murder
ವಾರಣಾಸಿ: ಕಾಲೇಜು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಯ ಗುಂಡಿಕ್ಕಿ ಹತ್ಯೆ; ರೊಚ್ಚಿಗೆದ್ದ ವಿದ್ಯಾರ್ಥಿಗಳಿಂದ ಆಸ್ತಿಪಾಸ್ತಿ ಧ್ವಂಸ
ವಾರಣಾಸಿ ಉದಯ್ ಪ್ರತಾಪ್ ಕಾಲೇಜಿನ ಕ್ಯಾಂಪಸ್‌ನಲ್ಲಿ ಶುಕ್ರವಾರ ತಡರಾತ್ರಿ ಭೀಕರ ಘಟನೆಯೊಂದು ಸಂಭವಿಸಿದ್ದು, 23 ವರ್ಷದ ವಿದ್ಯಾರ್ಥಿಯೊಬ್ಬನನ್ನು ಆತನ ಸಹಪಾಠಿಯೇ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ವೈಯಕ್ತಿಕ ದ್ವೇಷವೇ ಈ ಕೊಲೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಕೊಲೆಯಾದ ವಿದ್ಯಾರ್ಥಿಯನ್ನು ಬಿ.ಎ. ನಾಲ್ಕನೇ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ಸೂರ್ಯ ಪ್ರತಾಪ್ ಸಿಂಗ್ ಎಂದು ಗುರುತಿಸಲಾಗಿದೆ. ಈತ ಮೂಲತಃ ಗಾಜಿಪುರ ಜಿಲ್ಲೆಯವನಾಗಿದ್ದು, ಓದಿಗಾಗಿ ವಾರಣಾಸಿಯಲ್ಲಿ ನೆಲೆಸಿದ್ದ. ಹೆತ್ತವರ ಏಕೈಕ ಪುತ್ರನಾಗಿದ್ದ ಸೂರ್ಯ ಪ್ರತಾಪ್ ಓದಿನಲ್ಲಿ ಬಹಳ ಪ್ರತಿಭಾವಂತನಾಗಿದ್ದ ಎಂದು ತಿಳಿದುಬಂದಿದೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಕಾಲೇಜಿನ ಕಟ್ಟಡದ ಕಾರಿಡಾರ್‌ನಲ್ಲಿ ಸೂರ್ಯ ಪ್ರತಾಪ್ ಮೇಲೆ ಆತನ ಸಹಪಾಠಿ ಮಂಜೀತ್ ಚೌಹಾಣ್ ಎಂಬಾತ ತೀರಾ ಹತ್ತಿರದಿಂದ ಗುಂಡು ಹಾರಿಸಿದ್ದಾನೆ. ತಲೆ ಮತ್ತು ಎದೆಗೆ ಗುರಿಯಿಟ್ಟು ನಾಲ್ಕು ಸುತ್ತು ಗುಂಡು ಹಾರಿಸಿದ ಆರೋಪಿ, ನಂತರ ಮೊದಲ ಮಹಡಿಯ ತಡೆಗೋಡೆ ಹಾರಿ ಪಾರಾರಿಯಾಗಿದ್ದಾನೆ. ಹೋಗುವ ದಾರಿಯಲ್ಲಿ ಪಿಸ್ತೂಲನ್ನು ಕಸದ ಬುಟ್ಟಿಗೆ ಎಸೆದಿದ್ದು, ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಉದ್ವಿಗ್ನ ಸ್ಥಿತಿಯಲ್ಲಿ ಕ್ಯಾಂಪಸ್:
ಹತ್ಯೆ ಸುದ್ದ ತಿಳಿಯುತ್ತಿದ್ದಂತೆ ಕಾಲೇಜಿನಲ್ಲಿ ಭಾರೀ ಉದ್ವಿಗ್ನತೆ ಸೃಷ್ಟಿಯಾಗಿದೆ. ರೊಚ್ಚಿಗೆದ್ದ ವಿದ್ಯಾರ್ಥಿಗಳು ಕಾಲೇಜಿನ ಮುಖ್ಯ ದ್ವಾರಕ್ಕೆ ಬೀಗ ಹಾಕಿ ಪ್ರತಿಭಟನೆ ನಡೆಸಿದ್ದಲ್ಲದೆ, ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಿದ್ದಾರೆ. ಹಲವು ವಾಹನಗಳಿಗೆ ಹಾನಿ ಮಾಡಲಾಗಿದ್ದು, ಮೂವರು ಪ್ರಾಧ್ಯಾಪಕರ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಒಬ್ಬ ಪ್ರಾಧ್ಯಾಪಕರನ್ನು ಪೊಲೀಸ್ ರಕ್ಷಣೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಂದೆಯ ಆಕ್ರೋಶ:
ಮಗನನ್ನು ಕಳೆದುಕೊಂಡ ತಂದೆಯ ಆಕ್ರೋಶ ಮುಗಿಲು ಮುಟ್ಟಿದೆ. “ಆರೋಪಿಯನ್ನು ಎನ್‌ಕೌಂಟರ್‌ನಲ್ಲಿ ಹತ್ಯೆಗೈಯುವವರೆಗೂ ನನ್ನ ಮಗನ ಅಂತ್ಯಕ್ರಿಯೆ ಮಾಡುವುದಿಲ್ಲ” ಎಂದು ಅವರು ಹಠ ಹಿಡಿದಿದ್ದಾರೆ. ಸದ್ಯ ಕಾಲೇಜು ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಆರೋಪಿಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
accident
ಟ್ಯಾಬ್ಲೆಟ್ ಆರಿಫ್ ಹತ್ಯೆ ಪ್ರಕರಣ: ಸಿಸಿಬಿಗೆ ತನಿಖೆ ಹಸ್ತಾಂತರ; ಆರು ಮಂದಿ ಹಂತಕರ ಗುರುತು ಪತ್ತೆ
ಮಂಗಳೂರು: ತೊಕ್ಕೊಟ್ಟು ಫ್ಲೈಓವರ್ ನಲ್ಲಿ ನಡೆದ ರೌಡಿಶೀಟರ್ ಟ್ಯಾಬ್ಲೆಟ್ ಆರಿಫ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರು ಜನ ಆರೋಪಿಗಳ ಗುರುತು ಪತ್ತೆ ಹಚ್ಚುವಲ್ಲಿ ಪೊಲೀಸ್ ತಂಡ ಯಶಸ್ವಿಯಾಗಿದ್ದು, ಪ್ರಕರಣವನ್ನು ಎಸಿಪಿ ಮತ್ತು ಸಿಸಿಬಿ ತಂಡಕ್ಕೆ ವರ್ಗಾಯಿಸಲಾಗಿದೆ.
ಕೊಲೆ ಪಾತಕಿಗಳ ನಿರಂತರ ಸಂಚಾರದಿಂದಾಗಿ ತಕ್ಷಣವೇ ಬಂಧಿಸಲು ಪೊಲೀಸ್ ತಂಡಕ್ಕೆ ಸವಾಲುಗಳು ಎದುರಾಗಿದ್ದರೂ ಪಾಪಿಗಳ ಚಲನವಲನದ ಮೇಲೆ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ.
ಕೊಲೆ ಪ್ರಕರಣದಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಭಾಗವಹಿಸಿದ ಮತ್ತು ಪಾಪಿಗಳಿಗೆ ಪರಾರಿಯಾಗಲು ಸಹಕರಿಸಿ ಆಶ್ರಯ ನೀಡಿದ ಖದೀಮರಿಗೂ ಕಾನೂನಿನ ಉರುಳು ಬಿಗಿಯಲಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ಶಂಕಿತರನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ವಿಚಾರಣೆಯಲ್ಲಿ ಶಂಕಿತರ ಕೈವಾಡ ಸ್ಪಷ್ಟವಾದಲ್ಲಿ ಅಂತಹವರನ್ನು ಕೂಡಾ ಬಂಧಿಸಲಾಗುವುದು ಎಂದು ಕಮಿಷನರ್ ಸ್ಪಷ್ಟವಾಗಿ ಹೇಳಿದ್ದಾರೆ. ಆರೋಪಿಗಳಿಗೆ ಯಾವುದೇ ರೀತಿಯಲ್ಲಿ ಸಹಾಯ ಮಾಡುವವರು ಭಾರತೀಯ ನ್ಯಾಯ ಸಂಹಿತೆಯ(BNS)ಕಲಂ 249(a)ಅಡಿಯಲ್ಲಿ (ಅಪರಾಧಿಯನ್ನು ಆಶ್ರಯಿಸುವುದು)ಶಿಕ್ಷೆಗೆ ಒಳಪಟ್ಟವರಾಗುತ್ತಾರೆ ಎಂಬುದನ್ನು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿಯವರು ಪುನರುಚ್ಚರಿಸಿದ್ದಾರೆ. ಯಾವುದೇ ಮುಲಾಜಿಲ್ಲದೇ ಈ ನಿಯಮವನ್ನು ಹಿಂದಿನ ಪ್ರಕರಣಗಳಂತೆಯೇ ಜಾರಿಗೆ ತರಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ನಗರದ ಉಳ್ಳಾಲ ಬಳಿಯ ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಶುಕ್ರವಾರ ಮುಂಜಾನೆ ನಡೆದ ರೌಡಿಶೀಟರ್ ಆರಿಫ್ ಅಲಿಯಾಸ್ ‘ಟ್ಯಾಬ್ಲೆಟ್ ಆರಿಫ್’ (46) ಎಂಬಾತನ ಭೀಕರ ಹತ್ಯೆ ಪ್ರಕರಣವು ಕರಾವಳಿಯಲ್ಲಿ ಮತ್ತೆ ಗ್ಯಾಂಗ್‌ವಾರ್ ಭೀತಿಯನ್ನು ಹುಟ್ಟುಹಾಕಿದೆ. ಈ ಹತ್ಯೆಯ ಹಿಂದೆ ಹಳೆಯ ಸೇಡಿನ ಸಂಚು ಇರುವ ಬಲವಾದ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಹತ್ಯೆಯ ಹಿನ್ನೆಲೆ ಮತ್ತು ಸೇಡಿನ ಆಯಾಮ:
ಪೊಲೀಸ್ ಮೂಲಗಳ ಪ್ರಕಾರ, ಕಳೆದ ವರ್ಷ ನಡೆದಿದ್ದ ಮತ್ತೊಬ್ಬ ರೌಡಿಶೀಟರ್ ‘ಟೋಪಿ ನೌಫಾಲ್’ ಎಂಬಾತನ ಹತ್ಯೆಯ ಘಟನೆಯನ್ನು ಆರಿಫ್ ಮತ್ತು ಆತನ ತಂಡ ಸಂಭ್ರಮಿಸಿತ್ತು ಎಂದು ಹೇಳಲಾಗಿದೆ. ಈ ಸಂಭ್ರಮಾಚರಣೆಯೇ ಈಗ ಆರಿಫ್ ಪ್ರಾಣಕ್ಕೆ ಮುಳುವಾಗಿದೆ ಎನ್ನಲಾಗುತ್ತಿದೆ. ಈದ್ ಹಬ್ಬದ ದಿನದಂದೇ ಗೆಳೆಯನ ಗೋರಿಯ ಮುಂದೆ ನಿಂತು ಸೇಡು ತೀರಿಸಿಕೊಳ್ಳುವ ಶಪಥ ಮಾಡಲಾಗಿತ್ತು ಎಂಬ ಗಂಭೀರ ಮಾಹಿತಿ ತನಿಖೆಯ ವೇಳೆ ಹೊರಬಂದಿದೆ.

ಘಟನೆ ನಡೆದದ್ದು ಹೇಗೆ?
ಶುಕ್ರವಾರ ಮುಂಜಾನೆ ಸುಮಾರು 4 ಗಂಟೆಯ ಸುಮಾರಿಗೆ ಆರಿಫ್ ತನ್ನ ದ್ವಿಚಕ್ರ ವಾಹನದಲ್ಲಿ ಧಕ್ಕೆಯ ಮೀನು ಮಾರುಕಟ್ಟೆಗೆ ತೆರಳುತ್ತಿದ್ದಾಗ, ಕಾರಿನಲ್ಲಿ ಬೆನ್ನಟ್ಟಿಕೊಂಡು ಬಂದ ದುಷ್ಕರ್ಮಿಗಳ ತಂಡ ತೊಕ್ಕೊಟ್ಟು ಫ್ಲೈಓವರ್ ಮೇಲೆ ಆತನ ಗಾಡಿಗೆ ಡಿಕ್ಕಿ ಹೊಡೆದಿದೆ. ಆರಿಫ್ ಕೆಳಗೆ ಬೀಳುತ್ತಿದ್ದಂತೆ ಮಾರಕಾಸ್ತ್ರಗಳಿಂದ ಮನಸೋಇಚ್ಛೆ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ತನಿಖೆ ಚುರುಕು:
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ಹಲವು ತಂಡಗಳನ್ನು ರಚಿಸಲಾಗಿದೆ. ಸಿಸಿಬಿ ಪೊಲೀಸರು ಈಗಾಗಲೇ ಹಲವು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹತ್ಯೆಗೆ ಬಳಸಲಾದ ಕಾರನ್ನು ಬಂಟ್ವಾಳದ ಬುಡೋಳಿ ಬಳಿ ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.
ಈ ಹತ್ಯೆಯು ಮಂಗಳೂರು ನಗರದಲ್ಲಿ ಮತ್ತೆ ಗ್ಯಾಂಗ್‌ಗಳ ನಡುವಿನ ಸಂಘರ್ಷಕ್ಕೆ ನಾಂದಿ ಹಾಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
accident
ರೌಡಿ ಶೀಟರ್ ಆರಿಫ್ ಹಂತಕರ ಬೆನ್ನಟ್ಟಿದ ಪೊಲೀಸರು! ರಕ್ತಸಿಕ್ತ ಕಾರು ವಶಕ್ಕೆ
ರೌಡಿ ಶೀಟರ್ ಆರೀಫ್ ಹತ್ಯೆಯ ಹಂತಕರ ಕಾರನ್ನು ಕೆಲವೇ ಗಂಟೆಗಳಲ್ಲಿ ಪೊಲೀಸರು ವಶಕ್ಕೆ ಪಡೆಯುವ ಮೂಲಕ ಹಂತಕರ ಜಾಡನ್ನು ಪತ್ತೆಹಚ್ಚಿದ್ದಾರೆ.
ನಗರದ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಮೇಲೆ ಇಂದು ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಆರಿಫ್ ಎಂಬಾತನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಕೆಲವೇ ಗಂಟೆಗಳಲ್ಲಿ ಕಾರ್ಯಾಚರಣೆ ತೀವ್ರಗೊಳಿಸಿರುವ ಮಂಗಳೂರು ಪೊಲೀಸರು, ಹಂತಕರ ಕುರಿತು ಮಹತ್ವದ ಸುಳಿವು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳಗಾಗುವ ಮುನ್ನವೇ ಸಂಚು ರೂಪಿಸಿದ್ದ ಹಂತಕರು, ಆರಿಫ್‌ನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಕೃತ್ಯ ಎಸಗಿದ ಬಳಿಕ ಆರೋಪಿಗಳು ಬಿಳಿ ಬಣ್ಣದ ಇನ್ನೋವಾ ಕಾರಿನಲ್ಲಿ (ಕೆಎಲ್86ಬಿ 6645 ) ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮೂಲಕ ಅತಿ ವೇಗವಾಗಿ ಪರಾರಿಯಾಗಿದ್ದರು.

ವಿಟ್ಲದಲ್ಲಿ ಹಂತಕರ ಕಾರು ಪತ್ತೆ
ಹಂತಕರ ಬೆನ್ನಟ್ಟಿದ ಪೊಲೀಸರಿಗೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೊದಲ ಯಶಸ್ಸು ಸಿಕ್ಕಿದೆ. ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಹಂತಕರು ಬಳಸಿದ್ದ ಇನ್ನೋವಾ ಕಾರನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಆದರೆ, ಪೊಲೀಸರು ಸ್ಥಳಕ್ಕೆ ತಲುಪುವಷ್ಟರಲ್ಲಿ ಆರೋಪಿಗಳು ಕಾರನ್ನು ಅಲ್ಲಿಯೇ ಬಿಟ್ಟು ಆಟೋ ರಿಕ್ಷಾವೊಂದರಲ್ಲಿ ತಪ್ಪಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಆಟೋದಲ್ಲಿ ಒಟ್ಟು ಆರು ಜನ ಹಂತಕರು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ವಿಟ್ಲ ಮತ್ತು ಮಂಗಳೂರು ಪೊಲೀಸರ ಜಂಟಿ ತಂಡಗಳು ಈಗ ಸಂಭವನೀಯ ಅಡಗುದಾಣಗಳ ಮೇಲೆ ನಿಗಾ ಇಟ್ಟಿವೆ. ಹಂತಕರು ಯಾವ ದಿಕ್ಕಿನತ್ತ ಸಾಗಿದ್ದಾರೆ ಎಂಬ ಬಗ್ಗೆ ಸಿಸಿಟಿವಿ ಹಾಗೂ ಸ್ಥಳೀಯ ಆಟೋ ಚಾಲಕರ ಮೂಲಕ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುವ ವಿಶ್ವಾಸವನ್ನು ಪೊಲೀಸ್ ಇಲಾಖೆ ವ್ಯಕ್ತಪಡಿಸಿದೆ.

ತೊಕ್ಕೊಟ್ಟು ಫ್ಲೈಓವರ್ ನಲ್ಲಿ ಹತ್ಯೆ ಸುದ್ದಿ ಬರುತ್ತಿದ್ದಂತೆ ಜಿಲ್ಲೆಯ ಪೊಲೀಸರು ಎಚ್ಚೆತ್ತುಕೊಂಡು ಎಲ್ಲಾ ಕಡೆ ಹದ್ದಿನ ಕಣ್ಣು ಇಟ್ಟಿದ್ದರು. ಇದೇ ಸಂದರ್ಭ ರಾಷ್ಟ್ರೀಯ ಹೆದ್ದಾರಿಯ ಮಾಣಿ-ಉಪ್ಪಿನಂಗಡಿ ರಸ್ತೆಯ ಬುಡೋಳಿ ಎಂಬಲ್ಲಿ ಮುಂಜಾನೆ ಹೊತ್ತು ಇನ್ನೋವಾ ಕಾರಿನಲ್ಲಿ ಬಂದ ಆರು ಜನ ಸ್ಥಳೀಯ ಆಟೋ ಚಾಲಕನ ಎಬ್ಬಿಸಿ ಕಾರು ಕೆಟ್ಟು ಹೋಗಿದೆ ಎಂಬ ಕಾರಣ ನೀಡಿ ಆಟೋದಲ್ಲಿ ಬಿಡುವಂತೆ ಹೇಳಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಕಾರು ನಿಂತಿರುವ ಬಗ್ಗೆ ಮಾಹಿತಿ ಪಡೆದ ವಿಟ್ಲ ಇನ್ಸ್ಪೆಕ್ಟರ್ ಪ್ರಕಾಶ್ ದೇವಾಡಿಗ ತನ್ನ ತಂಡದೊಂದಿಗೆ ತೆರಳಿ ಸೂಕ್ತ ಬಂದೋಬಸ್ತ್ ಏರ್ಪಡಿಸಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ತಕ್ಷಣವೇ ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಇದೀಗ ಸ್ಥಳಕ್ಕೆ ಬೆರಳಚ್ಚು ತಜ್ಞರು, ವಿಧಿ ವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ
accident
ತೊಕ್ಕೊಟ್ಟು ಫ್ಲೈಓವರ್ ಮೇಲೆ ರೌಡಿಶೀಟರ್ ಆರಿಫ್ ಭೀಕರ ಹತ್ಯೆ: ಸಿನಿಮೀಯ ಶೈಲಿಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ
ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಮೇಲೆ ಶುಕ್ರವಾರ ಮುಂಜಾನೆ ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕಡಿದು ಭೀಕರವಾಗಿ ಹತ್ಯೆ ಮಾಡಲಾಗಿದೆ.

ಕೊಲೆಯಾದ ವ್ಯಕ್ತಿಯನ್ನು ತಲಪಾಡಿಯ ಮುಳ್ಳುಗುಡ್ಡೆ ಹೌಸ್ ನಿವಾಸಿ ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್’ (46) ಎಂದು ಗುರುತಿಸಲಾಗಿದೆ. ಧಕ್ಕೆಯಲ್ಲಿ ಮೀನು ವ್ಯಾಪಾರ ನಡೆಸುತ್ತಿದ್ದ ಆರಿಫ್, ಪ್ರತಿದಿನದಂತೆ ಇಂದು ಮುಂಜಾನೆ ತನ್ನ ಬೈಕ್‌ನಲ್ಲಿ ಮಂಗಳೂರಿನತ್ತ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಇಂದು ದುಷ್ಕರ್ಮಿಗಳು ಆರಿಫ್ ಗಾಗಿ ಫೈಓವರ್ ಮೇಲೆಯೇ ಕಾಯುತ್ತ ಕುಳಿತಿದ್ದು, ಆರಿಫ್ ಪ್ರಯಾಣಿಸುತ್ತಿದ್ದ ಬೈಕ್ ಅನ್ನು ಅಡ್ಡಗಟ್ಟಿ, ಬಳಿಕ ತಲೆ ಭಾಗಕ್ಕೆ ಗಂಭೀರವಾಗಿ ಕಡಿದು ಕೊಲೆ ನಡೆಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಆರಿಫ್ ಬೈಕ್‌ನಲ್ಲಿ ಫ್ಲೈಓವರ್ ಮೇಲೆ ಸಂಚರಿಸುತ್ತಿದ್ದಾಗ ಹಿಂಬದಿಯಿಂದ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಅತಿ ವೇಗವಾಗಿ ಬಂದು ಬೈಕ್‌ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಆರಿಫ್ ರಸ್ತೆಗೆ ಬೀಳುತ್ತಿದ್ದಂತೆ, ಕಾರಿನಿಂದ ಇಳಿದು ಬಂದ ತಂಡವು ತಲವಾರ್ ಸೇರಿದಂತೆ ಮಾರಕಾಸ್ತ್ರಗಳಿಂದ ತಲೆ ಮತ್ತು ದೇಹದ ಭಾಗಕ್ಕೆ ಮನಬಂದಂತೆ ಕಡಿದು ಸಿನಿಮೀಯ ರೀತಿಯಲ್ಲಿ ಕೊಲೆಗೈದು ಪರಾರಿಯಾಗಿದೆ. ತೀವ್ರ ರಕ್ತಸ್ರಾವದಿಂದಾಗಿ ಆರಿಫ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪರಾಧ ಪ್ರಕರಣಗಳಲ್ಲಿ ತೊಡಗಿಸಿ ಕೊಂಡಿದ್ದ ಆರಿಫ್ ನನ್ನು ವೈಯಕ್ತಿಕ ದ್ವೇಷ ದಿಂದ ಹತ್ಯೆ ಗೈದಿರುವ ಶಂಕೆ ವ್ಯಕ್ತ ಪಡಿಸಿದ್ದಾರೆ.ಆರಿಫ್ ವಿರುದ್ಧ 2008ರಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದವು. ನಂತರ ದೀರ್ಘಕಾಲ ಯಾವುದೇ ಪ್ರಕರಣಗಳಿರಲಿಲ್ಲ.

2022ರಲ್ಲಿ ಉಚ್ಚಿಲ ಸೇತುವೆ ಸಮೀಪ ಆತನ ಮೇಲೆ ಒಮ್ಮೆ ಕೊಲೆ ಯತ್ನ ನಡೆದಿತ್ತು, ಆ ಪ್ರಕರಣದಲ್ಲಿ ನೌಫಾಲ್ ಹಾಗೂ ತಂಡವನ್ನು ಪೊಲೀಸರು ಬಂಧಿಸಿದ್ದರು. ಹಳೆಯ ವೈಯಕ್ತಿಕ ದ್ವೇಷವೇ ಈ ಹತ್ಯೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಂಗಳೂರು ದಕ್ಷಿಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.’ ಹತ್ಯೆಗೆ ಸ್ಪಷ್ಟ ಕಾರಣ ಏನೆಂಬುದು ಪೊಲೀಸರ ತನಿಖೆಯಿಂದ ಇನ್ನಷ್ಟೇ ತಿಳಿದುಬರಬೇಕಾಗಿದೆ.

ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ. ಸದ್ಯಕ್ಕೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

-
crime5 days agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime2 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala2 days agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala3 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada3 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala3 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala1 month agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
