Connect with us

drugs

ಮೇರಿಹಿಲ್ ಹ್ಯಾಲಿಪ್ಯಾಡ್ ಬಳಿ ಗಾಂಜಾ ಮಾರಾಟಕ್ಕೆ ಯತ್ನ: ಕುಖ್ಯಾತ ಆರೋಪಿ ಇರ್ಷಾದ್ ಕಾವೂರು ಪೊಲೀಸರ ವಶಕ್ಕೆ!

Published

on

ಮಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಕಠಿಣ ಕಾನೂನು ಕ್ರಮ ಮುಂದುವರಿಸಿರುವ ಕಾವೂರು ಪೊಲೀಸರು, ಗಾಂಜಾ ಸಾಗಾಟ ಮತ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಕುಖ್ಯಾತ ಆರೋಪಿಯೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾ ಹಾಗೂ ಇತರೆ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಯ ವಿವರ ಮತ್ತು ಕಾರ್ಯಾಚರಣೆ

ಬಂಧಿತ ಆರೋಪಿಯನ್ನು ಉಳ್ಳಾಲ ಮುಕ್ಕಚೇರಿ ಹಿಲರಿಯ ನಗರ ನಿವಾಸಿ ಇರ್ಷಾದ್ ಅಲಿಯಾಸ್ ಇರ್ಷಾ (26 ವರ್ಷ) ಎಂದು ಗುರುತಿಸಲಾಗಿದೆ.

ಮೇ 13ರಂದು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೇರಿಹಿಲ್ ಹ್ಯಾಲಿಪ್ಯಾಡ್ ಮೈದಾನದ ಬಳಿ, ಮೇರಿಹಿಲ್ ಕಡೆಗೆ ಹೋಗುವ ಸಾರ್ವಜನಿಕ ರಸ್ತೆಯ ಎಡಭಾಗದಲ್ಲಿ ಆರೋಪಿಯು ಗಾಂಜಾ ಮಾರಾಟ ಮಾಡಲು ಸಾಗಿಸುತ್ತಿದ್ದನೆನ್ನಲಾದ ಖಚಿತ ಮಾಹಿತಿ ಆಧರಿಸಿ ಪಣಂಬೂರು ಎಸಿಪಿ ತಂಡ ಹಾಗೂ ಕಾವೂರು ಠಾಣೆಯ ಜಂಟಿ ಪೊಲೀಸ್ ತಂಡ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದೆ.

ವಶಪಡಿಸಿಕೊಂಡ ಸೊತ್ತುಗಳು

ಬಂಧಿತನಿಂದ ಪೊಲೀಸರು ಈ ಕೆಳಗಿನ ಸೊತ್ತುಗಳನ್ನು ಜಪ್ತಿ ಮಾಡಿದ್ದಾರೆ:

ಗಾಂಜಾ: ಸುಮಾರು 3 ಕೆಜಿ 138 ಗ್ರಾಂ (ಅಂದಾಜು ಮೌಲ್ಯ ₹1,56,000)

ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನ್ ಮತ್ತು ಸ್ಕೂಟರ್‌ ಸೇರಿದಂತೆ ಇತರೆ ಪರಿಕರಗಳು.

ಹಲವು ಪ್ರಕರಣಗಳಲ್ಲಿ ಭಾಗಿ

ಬಂಧಿತ ಆರೋಪಿ ಇರ್ಷಾದ್ ಹಳೆಯ ಅಪರಾಧ ಹಿನ್ನೆಲೆ ಹೊಂದಿದ್ದು, ಈ ಹಿಂದೆ ಆತನ ವಿರುದ್ಧ ಗಂಭೀರ ಪ್ರಕರಣಗಳು ದಾಖಲಾಗಿವೆ:

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ (ಕಲಂ 307) ಮತ್ತು ಆರ್ಮ್ಸ್ ಆಕ್ಟ್ (ಆಯುಧ ಕಾಯ್ದೆ) ಅಡಿಯಲ್ಲಿ ಪ್ರಕರಣ (ಅ.ಕ್ರ 106/2019).

ಮಂಗಳೂರು ಸಿ.ಎಸ್.ಪಿ (ಕರಾವಳಿ ಭದ್ರತಾ ಪೊಲೀಸ್) ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಮಾದಕ ವಸ್ತು ಮಾರಾಟ ಪ್ರಕರಣ (ಕ್ರೈಮ್ ನಂ: 06/2024).

    ಪ್ರಸ್ತುತ ಕಾವೂರು ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಅ.ಕ್ರ: 74/2026, ಕಲಂ: 8(c), 20(b)(ii)(B) ಎನ್‌ಡಿಪಿಎಸ್ ಕಾಯ್ದೆಯಡಿ ಹೊಸ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.




    ads (2)
    ads (3)
    ads (4)
    ads (5)
    ads (6)
    ads (1)
    ads (8)
    ads (7)
    ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
    Advertisement

    drugs

    ಕಾಲೇಜು ವಿದ್ಯಾರ್ಥಿಗಳಲ್ಲಿ ಡ್ರಗ್ಸ್ ವ್ಯಸನ ತಡೆಗೆ ಪೊಲೀಸ್ ಇಲಾಖೆಯ ಯಶಸ್ವಿ ಕಾರ್ಯಾಚರಣೆ: ಶೇ. 80ರಷ್ಟು ವಿದ್ಯಾರ್ಥಿಗಳು ವ್ಯಸನ ಮುಕ್ತ!

    Published

    on

    ಮಂಗಳೂರು: ನಗರದ ವಿವಿಧ ಕಾಲೇಜುಗಳಲ್ಲಿ ಡ್ರಗ್ಸ್ ಬಳಕೆ ವಿರುದ್ಧ ಪೊಲೀಸ್ ಇಲಾಖೆ ಮತ್ತು ಕಾಲೇಜು ಆಡಳಿತ ಮಂಡಳಿ ಜಂಟಿಯಾಗಿ ಹಮ್ಮಿಕೊಂಡಿರುವ ವಿಶೇಷ ಕಾರ್ಯಾಚರಣೆ ಸಕಾರಾತ್ಮಕ ಫಲಿತಾಂಶ ನೀಡುತ್ತಿದ್ದು, ಶೇ. 80ರಷ್ಟು ವಿದ್ಯಾರ್ಥಿಗಳು ಡ್ರಗ್ಸ್ ಚಟದಿಂದ ಸಂಪೂರ್ಣವಾಗಿ ಹೊರಬಂದಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

    ಈ ವರ್ಷದ ಜನವರಿಯಿಂದ ಇಲ್ಲಿಯವರೆಗೆ ಮಂಗಳೂರು ನಗರದ 150 ಕಾಲೇಜುಗಳಲ್ಲಿ ಒಟ್ಟು 8,500ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಡ್ರಗ್ಸ್ ಪರೀಕ್ಷೆ (ಡ್ರಗ್ ಟೆಸ್ಟ್) ನಡೆಸಲಾಗಿದೆ. ಈ ಪರೀಕ್ಷೆಯಲ್ಲಿ 98 ಜನ ವಿದ್ಯಾರ್ಥಿಗಳು ಡ್ರಗ್ಸ್ ಸೇವಿಸಿರುವುದು ಪತ್ತೆಯಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಅವರೆಲ್ಲರಿಗೂ ಕೌನ್ಸೆಲಿಂಗ್ ನೀಡಲಾಗಿತ್ತು.

    ನಂತರ, ಕೌನ್ಸೆಲಿಂಗ್ ಪಡೆದಿದ್ದ ವಿದ್ಯಾರ್ಥಿಗಳ ಸ್ಥಿತಿಗತಿ ಹಾಗೂ ಫಲಿತಾಂಶವನ್ನು ಪರಿಶೀಲಿಸಲು ಇತ್ತೀಚೆಗೆ ವಿಶೇಷ ಡ್ರಗ್ ಟೆಸ್ಟ್ ಅಭಿಯಾನ ನಡೆಸಲಾಗಿದ್ದು, ಈ ವೇಳೆ ಮೊದಲ ಹಂತದಲ್ಲಿ ಪಾಸಿಟಿವ್ ಬಂದಿದ್ದ 50 ವಿದ್ಯಾರ್ಥಿಗಳನ್ನು ಮರುಪರೀಕ್ಷೆಗೆ ಒಳಪಡಿಸಲಾಯಿತು. ಅದರಲ್ಲಿ ಶೇ. 80ರಷ್ಟು ಅಂದರೆ 38 ಜನ ವಿದ್ಯಾರ್ಥಿಗಳು ಸಂಪೂರ್ಣವಾಗಿ ನೆಗೆಟಿವ್ ಬಂದಿದ್ದು, ತಾವು ಇನ್ನು ಮುಂದೆ ಡ್ರಗ್ಸ್ ಸೇವಿಸುವುದಿಲ್ಲ ಎಂದು ತಿಳಿಸಿ ವ್ಯಸನ ಮುಕ್ತರಾಗಿರುವುದು ದೃಢಪಟ್ಟಿದೆ.

    ಉಳಿದ 12 ವಿದ್ಯಾರ್ಥಿಗಳ ಮೇಲೂ ಪೋಷಕರು ಮತ್ತು ಕಾಲೇಜು ಆಡಳಿತ ಮಂಡಳಿಯು ನಿರಂತರ ನಿಗಾ ವಹಿಸಿ, ಹೆಚ್ಚಿನ ಕೌನ್ಸೆಲಿಂಗ್ ಹಾಗೂ ಮಾರ್ಗದರ್ಶನ ನೀಡುವಂತೆ ಸೂಚಿಸಲಾಗಿದೆ. ಕಾಲೇಜು ಆಡಳಿತ ಮಂಡಳಿ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಹಕಾರದಿಂದ ಶೇ. 80ರಷ್ಟು ಡ್ರಗ್ಸ್ ವ್ಯಸನಿಗಳನ್ನು ವ್ಯಸನ ಮುಕ್ತರನ್ನಾಗಿ ಮಾಡಲು ಸಾಧ್ಯವಾಗಿದ್ದು, ಮುಂದೆಯೂ ಎಲ್ಲರ ಸಹಕಾರವನ್ನು ಪೊಲೀಸ್ ಇಲಾಖೆ ಕೋರುತ್ತದೆ

    Continue Reading

    arrest

    ಭಾರಿ ಪ್ರಮಾಣದ ಮಾದಕವಸ್ತು ಸಾಗಾಟ ಜಾಲ ಪತ್ತೆ; ₹1.05 ಕೋಟಿಗೂ ಅಧಿಕ ಮೌಲ್ಯದ ಸೊತ್ತು ವಶ, ಓರ್ವನ ಬಂಧನ

    Published

    on

    ​ಬಂಟ್ವಾಳ: ಹಾಸನ ಕಡೆಯಿಂದ ಮಂಗಳೂರು ಕಡೆಗೆ ಅಕ್ರಮವಾಗಿ ಮಾದಕವಸ್ತು (ಡ್ರಗ್ಸ್) ಸಾಗಿಸುತ್ತಿದ್ದ ಬೃಹತ್ ಜಾಲವನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇದಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಸುಮಾರು ₹1,05,59,450/- (ಒಂದು ಕೋಟಿಗೂ ಅಧಿಕ) ಅಂದಾಜು ಮೌಲ್ಯದ ಮಾದಕವಸ್ತು ಹಾಗೂ ಇತರೆ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
    ​ಬಂಧಿತ ಆರೋಪಿಯನ್ನು ಬೆಂಗಳೂರಿನ ಕೆಂಗೇರಿ ನಿವಾಸಿ ಮಹಮ್ಮದ್ ಅಮೀರ್ ಜರ್ತಾಬ್ (35) ಎಂದು ಗುರುತಿಸಲಾಗಿದೆ.

    ​ಕಾರ್ಯಾಚರಣೆಯ ವಿವರ:
    ​ದಿನಾಂಕ 16.08.2026 ರಂದು ತಡರಾತ್ರಿ ಹಾಸನ ಕಡೆಯಿಂದ ಮಂಗಳೂರು ಕಡೆಗೆ ಕಾರಿನಲ್ಲಿ ಮಾದಕವಸ್ತು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಮಂಜುನಾಥ ಟಿ. ಅವರಿಗೆ ಲಭಿಸಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಸಿಬ್ಬಂದಿಗಳು ಬಂಟ್ವಾಳ ತಾಲೂಕು ಕಡೇಶಿವಾಲಯ ಗ್ರಾಮದ ಅಮೈ ಎಂಬಲ್ಲಿ ಬರುತ್ತಿದ್ದ KA-01-MA-1284 ನೋಂದಣಿ ಸಂಖ್ಯೆಯ ಕಾರನ್ನು ತಡೆದು ಪರಿಶೀಲನೆ ನಡೆಸಿದ್ದಾರೆ.
    ​ವಾಹನ ಚಾಲಕ ಮಹಮ್ಮದ್ ಅಮೀರ್ ಜರ್ತಾಬ್‌ನನ್ನು ತೀವ್ರ ವಿಚಾರಣೆಗೊಳಪಡಿಸಿದಾಗ ಆತ ಕಾರಿನಲ್ಲಿ ಮಾದಕವಸ್ತು ಸಾಗಿಸುತ್ತಿರುವುದಾಗಿ ಒಪ್ಪಿಕೊಂಡಿದ್ದಾನೆ.

    ವಶಪಡಿಸಿಕೊಂಡ ಸೊತ್ತುಗಳ ವಿವರ:
    ​ಕಾರನ್ನು ಕೂಲಂಕಷವಾಗಿ ತಪಾಸಣೆ ನಡೆಸಿದಾಗ ಕೆಳಗಿನ ಸೊತ್ತುಗಳು ಪತ್ತೆಯಾಗಿವೆ:
    ​MDMA (ಮಾದಕವಸ್ತು): 538.63 ಗ್ರಾಂ (ಅಂದಾಜು ಮೌಲ್ಯ: ₹53,86,300/-)
    ​ಕೊಕೈನ್: 99.12 ಗ್ರಾಂ (ಅಂದಾಜು ಮೌಲ್ಯ: ₹49,56,000/-)
    ​ಇತರ ಸಾಮಗ್ರಿಗಳು: ಮಾದಕವಸ್ತು ಪ್ಯಾಕ್ ಮಾಡಲು ಬಳಸುತ್ತಿದ್ದ ಖಾಲಿ ಪ್ಲಾಸ್ಟಿಕ್ ಡಬ್ಬಿಗಳು, ಡಿಜಿಟಲ್ ತೂಕದ ಯಂತ್ರ, ಸಾಗಾಟಕ್ಕೆ ಬಳಸಿದ ಕಾರು ಹಾಗೂ ಇತರೆ ಸಾಮಗ್ರಿಗಳು.
    ​ಒಟ್ಟು ವಶಪಡಿಸಿಕೊಂಡ ಸೊತ್ತುಗಳ ಅಂದಾಜು ಮೌಲ್ಯ: ₹1,05,59,450/-

    ಬಂಟ್ವಾಳ ಉಪವಿಭಾಗದ ಎಎಸ್ಪಿ ಐಪಿಎಸ್ ಯಶ್ ಕುಮಾರ್ ಶರ್ಮ ಅವರ ಮಾರ್ಗದರ್ಶನದಲ್ಲಿ, ಬಂಟ್ವಾಳ ಪೊಲೀಸ್ ಇನ್‌ಸ್ಪೆಕ್ಟರ್ ಅನಂತ ಪದ್ಮನಾಭ ಅವರ ನೇತೃತ್ವದಲ್ಲಿ, ಗ್ರಾಮಾಂತರ ಠಾಣೆಯ ಎಸ್‌ಐ ಮಂಜುನಾಥ ಟಿ. ಹಾಗೂ ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಲೋಕೇಶ್ ,ಅಶೋಕ್, ರಾಘವೇಂದ್ರ, ಪ್ರಶಾಂತ್, ಬಸವರಾಜ್, ನಜೀರ್, ಶ್ರೀಧರ್, ಮಾರುತಿ, ಕುಮಾರ್ ಹಾಗೂ ವಿವೇಕ್ ಭಾಗವಹಿಸಿದ್ದರು.
    ​ಪ್ರಕರಣ ದಾಖಲು:
    ​ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 113/2026, ಕಲಂ: 8(C) r/w 22(C), 21(ಬಿ) NDPS ACT 1985 ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಮುಂದುವರಿಸಿದ್ದಾರೆ.

    Continue Reading

    arrest

    ಬಂಟ್ವಾಳ ಗ್ರಾಮಾಂತರ ಪೊಲೀಸರ ಭರ್ಜರಿ ಕಾರ್ಯಾಚರಣೆ: ಲಕ್ಷಾಂತರ ಮೌಲ್ಯದ ಡ್ರಗ್ಸ್‌ನೊಂದಿಗೆ ಮೂವರ ಬಂಧನ!

    Published

    on

    ಬಂಟ್ವಾಳ: ನಿಷೇಧಿತ ಮಾದಕ ದ್ರವ್ಯ ಮಾರಾಟ ಹಾಗೂ ಸಾಗಾಟದ ವಿರುದ್ಧ ಸಮರ ಸಾರಿರುವ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ, ಭರ್ಜರಿ ಕಾರ್ಯಾಚರಣೆ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಎಂಡಿಎಂಎ (MDMA) ಮತ್ತು ಗಾಂಜಾವನ್ನು ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

    ಆಗಸ್ಟ್ 12, 2026 ರಂದು ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಆಲಂಪುರಿ ಬಳಿಯ ‘ಸಾಲು ಮರದ ತಿಮ್ಮಕ್ಕ ರಾಷ್ಟ್ರೀಯ ಉದ್ಯಾನವನ’ದ ರಸ್ತೆ ಪಕ್ಕದಲ್ಲಿ ದಾಳಿ ನಡೆಸಿದ ಪೊಲೀಸರು ಈ ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ.

    ವಶಪಡಿಸಿಕೊಂಡ ಸೊತ್ತುಗಳ ವಿವರ

    • ಎಂ.ಡಿ.ಎಂ.ಎ (MDMA): 22.57 ಗ್ರಾಂ (ಮೌಲ್ಯ ಸುಮಾರು ₹2,25,000)
    • ಗಾಂಜಾ: 30.34 ಗ್ರಾಂ
    • ವಾಹನ: ಡ್ರಗ್ಸ್ ಸಾಗಾಟಕ್ಕೆ ಬಳಸಿದ್ದ ಸ್ವಿಫ್ಟ್ ಕಾರು (ಮೌಲ್ಯ ಸುಮಾರು ₹2,00,000)
    • ಮೊಬೈಲ್ : 5 ಫೋನ್‌ಗಳು

    ಒಟ್ಟು ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ: ಸುಮಾರು ₹4,90,000/-

    ಬಂಧಿತ ಆರೋಪಿಗಳ ವಿವರ

    1. ನಾಶೀರ್ ಹುಸೇನ್ (37), ತಂದೆ: ದಿ. ಅಬ್ದುಲ್ ರಹಿಮಾನ್, ವಾಸ: ವಲಚ್ಚಿಲ್, ಅಡ್ಯಾರು ಗ್ರಾಮ, ಮಂಗಳೂರು ತಾಲೂಕು.
    2. ಮಹಮ್ಮದ್ ಜುನೈದ್ (38), ತಂದೆ: ಎಸ್. ಇಬ್ರಾಹಿಂ, ವಾಸ: ಕಲ್ಲಡ್ಕ ಪ್ರಾಥಮಿಕ ಶಾಲೆಯ ಬಳಿ, ಗೋಳ್ತಮಜಲು ಗ್ರಾಮ, ಬಂಟ್ವಾಳ ತಾಲೂಕು.
    3. ಮೊಹಮ್ಮದ್ ಅಫ್ರೀದಿ (24), ತಂದೆ: ಕೆ. ಸಿರಾಜ್, ವಾಸ: ವಿಶ್ವಾಸ್ ಲೇಔಟ್, ಕಂಕನಾಡಿ, ಮಂಗಳೂರು ತಾಲೂಕು.

    ಕಾರ್ಯಾಚರಣೆ ನಡೆಸಿದ ತಂಡ

    ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಅರುಣ್ ಕೆ. ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅನಿಲ್ ಕುಮಾರ್ ಭೂಮರಡ್ಡಿ ಅವರ ಮಾರ್ಗದರ್ಶನದಲ್ಲಿ, ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ (ASP) ಯಶ್ ಕುಮಾರ್ ಶರ್ಮಾ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

    ತಂಡದಲ್ಲಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿ:

    • ಇನ್ಸ್‌ಪೆಕ್ಟರ್: ಅನಂತ ಪದ್ಮನಾಭ ಕೆ.ವಿ.
    • ಪಿ.ಎಸ್.ಐ: ರನ್ನ ಗೌಡ ಎಸ್. ಪಾಟೀಲ್
    • ಪ್ರೊ. ಪಿ.ಎಸ್.ಐ: ಶಿವರಾಮ್, ಫಕೀರಪ್ಪ
    • ಸಿಬ್ಬಂದಿಗಳು: ಉದಯ ರೈ, ರಾಧಾಕೃಷ್ಣ ಕೆ, ಪ್ರವೀಣ್ ರೈ, ಪ್ರಶಾಂತ್, ಲೋಕೇಶ್, ವಿವೇಕ್ ರೈ, ಕುಮಾರ್, ಬಸವರಾಜ್, ಶ್ರೀಧರ್ ಮತ್ತು ಧನ್ಯಶ್ರೀ.
    • ತಾಂತ್ರಿಕ ವಿಭಾಗ: ಕಾರ್ಯಾಚರಣೆಗೆ ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ್ ಹಾಗೂ ಸಂಪತ್ ಸಹಕರಿಸಿದ್ದಾರೆ.

    ಯಶಸ್ವಿ ಕಾರ್ಯಾಚರಣೆ ನಡೆಸಿದ ಇಡೀ ತಂಡದ ಕ್ಷಿಪ್ರ ಕ್ರಮವನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಶಂಸಿಸಿದ್ದಾರೆ.

    Continue Reading

    Trending

    Copyright © 2025 Deevatige