Dakshina Kannada
ತುಳು ಅಧಿಕೃತ ಭಾಷೆ : ಆಂಧ್ರಪ್ರದೇಶ ಅಧ್ಯಯನ ವರದಿ ಸರಕಾರಕ್ಕೆ ಸಲ್ಲಿಕೆ
ಮಂಗಳೂರು :ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಪ್ರಸ್ತಾಪದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯನ್ನು ಘೋಷಿಸುವ ಸಂದರ್ಭದಲ್ಲಿ ಅನುಸರಿಸಿರುವ ಮಾನದಂಡಗಳ ಬಗ್ಗೆ ಅಧ್ಯಯನ ನಡೆಸಲು ಸರಕಾರ ನೇಮಿಸಿರುವ ಸಮಿತಿಯು ತನ್ನ ವರದಿಯನ್ನು ಸರಕಾರಕ್ಕೆ ಸಲ್ಲಿಸಿದೆ.
ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಅಂದಿನ ನಿರ್ದೇಶಕಿ ಕೆ.ಎಮ್ ಗಾಯತ್ರಿ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅವರ ಉಪಸ್ಥಿತಿಯಲ್ಲಿ 6 ಮಂದಿ ಸದಸ್ಯರ ಅಧ್ಯಯನ ಸಮಿತಿಯನ್ನು ಸರಕಾರ ನೇಮಿಸಿತ್ತು.
ಸದ್ರಿ ಸಮಿತಿಯು ಜನವರಿ 19 ಹಾಗೂ 20ರಂದು ಆಂಧ್ರಪ್ರದೇಶ ರಾಜ್ಯದ ಸಚಿವಾಲಯ, ವಿವಿಧ ಇಲಾಖೆ, ಕಛೆರಿಗಳಿಗೆ ಭೇಟಿ ನೀಡಿ ಆಂದ್ರಪ್ರದೇಶದಲ್ಲಿ ಉರ್ದು ಭಾಷೆಯನ್ನು ಎರಡನೇ ಅಧಿಕೃತ ಭಾಷೆಯಾಗಿ ಘೋಘಿಸುವ ಸಂದರ್ಭದಲ್ಲಿ ಕೈಗೊಂಡ ಮಾನದಂಡಗಳು ಹಾಗೂ ವಿಧಿವಿಧಾನಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಿಧ್ದಪಡಿಸಿತ್ತು.
ಸಮಿತಿಯು ವರದಿಯನ್ನು ವಿಕಾಸ ಸೌಧದಲ್ಲಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಕಾರ್ಯದರ್ಶಿ ಜೆ.ಮಂಜುನಾಥ್ ಅವರಿಗೆ ಅಧ್ಯಯನ ಸಮಿತಿ ಸದಸ್ಯರು ಸಲ್ಲಿಸಿದರು. ತುಳುಭಾಷೆಯ ಹಿನ್ನೆಲೆ ಹಾಗೂ ಚರಿತ್ರೆಯ ಬಗೆಗಿನ ಪ್ರಸ್ತಾವನೆಯನ್ನು ಕೂಡ ವರದಿ ಜೊತೆಗೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ನಿರ್ದೇಶಕ ಡಾ. ಬಿ.ಎಸ್. ಮಂಜುನಾಥ ಸ್ವಾಮಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್, ಅಧ್ಯಯನ ಸಮಿತಿ ಸದಸ್ಯರಾದ ಯಕ್ಷಗಾನ ಅಕಾಡೆಮಿಯ ಸದಸ್ಯ ಸುಧಾಕರ ಶೆಟ್ಟಿ , ಕಾನೂನು ಇಲಾಖೆಯ ಉಪಕಾರ್ಯದರ್ಶಿ ಶ್ರೀಮತಿ ವನಿತಾ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಉಪಕಾರ್ಯದರ್ಶಿ ಮೂರ್ತಿ ಕೆ.ಎನ್ , ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಅಧೀನ ಕಾರ್ಯದರ್ಶಿ ಶ್ರೀಮತಿ ಕೆ.ಎಮ್. ಶುಭಶ್ರೀ, ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಕರಿಯಪ್ಪ ಎನ್. ಉಪಸ್ಥಿತರಿದ್ದರು.
CONGRESS
ಮಂಗಳೂರು ಹಳೆ ಬಂದರು ಪ್ರದೇಶಕ್ಕೆ ಸಿಎಂ ಭೇಟಿ: ಮೀನುಗಾರಿಕೆ ವ್ಯವಹಾರ ಸ್ಥಗಿತಗೊಳಿಸಿದ್ದಕ್ಕೆ ಆಕ್ರೋಶ, ತನಿಖೆಗೆ ಆದೇಶ
ಮಂಗಳೂರು, ಸೆ. 19: ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ಮಂಗಳೂರು ಮೀನುಗಾರಿಕಾ ಧಕ್ಕೆ ಹಳೆ ಬಂದರು ಪ್ರದೇಶಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕಮಾರ್ ಅವರು, ತಮ್ಮ ಭೇಟಿಯ ವೇಳೆ ಮೀನುಗಾರಿಕಾ ವ್ಯವಹಾರ ಹಾಗೂ ಚಟುವಟಿಕೆಗಳನ್ನು ಸ್ಥಗಿತಗೊಳಿಸಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಈ ಬಗ್ಗೆ ಕೂಡಲೇ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಕಮಿಷನರ್‌ಗೆ ಸೂಚನೆ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಅಧಿಕಾರಿಗಳೇ ಅಥವಾ ಪೊಲೀಸರೇ ಚಟುವಟಿಕೆಗಳನ್ನು ನಿಲ್ಲಿಸಿದ್ದರೆ ಅವರನ್ನು ಇಂದೇ ಅಮಾನತು ಮಾಡಲಾಗುವುದು ಎಂದು ಎಚ್ಚರಿಸಿದರು. ರಾಜ್ಯ ಹಾಗೂ ಹೊರರಾಜ್ಯಗಳಿಂದ ಬರುವ ಮೀನುಗಾರರು ಮತ್ತು ವ್ಯಾಪಾರಸ್ಥರಿಗೆ ತೊಂದರೆಯಾಗದಂತೆ ವ್ಯವಹಾರಗಳು ಎಂದಿನಂತೆ ಸುಗಮವಾಗಿ ನಡೆಯಬೇಕು ಎಂದು ಸಿಎಂ ತಿಳಿಸಿದರು. ಮೀನುಗಾರಿಕೆಯು ಆರ್ಥಿಕತೆಯ ದೊಡ್ಡ ಶಕ್ತಿಯಾಗಿದ್ದು, ಧಕ್ಕೆಯಲ್ಲಿ ವಾಹನಗಳ ಸಂಚಾರಕ್ಕೆ ಅನುಕೂಲ ಕಲ್ಪಿಸುವುದು, ಸುರಕ್ಷತೆ ಒದಗಿಸುವುದು ಹಾಗೂ ಸಣ್ಣ ದೋಣಿ ಮೀನುಗಾರರಿಗೆ ನೆರವು ನೀಡುವುದು ಸರ್ಕಾರದ ಕರ್ತವ್ಯ ಎಂದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ 35 ವರ್ಷಗಳಿಂದ ಅಳಿವೆ ಬಾಗಿಲಿಗೆ ಹೂಳೆತ್ತದೆ ಇರುವುದು ಅಪಾಯಕಾರಿಯಾಗಿದೆ ಎಂಬ ಮೀನುಗಾರರ ಅಳಲಿಗೆ ಸ್ಪಂದಿಸಿ, ಡ್ರೆಜಿಂಗ್ ಕಾರ್ಯ ಕೈಗೊಳ್ಳಲು ಕೇಂದ್ರ ಸರ್ಕಾರದ ತಾಂತ್ರಿಕ ಸಮಿತಿಯ ಸಲಹೆ ಪಡೆದು ಶೀಘ್ರವೇ ಸರ್ಕಾರವೇ ಸ್ವಂತ ಡ್ರೆಜಿಂಗ್ ಯಂತ್ರ ಖರೀದಿಸುವುದೋ ಅಥವಾ ಲೀಸ್‌ಗೆ ಪಡೆಯುವುದೋ ಎಂಬ ಬಗ್ಗೆ ತೀರ್ಮಾನಿಸುವುದಾಗಿ ಭರವಸೆ ನೀಡಿದರು. ಅಲ್ಲದೆ, ಕರಾವಳಿಯ ಅಭಿವೃದ್ಧಿಗೆ ಹೊಸ ಪಥದ ಚಿಂತನೆ ನಡೆಸಲಾಗಿದ್ದು, ಹೂಡಿಕೆದಾರರನ್ನು ಆಕರ್ಷಿಸಲು ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದರು.

ಕಸ್ತೂರಿ ರಂಗನ್ ವರದಿ ವಿಚಾರವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಜನಸಾಮಾನ್ಯರ ಬದುಕು ನಮಗೆ ಮುಖ್ಯವಾಗಿದ್ದು, ಹಿಂದೆಯೂ ನಾವು ಈ ವರದಿಯನ್ನು ತಿರಸ್ಕರಿಸಿದ್ದೇವೆ ಎಂದರು. ಕಾನೂನು ಚೌಕಟ್ಟಿನಲ್ಲಿ ಜನರಿಗೆ ಆಗುವ ಅನ್ಯಾಯ ತಪ್ಪಿಸಲು ವಾಸ್ತವ ಅಂಶಗಳನ್ನು ಅರಿಯಲು ಜನರ ಬಳಿಗೆ ಬಂದಿರುವುದಾಗಿ ತಿಳಿಸಿದರು. ಸಚಿವ ಸಂಪುಟದ ಅನುಮೋದನೆ ಕುರಿತು ಬಿಜೆಪಿ ಟೀಕೆಗಳಿಗೆ ಉತ್ತರಿಸಿ, “ನಾವು ನುಡಿದಂತೆ ನಡೆಯುತ್ತೇವೆ, ಅದೇ ನಮ್ಮ ಶಕ್ತಿ” ಎಂದು ಸ್ಪಷ್ಟಪಡಿಸಿದರು. ಈ ಭೇಟಿಯ ವೇಳೆ ಸಚಿವ ಯು.ಟಿ. ಖಾದರ್, ವಿವಿಧ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಮೀನುಗಾರಿಕಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
award
ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಐತಿಹಾಸಿಕ ಮಾನ್ಯತೆ: ಕರಾವಳಿಯಲ್ಲಿ ಹಬ್ಬದ ವಾತಾವರಣ
ಮಂಗಳೂರು: ತುಳು ಭಾಷಿಕರ ಹಲವು ದಶಕಗಳ ಹೋರಾಟ ಹಾಗೂ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಐತಿಹಾಸಿಕ ಜಯ ಸಿಕ್ಕಿದೆ. ಶ್ರೀಮಂತ ಪರಂಪರೆಯ ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡುವುದಾಗಿ ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯ ಬಳಿಕ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಈ ಮಹತ್ವದ ತೀರ್ಮಾನವನ್ನು ಪ್ರಕಟಿಸಿದರು.

ಸಂವಿಧಾನದ 8ನೇ ಪರಿಚ್ಛೇದ ಸೇರ್ಪಡೆಗೆ ಬಲ: ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು, ಪ್ರಾಚೀನ ಹಾಗೂ ಆಧುನಿಕ ಸಾಹಿತ್ಯಿಕ ಸಮೃದ್ಧತೆಯನ್ನು ಹೊಂದಿರುವ ಅಪೂರ್ವ ಭಾಷೆಯಾಗಿದೆ. ರಾಜ್ಯ ಸರ್ಕಾರದಿಂದ ಎರಡನೇ ಅಧಿಕೃತ ಭಾಷಾ ಸ್ಥಾನಮಾನ ಲಭಿಸಿರುವುದು, ಭಾರತೀಯ ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಭಾಷೆಯನ್ನು ಸೇರ್ಪಡೆಗೊಳಿಸುವ ಹೋರಾಟಕ್ಕೆ ಮತ್ತಷ್ಟು ಪ್ರಬಲ ವೇದಿಕೆಯಾಗಲಿದೆ.
ನಿರಂತರ ಹೋರಾಟಕ್ಕೆ ಸಿಕ್ಕ ಫಲ: ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಮುಖವಾಗಿ ಮಾತನಾಡುವ ತುಳುವಿಗೆ ಹೆಚ್ಚುವರಿ ಅಧಿಕೃತ ಭಾಷಾ ಮಾನ್ಯತೆ ನೀಡಬೇಕೆಂದು ದಶಕಗಳಿಂದ ತುಳು ಸಾಹಿತ್ಯ ಅಕಾಡೆಮಿ, ತುಳು ಪರ ಸಂಘಟನೆಗಳು, ಸಾಹಿತಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸರ್ಕಾರದ ಮೇಲೆ ನಿರಂತರವಾಗಿ ಒತ್ತಡ ಹೇರುತ್ತ ಬಂದಿದ್ದರು.
ತಜ್ಞರ ಸಮಿತಿಯ ವರದಿ ಆಧಾರ: ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡುವ ಸಾಧಕ-ಬಾಧಕಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಹಿರಿಯ ಶಿಕ್ಷಣ ತಜ್ಞ ಡಾ. ಎಂ. ಮೋಹನ್ ಆಳ್ವ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯು ಹೊರ ರಾಜ್ಯಗಳಲ್ಲಿನ ಭಾಷಾ ನೀತಿ ಮಾದರಿಗಳನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ವಿಸ್ತೃತ ವರದಿಯನ್ನು ಸಲ್ಲಿಸಿತ್ತು. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈಗ ತುಳುವರ ಬಹುಕಾಲದ ಕನಸು ನನಸಾಗಿದ್ದು, ಕರಾವಳಿ ಭಾಗದಲ್ಲಿ ಹರ್ಷೋದ್ಗಾರ ವ್ಯಕ್ತವಾಗಿದೆ.
CONGRESS
ಮಂಗಳೂರು ಸಚಿವ ಸಂಪುಟ ಸಭೆ: ವಿವಿಧ ಸಂಘಟನೆಗಳ ಪ್ರತಿಭಟನೆ ಮತ್ತು ಬಿಗಿ ಭದ್ರತೆ
ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಶುಕ್ರವಾರ (ಸೆಪ್ಟೆಂಬರ್ 18) ಆಯೋಜಿಸಲಾದ ವಿಶೇಷ ಸಚಿವ ಸಂಪುಟ ಸಭೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟದ ಸಚಿವರು ಆಗಮಿಸಿದ ವೇಳೆ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದಲ್ಲಿ ವಿವಿಧ ಸಂಘಟನೆಗಳು ಭಾರಿ ಪ್ರತಿಭಟನೆ ನಡೆಸಿದವು. ಅಬ್ದುಲ್ ರಹೀಮಾನ್ ಕೊಲೆ ಆರೋಪಿಗಳಿಗೆ ಜಾಮೀನು ಮಂಜೂರಾಗಿರುವುದಕ್ಕೆ ರಾಜ್ಯ ಸರ್ಕಾರದ ವೈಫಲ್ಯವೇ ಕಾರಣವೆಂದು ಆರೋಪಿಸಿ ಎಸ್.ಡಿ.ಪಿ.ಐ. ಕಾರ್ಯಕರ್ತರು ಮಂಗಳೂರಿನ ರಾವ್ & ರಾವ್ ಸರ್ಕಲ್ ಬಳಿ ಕಪ್ಪುಪತಾಕೆ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಹಲವು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.
ಅದೇ ರೀತಿ, ಜೈಲ್ ಜಾಮರ್ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವಕೀಲರನ್ನು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ಹೊರಟ ಸಿ.ಪಿ.ಐ.ಎಂ. ಕಾರ್ಯಕರ್ತರನ್ನು ಪೊಲೀಸರು ತಡೆದು ವಶಕ್ಕೆ ಪಡೆದರು. ಇದರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ತುಳು ಸಂಘಟನೆಯವರು ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವಂತೆ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.

ಈ ಎಲ್ಲಾ ಬೆಳವಣಿಗೆಗಳ ನಡುವೆ, ಸಿಎಂ ಡಿ.ಕೆ. ಶಿವಕುಮಾರ್ ಅವರು ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಕದ್ರಿ ಶ್ರೀ ಮಂಜುನಾಥ ದೇವರ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪಡೀಲ್‌ನಲ್ಲಿರುವ ಪ್ರಜ್ಞಾಸೌಧದ ಎರಡನೇ ಮಹಡಿಯ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಒಟ್ಟು 33 ಮಂದಿ ಸಚಿವರಿಗೆ ಮತ್ತು ಮುಖ್ಯ ಕಾರ್ಯದರ್ಶಿಗಳು ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ಆಯಾ ಸಭಾಂಗಣದಲ್ಲೇ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ನಿಗದಿತ ಸಮಯಕ್ಕಿಂತ ಸಭೆ ಸ್ವಲ್ಪ ವಿಳಂಬವಾಗಿ ಆರಂಭವಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
-
accident1 month agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala8 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
