Connect with us

accident

ಛಲಬಿಡದ ಕುಸುಮ: ಅಪಘಾತದಲ್ಲಿ ಕಾಲು ಕಳೆದುಕೊಂಡರೂ ಸ್ಟ್ರೆಚರ್ ಮೇಲೆ ಮಲಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ!‌

Published

on

ರಾಜ್ಯಾದ್ಯಂತ ಇಂದಿನಿಂದ (ಮಾರ್ಚ್ 18) ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಿದ್ದು, ಕೋಲಾರ ಜಿಲ್ಲೆಯ ಕೆಜಿಎಫ್‌ನಲ್ಲಿ ವಿದ್ಯಾರ್ಥಿನಿಯೊಬ್ಬಳ ಅಪ್ರತಿಮ ಸಾಹಸ ಮತ್ತು ಓದಿನ ಮೇಲಿನ ಆಸಕ್ತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಅಪಘಾತದಲ್ಲಿ ಕಾಲು ಕಳೆದುಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ, ವಿದ್ಯಾರ್ಥಿನಿ ಕುಸುಮ ಆಂಬ್ಯುಲೆನ್ಸ್‌ನಲ್ಲಿ ಬಂದು ಸ್ಟ್ರೆಚರ್ ಮೇಲೆ ಮಲಗಿಯೇ ಪರೀಕ್ಷೆ ಬರೆಯುವ ಮೂಲಕ ಇತರರಿಗೆ ಮಾದರಿಯಾಗಿದ್ದಾಳೆ.


ಕೆಜಿಎಫ್ ತಾಲೂಕಿನ ಚಿನ್ನನಾಗನಹಳ್ಳಿ ನಿವಾಸಿಯಾಗಿರುವ ಕುಸುಮ, ಇತ್ತೀಚೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತನ್ನ ಕಾಲನ್ನು ಕಳೆದುಕೊಂಡಿದ್ದಳು. ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಈಕೆಗೆ ಪರೀಕ್ಷೆ ಬರೆಯುವುದು ಅಸಾಧ್ಯ ಎಂದು ಹಲವರು ಭಾವಿಸಿದ್ದರು. ಆದರೆ, ದೈಹಿಕ ನೋವಿಗಿಂತ ಓದಿನ ಗುರಿಯೇ ದೊಡ್ಡದೆಂದು ಭಾವಿಸಿದ ಕುಸುಮ, ಪರೀಕ್ಷೆಗೆ ಹಾಜರಾಗಲು ನಿರ್ಧರಿಸಿದಳು.ಆಂಬ್ಯುಲೆನ್ಸ್‌ನಲ್ಲಿ ಆಗಮನ: ತಾಯಿಯ ಜೊತೆಗೂಡಿ ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ಮೂಲಕ ಪರೀಕ್ಷಾ ಕೇಂದ್ರಕ್ಕೆ ಬಂದಳು.
ಸ್ಟ್ರೆಚರ್ ಮೇಲೆ ಪರೀಕ್ಷೆ:
ಕೆಜಿಎಫ್‌ನ ಸೆಂಟ್ ಜೋಸೆಫ್ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಬಿಇಒ ಅವರ ವಿಶೇಷ ಅನುಮತಿಯ ಮೇರೆಗೆ, ಸ್ಟ್ರೆಚರ್ ಬೆಡ್ ಮೇಲೆ ಮಲಗಿಯೇ ಪರೀಕ್ಷೆ ಬರೆದಳು. ವಿದ್ಯಾರ್ಥಿನಿಯ ಈ ದಿಟ್ಟತನವನ್ನು ಕಂಡು ಸಹಪಾಠಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಭಾವುಕರಾದರು ಮತ್ತು ಆಕೆಯ ಛಲವನ್ನು ಮುಕ್ತಕಂಠದಿಂದ ಶ್ಲಾಘಿಸಿದರು.


ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಸಂಭ್ರಮ:
ಇಂದಿನಿಂದ ಆರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಏಪ್ರಿಲ್ 2 ರವರೆಗೆ ನಡೆಯಲಿವೆ. ಈ ವರ್ಷದ ಪರೀಕ್ಷೆಯಲ್ಲಿ ಒಟ್ಟು ವಿದ್ಯಾರ್ಥಿಗಳು 8,65,988 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಭದ್ರತೆ ಒದಗಿಸಿದೆ. ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಸುವ್ಯವಸ್ಥಿತವಾಗಿ ಪರೀಕ್ಷೆಗಳು ನಡೆಯುತ್ತಿದೆ.

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

accident

ಮಾಣಿ ಸಮೀಪ ನಿಯಂತ್ರಣ ತಪ್ಪಿ ಚರಂಡಿಗೆ ಜಿಗಿದ ಇನ್ನೋವಾ ಕಾರು;ತಪ್ಪಿದ ಭೀಕರ ಪ್ರಾಣಾಪಾಯ

Published

on

ಮಾಣಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಅಳಿರಾ ಎಂಬಲ್ಲಿ ಇಂದು ಮಧ್ಯಾಹ್ನ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಂದು ಮಧ್ಯಾಹ್ನ ಸುಮಾರು 2 ಗಂಟೆಯ ವೇಳೆಗೆ ಈ ಘಟನೆ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಫುಟ್‌ಪಾತ್ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆ ಬದಿಯ ಆಳವಾದ ಚರಂಡಿಯನ್ನು ಜಿಗಿದು, ಪಕ್ಕದಲ್ಲಿದ್ದ ಬಾಳೆ ಗಿಡಗಳ ಗುಂಟೆಗೆ ಬಡಿದು ನಿಂತಿದೆ.

ಅದೃಷ್ಟವಶಾತ್ ಬಚಾವ್

ಅಪಘಾತದ ಸಮಯದಲ್ಲಿ ಕಾರಿನಲ್ಲಿ ನಾಲ್ಕು ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಆದರೆ, ಅಪಘಾತದ ತೀವ್ರತೆಗೆ ಇನ್ನೋವಾ ಕಾರಿನ ಮುಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಸದ್ಯ ಕ್ರೇನ್ ಮುಖಾಂತರ ಕಾರನ್ನು ಮೇಲಕ್ಕೆತ್ತಿ ರಸ್ತೆಗೆ ತರುವ ಕಾರ್ಯಾಚರಣೆ ನಡೆಯುತ್ತಿದೆ.

ಒಂದೇ ದಿನ ಎರಡು ಅಪಘಾತ: ಸವಾರರಲ್ಲಿ ಆತಂಕ

ಇದೇ ರಾಷ್ಟ್ರೀಯ ಹೆದ್ದಾರಿಯ ಕೇವಲ 3 ಕಿಲೋಮೀಟರ್ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆಯಷ್ಟೇ ಮತ್ತೊಂದು ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಚಾಲಕ ಮೃತಪಟ್ಟ ಘಟನೆ ನಡೆದಿತ್ತು. ಈ ಬೆನ್ನಲ್ಲೇ ಮಧ್ಯಾಹ್ನ ಮತ್ತೊಂದು ಭೀಕರ ಅಪಘಾತ ಸಂಭವಿಸಿರುವುದು ಸ್ಥಳೀಯ ಹಾಗೂ ಹೆದ್ದಾರಿ ಪ್ರಯಾಣಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಮಾಣಿ ಪರಿಸರದಲ್ಲಿ ಹೆದ್ದಾರಿ ಸಂಚಾರದ ವೇಳೆ ಚಾಲಕರು ಹೆಚ್ಚಿನ ಜಾಗ್ರತೆ ವಹಿಸುವ ಅಗತ್ಯವಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.




Continue Reading

accident

ಗಡಿಯಾರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು; ನಾಲ್ವರಿಗೆ ಗಂಭೀರ ಗಾಯ, ಚಾಲಕ ದುರ್ಮರಣ

Published

on

ಬಂಟ್ವಾಳ/ಉಪ್ಪಿನಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಮತ್ತು ಉಪ್ಪಿನಂಗಡಿ ಮಧ್ಯದ ಗಡಿಯಾರ ಎಂಬಲ್ಲಿ ಇಂದು ಮಧ್ಯಾಹ್ನ ಭೀಕರ ಕಾರು ಅಪಘಾತವೊಂದು ಸಂಭವಿಸಿದ್ದು, ಚಾಲಕ ಸಾವನ್ನಪ್ಪಿದ್ದಾರೆ. ಮಂಗಳೂರಿನಿಂದ ಹಾಸನ ಕಡೆಗೆ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ.

ಹೆದ್ದಾರಿಯಲ್ಲಿ ಕೇಳಿಬಂದ ಭೀಕರ ಸದ್ದು: ಮಧ್ಯಾಹ್ನ ಸುಮಾರು 12 ಗಂಟೆಯ ವೇಳೆಗೆ ಈ ಘಟನೆ ನಡೆದಿದ್ದು, ಡಿಕ್ಕಿಯ ರಭಸಕ್ಕೆ ದೊಡ್ಡ ಮಟ್ಟದ ಸದ್ದು ಕೇಳಿಬಂದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕಾರು (ನಂಬರ್: KA 12 N 6668) ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಸದ್ದು ಕೇಳಿ ಸ್ಥಳೀಯರು ಹಾಗೂ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಸಾರ್ವಜನಿಕರು ತಕ್ಷಣವೇ ಸ್ಥಳಕ್ಕೆ ಧಾವಿಸಿ, ಕಾರಿನಲ್ಲಿದ್ದವರ ರಕ್ಷಣೆಗೆ ಮುಂದಾಗಿದ್ದಾರೆ.

ಹಾಸನ ಮೂಲದ ಪ್ರಯಾಣಿಕರು: ಕಾರಿನಲ್ಲಿ ಹಾಸನ ಮೂಲದ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಅಪಘಾತದಲ್ಲಿ ನಾಲ್ವರಿಗೂ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಪೈಕಿ ಕಾರು ಚಾಲಕನ ಸ್ಥಿತಿ ಅತ್ಯಂತ ಚಿಂತಾಜನಕವಾಗಿದ್ದು ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವುದಾಗಿ ಮಾಹಿತಿ ಲಭ್ಯವಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ. ಗಾಯಾಳುಗಳ ಸಂಪೂರ್ಣ ವಿವರ ಹಾಗೂ ಅಪಘಾತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.




Continue Reading

accident

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿದ ಕಾರು; ಮೂವರಿಗೆ ಗಾಯ

Published

on

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಬದಿಯ ಆಳವಾದ ಚರಂಡಿಗೆ ಬಿದ್ದ ಘಟನೆ ಬೆಳ್ತಂಗಡಿ ಸಮೀಪದ ರಾಷ್ಟ್ರೀಯ ಹೆದ್ದಾರಿಯ ಕಾಶಿಬೆಟ್ಟು ಎಂಬಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.

ಅಪಘಾತದ ಸಮಯದಲ್ಲಿ ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದು, ಕಾರು ನಿಯಂತ್ರಣ ತಪ್ಪಿ ನೇರವಾಗಿ ಚರಂಡಿಗೆ ಇಳಿದಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ಮೂವರಿಗೂ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಜಖಂಗೊಂಡಿದೆ. ಸ್ಥಳಕ್ಕೆ ಸ್ಥಳೀಯರು ಧಾವಿಸಿ ಗಾಯಾಳುಗಳ ರಕ್ಷಣೆಗೆ ನೆರವಾಗಿದ್ದಾರೆ. ಸ್ಥಳೀಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Continue Reading

Trending

Copyright © 2025 Deevatige

error: Content is protected !!