crime
ಸುಳ್ಯದ ಮೆಸ್ಕಾಂ ಅಧಿಕಾರಿ ಟೈಂಯ… ! ಕಂಠಪೂರ್ತಿ ಕುಡಿದು ಮೆಟ್ಟಿಲಲ್ಲಿ ಹೊರಳಾಡಿದ ಮೆಸ್ಕಾಂ ಹಿರಿಯ ಅಧಿಕಾರಿ – ಸಾರ್ವಜನಿಕರ ಆಕ್ರೋಶ
ಸುಳ್ಯ: ಮೆಸ್ಕಾಂ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಕಂಠಪೂರ್ತಿ ಮದ್ಯ ಸೇವಿಸಿ ಶ್ರೀರಾಮ ಪೇಟೆಯ ಕಟ್ಟಡದ ಮೆಟ್ಟಿಲಲ್ಲಿ ಹೊರಳಾಡಿದ ಘಟನೆ ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ನಡೆದದ್ದೇನು? : ಮಟಮಟ ಮಧ್ಯಾಹ್ನದಲ್ಲೇ ಮೆಸ್ಕಾಂ ಅಧಿಕಾರಿ ಮದ್ಯದ ನಶೆಯಲ್ಲಿ ಮೇಲೇಳಲಾರದೆ ಮೆಟ್ಟಿಲಲ್ಲಿ ಹೊರಳಾಡುತ್ತಿದ್ದರು. ವಿಷಯ ತಿಳಿದು ಸ್ಥಳದಲ್ಲಿ ಜನ ಜಮಾಯಿಸಿದ್ದರು.
ಮಾಹಿತಿ ತಿಳಿದ ಮೆಸ್ಕಾಂ ಸಿಬ್ಬಂದಿ ಇಲಾಖೆಗೆ ಮುಜುಗರವಾಗುವುದನ್ನು ಅರಿತು ತಕ್ಷಣ ಸ್ಥಳಕ್ಕೆ ಧಾವಿಸಿ, ಇಲಾಖಾ ವಾಹನದಲ್ಲಿ ಕುಡುಕ ಅಧಿಕಾರಿಯನ್ನು ತುಂಬಿಸಿಕೊಂಡು ಕರೆದೊಯ್ದಿದ್ದಾರೆ.

ಸಾರ್ವಜನಿಕರ ಒತ್ತಾಯ: ಕರ್ತವ್ಯದ ವೇಳೆಯಲ್ಲೇ ಮದ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಹೊರಳಾಡಿ ಇಲಾಖೆಯ ಮಾನ ಹರಾಜು ಹಾಕಿದ ಅಧಿಕಾರಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಸೇವೆಯಿಂದ ಅಮಾನತು ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಈ ಬಗ್ಗೆ ಮೆಸ್ಕಾಂ ಮೇಲಾಧಿಕಾರಿಗಳು ಇನ್ನೂ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

crime
ಮಾರಕಾಸ್ತ್ರ ಹಿಡಿದು ಪತ್ನಿಯ ಸಂಬಂಧಿಕರ ಮೇಲೆ ಹಲ್ಲೆಗೆ ಯತ್ನ: ಆರೋಪಿ ನವೀನ್ ಬಂಧನ
ಮಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯ ಸಂಬಂಧಿಕರ ಮೇಲೆ ಮಾರಕಾಸ್ತ್ರದಿಂದ ಹಲ್ಲೆಗೆ ಯತ್ನಿಸಿದ ಘಟನೆ ಜೋಕಟ್ಟೆಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ವಾಮಂಜೂರು ನಿವಾಸಿ ನವೀನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆಯ ಹಿನ್ನೆಲೆ:
ಬಂಧಿತ ಆರೋಪಿ ನವೀನ್ ಅವರಿಗೆ ವೈವಾಹಿಕ ಸಮಸ್ಯೆಗಳಿದ್ದು, ಈ ಹಿನ್ನೆಲೆಯಲ್ಲಿ ಇವರ ಪತ್ನಿ ವಿಚ್ಛೇದನ ಪಡೆದು ಕಳೆದ ಕೆಲವು ತಿಂಗಳುಗಳಿಂದ ಜೋಕಟ್ಟೆಯಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಇದೇ ಸಿಟ್ಟಿನಿಂದ ನವೀನ್ ನಿನ್ನೆ ರಾತ್ರಿ ಕತ್ತಿಯೊಂದಿಗೆ ಜೋಕಟ್ಟೆಗೆ ಆಗಮಿಸಿದ್ದ ಎನ್ನಲಾಗಿದೆ.
ಹಲ್ಲೆಗೆ ಯತ್ನ:
ಕಳವರದ ದೇವಿಪ್ರಸಾದ್ ಎಂಬುವರ ಮೇಲೆ ಹಲ್ಲೆ ನಡೆಸುವ ಉದ್ದೇಶದಿಂದ ಬಂದಿದ್ದ ನವೀನ್, ದೇವಿಪ್ರಸಾದ್ ಮತ್ತು ಅವರ ಪೋಷಕರ ಮೇಲೆ ಕತ್ತಿಯಿಂದ ಹಲ್ಲೆಗೆ ಯತ್ನಿಸಿದ್ದಾನೆ. ತಕ್ಷಣ ಎಚ್ಚೆತ್ತುಕೊಂಡ ದೇವಿಪ್ರಸಾದ್ ಅವರು ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ತಪ್ಪಿಸಿಕೊಳ್ಳುವ ವೇಳೆ ಬಿದ್ದ ಆರೋಪಿ:
ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಗಾಬರಿಗೊಂಡ ನವೀನ್ ಬೈಕ್ನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿ ಬೈಕ್ನಿಂದ ಕೆಳಕ್ಕೆ ಬಿದ್ದಿದ್ದಾನೆ. ತಕ್ಷಣ ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಪೊಲೀಸ್ ಕ್ರಮ:
ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ಹಲ್ಲೆಗೆ ಬಳಸಿದ್ದ ಕತ್ತಿಯನ್ನು ವಶಪಡಿಸಿಕೊಂಡಿದ್ದಾರೆ. ದೇವಿಪ್ರಸಾದ್ ನೀಡಿದ ದೂರಿನ ಮೇರೆಗೆ ಆರೋಪಿ ನವೀನ್ ವಿರುದ್ಧ ಕೊಲೆ ಯತ್ನ (IPC 307) ಮತ್ತು ಶಸ್ತ್ರಾಸ್ತ್ರ ಕಾಯ್ದೆ (Arms Act) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಂಗಳೂರು ನಗರ ಪೊಲೀಸ್ ಕಮಿಷನರ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತಿಳಿಸಿದ್ದಾರೆ.

Belthangady
ದೇವಸ್ಥಾನಕ್ಕೆ ನುಗ್ಗಿ ದೇವರ ಮೂರ್ತಿ ಭಗ್ನಗೊಳಿಸಿದ ದುಷ್ಕರ್ಮಿ
ಬೆಳ್ತಂಗಡಿ: ತಾಲೂಕಿನ ಇತಿಹಾಸ ಪ್ರಸಿದ್ಧ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ತಡರಾತ್ರಿ ನುಗ್ಗಿದ ಕಿಡಿಗೇಡಿಯೊಬ್ಬ ದೇವರ ಮೂರ್ತಿಯನ್ನು ಭಗ್ನಗೊಳಿಸಿ ದಾಂಧಲೆ ನಡೆಸಿದ ಘಟನೆ ಎಪ್ರಿಲ್ 22ರಂದು ತಡರಾತ್ರಿ ಸಂಭವಿಸಿದೆ. ಈ ಕೃತ್ಯದಿಂದ ಭಕ್ತಾದಿಗಳಲ್ಲಿ ತೀವ್ರ ಆತಂಕ ಹಾಗೂ ದಿಗ್ಭ್ರಮೆ ಮೂಡಿದೆ.

ಘಟನೆಯ ವಿವರ: ಕಳೆದ ರಾತ್ರಿ ಸುಮಾರು ಎರಡು ಗಂಟೆಯ ವೇಳೆಗೆ ಕಪ್ಪು ಬಣ್ಣದ ಥಾರ್ ವಾಹನದಲ್ಲಿ ಬಂದ ಅಜಯ್ ಎಂಬ ವ್ಯಕ್ತಿ, ದೇವಸ್ಥಾನದ ಸಮೀಪವಿರುವ ಸುಬ್ರಹ್ಮಣ್ಯ ಭಟ್ ಎಂಬುವವರ ಮನೆಗೆ ನುಗ್ಗಲು ಯತ್ನಿಸಿದ್ದಾನೆ. ಬಳಿಕ ದೇವಸ್ಥಾನದ ಪವಿತ್ರ ಜಲಕದ ಕೆರೆಗೆ ಹಾರಿ, ಅಲ್ಲಿಂದ ದೇವಸ್ಥಾನದ ಮೇಲ್ಚಾವಣಿಯ ಹಂಚುಗಳನ್ನು ತೆಗೆದು ಒಳನುಗ್ಗಿದ್ದಾನೆ.

ದೇವಸ್ಥಾನದೊಳಗೆ ವಿಕೃತಿ: ದೇವಸ್ಥಾನದ ಒಳಗೆ ಪ್ರವೇಶಿಸಿದ ಕಿಡಿಗೇಡಿ, ಕೊಡಮಣಿತ್ತಾಯ ದೈವದ ಗುಡಿಯಲ್ಲಿದ್ದ ಘಂಟಾಮಣಿಯನ್ನು ತೆಗೆದು ಮೇಲ್ಚಾವಣಿಯ ಹಂಚುಗಳ ಪಕ್ಕದಲ್ಲಿ ಇಟ್ಟಿದ್ದಾನೆ. ಅಷ್ಟಕ್ಕೇ ನಿಲ್ಲದೆ, ತೀರ್ಥ ಮಂಟಪದ ದೊಡ್ಡ ಘಂಟೆಯನ್ನು ಬಾರಿಸಿ ಭೀತಿ ಸೃಷ್ಟಿಸಿದ್ದಾನೆ. ನಂತರ ಗೋಪಾಲಕೃಷ್ಣ ದೇವರ ಗುಡಿಯೊಳಗೆ ನುಗ್ಗಿ, ದೇವರ ವಿಗ್ರಹವನ್ನು ನೆಲಕ್ಕೆ ಎಸೆದು ಭಗ್ನಗೊಳಿಸಿದ್ದಾನೆ. ಗುಡಿಯಲ್ಲಿದ್ದ ಪೂಜಾ ಸಾಮಗ್ರಿ ಹಾಗೂ ಇತರ ಪರಿಕರಗಳನ್ನು ಚೆಲ್ಲಾಪಿಲ್ಲಿ ಮಾಡಿ ವಿಕೃತಿ ಮೆರೆದಿದ್ದಾನೆ.

ತನಿಖೆಗೆ ಆಗ್ರಹ: ಘಟನೆಗೆ ಸಂಬಂಧಿಸಿದಂತೆ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರರಾದ ಬಿ. ಶೀತಲ್ ಪಡಿವಾಳ್ ಅವರು ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಬಳಸಿದ ಥಾರ್ ವಾಹನವು ಸುಬ್ರಹ್ಮಣ್ಯ ಭಟ್ ಅವರ ಮನೆಯಂಗಳದಲ್ಲೇ ಪತ್ತೆಯಾಗಿದೆ.
ಇತ್ತೀಚಿನ ದಿನಗಳಲ್ಲಿ ಈ ಭಾಗದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿರುವ ಬಗ್ಗೆ ಸಾರ್ವಜನಿಕರು ಶಂಕೆ ವ್ಯಕ್ತಪಡಿಸಿದ್ದು, ಪೋಲೀಸ್ ಇಲಾಖೆಯು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಬೇಕೆಂದು ಸ್ಥಳೀಯರು ಹಾಗೂ ದೇವಸ್ಥಾನದ ಭಕ್ತರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ವೇಣೂರು ಪೊಲೀಸರು ಅಜಯ್ನನ್ನು ವಿಚಾರಣೆ ನಡೆಸಿ, ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ ಮಾಡಿದ್ದಾರೆ ಎಂದು ವರದಿಯಾಗಿದೆ.

crime
ಬಿಜೆಪಿ ಮುಖಂಡನ ಪುತ್ರನ ವಿರುದ್ಧದ ಅತ್ಯಾಚಾರ ಪ್ರಕರಣ: ಸಂತ್ರಸ್ತೆಗೆ ಪ್ರತಿ ತಿಂಗಳು 75 ಸಾವಿರ ರೂ. ಜೀವನಾಂಶ ನಿಗದಿ ಪಡಿಸಿ ಮದ್ಯಂತರ ತಡೆಯಾಜ್ಞೆ ನೀಡಿದ ಹೈಕೋರ್ಟ್
ಬೆಂಗಳೂರು: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿ ಮಾಡಿ ಮಗು ಕರುಣಿಸಿದ ಆರೋಪ ಎದುರಿಸುತ್ತಿರುವ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಷರತ್ತು ಏನು? : ಅರ್ಜಿದಾರ ಆರೋಪಿ ಕೃಷ್ಣ ಜೆ. ರಾವ್ ಸ್ವತಃ ಅಥವಾ ತನ್ನ ಪೋಷಕರ ಮೂಲಕ ಸಂತ್ರಸ್ತೆ ಹಾಗೂ ಮಗುವಿನ ಅಗತ್ಯತೆಗಳನ್ನು ಪೂರೈಸಲು ಪ್ರತಿ ತಿಂಗಳು 75 ಸಾವಿರ ರೂ. ಪಾವತಿಸಬೇಕು ಎಂಬ ಷರತ್ತಿಗೆ ಒಳಪಟ್ಟು ಪ್ರಕರಣದ ಮುಂದಿನ ಎಲ್ಲ ಪ್ರಕ್ರಿಯೆಗಳಿಗೆ ನ್ಯಾಯಾಲಯ ತಡೆ ನೀಡಿದೆ.
ನ್ಯಾಯಪೀಠದ ಆದೇಶ: ಪ್ರಕರಣ ರದ್ದು ಕೋರಿ ಕೃಷ್ಣ ಜೆ. ರಾವ್ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಧ್ಯಂತರ ಆದೇಶ ಹೊರಡಿಸಿದೆ.
ಅರ್ಜಿದಾರರು ಮುಂದಿನ ಒಂದು ವಾರದ ಒಳಗೆ ಸಂತ್ರಸ್ತೆಗೆ 75 ಸಾವಿರ ರೂ.ಗಳನ್ನು ಪಾವತಿಸಬೇಕು. ಅದಾದ ನಂತರ ಪ್ರತಿ ತಿಂಗಳು ಹಣ ಪಾವತಿಸುವುದನ್ನು ಮುಂದುವರಿಸಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಪ್ರಕರಣದ ಹಿನ್ನೆಲೆ: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡ ಹಾಗೂ ನಗರಸಭಾ ಸದಸ್ಯ ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ವಿರುದ್ಧ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭವತಿ ಮಾಡಿ ವಂಚಿಸಿದ ಆರೋಪದಡಿ ಪ್ರಕರಣ ದಾಖಲಾಗಿತ್ತು. ಡಿಎನ್ಎ ಪರೀಕ್ಷೆಯಲ್ಲಿ ಕೃಷ್ಣನೇ ಮಗುವಿನ ತಂದೆ ಎಂದು ದೃಢಪಟ್ಟಿತ್ತು.
ಈ ಹಿಂದೆ ವಿಚಾರಣೆ ವೇಳೆ ಹೈಕೋರ್ಟ್ “ಮದುವೆಯಾಗುವುದೇ ಉತ್ತಮ, ಇಲ್ಲದಿದ್ದರೆ ಮಾಸಿಕ 10 ಸಾವಿರ ಜೀವನಾಂಶ ನೀಡಲು ಸಿದ್ಧರಿದ್ದೀರಾ?” ಎಂದು ಪ್ರಶ್ನಿಸಿತ್ತು. ಇದೀಗ ಜೀವನಾಂಶದ ಮೊತ್ತವನ್ನು 75 ಸಾವಿರ ರೂ.ಗೆ ನಿಗದಿಪಡಿಸಿ ಮಧ್ಯಂತರ ತಡೆ ನೀಡಿದೆ.

-
crime4 weeks agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime3 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala3 weeks agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala4 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada4 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala4 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala2 months agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
