arrest
ಬಂಟ್ವಾಳ: ರೂ 7.64 ಲಕ್ಷ ಮೌಲ್ಯದ ಎಂ.ಡಿ.ಎಂ.ಎ ಮಾದಕ ದ್ರವ್ಯ ವಶ; ಮೂವರು ಆರೋಪಿಗಳ ಬಂಧನ
ಬಂಟ್ವಾಳ: ಜಿಲ್ಲಾ ಪೊಲೀಸ್ ಅಧೀಕ್ಷಕರು (ಎಸ್‌ಪಿ) ನೀಡಿದ ಮಾಹಿತಿ ಪ್ರಕಾರ, ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾರಿ ಪ್ರಮಾಣದ ಮಾದಕ ದ್ರವ್ಯ ಸಾಗಾಟ ಜಾಲವನ್ನು ಪತ್ತೆಹಚ್ಚಲಾಗಿದ್ದು, ಮೂವರು ಆರೋಪಿಗಳನ್ನು ಬಂಧಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಎಂ.ಡಿ.ಎಂ.ಎ (MDMA) ಅನ್ನು ವಶಪಡಿಸಿಕೊಳ್ಳಲಾಗಿದೆ.
ಘಟನೆಯ ಹಿನ್ನೆಲೆ:
ದಿನಾಂಕ 04.06.2026ರಂದು ಸಂಜೆ, ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ (PSI) ಸಂದೀಪ್ ಕುಮಾರ್ ಶೆಟ್ಟಿ ಮತ್ತು ಸಿಬ್ಬಂದಿಗಳು ಮೆಲ್ಕಾರ್ ಪ್ಲೈಒವರ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಸಂಶಯಾಸ್ಪದವಾಗಿ ಬಂದ ಕಾರೊಂದನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಆರೋಪಿಗಳ ವಿವರ:
ಕಾರಿನಲ್ಲಿದ್ದ ಮೂವರನ್ನು ವಿಚಾರಣೆಗೆ ಒಳಪಡಿಸಿದಾಗ ಅವರ ಗುರುತು ಪತ್ತೆಯಾಗಿದೆ:
- ಎ. ಜುಬೈರ್ (39) – ನಿವಾಸಿ: ಪುದು, ಬಂಟ್ವಾಳ.
- ಮೊಹಮ್ಮದ್ ಸವಾದ್ (36) – ನಿವಾಸಿ: ಸಜಿಪ ಮುನ್ನೂರು, ಬಂಟ್ವಾಳ.
- ಬಿ.ಎಮ್. ರಶೀದ್ ಯಾನೆ ಮಾರಿಮುತ್ತು – ನಿವಾಸಿ: ಬಿ ಮೂಡ, ಬಂಟ್ವಾಳ.

ಸ್ವಾಧೀನಪಡಿಸಿಕೊಂಡ ಸೊತ್ತುಗಳು:
- ಎಂ.ಡಿ.ಎಂ.ಎ: 76 ಗ್ರಾಂ 40 ಮಿಲಿಗ್ರಾಂ (ಅಂದಾಜು ಮೌಲ್ಯ ರೂ. 7,64,000/-)
- ಕಾರು: ಕೃತ್ಯಕ್ಕೆ ಬಳಸಿದ ಕೆ.ಎ. 19 ಎಮ್.ಆರ್. 1997 (KA 19 MR 1997) ನೋಂದಣಿಯ ವಾಹನ.
- ಮೊಬೈಲ್ ಫೋನ್‌ಗಳು: ಆರೋಪಿಗಳ ಬಳಿಯಿದ್ದ 3 ಮೊಬೈಲ್ ಫೋನ್‌ಗಳು.
- ಮಾದಕ ವಸ್ತು ಸೇವನೆ ಮಾಡಲು ಉಪಯೋಗಿಸುವ ಸಾಧನಗಳು.
ಪೊಲೀಸ್ ಕಾರ್ಯಾಚರಣೆ:
ಕಾರನ್ನು ತಪಾಸಣೆ ನಡೆಸಿದ ಸಂದರ್ಭದಲ್ಲಿ ಮೊದಲು ಡ್ರಗ್ಸ್ ಸೇವನೆಗೆ ಬಳಸುವ ಸಾಧನ ಪತ್ತೆಯಾಗಿತ್ತು. ಇದನ್ನು ಆಧರಿಸಿ ಪೊಲೀಸರು ತೀವ್ರ ವಿಚಾರಣೆ ನಡೆಸಿದಾಗ, ಆರೋಪಿಗಳು ಎಂ.ಡಿ.ಎಂ.ಎ ಮಾದಕದ್ರವ್ಯವನ್ನು ಹೆಚ್ಚಿನ ಬೆಲೆಗೆ ಸಾರ್ವಜನಿಕರಿಗೆ ಮಾರಾಟ ಮಾಡುವ ಉದ್ದೇಶದಿಂದ ಸಾಗಿಸುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ.
ಸದ್ಯ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದ್ದು, ಮಾದಕ ದ್ರವ್ಯ ಹಾಗೂ ಕೃತ್ಯಕ್ಕೆ ಬಳಸಿದ ಕಾರು ಮತ್ತು ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಎಸ್‌ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಾ.ಅರುಣ್ ಕೆ. ಪೊಲೀಸ್ ಅಧೀಕ್ಷಕರು ದ.ಕ ಜಿಲ್ಲೆ ಹಾಗೂ ಅನಿಲ್ ಕುಮಾರ್ ಭೂಮರಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ದ.ಕ ಜಿಲ್ಲೆ ರವರ ಮಾರ್ಗದರ್ಶನದಲ್ಲಿ ಬಂಟ್ವಾಳ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಯಶ್ ಕುಮಾರ್ ಶರ್ಮಾ ರವರ ನೇತೃತ್ವದ ತಂಡದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಅನಂತ ಪದ್ಮನಾಭ ಕೆ.ವಿ, ಬಂಟ್ವಾಳ ನಗರ ಠಾಣಾ ಪಿ.ಎಸ್.ಐ ಸಂದೀಪ್ ಶೆಟ್ಟಿ, ಹಾಗೂ ಸಿಬ್ಬಂದಿಯವರಾದ ಉದಯ ರೆ ರಾಧಾಕೃಷ್ಣ ಕೆ, ಪ್ರವೀಣ್ ರೈ, ಸುರೇಶ್, ವಿವೇಕ್ ರ್ರೈ. ಆದರ್ಶ, ಅಜಯ್, ಸುರೇಶ್ ಉಪ್ಪಾರ್, ಸದಾಶಿವ, ಮಾಲಾಶ್ರೀ ಕಾರ್ಯಾಚರಣೆಯಲ್ಲಿ ಭಾಗವಹಿಸಿರುತ್ತಾರೆ ಹಾಗೂ ಜಿಲ್ಲಾ ತಾಂತ್ರಿಕ ವಿಭಾಗದ ಸಂಪತ್, ದಿವಾಕರ್ ರವರು ಕಾರ್ಯಾಚರಣೆಗೆ ಸಹಕರಿಸಿರುತ್ತಾರೆ.. ಈ ಕಾರ್ಯಚರಣೆಯನ್ನು ಹಿರಿಯ ಅಧಿಕಾರಿಗಳು ಶ್ಲಾಘಿಸಿರುತ್ತಾರೆ.



arrest
6 ವರ್ಷಗಳಿಂದ ವಿದೇಶದಲ್ಲಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಅರೆಸ್ಟ್: ಬಂಟ್ವಾಳ ಪೊಲೀಸರ ಕಾರ್ಯಾಚರಣೆ
ಮಂಗಳೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ.
ಮಂಗಳೂರು ಬಜಾಲ್‌ನಂತೂರು ನಿವಾಸಿ ಮಹಮ್ಮದ್ ನೌಫಲ್ @ ಸಫಾರಿ ನೌಫಲ್ (34) ದಸ್ತಗಿರಿಯಾದ ಆರೋಪಿ.
ಪ್ರಕರಣದ ವಿವರ: ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ (ಅ.ಕ್ರ: 24/2020, ಐಪಿಸಿ ಕಲಂ: 143, 147, 148, 504, 323, 324, 506, 427 r/w 149 ಮತ್ತು ಕಾವಲು ಕಾಯ್ದೆ) ಸಂಬಂಧಿಸಿದಂತೆ ಈಾತನು ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ವಿದೇಶಕ್ಕೆ ಪರಾರಿಯಾಗಿದ್ದ. ಈತನ ವಿರುದ್ಧ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿತ್ತು.
ಸೆಪ್ಟೆಂಬರ್ 15, 2026ರಂದು ವಿದೇಶದಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗದ ಸಹಾಯದಿಂದ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೆಪ್ಟೆಂಬರ್ 29, 2026ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
arrest
ಬೆಳ್ತಂಗಡಿ: ದಲಿತ ಕುಟುಂಬದ ಜಮೀನಿಗೆ ಅಕ್ರಮ ಪ್ರವೇಶಿಸಿ ಅಶ್ಲೀಲ ಪ್ರದರ್ಶನ – ಆರೋಪಿ ಬಂಧನ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದಲ್ಲಿ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಸೇರಿದ ಜಮೀನಿಗೆ ಅಕ್ರಮ ಪ್ರವೇಶಿಸಿ ಕೃತ್ಯವೆಸಗಿ, ದಲಿತ ಕುಟುಂಬದ ಮಹಿಳೆಯರ ಮುಂದೆ ಪಂಚೆ ಎತ್ತಿ ಮರ್ಮಾಂಗ ಪ್ರದರ್ಶಿಸಿ ವಿಕೃತಿ ಮೆರೆದ ವಿಲಕ್ಷಣ ಪ್ರಕರಣ ನಡೆದಿದ್ದು, ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ ಪಟ್ಟಾಡಿ ಮನೆಯ ಅಬ್ದುಲ್ ಹನೀಫ್ ಹುಸೇನ್ (50) ಎಂದು ಗುರುತಿಸಲಾಗಿದೆ.
ಘಟನೆ ವಿವರ:
ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಪಡ್ಯಾರಬೆಟ್ಟು ಎಂಬಲ್ಲಿ ಸುಮಾರು 40 ವರ್ಷಗಳಿಗಿಂತಲೂ ಹೆಚ್ಚು ಕಾಲದಿಂದ ವಾಸ್ತವ್ಯವಿದ್ದು ಕೃಷಿ ಚಟುವಟಿಕೆ ನಡೆಸಿಕೊಂಡು ಬರುತ್ತಿದ್ದ ಪರಿಶಿಷ್ಟ ಜಾತಿಯ ಕುಟುಂಬದ ಸ್ವಾಧೀನದ ಜಾಗದಲ್ಲಿ ಸಿಮೆಂಟ್ ಕಂಬ ಹಾಗೂ ತಂತಿ ಬೇಲಿ ಹಾಕಿ ಕುಟುಂಬ ಕೃಷಿ ಕಾರ್ಯದಲ್ಲಿ ತೊಡಗಿತ್ತು.
ಸೆ.7 ರಂದು ಸ್ಥಳೀಯ ನಿವಾಸಿ ಹನೀಫ್ ಎಂಬಾತ ಏಕಾಏಕಿ ಆ ಜಾಗಕ್ಕೆ ಅತಿಕ್ರಮ ಪ್ರವೇಶಿಸಿ, ಜಾತಿ ನಿಂದನೆ ಮಾಡಿ ಅವಾಚ್ಯ ಮತ್ತು ಅಶ್ಲೀಲ ಪದಗಳಿಂದ ನಿಂದಿಸಿದ್ದಾನೆ. ಬಡ ಕುಟುಂಬ ಹಾಕಿದ್ದ ಸಿಮೆಂಟ್ ಬೇಲಿ ಕಂಬ ಹಾಗೂ ತಂತಿ ಬೇಲಿಯನ್ನು ಕಿತ್ತೆಸೆದು, ಅಡಿಕೆ ಹಾಗೂ ಬಾಳೆ ಗಿಡಗಳನ್ನು ಮುರಿದು ದಾಂಧಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.
ಈ ವೇಳೆ ಕೆಲಸದಲ್ಲಿ ತೊಡಗಿದ್ದ ದಲಿತ ಕುಟುಂಬದ ಮಹಿಳೆಯರು ದಾಂಧಲೆಯ ಘಟನೆಯನ್ನು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ ಆರೋಪಿ ಹನೀಫ್ ಮಹಿಳೆಯರ ಎದುರು ಬಂದು ತಾನು ಉಟ್ಟಿದ್ದ ಪಂಚೆಯನ್ನು ಎತ್ತಿ ಒಳ ಉಡುಪನ್ನು ಜಾರಿಸಿ ತನ್ನ ಗುಪ್ತಾಂಗವನ್ನು ತೋರಿಸುತ್ತಾ ಸಾರ್ವಜನಿಕವಾಗಿ ವಿಕೃತಿಯನ್ನು ಮೆರೆದಿದ್ದಾನೆ. “ನಿಮ್ಮನ್ನು ಇದರಿಂದಲೇ ಅತ್ಯಾಚಾರ ಮಾಡುತ್ತೇನೆ, ಈ ಜಾಗ ಬಿಟ್ಟು ಹೋಗದಿದ್ದರೆ ನಿಮ್ಮನ್ನು ಕೊಲ್ಲದೆ ಬಿಡುವುದಿಲ್ಲ” ಎಂದು ಬೆದರಿಕೆ ಹಾಕಿ ಮಹಿಳೆಯರನ್ನು ಬೆನ್ನಟ್ಟಿಕೊಂಡು ಬಂದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ದೂರು ಮತ್ತು ಬಂಧನ:
ಈತನ ವಿಕೃತಿಯಿಂದ ಭಯಗೊಂಡ ಬಡ ಕುಟುಂಬವು ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ವೇಣೂರು ಪೊಲೀಸ್ ಠಾಣೆಗೆ ತೆರಳಿ ವಿಡಿಯೋ ಚಿತ್ರೀಕರಣದ ದೃಶ್ಯಾವಳಿ ಸಾಕ್ಷ್ಯಾಧಾರಗಳೊಂದಿಗೆ ಸೆ.8 ರಂದು ದೂರು ನೀಡಿದೆ.
ದೂರಿನ ಅನ್ವಯ ವೇಣೂರು ಠಾಣೆಯಲ್ಲಿ ದಲಿತ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಹಾಗೂ ಬಿಎನ್ಎಸ್ 329(3), 352, 351(2), 75(1), 324(4) ರಂತೆ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡ ವೇಣೂರು ಪೊಲೀಸರು ಆರೋಪಿಯನ್ನು ಸಂಜೆ ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
40 ವರ್ಷಗಳಿಂದ ಕೃಷಿ ಮಾಡಿಕೊಂಡು ಬಂದಿದ್ದ ಬಡ ಪರಿಶಿಷ್ಟ ಕುಟುಂಬದ ಮೇಲೆ ದೌರ್ಜನ್ಯ ನಡೆಸಿ, ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದ ಆರೋಪಿಗೆ ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರ ಸಂಘಟಿತ ಹೋರಾಟದ ಫಲವಾಗಿ ಕಾನೂನಿನ ತಕ್ಕ ಪಾಠ ಕಲಿಸಿದಂತಾಗಿದ್ದು, ಈ ಹೋರಾಟಕ್ಕೆ ರಾಜ್ಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ.
arrest
ಕರಿಕೆ: ಕೇರಳ ಮೀಸಲು ಅರಣ್ಯದಲ್ಲಿ ಕಡವೆ ಬೇಟೆಯಾಡಿ ಮಾಂಸ ಮಾರಾಟ ಮಾಡುತ್ತಿದ್ದ ಜಾಲ ಪತ್ತೆ; ಓರ್ವನ ಬಂಧನ, 40 ಕೆಜಿ ಮಾಂಸ ವಶ
ಕರಿಕೆ ಸಮೀಪದ ಕೇರಳ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಡವೆ ಬೇಟೆಯಾಡಿ, ಮಾಂಸ ಮಾರಾಟ ಮಾಡುತ್ತಿದ್ದ ಜಾಲವನ್ನು ಕೇರಳ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿ ಭೇದಿಸಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಕರಿಕೆ ತೋಟಮ್ ನಿವಾಸಿ ಸಿದ್ದು (35) ಬಂಧಿತ ಆರೋಪಿ. ಈ ಕೃತ್ಯದಲ್ಲಿ ಭಾಗಿಯಾಗಿದ್ದ ಇತರ ಇಬ್ಬರು ಆರೋಪಿಗಳಾದ ಜಿ.ಎಸ್. ವಿನೀಶ್ ಮತ್ತು ವಿಮಲ್ ರಾಜ್ ಪರಾರಿಯಾಗಿದ್ದಾರೆ.
ಕರಿಕೆ ಸಮೀಪದ ತೋಟಮ್ ಬಳಿಯ ಕೇರಳ ಮೀಸಲು ಅರಣ್ಯದ ಗೇರು ತೋಟಿನ ಕಾಟೂರ್ ಕೊಪ್ಪು ಎಂಬಲ್ಲಿ ಈ ಅಕ್ರಮ ಚಟುವಟಿಕೆ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಆರೋಪಿಯಿಂದ ಒಂದು ನಾಡ ಬಂದೂಕು, ಸುಮಾರು 40 ಕೆಜಿ ಕಡವೆ ಮಾಂಸ ಹಾಗೂ ಬೇಟೆಗೆ ಬಳಸಿದ್ದ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾಸರಗೋಡು ವಲಯದ ಅರಣ್ಯ ಅಧಿಕಾರಿಗಳಾದ ರಾಜು ಎಂ.ಪಿ., ಪ್ರಕಾಶ್ ವಿ.ಪಿ. ಹಾಗೂ ಪ್ರವೀಣ್ ಕುಮಾರ್ ಅವರನ್ನೊಳಗೊಂಡ ತಂಡ ಈ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿ ಭಾಗವಹಿಸಿತ್ತು
-
accident2 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala8 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
