suicide
ವಿಟ್ಲ: ನಾಪತ್ತೆಯಾಗಿದ್ದ ಜೆಸಿಬಿ ಆಪರೇಟರ್ ಶವವಾಗಿ ಪತ್ತೆ; ಆತ್ಮಹತ್ಯೆ ಶಂಕೆ
ವಿಟ್ಲ: ಬುಧವಾರ ಸಂಜೆಯಿಂದ ನಾಪತ್ತೆಯಾಗಿದ್ದ ಜೆಸಿಬಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಯುವಕನೋರ್ವ, ಇಂದು ಸಂಜೆ ಮನೆಯ ಸಮೀಪದ ಗುಡ್ಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವಿಟ್ಲದಲ್ಲಿ ನಡೆದಿದೆ.
ವಿಟ್ಲ ಕಸಬಾ ಗ್ರಾಮದ ನೆಕ್ಕರೆಕಾಡು ನಿವಾಸಿ ರಮೇಶ್ ನಾಯ್ಕ (35) ಮೃತಪಟ್ಟ ದುರ್ದೈವಿ. ಇವರು ಬುಧವಾರ ಸಂಜೆಯಿಂದ ಮನೆಯಿಂದ ನಾಪತ್ತೆಯಾಗಿದ್ದರು. ಕುಟುಂಬಸ್ಥರು ಮತ್ತು ಸ್ಥಳೀಯರು ಸಾಕಷ್ಟು ಹುಡುಕಾಟ ನಡೆಸಿದರೂ ಅವರ ಸುಳಿವು ಸಿಕ್ಕಿರಲಿಲ್ಲ. ಆದರೆ, ಇಂದು ಸಂಜೆ ಅವರ ಮನೆಯ ಸಮೀಪದ ಗುಡ್ಡ ಪ್ರದೇಶದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ಮೃತ ರಮೇಶ್ ನಾಯ್ಕ ಅವರು ತಂದೆ-ತಾಯಿಯನ್ನು ಕಳೆದುಕೊಂಡಿದ್ದರು.ಇಬ್ಬರು ವಿವಾಹಿತ ಸಹೋದರಿಯರಿದ್ದು, ರಮೇಶ್ ಅವರು ನೆಕ್ಕರೆಕಾಡಿನಲ್ಲಿ ತಮ್ಮ ವೃದ್ಧೆ ಚಿಕ್ಕಮ್ಮನ ಜೊತೆಗೆ ವಾಸವಾಗಿದ್ದರು.ಇವರು ಜೆಸಿಬಿ ಆಪರೇಟರ್ ಆಗಿ ವೃತ್ತಿ ನಿರ್ವಹಿಸುತ್ತಿದ್ದರು.
ರಮೇಶ್ ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
state
ಪ್ರೇಮ ವಿವಾಹವಾದ ಟೆಕ್ಕಿ ದಂಪತಿಯ ದುರಂತ ಅಂತ್ಯ: ಪತಿ ಆತ್ಮಹತ್ಯೆ ಬೆನ್ನಲ್ಲೇ ಪತ್ನಿಯೂ ಸಾವು!
ಪ್ರೀತಿಸಿ ಮದುವೆಯಾಗಿದ್ದ ಅಂತರ್ಧರ್ಮೀಯ ಸಾಫ್ಟ್ವೇರ್ ಎಂಜಿನಿಯರ್ ದಂಪತಿಗಳು ವಾರದ ಅಂತರದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಮನಕಲಕುವ ಘಟನೆ ನಗರದ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ತೆಲಂಗಾಣದ ಹೈದರಾಬಾದ್ ಮೂಲದ ಭಾನುಚಂದ್ರರೆಡ್ಡಿ (34) ಹಾಗೂ ಅವರ ಪತ್ನಿ ಸಹಿದಾ ಸಿರಾಜ್ (31) ಎಂದು ಗುರುತಿಸಲಾಗಿದೆ.
ಭಾನುಚಂದ್ರರೆಡ್ಡಿ ಅಮೆರಿಕದಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದರೆ, ಸಹಿದಾ ಬೆಂಗಳೂರಿನ ಪ್ರತಿಷ್ಠಿತ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಪರಸ್ಪರ ಪ್ರೀತಿಸುತ್ತಿದ್ದ ಇವರು, ಅಂತರ್ಧರ್ಮೀಯ ವಿವಾಹವಾಗಿದ್ದ ವಿಚಾರವನ್ನು ಪೋಷಕರಿಂದ ಮುಚ್ಚಿಟ್ಟಿದ್ದರು. ಕಳೆದ ಆರು ತಿಂಗಳಿನಿಂದ ಥಣಿಸಂದ್ರ ಮುಖ್ಯರಸ್ತೆಯ ಭಾರತಿಸಿಟಿಯಲ್ಲಿರುವ ‘ನಿಕಿಹೋಮ್’ ಅಪಾರ್ಟ್ಮೆಂಟ್ನ 8ನೇ ಮಹಡಿಯ ಫ್ಲಾಟ್ನಲ್ಲಿ ವಾಸವಾಗಿದ್ದರು.
ಕೆಲಸ ಕಳೆದುಕೊಂಡಿದ್ದ ಭಾನುಚಂದ್ರರೆಡ್ಡಿ:
ಮೂಲಗಳ ಪ್ರಕಾರ, ಆರು ತಿಂಗಳ ಹಿಂದೆ ಎಐ (AI) ತಂತ್ರಜ್ಞಾನದ ಕಾರಣದಿಂದಾಗಿ ಅಮೆರಿಕದಲ್ಲಿ ಕೆಲಸ ಕಳೆದುಕೊಂಡಿದ್ದ ಭಾನುಚಂದ್ರರೆಡ್ಡಿ ಭಾರತಕ್ಕೆ ಮರಳಿದ್ದರು. ನಂತರ ಬೇರೆಲ್ಲೂ ಕೆಲಸ ಸಿಗದ ಕಾರಣ ಅವರು ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.
ಒಂದೇ ವಾರದಲ್ಲಿ ನಡೆದ ಎರಡು ಸಾವು:
ಪತಿಯ ಆತ್ಮಹತ್ಯೆ: ಕಳೆದ ವಾರ ಸಹಿದಾ ಅವರು ಹೈದರಾಬಾದ್ಗೆ ಕುಟುಂಬಸ್ಥರನ್ನು ನೋಡಲು ತೆರಳಿದ್ದ ಸಮಯದಲ್ಲಿ, ಭಾನುಚಂದ್ರರೆಡ್ಡಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
ಪತ್ನಿಯ ದುರಂತ ಅಂತ್ಯ: ನಿನ್ನೆ ಹೈದರಾಬಾದ್ನಿಂದ ವಾಪಸ್ ಬಂದ ಸಹಿದಾ ಅವರು ಪತಿ ಸಾವನ್ನಪ್ಪಿರುವುದನ್ನು ಕಂಡು ತೀವ್ರ ಆಘಾತಕ್ಕೊಳಗಾಗಿದ್ದಾರೆ. ಅದೇ ನೋವಿನಲ್ಲಿ ಅಪಾರ್ಟ್ಮೆಂಟ್ನ 11ನೇ ಮಹಡಿಗೆ ತೆರಳಿ ಅಲ್ಲಿಂದ ಕೆಳಕ್ಕೆ ಜಿಗಿದು ಪ್ರಾಣ ಕಳೆದುಕೊಂಡಿದ್ದಾರೆ.
ಸಹಿದಾ ಅವರು ರಾಜಕೀಯ ಪ್ರಭಾವವಿರುವ ಕುಟುಂಬದ ಹಿನ್ನೆಲೆ ಹೊಂದಿದ್ದು, ಅವರಿಗೆ ಬೇರೆ ಕಡೆ ಮದುವೆ ಮಾಡಲು ಪೋಷಕರು ಸಿದ್ಧತೆ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕೊತ್ತನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.
Kasaragod
ಬಿಎಲ್ಒ ಮುಹಮ್ಮದ್ ಸವಾದ್ ಆತ್ಮಹತ್ಯೆ ಪ್ರಕರಣ; ಸಮಗ್ರ ತನಿಖೆಗೆ ಜಿಲ್ಲಾಧಿಕಾರಿ ಆದೇಶ
ಕೆಲಸದ ಒತ್ತಡದ ಹಿನ್ನೆಲೆಯಲ್ಲಿ ಬೂತ್ ಮಟ್ಟದ ಅಧಿಕಾರಿ (BLO) ಒಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಕುಂಬಳೆ ಸಮೀಪದ ಮೊಗ್ರಾಲ್ನಲ್ಲಿ ನಡೆದಿದೆ.
ಮೊಗ್ರಾಲ್ ನಿವಾಸಿ ಮುಹಮ್ಮದ್ ಸವಾದ್ (32) ಮೃತಪಟ್ಟ ದುರ್ದೈವಿ. ಇವರು ಚೆರ್ಕಳ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಶನಿವಾರ ಬೆಳಿಗ್ಗೆಯಿಂದಲೇ ನಾಪತ್ತೆಯಾಗಿದ್ದ ಸವಾದ್ಗಾಗಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದರು. ಈ ವೇಳೆ ಮೊಗ್ರಾಲ್ ಸೇತುವೆಯ ಮೇಲೆ ಅವರ ಬೈಕ್ ಪತ್ತೆಯಾಗಿತ್ತು. ಬಳಿಕ ಸ್ಥಳೀಯರು ಮತ್ತು ಕುಟುಂಬಸ್ಥರು ನದಿಯಲ್ಲಿ ಹುಡುಕಾಟ ನಡೆಸಿದಾಗ ಸವಾದ್ ಅರೆಪ್ರಜ್ಞಾವಸ್ಥೆಯಲ್ಲಿ ಪತ್ತೆಯಾಗಿದ್ದಾರೆ. ಕೂಡಲೇ ಅವರನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ, ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಚುನಾವಣಾ ಆಯೋಗದ ಉನ್ನತ ಅಧಿಕಾರಿಗಳು ಅತ್ಯಂತ ಕಡಿಮೆ ಕಾಲಾವಕಾಶದಲ್ಲಿ ಹೆಚ್ಚಿನ ಕೆಲಸಗಳನ್ನು ಪೂರ್ಣಗೊಳಿಸುವಂತೆ ಬಿಎಲ್ಒಗಳ ಮೇಲೆ ನಿರಂತರ ಒತ್ತಡ ಹೇರುತ್ತಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಪ್ರಕರಣದಲ್ಲಿ, ಘಟನೆಯ ಹಿಂದಿನ ದಿನವಷ್ಟೇ ಅವರಿಗೆ ಹೆಚ್ಚಿನ ಕೆಲಸದ ಜವಾಬ್ದಾರಿ ನೀಡಲಾಗಿದ್ದು, ಮರುದಿನ ಮಧ್ಯಾಹ್ನ 12 ಗಂಟೆಯೊಳಗೆ ಅದನ್ನು ಕಡ್ಡಾಯವಾಗಿ ಮುಗಿಸುವಂತೆ ಗಡುವು ನೀಡಲಾಗಿತ್ತು ಎಂದು ತಿಳಿದುಬಂದಿದೆ.
ಕೇವಲ ಕೇರಳ ಮಾತ್ರವಲ್ಲದೆ, ದೇಶದಾದ್ಯಂತ ಬಿಎಲ್ಒಗಳು ಇಂತಹ ಕಠಿಣ ಕೆಲಸದ ಒತ್ತಡವನ್ನು ಎದುರಿಸುತ್ತಿದ್ದಾರೆ. ಒಬ್ಬ ಶಿಕ್ಷಕರಾಗಿ ಅತಿಯಾದ ಮಾನಸಿಕ ಒತ್ತಡವನ್ನು ನಿಭಾಯಿಸಲು ಸಾಧ್ಯವಾಗದೆ ಅವರು ಈ ತೀವ್ರ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಚುನಾವಣಾ ಪ್ರಕ್ರಿಯೆಯ ಸಂದರ್ಭದಲ್ಲಿ ಅಧಿಕಾರಿಗಳಿಗೆ ಕೆಲಸ ನಿರ್ವಹಿಸಲು ಸೂಕ್ತ ಕಾಲಾವಕಾಶ ನೀಡಬೇಕು ಮತ್ತು ಮಾನವೀಯ ನೆಲೆಯಲ್ಲಿ ಅವರ ಶ್ರಮವನ್ನು ಪರಿಗಣಿಸಬೇಕು ಎಂಬ ಒತ್ತಾಯಗಳು ಈಗ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.
Bantawala
ಬಂಟ್ವಾಳ: ನಾಪತ್ತೆಯಾಗಿದ್ದ ಕಲ್ಲಡ್ಕದ ಯುವ ಉದ್ಯಮಿ ಸಂಪಾಜೆ ಸಮೀಪದ ಗೂನಡ್ಕದಲ್ಲಿ ಶವವಾಗಿ ಪತ್ತೆ
ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಉದ್ಯಮ ನಡೆಸುತ್ತಿದ್ದ ಯುವಕನೊಬ್ಬ ಸಂಪಾಜೆ ಸಮೀಪದ ಗೂನಡ್ಕದ ಲಾಡ್ಜ್ ಒಂದರ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮೃತ ವ್ಯಕ್ತಿಯನ್ನು ಪಾಣೆಮಂಗಳೂರು ಹೊರವಲಯದ ಬೊಂಡಾಲ ಶಾಂತಿಗುಡ್ಡೆ ನಿವಾಸಿ, ನಾರಾಯಣ ಕುಲಾಲ್ ಅವರ ಪುತ್ರ ತಿಲಕರಾಜ್ (28) ಎಂದು ಗುರುತಿಸಲಾಗಿದೆ. ಇವರು ಮಾರ್ಚ್ 19ರಂದು ಅನಂತಾಡಿಯಲ್ಲಿ ಮನೆಯೊಂದರ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಕೆಲಸಕ್ಕೆ ಬೇಕಾದ ಮೆಟೀರಿಯಲ್ ಹಾಕಿ ಬಂದಿದ್ದರು. ಮಾರ್ಚ್ 20ರ ಸಂಜೆಯಿಂದ ಮನೆಯವರ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದರು.
ತಿಲಕರಾಜ್ ಅವರು ಕಲ್ಲಡ್ಕದಿಂದ ಮಡಿಕೇರಿ ರಸ್ತೆಯ ಮೂಲಕ ತನ್ನ ಕಾರಿನಲ್ಲಿ ಪ್ರಯಾಣ ಬೆಳೆಸಿದ್ದರು. ಮಾರ್ಚ್ 20ರ ಸಂಜೆ ವೇಳೆಗೆ ಸಂಪಾಜೆ ಸಮೀಪದ ಗೂನಡ್ಕದಲ್ಲಿ ರೂಮ್ ಮಾಡಿಕೊಂಡಿದ್ದರು. ಮಾರ್ಚ್ 21ರ ಬೆಳಗ್ಗೆ ರೂಮ್ನ ಬಾಗಿಲು ತೆರೆಯದಿದ್ದಾಗ ಅನುಮಾನಗೊಂಡ ಲಾಡ್ಜ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದ ಬಳಿಕ, ಸಮಾಜ ಸೇವಕ ತಾಜ್ ಟೀಲಿಯವರ ಸಹಕಾರದೊಂದಿಗೆ ಕಿಟಕಿ ಮೂಲಕ ಒಳ ಪ್ರವೇಶಿಸಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ನಿಗೂಢ ಕಾರಣ:
ಯುವ ಉದ್ಯಮಿಯಾಗಿದ್ದ ಇವರಿಗೆ ಯಾವುದೇ ಸಾಲಬಾಧೆ ಅಥವಾ ಆರ್ಥಿಕ ಸಮಸ್ಯೆಗಳು ಮೇಲ್ನೋಟಕ್ಕೆ ಕಂಡುಬಂದಿಲ್ಲ. ಉತ್ತಮವಾಗಿ ಉದ್ಯಮ ನಡೆಸುತ್ತಿದ್ದ ಇವರು ಇಂತಹ ಕಠಿಣ ನಿರ್ಧಾರ ಕೈಗೊಳ್ಳಲು ಕಾರಣವೇನೆಂಬುದು ನಿಗೂಢವಾಗಿದೆ. ಸದ್ಯ ಮೃತದೇಹವನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
-
crime5 days agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime2 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala2 days agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala3 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada3 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala3 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala1 month agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
