judgement
ಕಾಂಗ್ರೆಸ್ ಶಾಸಕ ಕೊಲೆ ಅಪರಾಧಿ; ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪು
- Share
- Tweet /home/u338848369/domains/deevatigenews.com/public_html/wp-content/plugins/mvp-social-buttons/mvp-social-buttons.php on line 72
https://deevatigenews.com/wp-content/uploads/2026/04/Vinay-Kulkarni-1-1000x600.jpg&description=ಕಾಂಗ್ರೆಸ್ ಶಾಸಕ ಕೊಲೆ ಅಪರಾಧಿ; ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪು', 'pinterestShare', 'width=750,height=350'); return false;" title="Pin This Post">
ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಅವರ ಭೀಕರ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 17 ಮಂದಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅಪರಾಧಿಗಳೆಂದು ಘೋಷಿಸಿ ಮಹತ್ವದ ತೀರ್ಪು ಪ್ರಕಟಿಸಿದೆ. ಈ ತೀರ್ಪಿನಿಂದಾಗಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ದೊಡ್ಡ ಹಿನ್ನಡೆಯಾಗಿದ್ದು, ನ್ಯಾಯಾಲಯವು ಎಲ್ಲಾ ಅಪರಾಧಿಗಳನ್ನು ತಕ್ಷಣವೇ ವಶಕ್ಕೆ ಪಡೆದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸುವಂತೆ ಸಿಬಿಐಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.
ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಅವರು ಈ ಆದೇಶವನ್ನು ಹೊರಡಿಸಿದ್ದು, ಕೊಲೆ ಮತ್ತು ಕ್ರಿಮಿನಲ್ ಪಿತೂರಿ ನಡೆಸಿದ ಆರೋಪದ ಅಡಿಯಲ್ಲಿ ಐಪಿಸಿ ಸೆಕ್ಷನ್ 302, 120ಬಿ ಹಾಗೂ201 ಅನ್ವಯ ದೋಷಿಗಳು ಎಂದು ತೀರ್ಮಾನಿಸಿದ್ದಾರೆ. ವಿನಯ್ ಕುಲಕರ್ಣಿ ಮತ್ತು ಇತರರು ಯೋಗೀಶ್ ಗೌಡ ಅವರ ಕೊಲೆಗೆ ಸಂಚು ರೂಪಿಸಿರುವುದು ಸಾಬೀತಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
2016ರ ಜೂನ್ 15ರಂದು ಧಾರವಾಡದ ಜಿಮ್‌ನಲ್ಲಿ ಯೋಗೀಶ್ ಗೌಡ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಸಿಬಿಐ, ರಾಜಕೀಯ ದ್ವೇಷವೇ ಈ ಕೊಲೆಗೆ ಪ್ರಮುಖ ಕಾರಣ ಎಂದು ಆರೋಪಪಟ್ಟಿ ಸಲ್ಲಿಸಿತ್ತು. ಈ ಪ್ರಕರಣದಲ್ಲಿ ಸಾಕ್ಷಿ ನುಡಿಯುವಾಗ ಸುಳ್ಳು ಮಾಹಿತಿ ನೀಡಿದ ಮತ್ತು ತನಿಖೆಯ ಹಾದಿ ತಪ್ಪಿಸಲು ಪ್ರಯತ್ನಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಇತರ ಸ್ವತಂತ್ರ ಸಾಕ್ಷಿಗಳ ವಿರುದ್ಧವೂ ಪ್ರಕರಣ ದಾಖಲಿಸಲು ನ್ಯಾಯಾಲಯವು ರಿಜಿಸ್ಟಾರ್‌ಗೆ ಸೂಚಿಸಿದೆ. ಇದು ವ್ಯವಸ್ಥಿತವಾಗಿ ನಡೆದ ಕೊಲೆ ಎಂಬುದು ಸಾಕ್ಷ್ಯಾಧಾರಗಳಿಂದ ದೃಢಪಟ್ಟಿದೆ. ಅಪರಾಧಿಗಳಿಗೆ ವಿಧಿಸಬೇಕಾದ ಶಿಕ್ಷೆಯ ಪ್ರಮಾಣವನ್ನು ನಿಗದಿಪಡಿಸಲು ನ್ಯಾಯಾಲಯವು ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.
ಈ ತೀರ್ಪು ರಾಜ್ಯ ರಾಜಕಾರಣದಲ್ಲಿ ತಲ್ಲಣ ಮೂಡಿಸಿದ್ದು, ಸಾರ್ವಜನಿಕ ಜೀವನದಲ್ಲಿರುವವರ ನೈತಿಕತೆಗೆ ಸಂಬಂಧಿಸಿದಂತೆ ದೊಡ್ಡ ಸಂದೇಶವನ್ನು ರವಾನಿಸಿದೆ. ಕಾನೂನಿನ ಕಣ್ಣಿನಲ್ಲಿ ಎಲ್ಲರೂ ಸಮಾನರು ಎಂಬುದನ್ನು ಈ ತೀರ್ಪು ಮತ್ತೊಮ್ಮೆ ಎತ್ತಿ ಹಿಡಿದಿದೆ. ಅಂತಿಮವಾಗಿ ಸುದೀರ್ಘ ಕಾನೂನು ಹೋರಾಟದ ನಂತರ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಕ್ಕಂತಾಗಿದೆ.
ವಿನಯ್ ಕುಲಕರ್ಣಿ ದೋಷಿ ಎಂದು ತೀರ್ಪು ನೀಡಿದ ಬೆನ್ನಲ್ಲೇ ನ್ಯಾಯಾಲಯದ ಸೂಚನೆ ಮೇರೆಗೆ ಅಪರಾಧಿಗಳನ್ನು ವಶಕ್ಕೆ ಪಡೆದಿರುವ ಸಿಬಿಐ ತಂಡ, ಅಪರಾಧಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಜೈಲಿಗೆ ಹೋಗುವ ಮುನ್ನ, ಬೌರಿಂಗ್ ಆಸ್ಪತ್ರೆಯಲ್ಲಿ ವಿನಯ್ ಕುಲಕರ್ಣಿ ಸೇರಿ 17 ಮಂದಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಇನ್ನು ಇದೇ ವೇಳೆ ಕೋರ್ಟ್ ತೀರ್ಪಿನ ಬಗ್ಗೆ ದೋಷಿ ವಿನಯ್ ಕುಲಕರ್ಣಿ ರಿಯಾಕ್ಟ್ ಮಾಡಿದ್ದಾರೆ.
ವಿನಯ್ ಕುಲಕರ್ಣಿ ಹೇಳಿದ್ದೇನು?
ಒಂದು ಕೈಯಿಂದ ಸೆಲ್ಯುಟ್ ಹೊಡೆದು ಮಾತನಾಡಿದ ವಿನಯ್ ಕುಲಕರ್ಣಿ, ಕೋರ್ಟ್ ತೀರ್ಪು ಕೊಟ್ಟಿದೆ. ಈಗ ನಾನೇನು ಹೇಳಲ್ಲ, ವಕೀಲರ ಬರುತ್ತಿದ್ದಾರೆ. ಅವರ ಬಳಿ ಈ ಬಗ್ಗೆ ಮಾತನಾಡುತ್ತೇನೆ. ಉಚ್ಚ ನ್ಯಾಯಾಲಯಕ್ಕೆ ಹೋಗುತ್ತೇನೆ ಎಂದು ಹೇಳಿದ್ದಾರೆ.
ದೋಷಿಯಾಗಿರೋ ವಿನಯ್ ಕುಲಕರ್ಣಿ ಮುಂದಿನ ಹಾದಿ ಏನು?
ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ದೋಷಿ ಹಿನ್ನೆಲೆ ಅವರ ಮುಂದಿನ ಹಾದಿ ಏನು ಅನ್ನೋದರ ಚರ್ಚೆ ಜೋರಾಗಿದೆ. ಶಾಸಕ ವಿನಯ್ ಕುಲಕರ್ಣಿ ಕಾನೂನು ಹೋರಾಟ ನಡೆಸಲು ಅವಕಾಶವಿದೆ. ಸೆಷನ್ಸ್ ಕೋರ್ಟ್ ಆದೇಶ ಪ್ರಶ್ನಿಸಿ ಹೈಕೋರ್ಟ್ ಅಥವಾ ಸುಪ್ರೀಂಕೋರ್ಟ್ ಮೊರೆ ಹೋಗಬಹುದಾಗಿದೆ. ಸೆಷನ್ಸ್ ಕೋರ್ಟ್ ತೀರ್ಪಿಗೆ ತಡೆ ನೀಡುವಂತೆ ಮನವಿ ಮಾಡಲು ಅವಕಾಶವಿದೆ.

arrest
ಸುಳ್ಯ: ಕಳ್ಳತನ ಹಾಗೂ ಪೊಲೀಸ್ ವಶದಿಂದ ಪರಾರಿಯಾಗಿದ್ದ ಆರೋಪಿಗೆ ಜೈಲು ಶಿಕ್ಷೆ ಮತ್ತು ದಂಡ
ಸುಳ್ಯ: ಕಳ್ಳತನ ಹಾಗೂ ಪೊಲೀಸ್ ವಶದಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಪ್ರಕರಣದ ಆರೋಪಿಗೆ ಇಲ್ಲಿನ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.
ಸುಳ್ಯ ಅಜ್ಜಾವರ ನಿವಾಸಿ ಎ.ಎಮ್. ಅಜೀಜ್ ಶಿಕ್ಷೆಗೊಳಗಾದ ಆರೋಪಿ. ಈತನ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಕಳ್ಳತನ (ಅ.ಕ್ರ: 96/2006, ಕಲಂ: 457, 380 ಐ.ಪಿ.ಸಿ) ಹಾಗೂ ಪೊಲೀಸ್ ವಶದಿಂದ ಪರಾರಿಯಾದ (ಅ.ಕ್ರ: 103/2018, ಕಲಂ: 224 ಐ.ಪಿ.ಸಿ) ಪ್ರಕರಣಗಳು ದಾಖಲಾಗಿದ್ದವು.
ನ್ಯಾಯಾಲಯದ ತೀರ್ಪಿನ ವಿವರ:
ಈ ಎರಡು ಪ್ರಕರಣಗಳ ಸುದೀರ್ಘ ವಿಚಾರಣೆ ನಡೆಸಿದ ಮಾನ್ಯ ಎಸ್.ಸಿ.ಜೆ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಮತಿ ದಮಯಂತಿ ಅವರು, ಆರೋಪಿ ಮೇಲಿನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಈ ಕೆಳಗಿನಂತೆ ಶಿಕ್ಷೆ ಪ್ರಕಟಿಸಿದ್ದಾರೆ:
ಪೊಲೀಸ್ ವಶದಿಂದ ಪರಾರಿ ಪ್ರಕರಣ (ಅ.ಕ್ರ: 103/2018 – ಕಲಂ 224): ಒಂದು ವರ್ಷಗಳ ಸಾದಾ ಕಾರಾಗೃಹ ವಾಸ ಹಾಗೂ ₹5,000 ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ತಪ್ಪಿದಲ್ಲಿ ಹೆಚ್ಚುವರಿ 45 ದಿನಗಳ ಸಾದಾ ಕಾರಾಗೃಹ ವಾಸ ಅನುಭವಿಸಬೇಕಾಗುತ್ತದೆ.
ಕಳ್ಳತನ ಪ್ರಕರಣ (ಅ.ಕ್ರ: 96/2006):
ಕಲಂ 457 ರಡಿ (ರಾತ್ರಿ ವೇಳೆ ಮನೆ ಕಳ್ಳತನ): ಮೂರು ವರ್ಷಗಳ ಸಾದಾ ಕಾರಾಗೃಹ ವಾಸ ಹಾಗೂ ₹5,000 ದಂಡ. ದಂಡ ಕಟ್ಟಲು ತಪ್ಪಿದಲ್ಲಿ 45 ದಿನಗಳ ಸಾದಾ ಕಾರಾಗೃಹ ವಾಸ.
ಕಲಂ 380 ರಡಿ (ಮನೆಯೊಳಗೆ ಕಳ್ಳತನ): ಮೂರು ವರ್ಷಗಳ ಸಾದಾ ಕಾರಾಗೃಹ ವಾಸ ಹಾಗೂ ₹5,000 ದಂಡ ವಿಧಿಸಿ ಆದೇಶಿಸಲಾಗಿದೆ.



crime
ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ: ಆಳಂದ ಗಲಭೆ ಪ್ರಕರಣ ಸೇರಿ 52 ಕೇಸ್‌ಗಳ ವಾಪಸ್; ಮುತಾಲಿಕ್, ಚೈತ್ರಾ ಕುಂದಾಪುರಗೆ ದೊಡ್ಡ ರಿಲೀಫ್!
ಬೆಂಗಳೂರು: ರಾಜ್ಯ ಸರ್ಕಾರವು ಒಂದು ಪ್ರಮುಖ ನಿರ್ಧಾರ ಕೈಗೊಂಡಿದ್ದು, ಕಲಬುರಗಿಯ ಆಳಂದ ಗಲಭೆ ಪ್ರಕರಣ ಸೇರಿದಂತೆ ಒಟ್ಟು 52 ವಿವಿಧ ಪ್ರಕರಣಗಳನ್ನು ಹಿಂಪಡೆಯಲು ಆದೇಶಿಸಿದೆ. ಸರ್ಕಾರದ ಈ ನಿರ್ಧಾರದಿಂದಾಗಿ ಹಿಂದೂಪರ ಸಂಘಟನೆಯ ಪ್ರಮುಖ ನಾಯಕರಾದ ಪ್ರಮೋದ್ ಮುತಾಲಿಕ್ ಮತ್ತು ಚೈತ್ರಾ ಕುಂದಾಪುರ ಸೇರಿದಂತೆ ನೂರಾರು ಜನರಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ.
ಪ್ರಮುಖಾಂಶಗಳು:
52 ಪ್ರಕರಣಗಳ ರದ್ದು: ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು 52 ರಾಜಕೀಯ ಮತ್ತು ಸಾರ್ವಜನಿಕ ಪ್ರತಿಭಟನೆಗಳಿಗೆ ಸಂಬಂಧಿಸಿದ ಕೇಸ್‌ಗಳನ್ನು ಹಿಂಪಡೆಯಲು ಸಚಿವ ಸಂಪುಟ ಉಪಸಮಿತಿ ಸಮ್ಮತಿ ಸೂಚಿಸಿದೆ.
ಆಳಂದ ಗಲಭೆ ಕೇಸ್ ವಾಪಸ್: ಕಲಬುರಗಿ ಜಿಲ್ಲೆಯ ಆಳಂದದಲ್ಲಿ ನಡೆದಿದ್ದ ವಿವಾದಿತ ದರ್ಗಾ ಮತ್ತು ರಾಘವಚೈತನ್ಯ ಶಿವಲಿಂಗ ಪೂಜೆ ಸಂದರ್ಭದ ಗಲಭೆಗೆ ಸಂಬಂಧಿಸಿದ ಪ್ರಕರಣಗಳನ್ನೂ ಸಹ ಸರ್ಕಾರ ಕೈಬಿಟ್ಟಿದೆ.
ನಾಯಕರಿಗೆ ನಿರಾಳ: ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ಪ್ರಖರ ವಾಗ್ಮಿ ಚೈತ್ರಾ ಕುಂದಾಪುರ ಅವರ ಮೇಲಿದ್ದ ಪ್ರಕರಣಗಳು ರದ್ದಾಗಿದ್ದು, ಅವರಿಗೆ ಕಾನೂನು ಹೋರಾಟದಿಂದ ಮುಕ್ತಿ ಸಿಕ್ಕಿದೆ.
ಕಳೆದ ಕೆಲವು ವರ್ಷಗಳ ಹಿಂದೆ ಆಳಂದದಲ್ಲಿ ಶಿವಲಿಂಗ ಪೂಜೆ ಸಲ್ಲಿಕೆ ಮತ್ತು ದರ್ಗಾದ ಉರುಸ್ ಸಂದರ್ಭದಲ್ಲಿ ತೀವ್ರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ವೇಳೆ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪದ ಮೇಲೆ ಹಲವರ ವಿರುದ್ಧ ಮೊಕದ್ದಮೆ ಹೂಡಲಾಗಿತ್ತು.
ಪ್ರಕರಣಗಳನ್ನು ಹಿಂಪಡೆಯುವ ಸರ್ಕಾರದ ಈ ಕ್ರಮವು ಸಾರ್ವಜನಿಕ ವಲಯದಲ್ಲಿ ಮತ್ತು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಗಲಭೆ ಆರೋಪಿಗಳಿಗೆ ಮುಕ್ತಿ ನೀಡಿದಂತಾಗಿದೆ ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ.
Bantawala
ಅಪ್ರಾಪ್ತರಿಗೆ ಬೈಕ್ ನೀಡಿದ ಮಾಲೀಕರಿಗೆ ಶಾಕ್: ತಲಾ 25,000 ರೂ. ದಂಡ ವಿಧಿಸಿದ ನ್ಯಾಯಾಲಯ!
ಬಂಟ್ವಾಳ: ಅಪ್ರಾಪ್ತ ಬಾಲಕರಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಿದ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ, ವಾಹನಗಳ ಮಾಲೀಕರಿಗೆ ಮಾನ್ಯ ನ್ಯಾಯಾಲಯವು ತಲಾ 25,000 ರೂ. ಭಾರಿ ದಂಡ ವಿಧಿಸಿ ಆದೇಶ ಹೊರಡಿಸಿದೆ.
ಪ್ರಕರಣದ ಹಿನ್ನೆಲೆ:
ಬಂಟ್ವಾಳ ಸಂಚಾರ ಠಾಣಾ ಪೊಲೀಸರು ನಡೆಸಿದ ವಾಹನ ತಪಾಸಣೆಯ ವೇಳೆ ಈ ಎರಡು ನಿಯಮ ಉಲ್ಲಂಘನೆ ಪ್ರಕರಣಗಳು ಬೆಳಕಿಗೆ ಬಂದಿದ್ದವು.
ಮೊದಲ ಪ್ರಕರಣ: ದಿನಾಂಕ 06.04.2026 ರಂದು ಬಂಟ್ವಾಳ ಸಂಚಾರ ಠಾಣಾ ವ್ಯಾಪ್ತಿಯ ಮೆಲ್ಕಾರ್ ಎಂಬಲ್ಲಿ ಅಪ್ರಾಪ್ತ ಬಾಲಕನೊಬ್ಬ KA-19-HT-9694 ನೊಂದಣಿ ಸಂಖ್ಯೆಯ ದ್ವಿಚಕ್ರ ವಾಹನವನ್ನು ಚಲಾಯಿಸುತ್ತಿರುವುದು ಪತ್ತೆಯಾಗಿತ್ತು.
ಎರಡನೇ ಪ್ರಕರಣ: ದಿನಾಂಕ 28.04.2026 ರಂದು ಬಿಸಿ ರೋಡ್ ಬಳಿ KA-05-KG-6785 ನೊಂದಣಿ ಸಂಖ್ಯೆಯ ಮತ್ತೊಂದು ದ್ವಿಚಕ್ರ ವಾಹನವನ್ನು ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ನೀಡಿರುವುದು ಪೊಲೀಸರ ತಪಾಸಣೆ ವೇಳೆ ಕಂಡುಬಂದಿತ್ತು.
ಕಾನೂನು ಕ್ರಮ ಮತ್ತು ಕೋರ್ಟ್ ಆದೇಶ:
ಅಪ್ರಾಪ್ತ ವಯಸ್ಕರಿಗೆ ವಾಹನ ನೀಡುವ ಮೂಲಕ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ, ಬಂಟ್ವಾಳ ಸಂಚಾರ ಠಾಣಾ ಪೊಲೀಸರು ವಾಹನಗಳ ಮಾಲೀಕರ ವಿರುದ್ಧ ಮೋಟಾರು ವಾಹನ ಕಾಯ್ದೆ (IMV) ಕಲಂ: 199(A) ಅಡಿಯಲ್ಲಿ ಮಾನ್ಯ ಎಸಿಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಿದ್ದರು.
ದಿನಾಂಕ 18.05.2026 ರಂದು ಈ ಎರಡೂ ಪ್ರತ್ಯೇಕ ಪ್ರಕರಣಗಳ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಲಯವು, ತಪ್ಪು ಎಸಗಿದ ಎರಡೂ ವಾಹನಗಳ ಮಾಲೀಕರಿಗೆ ತಲಾ ರೂ. 25,000/- ದಂಡ ವಿಧಿಸಿ ತೀರ್ಪು ನೀಡಿದೆ.
ಪೊಲೀಸರ ಮನವಿ: ಅಪ್ರಾಪ್ತ ವಯಸ್ಕರಿಗೆ ವಾಹನಗಳನ್ನು ನೀಡಬಾರದು. ಇದು ಕಾನೂನುಬಾಹಿರ ಮಾತ್ರವಲ್ಲದೆ, ಜೀವಕ್ಕೆ ಅಪಾಯ ತಂದೊಡ್ಡಬಹುದು. ಪೋಷಕರು ಮತ್ತು ವಾಹನ ಮಾಲೀಕರು ಈ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಬೇಕು ಎಂದು ಈ ಮೂಲಕ ಎಚ್ಚರಿಸಲಾಗಿದೆ.




-
crime3 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime4 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala2 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala5 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident4 weeks agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Dakshina Kannada6 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala5 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala4 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
