Bantawala
ವಿಟ್ಲ ಪೊಲೀಸರ ಬಲೆಗೆ ಬಿದ್ದ ಗೋಸಾಗಾಟಗಾರರು. ಚನ್ನರಾಯಪಟ್ಟಣ to ಸಾಲೆತ್ತೂರು ಮಧ್ಯೆ ಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮ ಗೋಸಾಗಾಟ..
ಬಂಟ್ವಾಳ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ 26-02-2026 ರಂದು ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ಖಚಿತ ಮಾಹಿತಿ ಮೇರೆಗೆ ವಿಟ್ಲ ಠಾಣಾ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸಿದಾಗ ಕಾನೂನಿಗೆ ಮಣ್ಣೆರಚಿ ನಡೆಯುತ್ತಿದ್ದ ಅಕ್ರಮ ಗೋಸಾಗಾಟ ದಂಧೆಯ ಅಸಲಿಯತ್ತು ಬಯಲಾಗಿದೆ.

ವಿಟ್ಲ ಠಾಣಾ ಪೊಲೀಸ್ ಉಪನಿರೀಕ್ಷಕ(ಕಾ&ಸು) ರಾಮಕೃಷ್ಣ ಅವರು ತಮ್ಮ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋದಾಗ ರಸ್ತೆ ಬದಿ ನಿಂತಿದ್ದ KA-13-B-8178 ನೋಂದಣಿಯ ಅಶೋಕ್ ಲೈಲ್ಯಾಂಡ್ ದೋಸ್ತ್ ವಾಹನವನ್ನು ಪರಿಶೀಲನೆ ನಡೆಸಿದ್ದಾರೆ.

ಆ ಸಂದರ್ಭ ಎರಡು ದನಗಳನ್ನು ಹಿಂಸಾತ್ಮಕವಾಗಿ ತುಂಬಿಸಿ ಎಲ್ಲಿಂದಲೋ ಸಾಗಾಟ ಮಾಡಿಕೊಂಡು ಬಂದಿರುವುದು ಕಂಡುಬಂದಿರುತ್ತದೆ. ಈ ಬಗ್ಗೆ ವಾಹನದಲ್ಲಿದ್ದ ಮಂಡ್ಯ ನಿವಾಸಿಗಳಾದ ಚಾಲಕ ನವೀನ ಹಾಗೂ ಮತ್ತೊರ್ವ ಚೇತನ್ ಎಂಬವರಲ್ಲಿ ವಿಚಾರಿಸಿದ್ದಾರೆ.

ಪೊಲೀಸರು ವಿಚಾರಿಸುತ್ತಿದ್ದಂತೆ ವಾಹನದ ಚಾಲಕ ತನ್ನಲ್ಲಿದ್ದ ಕೆಲವೊಂದು ದಾಖಲೆಗಳ ತೋರಿಸಿ ಪೊಲೀಸರನ್ನೇ ಯಾಮಾರಿಸಲು ಸ್ಕೆಚ್ ಹಾಕಿದ್ದಾನೆ. ಈತನ ವರ್ತನೆಯಿಂದ ಸಂಶಯಗೊಂಡ ಪೊಲೀಸರು ಮತ್ತಷ್ಟು ಆಳವಾಗಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಂತೆ ಯಾರದೋ ಆಧಾರ್ ಕಾರ್ಡ್, ವಿಳಾಸ ಇನ್ನಿತರ ದಾಖಲೆಗಳ ಬಳಸಿ ಸಾಲೆತ್ತೂರು ನಿವಾಸಿ ಶಾಫಿ ಎಂಬಾತನಿಗೆ ಗೋವುಗಳನ್ನು ತಲುಪಿಸುವುದು ತನಿಖೆಯಲ್ಲಿ ತಿಳಿದು ಬಂದಿದೆ.

ಚನ್ನರಾಯಪಟ್ಟಣದಿಂದ ಶಂಕರ ಎಂಬವರು ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಸಾಲೆತ್ತೂರಿನ ಶಾಫಿ ಎಂಬವರಿಗೆ, ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ತುಂಬಿಸಿ ಕಳುಹಿಸಿದ್ದು, ಸದ್ರಿ ಜಾನುವಾರುಗಳನ್ನು ಸಾಗಿಸಲು ಬೇರೆಯವರ ಹೆಸರಿನಲ್ಲಿ ದಾಖಲಾತಿಯನ್ನು ಪಡೆದು ಸಾಗಿಸುತ್ತಿರುವುದಾಗಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ.

ಈ ಬಗ್ಗೆ ಮುಂದಿನ ಕಾನೂನು ಕ್ರಮಕ್ಕಾಗಿ ವಾಹನವನ್ನು ಹಾಗೂ ಜಾನುವಾರುಗಳನ್ನು ಸ್ವಾಧೀನಪಡಿಸಿಕೊಂಡು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 51/2026, ಕಲಂ: 4, 7, 12 THE KARNATAKA PREVENTION OF SLAUGHTER AND PRESERVATION OF CATTLE ACT-2020, 4, 11 PREVENTION OF CRUELTY TO ANIMALS ACT, 1960 ಮತ್ತು 192(A) INDIAN MOTOR VEHICLES ACT, 1988 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದಾರೆ.

ಮಂಡ್ಯ ಕಡೆಯಿಂದ ನಿರಂತರವಾಗಿ ಬೋಗಸ್ ದಾಖಲೆಗಳನ್ನು ಸೃಷ್ಠಿಸಿ ಕರಾವಳಿ ಭಾಗಕ್ಕೆ ಮಾಂಸಕ್ಕಾಗಿ ಗೋವುಗಳನ್ನು ಅಕ್ರಮವಾಗಿ ತರಲಾಗುತ್ತಿದೆ ಎಂದು ಹಲವಾರು ಸಮಯಗಳಿಂದ ಕೇಳಿಬರುತ್ತಿದೆ. ದನ ಮಾರಾಟಗಾರರು ಮತ್ತು ಪಡೆದುಕೊಳ್ಳುವವರ ವ್ಯವಸ್ಥಿತ ಜಾಲವೊಂದು ನಿರಂತರವಾಗಿ ದನ ಸಾಗಾಟ ಮಾಡುತ್ತಿದ್ದು, ಕರಾವಳಿ ಭಾಗದಿಂದಲೂ( ಸುಬ್ರಹ್ಮಣ್ಯ ಸುಳ್ಯ ಕಡೆಯಿಂದ ) ಸಾಕಾಣಿಕೆ ಹೆಸರಿನಲ್ಲಿ ಮೈಸೂರು ಕಡೆಗೆ ದನಗಳ ಸಾಗಾಟವಾಗುತ್ತಿದ್ದು, ಇದರ ಮದ್ಯೆ ಪೊಲೀಸರು ಮತ್ತು ಪಶುವೈದ್ಯರನ್ನೇ ಏಮಾರಿಸಿ ದಲ್ಲಾಳಿಗಳ ಚಾಲಾಕಿತನ ನಡೆಯುತ್ತಲೇ ಇದೆ. ಫೆ. 26ರಂದು ಕರೈಯಲ್ಲಿ ಗೋಸಾಗಾಟವನ್ನು ತಡೆದಾಗ ನಕಲಿ ದಾಖಲೆಗಳನ್ನು ತೋರಿಸುವ ಪ್ರಯತ್ನಗಳು ನಡೆದವಾದರೂ ವಿಟ್ಲ ಪೊಲೀಸರಲ್ಲಿ ದಲ್ಲಾಳಿಗಳ ಚಾಲಾಕಿತನ ನಡೆಯಲಿಲ್ಲ. ಅಕ್ರಮ ಗೋಸಾಗಾಟಗಾರರ ಹೆಡೆಮುರಿ ಕಟ್ಟುವಲ್ಲಿ ವಿಟ್ಲ ಪೊಲೀಸರು ಯಶಸ್ವಿಯಾಗಿದ್ದಾರೆ.
Bantawala
75 ವರ್ಷಗಳ ರಸ್ತೆ ಸಮಸ್ಯೆ ಬಗೆಹರಿಸಿದ ಅಧಿಕಾರಿಗಳು – ಉಕ್ಕುಡ ಕಲ್ಲಜರಿಯಲ್ಲಿ ಅಕ್ರಮ ಗೇಟ್ ತೆರವು.
ವಿಟ್ಲ : ಕಸಬಾ ಗ್ರಾಮದ ಉಕ್ಕುಡ ಕಲ್ಲಜರಿ ಪ್ರದೇಶದಲ್ಲಿ ಕಳೆದ 75 ವರ್ಷಗಳಿಂದ ಸಂಪರ್ಕ ರಸ್ತೆಯಿಲ್ಲದೆ ತೀವ್ರ ಸಂಕಷ್ಟ ಅನುಭವಿಸುತ್ತಿದ್ದ ಮೂರು ಬಡ ಕುಟುಂಬಗಳಿಗೆ ಕೊನೆಗೂ ಮುಕ್ತಿ ಸಿಕ್ಕಿದೆ.
ಸರ್ಕಾರಿ ಜಮೀನಿನಲ್ಲಿ ಹಾದುಹೋಗುತ್ತಿದ್ದ ರಸ್ತೆಗೆ ಖಾಸಗಿ ವ್ಯಕ್ತಿಯೊಬ್ಬರು ಅಕ್ರಮವಾಗಿ ಗೇಟ್ ಅಳವಡಿಸಿ ತಡೆಯೊಡ್ಡಿದ್ದ ಗೇಟನ್ನು ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದೆ. ದೂರಿನ ಹಿನ್ನೆಲೆ:ಸ್ಥಳೀಯ ನಿವಾಸಿ ಶ್ರೀಮತಿ ಜಯಂತಿ ಎಂಬುವರು ಈ ಅಕ್ರಮ ತಡೆಯ ತೆರವಿಗಾಗಿ ವಿಟ್ಲ ಪಟ್ಟಣ ಪಂಚಾಯತಿಗೆ ಅಗತ್ಯ ದಾಖಲೆಗಳ ಸಹಿತ ದೂರು ನೀಡಿದ್ದರು. ದೂರಿನ ಗಂಭೀರತೆಯನ್ನು ಪರಿಗಣಿಸಿದ ಪಟ್ಟಣ ಪಂಚಾಯತ್ ಆಡಳಿತವು ಬಂಟ್ವಾಳ ತಹಶೀಲ್ದಾರರಿಗೆ ಮನವಿ ಸಲ್ಲಿಸಿ ಸೂಕ್ತ ಕ್ರಮಕ್ಕೆ ವಿನಂತಿಸಿತ್ತು.
ತಹಶೀಲ್ದಾರ್ ಆದೇಶ ಮತ್ತು ಪರಿಶೀಲನೆ:ಮನವಿಗೆ ತಕ್ಷಣ ಸ್ಪಂದಿಸಿದ ಬಂಟ್ವಾಳ ತಹಶೀಲ್ದಾರರು, ಸ್ಥಳ ತನಿಖೆ ನಡೆಸಿ ಅಕ್ರಮ ಗೇಟ್ ತೆರವುಗೊಳಿಸುವಂತೆ ವಿಟ್ಲ ಕಂದಾಯ ನಿರೀಕ್ಷಕರಿಗೆ ಹಾಗೂ ಭೂ ಮಾಪಕರಿಗೆ ಅಧಿಕೃತ ಆದೇಶ ನೀಡಿದ್ದರು. ಅಧಿಕಾರಿಗಳು ನಡೆಸಿದ ಸಮೀಕ್ಷೆ ಹಾಗೂ ಕಂದಾಯ ನಿರೀಕ್ಷಕರ ವರದಿಯ ಪ್ರಕಾರ, ಸರ್ವೇ ನಂ. 727/1ರಲ್ಲಿ ಬರುವ ರಸ್ತೆಯು ಸರ್ಕಾರಿ ಜಮೀನಿನಲ್ಲಿದೆ ಎಂಬುದು ದೃಢಪಟ್ಟಿದೆ. ರಸ್ತೆ ಅಭಿವೃದ್ಧಿಗೆ ಮಾತ್ರ ಅವಕಾಶ:ಈ ಜಮೀನನ್ನು ರಸ್ತೆಯನ್ನು ಅಭಿವೃದ್ಧಿಪಡಿಸಲು ಮತ್ತು ಸಾರ್ವಜನಿಕರ ರಸ್ತೆ ಸಂಪರ್ಕಕ್ಕಾಗಿ ಮಾತ್ರ ಬಳಸಿಕೊಳ್ಳಲು ತಹಶೀಲ್ದಾರ್ ಕಚೇರಿಯಿಂದ ಸ್ಪಷ್ಟ ಆದೇಶ ನೀಡಲಾಗಿದೆ. ಬೇರೆ ಯಾವುದೇ ಉದ್ದೇಶಕ್ಕಾಗಿ ಈ ಸರ್ಕಾರಿ ಜಮೀನನ್ನು ಬಳಸಲು ಅವಕಾಶವಿರುವುದಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಅಕ್ರಮ ಗೇಟ್ ತೆರವು – ಕುಟುಂಬಗಳ ಕೃತಜ್ಞತೆ:ತಹಶೀಲ್ದಾರ್ ಆದೇಶದಂತೆ ಇಂದು ಕಂದಾಯ ಅಧಿಕಾರಿಗಳು ಹಾಗೂ ವಿಟ್ಲ ಪಟ್ಟಣ ಪಂಚಾಯತ್ ಆಡಳಿತದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಕ್ರಮವಾಗಿ ಹಾಕಲಾಗಿದ್ದ ಗೇಟನ್ನು ತೆರವುಗೊಳಿಸಿ, ಅರ್ಜಿದಾರರಿಗೆ ರಸ್ತೆ ಸಂಪರ್ಕ ಕಲ್ಪಿಸಿಕೊಟ್ಟಿದ್ದಾರೆ. ದಶಕಗಳಿಂದ ಅನುಭವಿಸುತ್ತಿದ್ದ ನರಕಯಾತನೆಗೆ ಮುಕ್ತಿ ದೊರೆತಿದ್ದರಿಂದ ಹರ್ಷ ವ್ಯಕ್ತಪಡಿಸಿರುವ ಬಡ ಕುಟುಂಬಗಳು, ಸಕಾಲದಲ್ಲಿ ಸ್ಪಂದಿಸಿ ನ್ಯಾಯ ಒದಗಿಸಿದ ಅಧಿಕಾರಿಗಳಿಗೆ ಹಾಗೂ ಪಟ್ಟಣ ಪಂಚಾಯತ್ ಆಡಳಿತಕ್ಕೆ ಹೃದಯಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿವೆ.
Bantawala
ಕೆಲಿಂಜ ಶಾಲೆಯ ಮುಖ್ಯಶಿಕ್ಷಕಿ ವನಿತಾ ಶೆಟ್ಟಿಗಾರ್ ಹೃದಯಾಘಾತಕ್ಕೆ ಬಲಿ: ವಾರದೊಳಗೆ ಇಬ್ಬರು ಮುಖ್ಯಶಿಕ್ಷಕಿಯರ ಸಾವು!
ಬಂಟ್ವಾಳ: ಶಿಕ್ಷಣ ಕ್ಷೇತ್ರಕ್ಕೆ ಆಘಾತಕಾರಿ ಸುದ್ದಿ. ಕೆಲಿಂಜ ಶಾಲೆಯ ಮುಖ್ಯಶಿಕ್ಷಕಿ ವನಿತಾ ಶೆಟ್ಟಿಗಾರ್ (58) ಅವರು ಹೃದಯಾಘಾತದಿಂದ ನ.2ರಂದು ರಾತ್ರಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಿಶೇಷವೆಂದರೆ, ವಾರದ ಹಿಂದಷ್ಟೇ ಸಮೀಪದ ಒಕ್ಕೆತ್ತೂರು ಸರಕಾರಿ ಶಾಲೆಯ ಮುಖ್ಯಶಿಕ್ಷಕಿ ಯಮುನಾ ಅವರು ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದು, ಇದೀಗ ಮತ್ತೋರ್ವ ಮುಖ್ಯಶಿಕ್ಷಕಿಯ ಸಾವು ಶಿಕ್ಷಣ ವಲಯದಲ್ಲಿ ತೀವ್ರ ಶೋಕ ಮೂಡಿಸಿದೆ.
ಗುರುಪುರ ಕೈಕಂಬದ ಕಂದಾವರ ಬೈಲು ನಿವಾಸಿಯಾಗಿದ್ದ ವನಿತಾ ಶೆಟ್ಟಿಗಾರ್ ಅವರು ನ.2ರಂದು ಎಂದಿನಂತೆ ಶಾಲೆಗೆ ತೆರಳಿ ವಿದ್ಯಾರ್ಥಿಗಳಿಗೆ ಪಾಠ ಮಾಡಿ ಮನೆಗೆ ಮರಳಿದ್ದರು. ರಾತ್ರಿ ಮನೆಯಲ್ಲಿ ತೀವ್ರ ಎದೆನೋವು ಕಾಣಿಸಿಕೊಂಡು, ಬಳಿಕ ವಾಂತಿಯಾಗಿದ್ದು, ತಕ್ಷಣ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
34 ವರ್ಷಗಳ ಸುದೀರ್ಘ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸಿದ್ದ ವನಿತಾ ಶೆಟ್ಟಿಗಾರ್ ಅವರು ಅನೇಕ ವಿದ್ಯಾರ್ಥಿಗಳ ಬದುಕಿಗೆ ದಾರಿದೀಪವಾಗಿದ್ದರು. ಅವರ ನಿಧನದಿಂದ ಶಿಕ್ಷಕ ವಲಯದಲ್ಲಿ ಶೋಕ ಆವರಿಸಿದೆ. ಸಹೋದ್ಯೋಗಿ ಶಿಕ್ಷಕರು, ಹಳೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಣಾಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.
ಇದಕ್ಕೂ ಮೊದಲು ಅಕ್ಟೋಬರ್ 27ರಂದು ಕೆಲಿಂಜ ಶಾಲೆಯ ಸಮೀಪದ ಒಕ್ಕೆತ್ತೂರು ಸರಕಾರಿ ಶಾಲೆಯ ಮುಖ್ಯಶಿಕ್ಷಕಿ ಯಮುನಾ ಅವರು ಅನಾರೋಗ್ಯದಿಂದ ನಿಧನರಾಗಿದ್ದರು. ಈ ಘಟನೆ ನಡೆದು ವಾರ ಕಳೆಯುವ ಮುನ್ನವೇ ಮತ್ತೊಂದು ಶಾಲೆಯ ಮುಖ್ಯಶಿಕ್ಷಕಿ ವನಿತಾ ಶೆಟ್ಟಿಗಾರ್ ಅವರು ಹೃದಯಾಘಾತಕ್ಕೆ ಬಲಿಯಾಗಿರುವುದು ಸ್ಥಳೀಯ ಶಿಕ್ಷಣ ಸಮುದಾಯಕ್ಕೆ ತೀವ್ರ ಆಘಾತವನ್ನುಂಟು ಮಾಡಿದೆ.
ವಾರದ ಅಂತರದಲ್ಲಿ ಇಬ್ಬರು ಶಾಲಾ ಮುಖ್ಯಸ್ಥೆಯರನ್ನು ಕಳೆದುಕೊಂಡಿರುವುದು ಶಿಕ್ಷಕ ಸಮುದಾಯದಲ್ಲಿ ತುಂಬಲಾರದ ನಷ್ಟವಾಗಿ ಪರಿಣಮಿಸಿದೆ.
Bantawala
ವಿಟ್ಲದ ಖ್ಯಾತ ವೈದ್ಯ ಡಾ. ವಿ.ಕೆ. ಹೆಗ್ಡೆ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ವಿಟ್ಲದ ಖ್ಯಾತ ವೈದ್ಯ, ಪುಷ್ಪಾಕ್ ಹೆಲ್ತ್ ಸೆಂಟರ್ ಸಂಸ್ಥಾಪಕ *ಡಾ. ವಿ.ಕೆ. ಹೆಗ್ಡೆ* ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.1987 ರಿಂದ ವಿಟ್ಲದಲ್ಲಿ ನಿರಂತರವಾಗಿ ವೈದ್ಯಕೀಯ ಸೇವೆ ಸಲ್ಲಿಸುತ್ತಾ ಬಂದಿರುವ ಡಾ. ವಿ.ಕೆ. ಹೆಗ್ಡೆ ಅವರ ವೃತ್ತಿಪರ ಪಯಣವು ಗ್ರಾಮೀಣ ಪ್ರದೇಶದಲ್ಲಿ ದೀರ್ಘಕಾಲದ ಪ್ರಾಥಮಿಕ ಆರೋಗ್ಯ ಸೇವೆಯ ನಿರಂತರ ಅಧ್ಯಾಯವಾಗಿದೆ.ವೈದ್ಯಕೀಯ ವೃತ್ತಿಯನ್ನು ಕೇವಲ ಉದ್ಯೋಗವಾಗಿ ಪರಿಗಣಿಸದೆ, ಜನರ ಆರೋಗ್ಯದ ಅಗತ್ಯಗಳಿಗೆ ಸ್ಪಂದಿಸುವ ಮಾನವೀಯ ಸೇವೆಯಾಗಿ ಅವರು ಅಳವಡಿಸಿಕೊಂಡಿದ್ದಾರೆ. ಗ್ರಾಮೀಣ ಹಾಗೂ ಅರೆನಗರ ಪ್ರದೇಶದ ಜನರಿಗೆ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆ, ವೈಯಕ್ತಿಕ ವೈದ್ಯಕೀಯ ಕಾಳಜಿ ಮತ್ತು ಮಾನವೀಯ ಸ್ಪಂದನೆಯನ್ನು ನೀಡುತ್ತಾ ಬಂದಿದ್ದಾರೆ.ವೈದ್ಯಕೀಯ ವೃತ್ತಿಯ ಜೊತೆಗೆ ರೋಟರಿ ಹಾಗೂ ವಿವಿಧ ಸಮಾಜಮುಖಿ ಚಟುವಟಿಕೆಗಳ ಮೂಲಕ ಆರೋಗ್ಯ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರಗಳಲ್ಲಿಯೂ ದೀರ್ಘಕಾಲದ ಕೊಡುಗೆ ನೀಡಿದ್ದಾರೆ.ವಿಶೇಷವಾಗಿ ಕೋವಿಡ್-19 ಮಹಾಮಾರಿಯ ಸಂಕಷ್ಟದ ಅವಧಿಯಲ್ಲಿ ವೈದ್ಯಕೀಯ ಸೇವೆಯ ನಿರಂತರತೆಯನ್ನು ಕಾಪಾಡಿ, ಅಗತ್ಯವಿರುವ ರೋಗಿಗಳಿಗೆ ಸಲಹೆ, ಚಿಕಿತ್ಸೆ, ಮಾರ್ಗದರ್ಶನ ಮತ್ತು ಸೂಕ್ತ ರೆಫರಲ್ ನೆರವು ನೀಡಿದ ಅವರ ಸೇವಾ ಬದ್ಧತೆಯು ಈ ನಾಮನಿರ್ದೇಶನದ ಪ್ರಮುಖ ಅಂಶವಾಗಿದೆ.
-
accident3 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala4 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime9 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime7 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala7 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala10 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident4 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident6 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
