Connect with us

Entertainment

ಪುತ್ತೂರು: ಮೇ 12ರಂದು ಉಜ್ರುಪಾದೆ ಶ್ರೀ ಕೊರಗಜ್ಜ ಕ್ಷೇತ್ರದ ವರ್ಷಾವಧಿ ನೇಮೋತ್ಸವ; ಶಾಸಕ ಅಶೋಕ್ ಕುಮಾರ್ ರೈ ಅವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Published

on

ಪುತ್ತೂರು: ತಾಲೂಕಿನ ಬಲ್ನಾಡು ಗ್ರಾಮದ ಉಜ್ರುಪಾದೆಯಲ್ಲಿರುವ ಕಾರಣಿಕದ ಶ್ರೀ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ವರ್ಷಾವಧಿ ನೇಮೋತ್ಸವ ಮತ್ತು ಹರಕೆ ನೇಮೋತ್ಸವವು ದಿನಾಂಕ 12-05-2026ರ ಮಂಗಳವಾರದಂದು ಅತ್ಯಂತ ಭಕ್ತಿ ಸೌರಭದೊಂದಿಗೆ ನಡೆಯಲಿದೆ.

ಈ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಯುತ ಅಶೋಕ್ ಕುಮಾರ್ ರೈ ಅವರು ಕ್ಷೇತ್ರದಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ಷೇತ್ರದ ಧಾರ್ಮಿಕ ಕಾರ್ಯಕ್ರಮಗಳು ಸಾಂಗವಾಗಿ ನೆರವೇರಲಿ ಎಂದು ಶುಭ ಹಾರೈಸಿದರು.

ಮೇ 12ರಂದು ಬೆಳಿಗ್ಗೆ ಸ್ಥಳ ಶುದ್ಧಿ, ಗಣಹೋಮ ಮತ್ತು ಕಲಶಾಭಿಷೇಕದೊಂದಿಗೆ ಧಾರ್ಮಿಕ ವಿಧಿವಿಧಾನಗಳು ಆರಂಭವಾಗಲಿವೆ. ರಾತ್ರಿ 7:00 ಗಂಟೆಗೆ ಶ್ರೀ ಕೊರಗಜ್ಜ ದೈವದ ನೇಮೋತ್ಸವವು ಜರುಗಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಗಂಧ ಪ್ರಸಾದ ಸ್ವೀಕರಿಸಬೇಕೆಂದು ಕ್ಷೇತ್ರದ ಮೊಕ್ತೇಸರರಾದ ಕೆ. ಬಾಬು ಪೂಜಾರಿ ಬಲ್ನಾಡು ಹಾಗೂ ಉತ್ಸವ ಸಮಿತಿಯವರು ವಿನಂತಿಸಿದ್ದಾರೆ. ಸುಮಾರು 40 ಲಕ್ಷ ರೂಪಾಯಿ ವೆಚ್ಚದಲ್ಲಿ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯಗಳು ನಡೆಯುತ್ತಿದ್ದು, ಭಕ್ತಾದಿಗಳು ತನು-ಮನ-ಧನಗಳ ಸಹಕಾರ ನೀಡಿ ದೈವದ ಕೃಪೆಗೆ ಪಾತ್ರರಾಗುವಂತೆ ಆಮಂತ್ರಣ ಪತ್ರಿಕೆಯಲ್ಲಿ ಕೋರಲಾಗಿದೆ.

ಕಾರಣಿಕದ ಸ್ವಾಮಿ ಕೊರಗಜ್ಜ ಕ್ಷೇತ್ರ, ಉಜ್ರುಪಾದೆ, ಬಲ್ನಾಡು ಗ್ರಾಮ, ಪುತ್ತೂರು ತಾಲೂಕು ಇಲ್ಲಿನ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9449895111, 8296577565

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

Entertainment

ಪುತ್ತೂರು ಮಹಾಲಿಂಗೇಶ್ವರ ಜಾತ್ರೆ: ಬಿರುವೆರ್ ಕುಡ್ಲ ವತಿಯಿಂದ ಭಕ್ತಾದಿಗಳಿಗೆ ತಂಪು ಪಾನೀಯ ವಿತರಣೆ

Published

on

ಪುತ್ತೂರು: ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಸಂಭ್ರಮದ ನಡುವೆ, ಬಿರುವೆರ್ ಕುಡ್ಲ (ರಿ.) ಪುತ್ತೂರು ಘಟಕದ ವತಿಯಿಂದ ಭಕ್ತಾದಿಗಳಿಗೆ ತಂಪು ಪಾನೀಯ ವಿತರಣಾ ಸೇವಾ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು.

ದಂಡನಾಯಕ ಉಳ್ಳಾಲ್ತಿ ಅಮ್ಮನವರ ಕಿರುವಾಳು ಭಂಡಾರ ಆಗಮನದ ಪುಣ್ಯದಿನದಂದು ಸಂಜೆ 6:00ರಿಂದ ತಡರಾತ್ರಿಯವರೆಗೆ ಸಾವಿರಾರು ಭಕ್ತಾದಿಗಳಿಗೆ ತಂಪು ಪಾನೀಯವನ್ನು ವಿತರಿಸುವ ಮೂಲಕ ಬಿರುವೆರ್ ಕುಡ್ಲ ಸಂಘಟನೆಯು ತನ್ನ ಸಾಮಾಜಿಕ ಬದ್ಧತೆಯನ್ನು ಮೆರೆಯಿತು.

ಸಂಜೆ ದೇವಸ್ಥಾನಕ್ಕೆ ಭೇಟಿ ನೀಡಿದ ಬಿರುವೆರ್ ಕುಡ್ಲ ಸಂಘಟನೆಯ ಸಂಸ್ಥಾಪಕರಾದ ಉದಯ ಪೂಜಾರಿ ಬಳ್ಳಾಲ್‌ಬಾಗ್ ಅವರ ನೇತೃತ್ವದಲ್ಲಿ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ದೇವಸ್ಥಾನದ ಕೆರೆ ಪಕ್ಕದಲ್ಲಿ ಅಳವಡಿಸಲಾಗಿದ್ದ ತಂಪು ಪಾನೀಯ ವಿತರಣಾ ಕೌಂಟರ್ ಅನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ ಭಟ್ ಅವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಅವರು ಭೇಟಿ ನೀಡಿ ಸಂಘಟನೆಯ ಕಾರ್ಯವೈಖರಿಯನ್ನು ಶ್ಲಾಘಿಸಿದರು.

ಕಾರ್ಯಕ್ರಮದ ಯಶಸ್ಸಿಗಾಗಿ ಬಿರುವೆರ್ ಕುಡ್ಲ ಪುತ್ತೂರು ಘಟಕದ ಅಧ್ಯಕ್ಷರಾದ ಜನಾರ್ಧನ ಪೂಜಾರಿ ಪಡುಮಲೆ, ಉಪಾಧ್ಯಕ್ಷರಾದ ಮನೋಹರ್ ರೈ ಮೇಲ್ಮಜಲು ಮತ್ತು ಜಗದೀಶ್ ಅಮೀನ್ ನಡುಬೈಲು ಅವರು ಮಾರ್ಗದರ್ಶನ ನೀಡಿದರು. ಘಟಕದ ವಿವಿಧ ಪದಾಧಿಕಾರಿಗಳು ಹಾಗೂ ನೂರಾರು ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ಭಕ್ತಾದಿಗಳಿಗೆ ಪಾನೀಯ ವಿತರಿಸುವ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರು.

ಜಾತ್ರೆಯಲ್ಲಿ ದಣಿದು ಬಂದ ಭಕ್ತರಿಗೆ ಈ ತಂಪು ಪಾನೀಯ ವಿತರಣೆಯು ಹೆಚ್ಚಿನ ಆರಾಮವನ್ನು ನೀಡಿತು, ಸಾರ್ವಜನಿಕರು ಬಿರುವೆರ್ ಕುಡ್ಲದ ಈ ಸೇವೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

Continue Reading

DEATH

ಡ್ರಾಮಾ ಜೂನಿಯರ್ಸ್ ಸೂರಜ್ ಅಜ್ಜಿ, ಸೋಷಿಯಲ್ ಮೀಡಿಯಾ ಸ್ಟಾರ್ ಲಕ್ಷ್ಮೀ ನಾಯ್ಕ (93) ವಿಧಿವಶ

Published

on

ಸರಿಯಾಗಿ ಕಿವಿ ಕೇಳಿಸದಿದ್ದರೂ, ಕಣ್ಣು ಮಂಜಾಗಿದ್ದರೂ ತನ್ನ ಮರಿಮೊಮ್ಮಗ ಹೇಳಿಕೊಟ್ಟಂತೆ ನಟನೆ ಮಾಡುತ್ತಲೇ ಫೇಮಸ್‌ ಆದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಂಚಿಕೇರಿಯ ಜನಪ್ರಿಯ ವ್ಯಕ್ತಿತ್ವ, ಸಾಮಾಜಿಕ ಜಾಲತಾಣದ ಮೂಲಕ ಲಕ್ಷಾಂತರ ಅಭಿಮಾನಿಗಳ ಮನ ಗೆದ್ದಿದ್ದ ‘ರೀಲ್ಸ್ ಅಜ್ಜಿ’ ಲಕ್ಷ್ಮೀ ನಾಯ್ಕ (93) ಅವರು ಭಾನುವಾರ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.

ಗ್ರಾಮೀಣ ಸೊಗಡಿನ ಅನಭಿಷಿಕ್ತ ನಟಿ:

ಕಳೆದ ಕೆಲವು ವರ್ಷಗಳಿಂದ ತಮ್ಮ ಮೊಮ್ಮಗ, ‘ಡ್ರಾಮಾ ಜೂನಿಯರ್ಸ್’ ಖ್ಯಾತಿಯ ಸೂರಜ್ ಅವರೊಂದಿಗೆ ಸೋಷಿಯಲ್ ಮೀಡಿಯಾ ರೀಲ್ಸ್‌ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಲಕ್ಷ್ಮೀ ನಾಯ್ಕ ಅವರು ಮನೆಮಾತಾಗಿದ್ದರು. ಇವರ ನೈಜ ನಟನೆ, ಮುಗ್ಧತೆ ಹಾಗೂ ಅಪ್ಪಟ ಹಳ್ಳಿ ಸೊಗಡಿನ ಮಾತುಗಳಿಗೆ ಮಾರುಹೋಗದವರೇ ಇಲ್ಲ. ಮೊಮ್ಮಗ ಸೂರಜ್ ಮಾಡುವ ತಮಾಷೆಯ ಪ್ರಶ್ನೆಗಳಿಗೆ ಅಜ್ಜಿ ನೀಡುತ್ತಿದ್ದ ಉತ್ತರಗಳು ಹಾಗೂ ಅವರ ವಿಶಿಷ್ಟ ಶೈಲಿಯ ನಗು ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ನಲ್ಲಿ ಸದಾ ವೈರಲ್ ಆಗುತ್ತಿದ್ದವು.

ಲಕ್ಷಾಂತರ ಅಭಿಮಾನಿಗಳ ಕಂಬನಿ:

ವೃದ್ಧಾಪ್ಯದ ನಡುವೆಯೂ ಸದಾ ಲವಲವಿಕೆಯಿಂದ ಇರುತ್ತಿದ್ದ ಇವರ ನಿಧನದ ಸುದ್ದಿಯನ್ನು ಸೂರಜ್ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. “ನನ್ನ ಅಜ್ಜಿ ಇನ್ನು ನೆನಪು ಮಾತ್ರ” ಎಂದು ಅವರು ಭಾವುಕವಾಗಿ ಬರೆದುಕೊಂಡಿದ್ದು, ಸಾವಿರಾರು ಅಭಿಮಾನಿಗಳು ಅಜ್ಜಿಯ ಆತ್ಮಕ್ಕೆ ಶಾಂತಿ ಕೋರಿ ಸಂತಾಪ ಸೂಚಿಸುತ್ತಿದ್ದಾರೆ.

ವಾರ್ಧಕ್ಯದಿಂದ ಕೊನೆಯುಸಿರು:

ಕಳೆದ ಕೆಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಲಕ್ಷ್ಮೀ ನಾಯ್ಕ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಮಂಚಿಕೇರಿಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕೇವಲ ಒಂದು ಕುಟುಂಬಕ್ಕೆ ಮಾತ್ರವಲ್ಲದೆ, ಇಡೀ ಕರ್ನಾಟಕದ ನೆಟ್ಟಿಗರಿಗೆ ತಮ್ಮ ವಿಡಿಯೋಗಳ ಮೂಲಕ ನಗು ಹಂಚಿದ್ದ ಒಬ್ಬ ಅದ್ಭುತ ಕಲಾವಿದೆಯನ್ನು ಕರುನಾಡು ಕಳೆದುಕೊಂಡಂತಾಗಿದೆ.

Continue Reading

Belthangady

ಯಕ್ಷರಂಗದಲ್ಲಿ ‘ಕೃಷ್ಣ’ನ ಕ್ರೋಧ: ಪ್ರೇಕ್ಷಕರ ಶಿಳ್ಳೆಗೆ ಕೆರಳಿದ ಉಜಿರೆ ಅಶೋಕ ಭಟ್; ವೇದಿಕೆಯಲ್ಲೇ ದರ್ಪದ ಮಾತುಗಳ ಸುರಿಮಳೆ!

Published

on

ಯಕ್ಷಗಾನ ಎನ್ನುವುದು ಕೇವಲ ಮನರಂಜನೆಯಲ್ಲ, ಅದೊಂದು ಶಿಸ್ತಿನ ಕಲೆ. ಆದರೆ ಇತ್ತೀಚೆಗೆ ವೇದಿಕೆಯ ಮೇಲೆ ಕಲಾವಿದರು ಮತ್ತು ಪ್ರೇಕ್ಷಕರ ನಡುವೆ ನಡೆಯುತ್ತಿರುವ ಸಂಘರ್ಷಗಳು ಕಲಾಭಿಮಾನಿಗಳಲ್ಲಿ ಬೇಸರ ಮೂಡಿಸಿವೆ. ಭಾಗವತರ ಆಲಾಪನೆಗೆ ಶಿಳ್ಳೆ ಹೊಡೆದರೆಂದು ಕಲಾವಿದ ಉಜಿರೆ ಅಶೋಕ ಭಟ್ ಅವರು ಕೃಷ್ಣನ ವೇಷದಲ್ಲಿಯೇ ಪ್ರೇಕ್ಷಕರು ಶಿಳ್ಳೆ ಹೊಡೆದಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ವೇದಿಕೆಯಲ್ಲೇ ಪ್ರೇಕ್ಷಕರನ್ನು ತರಾಟೆಗೆ ತೆಗೆದುಕೊಂಡ ಘಟನೆ ಈಗ ದೊಡ್ಡ ಚರ್ಚೆಗೆ ಕಾರಣವಾಗಿದೆ.

ನಡೆದದ್ದೇನು?
ಭಾಗವತರ ಪದ್ಯಕ್ಕೆ ಕೃಷ್ಣನ ವೇಷಧಾರಿ ಉಜಿರೆ ಅಶೋಕ ಭಟ್ ಅವರು ಅರ್ಥ ಹೇಳಲು ಸಿದ್ಧರಾಗುತ್ತಿದ್ದಂತೆ, ಭಾಗವತರ ಆಲಾಪನೆಗೆ ಪ್ರೇಕ್ಷಕರ ಸಾಲಿನಿಂದ ಕೇಳಿಬಂದ ಜೋರಾದ ಶಿಳ್ಳೆ ಮತ್ತು ಶಬ್ದಗಳಿಂದ ವಿಚಲಿತರಾಗಿದ್ದಾರೆ.. ಇದರಿಂದ ತೀವ್ರ ಅಸಮಾಧಾನಗೊಂಡ ಕಲಾವಿದರು, ಕಥೆಯ ಪ್ರಸಂಗವನ್ನು ಬದಿಗಿಟ್ಟು ನೇರವಾಗಿ ಪ್ರೇಕ್ಷಕರತ್ತ ತಿರುಗಿದರು. “ಇದು ಶಿಳ್ಳೆ ಹೊಡೆಯುವ ಜಾಗವಲ್ಲ, ಯಕ್ಷಗಾನದ ಗಂಭೀರತೆ ಅರ್ಥ ಮಾಡಿಕೊಳ್ಳಿ” ಎಂಬ ಖಡಕ್ ಮಾತುಗಳೊಂದಿಗೆ ಶಿಸ್ತಿನ ಪಾಠ ಆರಂಭಿಸಿದ್ದಾರೆ- “ನೀವು ಶಿಳ್ಳೆ ನಿಲ್ಲಿಸದಿದ್ದರೆ ನಾನು ಹೋಗುತ್ತೇನೆ. ಇದು ದೋಂಬರಾಟವೇ? ಇದು ಯಕ್ಷಗಾನವೇ? ಕೋಳಿ ಕಟ್ಟವೇ? ಕಂಬಳವೇ? ಎಂದು ವೇದಿಕೆಯಲ್ಲೇ ಪ್ರಶ್ನೆ ಮಾಡಿದ್ದಾರೆ. ಶಿಳ್ಳೆ ಹಾಕಿದವರು ಯಾರು? ಹುಚ್ಚರನ್ನು ಬೆಳೆಸಬೇಡಿ, ಕಲಾವಿದರನ್ನು ಬೆಳೆಸಿ, ಆಗದೆ ಇದ್ದರೆ ಬನ್ಸ್‌ ತಿಂದು ಹೋಗಿ, ಭಾಗವತರ ಕಂಠ ಹಾಳು ಮಾಡುತ್ತೀರಾ ? ನಾವು ಯಕ್ಷಗಾನ ಮಾಡಬೇಕೋ? ಎಂದು ಆಕ್ರೋಶಿತರಾಗಿ ಹೇಳುತ್ತಿರುವುದು ವಿಡಿಯೋದಲ್ಲಿ ಕಾಣಿಸುತ್ತದೆ.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕ್ಷೇತ್ರದ ವತಿಯಿಂದ ಯಕ್ಷಗಾನ ಮಂಡಳಿಯವರು ಕುಂದಾಪುರದ ಹನ್ನಾಬೈಲಿನಲ್ಲಿ ಮಾ.26 ರಂದು ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ, ಭಾಗವತರು ಪದ ಹಾಡುತ್ತಿರುವ ಸಂದರ್ಭದಲ್ಲಿ ಆಲಾಪನೆ ಮಾಡುತ್ತಿದ್ದಾಗ ಪ್ರೇಕ್ಷಕರು ಶಿಳ್ಳೆ ಹಾಕಿದ್ದಾರೆ. ಪದ್ಯ ಮುಗಿದ ನಂತರ ಕೃಷ್ಣ ವೇಷಧಾರಿ ಅಶೋಕ್ ಭಟ್ ಗರಂ ಆಗಿ ಶಿಳ್ಳೆ ಹೊಡೆದ ಪ್ರೇಕ್ಷಕರನ್ನು ಉದ್ದೇಶಿಸಿ ಹೇಳಿದ ಮಾತುಗಳು ವೈರಲ್‌ ಆಗಿದೆ.

ಕಲಾವಿದನ ಆಕ್ರೋಶಕ್ಕೆ ಕಾರಣವೇನು?
ಉಜಿರೆ ಅಶೋಕ ಭಟ್ ಅವರ ವಾದದ ಪ್ರಕಾರ, ಯಕ್ಷಗಾನದ ಅರ್ಥಗಾರಿಕೆ ಎನ್ನುವುದು ಏಕಾಗ್ರತೆಯಿಂದ ನಡೆಯಬೇಕಾದ ಪ್ರಕ್ರಿಯೆ. ಪ್ರೇಕ್ಷಕರು ಅನಗತ್ಯವಾಗಿ ಶಿಳ್ಳೆ ಹಾಕುವುದು ಅಥವಾ ಗದ್ದಲ ಮಾಡುವುದು ಕಲೆಯ ಗೌರವಕ್ಕೆ ಧಕ್ಕೆ ತರುತ್ತದೆ. “ನಾವು ಕಷ್ಟಪಟ್ಟು ಕಲೆ ಪ್ರದರ್ಶಿಸುವಾಗ ಶಿಸ್ತು ಇರಬೇಕು” ಎನ್ನುವುದು ಅವರ ಆಕ್ರೋಶದ ಹಿಂದಿನ ಆಶಯವಾಗಿತ್ತು.

ಪ್ರೇಕ್ಷಕ ಪ್ರಭುಗಳನ್ನು ಮರೆತರೇ ಕಲಾವಿದರು?
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಪರ-ವಿರೋಧದ ಚರ್ಚೆಗಳು ಜೋರಾಗಿವೆ:
ಯಕ್ಷಗಾನದ ಪಾವಿತ್ರ್ಯತೆ ಉಳಿಯಬೇಕು, ಕಲಾವಿದನಿಗೆ ಗೌರವ ಸಿಗಬೇಕು. ಶಿಳ್ಳೆ ಹಾಕುವುದು ಕಲೆಗೆ ಮಾಡುವ ಅವಮಾನ ಎಂದು ಒಂದು ವರ್ಗ ವಾದಿಸಿದರೆ , ವೇದಿಕೆಯ ಮೇಲೆ ಕೃಷ್ಣನಂತಹ ದೈವಸ್ವರೂಪಿ ಪಾತ್ರಧಾರಿ ಕಲಾವಿದನಿಗೆ ಸಂಯಮ ಇರಬೇಕು. ಪ್ರೇಕ್ಷಕರನ್ನು ಹೀನಾಯವಾಗಿ ಕಾಣುವುದು ಒಬ್ಬ ವೃತ್ತಿಪರ ಕಲಾವಿದನ ಲಕ್ಷಣವಲ್ಲ. ಕಲಾವಿದನ ಮಾತುಗಳಲ್ಲಿ ಸ್ಪಷ್ಟವಾಗಿ ದರ್ಪ, ಅಹಂಕಾರ ಮತ್ತು ತನ್ನ ಸಾಧನೆಯ ಮೇಲಿನ ಅತಿಯಾದ ಹೆಮ್ಮೆಯ ಭಾವನೆಗಳು ಕಾಣುತ್ತಿರುವುದರಿಂದ ಆತನು ತನ್ನನ್ನು ಇತರರಿಗಿಂತ ಮೇಲಿರುವವನಾಗಿ ಚಿತ್ರಿಸಿಕೊಂಡು, ತನ್ನ ಸಾಧನೆಗಳನ್ನು ದೊಡ್ಡದಾಗಿ ಹೇಳಿಕೊಳ್ಳುವ ವೇಳೆ ಇತರರ ಕೊಡುಗೆಗಳನ್ನು ಕಡಿಮೆ ಮಾಡುವ ರೀತಿಯ ಹೇಳಿಕೆಗಳನ್ನು ನೀಡುತ್ತಿರುವುದು ಕಂಡುಬಂದಿದೆ. ಒಬ್ಬ ಕಲಾವಿದ ಇವತ್ತು ಈ ಮಟ್ಟಕ್ಕೆ ಬೆಳೆಯಬೇಕಾದರೆ ಪ್ರೇಕ್ಷಕರ ಪ್ರೋತ್ಸಾಹವೇ ಕಾರಣ. ಅಭಿಮಾನದಿಂದ ಪ್ರೇಕ್ಷಕರು ಹಾಕುವ ಶಿಳ್ಳೆಯನ್ನು ಸಕಾರಾತ್ಮಕವಾಗಿ ಸ್ವೀಕರಿಸಬೇಕು. ಪ್ರೇಕ್ಷಕರಿಲ್ಲದೆ ಕಲೆ ಇಲ್ಲ, ಕಲಾವಿದರಿಲ್ಲದೆ ಸಂಸ್ಕೃತಿ ಇಲ್ಲ. ಇಬ್ಬರ ನಡುವೆ ಸಮನ್ವಯ ಇರಬೇಕಾದ ಅನಿವಾರ್ಯತೆ ಇಂದು ಎದುರಾಗಿದೆ. ಒಬ್ಬ ಕಲಾವಿದ ಇವತ್ತು ಈ ಮಟ್ಟಕ್ಕೆ ಬೆಳೆಯಬೇಕಾದರೆ ಅದಕ್ಕೆ ಪ್ರೇಕ್ಷಕರ ಪ್ರೋತ್ಸಾಹ ಮತ್ತು ಅಭಿಮಾನವೇ ಕಾರಣ. ಶಿಳ್ಳೆ ಎನ್ನುವುದು ಅಭಿಮಾನದ ಸಂಕೇತವೂ ಆಗಿರಬಹುದು. ಸಣ್ಣ ತಪ್ಪುಗಳಿಗಾಗಿ ಪ್ರೇಕ್ಷಕ ಪ್ರಭುಗಳನ್ನು ವೇದಿಕೆಯ ಮೇಲಿಂದಲೇ ಹಿಯಾಳಿಸುವುದು ಕಲಾವಿದನಿಗೆ ಶೋಭೆ ತರುವುದಿಲ್ಲ. “ಕಲಾವಿದ ಬೆಳೆಯಲು ಬೇಕಾದ ಪ್ರೇಕ್ಷಕ ಸ್ನೇಹಿ ಮನೋಭಾವವನ್ನು ಅಶೋಕ ಭಟ್ ಅವರು ಮರೆತರೇ?” ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ವೇದಿಕೆಯ ಮೇಲಿಂದ ಪ್ರೇಕ್ಷಕರನ್ನು ತರಾಟೆಗೆ ತೆಗೆದುಕೊಳ್ಳುವುದು ಕಲಾವಿದನ ಅಹಂಕಾರವನ್ನು ತೋರಿಸುತ್ತದೆ. ಎಂಬುವುದು ಕಲಾಭಿಮಾನಿಗಳ ಕಡೆಯಿಂದ ಕೇಳಿಬರುತ್ತಿರುವ ವಾದಗಳು ಕಲಾವಿದನ ಈ ದರ್ಪದ ನಡೆ ಯಕ್ಷಗಾನದ ಆಂತರಿಕ ಶಿಸ್ತನ್ನು ಎತ್ತಿ ಹಿಡಿಯುವುದೋ ಅಥವಾ ಪ್ರೇಕ್ಷಕರನ್ನು ಕಲೆಯ ಸಂಭ್ರಮದಿಂದ ದೂರ ತಳ್ಳುವುದೋ ಎಂಬ ಬಗ್ಗೆ ಈಗ ಗಂಭೀರ ಚರ್ಚೆ ನಡೆಯುತ್ತಿದೆ.

ವೇದಿಕೆಯಲ್ಲಿ ಅರ್ಥ ಹೇಳಲು ಬಂದ ಪಾತ್ರಧಾರಿ ಭಾಗವತರಲ್ಲಿ ಅನುಮತಿ ಕೇಳಿದ ಬಳಿಕ ತನ್ನ ಬುದ್ಧಿವಾದದ ಮಾತು ಆರಂಭಿಸಬೇಕಾಗಿತ್ತು. ಅಥವಾ ವ್ಯವಸ್ಥಾಪಕರಲ್ಲಿ ತಿಳಿಸಬೇಕಿತ್ತು ಅದ್ಯಾವುದೂ ಇಲ್ಲದೇ ಏಕಾಏಕಿ ಶಿಳ್ಳೆ ಹೊಡೆದ ಪ್ರೇಕ್ಷಕರಿಗೆ ಬುದ್ಧಿ ಮಾತಿನ ಮೂಲಕ ವೇದಿಕೆಯಲ್ಲೇ ತನ್ನ ಅಹಂಕಾರ ಪ್ರವೃತ್ತಿಯನ್ನು ಅಶೋಕ್ ಭಟ್ ಸಾಬೀತು ಪಡಿಸಿರುವುದು ಯಕ್ಷಾಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

Continue Reading

Trending

Copyright © 2025 Deevatige

error: Content is protected !!