Connect with us

Bantawala

ಕನ್ಯಾನ ಸರ್ಕಾರಿ ಕಾಲೇಜಿನಲ್ಲಿ ಸ್ವಚ್ಛತಾ ಅಭಿಯಾನ: ಪರಿಸರ ಸಂರಕ್ಷಣೆಗೆ ಎನ್.ಎಸ್.ಎಸ್. ಸ್ವಯಂಸೇವಕರ ಶ್ರಮದಾನ

Published

on

ಕನ್ಯಾನ : ವಿದ್ಯಾರ್ಥಿಗಳಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವ ಹಾಗೂ ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನು ಬೆಳೆಸುವ ನಿಟ್ಟಿನಲ್ಲಿ ಕನ್ಯಾನ ಸರ್ಕಾರಿ ಕಾಲೇಜಿನ ಎನ್.ಎಸ್.ಎಸ್. (NSS) ಘಟಕದ ವತಿಯಿಂದ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಸ್ವಚ್ಛತಾ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.


ಕಾಲೇಜಿನ ಉಪನ್ಯಾಸಕರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್. ಸ್ವಯಂಸೇವಕರು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡರು. ಕಾಲೇಜಿನ ಪ್ರವೇಶ ದ್ವಾರದಿಂದ ಹಿಡಿದು, ತರಗತಿ ಕೊಠಡಿಗಳ ಸುತ್ತಮುತ್ತ ಹಾಗೂ ಮೈದಾನದ ಆವರಣದವರೆಗೂ ಸಂಪೂರ್ಣ ಸ್ವಚ್ಛತೆಯನ್ನು ಕೈಗೊಳ್ಳಲಾಯಿತು. ಸಂಗ್ರಹವಾದ ಕಸವನ್ನು ಕೇವಲ ಗುಡಿಸುವುದಲ್ಲದೆ, ಹಸಿಕಸ ಮತ್ತು ಒಣಕಸವನ್ನು ಪ್ರತ್ಯೇಕವಾಗಿ ವಿಂಗಡಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ವ್ಯವಸ್ಥೆಯನ್ನು ವಿದ್ಯಾರ್ಥಿಗಳು ಮಾಡಿದರು. ಕಾಲೇಜು ಆವರಣದಲ್ಲಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಂಪೂರ್ಣವಾಗಿ ತೆರವುಗೊಳಿಸಿ, ಗಿಡಮರಗಳ ಸುತ್ತಮುತ್ತ ಬೆಳೆದಿದ್ದ ಕಳೆಗಳನ್ನು ತೆಗೆದು ಆವರಣಕ್ಕೆ ಹೊಸ ಕಳೆ ನೀಡಲಾಯಿತು.

ಸಾಮಾಜಿಕ ಜವಾಬ್ದಾರಿಗೆ ಮಾದರಿ:
ವಿದ್ಯಾರ್ಥಿಗಳ ಈ ಸೇವಾ ಮನೋಭಾವ ಮತ್ತು ಶಿಸ್ತಿನ ಕೆಲಸಕ್ಕೆ ಕಾಲೇಜಿನ ಆಡಳಿತ ಮಂಡಳಿ ಹಾಗೂ ಸಾರ್ವಜನಿಕ ವಲಯದಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಕೇವಲ ಪಠ್ಯದ ಓದಿಗೆ ಸೀಮಿತವಾಗದೆ, ಇಂತಹ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದು ವಿದ್ಯಾರ್ಥಿಗಳಲ್ಲಿ ಪರಿಸರ ಪ್ರೇಮ ಮತ್ತು ಸಾಮಾಜಿಕ ಕಳಕಳಿಯನ್ನು ಹೆಚ್ಚಿಸುತ್ತದೆ ಎಂದು ಉಪನ್ಯಾಸಕರು ಅಭಿಪ್ರಾಯಪಟ್ಟಿದ್ದಾರೆ.

Continue Reading
Advertisement

Bantawala

ಮಾಣಿಲ ಶಿರಿಯಾ ನದಿಗೆ ಸೇತುವೆ ನಿರ್ಮಾಣ: ಸಚಿವ ಸತೀಶ್ ಜಾರಕಿಹೊಳಿ ಅವರಿಂದ ಸ್ಥಳ ಪರಿಶೀಲನೆ

Published

on

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಣಿಲ ಗ್ರಾಮದ ಶಿರಿಯಾ ನದಿಗೆ ಕರ್ನಾಟಕ ಮತ್ತು ಕೇರಳ ರಾಜ್ಯಗಳನ್ನು ಸಂಪರ್ಕಿಸುವ ಸೇತುವೆ ನಿರ್ಮಿಸಬೇಕೆಂಬ ದಶಕಗಳ ಕಾಲದ ಬೇಡಿಕೆಗೆ ಕೊನೆಗೂ ಜೀವಕಳೆ ಬಂದಿದೆ. ಈ ಸಂಬಂಧ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಶನಿವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದಶಕಗಳ ಬೇಡಿಕೆಗೆ ಸ್ಪಂದನೆ
ಮಾಣಿಲ ಭಾಗದ ಜನರು ಕೇರಳದ ಪ್ರದೇಶಗಳಿಗೆ ತೆರಳಲು ಮತ್ತು ಗಡಿ ಭಾಗದ ಸಂಪರ್ಕ ಸುಗಮಗೊಳಿಸಲು ಈ ಸೇತುವೆಯ ನಿರ್ಮಾಣ ಅತ್ಯಂತ ಅವಶ್ಯಕವಾಗಿದೆ.

ಪ್ರಸ್ತುತ ಮಳೆಗಾಲದಲ್ಲಿ ಹಾಗೂ ತುರ್ತು ವೈದ್ಯಕೀಯ ಸಂದರ್ಭಗಳಲ್ಲಿ ಜನರು ನದಿ ದಾಟಲು ಹರಸಾಹಸ ಪಡುತ್ತಿದ್ದಾರೆ. ಈ ಸಮಸ್ಯೆಯನ್ನು ಸಚಿವರ ಗಮನಕ್ಕೆ ತಂದ ಸ್ಥಳೀಯರು, ಕೂಡಲೇ ಸುಸಜ್ಜಿತ ಸೇತುವೆ ನಿರ್ಮಿಸಿಕೊಡುವಂತೆ ಮನವಿ ಸಲ್ಲಿಸಿದರು.

ತಾಂತ್ರಿಕ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ
ಸ್ಥಳ ಪರಿಶೀಲನೆಯ ನಂತರ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಅವರು:”ಈ ಭಾಗದ ಜನರ ದಶಕಗಳ ಬೇಡಿಕೆಯ ಬಗ್ಗೆ ಗಂಭೀರವಾಗಿ ಗಮನ ಹರಿಸಲಾಗುವುದು. ಸೇತುವೆಯ ನಿರ್ಮಾಣಕ್ಕೆ ಸಂಬಂಧಿಸಿದಂತೆ ತಾಂತ್ರಿಕ ವರದಿ ಹಾಗೂ ಅಂದಾಜು ಪಟ್ಟಿಯನ್ನು (Estimation) ಸಿದ್ಧಪಡಿಸಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವರದಿ ಬಂದ ಕೂಡಲೇ ಮುಂದಿನ ಕ್ರಮ ಕೈಗೊಳ್ಳಲಾಗುವುದು,” ಎಂದು ಭರವಸೆ ನೀಡಿದರು.

ಶಾಸಕ ಅಶೋಕ್ ಕುಮಾರ್ ರೈ ಅವರಿಂದ ಮನವರಿಕೆ
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಸಚಿವರಿಗೆ ಈ ಯೋಜನೆಯ ಅನಿವಾರ್ಯತೆಯನ್ನು ಮನವರಿಕೆ ಮಾಡಿಕೊಟ್ಟರು. ಗಡಿ ಭಾಗದ ಅಭಿವೃದ್ಧಿ ಹಾಗೂ ಜನರ ಸಂಕಷ್ಟ ನಿವಾರಣೆಗೆ ಈ ಸೇತುವೆ ಎಷ್ಟು ಮುಖ್ಯ ಎಂಬುದನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್, ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಮಾಣಿಲ ಗ್ರಾಮ ಪಂಚಾಯತ್‌ ಅಧ್ಯಕ್ಷ ಹಾಗೂ ಹಿರಿಯ ಮುಖಂಡ ಶ್ರೀಧರ್ ಬಾಳೆಕಲ್ಲು , ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು ಹಾಗೂ ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು

Continue Reading

accident

ಮುಳಿಯದಲ್ಲಿ ಕೆಎಸ್ಆರ್‌ಟಿಸಿ ಬಸ್ ಮತ್ತು ಟಿಪ್ಪರ್ ಮುಖಾಮುಖಿ ಡಿಕ್ಕಿ: ಪರಸ್ಪರ ದೂರು ದಾಖಲು

Published

on

ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ಮಾರ್ಚ್ 24ರಂದು ಬೆಳಿಗ್ಗೆ ಕೆಎಸ್ಆರ್‌ಟಿಸಿ ಬಸ್ ಮತ್ತು ಟಿಪ್ಪರ್ ಲಾರಿ ನಡುವೆ ಸಂಭವಿಸಿದ ಅಪಘಾತವು ಪರಸ್ಪರ ಹಲ್ಲೆ ಮತ್ತು ದೂರು-ಪ್ರತಿದೂರುಗಳಿಗೆ ಕಾರಣವಾಗಿದೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್.ಐ.ಆರ್ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


ಪ್ರಕರಣ 1: ಬಸ್ ಕಂಡಕ್ಟರ್ ಪ್ರಶಾಂತ್ ನೀಡಿದ ದೂರು (ಕ್ರೈಂ ನಂ: 0072/2026)
ಬಸ್ ನಿರ್ವಾಹಕ ಪ್ರಶಾಂತ್ ಅವರು ನೀಡಿದ ದೂರಿನಲ್ಲಿ (ಕ್ರೈಂ ನಂ: 0072/2026), ಟಿಪ್ಪರ್ ಚಾಲಕ ಬಿಲಾಲ್ ಅಜಾಗರೂಕತೆಯಿಂದ ವಾಹನ ಚಲಾಯಿಸಿ ಬಸ್ಸಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ತಿಳಿಸಿದ್ದಾರೆ. ಅಪಘಾತದ ಫೋಟೋ ತೆಗೆಯಲು ಹೋದಾಗ ಚಾಲಕನು ಅವಾಚ್ಯವಾಗಿ ಬೈದು, ಪ್ರಶಾಂತ್ ಅವರ ಎದೆ ಮತ್ತು ಕುತ್ತಿಗೆಗೆ ಕೈಯಿಂದ ಹೊಡೆದು ಹಲ್ಲೆ ನಡೆಸಿದ್ದಾನೆ. ಅಲ್ಲದೆ, ಶರ್ಟ್ ಜೇಬಿನಲ್ಲಿದ್ದ 3,000 ರೂ. ಸಾರಿಗೆ ಆದಾಯದ ಹಣವನ್ನು ದೋಚಿದ್ದು, ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ ಎಂದು ದೂರಿರುತ್ತಾರೆ. ಈ ಸಂಬಂಧ ಆರೋಪಿ ಬಿಲಾಲ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 281 (ಅಜಾಗರೂಕ ಚಾಲನೆ), 352 (ಅಪಮಾನ), 115(2) (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು) ಮತ್ತು 132 (ಸರ್ಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.


ಪ್ರಕರಣ 2: ಲಾರಿ ಚಾಲಕ ಸೈಯ್ಯದ್ ಬಿಲಾಲ್ ನೀಡಿದ ದೂರು (ಕ್ರೈಂ ನಂ: 0073/2026)
ಮತ್ತೊಂದೆಡೆ, ಟಿಪ್ಪರ್ ಚಾಲಕ ಸೈಯ್ಯದ್ ಬಿಲಾಲ್ ಅವರು ನೀಡಿದ ಪ್ರತಿದೂರಿನಲ್ಲಿ (ಕ್ರೈಂ ನಂ: 0073/2026), ಬಸ್ ಚಾಲಕ ಗಣೇಶ್ ಅವರ ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾರೆ. ಅಪಘಾತದ ನಂತರ ಬಸ್ ನಿರ್ವಾಹಕ ಪ್ರಶಾಂತ್ ಅವರು ಮರದ ಕೋಲಿನಿಂದ ತಮ್ಮ ಬೆನ್ನಿಗೆ ಹೊಡೆದಿದ್ದಾರೆ ಮತ್ತು ಬಸ್ ಚಾಲಕ ಕೂಡ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೆ ನಿರ್ವಾಹಕರು ಶರ್ಟ್ ಹಿಡಿದು ಎಳೆದಾಡಿ “ನಿನ್ನನ್ನು ಕೊಲ್ಲದೆ ಬಿಡುವುದಿಲ್ಲ” ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಈ ದೂರಿನನ್ವಯ ಬಸ್ ಚಾಲಕ ಮತ್ತು ನಿರ್ವಾಹಕರ ವಿರುದ್ಧ BNS ಸೆಕ್ಷನ್ 281, 352, 118(1) (ಅಪಾಯಕಾರಿ ಆಯುಧದಿಂದ ಗಾಯಗೊಳಿಸುವುದು), 115(2), 351(2) (ಕ್ರಿಮಿನಲ್ ಬೆದರಿಕೆ) ಮತ್ತು 3(5) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ

ಪ್ರಸ್ತುತ ಎರಡೂ ಪ್ರಕರಣಗಳ ಕುರಿತು ವಿಟ್ಲ ಠಾಣೆಯ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Continue Reading

Bantawala

ಬೊಬ್ಬೆಕೇರಿ ರಸ್ತೆ ಕಾಂಕ್ರೀಟೀಕರಣಕ್ಕೆ 60 ಲಕ್ಷ ಮಂಜೂರು: ಶಾಸಕ ಅಶೋಕ್ ರೈ ಕೊಟ್ಟ ಮಾತು ಈಡೇರಿಕೆ

Published

on

ಪುತ್ತೂರು: ಬಂಟ್ವಾಳ ತಾಲೂಕು ವ್ಯಾಪ್ತಿಯ ಕಾಂಞoಗಾಡು-ಕಡೂರು ರಾಜ್ಯ ಹೆದ್ದಾರಿಯ ಬೊಬ್ಬೆಕೇರಿ ಎಂಬಲ್ಲಿನ ರಸ್ತೆ ಸಮಸ್ಯೆಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಹಲವು ವರ್ಷಗಳ ಸಾರ್ವಜನಿಕರ ಬೇಡಿಕೆಗೆ ಸ್ಪಂದಿಸಿರುವ ಪುತ್ತೂರು ಶಾಸಕ ಅಶೋಕ್ ರೈ, ರಸ್ತೆ ಕಾಂಕ್ರೀಟೀಕರಣ ಮತ್ತು ಅಭಿವೃದ್ಧಿಗಾಗಿ 60 ಲಕ್ಷ ರೂಪಾಯಿ ಅನುದಾನ ಮಂಜೂರುಗೊಳಿಸಿದ್ದಾರೆ.

ಸಮಸ್ಯೆಯ ಹಿನ್ನೆಲೆ:
ಅಂತರರಾಜ್ಯ ಸಂಪರ್ಕಿಸುವ ಈ ಪ್ರಮುಖ ಹೆದ್ದಾರಿಯ ಬೊಬ್ಬೆಕೇರಿ ಭಾಗದಲ್ಲಿ ರಸ್ತೆ ಅತ್ಯಂತ ಕಿರಿದಾಗಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳು ನಿತ್ಯ ಸಂಕಷ್ಟ ಅನುಭವಿಸುತ್ತಿದ್ದರು. ರಸ್ತೆ ಕಿರಿದಾಗಿದ್ದರಿಂದ ಮಳೆನೀರು ಹರಿದು ಹೋಗಲು ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ನೀರು ನಿಲ್ಲುತ್ತಿತ್ತು. ರಸ್ತೆಯ ಇಕ್ಕೆಲಗಳಲ್ಲಿ ಖಾಸಗಿ ಜಮೀನುಗಳಿದ್ದ ಕಾರಣ ರಸ್ತೆ ಅಗಲೀಕರಣ ಸಾಧ್ಯವಾಗಿರಲಿಲ್ಲ, ಇದರಿಂದಾಗಿ ಇಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದವು. ಶಾಲಾ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ನಡೆದಾಡಲು ರಸ್ತೆ ಬದಿಯಲ್ಲಿ ಕನಿಷ್ಠ ಜಾಗವೂ ಇಲ್ಲದಂತಾಗಿತ್ತು.

ಶಾಸಕರ ಇಚ್ಛಾಶಕ್ತಿ:
ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಸ್ಥಳಕ್ಕೆ ಭೇಟಿ ನೀಡಿದ್ದ ಶಾಸಕ ಅಶೋಕ್ ರೈ, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ಗಳೊAದಿಗೆ ಪರಿಶೀಲನೆ ನಡೆಸಿದ್ದರು. ಅಲ್ಲದೆ, ಖಾಸಗಿ ಜಮೀನು ಮಾಲೀಕರೊಂದಿಗೆ ಮಾತುಕತೆ ನಡೆಸಿ, ಸಾರ್ವಜನಿಕ ಹಿತದೃಷ್ಟಿಯಿಂದ ರಸ್ತೆ ಅಭಿವೃದ್ಧಿಗೆ ಸಹಕರಿಸುವಂತೆ ಮನವಿ ಮಾಡಿದ್ದರು. ಭರವಸೆ ನೀಡಿದ ಕೆಲವೇ ದಿನಗಳಲ್ಲಿ ಅನುದಾನ ಬಿಡುಗಡೆ ಮಾಡುವ ಮೂಲಕ ಶಾಸಕರು ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ.

“ಬೊಬ್ಬೆಕೇರಿಯಲ್ಲಿ ರಸ್ತೆ ಕಿರಿದಾಗಿದ್ದರಿಂದ ಶಾಲಾ ಮಕ್ಕಳಿಗೆ ಹಾಗೂ ವಾಹನ ಸವಾರರಿಗೆ ಜೀವಭಯವಿತ್ತು. ಈ ಸಮಸ್ಯೆಯನ್ನು ಮನಗಂಡು ಖಾಸಗಿ ಜಮೀನು ಮಾಲೀಕರೊಂದಿಗೆ ಚರ್ಚಿಸಿದ್ದೇನೆ. ಸಾರ್ವಜನಿಕರ ಅನುಕೂಲಕ್ಕಾಗಿ ಯಾರೇ ಅಡ್ಡಿಪಡಿಸಿದರೂ ಇಲ್ಲಿ ವೈಜ್ಞಾನಿಕವಾಗಿ ರಸ್ತೆ ನಿರ್ಮಾಣ ಮಾಡುವುದು ಖಚಿತ.”
ಅಶೋಕ್ ರೈ, ಶಾಸಕರು, ಪುತ್ತೂರು

Continue Reading

Trending

Copyright © 2025 Deevatige