accident
ಸವಣೂರು: ಟ್ಯಾಂಕರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಯುವಕರ ದುರ್ಮರಣ
ಪುತ್ತೂರು: ಸುಬ್ರಹ್ಮಣ್ಯ– ಮಂಜೇಶ್ವರ ಹೆದ್ದಾರಿಯ ಸವಣೂರು ಸಮೀಪದ ಚಾಪಳ್ಳ ತಿರುವಿನಲ್ಲಿ ಇಂದು ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಸಹ ಸವಾರ ಪುತ್ತೂರು ಆಸ್ಪತ್ರೆಗೆ ಕರೆತರುವ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಹಾಗೆಯೇ ಇನ್ನೊಂದು ಬೈಕ್ ನಲ್ಲಿ ಹಿಂಬದಿಯಿಂದ ಬರುತ್ತಿದ್ದವರಿಗೂ ಕೂಡ ಗಾಯಗಳಾಗಿವೆ ಎಂದು ಮಾಹಿತಿ ಲಭಿಸಿದೆ.

ಬಂಟ್ವಾಳ ತಾಲೂಕಿನ ಮಿತ್ತೂರು ಬೊಳ್ಳರಮಜಲು ನಿವಾಸಿ ಪುರಂದರ ಮೂಲ್ಯ ಎಂಬವರ ದ್ವಿತೀಯ ಪುತ್ರ ಯಜ್ನೇಶ್ (21) ಹಾಗೂ ಗೋಳ್ತಮಜಲು ಕೊಳಕೀರು ನೋಣಯ್ಯ ಭರಣ್ಯ ಎಂಬವರ ಪುತ್ರ ಜಗನ್(20) ಮೃತಪಟ್ಟ ಯುವಕರು. ಜಗನ್ ಪುತ್ತೂರಿನ ಅಕ್ಷಯ ಕಾಲೇಜಿನ ಅಂತಿಮ ಪದವಿ ಹೋಟೆಲ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಯಾಗಿದ್ದಾನೆ. ಇತ್ತೀಚೆಗೆ ಇಂಟರ್ನ್ ಶಿಪ್ ಗೆ ಆಸ್ಟ್ರೇಲಿಯಾಗೆ ತೆರಳಿ ಕೆಲದಿನಗಳ ಹಿಂದೆ ತವರಿಗೆ ಆಗಮಿಸಿದ್ದರು.

ಈ ಇಬ್ಬರು ಯುವಕರು ಕಡಬ ತಾಲೂಕಿನ ಆಲಂಗಾರಿಗೆ ಕೆಲಸದ ನಿಮಿತ್ತ ತೆರಳಿದ್ದರು. ಇಂದು ಸಂಜೆ 5 ಗಂಟೆ ಸುಮಾರಿಗೆ ವಾಪಸ್ಸು ಮನೆಗೆ ಮರಳುತ್ತಿದ್ದಾಗ, ಚಾಪಳ್ಳ ತಿರುವಿನಲ್ಲಿ ಎದುರಿನಿಂದ ಬಂದ ಮುಗೆರೋಡಿ ಕನ್ಸೆಕ್ಷನ್ಗೆ ಸೇರಿದ ನೀರಿನ ಟ್ಯಾಂಕರ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದೆ.

ಅಲಂಕಾರಿನಲ್ಲಿ ನಡೆಯುತ್ತಿದ್ದ ಕಾಮಗಾರಿಗೆ ಸವಣೂರು ಕಡೆಯಿಂದ ನೀರು ಪೂರೈಸುತ್ತಿದ್ದ ಟ್ಯಾಂಕರ್ ಚಾಲಕ, ಸ್ಕೂಟರ್ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ವಾಹನವನ್ನು ಎಡಕ್ಕೆ ತಿರುಗಿಸಿದ್ದಾನೆ. ಈ ವೇಳೆಯೆ ಬೈಕ್ ಟ್ಯಾಂಕರ್ನ ಚಕ್ರದ ಅಡಿಗೆ ಸಿಲುಕಿದ ಪರಿಣಾಮ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಈ ಸಂದರ್ಭದಲ್ಲೇ ನಿಯಂತ್ರಣ ತಪ್ಪಿದ ಟ್ಯಾಂಕರ್ 90 ಡಿಗ್ರಿ ತಿರುಗಿ ರಸ್ತೆ ಪಕ್ಕದ ಕಂದಕಕ್ಕೆ ಉರುಳಿದೆ.

ಅಪಘಾತದ ಭೀಕರತೆ ಎಷ್ಟಿತ್ತೆಂದರೆ, ಅದೇ ಹಾದಿಯಲ್ಲಿ ಬರುತ್ತಿದ್ದ ಮತ್ತೊಂದು ಬೈಕ್ ಸವಾರರು ಅಪಘಾತವನ್ನು ಕಂಡು ಗಾಬರಿಯಿಂದ ಬ್ರೇಕ್ ಹಾಕಿದಾಗ ಬೈಕ್ ಸ್ಕಿಡ್ ಆಗಿದೆ. ಈ ಘಟನೆಯಲ್ಲಿ ಬೈಕ್ನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಅಪಘಾತದಿಂದಾಗಿ ಸ್ಥಳದಲ್ಲಿ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು. ಘಟನಾ ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಆಸ್ಪತ್ರೆ ಬಳಿ ಮೃತರ ಕುಟುಂಬಸ್ಥರ ಆಕಂದ್ರನ ಮುಗಿಲು ಮುಟ್ಟಿದ್ದು ಭಾರಿ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದಾರೆ.
ಪುತ್ತೂರು ಅಕ್ಷಯ ಕಾಲೇಜಿನ ಅಂತಿಮ ಬಿ.ಕಾಂ. ವಿದ್ಯಾರ್ಥಿ ಜಗನ್ ರಸ್ತೆ ಅಪಘಾತದಲ್ಲಿ ಆಕಸ್ಮಿಕವಾಗಿ ಮೃತಪಟ್ಟಿದ್ದು, ಮೃತ ವಿದ್ಯಾರ್ಥಿಯ ಆತ್ಮಕ್ಕೆ ಭಗವಂತ ಸದ್ಗತಿ ಕರುಣಿಸಲಿ ಎಂದು ಶೋಕಾಚರಣೆ ನಿಮಿತ್ತ ನಾಳೆ ಕಾಲೇಜಿಗೆ ರಜೆ ಸಾರಲಾಗಿದೆ ಎಂದು ತಿಳಿದು ಬಂದಿದೆ.
.
accident
ಬ್ರೇಕಿಂಗ್ ನ್ಯೂಸ್: ಕಾರ್ಕಳ – ಮೂಡುಬಿದ್ರೆ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ; ಮಾಜಿ ಸಚಿವ ರಮಾನಾಥ ರೈ ಹಾಗೂ ಕಾರು ಚಾಲಕ ಪ್ರಾಣಾಪಾಯದಿಂದ ಪಾರು
ಕಾರ್ಕಳ: ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು ಜಂಕ್ಷನ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಬಿ. ರಮಾನಾಥ ರೈ ಹಾಗೂ ಅವರ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರ್ಕಳದಿಂದ ಮೂಡುಬಿದ್ರೆಯತ್ತ ವೇಗವಾಗಿ ಸಾಗುತ್ತಿದ್ದ ಖಾಸಗಿ ಬಸ್ ಮತ್ತು ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರಿನ (KA 70 A 0099) ನಡುವೆ ಮುಖಾಮುಖಿ ಭೀಕರ ಡಿಕ್ಕಿ ಸಂಭವಿಸಿದೆ.

ಘಟನೆಯ ವಿವರ ಹಾಗೂ ರಕ್ಷಣಾ ಕಾರ್ಯ: ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಾಜುಗಳು ಪುಡಿಯಾಗಿವೆ. ಕಾರಿನ ಒಳಗೆ ಏರ್ಬ್ಯಾಗ್ಗಳು ತೆರೆದುಕೊಂಡಿದ್ದರೂ ಸಹ, ಡಿಕ್ಕಿಯ ತೀವ್ರತೆಯಿಂದಾಗಿ ಮುಂಭಾಗದಲ್ಲಿ ಕುಳಿತಿದ್ದ ಮಾಜಿ ಸಚಿವ ರಮಾನಾಥ ರೈ ಹಾಗೂ ಕಾರು ಚಾಲಕ ಒಳಗೆ ಸಿಲುಕಿಕೊಂಡಿದ್ದರು. ಘಟನಾ ಸ್ಥಳದಲ್ಲಿದ್ದ ಸ್ಥಳೀಯರು ಮತ್ತು ಸಾರ್ವಜನಿಕರು ತಕ್ಷಣವೇ ಧಾವಿಸಿ ಬಂದು, ಅತ್ಯಂತ ಪ್ರಯಾಸಪಟ್ಟು ಅವರನ್ನ ಕಾರಿನಿಂದ ಹೊರತೆಗೆದಿದ್ದಾರೆ.

ಆಸ್ಪತ್ರೆಗೆ ದಾಖಲು: ಅಪಘಾತದಲ್ಲಿ ಗಾಯಗೊಂಡಿರುವ ರಮಾನಾಥ ರೈ ಹಾಗೂ ಕಾರು ಚಾಲಕರನ್ನು ತಕ್ಷಣವೇ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಬಸ್ ಹಾಗೂ ಕಾರಿನಲ್ಲಿದ್ದ ಇತರೆ ಕೆಲವು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯರು ಅವರನ್ನು ಆಸ್ಪತ್ರೆಗೆ ಸೇರಿಸಲು ನೆರವಾಗಿದ್ದಾರೆ.
ರಮಾನಾಥ ರೈಯವರು ಒಡಿಯೂರಿನಲ್ಲಿ ನಡೆದ ಒಡಿಯೂರು ಶ್ರೀ ವಿಕಾಸವಾಹಿನಿ ಸಂಭ್ರಮ ಹಾಗೂ ನೇರಳಕಟ್ಟೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಂಗಳೂರಿನ ಕಾರ್ಯಕ್ರಮದ ಮುಗಿಸಿ ಕಾರ್ಕಳದ ಮತ್ತೊಂದು ಸಮಾರಂಭಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
accident
ಬಂಟ್ವಾಳ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಣೆಯಲ್ಲಿ ದುರ್ಘಟನೆ; ಕೌಟುಂಬಿಕ ಕಲಹದ ಹಿನ್ನೆಲೆ ಮಕ್ಕಳನ್ನು ಬಾವಿಗೆ ಎಸೆದ ತಾಯಿ – ಒಂದು ಮಗು ಸಾವು, ಮತ್ತೊಂದು ಮಗು ಆಸ್ಪತ್ರೆಗೆ ದಾಖಲು
ಬಂಟ್ವಾಳ: ದಿನಾಂಕ: 19.09.2026ರಂದು ಮಧ್ಯಾಹ್ನ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಪೆರ್ಣೆ ಮೈರಕಟ್ಟೆಯಲ್ಲಿ ನಡೆದ ದೊಡ್ಡ ದುರಂತವೊಂದು ಬೆಳಕಿಗೆ ಬಂದಿದೆ. ಪೆರ್ಣೆಯಲ್ಲಿ ವಾಸ್ತವವಿರುವ ಸಿನಾನ್ (32) ಹಾಗೂ ನೂರುನ್ನಿಸಾ (28) ಎಂಬ ದಂಪತಿಗಳ ನಡುವೆ ಫೋನ್ ಕರೆಯಲ್ಲಿ ವೈವಾಹಿಕ ಕಲಹ ನಡೆದಿದ್ದು, ಈ ವೇಳೆ ಕೋಪಗೊಂಡ ಆರೋಪಿತೆ ನೂರುನ್ನಿಸಾ ಮನೆಯಲ್ಲಿದ್ದ ಆಕೆಯ ಸುಮಾರು ಮೂರುವರೆ ವರ್ಷದ ಮಗು ಹಾಗೂ ಗಂಡನ ತಂಗಿಯ ಮಗುವನ್ನು ಮನೆ ಸಮೀಪದ ಕುಡಿಯುವ ನೀರಿನ ಬಾವಿಗೆ ಎಸೆದಿರುವುದಾಗಿ ಎಸ್ಪಿ ಮಾಹಿತಿ ನೀಡಿದ್ದಾರೆ.

ಆದರೆ, ಬೆಳಿಗ್ಗೆ ಸ್ಥಳೀಯ ವಾಹಿನಿಗಳಲ್ಲಿ ಹಾಗೂ ಆರಂಭಿಕ ವರದಿಗಳಲ್ಲಿ ಮಕ್ಕಳು ಆಟವಾಡುತ್ತಾ ಆಕಸ್ಮಿಕವಾಗಿ ಬಾವಿಗೆ ಬಿದ್ದಿವೆ ಎಂದು ಪ್ರಸಾರವಾಗಿತ್ತು. ಪ್ರತ್ಯಕ್ಷದರ್ಶಿಗಳು ಹಾಗೂ ಆರಂಭಿಕ ಮಾಹಿತಿಯಂತೆ, ಪೆರ್ಣೆ ಮೈರಕಟ್ಟೆಯಲ್ಲಿ ಮಕ್ಕಳು ಬಾವಿಯ ಸಮೀಪವಿದ್ದ ವೇಳೆ ಆಲಿಯಾ (4) ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದು, ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ರಕ್ಷಿಸಿ ಮೇಲಕ್ಕೆ ಕರೆತಂದಿದ್ದರು. ಬಳಿಕ ಮತ್ತೊಂದು ಮಗು ಕೂಡ ಬಾವಿಗೆ ಬಿದ್ದಿರುವ ಬಗ್ಗೆ ಆಲಿಯಾ ಮಾಹಿತಿ ನೀಡಿದ್ದಾಳೆ ಎನ್ನಲಾಗಿದ್ದು, ಸ್ಥಳೀಯರು ಪರಿಶೀಲಿಸಿದಾಗ ರಬೀಹ್ (2) ಬಾವಿಯಲ್ಲಿ ಬಿದ್ದಿರುವುದು ಗಮನಕ್ಕೆ ಬಂದಿತ್ತು. ತಕ್ಷಣ ಮೇಲಕ್ಕೆತ್ತಿ ಆಸ್ಪತ್ರೆಗೆ ಕರೆದೊಯ್ದರೂ ರಬೀಹ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಪ್ರಸಾರವಾಗಿತ್ತು.

ನೈಜ ಸತ್ಯ ಬಯಲುಗೊಳಿಸಿದ ಪೊಲೀಸರು:
ಸ್ಥಳೀಯ ಮಾದ್ಯಮಗಳಲ್ಲಿ ಆರಂಭದಲ್ಲಿ ಆಕಸ್ಮಿಕ ಸಾವು ಎಂದು ಬಿತ್ತರವಾಗಿದ್ದರೂ, ಪೊಲೀಸ್ ತನಿಖೆಯಿಂದ ಅಸಲಿ ವಿಚಾರ ಹೊರಬಂದಿದೆ. ದಂಪತಿಗಳ ನಡುವಿನ ಫೋನ್ ಕರೆಯ ಕೌಟುಂಬಿಕ ಕಲಹದ ರಭಸದಲ್ಲಿ ಕೋಪಗೊಂಡ ಆರೋಪಿತೆ ನೂರುನ್ನಿಸಾ ತಾನೇ ಸ್ವತಃ ಮಕ್ಕಳನ್ನು ಬಾವಿಗೆ ಎಸೆದಿರುವುದು ಎಸ್ಪಿ ನೀಡಿರುವ ಅಧಿಕೃತ ಮಾಹಿತಿಯಿಂದ ತಿಳಿದುಬಂದಿದೆ. ಸ್ಥಳೀಯರು ಸ್ಥಳಕ್ಕೆ ಆಗಮಿಸಿ ಮಕ್ಕಳನ್ನು ಮೇಲಕ್ಕೆ ಎತ್ತಿದ1ರ ಪೈಕಿ ಗಂಡನ ತಂಗಿಯ ಮಗು (ರಬೀಹ್ – 3) ಮೃತಪಟ್ಟಿದ್ದು, ಆರೋಪಿತೆಯ ಮಗು (ಆಲಿಯಾ – 4) ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ.
ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 121/2026 ರಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿತೆ ನೂರುನ್ನಿಸಾಳನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
accident
ಕನ್ಯಾನ: ಮದ್ಯದ ನಶೆಯಲ್ಲಿ 18 ಚಕ್ರದ ಲಾರಿ ಚಾಲನೆ – ವಿದ್ಯುತ್ ಕಂಬಕ್ಕೆ ಡಿಕ್ಕಿ, ಅದೃಷ್ಟವಶಾತ್ ತಪ್ಪಿದ ಅನಾಹುತ
ಕನ್ಯಾನ: ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಂಕ್ರೀಟ್ ರಸ್ತೆಯಲ್ಲಿ ನಿಯಮ ಮೀರಿ ಸಂಚರಿಸುತ್ತಿದ್ದ 18 ಚಕ್ರಗಳ ಬೃಹತ್ ಬಾಕ್ಸೈಟ್ ಸಾಗಾಟದ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಪಘಾತ ಎಸಗಿದ ಘಟನೆ ನಡೆದಿದೆ.
ಕನ್ಯಾನದಿಂದ ಪಾದೆಕಲ್ಲು ಪೆರೋಡಿ ಸರವು ಪ್ರದೇಶಕ್ಕೆ ಬಾಕ್ಸೈಟ್ (ಮಣ್ಣು) ಸಾಗಿಸಲು ತೆರಳುತ್ತಿದ್ದ AP 39 VD 8043 ಸಂಖ್ಯೆಯ ಬೃಹತ್ ಲಾರಿಯನ್ನು ಚಿಕ್ಕಬಳ್ಳಾಪುರ ಬಾಗೇಪಲ್ಲಿ ಮೂಲದ ನಾಗರಾಜ್ ಎಂಬಾತ ಮದ್ಯದ ನಶೆಯಲ್ಲಿ ಚಲಾಯಿಸುತ್ತಿದ್ದ ಎನ್ನಲಾಗಿದೆ. ಚಾಲಕನ ನಿರ್ಲಕ್ಷ್ಯದಿಂದಾಗಿ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಕಂಬ ಛಿದ್ರಗೊಂಡು ತಂತಿಗಳ ಸಹಿತ ಲಾರಿಯ ಮೇಲೆ ಬಿದ್ದಿದೆ. ಆದಾಗ್ಯೂ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸ್ಥಳೀಯ ನಿವಾಸಿಗಳು ಮದ್ಯ ಸೇವಿಸಿ ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿದ ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಗ್ರಾಮಸ್ಥರ ತೀವ್ರ ಆಕ್ರೋಶ:
ಗ್ರಾಮಾಂತರ ಕಾಂಕ್ರೀಟ್ ರಸ್ತೆಯಲ್ಲಿ 12.5 ಟನ್ ಸಾಮರ್ಥ್ಯದ (6 ಚಕ್ರಗಳ) ವಾಹನಗಳಿಗಿಂತ ಹೆಚ್ಚಿನ ಭಾರದ ಸರಕು ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಹೀಗಿದ್ದರೂ ಸಾರಿಗೆ ನಿಯಮಗಳನ್ನು ಗಾಳಿಗೆ ತೂರಿ ಬೃಹತ್ 18 ಚಕ್ರದ ಲಾರಿಗಳು ಅಕ್ರಮವಾಗಿ ಸಂಚರಿಸುತ್ತಿದ್ದರೂ ಕನ್ಯಾನ ಗ್ರಾಮ ಪಂಚಾಯತ್ ಯಾವುದೇ ಕ್ರಮ ಕೈಗೊಳ್ಳದೆ ಮೌನ ವಹಿಸಿದೆ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳೀಯರು ನೀಡಿದ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ
-
accident2 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala8 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
