Connect with us

Belthangady

ಅಕ್ರಮ ಗೋಹತ್ಯಾ ಪ್ರಕರಣ ದಾಖಲು. ಆರೋಪಿಯ ಮನೆ ಆವರಣ ಜಪ್ತಿ.

Published

on

ಮನೆಯೊಂದರ ಆವರಣದಲ್ಲಿ, ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ ಮಾಡುತ್ತಿದ್ದ ಪ್ರಕರಣದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆಯಡಿಯಲ್ಲಿ ಆರೋಪಿ ಬೆಳ್ತಂಗಡಿ ಬಾರ್ಯ ಗ್ರಾಮ, ಹೊಸವಕ್ಲು ನಿವಾಸಿ ಹೆಚ್‌ ಅಬ್ದುಲ್‌ ರಹಿಮಾನ್‌ ಎಂಬವರು ಜಾನುವಾರುಗಳ ವಧೆಗಾಗಿ ಬಳಸಿದ್ದ ಮನೆಯ ಆವರಣವನ್ನು ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಕೈಗೊಂಡು ಜಪ್ತಿ ಮಾಡಿದ್ದಾರೆ.

ದಿನಾಂಕ: 26.02.2026 ರಂದು ರಾತ್ರಿ, ಬೆಳ್ತಂಗಡಿ ಬಾರ್ಯ ಗ್ರಾಮ, ಹೊಸವಕ್ಲು ಎಂಬಲ್ಲಿ, ಮನೆಯೊಂದರ ಆವರಣದಲ್ಲಿ, ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ಉಪ್ಪಿನಂಗಡಿ ಪೊಲೀಸ್ ಠಾಣಾ ಪಿಎಸ್ಐ ಸುತೇಶ್‌ ಕೆ ಪಿ ರವರು ಸಿಬ್ಬಂದಿಗಳೊಂದಿಗೆ ಸದ್ರಿ ಸ್ಥಳದಲ್ಲಿದ್ದ ಹೆಚ್‌ ಅಬ್ದುಲ್‌ ರಹಿಮಾನ್‌ ಎಂಬವರ ಮನೆಯ ಬಳಿ ತಲುಪಿದಾಗ, ಮನೆಯ ಆವರಣದಿಂದ ಇಬ್ಬರು ವ್ಯಕ್ತಿಗಳು ಓಡಿಹೋಗಿರುತ್ತಾರೆ. ಸದ್ರಿ ಸ್ಥಳವನ್ನು ಪರಿಶೀಲಿಸಿದಾಗ, ಗೋಮಾಂಸವನ್ನು ಪ್ಯಾಕೆಟ್ ಮಾಡಿಡಲಾಗಿದ್ದು, ಸಮೀಪದಲ್ಲಿದ್ದ ಆಟೋ ರಿಕ್ಷಾದಲ್ಲಿಯೂ ಗೋಮಾಂಸದ ಪ್ಯಾಕೆಟ್ ಗಳು ಪತ್ತೆಯಾಗಿದ್ದು ಒಟ್ಟು 56 ಕೆಜಿ ಮಾಂಸ ಪತ್ತೆಯಾಗಿರುತ್ತದೆ. ಮುಂದಿನ ಕಾನೂನುಕ್ರಮಕ್ಕಾಗಿ ಸ್ಥಳದಲ್ಲಿದ್ದ ಗೋಮಾಂಸ, ತೂಕದ ಯಂತ್ರ, ಅಟೋರಿಕ್ಷಾ, ಮೊಬೈಲ್ ಹಾಗು ಇತರೆ ಸೊತ್ತುಗಳನ್ನು ವಶಕ್ಕೆ ಪಡೆದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 27/2026, ಕಲಂ: 4, ಮತ್ತು 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಮತ್ತು ಕಲಂ:3(5)) BNS 2023
ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಕೈಗೊಂಡು, ಪ್ರಕರಣದ ಆರೋಪಿ ಹೆಚ್‌ ಅಬ್ದುಲ್‌ ರಹಿಮಾನ್‌ ಎಂಬವರು ಜಾನುವಾರುಗಳ ವಧೆಗಾಗಿ ಬಳಸಿದ್ದ ಮನೆಯ ಆವರಣವನ್ನು ಜಪ್ತಿ ಮಾಡಲಾಗಿರುತ್ತದೆ.

Continue Reading
Advertisement

Belthangady

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ: ಬೆಳ್ತಂಗಡಿಯಲ್ಲಿ ಸಿಐಡಿ ತನಿಖೆ ಆರಂಭ

Published

on

ಬೆಳ್ತಂಗಡಿ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರ ವಿರುದ್ಧ ಕೇಳಿಬಂದಿರುವ ಗಂಭೀರ ಅತ್ಯಾಚಾರ ಹಾಗೂ ಸುಲಿಗೆ ಆರೋಪದ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ದಳ (ಸಿಐಡಿ) ಚುರುಕುಗೊಳಿಸಿದೆ. ಇಂದು ಸಿಐಡಿ ಅಧಿಕಾರಿಗಳ ತಂಡ ಬೆಳ್ತಂಗಡಿಗೆ ಆಗಮಿಸಿ ಪ್ರಕರಣದ ಪ್ರಾಥಮಿಕ ವಿಚಾರಣೆ ನಡೆಸುವ ಮೂಲಕ ಅಧಿಕೃತವಾಗಿ ತನಿಖೆ ಆರಂಭಿಸಿದೆ.

ಪ್ರಕರಣದ ಹಿನ್ನೆಲೆ:
ಬೆಳ್ತಂಗಡಿ ತಾಲೂಕಿನ ಕಾಲೇಜೊಂದರ ಪ್ರಾಂಶುಪಾಲರೊಬ್ಬರು ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. 2020 ರಿಂದ 2023ರ ಅವಧಿಯಲ್ಲಿ ಜಮೀನು ವಿವಾದವೊಂದರ ವಿಚಾರಣೆಯ ನೆಪದಲ್ಲಿ ತನ್ನ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಸಂತ್ರಸ್ತೆ ಆರೋಪಿಸಿದ್ದರು. ಅಷ್ಟೇ ಅಲ್ಲದೆ, ಕೇಸ್ ಮರುಚಾಲನೆ ಮಾಡುವ ಬೆದರಿಕೆ ಹಾಕಿ ಸುಮಾರು 16 ಲಕ್ಷ ರೂ. ನಗದು, 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಮನೆ ನಿರ್ಮಾಣಕ್ಕಾಗಿ ತೇಗದ ಮರದ ದಿಮ್ಮಿಗಳನ್ನು ಪಡೆದುಕೊಂಡಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿತ್ತು.

ಈ ಪ್ರಕರಣವು ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾದ ಬೆನ್ನಲ್ಲೇ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಸೂಚನೆಯಂತೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು. ಈಗಾಗಲೇ ಸಂದೇಶ್ ಪಿ.ಜಿ. ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ.

ಮಾರ್ಚ್‌ 25ರಂದು ವೇಣೂರು ಪೊಲೀಸ್‌ ಠಾಣೆಯಿಂದ ಬೆಂಗಳೂರು ಸಿಐಡಿ ಕಚೇರಿಗೆ ಪ್ರಕರಣದ ದಾಖಲೆಗಳನ್ನು ಹಸ್ತಾಂತರಿಸಿದ್ದು, ಸಿಐಡಿ ಡಿವೈಎಸ್‌ಪಿ ನೇತೃತ್ವದ ತಂಡವು ಮಾರ್ಚ್‌ 31ರಂದು ಸಂಜೆ ನಾರಾವಿ ಐಬಿಗೆ ಆಗಮಿಸಿದೆ. ಇಂದು ವೇಣೂರು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದು, ಸಿಐಡಿ ತಂಡವು ಸಂತ್ರಸ್ತೆಯ ಹೇಳಿಕೆ ಪಡೆಯುವುದು, ಸ್ಥಳಗಳ ಪರಿಶೀಲನೆ ಹಾಗೂ ಸಾಕ್ಷ್ಯಾಧಾರಗಳ ಸಂಗ್ರಹಣೆಯ ಮೇಲೆ ತನಿಖೆ ಕೈಗೆತ್ತಿಕೊಳ್ಳಲಿದೆ. ಈ ಪ್ರಕರಣದಲ್ಲಿ ಇನ್ನು ಹೆಚ್ಚಿನ ಸಂತ್ರಸ್ತರು ಇದ್ದಾರೆಯೇ ಎಂಬ ಆಯಾಮದಲ್ಲೂ ತನಿಖೆ ನಡೆಸಲಿದೆ.

Continue Reading

accident

ರಸ್ತೆ ತಿರುವಿನಲ್ಲಿ ದಿಢೀರನೆ ತೆರೆದುಕೊಂಡ ಬಾಗಿಲು..ಸರ್ಕಾರಿ ಬಸ್ಸಿಂದ ಹೊರಕ್ಕೆಸೆಯಲ್ಪಟ್ಟು ಸಹೋದರಿಯರಿಗೆ ಗಂಭೀರ ಗಾಯ.

Published

on

ಬೆಳ್ತಂಗಡಿ : ಸರ್ಕಾರಿ ಬಸ್ಸಿನಲ್ಲಿ ಶಾಲೆಗೆ ತೆರಳುತ್ತಿದ್ದ ಸಹೋದರಿಯರಿಬ್ಬರು
ರಸ್ತೆ ತಿರುವಿನಲ್ಲಿ ಏಕಾಏಕಿ ಬಸ್ಸಿನ ಬಾಗಿಲು ತೆರೆದ ಪರಿಣಾಮ ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡ ಘಟನೆ ಕಳಿಯ ಗ್ರಾಮದ ರೇಷ್ಮೆರೋಡ್ ಎಂ ಆರ್ ಪಿ ಎಲ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

ಬೆಳಿಗ್ಗೆ ಎಂದಿನಂತೆ ಗೇರುಕಟ್ಟೆಯಿಂದ ಬೆಳ್ತಂಗಡಿ ಶಾಲೆಗೆ ತೆರಳಲು ಕೆಎಸ್ ಆರ್ ಟಿ ಸಿ ಬಸ್ ಗೆ ಹತ್ತಿದ್ದ ಸಹೋದರಿಯರು ರೇಷ್ಮೆ ರೋಡ್ ಎಂಬಲ್ಲಿನ ರಸ್ತೆ ತಿರುವಿನಲ್ಲಿ ದಿಢೀರನೆ ಬಸ್ಸಿನ ಬಾಗಿಲು ತೆರೆಯಲ್ಪಟ್ಟು ಹೊರಕ್ಕೆ ಎಸೆಯಲ್ಪಟ್ಟಿದ್ದಾರೆ.

ಸಂಚರಿಸುತ್ತಿದ್ದ ಬಸ್ಸಿನಿಂದ ಕೆಳಗೆ ಎಸೆಯಲ್ಪಟ್ಟ ಸಹೋದರಿಯರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಸ್ಥಳೀಯರು ಬೆಳ್ತಂಗಡಿ ಹಾಗೂ ಉಜಿರೆ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ.

ಸಹೋದರಿಯರ ಪೈಕಿ ಒಬ್ಬಾಕೆ ಎಸ್ ಎಸ್ ಎಲ್.ಸಿ ಪರೀಕ್ಷೆಗೆ ತೆರಳುತ್ತಿದ್ದು ಮತ್ತೊಬ್ಬಳು ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ನ್ಯಾಯತರ್ಪು ಗ್ರಾಮದ ಕಲೈತೊಟ್ಟು ನಾಗರಾಜ ಹಾಗೂ ರೂಪ ದಂಪತಿಗಳ ಪುತ್ರಿಯರು ಗಾಯಾಳುಗಳೆಂದು ತಿಳಿದುಬಂದಿದೆ. ಗಾಯಾಳು ಸಹೋದರಿಯರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Continue Reading

Belthangady

ಯಕ್ಷರಂಗದಲ್ಲಿ ‘ಕೃಷ್ಣ’ನ ಕ್ರೋಧ: ಪ್ರೇಕ್ಷಕರ ಶಿಳ್ಳೆಗೆ ಕೆರಳಿದ ಉಜಿರೆ ಅಶೋಕ ಭಟ್; ವೇದಿಕೆಯಲ್ಲೇ ದರ್ಪದ ಮಾತುಗಳ ಸುರಿಮಳೆ!

Published

on

ಯಕ್ಷಗಾನ ಎನ್ನುವುದು ಕೇವಲ ಮನರಂಜನೆಯಲ್ಲ, ಅದೊಂದು ಶಿಸ್ತಿನ ಕಲೆ. ಆದರೆ ಇತ್ತೀಚೆಗೆ ವೇದಿಕೆಯ ಮೇಲೆ ಕಲಾವಿದರು ಮತ್ತು ಪ್ರೇಕ್ಷಕರ ನಡುವೆ ನಡೆಯುತ್ತಿರುವ ಸಂಘರ್ಷಗಳು ಕಲಾಭಿಮಾನಿಗಳಲ್ಲಿ ಬೇಸರ ಮೂಡಿಸಿವೆ. ಭಾಗವತರ ಆಲಾಪನೆಗೆ ಶಿಳ್ಳೆ ಹೊಡೆದರೆಂದು ಕಲಾವಿದ ಉಜಿರೆ ಅಶೋಕ ಭಟ್ ಅವರು ಕೃಷ್ಣನ ವೇಷದಲ್ಲಿಯೇ ಪ್ರೇಕ್ಷಕರು ಶಿಳ್ಳೆ ಹೊಡೆದಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ವೇದಿಕೆಯಲ್ಲೇ ಪ್ರೇಕ್ಷಕರನ್ನು ತರಾಟೆಗೆ ತೆಗೆದುಕೊಂಡ ಘಟನೆ ಈಗ ದೊಡ್ಡ ಚರ್ಚೆಗೆ ಕಾರಣವಾಗಿದೆ.

ನಡೆದದ್ದೇನು?
ಭಾಗವತರ ಪದ್ಯಕ್ಕೆ ಕೃಷ್ಣನ ವೇಷಧಾರಿ ಉಜಿರೆ ಅಶೋಕ ಭಟ್ ಅವರು ಅರ್ಥ ಹೇಳಲು ಸಿದ್ಧರಾಗುತ್ತಿದ್ದಂತೆ, ಭಾಗವತರ ಆಲಾಪನೆಗೆ ಪ್ರೇಕ್ಷಕರ ಸಾಲಿನಿಂದ ಕೇಳಿಬಂದ ಜೋರಾದ ಶಿಳ್ಳೆ ಮತ್ತು ಶಬ್ದಗಳಿಂದ ವಿಚಲಿತರಾಗಿದ್ದಾರೆ.. ಇದರಿಂದ ತೀವ್ರ ಅಸಮಾಧಾನಗೊಂಡ ಕಲಾವಿದರು, ಕಥೆಯ ಪ್ರಸಂಗವನ್ನು ಬದಿಗಿಟ್ಟು ನೇರವಾಗಿ ಪ್ರೇಕ್ಷಕರತ್ತ ತಿರುಗಿದರು. “ಇದು ಶಿಳ್ಳೆ ಹೊಡೆಯುವ ಜಾಗವಲ್ಲ, ಯಕ್ಷಗಾನದ ಗಂಭೀರತೆ ಅರ್ಥ ಮಾಡಿಕೊಳ್ಳಿ” ಎಂಬ ಖಡಕ್ ಮಾತುಗಳೊಂದಿಗೆ ಶಿಸ್ತಿನ ಪಾಠ ಆರಂಭಿಸಿದ್ದಾರೆ- “ನೀವು ಶಿಳ್ಳೆ ನಿಲ್ಲಿಸದಿದ್ದರೆ ನಾನು ಹೋಗುತ್ತೇನೆ. ಇದು ದೋಂಬರಾಟವೇ? ಇದು ಯಕ್ಷಗಾನವೇ? ಕೋಳಿ ಕಟ್ಟವೇ? ಕಂಬಳವೇ? ಎಂದು ವೇದಿಕೆಯಲ್ಲೇ ಪ್ರಶ್ನೆ ಮಾಡಿದ್ದಾರೆ. ಶಿಳ್ಳೆ ಹಾಕಿದವರು ಯಾರು? ಹುಚ್ಚರನ್ನು ಬೆಳೆಸಬೇಡಿ, ಕಲಾವಿದರನ್ನು ಬೆಳೆಸಿ, ಆಗದೆ ಇದ್ದರೆ ಬನ್ಸ್‌ ತಿಂದು ಹೋಗಿ, ಭಾಗವತರ ಕಂಠ ಹಾಳು ಮಾಡುತ್ತೀರಾ ? ನಾವು ಯಕ್ಷಗಾನ ಮಾಡಬೇಕೋ? ಎಂದು ಆಕ್ರೋಶಿತರಾಗಿ ಹೇಳುತ್ತಿರುವುದು ವಿಡಿಯೋದಲ್ಲಿ ಕಾಣಿಸುತ್ತದೆ.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕ್ಷೇತ್ರದ ವತಿಯಿಂದ ಯಕ್ಷಗಾನ ಮಂಡಳಿಯವರು ಕುಂದಾಪುರದ ಹನ್ನಾಬೈಲಿನಲ್ಲಿ ಮಾ.26 ರಂದು ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ, ಭಾಗವತರು ಪದ ಹಾಡುತ್ತಿರುವ ಸಂದರ್ಭದಲ್ಲಿ ಆಲಾಪನೆ ಮಾಡುತ್ತಿದ್ದಾಗ ಪ್ರೇಕ್ಷಕರು ಶಿಳ್ಳೆ ಹಾಕಿದ್ದಾರೆ. ಪದ್ಯ ಮುಗಿದ ನಂತರ ಕೃಷ್ಣ ವೇಷಧಾರಿ ಅಶೋಕ್ ಭಟ್ ಗರಂ ಆಗಿ ಶಿಳ್ಳೆ ಹೊಡೆದ ಪ್ರೇಕ್ಷಕರನ್ನು ಉದ್ದೇಶಿಸಿ ಹೇಳಿದ ಮಾತುಗಳು ವೈರಲ್‌ ಆಗಿದೆ.

ಕಲಾವಿದನ ಆಕ್ರೋಶಕ್ಕೆ ಕಾರಣವೇನು?
ಉಜಿರೆ ಅಶೋಕ ಭಟ್ ಅವರ ವಾದದ ಪ್ರಕಾರ, ಯಕ್ಷಗಾನದ ಅರ್ಥಗಾರಿಕೆ ಎನ್ನುವುದು ಏಕಾಗ್ರತೆಯಿಂದ ನಡೆಯಬೇಕಾದ ಪ್ರಕ್ರಿಯೆ. ಪ್ರೇಕ್ಷಕರು ಅನಗತ್ಯವಾಗಿ ಶಿಳ್ಳೆ ಹಾಕುವುದು ಅಥವಾ ಗದ್ದಲ ಮಾಡುವುದು ಕಲೆಯ ಗೌರವಕ್ಕೆ ಧಕ್ಕೆ ತರುತ್ತದೆ. “ನಾವು ಕಷ್ಟಪಟ್ಟು ಕಲೆ ಪ್ರದರ್ಶಿಸುವಾಗ ಶಿಸ್ತು ಇರಬೇಕು” ಎನ್ನುವುದು ಅವರ ಆಕ್ರೋಶದ ಹಿಂದಿನ ಆಶಯವಾಗಿತ್ತು.

ಪ್ರೇಕ್ಷಕ ಪ್ರಭುಗಳನ್ನು ಮರೆತರೇ ಕಲಾವಿದರು?
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಪರ-ವಿರೋಧದ ಚರ್ಚೆಗಳು ಜೋರಾಗಿವೆ:
ಯಕ್ಷಗಾನದ ಪಾವಿತ್ರ್ಯತೆ ಉಳಿಯಬೇಕು, ಕಲಾವಿದನಿಗೆ ಗೌರವ ಸಿಗಬೇಕು. ಶಿಳ್ಳೆ ಹಾಕುವುದು ಕಲೆಗೆ ಮಾಡುವ ಅವಮಾನ ಎಂದು ಒಂದು ವರ್ಗ ವಾದಿಸಿದರೆ , ವೇದಿಕೆಯ ಮೇಲೆ ಕೃಷ್ಣನಂತಹ ದೈವಸ್ವರೂಪಿ ಪಾತ್ರಧಾರಿ ಕಲಾವಿದನಿಗೆ ಸಂಯಮ ಇರಬೇಕು. ಪ್ರೇಕ್ಷಕರನ್ನು ಹೀನಾಯವಾಗಿ ಕಾಣುವುದು ಒಬ್ಬ ವೃತ್ತಿಪರ ಕಲಾವಿದನ ಲಕ್ಷಣವಲ್ಲ. ಕಲಾವಿದನ ಮಾತುಗಳಲ್ಲಿ ಸ್ಪಷ್ಟವಾಗಿ ದರ್ಪ, ಅಹಂಕಾರ ಮತ್ತು ತನ್ನ ಸಾಧನೆಯ ಮೇಲಿನ ಅತಿಯಾದ ಹೆಮ್ಮೆಯ ಭಾವನೆಗಳು ಕಾಣುತ್ತಿರುವುದರಿಂದ ಆತನು ತನ್ನನ್ನು ಇತರರಿಗಿಂತ ಮೇಲಿರುವವನಾಗಿ ಚಿತ್ರಿಸಿಕೊಂಡು, ತನ್ನ ಸಾಧನೆಗಳನ್ನು ದೊಡ್ಡದಾಗಿ ಹೇಳಿಕೊಳ್ಳುವ ವೇಳೆ ಇತರರ ಕೊಡುಗೆಗಳನ್ನು ಕಡಿಮೆ ಮಾಡುವ ರೀತಿಯ ಹೇಳಿಕೆಗಳನ್ನು ನೀಡುತ್ತಿರುವುದು ಕಂಡುಬಂದಿದೆ. ಒಬ್ಬ ಕಲಾವಿದ ಇವತ್ತು ಈ ಮಟ್ಟಕ್ಕೆ ಬೆಳೆಯಬೇಕಾದರೆ ಪ್ರೇಕ್ಷಕರ ಪ್ರೋತ್ಸಾಹವೇ ಕಾರಣ. ಅಭಿಮಾನದಿಂದ ಪ್ರೇಕ್ಷಕರು ಹಾಕುವ ಶಿಳ್ಳೆಯನ್ನು ಸಕಾರಾತ್ಮಕವಾಗಿ ಸ್ವೀಕರಿಸಬೇಕು. ಪ್ರೇಕ್ಷಕರಿಲ್ಲದೆ ಕಲೆ ಇಲ್ಲ, ಕಲಾವಿದರಿಲ್ಲದೆ ಸಂಸ್ಕೃತಿ ಇಲ್ಲ. ಇಬ್ಬರ ನಡುವೆ ಸಮನ್ವಯ ಇರಬೇಕಾದ ಅನಿವಾರ್ಯತೆ ಇಂದು ಎದುರಾಗಿದೆ. ಒಬ್ಬ ಕಲಾವಿದ ಇವತ್ತು ಈ ಮಟ್ಟಕ್ಕೆ ಬೆಳೆಯಬೇಕಾದರೆ ಅದಕ್ಕೆ ಪ್ರೇಕ್ಷಕರ ಪ್ರೋತ್ಸಾಹ ಮತ್ತು ಅಭಿಮಾನವೇ ಕಾರಣ. ಶಿಳ್ಳೆ ಎನ್ನುವುದು ಅಭಿಮಾನದ ಸಂಕೇತವೂ ಆಗಿರಬಹುದು. ಸಣ್ಣ ತಪ್ಪುಗಳಿಗಾಗಿ ಪ್ರೇಕ್ಷಕ ಪ್ರಭುಗಳನ್ನು ವೇದಿಕೆಯ ಮೇಲಿಂದಲೇ ಹಿಯಾಳಿಸುವುದು ಕಲಾವಿದನಿಗೆ ಶೋಭೆ ತರುವುದಿಲ್ಲ. “ಕಲಾವಿದ ಬೆಳೆಯಲು ಬೇಕಾದ ಪ್ರೇಕ್ಷಕ ಸ್ನೇಹಿ ಮನೋಭಾವವನ್ನು ಅಶೋಕ ಭಟ್ ಅವರು ಮರೆತರೇ?” ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ವೇದಿಕೆಯ ಮೇಲಿಂದ ಪ್ರೇಕ್ಷಕರನ್ನು ತರಾಟೆಗೆ ತೆಗೆದುಕೊಳ್ಳುವುದು ಕಲಾವಿದನ ಅಹಂಕಾರವನ್ನು ತೋರಿಸುತ್ತದೆ. ಎಂಬುವುದು ಕಲಾಭಿಮಾನಿಗಳ ಕಡೆಯಿಂದ ಕೇಳಿಬರುತ್ತಿರುವ ವಾದಗಳು ಕಲಾವಿದನ ಈ ದರ್ಪದ ನಡೆ ಯಕ್ಷಗಾನದ ಆಂತರಿಕ ಶಿಸ್ತನ್ನು ಎತ್ತಿ ಹಿಡಿಯುವುದೋ ಅಥವಾ ಪ್ರೇಕ್ಷಕರನ್ನು ಕಲೆಯ ಸಂಭ್ರಮದಿಂದ ದೂರ ತಳ್ಳುವುದೋ ಎಂಬ ಬಗ್ಗೆ ಈಗ ಗಂಭೀರ ಚರ್ಚೆ ನಡೆಯುತ್ತಿದೆ.

ವೇದಿಕೆಯಲ್ಲಿ ಅರ್ಥ ಹೇಳಲು ಬಂದ ಪಾತ್ರಧಾರಿ ಭಾಗವತರಲ್ಲಿ ಅನುಮತಿ ಕೇಳಿದ ಬಳಿಕ ತನ್ನ ಬುದ್ಧಿವಾದದ ಮಾತು ಆರಂಭಿಸಬೇಕಾಗಿತ್ತು. ಅಥವಾ ವ್ಯವಸ್ಥಾಪಕರಲ್ಲಿ ತಿಳಿಸಬೇಕಿತ್ತು ಅದ್ಯಾವುದೂ ಇಲ್ಲದೇ ಏಕಾಏಕಿ ಶಿಳ್ಳೆ ಹೊಡೆದ ಪ್ರೇಕ್ಷಕರಿಗೆ ಬುದ್ಧಿ ಮಾತಿನ ಮೂಲಕ ವೇದಿಕೆಯಲ್ಲೇ ತನ್ನ ಅಹಂಕಾರ ಪ್ರವೃತ್ತಿಯನ್ನು ಅಶೋಕ್ ಭಟ್ ಸಾಬೀತು ಪಡಿಸಿರುವುದು ಯಕ್ಷಾಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

Continue Reading

Trending

Copyright © 2025 Deevatige