Connect with us

INCIDENT

ಸಿಡಿಲು ಬಡಿದು ಯುವಕ ದುರ್ಮರಣ: ಸಿಂಧನೂರಿನ ಸಾಲಗುಂದಾದಲ್ಲಿ ನಡೆದ ಘಟನೆ

Published

on

ಸಿಂಧನೂರು ತಾಲೂಕಿನ ಸಾಲಗುಂದಾ ಗ್ರಾಮದ ಹೊರವಲಯದ ಹೊಲದಲ್ಲಿ ಮಂಗಳವಾರ ಸಿಡಿಲು ಬಡಿದು ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.ಸಾಲಗುಂದಾ ಗ್ರಾಮದ ನಿವಾಸಿ ಮಂಜುನಾಥ ಕರಿಯಪ್ಪ (25) ಎಂಬವರೇ ಮೃತಪಟ್ಟ ದುರ್ದೈವಿ.

ಗ್ರಾಮದ ಹೊರವಲಯದಲ್ಲಿ ಹಾಕಲಾಗಿದ್ದ ಕುರಿ ಹಟ್ಟಿಯಿಂದ ಊಟ ತರಲೆಂದು ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಹಾದಿ ಮಧ್ಯೆ ಏಕಾಏಕಿ ಸಿಡಿಲು ಬಡಿದ ಪರಿಣಾಮ ಯುವಕ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಘಟನೆಯ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯ ಪೊಲೀಸರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಹೆಚ್ಚಿನ ಪ್ರಕ್ರಿಯೆಗಾಗಿ ನಗರದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಕುರಿತು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತನ ಕುಟುಂಬದಲ್ಲಿ ಶೋಕದ ಛಾಯೆ ಆವರಿಸಿದೆ.

Continue Reading
Advertisement

Belthangady

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ: ಬೆಳ್ತಂಗಡಿಯಲ್ಲಿ ಸಿಐಡಿ ತನಿಖೆ ಆರಂಭ

Published

on

ಬೆಳ್ತಂಗಡಿ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರ ವಿರುದ್ಧ ಕೇಳಿಬಂದಿರುವ ಗಂಭೀರ ಅತ್ಯಾಚಾರ ಹಾಗೂ ಸುಲಿಗೆ ಆರೋಪದ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ದಳ (ಸಿಐಡಿ) ಚುರುಕುಗೊಳಿಸಿದೆ. ಇಂದು ಸಿಐಡಿ ಅಧಿಕಾರಿಗಳ ತಂಡ ಬೆಳ್ತಂಗಡಿಗೆ ಆಗಮಿಸಿ ಪ್ರಕರಣದ ಪ್ರಾಥಮಿಕ ವಿಚಾರಣೆ ನಡೆಸುವ ಮೂಲಕ ಅಧಿಕೃತವಾಗಿ ತನಿಖೆ ಆರಂಭಿಸಿದೆ.

ಪ್ರಕರಣದ ಹಿನ್ನೆಲೆ:
ಬೆಳ್ತಂಗಡಿ ತಾಲೂಕಿನ ಕಾಲೇಜೊಂದರ ಪ್ರಾಂಶುಪಾಲರೊಬ್ಬರು ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. 2020 ರಿಂದ 2023ರ ಅವಧಿಯಲ್ಲಿ ಜಮೀನು ವಿವಾದವೊಂದರ ವಿಚಾರಣೆಯ ನೆಪದಲ್ಲಿ ತನ್ನ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಸಂತ್ರಸ್ತೆ ಆರೋಪಿಸಿದ್ದರು. ಅಷ್ಟೇ ಅಲ್ಲದೆ, ಕೇಸ್ ಮರುಚಾಲನೆ ಮಾಡುವ ಬೆದರಿಕೆ ಹಾಕಿ ಸುಮಾರು 16 ಲಕ್ಷ ರೂ. ನಗದು, 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಮನೆ ನಿರ್ಮಾಣಕ್ಕಾಗಿ ತೇಗದ ಮರದ ದಿಮ್ಮಿಗಳನ್ನು ಪಡೆದುಕೊಂಡಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿತ್ತು.

ಈ ಪ್ರಕರಣವು ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾದ ಬೆನ್ನಲ್ಲೇ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಸೂಚನೆಯಂತೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು. ಈಗಾಗಲೇ ಸಂದೇಶ್ ಪಿ.ಜಿ. ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ.

ಮಾರ್ಚ್‌ 25ರಂದು ವೇಣೂರು ಪೊಲೀಸ್‌ ಠಾಣೆಯಿಂದ ಬೆಂಗಳೂರು ಸಿಐಡಿ ಕಚೇರಿಗೆ ಪ್ರಕರಣದ ದಾಖಲೆಗಳನ್ನು ಹಸ್ತಾಂತರಿಸಿದ್ದು, ಸಿಐಡಿ ಡಿವೈಎಸ್‌ಪಿ ನೇತೃತ್ವದ ತಂಡವು ಮಾರ್ಚ್‌ 31ರಂದು ಸಂಜೆ ನಾರಾವಿ ಐಬಿಗೆ ಆಗಮಿಸಿದೆ. ಇಂದು ವೇಣೂರು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದು, ಸಿಐಡಿ ತಂಡವು ಸಂತ್ರಸ್ತೆಯ ಹೇಳಿಕೆ ಪಡೆಯುವುದು, ಸ್ಥಳಗಳ ಪರಿಶೀಲನೆ ಹಾಗೂ ಸಾಕ್ಷ್ಯಾಧಾರಗಳ ಸಂಗ್ರಹಣೆಯ ಮೇಲೆ ತನಿಖೆ ಕೈಗೆತ್ತಿಕೊಳ್ಳಲಿದೆ. ಈ ಪ್ರಕರಣದಲ್ಲಿ ಇನ್ನು ಹೆಚ್ಚಿನ ಸಂತ್ರಸ್ತರು ಇದ್ದಾರೆಯೇ ಎಂಬ ಆಯಾಮದಲ್ಲೂ ತನಿಖೆ ನಡೆಸಲಿದೆ.

Continue Reading

crime

ವಿಟ್ಲ ಜಾತ್ರಾ ಟೆಂಡರ್ ಗೋಲ್ಮಾಲ್; ಮಹೇಶ್ ದಾಸ್ ಕಪ್ಪು ಪಟ್ಟಿಗೆ ? ‘ಕಪ್ಪು ಪಟ್ಟಿ’ (Blacklist) ಗೆ ಸೇರಿಸಲು ಒಮ್ಮತದ ನಿರ್ಣಯ

Published

on

ಪ್ರಸಿದ್ಧ ವಿಟ್ಲ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಟೆಂಡರ್ ಪಡೆದಿದ್ದ ಮಹೇಶ್ ದಾಸ್ ಎಂಬಾತ ಭಾರೀ ಅವ್ಯವಹಾರ ಎಸಗಿರುವ ಆರೋಪ ಕೇಳಿಬಂದಿದ್ದು, ಇಂದು ನಡೆದ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಆತನನ್ನು ‘ಕಪ್ಪು ಪಟ್ಟಿ’ (Blacklist) ಗೆ ಸೇರಿಸಲು ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ.

ಘಟನೆಯ ಹಿನ್ನೆಲೆ:
ಜನವರಿ 14 ರಿಂದ 22 ರವರೆಗೆ ನಡೆದ ವಿಟ್ಲ ಜಾತ್ರೆಯ ಸಂದರ್ಭದಲ್ಲಿ ಟೆಂಡರ್ ವಿಜೇತ ಮಹೇಶ್ ದಾಸ್ ನೀತಿ ನಿಯಮಗಳನ್ನು ಗಾಳಿಗೆ ತೂರಿ, ಬಡ ವ್ಯಾಪಾರಿಗಳಿಗೆ ತೊಂದರೆ ನೀಡಿದ ಬಗ್ಗೆ ವ್ಯಾಪಾರಿಗಳು ಪಟ್ಟಣ ಪಂಚಾಯತ್‌ಗೆ ದೂರು ನೀಡಿದ್ದರು. ಈ ದೂರಿಗೆ ಪೂರಕವಾಗಿ ಎಲ್ಲಾ ಸಾಕ್ಷ್ಯಾಧಾರಗಳನ್ನು ಸಲ್ಲಿಸಲಾಗಿತ್ತು. ಈ ವಿಚಾರವಾಗಿ ಪಟ್ಟಣ ಪಂಚಾಯತ್‌ ವಿಚಾರಣೆಗಾಗಿ ದೂರುದಾರ ಬಡ ವ್ಯಾಪಾರಿಗಳಿಗೆ ನೋಟಿಸ್ ಹಾಗೂ ಫೋನ್ ಕರೆಗಳ ಮೂಲಕ ತಿಳಿಸಿದ್ದು, ಪಟ್ಟಣ ಪಂಚಾಯತ್‌ನ ಎಲ್ಲಾ ಕರೆಗಳಿಗೆ ದೂರುದಾರರು ಸ್ಪಂದಿಸಿದ್ದು, ಟೆಂಡರ್‌ ವಿಜೇತ ಪಟ್ಟಣ ಪಂಚಾಯತ್‌ನ ಯಾವುದೇ ಕರೆಗಳಿಗೆ ಸ್ಪಂದಿಸದೆ ಇರುವುದು ಆತನ ಅವ್ಯವಹಾರದ ಕೆಲಸಕ್ಕೆ ಇನ್ನಷ್ಟು ಪುರಾವೆ ಸಿಕ್ಕಂತಾಗಿದೆ.

ಅಲ್ಲದೇ, ನೋಟಿಸ್‌ನಲ್ಲಿ ಇರುವ ಪ್ರಕಾರ ನೀವು ನಿಗಧಿ ಪಡಿಸಿದ ದಿನಾಂಕದಂದು ಹಾಜರಾಗದಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ದೃಢಪಡಿಸಿದ್ದು, ಏಲಂನಲ್ಲಿ ಭಾಗಿಯಾದ ಎಲ್ಲಾ ಟೆಂಡರ್‍ ದಾರರು ಪಟ್ಟಣ ಪಂಚಾಯತ್‌ನ ನೀತಿ ನಿಯಮಗಳನ್ನು ಪಾಲಿಸಿದ್ದಾರೆ. ಆದರೆ ಟೆಂಡರ್‌ ವಿಜೇತ ಮಹೇಶ್‌ ದಾಸ್ ಎಂಬಾತ ನೀತಿ ನಿಯಮಗಳನ್ನು ಉಲ್ಲಂಘಿಸಿದ್ದು, ದೂರುದಾರರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮತ್ತೆ ಪಟ್ಟಣ ಪಂಚಾಯತ್‌ನ ಮುಖ್ಯಾಧಿಕಾರಿಗಳಿಗೆ ಮತ್ತು ಅಧ್ಯಕ್ಷರಿಗೆ ಬಡ ವ್ಯಾಪಾರಿಗಳು ದೂರಿನ ಸಾಕ್ಷ್ಯಾಧಾರಗಳನ್ನು ಒದಗಿಸಿದ್ದಾರೆ.

ಸಭೆಯಲ್ಲಿ ನಡೆದ ವಾಗ್ವಾದ;‌ ಕಠಿಣ ಕ್ರಮ ತೆಗೆದುಕೊಂಡ ಪಂಚಾಯತ್
ಇಂದು (31/03/2026) ನಡೆದ ಪಟ್ಟಣ ಪಂಚಾಯತ್‌ನ ಸಾಮಾನ್ಯ ಸಭೆಯಲ್ಲಿ ವಿ. ಕೆ. ಎಂ. ಅಶ್ರಫ್‌, ಕೊಲ್ಯ ಶ್ರೀನಿವಾಸ್‌ ಶೆಟ್ಟಿ ವಿಟ್ಲ, ಮಹಮ್ಮದ್‌ ಇಕ್ಬಾಲ್‌ ಸೇರಿದಂತೆ ವಿರೋಧ ಪಕ್ಷದ ಸದಸ್ಯರು, ಪಂಚಾಯತ್ ಅಧ್ಯಕ್ಷರು, ಅಧಿಕಾರಿಗಳು ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರನ್ನು ತರಾಟೆಗೆ ತೆಗೆದುಕೊಂಡರು. ಬಡ ವ್ಯಾಪಾರಿಗಳಿಗೆ ನ್ಯಾಯ ಸಿಗುವಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ತನಿಖೆಯ ಭಾಗವಾಗಿ ಪಂಚಾಯತ್ ನೀಡಿದ ನೋಟಿಸ್ ಹಾಗೂ ಫೋನ್ ಕರೆಗಳಿಗೆ ದೂರುದಾರ ವ್ಯಾಪಾರಿಗಳು ಸರಿಯಾಗಿ ಸ್ಪಂದಿಸಿದ್ದರೆ, ಟೆಂಡರ್ ವಿಜೇತ ಮಹೇಶ್ ದಾಸ್ ಮಾತ್ರ ಯಾವುದೇ ಕರೆ ಅಥವಾ ನೋಟಿಸ್‌ಗಳಿಗೆ ಬೆಲೆ ನೀಡದೆ ಗೈರುಹಾಜರಾಗಿದ್ದರು. ಇದು ಆತನ ಮೇಲಿರುವ ಅವ್ಯವಹಾರದ ಶಂಕೆಯನ್ನು ಇನ್ನಷ್ಟು ಬಲಪಡಿಸಿತ್ತು. ಇದಕ್ಕೆ ಆಡಳಿತ ಪಕ್ಷದವರೂ ಧ್ವನಿಗೂಡಿಸಿದರು. ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದ ಬಳಿಕ, ಟೆಂಡರ್ ನಿಯಮಗಳನ್ನು ಉಲ್ಲಂಘಿಸಿರುವ ಹಾಗೂ ಪಂಚಾಯತ್‌ನ ಕಾನೂನು ಪ್ರಕ್ರಿಯೆಗೆ ಸಹಕರಿಸದ ಮಹೇಶ್ ದಾಸ್‌ನನ್ನು ಕಪ್ಪು ಪಟ್ಟಿಗೆ ಸೇರಿಸಲು ಸಭೆಯಲ್ಲಿ ಒಮ್ಮತದ ನಿರ್ಣಯ ತೆಗೆದುಕೊಳ್ಳುವ ಮೂಲಕ ಪಂಚಾಯತ್ ಕಠಿಣ ಕ್ರಮ ತೆಗೆದುಕೊಂಡಿದೆ.

29.01.2026ರಂದು ಪ್ರಕಟವಾದ ವರದಿ ಇದನ್ನೂ ಓದಿ

“ಧಾರ್ಮಿಕ ಶ್ರದ್ಧಾ ಕೇಂದ್ರವಾದ ವಿಟ್ಲದ ಜಾತ್ರೆಯ ಹೆಸರಿನಲ್ಲಿ ಇಂತಹ ಅವ್ಯವಹಾರ ನಡೆದಿರುವುದು ಇಡೀ ಊರಿಗೇ ನಾಚಿಕೆಗೇಡಿನ ಸಂಗತಿ. ಬಡ ವ್ಯಾಪಾರಿಗಳ ರಕ್ತ ಹೀರಿದ ಇಂತಹ ವ್ಯಕ್ತಿಗಳಿಗೆ ಸರಿಯಾದ ಶಿಕ್ಷೆಯಾಗಲೇಬೇಕು” ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಿರ್ಧಾರದ ಮೂಲಕ ಪಟ್ಟಣ ಪಂಚಾಯತ್ ಬಡ ವ್ಯಾಪಾರಿಗಳ ಪರವಾಗಿ ನಿಂತಿದ್ದು, ಮುಂದಿನ ದಿನಗಳಲ್ಲಿ ಇಂತಹ ಅವ್ಯವಹಾರಗಳು ಮರುಕಳಿಸದಂತೆ ಎಚ್ಚರಿಕೆ ನೀಡಿದಂತಾಗಿದೆ.

Continue Reading

F.I.R.

ಎಮ್ಮೆಮಾಡು: ಮದುವೆ ಸಮಾರಂಭದಲ್ಲಿ ದೈವಕ್ಕೆ ಅವಮಾನ ಆರೋಪ; ಆರು ಮಂದಿಯ ವಿರುದ್ಧ ಎಫ್‌ಐಆರ್ ದಾಖಲು

Published

on

ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆಮಾಡುವಿನಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ತುಳುನಾಡಿನ ಪೂಜನೀಯ ದೈವವನ್ನು ಅಪಹಾಸ್ಯ ಮಾಡಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಆರು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಎಮ್ಮೆಮಾಡು ಗ್ರಾಮದಲ್ಲಿ ಕಳೆದ ಎರಡು ದಿನಗಳ ಹಿಂದೆ ನಡೆದ ಮುಸ್ಲಿಂ ಸಮುದಾಯದ ಮದುವೆ ಸಮಾರಂಭದಲ್ಲಿ, ಮದುಮಗನಿಗೆ ತುಳುನಾಡಿನ ದೈವ **’ಕೊರಗಜ್ಜ’**ನ ವೇಷವನ್ನು ಹೋಲುವಂತೆ ಉಡುಪು ಧರಿಸಿ ಮೆರವಣಿಗೆ ಮಾಡಲಾಗಿತ್ತು. ಈ ವೇಳೆ ಜೊತೆಯಲ್ಲಿದ್ದ ಇತರ ಯುವಕರು ದೈವದ ಆಚರಣೆಯನ್ನು ವಿಕೃತವಾಗಿ ಅನುಕರಿಸುತ್ತಾ, ತಮ್ಮದೇ ಭಾಷೆಯಲ್ಲಿ ‘ತೆಯ್ಯ’ ಎಂದು ಕೂಗುತ್ತಾ ಅಪಹಾಸ್ಯ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್:

ಮಾರ್ಚ್ 30, 2026 ರಂದು ಬೆಳಿಗ್ಗೆ 10 ಗಂಟೆಯ ಸುಮಾರಿಗೆ ಹಿಂದೂ ಧರ್ಮದ ದೈವ ನಿಂದನೆ ಹಾಗೂ ಧಾರ್ಮಿಕ ನಂಬಿಕೆಯ ಅಪಹಾಸ್ಯ ಮಾಡಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಬೆಳಕಿಗೆ ಬಂದಿದ್ದು, ವಿಡಿಯೋದಲ್ಲಿ ಹಿಂದೂ ಧರ್ಮದ ಪವಿತ್ರ ನಂಬಿಕೆಗಳನ್ನು ಮತ್ತು ಪೂರ್ವಜರ ಸಂಸ್ಕೃತಿಯನ್ನು ಉದ್ದೇಶಪೂರ್ವಕವಾಗಿ ಅವಹೇಳನ ಮಾಡುತ್ತಿರುವುದು ಕಂಡುಬಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪೊಲೀಸ್ ದೂರು ಮತ್ತು ಕ್ರಮ:

ಈ ಘಟನೆಯಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ನಾಪೋಕ್ಲುವಿನ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಡಿವೈಎಸ್‌ಪಿ (DYSP) ಸೂರಜ್ ಹಾಗೂ ನಾಪೋಕ್ಲು ಠಾಣಾಧಿಕಾರಿ ರಾಘವೇಂದ್ರ ಅವರಿಗೆ ಅಧಿಕೃತ ದೂರು ನೀಡಲಾಗಿತ್ತು.ದೂರಿನ ಆಧಾರದ ಮೇಲೆ ಎಮ್ಮೆಮಾಡು ಗ್ರಾಮದ ಅಬ್ದುಲ್ ರಾಶಿದ್ ( ಮದುಮಗ) ಹನೀಫ್ ಸಿಎಮ್, ಲತೀಫ್ ಸಿಮ್, ಮೊಹಮ್ಮದ್ ಫೈಜಲ್, ಶಕೀರ್ ಮತ್ತು ಬಶೀರ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.

ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 2(BNS), 2023ರ ಕಲಂ 191(1) ಅಡಿಯಲ್ಲಿ ಎಫ್‌ಐಆರ್ (FIR) ದಾಖಲಾಗಿದ್ದು, ನಾಪೋಕ್ಲು ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Continue Reading

Trending

Copyright © 2025 Deevatige