Connect with us

Entertainment

ಮೇ 24: ವಿಟ್ಲ ಒಕ್ಕೆತ್ತೂರಿನಲ್ಲಿ ಜಾವಗಲ್ ಬಾಬಾ ಅನುಸ್ಮರಣಾ ಮಜ್ಲಿಸ್

Published

on

ವಿಟ್ಲ: ಒಕ್ಕೆತ್ತೂರಿನ ನೂರುಲ್ ಹುದಾ ಎಜುಕೇಶನಲ್ ಕಾಂಪ್ಲೆಕ್ಸ್‌ನಲ್ಲಿ ಮೇ 24ರ ಭಾನುವಾರದಂದು “ಜಾವಗಲ್ ಬಾಬಾ ಅನುಸ್ಮರಣಾ ಮಜ್ಲಿಸ್” ಕಾರ್ಯಕ್ರಮವು ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ.

ದಿನಪೂರ್ತಿ ವೈವಿಧ್ಯಮಯ ಧಾರ್ಮಿಕ ಕಾರ್ಯಕ್ರಮಗಳು: ಅಂದು ಬೆಳಿಗ್ಗೆ 6:00 ಗಂಟೆಯಿಂದ ರಾತ್ರಿ 10:00 ಗಂಟೆಯವರೆಗೆ ಸರಣಿ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಪ್ರಾರ್ಥನಾ ಮಜ್ಲಿಸ್‌ಗಳು ನಡೆಯಲಿವೆ. ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಬೆಳಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿಯ ಭೋಜನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಅಲ್ಲದೆ, ಬೆಳಿಗ್ಗೆಯಿಂದ ರಾತ್ರಿಯವರೆಗೆ ನಿರಂತರವಾಗಿ ಜ್ಯೂಸ್ (ಪಾನೀಯ) ವ್ಯವಸ್ಥೆಯೂ ಇರಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ನೇತೃತ್ವ ಮತ್ತು ಪ್ರಮುಖ ಭಾಷಣಕಾರರು:

ದುವಾ ನೇತೃತ್ವ: ಅಸ್ಸಯ್ಯದ್ ಶಿಹಾಬುದ್ದೀನ್ ತಂಙಳ್ ಮದಕ ಅವರು ಪ್ರಾರ್ಥನಾ ನೇತೃತ್ವ ವಹಿಸಲಿದ್ದಾರೆ.

ಮುಖ್ಯ ಪ್ರಭಾಷಣ: ಅಲ್ ಮದೀನ ಮಂಜನಾಡಿಯ ಮ್ಯಾನೇಜಿಂಗ್ ಡೈರೆಕ್ಟರ್ ಆಗಿರುವ ಅಬ್ದುಲ್ ಖಾದಿರ್ ಸಖಾಫಿ ಮತ್ತು ನೂರುಲ್ ಹುದಾ ಎಜುಕೇಶನಲ್ ಕಾಂಪ್ಲೆಕ್ಸ್‌ನ ಡೈರೆಕ್ಟರ್ ಆಗಿರುವ ಅಬ್ದುಲ್ ರಶೀದ್ ಸುಳ್ಯ ಜಿ ಸಖಾಫಿ ಅವರು ಮುಖ್ಯ ಪ್ರಭಾಷಣ ಮಾಡಲಿದ್ದಾರೆ.

ಸ್ಥಳೀಯ ಹಾಗೂ ಸುತ್ತಮುತ್ತಲಿನ ಧರ್ಮಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಪವಿತ್ರ ಮಜ್ಲಿಸ್‌ನಲ್ಲಿ ಪಾಲ್ಗೊಳ್ಳಬೇಕಾಗಿ ನೂರುಲ್ ಹುದಾ ಎಜುಕೇಶನಲ್ ಕಾಂಪ್ಲೆಕ್ಸ್ ಒಕ್ಕೆತ್ತೂರು-ವಿಟ್ಲ ಇದರ ಪ್ರಕಟಣೆ ತಿಳಿಸಿದೆ.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

Entertainment

ಮೈಸೂರು ದಸರಾದಲ್ಲಿ ಈ ಬಾರಿ ಕಂಬಳ ವೈಭವ: ಶಾಸಕ ಅಶೋಕ್ ರೈಗೆ ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

Published

on

ಪುತ್ತೂರು: ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವಕ್ಕೆ ಈ ಬಾರಿ ಮತ್ತೊಂದು ಜಾನಪದ ಕಳೆ ಬರಲಿದೆ. ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳವನ್ನು ಈ ಬಾರಿಯ ದಸರಾ ಮಹೋತ್ಸವದಲ್ಲಿ ಆಯೋಜಿಸುವಂತೆ ಮತ್ತು ಅದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ.

ಈ ಹಿಂದೆ ಬೆಂಗಳೂರಿನಲ್ಲಿ ಯಶಸ್ವಿಯಾಗಿ ಕಂಬಳ ನಡೆಸುವ ಮೂಲಕ ಈ ಗ್ರಾಮೀಣ ಕ್ರೀಡೆಯನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸಿದ ಹೆಗ್ಗಳಿಕೆ ಶಾಸಕ ಅಶೋಕ್ ರೈ ಅವರಿಗಿದೆ. ಕಳೆದ ಬಾರಿ ಪುತ್ತೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲೂ ಡಿ.ಕೆ. ಶಿವಕುಮಾರ್ ಅವರು ದಸರಾ ಕಂಬಳದ ಕುರಿತು ಪ್ರಸ್ತಾಪಿಸಿದ್ದರು. ಇದೀಗ ಮುಖ್ಯಮಂತ್ರಿಗಳೇ ಸ್ವತಃ ಜವಾಬ್ದಾರಿ ವಹಿಸಿಕೊಳ್ಳಲು ಸೂಚಿಸಿರುವುದರಿಂದ ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುವುದು ಖಚಿತವಾಗಿದೆ.

ಅಕ್ಟೋಬರ್ 18, 19 ರಂದು ಕಂಬಳ ಆಯೋಜನೆ

ಮೈಸೂರಿನ ಜಯಲಕ್ಷ್ಮೀಪುರಂನ ಪ್ರೀಮಿಯರ್ ಸ್ಟುಡಿಯೋ ಬಳಿ ಇರುವ ಸುಮಾರು 17 ಎಕರೆ ವಿಸ್ತೀರ್ಣದ ಜಾಗದಲ್ಲಿ ಈ ಐತಿಹಾಸಿಕ ಕಂಬಳ ನಡೆಯಲಿದೆ. ಅಕ್ಟೋಬರ್ ತಿಂಗಳ 18 ಮತ್ತು 19 ರಂದು ಎರಡು ದಿನಗಳ ಕಾಲ ಈ ಕ್ರೀಡಾಕೂಟವನ್ನು ಆಯೋಜಿಸಲು ದಿನಾಂಕ ನಿಗದಿಪಡಿಸಲಾಗಿದೆ. ಈಗಾಗಲೇ ಕಂಬಳದ ಸಿದ್ಧತೆಗಳ ಕುರಿತು ಮೊದಲ ಸುತ್ತಿನ ಅಧಿಕಾರಿಗಳ ಸಭೆ ಮುಕ್ತಾಯಗೊಂಡಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

ಮೈಸೂರಿನಲ್ಲಿ ಅಧಿಕಾರಿಗಳ ಮಹತ್ವದ ಸಭೆ

ಮುಖ್ಯಮಂತ್ರಿಗಳ ಸೂಚನೆಯ ಬೆನ್ನಲ್ಲೇ ಮೈಸೂರಿನಲ್ಲಿ ಇಂದು ಅಧಿಕಾರಿಗಳು ಹಾಗೂ ಜಿಲ್ಲೆಯ ಕಂಬಳ ಪ್ರಮುಖರ ಸಭೆ ನಡೆದಿದೆ. ಇದರ ಮುಂದುವರಿದ ಭಾಗವಾಗಿ ಮುಂದಿನ ಗುರುವಾರ ಮೈಸೂರಿನಲ್ಲಿ ಎರಡನೇ ಹಂತದ ಉನ್ನತ ಮಟ್ಟದ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಶಾಸಕ ಅಶೋಕ್ ರೈ, ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ ಸೇರಿದಂತೆ ಪ್ರಮುಖ ಅಧಿಕಾರಿಗಳು ಭಾಗವಹಿಸಿ ಅಂತಿಮ ರೂಪುರೇಷೆ ಸಿದ್ಧಪಡಿಸಲಿದ್ದಾರೆ.

“ಬೆಂಗಳೂರು ಕಂಬಳದಂತೆ ಮೈಸೂರು ದಸರಾ ಕಂಬಳವೂ ವಿಶ್ವವಿಖ್ಯಾತಿ ಪಡೆಯಲಿದೆ” “ಕಳೆದ ಬಾರಿ ಡೆಪ್ಯುಟಿ ಸಿಎಂ ಆಗಿದ್ದಾಗ ಡಿ.ಕೆ. ಶಿವಕುಮಾರ್ ಅವರು ದಸರಾದಲ್ಲಿ ಕಂಬಳ ನಡೆಸಲು ಆಸಕ್ತಿ ತೋರಿದ್ದರು, ಆದರೆ ಕೊನೆಯ ಹಂತದಲ್ಲಿ ಅದು ಸಾಧ್ಯವಾಗಿರಲಿಲ್ಲ. ಈ ಬಾರಿ ಮುಖ್ಯಮಂತ್ರಿಯಾಗಿ ಅವರೇ ಖುದ್ದಾಗಿ ಸೂಚನೆ ನೀಡಿದ್ದಾರೆ. ಕಂಬಳ ನಡೆಯುವುದು ನೂರಕ್ಕೆ ನೂರು ಖಚಿತ, ಜಾಗವೂ ನಿಗದಿಯಾಗಿದೆ. ಬೆಂಗಳೂರು ಕಂಬಳದ ಮಾದರಿಯಲ್ಲೇ ಮೈಸೂರು ದಸರಾ ಕಂಬಳವೂ ಜಾಗತಿಕ ಮಟ್ಟದಲ್ಲಿ ಸದ್ದು ಮಾಡಲಿದ್ದು, ತುಳುನಾಡಿನ ಹೆಮ್ಮೆಯ ಜಾನಪದ ಕ್ರೀಡೆಯನ್ನು ಜಗತ್ತಿಗೆ ಪರಿಚಯಿಸುವ ಸೌಭಾಗ್ಯ ನಮಗೆ ಸಿಕ್ಕಿದೆ.” – ಅಶೋಕ್ ರೈ, ಶಾಸಕರು, ಪುತ್ತೂರು




Continue Reading

Bantawala

ಯಕ್ಷ ಚಿಗುರು ಕಲಾತಂಡದ 7ನೇ ವರ್ಷದ ಯಕ್ಷಗಾನ ಹಾಗೂ ನೃತ್ಯ ತರಗತಿಗಳ ಅದ್ಧೂರಿ ಉದ್ಘಾಟನೆ

Published

on

ಅಡ್ಯಾಲು ಅಜಿಲಮೊಗರು: ಮಕ್ಕಳಲ್ಲಿ ಯಕ್ಷಗಾನ ಮತ್ತು ಸಾಂಸ್ಕೃತಿಕ ಕಲೆಗಳನ್ನು ಬೆಳೆಸುವ ಉದಾತ್ತ ಉದ್ದೇಶದಿಂದ ನಿರಂತರವಾಗಿ ಶ್ರಮಿಸುತ್ತಿರುವ ಇಲ್ಲಿನ ಪ್ರಸಿದ್ಧ ‘ಯಕ್ಷ ಚಿಗುರು ಕಲಾತಂಡ’ದ 7ನೇ ವರ್ಷದ ಯಕ್ಷಗಾನ ಹಾಗೂ ನೃತ್ಯ ತರಗತಿಗಳ ಉದ್ಘಾಟನಾ ಸಮಾರಂಭವು ಕಲಾತಂಡದ ನಾರಾಯಣ ಗುರುವೇದಿಕೆಯಲ್ಲಿ ಅತ್ಯಂತ ಯಶಸ್ವಿಯಾಗಿ ನೆರವೇರಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುರುಷೋತ್ತಮ ಪೂಜಾರಿ ಮಜಲು ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಲ್ಯಾಣಿ ಕ್ಯಾಟರಿಂಗ್‌ನ ಮಾಲಕರಾದ ಲೋಕೇಶ್ ಪೂಜಾರಿ, ಬ್ರಹ್ಮಶ್ರೀ ವೆಲ್ಡಿಂಗ್‌ನ ಮಾಲಕರಾದ ಪ್ರಶಾಂತ್, ಪ್ರಮುಖರಾದ ಮಧುಶ್ರೀ ಮೇಗಿನಮನೆ ಹಾಗೂ ಶಶಿಕಲಾ ತಿಂಗಳಾಡಿ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಕಲಾತಂಡದ ಸ್ಥಾಪಕರಾದ ನವೀನ್ ಶಾಂತಿ ಮತ್ತು ಯಕ್ಷ ಗುರುಗಳಾದ ಶಶಿಧರ್ ಬಾಚಕೆರೆ ಅವರು ಉಪಸ್ಥಿತರಿದ್ದು, ತರಗತಿಗೆ ಸೇರ್ಪಡೆಗೊಂಡ ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಅತಿಥಿಗಳ ಅನಿಸಿಕೆ: “ಯಕ್ಷಗಾನ ಮತ್ತು ನೃತ್ಯದಂತಹ ಸಾಂಸ್ಕೃತಿಕ ಕಲೆಗಳು ನಮ್ಮ ಸಂಸ್ಕೃತಿಯ ಅಮೂಲ್ಯ ಪರಂಪರೆಯಾಗಿದೆ. ಇಂದಿನ ಆಧುನಿಕ ಯುಗದಲ್ಲಿ ಇಂತಹ ತರಗತಿಗಳ ಮೂಲಕ ಮಕ್ಕಳಲ್ಲಿ ಕಲೆಯ ಬಗ್ಗೆ ಆಸಕ್ತಿ ಮೂಡಿಸುವುದರ ಜೊತೆಗೆ, ಅವರಲ್ಲಿ ಉತ್ತಮ ಸಂಸ್ಕಾರದ ಅರಿವು ಮೂಡಿಸುತ್ತಿರುವ ಯಕ್ಷ ಚಿಗುರು ಕಲಾತಂಡದ ಕಾರ್ಯ ನಿಜಕ್ಕೂ ಶ್ಲಾಘನೀಯವಾಗಿದೆ” ಎಂದು ಅತಿಥಿಗಳು ತಮ್ಮ ಭಾಷಣದಲ್ಲಿ ಅಭಿಪ್ರಾಯಪಟ್ಟರು.

ಪ್ರಮೋದ್ ಬೊಲ್ಲುಕಲ್ಲು ಅವರು ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸಮಗ್ರ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ಕೊನೆಯಲ್ಲಿ ಧನ್ಯವಾದ ಸಮರ್ಪಣೆ ಮಾಡಿದರು.

ಈ ಸಾಂಸ್ಕೃತಿಕ ವಿದ್ಯಾರಂಭದ ಶುಭ ಸಂದರ್ಭದಲ್ಲಿ ನೂರಾರು ಸಂಖ್ಯೆಯಲ್ಲಿ ಪೋಷಕರು, ಕಲಾಭಿಮಾನಿಗಳು ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.




Continue Reading

award

ಬಯ್ಯಮಲ್ಲಿಗೆ ಖ್ಯಾತಿಯ ಹಿರಿಯ ನಾಟಕಕಾರ ಡಾ.ಸಂಜೀವ ದಂಡಕೇರಿ ಅವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

Published

on

ಬೆಂಗಳೂರು: ಕಳೆದ ಬಾರಿ ಸುವರ್ಣ ಸಂಭ್ರಮವನ್ನಾಚರಿಸಿದ ಅಂತಾರಾಷ್ಟ್ರೀಯ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ತನ್ನ 51ನೇ ವರ್ಷದ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ ಸಮಾರಂಭವನ್ನು 2026 ಮೇ 23ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಿತ್ತು. ಕಾರ್ಯಕ್ರಮವನ್ನು ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ದೀಪ ಬೆಳಗಿ ಉದ್ಘಾಟಿಸಿದರು.


ಸಮಾರಂಭದಲ್ಲಿ ತುಳು ರಂಗಭೂಮಿ ಸಿನಿಮಾರಂಗ, ಉದ್ಯಮ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಮಹತ್ವದ ಸೇವೆ ಸಲ್ಲಿಸಿದ ಬಯ್ಯಮಲ್ಲಿಗೆ ಖ್ಯಾತಿಯ ಹಿರಿಯ ನಾಟಕಕಾರ ಡಾ.ಸಂಜೀವ ದಂಡಕೇರಿ ಅವರಿಗೆ ಈ ಬಾರಿಯ ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ದಂಡಕೇರಿಯವರ ಪತ್ನಿ ಶ್ರೀಮತಿ ಜಲಜಾಕ್ಷಿ ದಂಡಕೇರಿ ಮತ್ತು ಕುಟುಂಬ ಸದಸ್ಯರು ಸಮಾರಂಭದಲ್ಲಿ ಪಾಲ್ಗೊಂಡರು.


ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ. ಹೆಚ್.ಎಲ್.ಎನ್. ರಾವ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರು ದೂರದರ್ಶನ ಕೇಂದ್ರದ ವಿಶ್ರಾಂತ ಹೆಚ್ಚುವರಿ ಮಹಾನಿರ್ದೇಶಕ ನಾಡೋಜ ಡಾ. ಮಹೇಶ್ ಜೋಶಿ, ಖ್ಯಾತ ವಿದ್ವಾಂಸ, ವಿದ್ಯಾ ವಾಚಸ್ಪತಿ ಡಾ.ಅರಳುಮಲ್ಲಿಗೆ ಪಾರ್ಥಸಾರಥಿ ಮುಖ್ಯ ಅತಿಥಿಗಳಾಗಿದ್ದರು. ಸ್ವಾಗತ ಸಮಿತಿಯ ಡಾ. ಕೆ.ಎನ್ ಅಡಿಗ ಅಡೂರು, ಗುರುರಾಜ್, ಡಾ. ಬಸವರಾಜು, ಎಚ್.ಎಸ್. ಹನುಮಂತ ರಾವ್, ಸುಮಾ, ವಿ.ನಾಗೇಂದ್ರ, ಸಂಸ್ಥೆಯ ಮಂಗಳೂರು ಪ್ರತಿನಿಧಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಮೊದಲಾದವರು ಉಪಸ್ಥಿತರಿದ್ದರು.


ಆರ್ಯಭಟ ನೃತ್ಯೋತ್ಸವದೊಂದಿಗೆ ಜರಗಿದ ವರ್ಣರಂಜಿತ ಸಮಾರಂಭದಲ್ಲಿ ರಾಜ್ಯ,ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 72ಮಂದಿ ಹಿರಿಯ ಸಾಧಕರಿಗೆ 2025 – 26 ನೇ ಸಾಲಿನ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಯನ್ನು ವಿತರಿಸಲಾಯಿತು.
ಸಂಸ್ಥೆಯ ಅಧ್ಯಕ್ಷ ಡಾ.ಎಚ್.ಎಲ್.ಯನ್.ರಾವ್ ಸ್ವಾಗತಿಸಿ ಪ್ರಸ್ತಾವನೆಗೈದರು. ಕಾರ್ಯದರ್ಶಿ ಡಾ.ಬಸವರಾಜು ವಂದಿಸಿದರು. ಸಾರ್ಥವಳ್ಳಿ ನಾರಾಯಣಸ್ವಾಮಿ ಮತ್ತು ಆರ್.ವೆಂಕಟರಾಜು ಕಾರ್ಯಕ್ರಮ ನಿರೂಪಿಸಿದರು.

Continue Reading

Trending

Copyright © 2025 Deevatige

error: Content is protected !!