Connect with us

crime

ಮನೆಯಲ್ಲಿ ಅಕ್ರಮವಾಗಿ ಸ್ಫೋಟಕ ಸಂಗ್ರಹ, ಆರೋಪಿ ಬಂಧನ.

Published

on

ವಿಟ್ಲ : ಠಾಣಾ ವ್ಯಾಪ್ತಿಯ ಕಂಬಳಬೆಟ್ಟು ಸಮೀಪದ ಅಮೈ ಎಂಬಲ್ಲಿ ಮನೆಯ ಆವರಣದಲ್ಲಿ ಯಾವುದೇ ಮುನ್ನೆಚ್ಚರಿಕೆ ಇಲ್ಲದೇ ಅಕ್ರಮವಾಗಿ ಸ್ಫೋಟಕ ಸಾಮಗ್ರಿಗಳನ್ನು ಸಂಗ್ರಹಿಸಿ ಸುಡುಮದ್ದು ತಯಾರಿಸುತ್ತಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ದಿನಾಂಕ 13-04-2026 ರಂದು ರಾತ್ರಿ, ಸ್ಥಳೀಯ ನಿವಾಸಿ ಜಗದೀಶ ಪೂಜಾರಿ ಎಂಬವರು ತಮ್ಮ ಮನೆಯ ಆವರಣದಲ್ಲಿ ಸುಡುಮದ್ದು ತಯಾರಿಗೆ ಬೇಕಾದ ಸ್ಫೋಟಕ ಸಾಮಗ್ರಿಗಳನ್ನು ಶೇಖರಿಸಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ, ವಿಟ್ಲ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಬಿ.ಎಸ್. ನಾಯಕ್ ನೇತೃತ್ವದ ತಂಡ ದಾಳಿ ನಡೆಸಿದೆ.

ಸ್ಥಳ ಪರಿಶೀಲನೆ ವೇಳೆ ಸುಮಾರು 1.9 ಕೆ.ಜಿ ಯಷ್ಟು ಸ್ಫೋಟಕದಂತಹ ಸಂಶಯಾಸ್ಪದ ವಸ್ತು ಪತ್ತೆಯಾಗಿದೆ. ಕೂಡಲೇ ಆರೋಪಿ ಜಗದೀಶ ಪೂಜಾರಿಯನ್ನು ವಶಕ್ಕೆ ಪಡೆದ ಪೊಲೀಸರು, ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 93/2026 ಕಲಂ: 9B Explosive Act 1884, ಕಲಂ: 5 Explosive Substances Act 1908, ಹಾಗೂ ಕಲಂ: 288 BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಸಾರ್ವಜನಿಕ ಸುರಕ್ಷತೆಯ ದೃಷ್ಟಿಯಿಂದ ಯಾವುದೇ ಪರವಾನಗಿ ಇಲ್ಲದೆ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸುವುದು ಕಾನೂನು ಬಾಹಿರ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

Belthangady

ಬೆಳ್ತಂಗಡಿ: ಗಾಂಜಾ ಮಾರಾಟ ಯತ್ನ ಪ್ರಕರಣ; ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದ ಮಂಗಳೂರು ನ್ಯಾಯಾಲಯ

Published

on

ಮಂಗಳೂರು: ಸುಮಾರು 17 ವರ್ಷಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗೆ ಮಂಗಳೂರಿನ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

ಪ್ರಕರಣದ ಹಿನ್ನೆಲೆ:

ದಿನಾಂಕ 08/03/2009 ರಂದು ಬೆಳ್ತಂಗಡಿಯ ಉಜಿರೆ ರಥಬೀದಿ ಎಂಬಲ್ಲಿ ಅಂದಾಜು 1.500 ಕಿ.ಗ್ರಾಂ ತೂಕದ (ಅಂದಾಜು ಮೌಲ್ಯ 50,000 ರೂ.) ನಿಷೇಧಿತ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಬೆಳ್ತಂಗಡಿ ನಿವಾಸಿ ಟಿ.ಇ ಜೋಸೆಫ್ (42) ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 60/09, ಕಲಂ: 8(ಸಿ) ಜೊತೆಗೆ 20(ಬಿ) ಎನ್.ಡಿ.ಪಿ.ಎಸ್. (NDPS) ಕಾಯಿದೆಯಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಮಂಗಳೂರಿನ ಜಿಲ್ಲಾ ವಿಶೇಷ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ಮಾನ್ಯ ನ್ಯಾಯಧೀಶರಾದ ಶ್ರೀ ಬಸವರಾಜ್ ರವರು, ಆರೋಪಿ ಟಿ.ಇ ಜೋಸೆಫ್ ತಪ್ಪಿತಸ್ಥನೆಂದು ತೀರ್ಮಾನಿಸಿ ದಿನಾಂಕ 16/04/2026 ರಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ್ದಾರೆ.

ವಿಧಿಸಲಾದ ಶಿಕ್ಷೆಯ ವಿವರಗಳು:

NDPS ಕಾಯ್ದೆಯ ಸೆಕ್ಷನ್ 8(c) ಮತ್ತು 20(b)(ii)(B) ಅಡಿಯಲ್ಲಿ: 5 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 50,000 ರೂ. ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿ 2 ತಿಂಗಳ ಕಠಿಣ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. NDPS ಕಾಯ್ದೆಯ ಸೆಕ್ಷನ್ 32-B(f) ಅಡಿಯಲ್ಲಿ: 1 ವರ್ಷದ ಅವಧಿಯ ಕಠಿಣ ಜೈಲು ಶಿಕ್ಷೆಯನ್ನು ನ್ಯಾಯಾಲಯ ವಿಧಿಸಿದೆ.

    ತನಿಖೆ ಮತ್ತು ವಾದ ಮಂಡನೆ:

    ಅಂದಿನ ಬೆಳ್ತಂಗಡಿ ಠಾಣಾ ಪೊಲೀಸ್ ಉಪನಿರೀಕ್ಷಕರಾಗಿದ್ದ ಬಿ.ಜಿ. ಸುಬ್ಬಾಪುರ್ ಮಠ್ ರವರು ಈ ಪ್ರಕರಣದ ತನಿಖೆ ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಅಭಿಯೋಜಕರಾದ ಶ್ರೀಮತಿ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಸ್ತಾ ರವರು ಸಮರ್ಥವಾಗಿ ವಾದ ಮಂಡಿಸಿ ಆರೋಪದ ಮೇಲಿನ ದೋಷ ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಮಾದಕ ವಸ್ತುಗಳ ಮಾರಾಟ ಜಾಲದ ವಿರುದ್ಧ ಪೊಲೀಸರ ಈ ಯಶಸ್ವಿ ತನಿಖೆ ಮತ್ತು ನ್ಯಾಯಾಲಯದ ಕಠಿಣ ತೀರ್ಪು ಸಮಾಜಕ್ಕೆ ಪ್ರಬಲ ಸಂದೇಶ ರವಾನಿಸಿದೆ.

    Continue Reading

    Bantawala

    ನೇರಳಕಟ್ಟೆ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಸಿಬ್ಬಂದಿ ಮೇಲಿನ ದೂರಿಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ

    Published

    on

    ವಿಟ್ಲ: ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಅಧಿಕಾರಿಗಳ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ಉಚ್ಚ ನ್ಯಾಯಾಲಯವು (High Court) ತಡೆಯಾಜ್ಞೆ ನೀಡಿ ಆದೇಶಿಸಿದೆ.

    ಪ್ರಕರಣದ ಹಿನ್ನೆಲೆ:

    ಬಂಟ್ವಾಳ ತಾಲೂಕಿನ ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಣಿ ಶಾಖೆಯ ಸಿಬ್ಬಂದಿ, ನೆಟ್ಟಮುತ್ತೂರು ನಿವಾಸಿ ಸೇಸಮ್ಮ (47 ವರ್ಷ) ಎಂಬುವವರು ಸಂಘದ ಪದಾಧಿಕಾರಿಗಳ ವಿರುದ್ಧ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಚೌಟ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಶೋಧ ಹಾಗೂ ಪ್ರಭಾರ ಶಾಖಾ ವ್ಯವಸ್ಥಾಪಕ ಯತೀಶ್ ಡಿ. ಗೌಡ ಅವರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 88/2026 ರಂತೆ ಜಾತಿ ನಿಂದನೆ ಮೊಕದ್ದಮೆ ದಾಖಲಾಗಿತ್ತು.

    ಹೈಕೋರ್ಟ್ ಮೆಟ್ಟಿಲೇರಿದ ಆರೋಪಿಗಳು:

    ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್ ಹಾಗೂ ತನಿಖಾ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಕೋರಿ ಆರೋಪಿಗಳು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, ಪ್ರಕರಣದ ಮುಂದಿನ ತನಿಖೆ ಹಾಗೂ ವಿಚಾರಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ.

    ನ್ಯಾಯಾಲಯದಲ್ಲಿ ವಾದ:

    ನೇರಳಕಟ್ಟೆ ಸಹಕಾರ ಸಂಘದ ಪದಾಧಿಕಾರಿಗಳ ಪರವಾಗಿ ಸುಪ್ರೀಂಕೋರ್ಟ್‌ನ ಹಿರಿಯ ನ್ಯಾಯವಾದಿ ಪಿ.ಪಿ. ಹೆಗ್ಡೆ ಅವರು ವಾದ ಮಂಡಿಸಿದ್ದರು. ವಾದವನ್ನು ಪುರಸ್ಕರಿಸಿದ ನ್ಯಾಯಾಲಯವು ಸದ್ಯಕ್ಕೆ ಈ ಪ್ರಕರಣದ ಕಾನೂನು ಪ್ರಕ್ರಿಯೆಗಳಿಗೆ ತಡೆ ನೀಡುವ ಮೂಲಕ ಸಂಘದ ಅಧ್ಯಕ್ಷರು ಹಾಗೂ ಸಿಬ್ಬಂದಿಗೆ ಸಮಾಧಾನ ತಂದಿದೆ.


    Continue Reading

    crime

    ವಿಟ್ಲ: ಕೋಳಿ ಅಂಕದ ಅಡ್ಡೆಗೆ ಪೋಲಿಸ್ ದಾಳಿ – ನಾಲ್ವರ ಬಂಧನ, ಇಬ್ಬರಿಂದ ಕರ್ತವ್ಯಕ್ಕೆ ಅಡ್ಡಿ

    Published

    on

    ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲಕಸಬ ಗ್ರಾಮದ ಮಾಡ ಎಂಬಲ್ಲಿ ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ನಡೆಸುತ್ತಿದ್ದ ಕೋಳಿ ಅಂಕದ ಅಡ್ಡೆಗೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಇಬ್ಬರು ಪರಾರಿಯಾಗಿದ್ದಾರೆ.

    ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟ ನಡೆಯುತ್ತಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸ್ ಉಪನಿರೀಕ್ಷಕರಾದ ರಾಮಕೃಷ್ಣ ಮತ್ತು ಸಿಬ್ಬಂದಿ ತಂಡ ದಿನಾಂಕ 12-04-2026ರ ಸಂಜೆ ಸ್ಥಳಕ್ಕೆ ದಾಳಿ ನಡೆಸಿದೆ. ಪೊಲೀಸರು ಸ್ಥಳಕ್ಕೆ ತಲುಪಿದಾಗ ಸುಮಾರು 20 ರಿಂದ 25 ಜನರ ಗುಂಪು ಸೇರಿ ಕೋಳಿ ಅಂಕದಲ್ಲಿ ತೊಡಗಿರುವುದು ಕಂಡುಬಂದಿದ್ದು, ಪೊಲೀಸರನ್ನು ಕಂಡ ಕೂಡಲೇ ಜೂಜುಕೋರರು ಓಡಲು ಆರಂಭಿಸಿದ್ದಾರೆ.

    ಈ ಸಂದರ್ಭದಲ್ಲಿ ವಿಟ್ಲಕಸಬ ನಿವಾಸಿಗಳಾದ ಚಂದ್ರಶೇಖರ (43), ಇಬ್ರಾಹಿಂ (65), ಹೊನ್ನಪ್ಪ (46) ಮತ್ತು ವಿಟ್ಲಪಡ್ನೂರು ನಿವಾಸಿ ಚಂದ್ರಹಾಸ (32) ಎಂಬ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

    ಆದರೆ, ಉಳಿದ ಆರೋಪಿಗಳನ್ನು ಹಿಡಿಯಲು ಪೊಲೀಸರು ಮುಂದಾದಾಗ ಬಾಬಣ್ಣ ಮತ್ತು ಹೊನ್ನಪ್ಪ ಹರಿಜನ ಎಂಬವರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದಾರೆ. ಕಾರ್ಯಾಚರಣೆಯ ವೇಳೆ ಜೂಜಾಟಕ್ಕೆ ಬಳಸಿದ್ದ 3 ಕೋಳಿಗಳು, 1000 ರೂ. ನಗದು ಹಾಗೂ ಇತರೆ ಪರಿಕರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಈ ಘಟನೆಗೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 90/2026 ರಂತೆ ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 87, 93, ಪ್ರಾಣಿ ಹಿಂಸೆ ತಡೆ ಕಾಯ್ದೆಯ ಕಲಂ 3, 11 ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) 2023 ರ ಕಲಂ 112, 221 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

    Continue Reading

    Trending

    Copyright © 2025 Deevatige

    error: Content is protected !!