Connect with us

F.I.R.

ಟ್ಯಾಬ್ಲೆಟ್ ಆರಿಫ್ ಹತ್ಯೆ ಪ್ರಕರಣ: ಏಳು ಮಂದಿ ಹಂತಕರ ಬಂಧನ; ತನಿಖೆಯಿಂದ ಬಯಲಾಯ್ತು ಸ್ಫೋಟಕ ಸತ್ಯಗಳು!

Published

on

ಮಂಗಳೂರು: ಕರಾವಳಿಯಾದ್ಯಂತ ಸಂಚಲನ ಮೂಡಿಸಿದ್ದ ರೌಡಿಶೀಟರ್ ‘ಟ್ಯಾಬ್ಲೆಟ್ ಆರಿಫ್’ ಹತ್ಯೆ ಪ್ರಕರಣದ ತನಿಖೆಯಲ್ಲಿ ಮಂಗಳೂರು ಪೊಲೀಸರು ದೊಡ್ಡ ಯಶಸ್ಸು ಸಾಧಿಸಿದ್ದಾರೆ. ಈ ವ್ಯವಸ್ಥಿತ ಸಂಚಿನ ಹಿಂದಿದ್ದ ಏಳು ಮಂದಿ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಹತ್ಯೆಯ ಹಿಂದೆ ನಡೆದ ಹೈಟೆಕ್ ಸ್ಕೆಚ್ ಮತ್ತು ನೆರವು ನೀಡಿದವರ ವಿವರಗಳನ್ನು ಪೊಲೀಸ್ ಕಮಿಷನರ್ ಬಿಡುಗಡೆ ಮಾಡಿದ್ದಾರೆ.

ಹತ್ಯೆ ನಡೆದ ರೀತಿ:

ಕೃತ್ಯದ ದಿನದಂದು ಆರು ಮಂದಿ ಮುಖ್ಯ ಆರೋಪಿಗಳಾದ ರಿಫತ್, ಜುಟ್ಟು ಅಶ್ಫಾಕ್, ಖಲೀಲ್, ಶಾಕಿರ್, ಇರ್ಫಾನ್ ಮತ್ತು ರಿಜ್ವಾನ್ ಇನ್ನೋವಾ ಕಾರಿನಲ್ಲಿ ಆರಿಫ್ ಅವರ ಬೈಕನ್ನು ಹಿಂಬಾಲಿಸಿದ್ದರು. ತೊಕ್ಕೊಟ್ಟು ಫ್ಲೈಓವರ್ ಮೇಲೆ ಆರಿಫ್ ಅವರ ಬೈಕಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಹಂತಕರು, ಆತ ಕೆಳಗೆ ಬೀಳುತ್ತಿದ್ದಂತೆ ಮಾರಕಾಸ್ತ್ರಗಳಿಂದ ಭೀಕರವಾಗಿ ಹಲ್ಲೆ ನಡೆಸಿ ಪ್ರಾಣ ತೆಗೆದು ಸ್ಥಳದಿಂದ ಪರಾರಿಯಾಗಿದ್ದರು.

ಆರೋಪಿಗಳ ರೋಲ್ ಮತ್ತು ಹೈಟೆಕ್ ನೆರವು:

ತನಿಖೆಯ ವೇಳೆ ಈ ಹತ್ಯೆಯ ಹಿಂದೆ ಅತ್ಯಂತ ವ್ಯವಸ್ಥಿತವಾದ ಜಾಲ ಕೆಲಸ ಮಾಡಿರುವುದು ಬೆಳಕಿಗೆ ಬಂದಿದೆ: ಬಂಧಿತ ಇರ್ಷಾದ್ ಎಂಬಾತ ಹಂತಕರಿಗೆ ಹತ್ಯೆಗಿಂತ ಮೊದಲು ತಂಗಲು ವಸತಿ ವ್ಯವಸ್ಥೆ ಮಾಡಿಕೊಟ್ಟಿದ್ದಲ್ಲದೆ, ಹತ್ಯಾ ಸ್ಥಳಕ್ಕೆ ಅವರನ್ನು ಕರೆದೊಯ್ಯುವ ಜವಾಬ್ದಾರಿ ಹೊತ್ತಿದ್ದ.ಸುಹೈಲ್ ಎಂಬಾತ ಹತ್ಯೆಗೆ ಬಳಸಲಾದ ಬಾಡಿಗೆ ಕಾರನ್ನು ವ್ಯವಸ್ಥೆ ಮಾಡಿ ರಿಫತ್‌ಗೆ ಹಸ್ತಾಂತರಿಸಿದ್ದ. ಕೃತ್ಯ ನಡೆದ ಬೆನ್ನಲ್ಲೇ ಈತ ಸೌದಿ ಅರೇಬಿಯಾಗೆ ಪರಾರಿಯಾಗಿದ್ದಾನೆ. ಅರ್ಶಾದ್ ಎಂಬಾತ ಮಾರಕಾಸ್ತ್ರಗಳನ್ನು ಪೂರೈಸಿದ್ದಲ್ಲದೆ, ಪೊಲೀಸರ ಚಲನವಲನದ ಬಗ್ಗೆ ಹಂತಕರಿಗೆ ಕ್ಷಣ ಕ್ಷಣದ ಮಾಹಿತಿ ನೀಡುತ್ತಿದ್ದ. ಅಲ್ಲದೆ, ಆರೋಪಿಗಳು ತಲೆಮರೆಸಿಕೊಂಡಿದ್ದಾಗ ಅವರಿಗೆ ಹಣದ ವ್ಯವಸ್ಥೆ ಮಾಡಿದ್ದ. ಹಳೆ ಪ್ರಕರಣವೊಂದರ ಆರೋಪಿ ಅಶ್ವಿರ್, ಹಂತಕರು ಪೊಲೀಸರ ಕಣ್ಣಿಗೆ ಬೀಳದಂತೆ ತಾಂತ್ರಿಕ ನೆರವು ನೀಡಿದ್ದ. ವಿದೇಶಿ (ದುಬೈ) ಓಟಿಪಿಗಳನ್ನು ಬಳಸಿ ಇಂಟರ್ನ್ಯಾಷನಲ್ ವಾಟ್ಸಾಪ್ ಅಕೌಂಟ್ ಕ್ರಿಯೇಟ್ ಮಾಡಿಕೊಟ್ಟಿದ್ದ. ಒಂದು ನಂಬರ್ ಪೊಲೀಸರಿಗೆ ಪತ್ತೆಯಾದ ತಕ್ಷಣ ಮತ್ತೊಂದು ನಂಬರ್ ನೀಡಿ ಹಂತಕರ ಸಂವಹನ ರಹಸ್ಯವಾಗಿರುವಂತೆ ನೋಡಿಕೊಂಡಿದ್ದ.

ವಿದೇಶದಿಂದ ಹಣಕಾಸಿನ ನೆರವು: ಆರೋಪಿಗಳು ತಲೆಮರೆಸಿಕೊಂಡಿದ್ದ ಅವಧಿಯಲ್ಲಿ ಅವರ ವಾಸ್ತವ್ಯ ಮತ್ತು ಪ್ರಯಾಣದ ಖರ್ಚು ವೆಚ್ಚಗಳನ್ನು ವಿದೇಶದಲ್ಲಿರುವ ಮುಸ್ತಫಾ ಮತ್ತು ಅಶ್ವಿರ್ ಭರಿಸುತ್ತಿದ್ದರು ಎಂದು ತಿಳಿದುಬಂದಿದೆ.

ಸದ್ಯಕ್ಕೆ ಆರು ಮಂದಿ ಹಂತಕರು ಹಾಗೂ ಅವರಿಗೆ ನೆರವು ನೀಡಿದ ಇರ್ಷಾದ್ ಸೇರಿದಂತೆ ಒಟ್ಟು ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರ ವಿಚಾರಣೆಯಿಂದ ಹತ್ಯೆಯ ಸಂಪೂರ್ಣ ಸಂಚು ಬಯಲಾಗಿದೆ.

“ಈ ಪ್ರಕರಣದ ತನಿಖೆ ಇನ್ನೂ ಮುಂದುವರಿಯುತ್ತಿದ್ದು, ಈ ಸಂಚಿನಲ್ಲಿ ಭಾಗಿಯಾಗಿರುವ ಇತರ ಸಹಚರರನ್ನು ಪತ್ತೆಹಚ್ಚುವ ಕೆಲಸ ನಡೆಯುತ್ತಿದೆ. ಹಂತಕರಿಗೆ ಕಾನೂನಿನಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು,” ಎಂದು ಕಮಿಷನರ್ ತಿಳಿಸಿದ್ದಾರೆ.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

arrest

ಬೆಳ್ತಂಗಡಿ: ಅಕ್ರಮ ಕೋಳಿಅಂಕ ಜೂಜಾಟದ ಅಡ್ಡೆಗೆ ಪೋಲಿಸ್ ದಾಳಿ – ಇಬ್ಬರ ಬಂಧನ, ಸೊತ್ತುಗಳು ಜಪ್ತಿ

Published

on

ಬೆಳ್ತಂಗಡಿ: ತಾಲೂಕಿನ ಬಂದಾರು ಗ್ರಾಮದ ನಿರ್ಮಡ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿಅಂಕ ಜೂಜಾಟದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಸಂಭವಿಸಿದೆ.

ಧರ್ಮಪ್ಪ ಗೌಡ (38) (ಬಂದಾರು ಗ್ರಾಮದ ನಿರ್ಮಡ ನಿವಾಸಿ) ಮತ್ತು ಹರೀಶ್ ಎಸ್. (30) (ಪುತ್ತೂರು ತಾಲೂಕಿನ ನೆಕ್ಕಿಲಾಡಿ ಗ್ರಾಮದ ಬೆಳ್ಳೂರು ನಿವಾಸಿ) ಬಂಧಿತ ಆರೋಪಿಗಳು.

ದಾಳಿಯ ವಿವರ:

ಆಗಸ್ಟ್ 3ರಂದು ಸಂಜೆ ಸುಮಾರು 5:15ರ ವೇಳೆಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್. ಗಾಣಿಗೇರ ಅವರ ನೇತೃತ್ವದ ಪೊಲೀಸ್ ತಂಡ ನಿರ್ಮಡ ಪ್ರದೇಶಕ್ಕೆ ದಾಳಿ ನಡೆಸಿತು. ಈ ವೇಳೆ ಆರೋಪಿಗಳು ಕೋಳಿಗಳ ಕಾಲಿಗೆ ಬಾಳು (ಸಣ್ಣ ಕತ್ತಿ) ಕಟ್ಟಿ, ಪರಸ್ಪರ ಕಾದಾಟಕ್ಕೆ ಬಿಟ್ಟು ಹಣವನ್ನು ಪಣವಾಗಿಟ್ಟುಕೊಂಡು ಜೂಜಾಟದಲ್ಲಿ ತೊಡಗಿರುವುದು ಪತ್ತೆಯಾಗಿದೆ.

ಪೊಲೀಸರನ್ನು ಕಂಡ ತಕ್ಷಣವೇ ಸ್ಥಳದಲ್ಲಿದ್ದ ಕೆಲವರು ಕಾಲ್ಕಿತ್ತಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ವಶಪಡಿಸಿಕೊಂಡ ಸೊತ್ತುಗಳು:

ದಾಳಿಯ ವೇಳೆ ಪೊಲೀಸರು ಜೂಜಾಟಕ್ಕೆ ಬಳಸಿದ್ದ ₹350 ನಗದು, 2 ಬಾಳುಗಳು (ಸಣ್ಣ ಕತ್ತಿ), ವಿವಿಧ ತಳಿಯ 4 ಕೋಳಿಗಳು ಹಾಗೂ 3 ದ್ವಿಚಕ್ರ ವಾಹನಗಳು ಸೇರಿದಂತೆ ಒಟ್ಟು ₹74,370 ಮೌಲ್ಯದ ಸ್ವತ್ತುಗಳನ್ನು ಜಪ್ತಿ ಮಾಡಿದ್ದಾರೆ.

ಪ್ರಕರಣ ದಾಖಲು:

ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ BNS ಕಲಂ 112, ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 87 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ – 1960ರ ಕಲಂ 11(1) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ\

Continue Reading

Bantawala

ದಕ್ಷಿಣ ಕನ್ನಡ: ರಾಯಿ ಸಮೀಪ ನದಿಯಲ್ಲಿ ಕೊಚ್ಚಿಹೋಗಿದ್ದ ವ್ಯಕ್ತಿಯ ಮೃತದೇಹ ಸಂಗಬೆಟ್ಟುವಿನಲ್ಲಿ ಪತ್ತೆ

Published

on

ಮಂಗಳೂರು: ಬಂಟ್ವಾಳ ತಾಲೂಕಿನ ರಾಯಿ ಸಮೀಪ ಶನಿವಾರ ತಡರಾತ್ರಿ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಹೋಗಿದ್ದ 48 ವರ್ಷದ ವ್ಯಕ್ತಿಯೊಬ್ಬರ ಮೃತದೇಹವು ಸೋಮವಾರ ಬೆಳಿಗ್ಗೆ ಸಂಗಬೆಟ್ಟು ಪ್ರದೇಶದಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತರನ್ನು ರಾಯಿ ನಿವಾಸಿ ಜೀವನ್ ಪಿಂಟೊ (48) ಎಂದು ಗುರುತಿಸಲಾಗಿದೆ.

ಘಟನೆಯ ವಿವರ: ಶನಿವಾರ ತಡರಾತ್ರಿ ಜೀವನ್ ಪಿಂಟೊ ಅವರು ತೋಡಿನ ಆಚೆಗಿರುವ ತಮ್ಮ ಮಾವನ ಮನೆಗೆ ತೆರಳಲು ಕಾಲುಸಂಕದ ಮೇಲೆ ನದಿ ದಾಟುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿತ್ತು. ಘಟನಾ ಸ್ಥಳದಲ್ಲಿ ಅವರ ಚಪ್ಪಲಿ ಹಾಗೂ ಟಾರ್ಚ್‌ಲೈಟ್ ಪತ್ತೆಯಾಗಿದ್ದರೂ, ಅವರು ನೀರಿಗೆ ಬಿದ್ದಿದ್ದಾರೋ ಅಥವಾ ಬೇರೆಡೆ ತೆರಳಿದ್ದಾರೋ ಎಂಬುದು ಅಧಿಕೃತವಾಗಿ ದೃಢಪಟ್ಟಿರಲಿಲ್ಲ.

ಸತತ ಶೋಧ ಕಾರ್ಯಾಚರಣೆ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಮತ್ತು ನದಿಯಲ್ಲಿ ಹರಿಯುತ್ತಿರುವ ಪ್ರಬಲ ನೀರಿನ ಸೆಳೆತದ ನಡುವೆಯೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಹಾಗೂ ಸ್ಥಳೀಯ ಮುಳುಗುತಜ್ಞರು ಮತ್ತು ಗ್ರಾಮಸ್ಥರು ಕಳೆದ ಎರಡು ದಿನಗಳಿಂದ ಜಂಟಿಯಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದರು.

ಸತತ ಕಾರ್ಯಾಚರಣೆಯ ಫಲವಾಗಿ ಸೋಮವಾರ ಬೆಳಿಗ್ಗೆ ಸಂಗಬೆಟ್ಟು ಸಮೀಪ ಅವರ ಮೃತದೇಹ ಪತ್ತೆಯಾಗಿದೆ. ತಕ್ಷಣವೇ ಮೃತದೇಹವನ್ನು ನದಿಯಿಂದ ಹೊರತೆಗೆದ ಅಧಿಕಾರಿಗಳು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಕಾನೂನು ಹಾಗೂ ಮರಣೋತ್ತರ ಪರೀಕ್ಷೆಯ ಪ್ರಕ್ರಿಯೆಗಳನ್ನು ಕೈಗೊಂಡಿದ್ದಾರೆ.

Continue Reading

Bantawala

ಬಸ್‌ನಲ್ಲಿ ಅಸಭ್ಯ ವರ್ತನೆ: ವಿಕೃತಕಾಮಿ ವೃದ್ಧ ಅರ್ಚಕನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಕೇಸ್‌ ದಾಖಲು!

Published

on

ಬಂಟ್ವಾಳ: ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಎದುರು ಖಾಸಗಿ ಅಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ವೃದ್ಧನೊಬ್ಬನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ:

ಜುಲೈ 30ರಂದು ಮಂಗಳೂರಿನ ಸ್ಟೇಟ್ ಬ್ಯಾಂಕ್‌ನಿಂದ ಉಪ್ಪಿನಂಗಡಿಗೆ ಹೊರಟಿದ್ದ ಖಾಸಗಿ ಬಸ್‌ನಲ್ಲಿ ಈ ಘಟನೆ ನಡೆದಿದೆ. ಮಧ್ಯಾಹ್ನ 2.10ರ ಸುಮಾರಿಗೆ ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ಬಸ್‌ ಏರಿದ್ದ ಸುಮಾರು 60–70 ವರ್ಷ ಪ್ರಾಯದ ವ್ಯಕ್ತಿಯೊಬ್ಬ, ಚಾಲಕನ ಎಡಭಾಗದ ಅಡ್ಡ ಸೀಟಿನಲ್ಲಿ ಕುಳಿತುಕೊಂಡಿದ್ದ. ಪ್ರಯಾಣದ ವೇಳೆ ಎದುರಿನ ಸೀಟಿನಲ್ಲಿದ್ದ ಮಹಿಳೆಯರಿಗೆ ಕಾಣುವಂತೆ ಅಸಭ್ಯವಾಗಿ ಗುಪ್ತಾಂಗ ಪ್ರದರ್ಶಿಸಿ ವಿಕೃತಿ ಮೆರೆದಿದ್ದಾನೆ.

ಮಹಿಳೆಯ ಧೈರ್ಯ, ವೈರಲ್ ವೀಡಿಯೋ:

ವೃದ್ಧನ ನೀಚ ಕೃತ್ಯವನ್ನು ಕಂಡು ಆಕ್ರೋಶಗೊಂಡ ಬಸ್‌ನಲ್ಲಿದ್ದ ಮಹಿಳೆಯೊಬ್ಬರು ಧೈರ್ಯದಿಂದ ತಮ್ಮ ಮೊಬೈಲ್‌ನಲ್ಲಿ ಆತನ ವಿಕೃತಿಯನ್ನು ವೀಡಿಯೋ ರೆಕಾರ್ಡ್ ಮಾಡಿದ್ದಾರೆ. ಇದನ್ನು ಗಮನಿಸಿದ ವೃದ್ಧ, ಮೆಲ್ಕಾರ್ ಜಂಕ್ಷನ್ ತಲುಪುತ್ತಿದ್ದಂತೆ ಗಾಬರಿಯಿಂದ ಬಸ್‌ನಿಂದ ಇಳಿದು ಪರಾರಿಯಾಗಿದ್ದ. ಬಳಿಕ ಈ ವಿಷಯ ಬಸ್ ಚಾಲಕನ ಗಮನಕ್ಕೂ ಬಂದಿತ್ತು. ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು ಆರೋಪಿಯ ಗುರುತು ಪತ್ತೆ ಹಚ್ಚಿದ್ದು, ಆತ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಸಾದಿಕುಕ್ಕು ಅಂಗನವಾಡಿ ಬಳಿಯ ನಿವಾಸಿ ಹಾಗೂ ವೃತ್ತಿಯಲ್ಲಿ ಅರ್ಚಕ ಎಂದು ತಿಳಿದುಬಂದಿದೆ.

ಬಂಟ್ವಾಳ ಠಾಣೆಯಲ್ಲಿ ದೂರು:

ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.ಕ್ರ. 107/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 75(2)ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

Trending

Copyright © 2025 Deevatige

error: Content is protected !!