Belthangady
ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಜಾತ್ರೆಯಲ್ಲಿ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ, ಅಪಹರಣ: ಬಜರಂಗದಳ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲು
- Share
- Tweet /home/u338848369/domains/deevatigenews.com/public_html/wp-content/plugins/mvp-social-buttons/mvp-social-buttons.php on line 72
https://deevatigenews.com/wp-content/uploads/2026/03/4545-1000x600.jpg&description=ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಜಾತ್ರೆಯಲ್ಲಿ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ, ಅಪಹರಣ: ಬಜರಂಗದಳ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲು', 'pinterestShare', 'width=750,height=350'); return false;" title="Pin This Post">
ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಸ್ನೇಹಿತರೊಂದಿಗೆ ಬಂದಿದ್ದ 17 ವರ್ಷದ ಮುಸ್ಲಿಂ ಸಮುದಾಯದ ಅಪ್ರಾಪ್ತ ಬಾಲಕನ ಮೇಲೆ ಬಜರಂಗದಳದ ಕಾರ್ಯಕರ್ತರು ಎನ್ನಲಾದ ತಂಡವೊಂದು ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಕೊಲೆ ಬೆದರಿಕೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯ ವಿವರ:
ಬೆಳ್ತಂಗಡಿ ತಾಲೂಕಿನ ಖಾಸಗಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿರುವ ಬಾಲಕನು ಮಾರ್ಚ್ 11ರಂದು ಸಂಜೆ ತನ್ನ ಸ್ನೇಹಿತರೊಂದಿಗೆ ಜಾತ್ರೆಗೆ ತೆರಳಿದ್ದನು. ರಾತ್ರಿ 8:30ರ ಸುಮಾರಿಗೆ ಆತನ ಸ್ನೇಹಿತರು ಜಾಯಿಂಟ್ ವೀಲ್ ಹತ್ತಿದ್ದಾಗ, ಅವರ ಮೊಬೈಲ್ಗಳನ್ನು ಹಿಡಿದುಕೊಂಡು ಬಾಲಕ ಕೆಳಗೆ ನಿಂತಿದ್ದನು. ಈ ವೇಳೆ ಅಲ್ಲಿಗೆ ಬಂದ ಗೌರವ್ ಶೆಟ್ಟಿ, ರಮೇಶ್ ಹಾಗೂ ಇತರರ ತಂಡವು “ನೀನು ಮುಸ್ಲಿಮನಾ?” ಎಂದು ಪ್ರಶ್ನಿಸಿದೆ. ಬಾಲಕ “ಹೌದು” ಎನ್ನುತ್ತಿದ್ದಂತೆಯೇ ತಂಡವು ಆತನ ಮೇಲೆ ಮುಗಿಬಿದ್ದು ಹಲ್ಲೆ ನಡೆಸಿದೆ. ಬಾಲಕನ ಸ್ನೇಹಿತರು ಬಿಡಿಸಲು ಬಂದಾಗ ಅವರ ಮೇಲೆಯೂ ಹಲ್ಲೆಗೆ ಮುಂದಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಅಪಹರಣ ಮತ್ತು ದೌರ್ಜನ್ಯ:
ಜಾತ್ರೆಯಲ್ಲಿ ಜನಸಂದಣಿ ಹೆಚ್ಚಾದಾಗ, ಆರೋಪಿಗಳು ಬಾಲಕನನ್ನು ಬೈಕ್ನಲ್ಲಿ ಬಲವಂತವಾಗಿ ಅಪಹರಿಸಿದ್ದಾರೆ. ಅಲ್ಲಿಂದ ಸುಮಾರು 5 ಕಿ.ಮೀ ದೂರದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು, 10ಕ್ಕೂ ಹೆಚ್ಚು ಮಂದಿಯ ತಂಡವು ನಿರಂತರವಾಗಿ ದೈಹಿಕ ಹಲ್ಲೆ ನಡೆಸಿದೆ. “ನೀವು ಬ್ಯಾರಿಗಳು ಟೆರರಿಸ್ಟ್ಗಳು, ನಿಮ್ಮನ್ನು ಕೊಂದರೆ ಒಬ್ಬ ಟೆರರಿಸ್ಟ್ ಕೊಂದ ಹಾಗೆ” ಎಂದು ಕೋಮು ನಿಂದನೆ ಮಾಡಿ ಪ್ರಾಣ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಬಾಲಕನಿಂದ ಬಲವಂತವಾಗಿ ವಿಡಿಯೋ ಹೇಳಿಕೆಯೊಂದನ್ನು ಚಿತ್ರೀಕರಿಸಿಕೊಂಡ ತಂಡವು, ತಡರಾತ್ರಿ ಆತನನ್ನು ಉಜಿರೆಯ ಬೆಳಾಲು ಕ್ರಾಸ್ ಬಳಿ ಬಿಟ್ಟು ಹೋಗಿದ್ದಾರೆ.
ಡೆತ್ ನೋಟ್ ಮತ್ತು ದೂರು:
ಈ ಘಟನೆಯಿಂದ ತೀವ್ರ ಖಿನ್ನತೆಗೆ ಒಳಗಾಗಿದ್ದ ಬಾಲಕನು ಮನೆಯಲ್ಲಿ ವಿಷಯ ತಿಳಿಸಿರಲಿಲ್ಲ. ಆದರೆ ಆರೋಪಿಗಳು ನಿರಂತರವಾಗಿ ಫೋನ್ ಮಾಡಿ ಬೆದರಿಕೆ ಹಾಕುತ್ತಿದ್ದರು. ಬಾಲಕ ಕರೆ ಸ್ವೀಕರಿಸದಿದ್ದಾಗ ಗೌರವ್ ಶೆಟ್ಟಿ ಎಂಬಾತ ಸಂದೇಶ ಕಳುಹಿಸಿ ಮನೆಗೆ ಬರುವುದಾಗಿ ಬೆದರಿಸಿದ್ದನು. ಇದರಿಂದ ಮನನೊಂದ ಬಾಲಕ ಆತ್ಮಹತ್ಯೆಗೆ ನಿರ್ಧರಿಸಿ ಮೂರು ಪುಟಗಳ ಡೆತ್ ನೋಟ್ ಬರೆದಿದ್ದನು. ಆಕಸ್ಮಿಕವಾಗಿ ಈ ಪತ್ರ ಮನೆಯವರ ಕೈಸೇರಿದಾಗ ವಿಷಯ ಬೆಳಕಿಗೆ ಬಂದಿದೆ. ತಕ್ಷಣವೇ ಬಾಲಕನ ತಂದೆ ಮಾರ್ಚ್ 18ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.

ಬಾಲಕನ ತಂದೆ ನೀಡಿದ ದೂರಿನಂತೆ ಪೊಲೀಸರು ಆರೋಪಿಗಳಾದ ಗೌರವ್ ಶೆಟ್ಟಿ, ರಮೇಶ್ ಹಾಗೂ ಇತರರ ವಿರುದ್ಧ ಅ.ಕ್ರ 30/2026 ರಡಿ ಪ್ರಕರಣ ದಾಖಲಿಸಿದ್ದಾರೆ. ಬಿಎನ್ಎಸ್ (BNS) 2023ರ ಸೆಕ್ಷನ್ 137(2) (ಅಪಹರಣ), 115(2) (ಹಲ್ಲೆ), 351(2) (ಬೆದರಿಕೆ), 352, 353(2) ಹಾಗೂ 190 (ಗುಂಪು ಹಲ್ಲೆ/ಸಮಾನ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
arrest
ಬೆಳ್ತಂಗಡಿ: ಗುರುವಾಯನಕೆರೆ ಬಳಿ ಪತ್ತೆಯಾದ ಮೃತದೇಹದ ಗುರುತು ಪತ್ತೆ – ಯತೀಶ್ ಗೌಡ ಕೊಲೆ ಶಂಕೆ, ಮೂವರು ವಶಕ್ಕೆ
ಬೆಳ್ತಂಗಡಿ, ದಕ್ಷಿಣ ಕನ್ನಡ: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುರುವಾಯನಕೆರೆ ಸಮೀಪದ ಅಲಾದಿಕೊಟ್ಟಿಗೆ ಎಂಬಲ್ಲಿ ಜೂನ್ 1ರಂದು ಬೆಳಿಗ್ಗೆ ಪತ್ತೆಯಾಗಿದ್ದ ಅಪರಿಚಿತ ಮೃತದೇಹದ ಗುರುತು ಪತ್ತೆಯಾಗಿದ್ದು, ಇದು ಕೊಲೆ ಎಂದು ಶಂಕಿಸಲಾಗಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಪೆರ್ನೆ ನಿವಾಸಿ, ದಿ. ಕೂಸಪ್ಪ ಗೌಡ ಮತ್ತು ಪದ್ಮಾವತಿ ದಂಪತಿಯ ದ್ವಿತೀಯ ಪುತ್ರ ಯತೀಶ್ ಗೌಡ (33) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಯತೀಶ್, ಕಳೆದ ಎರಡು ತಿಂಗಳ ಹಿಂದೆ ಮನೆ ಬಿಟ್ಟು ಹೋಗಿದ್ದು, ನಾಪತ್ತೆಯಾಗಿದ್ದರು.
ಘಟನೆಯ ಹಿನ್ನೆಲೆ ಮತ್ತು ದೂರು:
ಜೂನ್ 1ರಂದು ಬೆಳಿಗ್ಗೆ ಗುರುವಾಯನಕೆರೆಯ ಶ್ರೀದೇವಿ ಹಾರ್ಡ್ವೇರ್ ಬಳಿ ಅಪರಿಚಿತ ಮೃತದೇಹ ಇರುವ ಬಗ್ಗೆ ಭಾವಚಿತ್ರ ಸಹಿತ ಮಾಹಿತಿ ವಾಟ್ಸಾಪ್ ಮೂಲಕ ಮೃತರ ಸಹೋದರ ನಿತಿನ್ (34) ಅವರಿಗೆ ತಲುಪಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ನಿತಿನ್, ಮೃತದೇಹವನ್ನು ತನ್ನ ಸಹೋದರ ಯತೀಶ್ ಗೌಡ ಎಂದು ಗುರುತಿಸಿದ್ದಾರೆ.
ಸಿಸಿಟಿವಿ ತನಿಖೆ ಮತ್ತು ಕೊಲೆ ಶಂಕೆ:
ಮೃತದೇಹದ ಮೇಲೆ ಹಲ್ಲೆಯ ಗುರುತುಗಳಿದ್ದ ಹಿನ್ನೆಲೆಯಲ್ಲಿ, ದೂರುದಾರರು ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ಜೂನ್ 1ರ ಬೆಳಿಗ್ಗಿನ ಸಮಯ ಮೂವರು ವ್ಯಕ್ತಿಗಳು ಯತೀಶ್ ಅವರ ಮೇಲೆ ಹಲ್ಲೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಆರೋಪಿಗಳ ತೀವ್ರ ಹಲ್ಲೆಯಿಂದಾಗಿಯೇ ಯತೀಶ್ ಮೃತಪಟ್ಟಿರುವುದಾಗಿ ಅವರ ಸಹೋದರ ಪೊಲೀಸರಿಗೆ ದೂರು ನೀಡಿದ್ದಾರೆ.
ಪೊಲೀಸ್ ಕಾರ್ಯಾಚರಣೆ, ಮೂವರ ವಶಕ್ಕೆ:
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬೆಳ್ತಂಗಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ನಿತಿನ್ ನೀಡಿದ ದೂರಿನನ್ವಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ ಕ್ರ : 65/2026, ಕಲಂ: 115(2), 103 ಜೊತೆಗೆ 3(5) ಬಿ.ಎನ್.ಎಸ್ (BNS) ರಂತೆ ಕೊಲೆ ಪ್ರಕರಣ ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ:
ಯಶೋಧರ (35) – ನಿವಾಸಿ: ಮಿತ್ತಬಾಗಿಲು, ಬೆಳ್ತಂಗಡಿ
ಮೋಹನ್ (30) – ನಿವಾಸಿ: ಚಾರ್ವಾಕ, ಕಡಬ
ಇಬ್ರಾಹಿಂ (54) – ನಿವಾಸಿ: ಪದಂಗಡಿ, ಬೆಳ್ತಂಗಡಿ
ವಶಕ್ಕೆ ಪಡೆದಿರುವ ಮೂವರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಕೊಲೆಗೆ ನಿಖರವಾದ ಕಾರಣ ಮತ್ತು ಹಲ್ಲೆಯ ಹಿಂದಿನ ಸತ್ಯಾಸತ್ಯತೆಗಳನ್ನು ಪತ್ತೆಹಚ್ಚಲು ಬೆಳ್ತಂಗಡಿ ಪೊಲೀಸರು ಮುಂದಿನ ತನಿಖೆಯನ್ನು ಚುರುಕುಗೊಳಿಸಿದ್ದಾರೆ.
accident
ಬೆಳ್ತಂಗಡಿ – ಪುತ್ತೂರು ಭಾಗದಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತಗಳು : ಇಬ್ಬರು ಬಲಿ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಪುತ್ತೂರು ಭಾಗಗಳಲ್ಲಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ತಲಾ ಓರ್ವರು ಮೃತಪಟ್ಟ ದುರ್ಘಟನೆಗಳು ವರದಿಯಾಗಿವೆ.
ಮುಂಡಾಜೆ: ಬೈಕ್-ಕಾರು ಭೀಕರ ಅಪಘಾತ; ಚಿಕಿತ್ಸೆ ಫಲಿಸದೆ ಯುವಕ ಸಾವು

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೋಮಂತಡ್ಕ ಅಗರಿ ಕ್ರಾಸ್ ಬಳಿ ಭಾನುವಾರ ನಡೆದ ಬೈಕ್ ಹಾಗೂ ಕಾರಿನ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ, ಸೋಮವಾರ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕಾರ್ಯತಡ್ಕ ನಿವಾಸಿ ಗಣೇಶ್ (36) ಮೃತಪಟ್ಟ ದುರ್ದೈವಿ.
ಘಟನೆಯ ವಿವರ:
ಭಾನುವಾರ ಉಜಿರೆ ಕಡೆಯಿಂದ ಕಕ್ಕಿಂಜೆ ಕಡೆಗೆ ಗಣೇಶ್ ಅವರು ತಮ್ಮ ಬೈಕ್ನಲ್ಲಿ ತೆರಳುತ್ತಿದ್ದಾಗ, ಚಾರ್ಮಾಡಿ ಕಡೆಯಿಂದ ಬರುತ್ತಿದ್ದ ಕಾರಿನ ಬಲಭಾಗದ ಸೈಡ್ ಮಿರರ್ಗೆ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮೃತಪಟ್ಟಿದ್ದಾರೆ.
ಮೃತ ಗಣೇಶ್ ಅವರು ಅವಿವಾಹಿತರಾಗಿದ್ದು, ತಂದೆ, ತಾಯಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಸಂತಾಪ:
ಮೃತ ಗಣೇಶ್ ಅವರು ಕಾರ್ಯತಡ್ಕದಲ್ಲಿ ‘ಗಣೇಶ್ ಸ್ಟುಡಿಯೋ’ ನಡೆಸುತ್ತಿದ್ದು, ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (SKPA) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇದರ ಬೆಳ್ತಂಗಡಿ ವಲಯದ ಸಕ್ರಿಯ ಸದಸ್ಯರಾಗಿದ್ದರು. ಯುವ ಛಾಯಾಗ್ರಾಹಕನ ಅಕಾಲಿಕ ನಿಧನಕ್ಕೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು, 7 ಮಂದಿಗೆ ಗಾಯ

ಕಡಬ: ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳದ ಅಪಾಯಕಾರಿ ತಿರುವಿನಲ್ಲಿ ಮೇ 25ರಂದು ಸಂಜೆ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಟೆಂಪೋ ಟ್ರಾವೆಲರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಬೆಂಗಳೂರಿನತ್ತ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಹಾಗೂ ಧರ್ಮಸ್ಥಳದ ಕಡೆಯಿಂದ ಸುಬ್ರಹ್ಮಣ್ಯದತ್ತ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ನಡುವೆ ಈ ಅಪಘಾತ ನಡೆದಿದೆ. ಬೆಂಗಳೂರು ದೇವನಹಳ್ಳಿ ಕೋಟೆ ನಿವಾಸಿ ಸಂಜು ವಿ. ಅವರು ಚಲಾಯಿಸುತ್ತಿದ್ದ ಟೆಂಪೋ ಟ್ರಾವೆಲರ್ (ಕೆಎ 43 ಎ 6435) ನಲ್ಲಿ ಒಟ್ಟು 14 ಮಂದಿ ಪ್ರಯಾಣಿಸುತ್ತಿದ್ದರು. ಕೆ.ಎಸ್.ಆರ್.ಟಿ.ಸಿ. ಬಸ್ಸನ್ನು ಶೇಟ್ ಮಲ್ಲಿಕಾ ಮದ್ರಾಸ್ ಅವರು ಚಲಾಯಿಸುತ್ತಿದ್ದರು ಎನ್ನಲಾಗಿದೆ. ಕೆಂಜಳದ ಅಪಾಯಕಾರಿ ತಿರುವಿನಲ್ಲಿ ಎರಡೂ ವಾಹನಗಳು ಮುಖಾಮುಖಿ ಡಿಕ್ಕಿಯಾಗಿವೆ.
ಮೃತರು ಮತ್ತು ಗಾಯಾಳುಗಳ ವಿವರ: ಅಪಘಾತದ ತೀವ್ರತೆಗೆ ಟೆಂಪೋ ಟ್ರಾವೆಲರ್ನಲ್ಲಿದ್ದ ಚಿಕ್ಕಬಳ್ಳಾಪುರ ತಾಲೂಕಿನ ಕೆರೆಸಂದ್ರಮನೆ ನಿವಾಸಿ ಅಂಜನಮ್ಮ (47) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಅಪಘಾತದಲ್ಲಿ 5 ವರ್ಷದ ಬಾಲಕಿ ನಯಾನಿಕಾ ತೀವ್ರವಾಗಿ ಗಾಯಗೊಂಡಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಆಕೆಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಳಿದಂತೆ ಟೆಂಪೋದಲ್ಲಿ ಪ್ರಯಾಣಿಸುತ್ತಿದ್ದ ನರಸಿಂಹಯ್ಯ, ವಿ. ಮಂಜುನಾಥ್, ವಿ. ಗಂಗಾಧರ್, ಪವಿತ್ರಾ, ಸಿರಿಪ್ರಿಯಾ ಹಾಗೂ ರತ್ನಮ್ಮ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೃಷ್ಟವಶಾತ್ ಟೆಂಪೋದಲ್ಲಿದ್ದ ಲೋಕೇಶ್ ದೇವನಹಳ್ಳಿ, ಪವನ್ ಸೋಮನಹಳ್ಳಿ ಕನಕಪುರ, ಕವಿತಾ ಸಿ.ಎಂ., ಜೀವನ್, ಆಶಾ, ಪ್ರೀತಮ್ ಹಾಗೂ ಶಿವ ಅವರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.



Belthangady
ಕಾರಿನೊಳಗೆ ಸಿಲುಕಿಕೊಂಡ ಮಗು; ಸಮಯಪ್ರಜ್ಞೆ ಮೆರೆದು ಗ್ಲಾಸ್ ಒಡೆದು ರಕ್ಷಿಸಿದ ಸಾರ್ವಜನಿಕರು
ಬೆಳ್ತಂಗಡಿ: ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕ ಜಂಕ್ಷನ್ ಬಳಿ ಚಾಲಕನ ಅಜಾಗರೂಕತೆಯಿಂದಾಗಿ ಕಾರಿನ ಡೋರ್ ಆಟೋಮೆಟಿಕ್ ಲಾಕ್ ಆಗಿ, ಮಗುವೊಂದು ಕಾರಿನೊಳಗೆ ಸಿಲುಕಿಕೊಂಡು ಆತಂಕ ಸೃಷ್ಟಿಸಿದ ಘಟನೆ ಮೇ 25ರಂದು ಸೋಮವಾರ ನಡೆದಿದೆ.
ಘಟನೆಯ ವಿವರ: ಮದ್ದಡ್ಕದ ಕುವೆಟ್ಟು ನಿವಾಸಿಯೊಬ್ಬರು ತಮ್ಮ ಮಗುವಿನೊಂದಿಗೆ ಕಾರಿನಲ್ಲಿ ಬಂದಿದ್ದು, ರಸ್ತೆ ಬದಿಯ ಅಂಗಡಿಯೊಂದರ ಬಳಿ ಕಾರನ್ನು ನಿಲ್ಲಿಸಿದ್ದರು. ಚಾಲಕನು ಕಾರಿನ ಕೀ ಮತ್ತು ಮಗುವನ್ನು ಒಳಗಡೆಯೇ ಬಿಟ್ಟು, ಇಂಜಿನ್ ಆಫ್ ಮಾಡಿ ಹೊರಗೆ ಇಳಿದು ಅಂಗಡಿಗೆ ತೆರಳಿದ್ದಾರೆ. ಆದರೆ, ಅವರು ಇಳಿದ ತಕ್ಷಣ ಕಾರಿನ ಸೆಂಟ್ರಲ್ ಲಾಕಿಂಗ್ ಸಿಸ್ಟಮ್ನಿಂದಾಗಿ ಡೋರ್ಗಳು ಆಟೋಮೆಟಿಕ್ ಆಗಿ ಲಾಕ್ ಆಗಿವೆ.
ಕಾರಿನ ಕೀ ಒಳಗಡೆಯೇ ಇದ್ದಿದ್ದರಿಂದ ಹೊರಗಿನಿಂದ ಬಾಗಿಲು ತೆರೆಯಲು ಸಾಧ್ಯವಾಗದೆ ಚಾಲಕ ಗಾಬರಿಗೊಂಡಿದ್ದಾರೆ. ಇದೇ ವೇಳೆ ಕಾರಿನ ಒಳಗಿದ್ದ ಮಗು ಗಾಬರಿಗೊಂಡು ಜೋರಾಗಿ ಅಳಲು ಪ್ರಾರಂಭಿಸಿದೆ. ಬಿಸಿಲಿನ ಬೇಗೆಯೂ ಹೆಚ್ಚಿದ್ದರಿಂದ ಕಾರಿನೊಳಗೆ ಉಸಿರಾಟದ ತೊಂದರೆಯಾಗುವ ಭೀತಿ ಎದುರಾಗಿತ್ತು.
ಸಾರ್ವಜನಿಕರ ಸಮಯಪ್ರಜ್ಞೆ: ಕೂಡಲೇ ಸ್ಥಳದಲ್ಲಿದ್ದ ಸಾರ್ವಜನಿಕರು ಮತ್ತು ಅಂಗಡಿ ಮುಂಗಟ್ಟುಗಳ ಮಾಲೀಕರು ಕಾರಿನ ಬಳಿ ಧಾವಿಸಿ ಬಂದಿದ್ದಾರೆ. ಕಂಪನಿಕೀ ಇಲ್ಲದೆ ಬಾಗಿಲು ತೆರೆಯಲು ಕಂಬಿ, ಸ್ಕ್ರೂಡ್ರೈವರ್ ಬಳಸಿ ವಿವಿಧ ರೀತಿಯಲ್ಲಿ ಹರಸಾಹಸ ಪಟ್ಟರೂ ಯಾವುದೇ ಪ್ರಯೋಜನವಾಗಲಿಲ್ಲ. ಮಗುವಿನ ಅಳು ಹೆಚ್ಚಾಗುತ್ತಿರುವುದನ್ನು ಮತ್ತು ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಸಾರ್ವಜನಿಕರು ಸಮಯಪ್ರಜ್ಞೆ ಮೆರೆದಿದ್ದಾರೆ.
ಮಗುವಿಗೆ ಯಾವುದೇ ಗಾಯವಾಗದಂತೆ ಎಚ್ಚರಿಕೆ ವಹಿಸಿ, ಕಾರಿನ ಹಿಂಬದಿಯ ಕಿಟಕಿಯ ಗ್ಲಾಸ್ (ಗಾಜು) ಅನ್ನು ಬಲವಾಗಿ ಒಡೆದಿದ್ದಾರೆ. ತದನಂತರ ಒಳಗಡೆಯಿದ್ದ ಬಾಗಿಲಿನ ಲಾಕ್ ಅನ್ನು ತೆಗೆದು ಮಗುವನ್ನು ಯಶಸ್ವಿಯಾಗಿ ಹೊರಗೆ ತಂದು ರಕ್ಷಿಸಿದ್ದಾರೆ. ಸಾರ್ವಜನಿಕರ ಈ ತ್ವರಿತ ನಿರ್ಧಾರ ಮತ್ತು ಸಮಯಪ್ರಜ್ಞೆಗೆ ಸ್ಥಳೀಯರು ಹಾಗೂ ಮಗುವಿನ ಪೋಷಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.



-
crime2 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime4 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala2 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala5 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 weeks agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Dakshina Kannada6 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala4 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala5 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
