾಗಿ ಕಾಂಗ್ರೆಸ್ ನಲ್ಲಿ 38 ಹೊಸ ಮುಖಗಳನ್ನ ಗೆಲ್ಲಿಸಿದ್ದರು. ಆದರೆ ಕ್ಯಾಬಿನೆಟ್ ನಲ್ಲಿ ಒಬ್ಬರೇ ಒಬ್ಬ ಮೊದಲ ಸಲ ಗೆದ್ದ ಶಾಸಕರಿಗೆ ಅವಕಾಶ ಸಿಕ್ಕಿಲ್ಲ.‌ ಸಚಿವ ಸಂಪುಟ ಪುನಾರಚನೆ ಮಾಡಿ ಮೊದಲ ಬಾರಿ ಗೆದ್ದ ಕನಿಷ್ಠ 5 ಶಾಸಕರಿಗೆ ಅವಕಾಶ ಕೊಡಿ. ಬೇರೆ ರಾಜ್ಯಗಳಲ್ಲಿ ಮೊದಲ ಬಾರಿ ಗೆದ್ದವರು ಸಿಎಂ ಆಗಿದ್ದಾರೆ. ಹಾಗಾಗಿ 2028ರ ಚುನಾವಣೆಯ ದೃಷ್ಟಿಯಿಂದ ಮೊದಲ ಬಾರಿ ಗೆದ್ದ ಶಾಸಕರಿಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಲಾಗಿತ್ತು. ಈ ಪತ್ರದಿಂದಾಗಿ 5 ಜನ ಹೊಸ ಶಾಸಕರಿಗೆ ಮುಂದಿನ ಸಚಿವ ಸಂಪುಟ ಪುನಾರಚನೆಯಲ್ಲಿ ಅವಕಾಶಗಳು ಸಿಗುತ್ತದೆ ಎಂದು ಹೇಳಲಾಗಿತ್ತು.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

award

ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಐತಿಹಾಸಿಕ ಮಾನ್ಯತೆ: ಕರಾವಳಿಯಲ್ಲಿ ಹಬ್ಬದ ವಾತಾವರಣ

Published

on

ಮಂಗಳೂರು: ತುಳು ಭಾಷಿಕರ ಹಲವು ದಶಕಗಳ ಹೋರಾಟ ಹಾಗೂ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಐತಿಹಾಸಿಕ ಜಯ ಸಿಕ್ಕಿದೆ. ಶ್ರೀಮಂತ ಪರಂಪರೆಯ ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡುವುದಾಗಿ ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.

ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯ ಬಳಿಕ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಈ ಮಹತ್ವದ ತೀರ್ಮಾನವನ್ನು ಪ್ರಕಟಿಸಿದರು.

ಸಂವಿಧಾನದ 8ನೇ ಪರಿಚ್ಛೇದ ಸೇರ್ಪಡೆಗೆ ಬಲ: ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು, ಪ್ರಾಚೀನ ಹಾಗೂ ಆಧುನಿಕ ಸಾಹಿತ್ಯಿಕ ಸಮೃದ್ಧತೆಯನ್ನು ಹೊಂದಿರುವ ಅಪೂರ್ವ ಭಾಷೆಯಾಗಿದೆ. ರಾಜ್ಯ ಸರ್ಕಾರದಿಂದ ಎರಡನೇ ಅಧಿಕೃತ ಭಾಷಾ ಸ್ಥಾನಮಾನ ಲಭಿಸಿರುವುದು, ಭಾರತೀಯ ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಭಾಷೆಯನ್ನು ಸೇರ್ಪಡೆಗೊಳಿಸುವ ಹೋರಾಟಕ್ಕೆ ಮತ್ತಷ್ಟು ಪ್ರಬಲ ವೇದಿಕೆಯಾಗಲಿದೆ.

ನಿರಂತರ ಹೋರಾಟಕ್ಕೆ ಸಿಕ್ಕ ಫಲ: ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಮುಖವಾಗಿ ಮಾತನಾಡುವ ತುಳುವಿಗೆ ಹೆಚ್ಚುವರಿ ಅಧಿಕೃತ ಭಾಷಾ ಮಾನ್ಯತೆ ನೀಡಬೇಕೆಂದು ದಶಕಗಳಿಂದ ತುಳು ಸಾಹಿತ್ಯ ಅಕಾಡೆಮಿ, ತುಳು ಪರ ಸಂಘಟನೆಗಳು, ಸಾಹಿತಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸರ್ಕಾರದ ಮೇಲೆ ನಿರಂತರವಾಗಿ ಒತ್ತಡ ಹೇರುತ್ತ ಬಂದಿದ್ದರು.

ತಜ್ಞರ ಸಮಿತಿಯ ವರದಿ ಆಧಾರ: ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡುವ ಸಾಧಕ-ಬಾಧಕಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಹಿರಿಯ ಶಿಕ್ಷಣ ತಜ್ಞ ಡಾ. ಎಂ. ಮೋಹನ್ ಆಳ್ವ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯು ಹೊರ ರಾಜ್ಯಗಳಲ್ಲಿನ ಭಾಷಾ ನೀತಿ ಮಾದರಿಗಳನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ವಿಸ್ತೃತ ವರದಿಯನ್ನು ಸಲ್ಲಿಸಿತ್ತು. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈಗ ತುಳುವರ ಬಹುಕಾಲದ ಕನಸು ನನಸಾಗಿದ್ದು, ಕರಾವಳಿ ಭಾಗದಲ್ಲಿ ಹರ್ಷೋದ್ಗಾರ ವ್ಯಕ್ತವಾಗಿದೆ.

Continue Reading

CONGRESS

ಮಂಗಳೂರು ಸಚಿವ ಸಂಪುಟ ಸಭೆ: ವಿವಿಧ ಸಂಘಟನೆಗಳ ಪ್ರತಿಭಟನೆ ಮತ್ತು ಬಿಗಿ ಭದ್ರತೆ

Published

on

ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಶುಕ್ರವಾರ (ಸೆಪ್ಟೆಂಬರ್ 18) ಆಯೋಜಿಸಲಾದ ವಿಶೇಷ ಸಚಿವ ಸಂಪುಟ ಸಭೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟದ ಸಚಿವರು ಆಗಮಿಸಿದ ವೇಳೆ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದಲ್ಲಿ ವಿವಿಧ ಸಂಘಟನೆಗಳು ಭಾರಿ ಪ್ರತಿಭಟನೆ ನಡೆಸಿದವು. ಅಬ್ದುಲ್ ರಹೀಮಾನ್ ಕೊಲೆ ಆರೋಪಿಗಳಿಗೆ ಜಾಮೀನು ಮಂಜೂರಾಗಿರುವುದಕ್ಕೆ ರಾಜ್ಯ ಸರ್ಕಾರದ ವೈಫಲ್ಯವೇ ಕಾರಣವೆಂದು ಆರೋಪಿಸಿ ಎಸ್.ಡಿ.ಪಿ.ಐ. ಕಾರ್ಯಕರ್ತರು ಮಂಗಳೂರಿನ ರಾವ್ & ರಾವ್ ಸರ್ಕಲ್ ಬಳಿ ಕಪ್ಪುಪತಾಕೆ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಹಲವು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.

ಅದೇ ರೀತಿ, ಜೈಲ್ ಜಾಮರ್ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವಕೀಲರನ್ನು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ಹೊರಟ ಸಿ.ಪಿ.ಐ.ಎಂ. ಕಾರ್ಯಕರ್ತರನ್ನು ಪೊಲೀಸರು ತಡೆದು ವಶಕ್ಕೆ ಪಡೆದರು. ಇದರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ತುಳು ಸಂಘಟನೆಯವರು ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವಂತೆ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.

ಈ ಎಲ್ಲಾ ಬೆಳವಣಿಗೆಗಳ ನಡುವೆ, ಸಿಎಂ ಡಿ.ಕೆ. ಶಿವಕುಮಾರ್ ಅವರು ಸಚಿವ ಸಂಪುಟದ ‌ ಸಹೋದ್ಯೋಗಿಗಳೊಂದಿಗೆ ಕದ್ರಿ ಶ್ರೀ ಮಂಜುನಾಥ ದೇವರ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪಡೀಲ್‌ನಲ್ಲಿರುವ ಪ್ರಜ್ಞಾಸೌಧದ ಎರಡನೇ ಮಹಡಿಯ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಒಟ್ಟು 33 ಮಂದಿ ಸಚಿವರಿಗೆ ಮತ್ತು ಮುಖ್ಯ ಕಾರ್ಯದರ್ಶಿಗಳು ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ಆಯಾ ಸಭಾಂಗಣದಲ್ಲೇ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ನಿಗದಿತ ಸಮಯಕ್ಕಿಂತ ಸಭೆ ಸ್ವಲ್ಪ ವಿಳಂಬವಾಗಿ ಆರಂಭವಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

Continue Reading

CONGRESS

ಮಂಗಳೂರಿನಲ್ಲಿ ಐತಿಹಾಸಿಕ ರಾಜ್ಯ ವಿಶೇಷ ಸಚಿವ ಸಂಪುಟ ಸಭೆ: ಸಿಎಂ ಹಾಗೂ ಸಚಿವರ ಭೇಟಿ ಮತ್ತು ಕಾರ್ಯಕ್ರಮಗಳ ವರದಿ

Published

on

ಮಂಗಳೂರು: ಕರಾವಳಿ ಜಿಲ್ಲೆ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಲಾಗಿರುವ ರಾಜ್ಯ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟ ಸಚಿವರು ಆಗಮಿಸಿದ್ದು, ನಗರದಲ್ಲಿ ಬಿರುಸಿನ ರಾಜಕೀಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಆರಂಭವಾಗಿವೆ.

ಕದ್ರಿ ದೇವಸ್ಥಾನ ಭೇಟಿ ಮತ್ತು ಗಾಂಧೀಜಿ ಸ್ಮರಣೆ

ಪ್ರವಾಸದ ಮೊದಲ ದಿನವಾದ ಶುಕ್ರವಾರ ಬೆಳಗ್ಗೆ ಮುಖ್ಯಮಂತ್ರಿಗಳು ಐತಿಹಾಸಿಕ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ, 1934ರಲ್ಲಿ ಮಹಾತ್ಮ ಗಾಂಧೀಜಿಯವರು ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಉಳಿದುಕೊಂಡಿದ್ದ ಐತಿಹಾಸಿಕ ಮನೆಯ ಸಮೀಪವಿರುವ ಗಾಂಧಿ ಸ್ಕ್ವೇರ್ ಕೆಫೆಗೆ ತೆರಳಿದರು.

ಯುವ ಕಂಟೆಂಟ್‌ ಕ್ರಿಯೇಟರ್ಸ್‌ ಜೊತೆ ಉಪಾಹಾರ ಹಾಗೂ ಸಂವಾದ

ಮಂಗಳೂರಿನ ಯುವ ಸೋಶಿಯಲ್ ಮೀಡಿಯಾ ಕಂಟೆಂಟ್‌ ಕ್ರಿಯೇಟರ್‌ಗಳೊಂದಿಗೆ ಕೆಫೆಯಲ್ಲಿ ಸಾಂಪ್ರದಾಯಿಕ ಉಪಾಹಾರ ಸವಿಯುತ್ತಾ ಸಿಎಂ ಸಂವಾದ ನಡೆಸಿದರು. ಮಂಗಳೂರು ಬನ್ಸ್, ದೋಸೆ ಸೇರಿದಂತೆ ಕರಾವಳಿಯ ವಿಶಿಷ್ಟ ಉಪಾಹಾರಗಳನ್ನು ಸವಿದ ಅವರು, “ಇಲ್ಲಿಗೆ ಬಂದಿರುವುದು ಬಹಳ ಸಂತೋಷ ತಂದಿದೆ” ಎಂದು ಹರ್ಷ ವ್ಯಕ್ತಪಡಿಸಿದರು.

ಜನರ ಬದುಕು ಮುಖ್ಯ – ಸಿಎಂ ಸ್ಪಷ್ಟನೆ

ಸರ್ಕಾರಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, “ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲೆಲ್ಲಿ ಕರೆದುಕೊಂಡು ಹೋಗುತ್ತಾರೋ ಅಲ್ಲಿಗೆ ಹೋಗುತ್ತೇನೆ. ಯಾರೂ ಗಾಬರಿಯಾಗಬೇಕಿಲ್ಲ; ನಮಗೆ ಜನರ ಬದುಕು ಮುಖ್ಯವೇ ಹೊರತು ಭಾವನೆಗಳ ಮೇಲೆ ರಾಜಕೀಯ ಮಾಡುವವರಲ್ಲ. ಎಲ್ಲರ ಚಿಂತನೆಯನ್ನೊಳಗೊಂಡು ನಮ್ಮ ಸರ್ಕಾರ ಕೆಲಸ ಮಾಡಲಿದೆ” ಎಂದು ಸ್ಪಷ್ಟಪಡಿಸಿದರು.

ಸಂಪುಟ ಸಭೆಗೆ ಭರ್ಜರಿ ಸ್ವಾಗತ ಮತ್ತು ಸಿದ್ಧತೆ

ಸಚಿವ ಸಂಪುಟ ಸಭೆಗೆ ಕ್ಷಣಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಭವ್ಯ ಸ್ವಾಗತಕ್ಕೆ ಸಿದ್ಧತೆ ಕೈಗೊಳ್ಳಲಾಗಿದೆ. ಪಂಪ್‌ವೆಲ್‌ನಿಂದ ಪಡೀಲ್ ವರೆಗೆ ಚೆಂಡೆ ಬ್ಯಾಂಡ್‌ಗಳು ಹಾಗೂ ವಿವಿಧ ವೇಷಧಾರಿಗಳ ಸಾಂಸ್ಕೃತಿಕ ತಂಡಗಳು ರಸ್ತೆಯುದ್ದಕ್ಕೂ ಗಮನ ಸೆಳೆದವು. ಡಿಸಿ ಕಚೇರಿ ಮುಂದೆ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿದ್ದು, ಮುಖ್ಯಮಂತ್ರಿಗಳನ್ನು ಕಣ್ತುಂಬಿಕೊಳ್ಳಲು ರಸ್ತೆ ಬದಿ ಕಾದು ನಿಂತಿದ್ದಾರೆ.

Continue Reading

Trending

Copyright © 2025 Deevatige

error: Content is protected !!