Educational
ಇಂದೇ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ: ಮಧ್ಯಾಹ್ನ 12 ಗಂಟೆಗೆ ರಿಸಲ್ಟ್ ಲಭ್ಯ!
- Share
- Tweet /home/u338848369/domains/deevatigenews.com/public_html/wp-content/plugins/mvp-social-buttons/mvp-social-buttons.php on line 72
https://deevatigenews.com/wp-content/uploads/2026/04/sslc-result-1000x600.jpg&description=ಇಂದೇ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ: ಮಧ್ಯಾಹ್ನ 12 ಗಂಟೆಗೆ ರಿಸಲ್ಟ್ ಲಭ್ಯ!', 'pinterestShare', 'width=750,height=350'); return false;" title="Pin This Post">
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ನೇ ಸಾಲಿನ ಎಸ್ಎಸ್ಎಲ್ಸಿ (SSLC) ಪರೀಕ್ಷೆ-1ರ ಫಲಿತಾಂಶವನ್ನು ಇಂದು ಅಂದರೆ ಏಪ್ರಿಲ್ 23, 2026ರಂದು ಮಧ್ಯಾಹ್ನ 12:00 ಗಂಟೆಗೆ ಅಧಿಕೃತವಾಗಿ ಪ್ರಕಟಿಸಲಿದೆ.

ಫಲಿತಾಂಶ ವೀಕ್ಷಿಸುವುದು ಹೇಗೆ?
ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ಕೆಳಗಿನ ವಿಧಾನಗಳ ಮೂಲಕ ಪಡೆಯಬಹುದು:
ಅಧಿಕೃತ ವೆಬ್ಸೈಟ್: https://karresults.nic.in ಲಿಂಕ್ ಮೂಲಕ ನಿಮ್ಮ ನೋಂದಣಿ ಸಂಖ್ಯೆ ಬಳಸಿ ಫಲಿತಾಂಶ ನೋಡಬಹುದು.
ಮೊಬೈಲ್ ಆಪ್: ‘KarnatakaOne’ ಮೊಬೈಲ್ ಆಪ್ ಮೂಲಕವೂ ಫಲಿತಾಂಶ ಲಭ್ಯವಿರುತ್ತದೆ.
ನೇರ ಸಂದೇಶ: ವಿದ್ಯಾರ್ಥಿಗಳು ನೋಂದಾಯಿತ ಮೊಬೈಲ್ ಸಂಖ್ಯೆಗೆ ಮಂಡಳಿಯು ವಾಟ್ಸಾಪ್ (WhatsApp) ಅಥವಾ ಎಸ್ಎಂಎಸ್ (SMS) ಮೂಲಕ ಫಲಿತಾಂಶದ ಮಾಹಿತಿಯನ್ನು ಕಳುಹಿಸಲಿದೆ
ಡಿಜಿಲಾಕರ್ನಲ್ಲಿ ಅಂಕಪಟ್ಟಿ ಲಭ್ಯ:
ಈ ವರ್ಷದ ವಿಶೇಷವೆಂದರೆ, ವಿದ್ಯಾರ್ಥಿಗಳ ಅಧಿಕೃತ ಅಂಕಪಟ್ಟಿಯನ್ನು (Marks Card) ಮೊದಲ ಬಾರಿಗೆ ಡಿಜಿಲಾಕರ್ (DigiLocker) ಮೂಲಕ ನೀಡಲಾಗುತ್ತಿದೆ. ಇಂದು ಮಧ್ಯಾಹ್ನ 12:00 ಗಂಟೆಯಿಂದಲೇ ವಿದ್ಯಾರ್ಥಿಗಳು https://www.digilocker.gov.in ವೆಬ್ಸೈಟ್ ಬಳಸಿ ತಮ್ಮ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಡಿಜಿಲಾಕರ್ನಿಂದ ಅಂಕಪಟ್ಟಿ ಪಡೆಯುವ ವಿಧಾನ ತಿಳಿಯಲು ಈ ಲಿಂಕ್ ಬಳಸಿ: https://tinyurl.com/mw84wmh9.
ಶಾಲಾ ಮಟ್ಟದಲ್ಲಿ ಫಲಿತಾಂಶ:
ಸಂಬಂಧಪಟ್ಟ ಶಾಲೆಗಳಲ್ಲಿಯೂ ಸಹ ಇಂದು ಮಧ್ಯಾಹ್ನ 12:00 ಗಂಟೆಯ ನಂತರ ಫಲಿತಾಂಶದ ಪಟ್ಟಿ ಲಭ್ಯವಿರುತ್ತದೆ ಎಂದು ಮಂಡಳಿಯ ಅಧ್ಯಕ್ಷರು ತಿಳಿಸಿದ್ದಾರೆ.
ಶುಭ ಹಾರೈಕೆಗಳು: ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಬರಲಿ ಎಂದು ಆಶಿಸುತ್ತೇವೆ!

Educational
ದಾನಿಗಳ ನೆರವಿನಿಂದ ಭಾರತಿ ಅನುದಾನಿತ ಶಾಲೆ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ-ಪೆನ್ನು ವಿತರಣೆ – ಕನ್ನಡ ಶಾಲೆಗಳ ಉಳಿವಿಗೆ ಅರ್ಥಪೂರ್ಣ ಹೆಜ್ಜೆ
ದಾನಿಗಳ ಸಹಕಾರವೇ ಆಧಾರವಾಗಿರುವ ಮುಡಿಪು ಕುರ್ನಾಡಿನ ಭಾರತಿ ಅನುದಾನಿತ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ, ಪೆನ್ನು ಹಾಗೂ ಬಳಪ ವಿತರಣಾ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಈ ಸೇವಾ ಕಾರ್ಯ ಹಮ್ಮಿಕೊಳ್ಳಲಾಗಿತ್ತು.
ಕನ್ನಡ ಜಾಗೃತಿ ಸಮಿತಿ ಸದಸ್ಯರು ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಸೈನಾರ್ ತಾಳಿತ್ತನೂಜಿ, ಸಾಮಾಜಿಕ ಟ್ರಸ್ಟ್ನ ನೆರವು ಹಾಗೂ ಖ್ಯಾತ ವ್ಲಾಗರ್ ಸಲಾಂ ಸಮ್ಮಿ ಅವರ ಸಹಯೋಗದೊಂದಿಗೆ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಅಗತ್ಯ ಶೈಕ್ಷಣಿಕ ಸಾಮಗ್ರಿ ವಿತರಿಸಲಾಯಿತು. ದಾನಿಗಳ ಈ ಕೊಡುಗೆ ವಿದ್ಯಾರ್ಥಿಗಳು ಮತ್ತು ಪೋಷಕರ ಮೆಚ್ಚುಗೆ ಪಾತ್ರವಾಯಿತು.
ಅಲೆಮಾರಿ ಮಕ್ಕಳಿಗೆ ವಿಶೇಷ ನೆರವು
ಪ್ರಸ್ತುತ ಶಾಲೆಯಲ್ಲಿ 75ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇದರಲ್ಲಿ ಟೆಂಟ್ ಮನೆಗಳಲ್ಲಿ ವಾಸಿಸುವ ಅಲೆಮಾರಿ ಜನಾಂಗದ 25ಕ್ಕೂ ಹೆಚ್ಚು ಮಕ್ಕಳು ಸೇರಿದ್ದಾರೆ. ಇಂತಹ ಮಕ್ಕಳ ಶೈಕ್ಷಣಿಕ ಪ್ರಗತಿಗೆ ನೆರವಾಗುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ವಿಶೇಷ ಮಹತ್ವ ಪಡೆದಿದೆ.
ಸ್ವಾತಂತ್ರ್ಯ ಪೂರ್ವದಲ್ಲೇ ಆರಂಭಗೊಂಡಿರುವ ಈ ಸಂಸ್ಥೆ ಹಲವು ದಶಕಗಳಿಂದ ಗ್ರಾಮೀಣ ಭಾಗದ ಮಕ್ಕಳಿಗೆ ವಿದ್ಯಾದಾನ ಮಾಡುತ್ತಾ ಬಂದಿದೆ. ಅನುದಾನಿತ ಶಾಲೆಯಾಗಿರುವುದರಿಂದ ಸರ್ಕಾರಿ ಶಾಲೆಗಳಂತೆ ಉಚಿತ ಪುಸ್ತಕ ವ್ಯವಸ್ಥೆ ಲಭ್ಯವಾಗದ ಕಾರಣ, ದಾನಿಗಳ ಸಹಕಾರದಿಂದ ಈ ಕೊರತೆಯನ್ನು ನೀಗಿಸುವ ಪ್ರಯತ್ನ ಮಾಡಲಾಗಿದೆ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ.
ಗಣ್ಯರ ಉಪಸ್ಥಿತಿ
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ಶ್ರೀ ಸುಬ್ರಹ್ಮಣ್ಯ ಭಟ್ ವಹಿಸಿದ್ದರು. ಖ್ಯಾತ ವ್ಲಾಗರ್, ಶಿಕ್ಷಣ ಪ್ರೇಮಿ, ಉದ್ಯಮಿ ಸಲಾಂ ಸಮ್ಮಿ, ಮಾಜಿ ನರೇಗಾ ಒಂಬುಡ್ಸ್ಮನ್ ದ.ಕ ಅಧ್ಯಕ್ಷ ಶ್ರೀ ಶೀನ ಶೆಟ್ಟಿ, ಜನಶಿಕ್ಷಣ ಟ್ರಸ್ಟ್ ನಿರ್ದೇಶಕ ಕೃಷ್ಣ ಮೂಲ್ಯ, ಸಂಯೋಜಕ ಚೇತನ್, ಬಾಳೆಪುಣಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಶ್ರೀಮತಿ ಆಯಿಷಾ ಬಾನು, ಸದಸ್ಯೆ ಸೆಮಿಮಾ, ನಿವೃತ್ತ ಶಿಕ್ಷಕ ರಾಮಕೃಷ್ಣ ಭಟ್, ಆಂಗ್ಲ ಮಾಧ್ಯಮ ಶಾಲೆಯ ಪ್ರಿನ್ಸಿಪಾಲ್ ಶ್ರೀಮತಿ ಶಕುಂತಲಾ ಶೆಟ್ಟಿ, ಮುಖ್ಯ ಶಿಕ್ಷಕಿ ಶ್ವೇತ ಬಳ್ಳಾಲ್, ಶ್ರೀ ಅಬೂಬಕ್ಕರ್ ಹೂಹಾಕುವ ಕಲ್ಲು, ಪತ್ರಕರ್ತ ವಿ.ಟಿ. ಪ್ರಸಾದ್ ಉಪಸ್ಥಿತರಿದ್ದರು. ಕನ್ನಡ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯಲಕ್ಷ್ಮಿ ಸ್ವಾಗತಿಸಿದರು. ಅನಿತಾ ಟೀಚರ್ ಧನ್ಯವಾದ ತಿಳಿಸಿದರು. ಕಾರ್ಯಕ್ರಮ ನಿರ್ವಹಣೆಯನ್ನು ಶಿಕ್ಷಕ ಹರೀಶ್ ಕುಮಾರ್ ಮಾಡಿದರು.
ಶಿಕ್ಷಣದ ಮೂಲಕ ಸಮಾಜದಲ್ಲಿ ಬದಲಾವಣೆ ತರಬಹುದು ಎಂಬ ನಂಬಿಕೆಯಿಂದ ನಡೆದ ಈ ಕಾರ್ಯಕ್ರಮ ಕನ್ನಡ ಶಾಲೆಗಳ ಉಳಿವು ಮತ್ತು ಬೆಳವಣಿಗೆಗೆ ಪ್ರೇರಣೆಯಾಗಿದೆ ಎಂದು ಸಾರ್ವಜನಿಕರು ಶ್ಲಾಘಿಸಿದ್ದಾರೆ.



Educational
NEET-UG ಪ್ರಶ್ನೆಪತ್ರಿಕೆ ಸೋರಿಕೆ ವಿವಾದ: ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜೂನ್ 6 ರಂದು ದೆಹಲಿಯಲ್ಲಿ ಅಭಿಜಿತ್ ದೀಪ್ಕೆ ಶಾಂತಿಯುತ ಪ್ರತಿಭಟನೆ
ನವದೆಹಲಿ: NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ, ನವದೆಹಲಿಯ ಜಂತರ್ ಮಂತರ್ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ‘ಕಾಕ್ರೋಚ್ ಜನತಾ ಪಕ್ಷ’ (CJP) ಸಂಸ್ಥಾಪಕ ಅಭಿಜಿತ್ ದೀಪ್ಕೆ ಜೂನ್ 6 ರಂದು ಭಾರತಕ್ಕೆ ಮರಳುತ್ತಿರುವುದಾಗಿ ಸೋಮವಾರ ಘೋಷಿಸಿದ್ದಾರೆ.
ಹಿನ್ನೆಲೆ: ‘ಜಿರಳೆ’ ಪದದ ವಿಡಂಬನಾತ್ಮಕ ಚಳವಳಿ
ಪರೀಕ್ಷಾ ಅಕ್ರಮಗಳಿಗೆ ಸಂಬಂಧಿಸಿದ ವಿಚಾರಣೆಗಳ ಸಂದರ್ಭದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಬಿ.ಆರ್. ಗವಾಯಿ ಅವರು ವಿದ್ಯಾರ್ಥಿಗಳು ಮತ್ತು ಕಾರ್ಯಕರ್ತರನ್ನು ಉಲ್ಲೇಖಿಸಿ “ಜಿರಳೆಗಳು” ಎಂಬ ಪದವನ್ನು ಬಳಸಿದ್ದರು. ತಾವು ಬಳಸಿದ ಪದವು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡಿರಲಿಲ್ಲ ಮತ್ತು ಅದನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ ಎಂದು ಸಿಜೆಐ ಸ್ಪಷ್ಟಪಡಿಸಿದರಾದರೂ, ಇದು ಆನ್ಲೈನ್ನಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು.
ಬೋಸ್ಟನ್ನಲ್ಲಿರುವ ತಂತ್ರಜ್ಞ ಅಭಿಜಿತ್ ದೀಪ್ಕೆ ಅವರು ಇದೇ ಸಂದರ್ಭವನ್ನು ಬಳಸಿಕೊಂಡು, ‘ಜಿರಳೆ’ ಪದವನ್ನು ಯುವ ಕ್ರಿಯಾಶೀಲತೆಯ ಸಂಕೇತವಾಗಿ ಮತ್ತು ಶಿಕ್ಷಣ ವ್ಯವಸ್ಥೆಯಲ್ಲಿ ಹೊಣೆಗಾರಿಕೆ ತರುವ ಅಭಿಯಾನವಾಗಿ ಪರಿವರ್ತಿಸಿದರು. ಸಿಜೆಪಿ (Cockroach Janata Party) ಎಂಬ ವಿಡಂಬನಾತ್ಮಕ ರಾಜಕೀಯ ಚಳವಳಿಯನ್ನು ಪ್ರಾರಂಭಿಸಿ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡಿದ್ದರು.
ಧರ್ಮೇಂದ್ರ ಪ್ರಧಾನ್ ವಿರುದ್ಧ ತೀವ್ರಗೊಂಡ ಅಭಿಯಾನ
ಈ ಕುರಿತು ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿರುವ ದೀಪ್ಕೆ, ನೀಟ್ ಪತ್ರಿಕೆ ಸೋರಿಕೆ ಮತ್ತು ತದನಂತರದ ಅಡಚಣೆಗಳು ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ಭಾರಿ ಪರಿಣಾಮ ಬೀರಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
“ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧದ ಅಭಿಯಾನವನ್ನು ತೀವ್ರಗೊಳಿಸಲು ನಾನು ಭಾರತಕ್ಕೆ ಮರಳಲು ನಿರ್ಧರಿಸಿದ್ದೇನೆ. ಭಾರತದ ಸಂವಿಧಾನದ ಮಾರ್ಗವನ್ನು ಅನುಸರಿಸಿ ನಾವೆಲ್ಲರೂ ಒಟ್ಟಾಗಿ ಸೇರಿ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಕೇಳಲು ಶಾಂತಿಯುತವಾಗಿ ಧ್ವನಿ ಎತ್ತುವ ಸಮಯ ಬಂದಿದೆ.” – ಅಭಿಜಿತ್ ದೀಪ್ಕೆ
ಪ್ರತಿಭಟನೆಯ ನಿಖರವಾದ ಕಾರಣಗಳು, ವಿದ್ಯಾರ್ಥಿಗಳ ಹಿತರಕ್ಷಣೆ ಮತ್ತು ಶಿಕ್ಷಣ ಇಲಾಖೆಯ ಇತ್ತೀಚಿನ ವಿದ್ಯಮಾನಗಳ ಸುತ್ತ ಇರಲಿದ್ದು, ದೇಶದ ವಿವಿಧ ಭಾಗಗಳಿಂದ ಬೆಂಬಲಿಗರು ಈ ಪ್ರತಿಭಟನೆಯಲ್ಲಿ ಭಾಗವಹಿಸುವ ಸಾಧ್ಯತೆಯಿದೆ.



Educational
ಹಿಜಾಬ್ ಮತ್ತು ಸಮವಸ್ತ್ರ ನೀತಿ ಹಿಂಪಡೆದ ರಾಜ್ಯ ಸರ್ಕಾರ
ಬೆಂಗಳೂರು: 2022ರಲ್ಲಿ ರಾಜ್ಯದಲ್ಲಿ ಭಾರಿ ವಿವಾದ ಸೃಷ್ಟಿಸಿದ್ದ ಹಿಜಾಬ್ ಮತ್ತು ಸಮವಸ್ತ್ರ ನೀತಿಯನ್ನು ಕರ್ನಾಟಕ ಸರ್ಕಾರವು ಬುಧವಾರ (ಮೇ 13) ಅಧಿಕೃತವಾಗಿ ಹಿಂಪಡೆದಿದೆ. ಸರ್ಕಾರದ ಈ ಹೊಸ ಆದೇಶದ ಮುಖ್ಯಾಂಶಗಳು ಇಲ್ಲಿವೆ:
ಹೊಸ ಆದೇಶದ ಪ್ರಮುಖ ಅಂಶಗಳು:
ಧಾರ್ಮಿಕ ಸಂಕೇತಗಳಿಗೆ ಅನುಮತಿ: ವಿದ್ಯಾರ್ಥಿಗಳು ಸಮವಸ್ತ್ರದ ಜೊತೆಗೆ ಹಿಜಾಬ್, ಜನಿವಾರ ಸೇರಿದಂತೆ ತಮ್ಮ ಧಾರ್ಮಿಕ ಮತ್ತು ಸೀಮಿತ ಸಾಂಪ್ರದಾಯಿಕ ಸಂಕೇತಗಳನ್ನು ಧರಿಸಲು ಮುಕ್ತ ಅವಕಾಶ ನೀಡಲಾಗಿದೆ.
ಹಳೆಯ ಆದೇಶ ರದ್ದು: ಫೆಬ್ರವರಿ 5, 2022 ರಂದು ಅಂದಿನ ಬಿಜೆಪಿ ಸರ್ಕಾರ ಹೊರಡಿಸಿದ್ದ ವಿವಾದಿತ ಸಮವಸ್ತ್ರ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ.
ನಿರ್ಬಂಧವಿಲ್ಲದ ಪ್ರವೇಶ: ಯಾವುದೇ ವಿದ್ಯಾರ್ಥಿ ಸಾಂಪ್ರದಾಯಿಕ ಸಂಕೇತ ಧರಿಸಿದ್ದಾರೆ ಎಂಬ ಕಾರಣಕ್ಕೆ ಶಾಲಾ ಪ್ರವೇಶ ಅಥವಾ ಪರೀಕ್ಷಾ ಕೊಠಡಿ ಪ್ರವೇಶವನ್ನು ನಿರಾಕರಿಸುವಂತಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಸೌಹಾರ್ದತೆಗೆ ಒತ್ತು: “ಇವ ನಮ್ಮವ” ಎಂಬ ಬಸವಣ್ಣನವರ ತತ್ವದಡಿ ಶಿಕ್ಷಣ ಸಂಸ್ಥೆಗಳು ಎಲ್ಲರನ್ನೂ ಒಳಗೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸರ್ಕಾರ ತಿಳಿಸಿದೆ.
ಯಾವುದಕ್ಕೆ ಅವಕಾಶವಿದೆ?
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಪ್ರಕಾರ, ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ನಿಗದಿಪಡಿಸಿದ ಸಮವಸ್ತ್ರ ಕಡ್ಡಾಯವಾಗಿರುತ್ತದೆ. ಆದರೆ ಅದರೊಂದಿಗೆ: ಹಿಜಾಬ್ (ತಲೆವಸ್ತ್ರ) ಜನಿವಾರ ಶಿವಧಾರ, ರುದ್ರಾಕ್ಷಿ ಪೇಟ ಧರಿಸಲು ಅಭ್ಯಂತರವಿಲ್ಲ
ಕೇಸರಿ ಶಾಲು ಧಾರ್ಮಿಕ ಅಥವಾ ಸಾಂಪ್ರದಾಯಿಕ ಆಚರಣೆಯ ಭಾಗವಲ್ಲ ಎಂದು ಪರಿಗಣಿಸಿರುವ ಸರ್ಕಾರ, ಅದಕ್ಕೆ ಅನುಮತಿ ನಿರಾಕರಿಸಿದೆ. ಶಾಲೆಯ ಶಿಸ್ತು ಅಥವಾ ಬೋಧನಾ ಪ್ರಕ್ರಿಯೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ.




-
crime2 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime4 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala2 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala5 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident4 weeks agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Dakshina Kannada6 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala5 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala4 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
