crime
ಮಸೀದಿಗಳ ಕಾಣಿಕೆ ಡಬ್ಬಿ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಕಳ್ಳನ ಬೆನ್ನಟ್ಟಿ ಹಿಡಿದ ಸಾರ್ವಜನಿಕರು!
ಕಳೆದ ಕೆಲವು ಸಮಯದಿಂದ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮಸೀದಿಗಳನ್ನೇ ಗುರಿಯಾಗಿಸಿಕೊಂಡು ಹಗಲು ಹೊತ್ತಿನಲ್ಲಿ ಕಾಣಿಕೆ ಡಬ್ಬಿ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಕಳ್ಳನೊಬ್ಬ ಎಲಿಮಲೆಯಲ್ಲಿ ಸಾರ್ವಜನಿಕರ ಸಾಹಸದಿಂದ ಸಿಕ್ಕಿಬಿದ್ದಿದ್ದಾನೆ. ಸೋಮವಾರ ನಡೆದ ಈ ಕಾರ್ಯಾಚರಣೆಯಲ್ಲಿ ಎಲಿಮಲೆ ಸಾರ್ವಜನಿಕರು ಕಳ್ಳನನ್ನು ಸಿನೆಮಾ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಆಂಧ್ರಪ್ರದೇಶ ವೆಸ್ಟ್ ಗೋಧಾವರಿ ಅಕ್ಕಿವೀಡು ಮಂದಲಮ್ ನಿವಾಸಿ ಮಹಮ್ಮದ್ ಆದಿಲ್ ಬಾಷಾನ ಮಗ ಮಹಮ್ಮದ್ ಸಲ್ಮಾನ್ ಅಹಮ್ಮದ್ ಬಂಧಿತ ಆರೋಪಿ.
ಸೋಮವಾರ ಬೆಳಿಗ್ಗೆ ಸುಮಾರು 10 ಗಂಟೆಯ ವೇಳೆಗೆ ಎಲಿಮಲೆ ಮಸೀದಿಯ ಹೊರಭಾಗದಲ್ಲಿದ್ದ ಕಾಣಿಕೆ ಡಬ್ಬಿಯನ್ನು ಒಡೆಯುವ ಶಬ್ದ ಕೇಳಿಬಂದಿದೆ. ತಕ್ಷಣ ಎಚ್ಚೆತ್ತ ಮಸೀದಿಯ ಗುರುಗಳು ಹೊರಬಂದು ನೋಡಿದಾಗ, ವ್ಯಕ್ತಿಯೊಬ್ಬ ಕಾಣಿಕೆ ಡಬ್ಬಿಯನ್ನು ಒಡೆಯುತ್ತಿರುವುದು ಬೆಳಕಿಗೆ ಬಂದಿದೆ. ಗುರುಗಳು ಆತನನ್ನು ಹಿಡಿಯಲು ಮುಂದಾದಾಗ, ಕಳ್ಳನು ಅವರ ಕೈಯಿಂದ ತಪ್ಪಿಸಿಕೊಂಡು ರಸ್ತೆಯ ಕಡೆಗೆ ವೇಗವಾಗಿ ಓಡಲಾರಂಭಿಸಿದ್ದಾನೆ.
ಮಸೀದಿಯ ಗುರುಗಳು ತಕ್ಷಣವೇ ಎಲಿಮಲೆ ಪೇಟೆಯ ಅಡಿಕೆ ವ್ಯಾಪಾರಿಯಾದ ಹ್ಯಾರಿಸ್ ಎಂಬವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಸಮಯಪ್ರಜ್ಞೆ ಮೆರೆದ ಹ್ಯಾರಿಸ್, ತಕ್ಷಣವೇ ತಮ್ಮ ಕಾರಿನಲ್ಲಿ ಕಳ್ಳನನ್ನು ಬೆನ್ನಟ್ಟಿದ್ದಾರೆ. ಮಸೀದಿಯಿಂದ ಸ್ವಲ್ಪ ದೂರದಲ್ಲಿಯೇ ಆರೋಪಿಯನ್ನು ತಡೆದು ಹಿಡಿಯುವಲ್ಲಿ ಅವರು ಯಶಸ್ವಿಯಾದರು. ಬಳಿಕ ಸ್ಥಳೀಯರು ಜಮಾಯಿಸಿ, ಆರೋಪಿಯನ್ನು ಅದೇ ಕಾರಿನಲ್ಲಿ ಮಸೀದಿಗೆ ಕರೆತಂದಿದ್ದಾರೆ.

ಸಿಸಿಟಿವಿಯಲ್ಲಿ ಸೆರೆಯಾಗಿದ್ದ ಹಳೇ ಕಳ್ಳ:
ಮಾಹಿತಿ ತಿಳಿದ ತಕ್ಷಣ ಸುಳ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಈತ ಇತ್ತೀಚೆಗಷ್ಟೇ ಗೂನಡ್ಕದ ಬದ್ರಿಯಾ ಮಸೀದಿಯಲ್ಲಿ ಕಳ್ಳತನ ನಡೆಸಿ ಪರಾರಿಯಾಗಿದ್ದನು ಎನ್ನಲಾಗಿದೆ. ಆ ಸಂದರ್ಭದಲ್ಲಿ ಈತನ ಕೃತ್ಯದ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಸಂಪಾಜೆ ಗೂನಡ್ಕ ಎಂಬಲ್ಲಿರುವ ಮಸೀದಿಯ ಆವರಣದಲ್ಲಿದ್ದ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಠಾಣೆಯಲ್ಲಿ ಅ.ಕ್ರ 45/2026 ಕಲಂ 303(2)BNS -2023 ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿತ್ತು. ಆರೋಪಿತನಿಂದ ಕಳವು ಮಾಡಿದ 2000 ರೂ ನಗದು ಹಣವನ್ನು ಸ್ವಾದೀನಪಡಿಸಿಕೊಂಡು, ಮಾನ್ಯ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
ಸ್ಥಳೀಯರ ಈ ಧೈರ್ಯ ಮತ್ತು ಸಮಯಪ್ರಜ್ಞೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.

crime
ಕಾರ್ಕಳ: ಬೆಳ್ತಂಗಡಿ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ – ಪತ್ನಿ ಸೌಮ್ಯ ಶೆಟ್ಟಿ ಅರೆಸ್ಟ್
ಕಾರ್ಕಳ: ಇಡೀ ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಬೆಳ್ತಂಗಡಿಯ ಯುವ ಉದ್ಯಮಿ ಸುದೀಪ್ ರೈ (36) ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ಅವರ ಪತ್ನಿ ಕಾರ್ಕಳದ ಸೌಮ್ಯ ಶೆಟ್ಟಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ಹಿನ್ನೆಲೆ:
ನೆಲ್ಯಾಡಿ ಮೂಲದ ಉದ್ಯಮಿ ಸುದೀಪ್ ರೈ ಅವರು ಕಾರ್ಕಳದ ಕಜೆ ನಿವಾಸಿ ಸೌಮ್ಯ ಶೆಟ್ಟಿ ಎಂಬುವವರನ್ನು ಮನೆಯವರಿಗೆ ತಿಳಿಸದೆ ಕಳೆದ ಫೆಬ್ರವರಿಯಲ್ಲಿ ರಿಜಿಸ್ಟರ್ ಮದುವೆಯಾಗಿದ್ದರು. ಮದುವೆಯಾದ ಕೇವಲ ಒಂದು ತಿಂಗಳಲ್ಲೇ, ಅಂದರೆ ಮಾರ್ಚ್ 17ರಂದು ಸೌಮ್ಯ ಶೆಟ್ಟಿಯವರ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮಾರ್ಚ್ 29ರಂದು ಸುದೀಪ್ ಸಾವನ್ನಪ್ಪಿದ್ದರು.
ಟ್ವಿಸ್ಟ್ ನೀಡಿದ ತನಿಖೆ:
ಸುದೀಪ್ ಅವರ ಸಾವಿನ ಹಿಂದೆ ಸೌಮ್ಯ ಶೆಟ್ಟಿಯವರ ಕಿರುಕುಳ ಹಾಗೂ ವಂಚನೆಯಿದೆ ಎಂದು ಸುದೀಪ್ ಅವರ ತಂದೆ ದಾಮೋದರ ರೈ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆಯ ವೇಳೆ ಸೌಮ್ಯ ಶೆಟ್ಟಿಯವರ ಮೇಲೆ ಹನಿಟ್ರ್ಯಾಪ್ ಹಾಗೂ ಹಲವು ಮದುವೆಯಾಗಿರುವ ಗಂಭೀರ ಆರೋಪಗಳು ಕೇಳಿಬಂದಿದ್ದವು.
- ಆರೋಪಗಳು: ಸೌಮ್ಯ ಶೆಟ್ಟಿ ಈ ಹಿಂದೆ ಹಲವರನ್ನು ವಿವಾಹವಾಗಿ ವಂಚಿಸಿದ್ದಾರೆ ಎಂಬ ಆರೋಪಗಳು ಮತ್ತು ಹಳೆಯ ಪ್ರಿಯತಮನ ಹೇಳಿಕೆಗಳು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ನೀಡಿದ್ದವು.
- ಬಂಧನ: ಸುದೀಪ್ ರೈ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಹಾಗೂ ದೂರಿನಲ್ಲಿ ಉಲ್ಲೇಖಿಸಲಾದ ಗಂಭೀರ ಅಂಶಗಳನ್ನು ಆಧರಿಸಿ ಕಾರ್ಕಳ ಪೊಲೀಸರು ಸೌಮ್ಯ ಶೆಟ್ಟಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಈ ಪ್ರಕರಣವು ಕರಾವಳಿ ಭಾಗದಲ್ಲಿ ಸಂಚಲನ ಮೂಡಿಸಿದ್ದು, ಪೊಲೀಸರು ಈಕೆಯ ಇತರ ವಂಚನೆ ಜಾಲಗಳ ಬಗ್ಗೆಯೂ ತನಿಖೆ ಚುರುಕುಗೊಳಿಸಿದ್ದಾರೆ.
crime
‘ರುದ್ರಾಕ್ಷಿ ಬೆಡಗಿ’ ಮೊನಾಲಿಸಾ ಮದುವೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪತಿ ಫರ್ಮನ್ ವಿರುದ್ಧ ಪೋಕ್ಸೋ ಕೇಸ್ ದಾಖಲು!
ಸಾಮಾಜಿಕ ಜಾಲತಾಣಗಳಲ್ಲಿ ‘ರುದ್ರಾಕ್ಷಿ ಬೆಡಗಿ’ ಎಂದೇ ಜನಪ್ರಿಯರಾಗಿದ್ದ ಮೊನಾಲಿಸಾ ಭೋಸಲೆ ಅವರ ವಿವಾಹ ಪ್ರಕರಣ ಇದೀಗ ಕಾನೂನು ಸಂಕಷ್ಟದ ಸುಳಿಯಲ್ಲಿ ಸಿಲುಕಿದೆ. ಮೊನಾಲಿಸಾ ಅವರು ವಿವಾಹದ ಸಂದರ್ಭದಲ್ಲಿ ಅಪ್ರಾಪ್ತೆಯಾಗಿದ್ದರು ಎಂಬುದು ಅಧಿಕೃತ ತನಿಖೆಯಲ್ಲಿ ದೃಢಪಟ್ಟಿದ್ದು, ಈ ಸಂಬಂಧ ಅವರ ಪತಿ ಫರ್ಮನ್ ವಿರುದ್ಧ ಪೊಲೀಸರು ಪೋಕ್ಸೋ (POCSO) ಕಾಯ್ದೆಯಡಿ ಗಂಭೀರ ಪ್ರಕರಣ ದಾಖಲಿಸಿದ್ದಾರೆ.

ವಯಸ್ಸಿನ ವಂಚನೆ ಬಯಲಾಗಿದ್ದು ಹೇಗೆ?
ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿದಾಗ ಆಘಾತಕಾರಿ ಸತ್ಯಗಳು ಹೊರಬಿದ್ದಿವೆ. ಆಸ್ಪತ್ರೆಯ ಅಧಿಕೃತ ದಾಖಲೆಗಳ ಪ್ರಕಾರ ಮೊನಾಲಿಸಾ ಅವರ ಜನ್ಮ ದಿನಾಂಕ ಡಿಸೆಂಬರ್ 30, 2009.
ನಕಲಿ ದಾಖಲೆ: ಮದುವೆಯ ನೋಂದಣಿಗಾಗಿ ಮಹೇಶ್ವರ ಪುರಸಭೆಯ ಹೆಸರಿನಲ್ಲಿ ನಕಲಿ ಜನನ ಪ್ರಮಾಣಪತ್ರ ಸೃಷ್ಟಿಸಲಾಗಿತ್ತು. ಅದರಲ್ಲಿ ಜನ್ಮ ದಿನಾಂಕವನ್ನು ಜನವರಿ 1, 2008 ಎಂದು ಸುಳ್ಳಾಗಿ ತೋರಿಸಲಾಗಿತ್ತು. ಮಾರ್ಚ್ 11 ರಂದು ಕೇರಳದಲ್ಲಿ ಮದುವೆ ನಡೆದಾಗ ಮೊನಾಲಿಸಾ ಅವರಿಗೆ ಕೇವಲ 16 ವರ್ಷ 2 ತಿಂಗಳು ವಯಸ್ಸಾಗಿತ್ತು.
ದೇವಸ್ಥಾನದ ಸಮಜಾಯಿಷಿ ಮತ್ತು ಕಾನೂನು ಕ್ರಮ
ಕೇರಳದ ನೈನಾರ್ ದೇವಾಲಯದಲ್ಲಿ ಈ ವಿವಾಹ ನೆರವೇರಿತ್ತು. ಆಧಾರ್ ಕಾರ್ಡ್ ನೋಡಿ ಮದುವೆ ಮಾಡಿಸಿದ್ದೇವೆ ಎಂದು ದೇವಾಲಯದ ಮಂಡಳಿ ಹೇಳಿಕೊಂಡಿದ್ದರೂ, ಬಳಸಲಾದ ದಾಖಲೆಗಳೇ ನಕಲಿ ಎಂದು ಸಾಬೀತಾಗಿರುವುದು ಪ್ರಕರಣದ ಗಂಭೀರತೆಯನ್ನು ಹೆಚ್ಚಿಸಿದೆ.
ಸದ್ಯ ಖಗೋಣ್ ಪೊಲೀಸರು ಆರೋಪಿ ಫರ್ಮನ್ ವಿರುದ್ಧ ಪೋಕ್ಸೋ (POCSO) ಕಾಯ್ದೆ (ಅಪ್ರಾಪ್ತೆಯ ಮೇಲೆ ದೌರ್ಜನ್ಯ) ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ, ಕ್ರಿಮಿನಲ್ ಪಿತೂರಿ, ಅಕ್ರಮ ವಿವಾಹ ಕಾಯ್ದೆಗಳಡಿ ಕೇಸ್ ದಾಖಲಿಸಿದ್ದಾರೆ
ಡಿಜಿಪಿಗಳಿಗೆ ಸಮನ್ಸ್ ನೀಡಿದ ಆಯೋಗ
ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗವು, ಏಪ್ರಿಲ್ 22 ರಂದು ನವದೆಹಲಿಯ ಕಚೇರಿಗೆ ಹಾಜರಾಗುವಂತೆ ಕೇರಳ ಮತ್ತು ಮಧ್ಯಪ್ರದೇಶದ ಡಿಜಿಪಿ (DGP) ಗಳಿಗೆ ಸಮನ್ಸ್ ಜಾರಿ ಮಾಡಿದೆ. ಅಷ್ಟೇ ಅಲ್ಲದೆ, ಪ್ರಕರಣದ ಪ್ರಗತಿಯ ವರದಿಯನ್ನು ಪ್ರತಿ ಮೂರು ದಿನಕ್ಕೊಮ್ಮೆ ಸಲ್ಲಿಸುವಂತೆ ಕಟ್ಟುನಿಟ್ಟಿನ ಆದೇಶ ನೀಡಿದೆ.
ಆರಂಭದಲ್ಲಿ ತನ್ನ ಪೋಷಕರ ವಿರುದ್ಧವೇ ತಿರುಗಿಬಿದ್ದು ಪ್ರೇಮ ವಿವಾಹವಾಗಿದ್ದ ಮೌನಾಲಿಸಾ ಅವರಿಗೆ, ಈಗ ಅಸಲಿ ವಯಸ್ಸಿನ ದಾಖಲೆಗಳು ಮತ್ತು ನಕಲಿ ಪ್ರಮಾಣಪತ್ರದ ಹಗರಣವು ದೊಡ್ಡ ಕಾನೂನುಬದ್ಧ ಹಿನ್ನಡೆಯನ್ನು ತಂದೊಡ್ಡಿದೆ.


crime
ಕಡಬ: ಜಾತಿ ನಿಂದನೆ ಹಾಗೂ ಯುವತಿಯರ ಮೇಲೆ ಹಲ್ಲೆ – ಪ್ರತ್ಯೇಕ ಪ್ರಕರಣ ದಾಖಲು
ಕಡಬ: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಬೇರೆ ಬೇರೆ ಹಲ್ಲೆ ಮತ್ತು ದೌರ್ಜನ್ಯದ ಪ್ರಕರಣಗಳು ವರದಿಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕುಟ್ರುಪ್ಪಾಡಿಯಲ್ಲಿ ಪರಿಶಿಷ್ಟ ಜಾತಿಯ ಮಹಿಳೆಯ ಮೇಲೆ ಜಾತಿ ನಿಂದನೆ ನಡೆದರೆ, ಬಲ್ಯದಲ್ಲಿ ಮಾರಾಟ ಪ್ರತಿನಿಧಿಗಳಾಗಿ ಬಂದಿದ್ದ ಯುವತಿಯರ ಮೇಲೆ ಅಸಭ್ಯ ವರ್ತನೆ ತೋರಿದ ಘಟನೆ ನಡೆದಿದೆ.
ಪ್ರಕರಣ 1: ರಸ್ತೆ ಹಾನಿ ಪ್ರಶ್ನಿಸಿದ ಮಹಿಳೆಗೆ ಜಾತಿ ನಿಂದನೆ, ಹಲ್ಲೆ
ಕುಟ್ರುಪ್ಪಾಡಿ ನಿವಾಸಿ ಮೋನಮ್ಮ (55) ಎಂಬವರು ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏಪ್ರಿಲ್ 8ರಂದು ಮೋನಮ್ಮ ಅವರು ತಾವು ಕೆಲಸ ಮಾಡುತ್ತಿದ್ದ ಮನೆಯ ಬಳಿ ಜೆಸಿಬಿ ಮೂಲಕ ರಸ್ತೆ ಕೆಲಸ ನಡೆಯುತ್ತಿರುವುದನ್ನು ಗಮನಿಸಿದರು. ಈ ವೇಳೆ ರಸ್ತೆಗೆ ಹಾನಿಯಾಗುತ್ತಿರುವುದನ್ನು ಕಂಡು, ಜಾಗದ ಮಾಲಿಕರ ಉಪಸ್ಥಿತಿಯಲ್ಲಿ ಕೆಲಸ ಮಾಡುವಂತೆ ಅಲ್ಲಿದ್ದವರಿಗೆ ಸೂಚಿಸಿದರು.
ಇದರಿಂದ ಕೆರಳಿದ ಆರೋಪಿಗಳಾದ ರುಕ್ಮಯ್ಯ, ನೊಣಯ್ಯ, ಬಾಲಕೃಷ್ಣ ಮತ್ತು ಹರಿಪ್ರಸಾದ್ ಎಂಬುವವರು ಮೋನಮ್ಮ ಅವರಿಗೆ ಅವಾಚ್ಯ ಶಬ್ದಗಳಿಂದ ಬೈದಿದ್ದಲ್ಲದೆ, ಅವರ ಜಾತಿಯನ್ನು ಹಿಡಿದು ನಿಂದಿಸಿ, ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
- ದಾಖಲಾದ ಕಲಂಗಳು: ಅ.ಕ್ರ: 44/2026, ಪರಿಶಿಷ್ಟ ಜಾತಿ/ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ (SC/ST Act) ಹಾಗೂ BNS ಸೆಕ್ಷನ್ 118(1), 352, 351(2).
ಪ್ರಕರಣ 2: ಮಾರಾಟ ಪ್ರತಿನಿಧಿ ಯುವತಿಯರ ಮೇಲೆ ಅಸಭ್ಯ ವರ್ತನೆ
ಇನ್ನೊಂದು ಘಟನೆಯಲ್ಲಿ, ಸಂಸ್ಥೆಯ ಉತ್ಪನ್ನಗಳ ಮಾರಾಟಕ್ಕಾಗಿ ಬಲ್ಯ ದೇರಾಜೆಗೆ ತೆರಳಿದ್ದ ಬೆಳ್ತಂಗಡಿ ಮೂಲದ ಯುವತಿಯರ ಮೇಲೆ ಹಲ್ಲೆ ನಡೆದಿದೆ. ಏಪ್ರಿಲ್ 8ರಂದು ಮಧ್ಯಾಹ್ನ ಯುವತಿಯು ತನ್ನ ಇಬ್ಬರು ಸಹೋದ್ಯೋಗಿಗಳೊಂದಿಗೆ ಕೆಲಸದಲ್ಲಿದ್ದಾಗ, ಸ್ಥಳೀಯ ನಿವಾಸಿಯೊಬ್ಬರು ಅಸಭ್ಯವಾಗಿ ವರ್ತಿಸಿದ್ದಾರೆ.
ಇದನ್ನು ಪ್ರಶ್ನಿಸಲು ಬಂದ ಯುವತಿಯ ಸಹೋದ್ಯೋಗಿಗಳಿಗೂ ಆರೋಪಿಯು ಅವಾಚ್ಯವಾಗಿ ಬೈದು, ಹಲ್ಲೆ ನಡೆಸಿ ಮಾನಭಂಗಕ್ಕೆ ಯತ್ನಿಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
- ದಾಖಲಾದ ಕಲಂಗಳು: ಅ.ಕ್ರ: 43/2026, BNS ಸೆಕ್ಷನ್ 74, 79, 115(2), 352, 351(2).
ಈ ಎರಡೂ ಪ್ರಕರಣಗಳ ಕುರಿತು ಕಡಬ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

-
crime2 weeks agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime2 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala1 week agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala3 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada4 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala3 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala2 months agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
