arrest
ವಿಟ್ಲ: ಅಕ್ರಮ ಪಡಿತರ ಅಕ್ಕಿ ದಾಸ್ತಾನು ಪತ್ತೆ – ವ್ಯಕ್ತಿಯ ಬಂಧನ, ಆಟೋರಿಕ್ಷಾ ವಶ
ವಿಟ್ಲ : ಕಸಬಾ ಗ್ರಾಮದ ಶಿವಾಜಿ ನಗರದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ದಾಸ್ತಾನು ಇಟ್ಟಿದ್ದ ಆರೋಪದ ಮೇಲೆ ಒಬ್ಬನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇ 9, 2026 ರಂದು ಬೆಳಿಗ್ಗೆ ಬಂಟ್ವಾಳ ತಾಲೂಕಿನ ಆಹಾರ ನಿರೀಕ್ಷಕ ಎ. ಪ್ರಶಾಂತ ಶೆಟ್ಟಿ ಅವರಿಗೆ ವಿಟ್ಲ ಕಸಬಾ ಗ್ರಾಮದ ಶಿವಾಜಿ ನಗರದಲ್ಲಿ ಆಟೋರಿಕ್ಷಾದಲ್ಲಿ ಪಡಿತರ ಅಕ್ಕಿ ಅಕ್ರಮವಾಗಿ ದಾಸ್ತಾನು ಇಡಲಾಗಿದೆ ಎಂಬ ಮಾಹಿತಿ ಆಧರಿಸಿ ಆಹಾರ ಇಲಾಖೆ ಸಿಬ್ಬಂದಿ ಹಾಗೂ ವಿಟ್ಲ ಪೊಲೀಸ್ ಠಾಣಾ ಉಪ ನಿರೀಕ್ಷಕ ರಾಮಕೃಷ್ಣ ಮತ್ತು ತಂಡ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.
ಮನೆಯೊಂದರ ಅಂಗಳದಲ್ಲಿ ನಿಲ್ಲಿಸಿದ್ದ ಕೆಎ-70-ಎ-2034 ನಂಬರಿನ ಆಟೋರಿಕ್ಷಾದಲ್ಲಿ 15 ಪ್ಲಾಸ್ಟಿಕ್ ಚೀಲಗಳಲ್ಲಿ ಒಟ್ಟು 679.38 ಕೆಜಿ ಪಡಿತರ ಅಕ್ಕಿ ತುಂಬಿಸಿರುವುದು ಕಂಡುಬಂದಿದೆ. ಅಕ್ಕಿಯ ಅಂದಾಜು ಮೌಲ್ಯ ₹23,098 ಎಂದು ತಿಳಿದುಬಂದಿದೆ.
ಸ್ಥಳದಲ್ಲಿದ್ದ ವಿಟ್ಲ ಕಸಬಾ ಗ್ರಾಮದ ನಿವಾಸಿ ಅಲಿ ಅಕ್ಬರ್ (40)ಎಂಬಾತನನ್ನು ವಿಚಾರಿಸಿದಾಗ, ತಾನೇ ಅಕ್ಕಿ ಮೂಟೆಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.
ಪತ್ತೆಯಾದ ಅಕ್ಕಿ ಹಾಗೂ ಆಟೋರಿಕ್ಷಾವನ್ನು ಮುಂದಿನ ಕಾನೂನು ಕ್ರಮಕ್ಕಾಗಿ ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 103/2026 ರಂತೆ ಅವಶ್ಯಕ ವಸ್ತುಗಳ ಕಾಯ್ದೆ 1955ರ ಕಲಂ 3, 7ಮತ್ತು ಸಾರ್ವಜನಿಕ ವಿತರಣಾ ಪದ್ಧತಿ ಸಾರ್ವಜನಿಕ ನಿಯಂತ್ರಣ ಆದೇಶ 2016ರ ಕಲಂ 18 ರ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.



arrest
6 ವರ್ಷಗಳಿಂದ ವಿದೇಶದಲ್ಲಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಅರೆಸ್ಟ್: ಬಂಟ್ವಾಳ ಪೊಲೀಸರ ಕಾರ್ಯಾಚರಣೆ
ಮಂಗಳೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ.
ಮಂಗಳೂರು ಬಜಾಲ್ನಂತೂರು ನಿವಾಸಿ ಮಹಮ್ಮದ್ ನೌಫಲ್ @ ಸಫಾರಿ ನೌಫಲ್ (34) ದಸ್ತಗಿರಿಯಾದ ಆರೋಪಿ.
ಪ್ರಕರಣದ ವಿವರ: ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ (ಅ.ಕ್ರ: 24/2020, ಐಪಿಸಿ ಕಲಂ: 143, 147, 148, 504, 323, 324, 506, 427 r/w 149 ಮತ್ತು ಕಾವಲು ಕಾಯ್ದೆ) ಸಂಬಂಧಿಸಿದಂತೆ ಈಾತನು ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ವಿದೇಶಕ್ಕೆ ಪರಾರಿಯಾಗಿದ್ದ. ಈತನ ವಿರುದ್ಧ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿತ್ತು.
ಸೆಪ್ಟೆಂಬರ್ 15, 2026ರಂದು ವಿದೇಶದಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗದ ಸಹಾಯದಿಂದ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೆಪ್ಟೆಂಬರ್ 29, 2026ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
arrest
ಬೆಳ್ತಂಗಡಿ: ದಲಿತ ಕುಟುಂಬದ ಜಮೀನಿಗೆ ಅಕ್ರಮ ಪ್ರವೇಶಿಸಿ ಅಶ್ಲೀಲ ಪ್ರದರ್ಶನ – ಆರೋಪಿ ಬಂಧನ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದಲ್ಲಿ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಸೇರಿದ ಜಮೀನಿಗೆ ಅಕ್ರಮ ಪ್ರವೇಶಿಸಿ ಕೃತ್ಯವೆಸಗಿ, ದಲಿತ ಕುಟುಂಬದ ಮಹಿಳೆಯರ ಮುಂದೆ ಪಂಚೆ ಎತ್ತಿ ಮರ್ಮಾಂಗ ಪ್ರದರ್ಶಿಸಿ ವಿಕೃತಿ ಮೆರೆದ ವಿಲಕ್ಷಣ ಪ್ರಕರಣ ನಡೆದಿದ್ದು, ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ ಪಟ್ಟಾಡಿ ಮನೆಯ ಅಬ್ದುಲ್ ಹನೀಫ್ ಹುಸೇನ್ (50) ಎಂದು ಗುರುತಿಸಲಾಗಿದೆ.
ಘಟನೆ ವಿವರ:
ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಪಡ್ಯಾರಬೆಟ್ಟು ಎಂಬಲ್ಲಿ ಸುಮಾರು 40 ವರ್ಷಗಳಿಗಿಂತಲೂ ಹೆಚ್ಚು ಕಾಲದಿಂದ ವಾಸ್ತವ್ಯವಿದ್ದು ಕೃಷಿ ಚಟುವಟಿಕೆ ನಡೆಸಿಕೊಂಡು ಬರುತ್ತಿದ್ದ ಪರಿಶಿಷ್ಟ ಜಾತಿಯ ಕುಟುಂಬದ ಸ್ವಾಧೀನದ ಜಾಗದಲ್ಲಿ ಸಿಮೆಂಟ್ ಕಂಬ ಹಾಗೂ ತಂತಿ ಬೇಲಿ ಹಾಕಿ ಕುಟುಂಬ ಕೃಷಿ ಕಾರ್ಯದಲ್ಲಿ ತೊಡಗಿತ್ತು.
ಸೆ.7 ರಂದು ಸ್ಥಳೀಯ ನಿವಾಸಿ ಹನೀಫ್ ಎಂಬಾತ ಏಕಾಏಕಿ ಆ ಜಾಗಕ್ಕೆ ಅತಿಕ್ರಮ ಪ್ರವೇಶಿಸಿ, ಜಾತಿ ನಿಂದನೆ ಮಾಡಿ ಅವಾಚ್ಯ ಮತ್ತು ಅಶ್ಲೀಲ ಪದಗಳಿಂದ ನಿಂದಿಸಿದ್ದಾನೆ. ಬಡ ಕುಟುಂಬ ಹಾಕಿದ್ದ ಸಿಮೆಂಟ್ ಬೇಲಿ ಕಂಬ ಹಾಗೂ ತಂತಿ ಬೇಲಿಯನ್ನು ಕಿತ್ತೆಸೆದು, ಅಡಿಕೆ ಹಾಗೂ ಬಾಳೆ ಗಿಡಗಳನ್ನು ಮುರಿದು ದಾಂಧಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.
ಈ ವೇಳೆ ಕೆಲಸದಲ್ಲಿ ತೊಡಗಿದ್ದ ದಲಿತ ಕುಟುಂಬದ ಮಹಿಳೆಯರು ದಾಂಧಲೆಯ ಘಟನೆಯನ್ನು ತಮ್ಮ ಮೊಬೈಲ್ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ ಆರೋಪಿ ಹನೀಫ್ ಮಹಿಳೆಯರ ಎದುರು ಬಂದು ತಾನು ಉಟ್ಟಿದ್ದ ಪಂಚೆಯನ್ನು ಎತ್ತಿ ಒಳ ಉಡುಪನ್ನು ಜಾರಿಸಿ ತನ್ನ ಗುಪ್ತಾಂಗವನ್ನು ತೋರಿಸುತ್ತಾ ಸಾರ್ವಜನಿಕವಾಗಿ ವಿಕೃತಿಯನ್ನು ಮೆರೆದಿದ್ದಾನೆ. “ನಿಮ್ಮನ್ನು ಇದರಿಂದಲೇ ಅತ್ಯಾಚಾರ ಮಾಡುತ್ತೇನೆ, ಈ ಜಾಗ ಬಿಟ್ಟು ಹೋಗದಿದ್ದರೆ ನಿಮ್ಮನ್ನು ಕೊಲ್ಲದೆ ಬಿಡುವುದಿಲ್ಲ” ಎಂದು ಬೆದರಿಕೆ ಹಾಕಿ ಮಹಿಳೆಯರನ್ನು ಬೆನ್ನಟ್ಟಿಕೊಂಡು ಬಂದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ದೂರು ಮತ್ತು ಬಂಧನ:
ಈತನ ವಿಕೃತಿಯಿಂದ ಭಯಗೊಂಡ ಬಡ ಕುಟುಂಬವು ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ವೇಣೂರು ಪೊಲೀಸ್ ಠಾಣೆಗೆ ತೆರಳಿ ವಿಡಿಯೋ ಚಿತ್ರೀಕರಣದ ದೃಶ್ಯಾವಳಿ ಸಾಕ್ಷ್ಯಾಧಾರಗಳೊಂದಿಗೆ ಸೆ.8 ರಂದು ದೂರು ನೀಡಿದೆ.
ದೂರಿನ ಅನ್ವಯ ವೇಣೂರು ಠಾಣೆಯಲ್ಲಿ ದಲಿತ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಹಾಗೂ ಬಿಎನ್ಎಸ್ 329(3), 352, 351(2), 75(1), 324(4) ರಂತೆ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡ ವೇಣೂರು ಪೊಲೀಸರು ಆರೋಪಿಯನ್ನು ಸಂಜೆ ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
40 ವರ್ಷಗಳಿಂದ ಕೃಷಿ ಮಾಡಿಕೊಂಡು ಬಂದಿದ್ದ ಬಡ ಪರಿಶಿಷ್ಟ ಕುಟುಂಬದ ಮೇಲೆ ದೌರ್ಜನ್ಯ ನಡೆಸಿ, ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದ ಆರೋಪಿಗೆ ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರ ಸಂಘಟಿತ ಹೋರಾಟದ ಫಲವಾಗಿ ಕಾನೂನಿನ ತಕ್ಕ ಪಾಠ ಕಲಿಸಿದಂತಾಗಿದ್ದು, ಈ ಹೋರಾಟಕ್ಕೆ ರಾಜ್ಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ.
arrest
ಕರಿಕೆ: ಕೇರಳ ಮೀಸಲು ಅರಣ್ಯದಲ್ಲಿ ಕಡವೆ ಬೇಟೆಯಾಡಿ ಮಾಂಸ ಮಾರಾಟ ಮಾಡುತ್ತಿದ್ದ ಜಾಲ ಪತ್ತೆ; ಓರ್ವನ ಬಂಧನ, 40 ಕೆಜಿ ಮಾಂಸ ವಶ
ಕರಿಕೆ ಸಮೀಪದ ಕೇರಳ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಡವೆ ಬೇಟೆಯಾಡಿ, ಮಾಂಸ ಮಾರಾಟ ಮಾಡುತ್ತಿದ್ದ ಜಾಲವನ್ನು ಕೇರಳ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿ ಭೇದಿಸಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಕರಿಕೆ ತೋಟಮ್ ನಿವಾಸಿ ಸಿದ್ದು (35) ಬಂಧಿತ ಆರೋಪಿ. ಈ ಕೃತ್ಯದಲ್ಲಿ ಭಾಗಿಯಾಗಿದ್ದ ಇತರ ಇಬ್ಬರು ಆರೋಪಿಗಳಾದ ಜಿ.ಎಸ್. ವಿನೀಶ್ ಮತ್ತು ವಿಮಲ್ ರಾಜ್ ಪರಾರಿಯಾಗಿದ್ದಾರೆ.
ಕರಿಕೆ ಸಮೀಪದ ತೋಟಮ್ ಬಳಿಯ ಕೇರಳ ಮೀಸಲು ಅರಣ್ಯದ ಗೇರು ತೋಟಿನ ಕಾಟೂರ್ ಕೊಪ್ಪು ಎಂಬಲ್ಲಿ ಈ ಅಕ್ರಮ ಚಟುವಟಿಕೆ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಆರೋಪಿಯಿಂದ ಒಂದು ನಾಡ ಬಂದೂಕು, ಸುಮಾರು 40 ಕೆಜಿ ಕಡವೆ ಮಾಂಸ ಹಾಗೂ ಬೇಟೆಗೆ ಬಳಸಿದ್ದ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾಸರಗೋಡು ವಲಯದ ಅರಣ್ಯ ಅಧಿಕಾರಿಗಳಾದ ರಾಜು ಎಂ.ಪಿ., ಪ್ರಕಾಶ್ ವಿ.ಪಿ. ಹಾಗೂ ಪ್ರವೀಣ್ ಕುಮಾರ್ ಅವರನ್ನೊಳಗೊಂಡ ತಂಡ ಈ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿ ಭಾಗವಹಿಸಿತ್ತು
-
accident2 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala8 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
