Connect with us

accident

ಉಪ್ಪಿನಂಗಡಿಯಲ್ಲಿ ಥಾರ್-ಜೀಪ್ ನಡುವೆ ಭೀಕರ ಡಿಕ್ಕಿ; ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವಿಟ್ಲದ ಚಾಲಕ

Published

on

ಉಪ್ಪಿನಂಗಡಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 75ರ ಇಂದ್ರಪ್ರಸ್ಥ ವಿದ್ಯಾಲಯದ ಮುಂಭಾಗದಲ್ಲಿ ಇಂದು ಬೆಳಿಗ್ಗೆ ಮಹೀಂದ್ರಾ ಥಾರ್ ಮತ್ತು ಜೀಪ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಾಲಕ ಹಾಗೂ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಘಟನೆಯ ವಿವರ:
ದಿನಾಂಕ 13.04.2026 ರಂದು ಬೆಳಿಗ್ಗೆ ಸುಮಾರು 9 ಗಂಟೆಗೆ ಈ ಅಪಘಾತ ಸಂಭವಿಸಿದೆ. ವಿಟ್ಲ ಕಸಬಾ ಗ್ರಾಮದ ಚಂದಳಿಕೆ ಸಮೀಪದ ಕಲ್ಲಕಟ್ಟ ನಿವಾಸಿ ಸೇಸಪ್ಪ ಗೌಡ ಎಂಬುವವರು ತನ್ನ ಜೀಪಿನಲ್ಲಿ ಬೆಳಿಗ್ಗೆ 6 ಗಂಟೆಗೆ ವಿಟ್ಲದಿಂದ ಉಪ್ಪಿನಂಗಡಿಗೆ ಪ್ರಯಾಣಿಕರನ್ನು ಕರೆತಂದಿದ್ದರು. ಪ್ರಯಾಣಿಕರನ್ನು ಇಳಿಸಿ ವಾಪಸ್ ವಿಟ್ಲದ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ, ಇಂದ್ರಪ್ರಸ್ಥ ಶಾಲೆಯ ಎದುರು ವೇಗವಾಗಿ ಬಂದ ಮಹೀಂದ್ರಾ ಥಾರ್ ವಾಹನ ಮತ್ತು ಜೀಪ್ ನಡುವೆ ಡಿಕ್ಕಿ ಸಂಭವಿಸಿದೆ.

ಪಲ್ಟಿಯಾದ ಜೀಪು – ತಪ್ಪಿದ ಭಾರಿ ಅನಾಹುತ:
ಡಿಕ್ಕಿಯ ರಭಸಕ್ಕೆ ಜೀಪು ರಸ್ತೆಯಲ್ಲೇ ಪಲ್ಟಿಯಾಗಿದ್ದು, ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಅಪಘಾತ ನಡೆದ ಸಮಯದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ವಿರಳವಾಗಿದ್ದರಿಂದ ಹಾಗೂ ಜೀಪಿನಲ್ಲಿ ಹೆಚ್ಚಿನ ಪ್ರಯಾಣಿಕರು ಇಲ್ಲದ ಕಾರಣ ದೊಡ್ಡ ಮಟ್ಟದ ಪ್ರಾಣಾಪಾಯವೊಂದು ತಪ್ಪಿದಂತಾಗಿದೆ.

“ಬೆಳಿಗ್ಗೆ ಬಾಡಿಗೆ ಮುಗಿಸಿ ವಾಪಸ್ ಬರುತ್ತಿದ್ದಾಗ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಗಂಭೀರ ಗಾಯಗಳಾಗಿಲ್ಲ” ಎಂದು ಸ್ಥಳೀಯರು ತಿಳಿಸಿದ್ದಾರೆ. ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ವಿಟ್ಲದ ನೆಕ್ಕರೆಕಾಡು ನಿವಾಸಿ ಜೆಸಿಬಿ ಆಪರೇಟರ್ ರಮೇಶ್ ನಾಯ್ಕ ಅವರ ಉತ್ತರಕ್ರಿಯೆ ಉಪ್ಪಿನಂಗಡಿಯಲ್ಲಿ ನಡೆಯಲಿದ್ದು ಅದಕ್ಕಾಗಿ ಕುಟುಂಬಸ್ಥರನ್ನು ಬಿಟ್ಟು ಹಿಂದಿರುಗುವಾಗ ಅಪಘಾತ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ವಾಹನಗಳನ್ನು ರಸ್ತೆಯಿಂದ ತೆರವುಗೊಳಿಸಲಾಗಿದೆ.

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

accident

ಪುತ್ತೂರು: ರಸ್ತೆ ಅಪಘಾತಕ್ಕೆ ಯುವಕ ಬಲಿ – ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ

Published

on

ಪುತ್ತೂರು: ನಗರದ ಪಡೀಲ್ ಸಮೀಪ ಶನಿವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪುತ್ತೂರು-ಉಪ್ಪಿನಂಗಡಿ ರಸ್ತೆಯಲ್ಲಿ ಈ ಘಟನೆ ನಡೆದಿದೆ.

ಪುತ್ತೂರುತಾಲೂಕು ಬೆಳ್ಳಿಪ್ಪಾಡಿ ಗ್ರಾಮದ (ವಯಾ ದಾರಂದಕುಕ್ಕು) ಕೊಡಿಮರ ನಿವಾಸಿ ವಿಶ್ವನಾಥ ಪೂಜಾರಿ ಅವರ ಪುತ್ರ ಧನರಾಜ್ (23) ಯಾನೆ ಧನು ಮೃತಪಟ್ಟ ದುರ್ದೈವಿ. ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಧನರಾಜ್, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಊರಿಗೆ ಬಂದಿದ್ದರು. ಜಾತ್ರಾ ಗದ್ದೆಯಲ್ಲಿ (ಸಂತೆ ಗದ್ದೆ) ಜ್ಯೂಸ್ ಅಂಗಡಿ ಇಟ್ಟುಕೊಂಡಿದ್ದ ಅವರು, ನಿನ್ನೆ ಮುರದಲ್ಲಿ ತನ್ನ ಗೆಳೆಯನ ಮನೆಯಲ್ಲಿ ತಂಗಿದ್ದರು. ಇಂದು ಬಟ್ಟೆ ಬದಲಾಯಿಸಿ ಮತ್ತೆ ಸ್ಟಾಲ್‌ ಗೆ ಹೋಗಲು ಬೆಳಿಗ್ಗೆ ಸುಮಾರು 11:30ಕ್ಕೆ ಮನೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಸಿಸಿಟಿವಿಯಲ್ಲಿ ಸೆರೆಯಾದ ಅಪಘಾತ: ದೊರೆತಿರುವ ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಧನರಾಜ್ ಚಲಾಯಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಮೊದಲು ಡಿವೈಡರ್‌ಗೆ ಡಿಕ್ಕಿ ಹೊಡೆದು ಲೈಟ್‌ ಕಂಬಕ್ಕೆ ಅಪ್ಪಳಿಸಿ. ಬಳಿಕ ಎದುರಿನಿಂದ ಬರುತ್ತಿದ್ದ ಮತ್ತೊಂದು ದ್ವಿಚಕ್ರ ವಾಹನದ ಮೇಲೆ ಹಾರಿದೆ. ಡಿಕ್ಕಿಯ ತೀವ್ರತೆಗೆ ಧನರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ , ಈ ದೃಶ್ಯ ಸ್ಥಳೀಯ ಸಿ ಸಿ ಕ್ಯಾಮಾರದಲ್ಲಿ ಸೆರೆಯಾಗಿದೆ.

ಗಾಯಾಳುಗಳ ಸ್ಥಿತಿ: ಮತ್ತೊಂದು ಬೈಕಿನಲ್ಲಿದ್ದ ಇಬ್ಬರು ಸವಾರರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಕುಟುಂಬದಲ್ಲಿ ಆಕ್ರಂದನ: ವಿಶ್ವನಾಥ ಪೂಜಾರಿ ಅವರಿಗೆ ಇಬ್ಬರು ಗಂಡು ಮಕ್ಕಳಿದ್ದು, ದುಡಿಯುವ ಕೈಯಾಗಿದ್ದ ಮಗನನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಜಾತ್ರೆಯ ಸಂಭ್ರಮದಲ್ಲಿದ್ದ ಪುತ್ತೂರು ಸುತ್ತಮುತ್ತ ಈ ಘಟನೆಯಿಂದಾಗಿ ಶೋಕದ ಛಾಯೆ ಆವರಿಸಿದೆ.

ಮೃತ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸ್ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಅಪಘಾತದಲ್ಲಿ ಬೆಳ್ಳಿಪ್ಪಾಡಿ ನಿವಾಸಿ ಬೈಕ್ ಸವಾರ ಬೆಳ್ಳಿಪ್ಪಾಡಿ ಧನು ಎಂಬವರು ಮೃತಪಟ್ಟಿದ್ದು‌ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಅಶೋಕ್ ರೈ ಕುಟುಂಬಕ್ಕೆ ಸಾಂತ್ವಾನ ನೀಡಿದರು


Continue Reading

accident

ಕುಕ್ಕಾಜೆ ಜಂಕ್ಷನ್ ಬಳಿ ಆಕ್ಸಿಡೆಂಟ್.. ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ..

Published

on

ಬಂಟ್ವಾಳ: ಸಾಲೆತ್ತೂರು-ಮಾರ್ನಬೈಲು ಸಂಪರ್ಕ ರಸ್ತೆಯ ಕುಕ್ಕಾಜೆ ಜಂಕ್ಷನ್ ಬಳಿ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇರಾ ಗ್ರಾಮದ ಕುಕ್ಕಾಜೆ ಬೈಲ್ ನಿವಾಸಿ, ಅಶೋಕ ಎಂಬವರ ಏಕೈಕ ಪುತ್ರ ಮನೀಶ್ (22) ಮೃತಪಟ್ಟ ದುರ್ದೈವಿ. ಇವರು ಮುಂಚಿಯಲ್ಲಿರುವ ವಿಕಾಸ್ ಶಾಮಿಯಾನ ಸಂಸ್ಥೆಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಘಟನೆಯ ವಿವರ: ಮನೀಶ್ ಅವರು ಸಾಲೆತ್ತೂರಿನಿಂದ ಕುಕ್ಕಾಜೆ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಆಪೆ ರಿಕ್ಷಾ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಸ್ಥಳೀಯರು ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದರಾದರೂ, ಅವರು ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ಮನೀಶ್ ಅವರು ಕುಟುಂಬದ ಏಕೈಕ ಪುತ್ರನಾಗಿದ್ದು, ಮನೆಯ ಆಧಾರಸ್ತಂಭವಾಗಿದ್ದ ಯುವಕನ ಅಗಲಿಕೆಯಿಂದ ಕುಕ್ಕಾಜೆ ಪರಿಸರದಲ್ಲಿ ಶೋಕ ಮಡುಗಟ್ಟಿದೆ.

Continue Reading

accident

ತೋಡಿಗೆ ಬಿದ್ದ ಕಾರು..ಪ್ರಯಾಣಿಕರು ಅದೃಷ್ಟವಶಾತ್ ಪಾರು..

Published

on

ವಿಟ್ಲ: ವಿಟ್ಲ-ಸಾಲೆತ್ತೂರು ರಸ್ತೆಯ ಕೊಡಂಗಾಯಿ ಸೇತುವೆಯ ಸಮೀಪ ಮಾರುತಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಡಿಗೆ ಪಲ್ಟಿ ಹೊಡೆದ ಘಟನೆ ಸಂಭವಿಸಿದೆ.

​ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ಉರುಳಿಬಿದ್ದಿದ್ದರೂ, ಅದೃಷ್ಟವಶಾತ್ ಕಾರಿನಲ್ಲಿದ್ದ ಚಾಲಕ ಮತ್ತು ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಹಾನಿ ಸಂಭವಿಸದಿರುವುದು ನೆಮ್ಮದಿಯ ವಿಷಯವಾಗಿದೆ.

​ಅಪಘಾತಕ್ಕೀಡಾದ ಕಾರು ಸ್ಥಳೀಯ ನಿವಾಸಿಯೊಬ್ಬರಿಗೆ ಸೇರಿದ್ದೆಂದು ತಿಳಿದುಬಂದಿದೆ. ಸ್ಥಳೀಯರು ತಕ್ಷಣವೇ ಧಾವಿಸಿ ಗಾಯಾಳುಗಳಿಗೆ ನೆರವಾಗಿದ್ದಾರೆ.

Continue Reading

Trending

Copyright © 2025 Deevatige

error: Content is protected !!