court
ಸರ್ಕಾರಿ ವಸತಿ ಯೋಜನೆ ಹಣ ದುರುಪಯೋಗ: ಪುತ್ತೂರಿನಲ್ಲಿ ಮೂವರು ಆರೋಪಿಗಳಿಗೆ 3 ವರ್ಷ ಜೈಲು ಶಿಕ್ಷೆ
ಪುತ್ತೂರು: ಸರ್ಕಾರದ ವಸತಿ ಯೋಜನೆಯ ಹಣವನ್ನು ನಕಲಿ ದಾಖಲೆಗಳ ಮೂಲಕ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪುತ್ತೂರಿನ ಮಾನ್ಯ ನ್ಯಾಯಾಲಯವು ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.
ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಬಾಬು ಮೇರಾ, ಜ್ಯೋತಿ ಹಾಗೂ ತನಿಯ ಮೇರಾ ಶಿಕ್ಷೆಗೊಳಗಾದ ಆರೋಪಿಗಳು. ಇವರು ಸರ್ಕಾರದ ವಸತಿ ಯೋಜನೆಯಡಿ ಮನೆ ಮಂಜೂರಾತಿಗಾಗಿ ನೀಡಲಾಗುವ 1,50,000 ರೂ. ಹಣವನ್ನು ಪಡೆಯಲು ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ವಂಚಿಸಿದ್ದರು. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2019 ರಲ್ಲಿ ಪ್ರಕರಣ (ಅ.ಕ್ರ ಸಂಖ್ಯೆ: 57/2019) ದಾಖಲಾಗಿತ್ತು. ಪುತ್ತೂರು ಗ್ರಾಮಾಂತರ ಠಾಣೆಯ ಅಂದಿನ ಪೊಲೀಸ್ ಉಪ ನಿರೀಕ್ಷಕರುಗಳಾದ ಉದಯರವಿ ಮತ್ತು ಸಕ್ತಿವೇಲು ಅವರು ಪ್ರಕರಣದ ತನಿಖೆ ನಡೆಸಿ, ಭದ್ರ ಸಾಕ್ಷ್ಯಾಧಾರಗಳೊಂದಿಗೆ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಕುಮಾರಿ ಚೇತನಾ ದೇವಿ ಅವರು ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪಿಗಳ ಮೇಲಿನ ಸಾಕ್ಷ್ಯಗಳು ಸಾಬೀತಾದ ಹಿನ್ನೆಲೆಯಲ್ಲಿ ಮೂವರು ಆರೋಪಿಗಳಿಗೆ 3 ವರ್ಷಗಳ ಜೈಲು ಶಿಕ್ಷೆ, ತಲಾ 5,000 ರೂಪಾಯಿ ದಂಡ ಮತ್ತು ದಂಡ ಪಾವತಿಸಲು ತಪ್ಪಿದಲ್ಲಿ ಹೆಚ್ಚುವರಿ 3 ತಿಂಗಳ ಸಾದಾ ಕಾರಾವಾಸ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.
ಸರ್ಕಾರಿ ಸೌಲಭ್ಯಗಳನ್ನು ದುರುಪಯೋಗಪಡಿಸಿಕೊಳ್ಳುವವರಿಗೆ ಈ ತೀರ್ಪು ಒಂದು ಎಚ್ಚರಿಕೆಯ ಗಂಟೆಯಾಗಿದೆ.
Belthangady
ಬಂಗ್ಲೆಗುಡ್ಡೆ ಅಸ್ಥಿಪಂಜರ ರಹಸ್ಯ ಭೇದಿಸಿದ ಎಸ್‌ಐಟಿ: ಮೂವರ ಡಿಎನ್‌ಎ ಕುಟುಂಬದ ಮಾದರಿಗೆ ತಾಳೆ, ಎಫ್‌ಎಸ್‌ಎಲ್ ದೃಢೀಕರಣ!
ಬೆಳ್ತಂಗಡಿ: ತಾಲೂಕಿನ ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾಗಿದ್ದ ಅಸ್ಥಿಪಂಜರಗಳ ತನಿಖೆಯಲ್ಲಿ ವಿಶೇಷ ತನಿಖಾ ತಂಡಕ್ಕೆ (SIT) ಪ್ರಮುಖ ಮೈಲಿಗಲ್ಲು ಸಿಕ್ಕಿದೆ. ಪತ್ತೆಯಾಗಿದ್ದ ಅಸ್ಥಿಪಂಜರಗಳ ಪೈಕಿ ಒಟ್ಟು ಮೂರು ವ್ಯಕ್ತಿಗಳ ಡಿಎನ್‌ಎ (DNA) ಮಾದರಿಯು ಅವರ ಕುಟುಂಬಸ್ಥರ ರಕ್ತದ ಮಾದರಿಗೆ ಸಂಪೂರ್ಣವಾಗಿ ತಾಳೆಯಾಗಿದೆ ಎಂದು ವಿಧಿವಿಜ್ಞಾನ ಪ್ರಯೋಗಾಲಯ (FSL) ದೃಢಪಡಿಸಿದೆ.
ಈ ಕುರಿತು ಎಸ್‌ಐಟಿ ಅಧಿಕಾರಿಗಳು ಜುಲೈ 15 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಅಂತಿಮ ವರದಿಯಲ್ಲಿ ಪ್ರಮುಖ ವಿಚಾರವನ್ನು ಉಲ್ಲೇಖಿಸಿದ್ದಾರೆ.
ಶೋಧ ಕಾರ್ಯಾಚರಣೆ ಮತ್ತು ಗುರುತಿನ ಪತ್ತೆ
2025ರ ಸೆಪ್ಟೆಂಬರ್ 17 ಮತ್ತು 18 ರಂದು ಎಸ್‌ಐಟಿ ಅಧಿಕಾರಿಗಳು ಬಂಗ್ಲೆಗುಡ್ಡೆಯಲ್ಲಿ ಸುದೀರ್ಘ ಶೋಧ ಕಾರ್ಯಾಚರಣೆ ನಡೆಸಿ, ಒಟ್ಟು ಏಳು ಅಸ್ಥಿಪಂಜರಗಳನ್ನು ವಶಪಡಿಸಿಕೊಂಡು ಎಫ್‌ಎಸ್‌ಎಲ್ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದರು.
ಅಸ್ಥಿಪಂಜರಗಳು ಪತ್ತೆಯಾದ ಸ್ಥಳದಲ್ಲಿ ಸಿಕ್ಕಿದ್ದ ಕೆಲವು ಗುರುತಿನ ಚೀಟಿಗಳ (ID Cards) ಆಧಾರದ ಮೇಲೆ ಎಸ್‌ಐಟಿ ತಂಡವು ಸಂಬಂಧಪಟ್ಟ ಕುಟುಂಬಸ್ಥರನ್ನು ಪತ್ತೆಹಚ್ಚಿತ್ತು. ಬಳಿಕ ಬೆಳ್ತಂಗಡಿ ನ್ಯಾಯಾಲಯದ ಅನುಮತಿ ಪಡೆದು ಕುಟುಂಬಸ್ಥರ ರಕ್ತದ ಮಾದರಿ ಸಂಗ್ರಹಿಸಿ ಡಿಎನ್‌ಎ ಪರೀಕ್ಷೆಗೆ ರವಾನಿಸಲಾಗಿತ್ತು. ಇದೀಗ ಬಂದಿರುವ ವೈಜ್ಞಾನಿಕ ವರದಿಯಲ್ಲಿ ಮೂವರ ಡಿಎನ್‌ಎ ಸಂಪೂರ್ಣವಾಗಿ ತಾಳೆಯಾಗಿದೆ.
ಪತ್ತೆಯಾದ ಮೃತರ ವಿವರ ಮತ್ತು ಹಿನ್ನೆಲೆ
ಯು.ಬಿ. ಅಯ್ಯಪ್ಪ (70 ವರ್ಷ): ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಟಿ.ಶೆಟ್ಟಿಗೇರಿ ಗ್ರಾಮದ ನಿವಾಸಿ. ಇವರು 2017ರ ಜೂನ್ 25ರಂದು ಮೈಸೂರಿನ ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಿದ್ದಾಗ ನಾಪತ್ತೆಯಾಗಿದ್ದರು. ಈ ಸಂಬಂಧ ಕುಟ್ಟ ವೃತ್ತದ ಶ್ರೀಮಂಗಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಆದಿಶೇಷ ನಾರಾಯಣ (27 ವರ್ಷ): ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದಾಸರಕಲ್ಲಹಳ್ಳಿ ನಿವಾಸಿ. ಬೆಂಗಳೂರಿನ ಬಾರ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಈತ, 2013ರ ಅಕ್ಟೋಬರ್ 2ರಂದು ಮನೆಗೆ ಬಂದು ಮೊಬೈಲ್ ಇಟ್ಟು ಮತ್ತೆ ನಾಪತ್ತೆಯಾಗಿದ್ದ. ಈತ ಪದೇ ಪದೇ ಮನೆಯಿಂದ ತೆರಳಿ ವಾಪಸ್ ಬರುತ್ತಿದ್ದ ಕಾರಣ ಕುಟುಂಬಸ್ಥರು ಠಾಣೆಗೆ ದೂರು ನೀಡಿರಲಿಲ್ಲ.
ಕೃಷ್ಣಪ್ಪ (85 ವರ್ಷ): ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮೀಸಗಾಣಹಳ್ಳಿ ನಿವಾಸಿ. ವಯೋಸಹಜ ಸ್ಥಿತಿಯಲ್ಲಿದ್ದ ಇವರು 2024ರ ಅಕ್ಟೋಬರ್ 22ರಂದು ಏಕಾಏಕಿ ಮನೆಯಿಂದ ಹೊರಹೋಗಿ ವಾಪಸ್ ಬಂದಿರಲಿಲ್ಲ. ಈ ಕುರಿತು ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಅಸ್ಥಿಪಂಜರ ಹಸ್ತಾಂತರಕ್ಕೆ ಕಾನೂನು ಪ್ರಕ್ರಿಯೆ
ಡಿಎನ್‌ಎ ವರದಿ ದೃಢಪಟ್ಟಿರುವ ಹಿನ್ನೆಲೆಯಲ್ಲಿ, ಮೃತರ ಮೂರು ಕುಟುಂಬಗಳ ಸದಸ್ಯರು ಎಸ್‌ಐಟಿಗೆ ಅಧಿಕೃತವಾಗಿ ಮನವಿ ಸಲ್ಲಿಸಿದರೆ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಅಸ್ಥಿಪಂಜರಗಳನ್ನು ಆಯಾ ಕುಟುಂಬಗಳಿಗೆ ಹಸ್ತಾಂತರಿಸಲು ಅವಕಾಶ ಕಲ್ಪಿಸಲಾಗಿದೆ.
ಸ್ಥಳದಲ್ಲಿ ಪತ್ತೆಯಾದ ಇನ್ನುಳಿದ ಅಸ್ಥಿಪಂಜರಗಳ ತನಿಖೆ ಹಾಗೂ ಪ್ರಕರಣದ ಇತರ ಸಂಶಯಾಸ್ಪದ ಆಯಾಮಗಳ ಕುರಿತು ಎಸ್‌ಐಟಿ ಅಧಿಕಾರಿಗಳು ಸುದೀರ್ಘ ಪರಿಶೀಲನೆ ಮುಂದುವರಿಸಿದ್ದಾರೆ.
Belthangady
ಅಪಾಯಕಾರಿ ಮರದ ಕಾಲುಸಂಕ ಪ್ರದೇಶಕ್ಕೆ ಬೆಳ್ತಂಗಡಿ ನ್ಯಾಯಾಧೀಶರ ಭೇಟಿ: ಶೀಘ್ರ ವರದಿ ನೀಡಲು ಪಂಚಾಯತ್ ಅಧಿಕಾರಿಗೆ ಸೂಚನೆ
ಬೆಳ್ತಂಗಡಿ: ತಾಲೂಕಿನ ಲಾಯಿಲ ಗ್ರಾಮದ ಬರೆಮೇಲು ನಡುಗುಡ್ಡೆ ಎಂಬಲ್ಲಿರುವ ಅಪಾಯಕಾರಿ ಸ್ಥಿತಿಯಲ್ಲಿರುವ ಮರದ ಕಾಲುಸಂಕದ ಪ್ರದೇಶಕ್ಕೆ ಬೆಳ್ತಂಗಡಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರಾದ ಮನು ಬಿ.ಕೆ. ಮತ್ತು ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಸದಸ್ಯ ಕಾರ್ಯದರ್ಶಿಯಾದ ರಾಮಲಿಂಗಪ್ಪ ಅವರು ಭಾನುವಾರ ಸಂಜೆ ದಿಢೀರ್ ಭೇಟಿ ನೀಡಿ ವೀಕ್ಷಣೆ ನಡೆಸಿದರು.
ಕಳೆದ ಬುಧವಾರ ನಡೆದ ಲಾಯಿಲ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳ ವಿಶೇಷ ಗ್ರಾಮಸಭೆಯಲ್ಲಿ ಈ ಕಾಲುಸಂಕದ ಬಗ್ಗೆ ವ್ಯಾಪಕ ಚರ್ಚೆ ನಡೆದಿತ್ತು. ಈ ಕುರಿತು ಮಾಧ್ಯಮಗಳಲ್ಲಿ ವರದಿ ಪ್ರಕಟಗೊಂಡ ಬೆನ್ನಲ್ಲೇ, ಶುಕ್ರವಾರ ಅಧಿಕಾರಿಗಳ ದಂಡು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿತ್ತು. ಇದೀಗ ನ್ಯಾಯಾಧೀಶರುಗಳೇ ಸ್ವತಃ ಸ್ಥಳಕ್ಕೆ ಆಗಮಿಸಿ, ಅಲ್ಲಿನ ಭೀಕರ ಪರಿಸ್ಥಿತಿಯನ್ನು ಖುದ್ದಾಗಿ ವೀಕ್ಷಿಸಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದರು.

ಸೋಮವಾರ ಮಧ್ಯಾಹ್ನದೊಳಗೆ ವರದಿಗೆ ಸೂಚನೆ: ಈ ಕಾಲುಸಂಕವನ್ನೇ ನಿತ್ಯ ಅವಲಂಬಿಸಿರುವ ಕುಟುಂಬಗಳ ಸಮಗ್ರ ಮಾಹಿತಿಯೊಂದಿಗೆ, ಈ ವ್ಯಾಪ್ತಿಯಲ್ಲಿರುವ ಹಿರಿಯ ನಾಗರಿಕರು, ವಿದ್ಯಾರ್ಥಿಗಳು, ವಿಶೇಷ ಚೇತನರು ಹಾಗೂ ವಿಧವೆಯರ ಪ್ರತ್ಯೇಕ ಪಟ್ಟಿ ಮತ್ತು ಮಾಹಿತಿಯನ್ನು ಸಂಗ್ರಹಿಸಿ, ಸೋಮವಾರ ಮಧ್ಯಾಹ್ನದೊಳಗೆ ವರದಿ ಸಲ್ಲಿಸುವಂತೆ ಲಾಯಿಲ ಗ್ರಾಮ ಪಂಚಾಯತ್ ಪಿಡಿಒ ಹಾಗೂ ಗ್ರಾಮಾಡಳಿತಾಧಿಕಾರಿಗೆ ನ್ಯಾಯಾಧೀಶರು ಸ್ಥಳದಲ್ಲೇ ಖಡಕ್ ಸೂಚನೆ ನೀಡಿದರು.
ವರ್ಷಗಳಿಂದ ಅಭಿವೃದ್ಧಿಯಿಂದ ವಂಚಿತವಾಗಿರುವ ಬರೆಮೇಲು ನಡುಗುಡ್ಡೆ ಭಾಗಕ್ಕೆ ನ್ಯಾಯಾಧೀಶರು ಭೇಟಿ ನೀಡಿ ಆಡಳಿತಕ್ಕೆ ನಿರ್ದೇಶನ ನೀಡಿರುವುದರಿಂದ, ಈ ಭಾಗದ ಜನರ ಬಹುಕಾಲದ ಸುಸಜ್ಜಿತ ಸೇತುವೆಯ ಬೇಡಿಕೆ ಶೀಘ್ರವೇ ಈಡೇರಲಿದೆ ಎಂಬ ಆಶಾಭಾವನೆ ಸಾರ್ವಜನಿಕರಲ್ಲಿ ಮೂಡಿದೆ.

ಈ ಸಂದರ್ಭದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆನಂದ, ಉಪ ತಹಶೀಲ್ದಾರ್ ಮಲ್ಲಪ್ಪ ನಡುಗಡ್ಡಿ, ವೇಣೂರು ಹೋಬಳಿ ಕಂದಾಯ ನಿರೀಕ್ಷಕ ಕುಮಾರಸ್ವಾಮಿ, ತಾಲೂಕು ಕಾನೂನು ಸೇವೆಗಳ ಸಮಿತಿಯ ಸಿಬ್ಬಂದಿ ಯಲ್ಲಪ್ಪ ಹಂಗರಗಿ, ಲಾಯಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ತಾರಾನಾಥ ನಾಯ್ಕ್, ಗ್ರಾಮಾಡಳಿತಾಧಿಕಾರಿ ರನಿತಾ, ಮಾಜಿ ಗ್ರಾಮ ಪಂಚಾಯತ್ ಸದಸ್ಯ ಪ್ರಸಾದ್ ಶೆಟ್ಟಿ ಏಣಿಂಜೆ, ದಲಿತ ಮುಖಂಡ ಶೇಖರ್ ಲಾಯಿಲ ಹಾಗೂ ಗ್ರಾಮ ಸಹಾಯಕ ಸತೀಶ್ ಹೆಗ್ಡೆ ಉಪಸ್ಥಿತರಿದ್ದರು.
court
ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ: ಮನೀಷ್‌ಗೆ ಹೈಕೋರ್ಟ್‌ನಿಂದ ಬೇಲ್
ಪುತ್ತೂರು, ಜು. 26: ಬಹುಚರ್ಚಿತ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಗಳಲ್ಲೊಬ್ಬನಾದ ಮನೀಷ್‌ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ಜಸ್ಟಿಸ್ ವಿಶ್ವಜಿತ್ ಶೆಟ್ಟಿ ಅವರು ಎರಡೂ ಪಕ್ಷಗಳ ವಾದ-ಪ್ರತಿವಾದ ಆಲಿಸಿದ ಬಳಿಕ, ನಿಗದಿತ ಷರತ್ತುಗಳೊಂದಿಗೆ ಜಾಮೀನು ನೀಡುವಂತೆ ಆದೇಶಿಸಿದ್ದಾರೆ.
ನ್ಯಾಯಾಲಯದ ಆದೇಶದಲ್ಲಿ ಜಾಮೀನು ಮಂಜೂರು ಮಾಡಿರುವುದು ಆರೋಪಿಯನ್ನು ನಿರ್ದೋಷಿ ಎಂದು ಘೋಷಿಸಿದಂತಲ್ಲ. ಪ್ರಕರಣದ ಅಂತಿಮ ವಿಚಾರಣೆ ಪೂರ್ಣಗೊಳ್ಳುವವರೆಗೆ ಆರೋಪಿಗೆ ಕಾನೂನುಬದ್ಧ ಹಕ್ಕುಗಳ ಅನ್ವಯ ನ್ಯಾಯಯುತ ಅವಕಾಶ ದೊರಕಬೇಕು ಎಂಬ ಸಂವಿಧಾನಾತ್ಮಕ ತತ್ವದ ಆಧಾರದ ಮೇಲೆ ಜಾಮೀನು ನೀಡಲಾಗಿದೆ.
ಹೈಕೋರ್ಟ್‌ನ ಆದೇಶವನ್ನು ಮನೀಷ್ ಕುಟುಂಬಸ್ಥರು ಹಾಗೂ ಆಪ್ತರು ಸ್ವಾಗತಿಸಿದ್ದು, ಪ್ರಕರಣದ ಸಂಪೂರ್ಣ ಸತ್ಯ ನ್ಯಾಯಾಲಯದ ಮುಂದೆ ಹೊರಬಂದು ಅಂತಿಮವಾಗಿ ನ್ಯಾಯ ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತನಿಖೆಗೆ ಸಂಪೂರ್ಣ ಸಹಕಾರ ನೀಡುವುದರ ಜೊತೆಗೆ ನ್ಯಾಯಾಲಯ ವಿಧಿಸಿರುವ ಎಲ್ಲ ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದಾಗಿ ತಿಳಿಸಿದ್ದಾರೆ.
ರಾಜ್ಯಾದ್ಯಂತ ಗಮನ ಸೆಳೆದಿರುವ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ನೀಡಿರುವ ಈ ಜಾಮೀನು ಆದೇಶವು ಮುಂದಿನ ನ್ಯಾಯಾಂಗ ಪ್ರಕ್ರಿಯೆಯಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗಿದೆ. ಪ್ರಕರಣದ ಅಂತಿಮ ತೀರ್ಪು ನ್ಯಾಯಾಲಯದ ವಿಚಾರಣೆ ಬಳಿಕವೇ ಹೊರಬರಲಿದ್ದು, ಅದರತ್ತ ಎಲ್ಲರ ಗಮನ ನೆಟ್ಟಿದೆ.
2023 ನವೆಂಬರ್ 6ರಂದು ಅಕ್ಷಯ್ ಕಲ್ಲೇಗ ಅವರ ಕೊಲೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ 4 ಜನರ ಮೇಲೆ ಪ್ರಕರಣ ದಾಖಲಾಗಿತ್ತು. ಕೊಲೆಯಾದ ಅಕ್ಷಯ್ ಕಲ್ಲೇಗ ಅವರ ಗೆಳೆಯರೇ ಈ ಕೃತ್ಯ ಎಸಗಿದ್ದಾರೆಂದು ಈ ಪ್ರಕರಣದಲ್ಲಿ ಮನೀಷ್, ಚೇತನ್, ಮಂಜುನಾಥ್ ಮತ್ತು ಕೇಶವ ಎಂಬವರನ್ನು ಪೊಲೀಸರು ಬಂಧಿಸಿದ್ದರು.
-
Bantawala3 weeks agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime6 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime4 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala4 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
accident2 weeks agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
Bantawala7 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Bantawala4 weeks agoಮಂಚಿ ಮೋಂತಿಮಾರು: ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಕತ್ತಿಯಿಂದ ಮಾರಣಾಂತಿಕ ದಾಳಿ; ಯುವತಿ ಗಂಭೀರ
