Bantawala
ಮಾಣಿಲ ಶಿರಿಯಾ ನದಿಗೆ ಸೇತುವೆ ನಿರ್ಮಾಣ: ಸಚಿವ ಸತೀಶ್ ಜಾರಕಿಹೊಳಿ ಅವರಿಂದ ಸ್ಥಳ ಪರಿಶೀಲನೆ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಣಿಲ ಗ್ರಾಮದ ಶಿರಿಯಾ ನದಿಗೆ ಕರ್ನಾಟಕ ಮತ್ತು ಕೇರಳ ರಾಜ್ಯಗಳನ್ನು ಸಂಪರ್ಕಿಸುವ ಸೇತುವೆ ನಿರ್ಮಿಸಬೇಕೆಂಬ ದಶಕಗಳ ಕಾಲದ ಬೇಡಿಕೆಗೆ ಕೊನೆಗೂ ಜೀವಕಳೆ ಬಂದಿದೆ. ಈ ಸಂಬಂಧ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಶನಿವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದಶಕಗಳ ಬೇಡಿಕೆಗೆ ಸ್ಪಂದನೆ
ಮಾಣಿಲ ಭಾಗದ ಜನರು ಕೇರಳದ ಪ್ರದೇಶಗಳಿಗೆ ತೆರಳಲು ಮತ್ತು ಗಡಿ ಭಾಗದ ಸಂಪರ್ಕ ಸುಗಮಗೊಳಿಸಲು ಈ ಸೇತುವೆಯ ನಿರ್ಮಾಣ ಅತ್ಯಂತ ಅವಶ್ಯಕವಾಗಿದೆ.

ಪ್ರಸ್ತುತ ಮಳೆಗಾಲದಲ್ಲಿ ಹಾಗೂ ತುರ್ತು ವೈದ್ಯಕೀಯ ಸಂದರ್ಭಗಳಲ್ಲಿ ಜನರು ನದಿ ದಾಟಲು ಹರಸಾಹಸ ಪಡುತ್ತಿದ್ದಾರೆ. ಈ ಸಮಸ್ಯೆಯನ್ನು ಸಚಿವರ ಗಮನಕ್ಕೆ ತಂದ ಸ್ಥಳೀಯರು, ಕೂಡಲೇ ಸುಸಜ್ಜಿತ ಸೇತುವೆ ನಿರ್ಮಿಸಿಕೊಡುವಂತೆ ಮನವಿ ಸಲ್ಲಿಸಿದರು.
ತಾಂತ್ರಿಕ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ
ಸ್ಥಳ ಪರಿಶೀಲನೆಯ ನಂತರ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಅವರು:”ಈ ಭಾಗದ ಜನರ ದಶಕಗಳ ಬೇಡಿಕೆಯ ಬಗ್ಗೆ ಗಂಭೀರವಾಗಿ ಗಮನ ಹರಿಸಲಾಗುವುದು. ಸೇತುವೆಯ ನಿರ್ಮಾಣಕ್ಕೆ ಸಂಬಂಧಿಸಿದಂತೆ ತಾಂತ್ರಿಕ ವರದಿ ಹಾಗೂ ಅಂದಾಜು ಪಟ್ಟಿಯನ್ನು (Estimation) ಸಿದ್ಧಪಡಿಸಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವರದಿ ಬಂದ ಕೂಡಲೇ ಮುಂದಿನ ಕ್ರಮ ಕೈಗೊಳ್ಳಲಾಗುವುದು,” ಎಂದು ಭರವಸೆ ನೀಡಿದರು.

ಶಾಸಕ ಅಶೋಕ್ ಕುಮಾರ್ ರೈ ಅವರಿಂದ ಮನವರಿಕೆ
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಸಚಿವರಿಗೆ ಈ ಯೋಜನೆಯ ಅನಿವಾರ್ಯತೆಯನ್ನು ಮನವರಿಕೆ ಮಾಡಿಕೊಟ್ಟರು. ಗಡಿ ಭಾಗದ ಅಭಿವೃದ್ಧಿ ಹಾಗೂ ಜನರ ಸಂಕಷ್ಟ ನಿವಾರಣೆಗೆ ಈ ಸೇತುವೆ ಎಷ್ಟು ಮುಖ್ಯ ಎಂಬುದನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್, ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಮಾಣಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಹಿರಿಯ ಮುಖಂಡ ಶ್ರೀಧರ್ ಬಾಳೆಕಲ್ಲು , ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು ಹಾಗೂ ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು

accident
ಮುಳಿಯದಲ್ಲಿ ಕೆಎಸ್ಆರ್‌ಟಿಸಿ ಬಸ್ ಮತ್ತು ಟಿಪ್ಪರ್ ಮುಖಾಮುಖಿ ಡಿಕ್ಕಿ: ಪರಸ್ಪರ ದೂರು ದಾಖಲು
ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ಮಾರ್ಚ್ 24ರಂದು ಬೆಳಿಗ್ಗೆ ಕೆಎಸ್ಆರ್‌ಟಿಸಿ ಬಸ್ ಮತ್ತು ಟಿಪ್ಪರ್ ಲಾರಿ ನಡುವೆ ಸಂಭವಿಸಿದ ಅಪಘಾತವು ಪರಸ್ಪರ ಹಲ್ಲೆ ಮತ್ತು ದೂರು-ಪ್ರತಿದೂರುಗಳಿಗೆ ಕಾರಣವಾಗಿದೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್.ಐ.ಆರ್ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಕರಣ 1: ಬಸ್ ಕಂಡಕ್ಟರ್ ಪ್ರಶಾಂತ್ ನೀಡಿದ ದೂರು (ಕ್ರೈಂ ನಂ: 0072/2026)
ಬಸ್ ನಿರ್ವಾಹಕ ಪ್ರಶಾಂತ್ ಅವರು ನೀಡಿದ ದೂರಿನಲ್ಲಿ (ಕ್ರೈಂ ನಂ: 0072/2026), ಟಿಪ್ಪರ್ ಚಾಲಕ ಬಿಲಾಲ್ ಅಜಾಗರೂಕತೆಯಿಂದ ವಾಹನ ಚಲಾಯಿಸಿ ಬಸ್ಸಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ತಿಳಿಸಿದ್ದಾರೆ. ಅಪಘಾತದ ಫೋಟೋ ತೆಗೆಯಲು ಹೋದಾಗ ಚಾಲಕನು ಅವಾಚ್ಯವಾಗಿ ಬೈದು, ಪ್ರಶಾಂತ್ ಅವರ ಎದೆ ಮತ್ತು ಕುತ್ತಿಗೆಗೆ ಕೈಯಿಂದ ಹೊಡೆದು ಹಲ್ಲೆ ನಡೆಸಿದ್ದಾನೆ. ಅಲ್ಲದೆ, ಶರ್ಟ್ ಜೇಬಿನಲ್ಲಿದ್ದ 3,000 ರೂ. ಸಾರಿಗೆ ಆದಾಯದ ಹಣವನ್ನು ದೋಚಿದ್ದು, ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ ಎಂದು ದೂರಿರುತ್ತಾರೆ. ಈ ಸಂಬಂಧ ಆರೋಪಿ ಬಿಲಾಲ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 281 (ಅಜಾಗರೂಕ ಚಾಲನೆ), 352 (ಅಪಮಾನ), 115(2) (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು) ಮತ್ತು 132 (ಸರ್ಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ 2: ಲಾರಿ ಚಾಲಕ ಸೈಯ್ಯದ್ ಬಿಲಾಲ್ ನೀಡಿದ ದೂರು (ಕ್ರೈಂ ನಂ: 0073/2026)
ಮತ್ತೊಂದೆಡೆ, ಟಿಪ್ಪರ್ ಚಾಲಕ ಸೈಯ್ಯದ್ ಬಿಲಾಲ್ ಅವರು ನೀಡಿದ ಪ್ರತಿದೂರಿನಲ್ಲಿ (ಕ್ರೈಂ ನಂ: 0073/2026), ಬಸ್ ಚಾಲಕ ಗಣೇಶ್ ಅವರ ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾರೆ. ಅಪಘಾತದ ನಂತರ ಬಸ್ ನಿರ್ವಾಹಕ ಪ್ರಶಾಂತ್ ಅವರು ಮರದ ಕೋಲಿನಿಂದ ತಮ್ಮ ಬೆನ್ನಿಗೆ ಹೊಡೆದಿದ್ದಾರೆ ಮತ್ತು ಬಸ್ ಚಾಲಕ ಕೂಡ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೆ ನಿರ್ವಾಹಕರು ಶರ್ಟ್ ಹಿಡಿದು ಎಳೆದಾಡಿ “ನಿನ್ನನ್ನು ಕೊಲ್ಲದೆ ಬಿಡುವುದಿಲ್ಲ” ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಈ ದೂರಿನನ್ವಯ ಬಸ್ ಚಾಲಕ ಮತ್ತು ನಿರ್ವಾಹಕರ ವಿರುದ್ಧ BNS ಸೆಕ್ಷನ್ 281, 352, 118(1) (ಅಪಾಯಕಾರಿ ಆಯುಧದಿಂದ ಗಾಯಗೊಳಿಸುವುದು), 115(2), 351(2) (ಕ್ರಿಮಿನಲ್ ಬೆದರಿಕೆ) ಮತ್ತು 3(5) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ

ಪ್ರಸ್ತುತ ಎರಡೂ ಪ್ರಕರಣಗಳ ಕುರಿತು ವಿಟ್ಲ ಠಾಣೆಯ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
Bantawala
ಬೊಬ್ಬೆಕೇರಿ ರಸ್ತೆ ಕಾಂಕ್ರೀಟೀಕರಣಕ್ಕೆ 60 ಲಕ್ಷ ಮಂಜೂರು: ಶಾಸಕ ಅಶೋಕ್ ರೈ ಕೊಟ್ಟ ಮಾತು ಈಡೇರಿಕೆ
ಪುತ್ತೂರು: ಬಂಟ್ವಾಳ ತಾಲೂಕು ವ್ಯಾಪ್ತಿಯ ಕಾಂಞoಗಾಡು-ಕಡೂರು ರಾಜ್ಯ ಹೆದ್ದಾರಿಯ ಬೊಬ್ಬೆಕೇರಿ ಎಂಬಲ್ಲಿನ ರಸ್ತೆ ಸಮಸ್ಯೆಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಹಲವು ವರ್ಷಗಳ ಸಾರ್ವಜನಿಕರ ಬೇಡಿಕೆಗೆ ಸ್ಪಂದಿಸಿರುವ ಪುತ್ತೂರು ಶಾಸಕ ಅಶೋಕ್ ರೈ, ರಸ್ತೆ ಕಾಂಕ್ರೀಟೀಕರಣ ಮತ್ತು ಅಭಿವೃದ್ಧಿಗಾಗಿ 60 ಲಕ್ಷ ರೂಪಾಯಿ ಅನುದಾನ ಮಂಜೂರುಗೊಳಿಸಿದ್ದಾರೆ.
ಸಮಸ್ಯೆಯ ಹಿನ್ನೆಲೆ:
ಅಂತರರಾಜ್ಯ ಸಂಪರ್ಕಿಸುವ ಈ ಪ್ರಮುಖ ಹೆದ್ದಾರಿಯ ಬೊಬ್ಬೆಕೇರಿ ಭಾಗದಲ್ಲಿ ರಸ್ತೆ ಅತ್ಯಂತ ಕಿರಿದಾಗಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳು ನಿತ್ಯ ಸಂಕಷ್ಟ ಅನುಭವಿಸುತ್ತಿದ್ದರು. ರಸ್ತೆ ಕಿರಿದಾಗಿದ್ದರಿಂದ ಮಳೆನೀರು ಹರಿದು ಹೋಗಲು ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ನೀರು ನಿಲ್ಲುತ್ತಿತ್ತು. ರಸ್ತೆಯ ಇಕ್ಕೆಲಗಳಲ್ಲಿ ಖಾಸಗಿ ಜಮೀನುಗಳಿದ್ದ ಕಾರಣ ರಸ್ತೆ ಅಗಲೀಕರಣ ಸಾಧ್ಯವಾಗಿರಲಿಲ್ಲ, ಇದರಿಂದಾಗಿ ಇಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದವು. ಶಾಲಾ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ನಡೆದಾಡಲು ರಸ್ತೆ ಬದಿಯಲ್ಲಿ ಕನಿಷ್ಠ ಜಾಗವೂ ಇಲ್ಲದಂತಾಗಿತ್ತು.

ಶಾಸಕರ ಇಚ್ಛಾಶಕ್ತಿ:
ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಸ್ಥಳಕ್ಕೆ ಭೇಟಿ ನೀಡಿದ್ದ ಶಾಸಕ ಅಶೋಕ್ ರೈ, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ಗಳೊAದಿಗೆ ಪರಿಶೀಲನೆ ನಡೆಸಿದ್ದರು. ಅಲ್ಲದೆ, ಖಾಸಗಿ ಜಮೀನು ಮಾಲೀಕರೊಂದಿಗೆ ಮಾತುಕತೆ ನಡೆಸಿ, ಸಾರ್ವಜನಿಕ ಹಿತದೃಷ್ಟಿಯಿಂದ ರಸ್ತೆ ಅಭಿವೃದ್ಧಿಗೆ ಸಹಕರಿಸುವಂತೆ ಮನವಿ ಮಾಡಿದ್ದರು. ಭರವಸೆ ನೀಡಿದ ಕೆಲವೇ ದಿನಗಳಲ್ಲಿ ಅನುದಾನ ಬಿಡುಗಡೆ ಮಾಡುವ ಮೂಲಕ ಶಾಸಕರು ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ.
“ಬೊಬ್ಬೆಕೇರಿಯಲ್ಲಿ ರಸ್ತೆ ಕಿರಿದಾಗಿದ್ದರಿಂದ ಶಾಲಾ ಮಕ್ಕಳಿಗೆ ಹಾಗೂ ವಾಹನ ಸವಾರರಿಗೆ ಜೀವಭಯವಿತ್ತು. ಈ ಸಮಸ್ಯೆಯನ್ನು ಮನಗಂಡು ಖಾಸಗಿ ಜಮೀನು ಮಾಲೀಕರೊಂದಿಗೆ ಚರ್ಚಿಸಿದ್ದೇನೆ. ಸಾರ್ವಜನಿಕರ ಅನುಕೂಲಕ್ಕಾಗಿ ಯಾರೇ ಅಡ್ಡಿಪಡಿಸಿದರೂ ಇಲ್ಲಿ ವೈಜ್ಞಾನಿಕವಾಗಿ ರಸ್ತೆ ನಿರ್ಮಾಣ ಮಾಡುವುದು ಖಚಿತ.”
— ಅಶೋಕ್ ರೈ, ಶಾಸಕರು, ಪುತ್ತೂರು
Bantawala
ವಿಟ್ಲ ಪಟ್ಟಣ ಪಂಚಾಯತ್‌ನಲ್ಲಿ ತೆರಿಗೆ ಅವಾಂತರ: ಒಂದೇ ಮಳಿಗೆಗೆ ಎರಡು ಬಾರಿ ತೆರಿಗೆ ವಸೂಲಿ ಆರೋಪ
ವಿಟ್ಲ: ಡಿಜಿಟಲೀಕರಣದ ಯುಗದಲ್ಲಿ ಪಾರದರ್ಶಕ ಆಡಳಿತ ನೀಡಬೇಕಾದ ಪಟ್ಟಣ ಪಂಚಾಯತ್ ವ್ಯವಸ್ಥೆ ಹಳಿ ತಪ್ಪಿದೆಯೇ? ಹೀಗೊಂದು ಪ್ರಶ್ನೆ ಈಗ ವಿಟ್ಲದಲ್ಲಿ ಕೇಳಿಬರುತ್ತಿದೆ. ಸರ್ಕಾರಿ ಕಚೇರಿಗಳಲ್ಲಿ ದಾಖಲೆಗಳ ನಿರ್ವಹಣೆ ಎಷ್ಟು ಎಡವಟ್ಟಾಗಿದೆ ಎಂಬುದಕ್ಕೆ ವಿಟ್ಲ ಪಟ್ಟಣ ಪಂಚಾಯತ್‌ನಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಪಟ್ಟಣ ಪಂಚಾಯತ್ ವ್ಯಾಪ್ತಿಯ ಅಂಗಡಿ ಮಳಿಗೆಯೊಂದಕ್ಕೆ ಒಂದೇ ಸಾಲಿನ ತೆರಿಗೆಯನ್ನು ಎರಡು ಬಾರಿ ವಸೂಲಿ ಮಾಡಿರುವ ಬಗ್ಗೆ ನಾಗರಿಕರೊಬ್ಬರು ಪಂಚಾಯತ್ ಅಧ್ಯಕ್ಷರಿಗೆ ಮತ್ತು ಕಾರ್ಯನಿರ್ವಾಹಣಾಧಿಕಾರಿಗಳಿಗೆ ಲಿಖಿತ ದೂರು ನೀಡಿದ್ದಾರೆ.

ಘಟನೆಯ ವಿವರ
ವಿಟ್ಲ ಕಸಬಾ ಗ್ರಾಮದ ಚಂದಳಿಕೆ ಕೂಟೇಲು ನಿವಾಸಿ ಚಂದ್ರಹಾಸ ಶೆಟ್ಟಿ ಬಿ. ಅವರು ಶಾಲಾ ರಸ್ತೆಯಲ್ಲಿರುವ ತಮ್ಮ ಅಂಗಡಿ ಕೋಣೆ (ಸಂಖ್ಯೆ 5-201/14) ಗೆ ಸಂಬಂಧಿಸಿದಂತೆ ಈ ದೂರು ದಾಖಲಿಸಿದ್ದಾರೆ.
ಮೊದಲ ಪಾವತಿ: ಚಂದ್ರಹಾಸ ಶೆಟ್ಟಿ ಅವರು 2025-26ನೇ ಸಾಲಿನ ವಾರ್ಷಿಕ ತೆರಿಗೆಯಾದ 982.00 ರೂ. ಗಳನ್ನು ದಿನಾಂಕ 02.04.2025 ರಂದೇ ಪಾವತಿಸಿದ್ದರು. ಫೆಬ್ರವರಿ 2026ರಲ್ಲಿ ಅವರು ತಮ್ಮ ಇ-ಖಾತೆ ನವೀಕರಣಕ್ಕಾಗಿ ಪಂಚಾಯತ್‌ಗೆ ಹೋದಾಗ, ಅಲ್ಲಿನ ಸಿಬಂದಿಗಳು ತೆರಿಗೆ ಪಾವತಿಯಾಗಿಲ್ಲ ಎಂದು ವಾದಿಸಿದ್ದಾರೆ. ತಾನು ಈಗಾಗಲೇ ಹಣ ಪಾವತಿಸಿರುವುದಾಗಿ ಚಂದ್ರಹಾಸ ಶೆಟ್ಟಿ ಹೇಳಿದರೂ, ದಾಖಲೆಗಳನ್ನು ಪರಿಶೀಲಿಸದ ಸಿಬಂದಿಗಳು ಅವರನ್ನು ಸುಳ್ಳುಗಾರನೆಂಬಂತೆ ಬಿಂಬಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಎರಡನೇ ಬಾರಿ ಪಾವತಿ: ಇ-ಖಾತೆ ಮಾಡಿಸಿಕೊಳ್ಳುವುದು ಅನಿವಾರ್ಯವಾಗಿದ್ದರಿಂದ, ಅವರು ಅನ್ಯಮಾರ್ಗವಿಲ್ಲದೆ ದಿನಾಂಕ 25.02.2026 ರಂದು ಮತ್ತೆ 1,368.00 ರೂ. ತೆರಿಗೆ ಪಾವತಿಸಿದ್ದಾರೆ. ನಂತರದ ಬೆಳವಣಿಗೆಯಲ್ಲಿ ಚಂದ್ರಹಾಸ ಶೆಟ್ಟಿ ಅವರಿಗೆ ಮನೆಯಲ್ಲಿ ಹುಡುಕಾಡಿದಾಗ 02.04.2025ರಂದು ಪಟ್ಟಣ ಪಂಚಾಯತಿಗೆ ತೆರಿಗೆ ಕಟ್ಟಿದ ರಸೀದಿ ಲಭ್ಯವಾಗಿದ್ದು, ಅದನ್ನು ಕಚೇರಿಗೆ ತಂದು ತೋರಿಸಿದರೂ ಸಿಬಂದಿಗಳು ತಮ್ಮ ತಪ್ಪನ್ನು ಒಪ್ಪಿಕೊಳ್ಳದೆ ಉಡಾಫೆಯಾಗಿ ವರ್ತಿಸಿದ್ದಾರೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ.
“ಡಿಜಿಟಲೀಕರಣದ ಈ ಕಾಲದಲ್ಲಿ ಒಂದೇ ಕೋಣೆಯ ತೆರಿಗೆ ಎರಡು ಬಾರಿ ಪಾವತಿಯಾಗಲು ಹೇಗೆ ಸಾಧ್ಯ? ಪಂಚಾಯತ್ ದಾಖಲೆಗಳಲ್ಲಿ ಪಾರದರ್ಶಕತೆ ಇಲ್ಲವೇ ಅಥವಾ ವ್ಯವಸ್ಥಿತವಾಗಿ ದಾಖಲೆಗಳನ್ನು ಮರೆಮಾಚಲಾಗುತ್ತಿದೆಯೇ?” ಎಂದು ಅವರು ಪ್ರಶ್ನಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ, ತನಗಾದ ಆರ್ಥಿಕ ನಷ್ಟವನ್ನು ಸರಿಪಡಿಸಬೇಕು ಮತ್ತು ಕರ್ತವ್ಯ ಲೋಪ ಎಸಗಿದ ಸಿಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಚಂದ್ರಹಾಸ ಶೆಟ್ಟಿ ಅವರು ದೂರಿನಲ್ಲಿ ಒತ್ತಾಯಿಸಿದ್ದಾರೆ.
ಕ್ಷೇತ್ರದ ಶಾಸಕರು ಮತ್ತು ಮೇಲಾಧಿಕಾರಿಗಳಿಗೂ ದೂರು
ವಿಟ್ಲ ಪಟ್ಟಣ ಪಂಚಾಯತ್‌ನ ಆಡಳಿತಾತ್ಮಕ ವ್ಯವಸ್ಥೆಯಲ್ಲಿ ಲೋಪ ಕಂಡುಬಂದಿರುವುದರಿಂದ ದೂರನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ, ಜಿಲ್ಲೆಯ ನಗರಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವ್ಯವಸ್ಥೆಯ ಸರ್ವೋಚ್ಚ ಅಧಿಕಾರಿಯಾಗಿರುವ ದ.ಕ. ಜಿಲ್ಲಾಧಿಕಾರಿಗಳು ಮತ್ತುಪಟ್ಟಣ ಪಂಚಾಯತ್‌ಗಳ ಕಾರ್ಯವೈಖರಿಯನ್ನು ಮೇಲ್ವಿಚಾರಣೆ ಮಾಡುವ ಯೋಜನಾ ನಿರ್ದೇಶಕರಿಗೆ ನೀಡಿದ್ದು, ತನಗಾದ ನೋವನ್ನು ತಿಳಿಸಿದ್ದಾರೆ.
-
crime1 day agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime2 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala3 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada3 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala3 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala1 month agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
-
crime2 months agoಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
