Connect with us

Politics

ಬಿಜೆಪಿಯಲ್ಲಿ ಯಡಿಯೂರಪ್ಪ‌ ಏನು ? ಹೊಸ ಪಕ್ಷ ಸ್ಥಾಪನೆಯ ಮುನ್ಸೂಚನೆಯೇ ? ಇದು ಯಡಿಯೂರಪ್ಪ ಸ್ಟೈಲ್ !!

Published

on

ಇಂದು ಕರ್ನಾಟಕದಲ್ಲಿ ಬಿಜೆಪಿ ಒಂದು ಪ್ರಬಲ ರಾಜಕೀಯ ಶಕ್ತಿಯಾಗಿ ಬೆಳೆದು ನಿಂತಿರುವುದರ ಹಿಂದೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ತ್ಯಾಗ ಮತ್ತು ಪರಿಶ್ರಮದ ದೊಡ್ಡ ಪಾಲಿದೆ. ಅವರು ಪಕ್ಷದ ಸಂಸದೀಯ ಮಂಡಳಿಯ ಸದಸ್ಯರಾಗಿ ಇಂದಿಗೂ ಪಕ್ಷದ ಉನ್ನತ ಮಟ್ಟದ ನಿರ್ಧಾರಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಆದರೂ ತನ್ನ ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ವಿಚಲಿತರಾಗದೆ ಧೈರ್ಯವಾಗಿ ಎದುರಿಸಿ ಜಯಶಾಲಿಯಾದವರು. ಅವರ ಯಾವುದೇ ಮಾತುಗಳಲ್ಲಿ, ಕೃತಿಗಳಲ್ಲಿ ಮುಂದಿನ ಭವಿಷ್ಯದ ನಿರ್ಧಾರಗಳಿವೆ. ಬಿಜೆಪಿಯಲ್ಲಿ ಯಡಿಯೂರಪ್ಪ‌ ಏನು ? ಎಂಬುವುದನ್ನುಪರೋಕ್ಷವಾಗಿ ತೋರಿಸುವಾಗ ಇದು ಹೊಸ ಪಕ್ಷ ಸ್ಥಾಪನೆಯ ಮುನ್ಸೂಚನೆಯಾಗಿರಬಹುದೇ ಎಂದು ವ್ಯಾಖ್ಯಾನಿಸಲಾಗುತ್ತಿದೆ. ಇದುವೇ ಯಡಿಯೂರಪ್ಪ ಸ್ಟೈಲ್ !!

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಷಯದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ನೀಡಿದ ಇತ್ತೀಚಿನ ಹೇಳಿಕೆಯು ಬಿಜೆಪಿ ನಾಯಕರ ವಲಯದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದೆ. ಹೈಕಮಾಂಡ್ ಅನುಮತಿಗೂ ಮುನ್ನವೇ ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಯಡಿಯೂರಪ್ಪ ಅವರ ನಡೆಗೆ ಪಕ್ಷದ ಹಿರಿಯ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ (BSY) ಅವರು ಇತ್ತೀಚೆಗೆ (ಮಾರ್ಚ್ 2026) ದಾವಣಗೆರೆಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳ ಕುರಿತು ನೀಡಿದ ಹೇಳಿಕೆಯು ಪಕ್ಷದೊಳಗೆ ಸಂಚಲನ ಮೂಡಿಸಿದೆ. ಚುನಾವಣೆಗೆ ಇನ್ನೂ ಎರಡು ವರ್ಷಗಳ ಕಾಲಾವಕಾಶವಿರುವಾಗಲೇ ಅವರು ಕೆಲವು ಕ್ಷೇತ್ರಗಳಿಗೆ ಸಂಭವನೀಯ ಅಭ್ಯರ್ಥಿಗಳ ಹೆಸರನ್ನು ಘೋಷಿಸಿರುವುದು ಈ ವಿವಾದಕ್ಕೆ ಮುಖ್ಯ ಕಾರಣವಾಗಿದೆ.


ಈ ಬೆಳವಣಿಗೆಯಿಂದಾಗಿ ಪಕ್ಷದ ಆಂತರಿಕ ಕಲಹ ಬೀದಿಗೆ ಬಂದಂತಾಗಿದ್ದು, ನಾಯಕರ ನಡುವೆ ವಾಕ್ಸಮರ ಆರಂಭವಾಗಿದೆ. ಕೆಲವು ಪ್ರಭಾವಿ ಬಿಜೆಪಿ ನಾಯಕರು ಈ ನಡೆಯನ್ನು ಖಂಡಿಸಿ, ಯಡಿಯೂರಪ್ಪ ಅವರು ಪಕ್ಷದ ಶಿಸ್ತನ್ನು ಉಲ್ಲಂಘಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ಪಕ್ಷದ ಕೇಂದ್ರ ಸಮಿತಿಗೆ ಸೇರಿದ್ದು, ಏಕಪಕ್ಷೀಯ ನಿರ್ಧಾರಗಳು ಸರಿಯಲ್ಲ’ ಎಂಬ ಮಾತುಗಳು ಕೇಳಿಬರುತ್ತಿವೆ. ಅಷ್ಟೇ ಅಲ್ಲದೇ, ಈ ನಡೆಯ ಹಿಂದೆ ಗಂಭೀರವಾದ ರಾಜಕೀಯ ತಂತ್ರ ಅಡಗಿದೆ ಎಂದು ಹಲವರು ಶಂಕಿಸಿದ್ದಾರೆ.ಯಡಿಯೂರಪ್ಪ ಅವರಿಗೆ ಪಕ್ಷ ಬಿಡುವ ಮತ್ತು ಸ್ವಂತ ಪ್ರಾದೇಶಿಕ ಪಕ್ಷವನ್ನು ಕಟ್ಟುವ ಉದ್ದೇಶವಿದ್ದಂತಿದೆ’ ಎಂದು ಕೆಲವು ಮೂಲಗಳು ಗಂಭೀರ ಆರೋಪ ಮಾಡಿವೆ.
ಈ ಅನಿರೀಕ್ಷಿತ ಘೋಷಣೆಯು ಚುನಾವಣೆ ಹೊತ್ತಿನಲ್ಲಿ ಪಕ್ಷಕ್ಕೆ ಹಾನಿಯುಂಟು ಮಾಡಬಹುದು ಎಂದು ಕಾರ್ಯಕರ್ತರು ಆತಂಕ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್ ಸೂಚನೆಗೂ ಮೊದಲೇ ಅಭ್ಯರ್ಥಿಗಳನ್ನು ಹೆಸರಿಸುವುದು ಪಕ್ಷದ ಒಗ್ಗಟ್ಟನ್ನು ಹದಗೆಡಿಸುತ್ತದೆ ಎನ್ನುವುದು ವಿರೋಧಿಬಣದ ವಾದ. ಇತ್ತ ಯಡಿಯೂರಪ್ಪ ಬೆಂಬಲಿಗರು ಇದನ್ನು ಸಾಮಾನ್ಯ ಸಲಹೆ ಎಂದು ಸಮರ್ಥಿಸಿಕೊಳ್ಳುತ್ತಿದ್ದರೂ, ಪಕ್ಷದ ವರಿಷ್ಠರು ಈ ಬಗ್ಗೆ ತೀವ್ರ ನಿಗಾ ವಹಿಸಿದ್ದಾರೆ.
ಸದ್ಯ ಈ ಬೆಳವಣಿಗೆಯು ರಾಜ್ಯ ರಾಜಕಾರಣದಲ್ಲಿ ದೊಡ್ಡಮಟ್ಟದ ಚರ್ಚೆಗೆ ಗ್ರಾಸವಾಗಿದ್ದು, ಬಿಜೆಪಿಯ ಮುಂದಿನ ನಡೆ ಕುತೂಹಲ ಮೂಡಿಸಿದೆ. ಯಡಿಯೂರಪ್ಪ ಅವರು ತಮ್ಮ ನಿಲುವಿಗೆ ಬದ್ಧರಾಗಿರುತ್ತಾರೋ ಅಥವಾ ವರಿಷ್ಠರ ಮನವೊಲಿಕೆಗೆ ಬಾಗುತ್ತಾರೋ ಎನ್ನುವುದನ್ನು ಕಾದು ನೋಡಬೇಕಿದೆ.


ಸಾಮಾನ್ಯವಾಗಿ ಅಭ್ಯರ್ಥಿಗಳ ಆಯ್ಕೆಯನ್ನು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ (CEC) ಮತ್ತು ಹೈಕಮಾಂಡ್ ಅಂತಿಮಗೊಳಿಸುತ್ತದೆ. ಆದರೆ ಯಡಿಯೂರಪ್ಪ ಅವರು ಸಂಸದೀಯ ಮಂಡಳಿಯ ಸದಸ್ಯರಾಗಿದ್ದರೂ, ಏಕಪಕ್ಷೀಯವಾಗಿ ಹೆಸರು ಘೋಷಿಸಿರುವುದು ಪಕ್ಷದ ಶಿಸ್ತಿನ ಉಲ್ಲಂಘನೆ ಎಂಬ ಆರೋಪ ಕೇಳಿಬಂದಿದೆ. ಪ್ರತಿ ಕ್ಷೇತ್ರದಲ್ಲಿ ಹತ್ತಾರು ಜನ ಆಕಾಂಕ್ಷಿಗಳು ಕೆಲಸ ಮಾಡುತ್ತಿರುವಾಗ, ಇಷ್ಟು ಮುಂಚಿತವಾಗಿಯೇ ಹೆಸರು ಘೋಷಿಸುವುದರಿಂದ ಇತರ ಕಾರ್ಯಕರ್ತರಲ್ಲಿ ನಿರಾಸಕ್ತಿ ಮೂಡುತ್ತದೆ ಎಂಬುದು ಸ್ಥಳೀಯ ನಾಯಕರ ವಾದ. ಟಿಕೆಟ್ ಹಂಚಿಕೆ ವಿಚಾರದಲ್ಲಿ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಈ ಹಿಂದೆಯೇ ಸ್ಪಷ್ಟಪಡಿಸಲಾಗಿತ್ತು. ಹೀಗಿದ್ದರೂ ಬಿಎಸ್ವೈ ಅವರ ಹೇಳಿಕೆ ಹೈಕಮಾಂಡ್‌ಗೆ ಸವಾಲು ಹಾಕಿದ್ದಾರೆ ಎಂದು ವ್ಯಾಖ್ಯಾನಿಸಲಾಗುತ್ತಿದೆ. ಈ ವಿಚಾರ ತಿಳಿದುಕೊಂಡೇ ಯಡಿಯೂರಪ್ಪನವರು ಸವಾಲು ಹಾಕಿದ್ದಾರೆ ಎಂದರೆ ಹೈಕಮಾಂಡ್‌ ಇವರ ಮಾತಿಗೆ , ತೀರ್ಮಾನಕ್ಕೆ ಮನ್ನಣೆ ನೀಡಿಲ್ಲವೆಂದರೆ ಮುಂದಿನ ನಿರ್ಧಾರ ಏನು ಎಂಬುವುದರ ಮೇಲೆ ಬಿಜೆಪಿಯ ಭವಿಷ್ಯತ್ತು ನಿಂತಿದೆ.

ಯಡಿಯೂರಪ್ಪನವರು ಕೇವಲ ಒಬ್ಬ ನಾಯಕನಾಗಿ ಮಾತ್ರವಲ್ಲದೆ, ಪಕ್ಷದ ಕಾರ್ಯಕರ್ತರನ್ನು ಹೆಸರು ಹಿಡಿದು ಕರೆಯುವಷ್ಟು ಆತ್ಮೀಯತೆಯನ್ನು ಹೊಂದಿದ್ದರು. ಎಂತಹ ಕಠಿಣ ಪರಿಸ್ಥಿತಿಯಲ್ಲೂ ಧೃತಿಗೆಡದೆ ಪಕ್ಷವನ್ನು ಮುನ್ನಡೆಸುವ ಅವರ ಗುಣವೇ ಅವರನ್ನು ‘ಹೋರಾಟದ ಹರಿಕಾರ’ ಎಂದು ಕರೆಯುವಂತೆ ಮಾಡಿತು. ಒಟ್ಟಾರೆಯಾಗಿ ಹೇಳುವುದಾದರೆ, ಇಂದು ಕರ್ನಾಟಕದಲ್ಲಿ ಬಿಜೆಪಿ ಒಂದು ಪ್ರಬಲ ರಾಜಕೀಯ ಶಕ್ತಿಯಾಗಿ ಬೆಳೆದು ನಿಂತಿರುವುದರ ಹಿಂದೆ ಯಡಿಯೂರಪ್ಪ ಅವರ ತ್ಯಾಗ ಮತ್ತು ಪರಿಶ್ರಮದ ದೊಡ್ಡ ಪಾಲಿದೆ. ಅವರು ಪಕ್ಷದ ಸಂಸದೀಯ ಮಂಡಳಿಯ ಸದಸ್ಯರಾಗಿ ಇಂದಿಗೂ ಪಕ್ಷದ ಉನ್ನತ ಮಟ್ಟದ ನಿರ್ಧಾರಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಆದರೂ ತನ್ನ ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ವಿಚಲಿತರಾಗದೆ ಧೈರ್ಯವಾಗಿ ಎದುರಿಸಿ ಜಯಶಾಲಿಯಾದವರು.ಅವರ ಮಾತಿಗೆ ಮನ್ನಣೆ ಸಿಗಲೇ ಬೇಕು ಇಲ್ಲವಾದರೆ ಅದರ ಪರಿಣಾಮವನ್ನು ಪಕ್ಷ ಅನುಭವಿಸಲೇ ಬೇಕು ಎಂಬುವುದರ ಮೇಲೆ ಮುಂದೆ ಹೊಸ ಪಕ್ಷದ ಸ್ಥಾಪನೆಯೊಂದು ಅವರ ಅವರ ಭತ್ತಳಿಕೆಯಿಂದ ಬಂದರೂ ಬರಬಹುದು !

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

CONGRESS

ಸಚಿವ ಸ್ಥಾನ ವಂಚಿತರ ಆಕ್ರೋಶ ಸ್ಫೋಟ: ಕಾಂಗ್ರೆಸ್‌ನಲ್ಲಿ ತಾರಕಕ್ಕೇರಿದ ಭಿನ್ನಮತ!

Published

on

ಬೆಂಗಳೂರು: ರಾಜ್ಯ ಸರ್ಕಾರದ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತದ ಬೆಂಕಿ ಭುಗಿಲೆದ್ದಿದೆ. ಹಿರಿಯ ನಾಯಕರು ಹಾಗೂ ಪ್ರಭಾವಿ ಶಾಸಕರಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಬೆಂಬಲಿಗರ ಮತ್ತು ಕಾರ್ಯಕರ್ತರ ಅಸಮಾಧಾನ ಬೀದಿಗಿಳಿದಿದ್ದು, ರಾಜ್ಯಾದ್ಯಂತ ಪ್ರತಿಭಟನೆಗಳು ತೀವ್ರಗೊಂಡಿವೆ.

1. ರಸ್ತೆಗಿಳಿದ ಕಾರ್ಯಕರ್ತರು: ಎಲ್ಲೆಂದರಲ್ಲಿ ಧರಣಿ, ಟೈರ್‌ಗೆ ಬೆಂಕಿ

ಸಚಿವ ಸ್ಥಾನ ಸಿಗದ ನಾಯಕರ ಬೆಂಬಲಿಗರು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ:

ಬೆಂಗಳೂರಿನಲ್ಲಿ ಆಕ್ರೋಶ: ಕೆಪಿಸಿಸಿ ಕಚೇರಿ ಮುಂದೆ, ಬ್ರಿಗೇಡ್ ರೋಡ್ ಹಾಗೂ ಚಂದಾಪುರ ಸರ್ಕಲ್‌ನಲ್ಲಿ ಕಾರ್ಯಕರ್ತರು ರಸ್ತೆ ತಡೆ ನಡೆಸಿ, ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟಿಸಿದರು.

ಬೆಳಗಾವಿ ಮತ್ತು ಮೈಸೂರು ತೀವ್ರತೆ: ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಬೆಳಗಾವಿಯ ರಾಣಿ ಚನ್ನಮ್ಮ ವೃತ್ತ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ತಡೆದರೆ, ಶಾಸಕ ತನ್ವೀರ್ ಸೇಠ್ ಬೆಂಬಲಿಗರು ಮೈಸೂರು ಮತ್ತು ಮಂಡ್ಯದಲ್ಲಿ ಪ್ರತಿಭಟಿಸಿದರು. ಕೆಲವೆಡೆ ಕಾರ್ಯಕರ್ತರು ಆತ್ಮಹತ್ಯೆಗೆ ಯತ್ನಿಸಿದ ಗಂಭೀರ ಘಟನೆಗಳೂ ವರದಿಯಾಗಿವೆ.

ಸ್ಥಳೀಯ ಮಟ್ಟದಲ್ಲಿ ರಾಜೀನಾಮೆ: ಆನೇಕಲ್ ಶಾಸಕ ಬಿ. ಶಿವಣ್ಣ ಅವರಿಗೆ ಸ್ಥಾನ ತಪ್ಪಿದ್ದಕ್ಕೆ ಬೇಸತ್ತು ಚಂದಾಪುರದಲ್ಲಿ ಪ್ರತಿಭಟನೆ ನಡೆದಿದ್ದು, ಸ್ಥಳೀಯ ಪುರಸಭಾ ಸದಸ್ಯ ಬೈರೇಶ್ ರಾಜೀನಾಮೆ ಸಲ್ಲಿಸಿದ್ದಾರೆ. ವಿಜಯನಗರ, ಗೋವಿಂದರಾಜನಗರ, ಹುಬ್ಬಳ್ಳಿ, ಕೊಪ್ಪಳ, ಚಿಕ್ಕಬಳ್ಳಾಪುರ, ಹಾವೇರಿ ಹಾಗೂ ರಾಮದುರ್ಗದಲ್ಲೂ ಆಕ್ರೋಶದ ಮುಗಿಲು ಮುಟ್ಟಿದೆ.

2. ಗದಗದಲ್ಲಿ ಸಾಮೂಹಿಕ ರಾಜೀನಾಮೆ: ಪ್ರತ್ಯೇಕ ರಾಜ್ಯದ ಕೂಗು!

ಹಿರಿಯ ನಾಯಕ ಎಚ್.ಕೆ. ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡದಿರುವುದಕ್ಕೆ ಗದಗ-ಬೆಟಗೇರಿ ನಗರಸಭೆಯಲ್ಲಿ ದೊಡ್ಡ ಮಟ್ಟದ ಬಂಡಾಯ ಎದ್ದಿದೆ.

16 ಚುನಾಯಿತ ಹಾಗೂ 5 ನಾಮನಿರ್ದೇಶಿತ ಸದಸ್ಯರು ಸೇರಿದಂತೆ ಒಟ್ಟು 21 ಕಾಂಗ್ರೆಸ್ ಸದಸ್ಯರು ಜಿಲ್ಲಾಧಿಕಾರಿಗಳಿಗೆ ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ.

ಉತ್ತರ ಕರ್ನಾಟಕ ಭಾಗಕ್ಕೆ ಸತತವಾಗಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿದ ಬೆಂಬಲಿಗರು, ‘ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ’ಕ್ಕೆ ಬೇಡಿಕೆ ಇಡುವ ಮೂಲಕ ತಮ್ಮ ತೀವ್ರ ಪ್ರತಿಭಟನೆಯನ್ನು ದಾಖಲಿಸಿದ್ದಾರೆ.

3. ‘ಮಂದಿರ’ದ ಮಾತು ಹೇಳಿ ಕಾರ್ಯಕರ್ತರ ಮನವೊಲಿಕೆಗೆ ಹರಿಪ್ರಸಾದ್ ಯತ್ನ

ಕೆಪಿಸಿಸಿ ಕಚೇರಿಯ ‘ಭಾರತ್ ಜೋಡೋ ಸಭಾಂಗಣ’ದಲ್ಲಿ ಎಂ. ಕೃಷ್ಣಪ್ಪ ಬೆಂಬಲಿಗರು ಸೇರಿ ಗದ್ದಲ ಎಬ್ಬಿಸಿದಾಗ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಪರಿಸ್ಥಿತಿ ತಿಳಿಗೊಳಿಸಲು ಮುಂದಾದರು.

“ಇದು ನಮ್ಮ ದೇವಸ್ಥಾನವಿದ್ದಂತೆ, ಇಲ್ಲಿ ಗೌರವದಿಂದ ನಡೆದುಕೊಳ್ಳಬೇಕು.”

“ನಮ್ಮಲ್ಲಿ 136 ಶಾಸಕರಿದ್ದಾರೆ, ಎಲ್ಲರಿಗೂ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ. ನಾನು 50 ವರ್ಷಗಳಿಂದ ಕಾಂಗ್ರೆಸ್‌ನಲ್ಲಿದ್ದೇನೆ, ಸೋನಿಯಾ ಗಾಂಧಿಯವರೇ ಇದ್ದರೂ ಪ್ರಧಾನಿಯಾಗಲು ಆಗಲಿಲ್ಲ. ಕಾರ್ಯಕರ್ತರ ಮತ್ತು ಶಾಸಕರ ಅಸಮಾಧಾನವನ್ನು ಹೈಕಮಾಂಡ್ ಗಮನಕ್ಕೆ ತರುತ್ತೇನೆ.”

ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಅಧ್ಯಕ್ಷ

4. ಬಿಕ್ಕಟ್ಟು ಶಮನಕ್ಕೆ ನಾಯಕರ ಹೈಡ್ರಾಮಾ ಮತ್ತು ತಂತ್ರಗಾರಿಕೆ

ಸ್ಥಳೀಯ ಮಟ್ಟದಲ್ಲಿ ಯುವ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್, ಎನ್‌ಎಸ್‌ಯುಐ ಹಾಗೂ ಬ್ಲಾಕ್ ಅಧ್ಯಕ್ಷರು ಸಾಮೂಹಿಕ ರಾಜೀನಾಮೆ ಎಚ್ಚರಿಕೆ ನೀಡಿರುವುದು ಹೈಕಮಾಂಡ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಪ್ರಸ್ತುತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಎಲ್ಲಾ ಬೆಳವಣಿಗೆಗಳನ್ನು ಎಚ್ಚರಿಕೆಯಿಂದ ಗಮನಿಸುತ್ತಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಮುಂದಾಗಿದ್ದಾರೆ. ಇನ್ನೊಂದೆಡೆ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಗೊಂದಲ ಬಗೆಹರಿಸಲು ಸಂಧಾನ ಸೂತ್ರಗಳನ್ನು ಹೆಣೆಯುತ್ತಿದ್ದಾರೆ.

ಒಟ್ಟಾರೆ ಚಿತ್ರಣ:

ಸಚಿವ ಸಂಪುಟ ವಿಸ್ತರಣೆಯು ಕಾಂಗ್ರೆಸ್ ಅಂಗಳದಲ್ಲಿ ದೊಡ್ಡ ರಾಜಕೀಯ ಬಿರುಗಾಳಿಯನ್ನೇ ಎಬ್ಬಿಸಿದೆ. ಅತೃಪ್ತರ ಆಕ್ರೋಶವನ್ನು ಶಮನಗೊಳಿಸಿ, ಸರ್ಕಾರದ ಸ್ಥಿರತೆಯನ್ನು ಕಾಯ್ದುಕೊಳ್ಳುವುದು ಈಗ ಹೈಕಮಾಂಡ್ ಹಾಗೂ ರಾಜ್ಯ ನಾಯಕತ್ವಕ್ಕೆ ದೊಡ್ಡ ಸವಾಲಾಗಿದೆ.

Continue Reading

CONGRESS

ಸಚಿವ ಸ್ಥಾನ ಸಿಗದ್ದಕ್ಕೆ ಕಾಂಗ್ರೆಸ್‌ನಲ್ಲಿ ತೀವ್ರ ಬಂಡಾಯ: ಶಾಸಕ ಸ್ಥಾನಕ್ಕೆ ಬೇಳೂರು ಗೋಪಾಲಕೃಷ್ಣ, ಯಶವಂತರಾಯಗೌಡ ಪಾಟೀಲ್ ರಾಜೀನಾಮೆ!

Published

on

ಬೆಂಗಳೂರು: ರಾಜ್ಯದಲ್ಲಿ ನೂತನ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನದ ಬೆಂಕಿ ಭುಗಿಲೆದ್ದಿದೆ. ಬಯಸಿದ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಇಬ್ಬರು ಹಿರಿಯ ಶಾಸಕರಾದ ಸಾಗರ ಕ್ಷೇತ್ರದ ಬೇಳೂರು ಗೋಪಾಲಕೃಷ್ಣ ಹಾಗೂ ಇಂಡಿ ಕ್ಷೇತ್ರದ ಯಶವಂತರಾಯಗೌಡ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ನನಗೆ ಅನ್ಯಾಯವಾಗಿದೆ, ಉದ್ದೇಶಪೂರ್ವಕವಾಗಿ ಕಡೆಗಣಿಸಿದ್ದಾರೆ: ಬೇಳೂರು ಗೋಪಾಲಕೃಷ್ಣ ಆಕ್ರೋಶ

ಸಚಿವ ಸ್ಥಾನ ಕೈತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡಿರುವ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ, “ಸಂಪುಟ ವಿಸ್ತರಣೆ ಹೆಸರಿನಲ್ಲಿ ನನಗೆ ತೀವ್ರ ಅನ್ಯಾಯವಾಗಿದೆ. ಕೊನೆಯ ಕ್ಷಣದವರೆಗೂ ಪಟ್ಟಿಯಲ್ಲಿದ್ದ ನನ್ನ ಹೆಸರನ್ನು ಉದ್ದೇಶಪೂರ್ವಕವಾಗಿ ಕೈಬಿಡಲಾಗಿದೆ” ಎಂದು ಕಳವಳ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಗಾಡ್‌ಫಾದರ್ ಹಾಗೂ ಪ್ರಭಾವ ಇರುವವರಿಗೆ ಮಾತ್ರ ಸಚಿವ ಸ್ಥಾನ ನೀಡಲಾಗುತ್ತಿದೆ. ನಿಷ್ಠಾವಂತ ಶಾಸಕರಿಗೆ ಅನ್ಯಾಯವಾಗುತ್ತಿದ್ದು, ಇದನ್ನು ಸಹಿಸಿಕೊಂಡು ಮುಂದುವರಿಯಲು ಸಾಧ್ಯವಿಲ್ಲ. ಹೀಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ತಳೆದಿದ್ದೇನೆ” ಎಂದು ತಿಳಿಸಿರುವ ಅವರು, ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಮೂರು ಬಾರಿ ಶಾಸಕರಾಗಿದ್ದರೂ ಕೈತಪ್ಪಿದ ಸಚಿವ ಸ್ಥಾನ: ಯಶವಂತರಾಯಗೌಡ ಪಾಟೀಲ್ ರಾಜೀನಾಮೆ

ಇತ್ತ ವಿಜಯಪುರ ಜಿಲ್ಲೆಯ ಇಂಡಿ ಕ್ಷೇತ್ರದ ಮೂರು ಬಾರಿಯ ಶಾಸಕ ಯಶವಂತರಾಯಗೌಡ ಪಾಟೀಲ್ ಅವರೂ ಸಹ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷಕ್ಕಾಗಿ ಸತತವಾಗಿ ಶ್ರಮಿಸಿದರೂ ಹಾಗೂ ಹಿರಿಯ ಶಾಸಕರಾಗಿದ್ದರೂ ತಮಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡದಿರುವುದು ಅವರ ಬೆಂಬಲಿಗರು ಮತ್ತು ಶಾಸಕರ ಅಸಮಾಧಾನಕ್ಕೆ ಕಾರಣವಾಗಿದೆ.

ಸರ್ಕಾರಕ್ಕೆ ಹೆಚ್ಚಿದ ರಾಜಕೀಯ ಬಿಸಿ

ಸಂಪುಟ ವಿಸ್ತರಣೆಯ ಬೆನ್ನಲ್ಲೇ ಒಂದೇ ಬಾರಿಗೆ ಇಬ್ಬರು ಪ್ರಮುಖ ಶಾಸಕರು ರಾಜೀನಾಮೆ ನಿರ್ಧಾರ ಕೈಗೊಂಡಿರುವುದು ಕಾಂಗ್ರೆಸ್ ಸರ್ಕಾರ ಹಾಗೂ ಹೈಕಮಾಂಡ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹಲವು ಅಸಮಾಧಾನಿತ ಶಾಸಕರು ಒಗ್ಗೂಡುತ್ತಿರುವ ಸುಳಿವು ಸಿಗುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಮುಂದಿನ ನಡೆ ಕುತೂಹಲ ಮೂಡಿಸಿದೆ.

Continue Reading

Kadaba

ನೂಜಿಬಾಳ್ತಿಲ: ಬಾಲೆಮಾರು-ಕುರ್ನೂಜಿಯಲ್ಲಿ ಮಳೆಗಾಲದಲ್ಲಿ ಹೊಳೆದಾಟಲು ಪರದಾಟ; ಸೇತುವೆ ನಿರ್ಮಾಣಕ್ಕೆ ಭರವಸೆ ನೀಡಿದ ಕಾಂಗ್ರೆಸ್ ಮುಖಂಡ ಜಿ.ಕೃಷ್ಣಪ್ಪ

Published

on

ಕಡಬ: ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆಯಿಂದ ಇಚ್ಲಂಪಾಡಿ ಸಂಪರ್ಕಿಸುವ ರಸ್ತೆಯ ಬಾಲೆಮಾರು-ಕುರ್ನೂಜಿ ಎಂಬಲ್ಲಿ ಹರಿಯುವ ಹೊಳೆ ದಾಟಲು ಗ್ರಾಮಸ್ಥರು ಮಳೆಗಾಲದಲ್ಲಿ ತೀವ್ರ ಪರದಾಟ ನಡೆಸುತ್ತಿದ್ದಾರೆ. ಇಲ್ಲಿನ ಗ್ರಾಮಸ್ಥರ ದಶಕಗಳ ಸಂಕಷ್ಟವನ್ನು ಆಲಿಸಿದ ಕಾಂಗ್ರೆಸ್ ಮುಖಂಡ ಜಿ.ಕೃಷ್ಣಪ್ಪ ರಾಮಕುಂಜ ಅವರು ಆಃ 2ರಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೇತುವೆ ನಿರ್ಮಾಣಕ್ಕೆ ಸರಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ತೆಪ್ಪವೇ ಆಸರೆ: ಗ್ರಾಮಸ್ಥರ ಮುಗಿಯದ ಸಂಕಷ್ಟ!

ಬೇಸಿಗೆ ಕಾಲದಲ್ಲಿ ಗ್ರಾಮಸ್ಥರೇ ಸ್ವತಃ ಪಾಲ (ಕಾಲುಸಂಕ) ರಚಿಸಿಕೊಂಡು ಹೊಳೆ ದಾಟುತ್ತಾರೆ. ಆದರೆ ಮಳೆಗಾಲದಲ್ಲಿ ಗುಂಡ್ಯ ಹೊಳೆಯು ಉಕ್ಕಿ ಹರಿದು ಪ್ರವಾಹ ಸೃಷ್ಟಿಯಾದಾಗ, ಈ ಹೊಳೆಯಲ್ಲೂ ನೀರು ಆವರಿಸಿ ಪಾಲ ಮುಳುಗಡೆಯಾಗುತ್ತದೆ. ಇದರಿಂದ ಸುತ್ತಮುತ್ತಲಿನ ಸಂಪರ್ಕ ಸಂಪೂರ್ಣ ಕಡಿತಗೊಳ್ಳುತ್ತದೆ.

ತೆಪ್ಪವೇ ಆಸರೆ: ಪಾಲ ಮುಳುಗಡೆಯಾದಾಗ ಅಪಾಯಕಾರಿ ರೀತಿಯಲ್ಲಿ ತೆಪ್ಪವನ್ನೇ ಬಳಸಿಕೊಂಡು ಗ್ರಾಮಸ್ಥರು ಹೊಳೆ ದಾಟಬೇಕಾದ ದುಸ್ಥಿತಿ ಇದೆ.

ಸಾಕಷ್ಟು ಕುಟುಂಬಗಳಿಗೆ ತೊಂದರೆ: ಈ ಭಾಗದಲ್ಲಿ 25ಕ್ಕೂ ಹೆಚ್ಚು ಮನೆಗಳಿದ್ದು, ದಿನನಿತ್ಯ ಶಾಲಾ-ಕಾಲೇಜು ಮಕ್ಕಳು ಹಾಗೂ ಗ್ರಾಮಸ್ಥರು ಪ್ರಾಣ ಕೈಯಲ್ಲಿ ಹಿಡಿದುಕೊಂಡು ಈ ಹೊಳೆ ದಾಟಿಯೇ ತಮ್ಮ ದೈನಂದಿನ ಕೆಲಸಗಳಿಗೆ ತೆರಳಬೇಕಾಗಿದೆ.

ಹಲವು ವರ್ಷಗಳ ಬೇಡಿಕೆ: ಇಲ್ಲಿ ಸೇತುವೆ ನಿರ್ಮಾಣ ಮಾಡಬೇಕೆಂದು ಗ್ರಾಮಸ್ಥರು ಹಲವು ವರ್ಷಗಳಿಂದ ಮನವಿ ಮಾಡುತ್ತಲೇ ಬಂದಿದ್ದಾರೆ. ಭರವಸೆಗಳು ಸಿಕ್ಕಿವೆಯೇ ಹೊರತು ಸೇತುವೆ ಭಾಗ್ಯ ಮಾತ್ರ ಇಂದಿಗೂ ಸಿಕ್ಕಿಲ್ಲ ಎಂಬುದು ಸ್ಥಳೀಯರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ಸ್ಥಳಕ್ಕೆ ಜಿ.ಕೃಷ್ಣಪ್ಪ ಭೇಟಿ, ಪರಿಶೀಲನೆ

ಇಲ್ಲಿನ ಪರಿಸ್ಥಿತಿಯ ಬಗ್ಗೆ ಸ್ಥಳೀಯರು ಕಾಂಗ್ರೆಸ್ ಮುಖಂಡ ಕರುಣಾಕರ ಗೌಡ ದೊಡ್ಡಉರ್ಕ ಅವರ ಗಮನಕ್ಕೆ ತಂದಿದ್ದರು. ವಿಷಯ ತಿಳಿದ ಜಿ.ಕೃಷ್ಣಪ್ಪ ರಾಮಕುಂಜ ಅವರು ಕರುಣಾಕರ ಗೌಡ ಅವರೊಂದಿಗೆ ಬಾಲೆಮಾರು-ಕುರ್ನೂಜಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಪಿಡಬ್ಲ್ಯುಡಿ ಇಂಜಿನಿಯರ್‌ಗೆ ಸೂಚನೆ:

ಸ್ಥಳೀಯರೊಂದಿಗೆ ಸಂಕಷ್ಟ ಆಲಿಸಿದ ಜಿ.ಕೃಷ್ಣಪ್ಪ ಅವರು, ಸೇತುವೆ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು. ಅಲ್ಲದೆ, ಸ್ಥಳದಿಂದಲೇ ಲೋಕೋಪಯೋಗಿ ಇಲಾಖೆಯ (PWD) ಇಂಜಿನಿಯರ್ ಅವರಿಗೆ ದೂರವಾಣಿ ಕರೆ ಮಾಡಿ, ತಕ್ಷಣವೇ ಸೇತುವೆ ನಿರ್ಮಾಣಕ್ಕೆ ಅಂದಾಜುಪಟ್ಟಿ (Estimate) ತಯಾರಿಸುವಂತೆ ಸೂಚನೆ ನೀಡಿದರು.

ಭೇಟಿ ವೇಳೆಯಲ್ಲಿದ್ದ ಪ್ರಮುಖರು

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಶೀನಪ್ಪ ಗೌಡ ಕುರ್ನೂಜಿ, ಶೇಖರ ಗೌಡ ಬಾಲೆಮಾರು, ಧನಂಜಯ ಗೌಡ ಬಳ್ಳೇರಿ, ಪ್ರಮೋದ್ ಗೌಡ ಬಳ್ಳೇರಿ, ಚಂದ್ರಶೇಖರ ಗೌಡ ಬಳ್ಳೇರಿ, ಚೇತನ್ ಬಳ್ಳೇರಿ, ಬಾಲಕೃಷ್ಣ ಬಳ್ಳೇರಿ, ಬಾಲಕ್ಕ ಕುರ್ನೂಜಿ, ನಳಿನಿ ಕುರ್ನೂಜಿ, ರಾಮಕ್ಕ ಬಾಲೆಮಾರು, ದೇಜಪ್ಪ ಗೌಡ ಬಾಲೆಮಾರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Continue Reading

Trending

Copyright © 2025 Deevatige

error: Content is protected !!