AWARNESS
ಕುಮಾರಧಾರಾ ನದಿ ತೀರದಲ್ಲಿ 8 ಕಾಡಾನೆಗಳ ದಂಡು – ಕೃಷಿಕರಲ್ಲಿ ಆತಂಕ, ಕಾರ್ಯಾಚರಣೆ ತೀವ್ರ
- Share
- Tweet /home/u338848369/domains/deevatigenews.com/public_html/wp-content/plugins/mvp-social-buttons/mvp-social-buttons.php on line 72
https://deevatigenews.com/wp-content/uploads/2026/04/ANE-1000x600.jpg&description=ಕುಮಾರಧಾರಾ ನದಿ ತೀರದಲ್ಲಿ 8 ಕಾಡಾನೆಗಳ ದಂಡು – ಕೃಷಿಕರಲ್ಲಿ ಆತಂಕ, ಕಾರ್ಯಾಚರಣೆ ತೀವ್ರ', 'pinterestShare', 'width=750,height=350'); return false;" title="Pin This Post">
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೋಡಿಂಬಾಳ ಮತ್ತು ನೆಕ್ಕಿಲಾಡಿ ಭಾಗದಲ್ಲಿ ಇಂದು ಮುಂಜಾನೆ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಭೀತಿ ಮೂಡಿಸಿದೆ. ಕೋಡಿಂಬಾಳ ಗ್ರಾಮದ ಕೋರಿಯರ್ ಎಂಬಲ್ಲಿ ಹಾಗೂ 102 ನೆಕ್ಕಿಲಾಡಿ ಸಮೀಪದ ಕುಮಾರಧಾರಾ ನದಿ ತೀರದಲ್ಲಿ ಸುಮಾರು 8 ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು, ಸ್ಥಳೀಯ ಕೃಷಿಕರಿಗೆ ಭಾರಿ ನಷ್ಟ ಉಂಟುಮಾಡಿದೆ.
ನಿಶೀತ್ ಮಾಹಿಪ್ಪಾಜೆ ಮತ್ತು ಹರೀಶ್ ಕೋರಿಯರ್ ಸೇರಿದಂತೆ ಹಲವು ಕೃಷಿಕರ ತೋಟಗಳಿಗೆ ನುಗ್ಗಿದ ಆನೆಗಳು, ಅಡಿಕೆ, ತೆಂಗು ಮತ್ತು ಬಾಳೆ ಗಿಡಗಳನ್ನು ಸಂಪೂರ್ಣವಾಗಿ ನಾಶಪಡಿಸಿವೆ. ಈ ಘಟನೆಯಿಂದಾಗಿ ಸ್ಥಳೀಯ ನಿವಾಸಿಗಳು ಹಾಗೂ ವಾಹನ ಸಂಚಾರಿಗಳು ಆತಂಕಗೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸುಬ್ರಹ್ಮಣ್ಯ ಹಾಗೂ ಪಂಜ ವಲಯದ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಆನೆಗಳನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.
ಆಹಾರ ಮತ್ತು ನೀರಿನ ಹುಡುಕಾಟದಲ್ಲಿ ಕಾಡಾನೆಗಳು ಇತ್ತೀಚಿನ ದಿನಗಳಲ್ಲಿ ಜನವಸತಿ ಪ್ರದೇಶಗಳಿಗೆ ಲಗ್ಗೆ ಇಡುತ್ತಿವೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ಕಾಡಾನೆಗಳ ಹತ್ತಿರ ಹೋಗಬಾರದು, ಫೋಟೋ ಅಥವಾ ವಿಡಿಯೋ ತೆಗೆದುಕೊಳ್ಳಲು ಯತ್ನಿಸಬಾರದು ಹಾಗೂ ರಾತ್ರಿ ಸಮಯದಲ್ಲಿ ಅನಾವಶ್ಯಕ ಸಂಚಾರವನ್ನು ತಪ್ಪಿಸಬೇಕು ಎಂದು ಅರಣ್ಯ ಇಲಾಖೆ ಮನವಿ ಮಾಡಿದೆ. ಯಾವುದೇ ಅನಾಹುತ ಸಂಭವಿಸಿದರೆ ತಕ್ಷಣ ಇಲಾಖೆಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ಸದ್ಯ ಸ್ಥಳದಲ್ಲಿ ಅರಣ್ಯ ಸಿಬ್ಬಂದಿ ನಿಯೋಜನೆಗೊಂಡಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪಂಜ ವಲಯ ಅರಣ್ಯಾಧಿಕಾರಿ ಉಮೇಶ್ ಅವರು ಮಾಹಿತಿ ನೀಡಿದ್ದಾರೆ.

-
crime2 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime4 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala2 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala5 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 weeks agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Dakshina Kannada5 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala4 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala5 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
