Bantawala
ನೇರಳಕಟ್ಟೆ ಸಹಕಾರಿ ಸಂಘದಲ್ಲಿ ದಲಿತ ಮಹಿಳೆಗೆ ಕರ್ತವ್ಯಕ್ಕೆ ಅಡ್ಡಿ; ನ್ಯಾಯಕ್ಕಾಗಿ ಪ್ರತಿಭಟನೆ ಆರಂಭ
ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಮತ್ತು ಸಿಬ್ಬಂದಿ ವರ್ಗದವರು ಕಳೆದ 24 ವರ್ಷಗಳಿಂದ ಕೆಲಸ ಮಾಡುತ್ತಿದ್ದ ದಲಿತ ಮಹಿಳೆಯೊಬ್ಬರಿಗೆ ಜಾತಿ ನಿಂದನೆ ಮತ್ತು ಮಾನಸಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಬಗ್ಗೆ ಪ್ರಕರಣ ದಾಖಲಾಗಿ ಅದಕ್ಕೆ ಆರೋಪಿಗಳ ಪರವಾಗಿ ನ್ಯಾಯಾಲಯದಿಂದ ಮದ್ಯಂತರ ತಡೆ ಸಿಕ್ಕಿದ್ದು, ಇದೀಗ ಇಂದು ನೇರಳಕಟ್ಟೆ ಸಹಕಾರಿ ಸಂಘದ ಕಚೇರಿಯ ಮುಂಭಾಗದಲ್ಲಿ ಸಂತ್ರಸ್ತ ಮಹಿಳೆಯ ಪರವಾಗಿ ದಲಿತ ಸಂಘಟನೆಗಳಿಂದ ಪ್ರತಿಭಟನೆ ನಡೆಯುವುದರ ಮೂಲಕ ಪ್ರಕರಣವು ಹೊಸ ತಿರುವು ಪಡೆದುಕೊಂಡಿದೆ.

ಘಟನೆಯ ಹಿನ್ನೆಲೆ:
ನೇರಳಕಟ್ಟೆ ಸಹಕಾರಿ ಸಂಘದಲ್ಲಿ ಸುಮಾರು ಎರಡು ದಶಕಗಳಿಂದ ಕ್ಲರ್ಕ್ ಕೆಲಸ ಮಾಡುತ್ತಿದ್ದ ಸೇಸಮ್ಮ ಎಂಬ ಮಹಿಳೆಯ ಮೇಲೆ ಸಂಘದ ಅಧ್ಯಕ್ಷ ಪುಷ್ಪರಾಜ್ ಚೌಟ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಶೋಧ ಮತ್ತು ಪ್ರಭಾರ ಮ್ಯಾನೇಜರ್ ಯತೀಶ್ ಗೌಡ ಅವರು ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದಾರೆ ಎಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಜೊತೆಗೆ ಸೇಸಮ್ಮ ಅವರಿಗೆ ಕೆಲಸಕ್ಕೆ ಬರದಂತೆ ಸೂಚಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆಯೂ ದೂರಲಾಗಿತ್ತು.
ಹೈಕೋರ್ಟ್ ತಡೆಯಾಜ್ಞೆ:
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಅಧ್ಯಕ್ಷರು ಮತ್ತು ಸಿಬ್ಬಂದಿ ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ದೂರುದಾರರ ಮೇಲೆ ಯಾವುದೇ ಕಠಿಣ ಕ್ರಮ ಕೈಗೊಳ್ಳದಂತೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ನ್ಯಾಯಾಲಯದ ಈ ಆದೇಶವು ಆರೋಪಿಗಳಿಗೆ ಸದ್ಯಕ್ಕೆ ತಾತ್ಕಾಲಿಕ ರಿಲೀಫ್ ನೀಡಿದೆ.

ಸಂಘದ ಎದುರು ಪ್ರತಿಭಟನೆ:
ಇಂದು ನೇರಳಕಟ್ಟೆ ಸಹಕಾರಿ ಸಂಘದ ಕಚೇರಿಯ ಮುಂಭಾಗದಲ್ಲಿ ಸಂತ್ರಸ್ತ ಮಹಿಳೆಯ ಪರವಾಗಿ ವಿವಿಧ ದಲಿತ ಸಂಘಟನೆಗಳು ಮತ್ತು ಬೆಂಬಲಿಗರು ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ದಲಿತ ಸಂಘಟನೆಯ ಮುಖ್ಯಸ್ಥರಾದ ಬಿ.ಕೆ. ಸೇಸಪ್ಪ ಬೆದ್ರಕಾಡು ಅವರು ಮಾತನಾಡುತ್ತಾ, “ಕೋರ್ಟ್ ಆದೇಶದ ಬಗ್ಗೆ ನಮಗೆ ಗೌರವವಿದೆ, ಆದರೆ ತನಿಖೆಗೆ ತಡೆ ನೀಡಬಾರದು. 24 ವರ್ಷಗಳಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿದ ಮಹಿಳೆಗೆ ಅನ್ಯಾಯವಾಗಿದೆ. ಮೇಲಾಧಿಕಾರಿಗಳು ಕಛೇರಿಗೆ ಭೇಟಿ ನೀಡಿ ಸೇಸಮ್ಮ ಅವರಿಗೆ ಮೌಖಿಕವಾಗಿ ಕೆಲಸಕ್ಕೆ ಹಾಜರಾಗಲು ಸೂಚನೆ ನೀಡಿದ ಮೇಲೆಯೂ ಅವರಿಗೆ ಕೆಲಸ ಮಾಡಲು ಅವಕಾಶ ನೀಡದ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು” ಮತ್ತು ನೊಂದ ಮಹಿಳೆಗೆ ಮುಕ್ತವಾಗಿ ಕೆಲಸ ಮಾಡಲು ಅವಕಾಶವನ್ನು ನೀಡಬೇಕು ಎಂದು ಆಗ್ರಹಿಸಿದರು. ದೂರು ತಡೆಯಾಜ್ಞೆಯ ಬಗ್ಗೆ ಕಾನೂನು ಹೋರಾಟ ಮುಂದುವರಿಯಲಿದೆ ಎಂದು ಹೋರಾಟಗಾರರು ತಿಳಿಸಿದ್ದಾರೆ.
ಈ ಘಟನೆಯು ಸ್ಥಳೀಯವಾಗಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಸಹಕಾರಿ ಸಂಘದ ಆಡಳಿತ ಮಂಡಳಿಯ ವಿರುದ್ಧ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

Agriculture
ಕೊಳ್ನಾಡು ಅಭಿವೃದ್ಧಿಗೆ ಮತ್ತೊಂದು ಕೊಡುಗೆ;36 ಲಕ್ಷ ರೂ ವೆಚ್ಚದಲ್ಲಿ ಆಣೆಕಟ್ಟು ನವೀಕರಣ; ಶಾಸಕ ಮಂಜುನಾಥ ಭಂಡಾರಿ ಶಿಪಾರಸ್ಸು
ವಿಟ್ಲ: ಕೊಳ್ನಾಡು ಗ್ರಾಮದ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಕೊಡುಗೆಯಾಗಿ ಕಾಡುಮಠ ಬಸ್ತಿಗುಂಡಿಯ ಹಳೆಯ ಕಿಂಡಿ ಆಣೆಕಟ್ಟನ್ನು 36 ಲಕ್ಷ ರೂ ವೆಚ್ಚದಲ್ಲಿ ದುರಸ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಈ ಕಾಮಗಾರಿ ಸ್ಥಳೀಯ ಜನರ ದೀರ್ಘಕಾಲದ ಬೇಡಿಕೆಯಾಗಿದ್ದು, ಇದೀಗ ಅನುಷ್ಠಾನದ ಹಂತಕ್ಕೆ ಬಂದಿರುವುದು ಸಂತಸದ ಸಂಗತಿಯಾಗಿದೆ.

ಕಾಡುಮಠ–ಕುಡ್ತಮುಗೇರು–ಕುದ್ರಿಯಾ ಭಾಗದ ರೈತರಿಗೆ ಅನುಕೂಲವಾಗುವಂತೆ ಹಳೆಯ ಮರದ ಹಲಗೆಯನ್ನು ಬದಲಾಯಿಸಿ, ಆಧುನಿಕ ತಂತ್ರಜ್ಞಾನದೊಂದಿಗೆ ಕಬ್ಬಿಣ ಹಾಗೂ ಪೈಬರ್ ಹಲಗೆಯನ್ನು ಅಳವಡಿಸುವ ಯೋಜನೆ ರೂಪಿಸಲಾಗಿದೆ. ಇದರಿಂದ ನೀರಿನ ನಿಯಂತ್ರಣ ಸುಧಾರಿಸಿ, ಕೃಷಿಗೆ ಅಗತ್ಯವಾದ ನೀರಾವರಿ ವ್ಯವಸ್ಥೆ ಇನ್ನಷ್ಟು ಬಲಪಡಿಸುವ ನಿರೀಕ್ಷೆಯಿದೆ.
ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾದ್ಯಕ್ಷರಾದ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರ ಮೂಲಕ ಕೊಳ್ನಾಡು ಕಾಂಗ್ರೆಸ್ ವಲಯಾಧ್ಯಕ್ಷರಾದ ಪವಿತ್ರ ಪೂಂಜಾ ಅವರ ಕೋರಿಕೆಯಂತೆ ಶಾಸಕ ಮಂಜುನಾಥ ಭಂಡಾರಿಯವರಿಗೆ ಸಣ್ಣ ನೀರಾವರಿ ಯೋಜನೆಯ ಹಲವು ಬೇಡಿಕೆಗಳನ್ನು ಸಲ್ಲಿಸಲಾಗಿತ್ತು. ಅವುಗಳಲ್ಲಿ ಮೊದಲ ಹಂತವಾಗಿ ಕಾಡುಮಠ ಬಸ್ತಿಗುಂಡಿ ಕಿಂಡಿ ಆಣೆಕಟ್ಟು ಕಾಮಗಾರಿ ಕೈಗೊಳ್ಳಲು ಟೆಂಡರ್ ಕರೆಯಲಾಗಿದ್ದು, ಉಳಿದ ಕಾಮಗಾರಿಗಳನ್ನು ಹಂತಹಂತವಾಗಿ ಪೂರ್ಣಗೊಳಿಸುವುದಾಗಿ ಶಾಸಕರು ತಿಳಿಸಿದ್ದಾರೆ.
ಅನಾಥ ಪ್ರಜ್ಞೆ ದೂರ ಮಾಡಿ ಅಭಿವೃದ್ಧಿ ಕಾರ್ಯಗಳು: ನಾಯಕರಿಗೆ ನಾಗರೀಕರಿಂದ ಪ್ರಶಂಸೆ
ಕಳೆದ ಎಂಟು ವರ್ಷಗಳಿಂದ ಕಾಂಗ್ರೆಸ್ ಶಾಸಕರು ಇಲ್ಲದ ಪರಿಸ್ಥಿತಿಯಲ್ಲಿಯೂ, ಕಾರ್ಯಕರ್ತರು ಹಾಗೂ ಮತದಾರರಿಗೆ ಅಭಿವೃದ್ಧಿಯ ಕೊರತೆ ಉಂಟಾಗದಂತೆ ರಸ್ತೆ, ನೀರು, ದಾರಿದೀಪ, ಆರೋಗ್ಯ, ಶಿಕ್ಷಣ ಹಾಗೂ ನೀರಾವರಿ ಸೇರಿದಂತೆ ಹಲವು ಮೂಲಭೂತ ಸೌಲಭ್ಯಗಳನ್ನು ಇಚ್ಚಾಶಕ್ತಿಯಿಂದ ಈಡೇರಿಸುತ್ತಿರುವ ನಾಯಕರ ಕಾರ್ಯವೈಖರಿಗೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಈ ಯೋಜನೆಗೆ ಕೊಳ್ನಾಡು ಪ್ರದೇಶದ ರೈತ ಬಂಧುಗಳು ಸೇರಿದಂತೆ ನೀರಿನ ಫಲಾನುಭವಿಗಳು ಹಾಗೂ ನಾಗರಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದ್ದು, ಕಾಮಗಾರಿ ಶೀಘ್ರ ಪೂರ್ಣಗೊಳ್ಳಲಿ ಎಂಬ ಆಶಯವನ್ನು ವ್ಯಕ್ತಪಡಿಸಿದ್ದಾರೆ

Bantawala
ಸಾಲೆತ್ತೂರು ಸಿರಿ ವಿದ್ಯಾಲಯಕ್ಕೆ ‘ಕರ್ಣಾಟಕ ಬ್ಯಾಂಕ್’ನಿಂದ ಬಸ್ ಕೊಡುಗೆ
ಬಂಟ್ವಾಳ: ತಾಲೂಕಿನ ಸಾಲೆತ್ತೂರು ಗ್ರಾಮದ ಸಿರಿ ವಿದ್ಯಾಲಯಕ್ಕೆ ಮಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ದೇಶದ ಅಗ್ರಗಣ್ಯ ಹಣಕಾಸು ಸಂಸ್ಥೆ ಕರ್ಣಾಟಕ ಬ್ಯಾಂಕ್, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನೂತನ ಶಾಲಾ ಬಸ್ಸನ್ನು ಕೊಡುಗೆಯಾಗಿ ನೀಡಿದೆ.

19ನೇ ವರ್ಷದ ಸಂಭ್ರಮ – ಹತ್ತನೇ ತರಗತಿ ಆರಂಭ: ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಇಂಗ್ಲಿಷ್ ಮಾಧ್ಯಮ ಶಿಕ್ಷಣ ನೀಡುವ ಮಹದೋದ್ದೇಶದೊಂದಿಗೆ 2007ರಲ್ಲಿ ಆರಂಭವಾದ ಸಿರಿ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯು ಪ್ರಸ್ತುತ 18 ವರ್ಷಗಳನ್ನು ಪೂರೈಸಿ 19ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ. ಕಳೆದ ಸಾಲಿನಲ್ಲಿ 9ನೇ ತರಗತಿ ಆರಂಭಿಸಲಾಗಿದ್ದು, ಈ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಣ ಇಲಾಖೆಯ ಅನುಮತಿಯೊಂದಿಗೆ ಹತ್ತನೇ ತರಗತಿ ಆರಂಭಗೊಳ್ಳುತ್ತಿದೆ. ಈ ವಿಶೇಷ ಸಂದರ್ಭದಲ್ಲಿ ಕರ್ಣಾಟಕ ಬ್ಯಾಂಕ್ ನೀಡಿದ ಬಸ್ ಕೊಡುಗೆಯು ಶಾಲೆಯ ಪ್ರಗತಿಗೆ ಸಾಕ್ಷಿಯಾಗಿದೆ.


ಬಸ್ ಕೀಲಿ ಹಸ್ತಾಂತರ: ಸಾಲೆತ್ತೂರಿನ ಸಿರಿ ವಿದ್ಯಾಲಯದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ಣಾಟಕ ಬ್ಯಾಂಕ್ ಮಂಗಳೂರು ವಲಯದ ಮುಖ್ಯ ವ್ಯವಸ್ಥಾಪಕರು ಹಾಗೂ ಕ್ಲಸ್ಟರ್ ಮುಖ್ಯಸ್ಥರಾದ ಶ್ರೀ ಲಕ್ಷ್ಮಿನಾರಾಯಣ ಪಿ.ಎಸ್. ಅವರು ನೂತನ ಬಸ್ಸಿನ ಕೀಲಿಯನ್ನು ವಿದ್ಯಾಲಯದ ಮುಖ್ಯಸ್ಥರಾದ ಸತೀಶ್ ಕುಮಾರ್ ಆಳ್ವ ಇರಾ ಬಾಳಿಕೆ ಅವರಿಗೆ ಹಸ್ತಾಂತರಿಸಿದರು.
ಈ ಶುಭ ಸಂದರ್ಭದಲ್ಲಿ ಕರ್ಣಾಟಕ ಬ್ಯಾಂಕ್ ಮಂಚಿ ಶಾಖೆಯ ವ್ಯವಸ್ಥಾಪಕರಾದ ಶ್ರೀ ಪ್ರವೀಣ್ ಗೌಡ ಕೆ., ಪಿಎನ್‌ಬಿ ಮೆಟ್‌ಲೈಫ್‌ನ ಶ್ರೀ ಚರಣ್, ಸಿರಿ ವಿದ್ಯಾಲಯದ ಟ್ರಸ್ಟಿಗಳಾದ ಗಾಯತ್ರಿ ಶಿವರಾಮ್ ಶೆಟ್ಟಿ, ಕರುಣಾಕರ ಶೆಟ್ಟಿ ಹಾಗೂ ಶಾಲಾ ಶಿಕ್ಷಕ ವೃಂದದವರು ಹಾಜರಿದ್ದರು.
ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ 16 ಜನ ಶಿಕ್ಷಕ ವೃಂದವನ್ನು ಹೊಂದಿರುವ ಈ ವಿದ್ಯಾಲಯವು, ಗ್ರಾಮೀಣ ಮಕ್ಕಳ ಭವಿಷ್ಯ ರೂಪಿಸುವಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದೆ. ಕರ್ಣಾಟಕ ಬ್ಯಾಂಕ್‌ನ ಈ ಸಾಮಾಜಿಕ ಕಾಳಜಿಯ ಕಾರ್ಯಕ್ಕೆ ಸ್ಥಳೀಯರು ಹಾಗೂ ಶಾಲಾ ಆಡಳಿತ ಮಂಡಳಿ ಕೃತಜ್ಞತೆ ಸಲ್ಲಿಸಿದೆ.
Bantawala
ಬಂಟ್ವಾಳ-ಸುಳ್ಯ ಕಾಂಗ್ರೆಸ್ ಉಸ್ತುವಾರಿಯಾಗಿ ಎಂ.ಎಸ್. ಮಹಮ್ಮದ್ ನೇಮಕ; ಕೆಪಿಸಿಸಿ ಆದೇಶ
ವಿಟ್ಲ: ಮುಂಬರುವ ಸ್ಥಳೀಯ ಸಂಸ್ಥೆ ಹಾಗೂ ವಿಧಾನಸಭಾ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಪಕ್ಷದ ಸಂಘಟನೆಯನ್ನು ಬಲಪಡಿಸಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮಹತ್ವದ ಹೆಜ್ಜೆ ಇಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅನುಭವಿ ರಾಜಕಾರಣಿ ಎಂ.ಎಸ್. ಮಹಮ್ಮದ್ ಅವರನ್ನು ಬಂಟ್ವಾಳ ಮತ್ತು ಸುಳ್ಯ ವಿಧಾನಸಭಾ ಕ್ಷೇತ್ರಗಳ ನೂತನ ಉಸ್ತುವಾರಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

ಅನುಭವಕ್ಕೆ ಸಿಕ್ಕ ಮನ್ನಣೆ: ಎಂ.ಎಸ್. ಮಹಮ್ಮದ್ ಅವರು ಸುಮಾರು ನಾಲ್ಕು ದಶಕಗಳ ಕಾಲ ಸುದೀರ್ಘ ರಾಜಕೀಯ ಅನುಭವ ಹೊಂದಿದ್ದಾರೆ. ಈ ಹಿಂದೆ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸತತ ಎರಡು ಅವಧಿಗೆ ಕಾರ್ಯನಿರ್ವಹಿಸಿದ ಹೆಗ್ಗಳಿಕೆ ಇವರದ್ದು. ಅಲ್ಲದೆ, ಮೂರು ಬಾರಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಕೆಪಿಸಿಸಿ ಸದಸ್ಯ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರಾಜ್ಯ ಮಟ್ಟದಲ್ಲಿ ಪಕ್ಷದ ಜವಾಬ್ದಾರಿಗಳನ್ನು ನಿಭಾಯಿಸುತ್ತಿರುವ ಅವರಿಗೆ, ಈಗ ಜಿಲ್ಲೆಯ ಎರಡು ಪ್ರಮುಖ ಕ್ಷೇತ್ರಗಳ ಉಸ್ತುವಾರಿ ನೀಡಲಾಗಿದೆ.

ಜಿ.ಎ. ಬಾವ ಅವರಿಗೆ ಆನೇಕಲ್ ಜವಾಬ್ದಾರಿ: ಈವರೆಗೆ ಬಂಟ್ವಾಳ ಮತ್ತು ಸುಳ್ಯ ಕ್ಷೇತ್ರಗಳ ಉಸ್ತುವಾರಿಯಾಗಿದ್ದ ಹಿರಿಯ ನಾಯಕ ಜಿ.ಎ. ಬಾವ ಅವರನ್ನು ಬೆಂಗಳೂರಿನ ಆನೇಕಲ್ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ವರ್ಗಾಯಿಸಲಾಗಿದೆ. ಎರಡೂ ಕ್ಷೇತ್ರಗಳ ಸಂಘಟನಾತ್ಮಕ ದೃಷ್ಟಿಯಿಂದ ಕೆಪಿಸಿಸಿ ಈ ಬದಲಾವಣೆ ಮಾಡಿದೆ.
ತಕ್ಷಣದಿಂದಲೇ ಜಾರಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಅನುಮೋದನೆಯೊಂದಿಗೆ, ಕಾರ್ಯಾಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ ಜೆ.ಸಿ. ಚಂದ್ರಶೇಖರ್ ಅವರ ಆಡಳಿತ ವಿಭಾಗದಿಂದ ಈ ಅಧಿಕೃತ ಪ್ರಕಟಣೆ ಹೊರಬಿದ್ದಿದೆ. ನೇಮಕಗೊಂಡ ನೂತನ ಉಸ್ತುವಾರಿಗಳು ತಕ್ಷಣದಿಂದಲೇ ಆಯಾ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಎಂ.ಎಸ್. ಮಹಮ್ಮದ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ರಾಜಕೀಯ ವಲಯದಲ್ಲಿ ಗುರುತಿಸಿಕೊಂಡಿರುವ ಪ್ರಭಾವಿ ನಾಯಕರು. ಸುಮಾರು 40 ವರ್ಷಗಳ ಸುದೀರ್ಘ ರಾಜಕೀಯ ಅನುಭವ ಹೊಂದಿರುವ ಇವರು, ಕೆಳ ಹಂತದಿಂದ ರಾಜ್ಯ ಮಟ್ಟದವರೆಗೆ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ.
ಆರಂಭಿಕ ರಾಜಕೀಯ: ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ವೃತ್ತಿಜೀವನ ಆರಂಭಿಸಿದ ಇವರು, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.
ಬ್ಲಾಕ್ ಕಾಂಗ್ರೆಸ್ ನಾಯಕತ್ವ: ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸತತ ಎರಡು ಅವಧಿಗೆ ಸೇವೆ ಸಲ್ಲಿಸಿ, ಸ್ಥಳೀಯವಾಗಿ ಪಕ್ಷವನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಸ್ಥಳೀಯ ಆಡಳಿತ: ಇವರು ಸತತ ಮೂರು ಅವಧಿಗೆ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾಗಿ ಆಡಳಿತಾತ್ಮಕ ಅನುಭವವನ್ನೂ ಹೊಂದಿದ್ದಾರೆ.
ಕೆಪಿಸಿಸಿ ಜವಾಬ್ದಾರಿಗಳು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ (KPCC) ಸದಸ್ಯರಾಗಿ, ಕಾರ್ಯದರ್ಶಿಯಾಗಿ ಮತ್ತು ಪ್ರಸ್ತುತ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ನೂತನ ಜವಾಬ್ದಾರಿ: ಇದೀಗ ಮುಂಬರುವ ಚುನಾವಣೆಗಳ ಹಿನ್ನೆಲೆಯಲ್ಲಿ ಪಕ್ಷವು ಇವರ ಅನುಭವವನ್ನು ಪರಿಗಣಿಸಿ, ಅತ್ಯಂತ ಸೂಕ್ಷ್ಮ ಹಾಗೂ ಪ್ರಮುಖ ಕ್ಷೇತ್ರಗಳಾದ ಬಂಟ್ವಾಳ ಮತ್ತು ಸುಳ್ಯ ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿಯನ್ನಾಗಿ ನೇಮಕ ಮಾಡಿದೆ.
ವಿಟ್ಲ ಭಾಗದವರೇ ಆದ ಎಂ.ಎಸ್. ಮಹಮ್ಮದ್ ಅವರು ಕಾರ್ಯಕರ್ತರೊಂದಿಗೆ ಉತ್ತಮ ಒಡನಾಟ ಹೊಂದಿರುವ ಸಂಘಟನಾ ಚತುರ ಎಂದು ಪಕ್ಷದ ವಲಯದಲ್ಲಿ ಗುರುತಿಸಲ್ಪಟ್ಟಿದ್ದಾರೆ.

-
crime4 weeks agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime3 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala3 weeks agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala3 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada4 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala4 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala2 months agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
