Uncategorized
ವಿಟ್ಲ ಬೊಬ್ಬೆಕೇರಿ ರಸ್ತೆ ಪುನರ್ ನಿರ್ಮಾಣ ಕಾಮಗಾರಿ: ಜೂನ್ 5 ರಿಂದ 3 ತಿಂಗಳ ಕಾಲ ವಾಹನ ಸಂಚಾರ ಮಾರ್ಗ ಬದಲಾವಣೆ
ವಿಟ್ಲ: ಪುತ್ತೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಡೂರು-ಕಾಂಞಂಗಾಡ್ ರಾಜ್ಯ ಹೆದ್ದಾರಿಯ ವಿಟ್ಲ ಸಮೀಪದ ಬೊಬ್ಬೆಕೇರಿ ಎಂಬಲ್ಲಿ ರಸ್ತೆ ಪುನರ್ ನಿರ್ಮಾಣ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಸುಗಮ ಸಂಚಾರ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಜೂನ್ 5 ರಿಂದ ಮುಂದಿನ 3 ತಿಂಗಳ ಅವಧಿಗೆ ಸದರಿ ರಸ್ತೆಯಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಗಳಾದ ದರ್ಶನ್ ಎಚ್.ವಿ. ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಲೋಕೋಪಯೋಗಿ ಇಲಾಖೆ ಬಂಟ್ವಾಳ ಉಪವಿಭಾಗದ ಮನವಿ ಹಾಗೂ ಮಂಗಳೂರು ಉಪವಿಭಾಗಾಧಿಕಾರಿಗಳ ವರದಿ ಆಧಾರಿಸಿ ಈ ಕೆಳಗಿನಂತೆ ಬದಲಿ ಮಾರ್ಗಗಳನ್ನು ನಿಗದಿಪಡಿಸಲಾಗಿದೆ.
ಬದಲಿ ಸಂಚಾರ ಮಾರ್ಗಗಳ ವಿವರ:
ಲಘು ವಾಹನಗಳಿಗೆ (ದ್ವಿಚಕ್ರ, ನಾಲ್ಕು ಚಕ್ರದ ವಾಹನ ಹಾಗೂ ಬಸ್‌ಗಳು): ಸಾರಡ್ಕ ಮತ್ತು ವಿಟ್ಲ ಕಡೆಯಿಂದ ಮಂಗಳಪದವು, ಕಲ್ಲಡ್ಕ ಕಡೆಗೆ ಸಂಚರಿಸುವ ದ್ವಿಚಕ್ರ, ನಾಲ್ಕು ಚಕ್ರದ ವಾಹನಗಳು ಹಾಗೂ ಬಸ್‌ಗಳು ವಿಟ್ಲ ನಾಲ್ಕು ಮಾರ್ಗ ಜಂಕ್ಷನ್ ಬಳಿ ಇರುವ ಬದ್ರಿಯಾ ಟೆಕ್ಸ್‌ಟೈಲ್ಸ್ ರಸ್ತೆಯಾಗಿ ಅನಂತೇಶ್ವರ, ಪಂಚಲಿಂಗೇಶ್ವರ, ಅಯ್ಯಪ್ಪ ದೇವಸ್ಥಾನ ಹಾಗೂ ಸುರಕ್ಷಾ ಆಸ್ಪತ್ರೆ ಮಾರ್ಗವಾಗಿ ಬೊಬ್ಬೆಕೇರಿ ತಲುಪಿ ಮುಂದೆ ಸಾಗಬೇಕು.

ಕಲ್ಲಡ್ಕ ಕಡೆಯಿಂದ ಬರುವ ವಾಹನಗಳು: ಕಲ್ಲಡ್ಕ ಕಡೆಯಿಂದ ವಿಟ್ಲಕ್ಕೆ ಆಗಮಿಸುವ ಎಲ್ಲಾ ವಾಹನಗಳಿಗೆ ಪ್ರಸ್ತುತ ಇರುವ ಹಳೆಯ ರಸ್ತೆಯಲ್ಲೇ ಏಕಮುಖ ಸಂಚಾರಕ್ಕೆ (One-way) ಅವಕಾಶ ಕಲ್ಪಿಸಲಾಗಿದೆ.
ಭಾರಿ ಘನ ವಾಹನಗಳಿಗೆ ನಿಷೇಧ: ನಾಲ್ಕು ಮಾರ್ಗ ಜಂಕ್ಷನ್‌ನಿಂದ ದೇವಸ್ಥಾನ ರಸ್ತೆಯಾಗಿ ಬೊಬ್ಬೆಕೇರಿಗೆ ಹೋಗುವ ಮಾರ್ಗದಲ್ಲಿ ಭಾರಿ ಘನ ವಾಹನಗಳ (10 ಚಕ್ರ ಹಾಗೂ ಅದಕ್ಕಿಂತ ಮೇಲ್ಪಟ್ಟ) ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಭಾರಿ ವಾಹನಗಳು ಕಬಕ ರಸ್ತೆಯ ಮೂಲಕ ಪರ್ಯಾಯವಾಗಿ ಸಂಚರಿಸಲು ಸೂಚಿಸಲಾಗಿದೆ.

ಸದರಿ ಬದಲಿ ರಸ್ತೆ ಮಾರ್ಗಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಅಗತ್ಯ ಸೂಚನಾ ಫಲಕಗಳನ್ನು ಅಳವಡಿಸಲು ಹಾಗೂ ಸಂಚಾರ ನಿಯಂತ್ರಣಕ್ಕೆ ಸಿಬ್ಬಂದಿಗಳನ್ನು ನಿಯೋಜಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಜಿಲ್ಲಾಧಿಕಾರಿಗಳ ಆದೇಶದಲ್ಲಿ ನಿರ್ದೇಶನ ನೀಡಲಾಗಿದೆ. ಸಾರ್ವಜನಿಕರು ಹಾಗೂ ವಾಹನ ಸವಾರರು ಈ ತಾತ್ಕಾಲಿಕ ಬದಲಾವಣೆಗೆ ಸಹಕರಿಸಬೇಕಾಗಿ ವಿನಂತಿಸಲಾಗಿದೆ.


Mangaluru
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ‘ಬ್ಯಾರಿಸ್ಟರ್ ಅತ್ತಾವರ ಎಲ್ಲಪ್ಪ’ ಹೆಸರಿಡಲು ಮನವಿ
ಮಂಗಳೂರು: ಸ್ವಾತಂತ್ರ್ಯ ಹೋರಾಟಕ್ಕೆ ಅಪಾರ ಕೊಡುಗೆ ನೀಡಿದ ಹಾಗೂ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ನಿರ್ಮಾಣಕ್ಕೆ ಸ್ವಂತ ಜಾಗವನ್ನು ದಾನವಾಗಿ ನೀಡಿದ ಮಹಾನ್ ದೇಶಪ್ರೇಮಿ ಬ್ಯಾರಿಸ್ಟರ್ ಅತ್ತಾವರ ಎಲ್ಲಪ್ಪ ಅವರ ಹೆಸರನ್ನು ಮಂಗಳೂರು ಸೆಂಟ್ರಲ್ ರೈಲ್ವೇ ಸ್ಟೇಷನ್‌ಗೆ ಮರುನಾಮಕರಣ ಮಾಡಬೇಕು ಹಾಗೂ ನಿಲ್ದಾಣದ ಅವರ ಪ್ರತಿಮೆ ಸ್ಥಾಪಿಸಬೇಕು ಎಂದು ಕರ್ನಾಟಕ ಸರಕಾರದ ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ, ಮಾಜಿ ಮೇಯರ್ ಅನಂತ್ ಮೈಸೂರು ಆಗ್ರಹಿಸಿದ್ದಾರೆ.
ಆಗಸ್ಟ್ 2ರಂದು ಸಂಜೆ ಮಂಗಳೂರು ಸೆಂಟ್ರಲ್ ರೈಲ್ವೇ ಸ್ಟೇಷನ್‌ಗೆ ಭೇಟಿ ನೀಡಿದ ಅವರು, ಗಾಣಿಗ ಸಮಾಜದ ಪ್ರಮುಖ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ, ರೈಲ್ವೇ ಕ್ಷೇತ್ರಾಧಿಕಾರಿ ರಾಕೇಶ್ ಕುಮಾರ್ ಪಾರಕ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಬಳಿಕ ಮಾತನಾಡಿದ ಅನಂತ್ ಮೈಸೂರು, “ಬ್ಯಾರಿಸ್ಟರ್ ಅತ್ತಾವರ ಎಲ್ಲಪ್ಪನವರು ಗಾಣಿಗ (ಸಫಲಿಗ) ಸಮಾಜಕ್ಕೆ ಸೇರಿದವರಾಗಿದ್ದು, ದೇಶಕ್ಕಾಗಿ ತಮ್ಮನ್ನೇ ಸಮರ್ಪಿಸಿಕೊಂಡವರು. ನಿಲ್ದಾಣ ನಿರ್ಮಾಣಕ್ಕೆ ತಮ್ಮದೇ ಜಾಗವನ್ನು ಕೊಡುಗೆಯಾಗಿ ನೀಡಿದ ಅವರ ಸ್ಮರಣಾರ್ಥ ನಿಲ್ದಾಣಕ್ಕೆ ಅವರ ಹೆಸರನ್ನಿಟ್ಟು, ಪ್ರತಿಮೆ ನಿರ್ಮಿಸುವುದು ಅವರಿಗೆ ಸಲ್ಲಿಸುವ ನಿಜವಾದ ಗೌರವ,” ಎಂದರು.

ಪಠ್ಯಪುಸ್ತಕದಲ್ಲೂ ವಿಷಯ ಸೇರ್ಪಡೆಯಾಗಲಿ: ಮೋಹಿತ್
ಅಜೇಯ ಭಾರತ ಸಂಸ್ಥಾಪಕ ಮೋಹಿತ್ ಬೆಂಗಳೂರು ಮಾತನಾಡಿ, “ಅತ್ತಾವರ ಎಲ್ಲಪ್ಪನವರು ಒಂದು ಸಮಾಜಕ್ಕೆ ಸೀಮಿತವಾದವರಲ್ಲ, ಇಡೀ ದೇಶ ಹೆಮ್ಮೆ ಪಡುವ ವ್ಯಕ್ತಿತ್ವ. ನಿಲ್ದಾಣಕ್ಕೆ ಹೆಸರಿಡುವ ಜತೆಗೆ ಶಾಲಾ ಪಠ್ಯಪುಸ್ತಕಗಳಲ್ಲೂ ಅವರ ಹೋರಾಟದ ಹಾದಿಯ ವಿಷಯಗಳನ್ನು ಸೇರ್ಪಡೆಗೊಳಿಸಬೇಕು. ಈ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರೊಂದಿಗೆ ಚರ್ಚಿಸಲಾಗಿದ್ದು, ಶೀಘ್ರವೇ ಕೇಂದ್ರ ರೈಲ್ವೇ ಸಚಿವ ವಿ. ಸೋಮಣ್ಣ ಅವರ ಗಮನಕ್ಕೂ ತರಲಾಗುವುದು,” ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬ್ಯಾರಿಸ್ಟರ್ ಎಲ್ಲಪ್ಪ ಅವರ ಸೋದರಳಿಯ ಪ್ರಭಾಕರ್ ದಾಸ್, ದ.ಕ. ಜಿಲ್ಲಾ ಗಾಣಿಗ ಸಂಘದ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ಪುತ್ತೂರು ಗಾಣಿಗ ಯಾನೆ ಸಫಲಿಗರ ಸೇವಾ ಸಂಘದ ಲಕ್ಷ್ಮೀ ಪ್ರಸಾದ್ ಬೆಟ್ಟ, ಪ್ರೊ| ಸುರೇಶ್ ಕಟೀಲು, ಕಮಲಾಕ್ಷ ಉಳ್ಳಾಲ್, ರವೀಂದ್ರ ಟಿ. ಮಂಗಳೂರು, ಭರತ್ ಕುಮಾರ್ ಅತ್ತಾವರ, ಹರೀಶ್ ಮಂಜೇಶ್ವರ, ತಾರನಾಥ ಸುವರ್ಣ, ಪದ್ಮನಾಭ, ಕಾರ್ತಿಕ್ ಕಬಕ, ಪ್ರವನ್ ಮೆಲ್ಕಾರ್ ಉಪಸ್ಥಿತರಿದ್ದರು.
CONGRESS
ರಾಜ್ಯ ಸಚಿವ ಸಂಪುಟ ವಿಸ್ತರಣೆ: ಕಾಂಗ್ರೆಸ್ ಹೈಕಮಾಂಡ್‌ನಿಂದ ಅಂತಿಮ ಪಟ್ಟಿ ಬಿಡುಗಡೆ!
ಬೆಂಗಳೂರು: ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಎಐಸಿಸಿ (AICC) ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಅಂತಿಮ ಅನುಮೋದಿತ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷರು ಅನುಮೋದಿಸಿರುವ ಈ ಪಟ್ಟಿಯಲ್ಲಿ 20 ನೂತನ ಸಚಿವರ ಹೆಸರುಗಳು ಹಾಗೂ ಶಾಸಕಾಂಗದ ಪ್ರಮುಖ ಹುದ್ದೆಗಳ ಹೆಸರುಗಳನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ.

ಸಂಪುಟ ಸೇರಲಿರುವ 20 ನೂತನ ಸಚಿವರ ಅಧಿಕೃತ ಪಟ್ಟಿ:
- ಪಿ. ಎಂ. ನರೇಂದ್ರಸ್ವಾಮಿ
- ಶಿವರಾಜ್ ತಂಗಡಗಿ
- ರುದ್ರಪ್ಪ ಲಮಾಣಿ
- ಕೆ. ಎಸ್. ಬಸವಂತಪ್ಪ
- ಬಿ. ನಾಗೇಂದ್ರ
- ಟಿ. ರಘುಮೂರ್ತಿ
- ಬಿ. ಝಡ್. ಝಮೀರ್ ಅಹ್ಮದ್ ಖಾನ್
- ರಿಜ್ವಾನ್ ಅರ್ಷದ್
- ಸಂತೋಷ್ ಲಾಡ್
- ಮಧು ಬಂಗಾರಪ್ಪ
- ಪುಟ್ಟರಂಗಶೆಟ್ಟಿ
- ಎಸ್ ಎಸ್ ಮಲ್ಲಿಕಾರ್ಜುನ
- ಡಾ. ಅಜಯ್ ಸಿಂಗ್
- ಎನ್. ಚೆಲುವರಾಯಸ್ವಾಮಿ
- ಕೆ. ಎಂ. ಶಿವಲಿಂಗೇಗೌಡ
- ಹೆಚ್. ಸಿ. ಬಾಲಕೃಷ್ಣ
- ಗಾಯತ್ರಿ ಶಾಂತೇಗೌಡ
- ಬಸವರಾಜ ರಾಯರೆಡ್ಡಿ
- ವಿಜಯಾನಂದ ಕಾಶಪ್ಪನವರ್
- ಲಕ್ಷ್ಮಣ ಸವದಿ
ಶಾಸಕಾಂಗ ಹಾಗೂ ಮೇಲ್ಮನೆಯ ಪ್ರಮುಖ ಹುದ್ದೆಗಳ ನೇಮಕಾತಿ:
ಸಚಿವರ ಪಟ್ಟಿಯ ಜೊತೆಗೆ ವಿಧಾನಸಭೆ ಮತ್ತು ವಿಧಾನಪರಿಷತ್ತಿನ ಪ್ರಮುಖ ಹುದ್ದೆಗಳಿಗೂ ಅಭ್ಯರ್ಥಿಗಳನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದೆ:
- ವಿಧಾನಸಭಾ ಸ್ಪೀಕರ್ (ಸಭಾಧ್ಯಕ್ಷರು): ಜಿ. ಎಸ್. ಪಾಟೀಲ್
- ವಿಧಾನಸಭಾ ಡೆಪ್ಯೂಟಿ ಸ್ಪೀಕರ್ (ಉಪಸಭಾಧ್ಯಕ್ಷರು): ಎ. ಎಸ್. ಪೊನ್ನಣ್ಣ
- ವಿಧಾನಪರಿಷತ್ ಸಭಾಪತಿ: ಸಲೀಂ ಅಹ್ಮದ್
- ವಿಧಾನಪರಿಷತ್ ಉಪಸಭಾಪತಿ: ಉಮಾಶ್ರೀ
ಈ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಮುದ್ರೆ ಒತ್ತಿದ್ದು, ಶೀಘ್ರದಲ್ಲೇ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ
crime
ರೆಖ್ಯದಲ್ಲಿ ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ
- ರೆಖ್ಯದ ಮುಚ್ಚಿರಡ್ಡ ಎಂಬಲ್ಲಿ ಘಟನೆ
- ದಾರಿಯಲ್ಲಿ ರೈನ್‌ಕೋಟ್, ಆನೆ ಹೆಜ್ಜೆ ಪತ್ತೆ
- ಕಣಿವೆಯಲ್ಲಿ ಸಿಕ್ಕ ಮೃತದೇಹ
ನೆಲ್ಯಾಡಿ: ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ದಿನಗೂಲಿ ಕಾರ್ಮಿಕರೊಬ್ಬರು ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕ ಎಂಬಲ್ಲಿ ನಡೆದಿದೆ.
ಇಡ್ಮಾಲು ನಿವಾಸಿ ಬಾಲಕೃಷ್ಣ ಗೌಡ (55) ಮೃತಪಟ್ಟವರು.
ನೆಡೆಯದ್ದೇನು?: ಬಾಲಕೃಷ್ಣ ಗೌಡ ಅವರು ಎಂದಿನಂತೆ ಕೆಲಸ ಮುಗಿಸಿಕೊಂಡು ಸಂಜೆ ಮನೆಗೆ ಹಿಂತಿರುಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ರಾತ್ರಿಯಾದರೂ ಅವರು ಮನೆಗೆ ಬಾರದಿದ್ದಾಗ ಆತಂಕಗೊಂಡ ಕುಟುಂಬಸ್ಥರು ಹಾಗೂ ಸ್ಥಳೀಯ ಗ್ರಾಮಸ್ಥರು ಹುಡುಕಾಟ ಆರಂಭಿಸಿದ್ದರು. ಈ ವೇಳೆ ಅವರು ಧರಿಸಿದ್ದರೆನ್ನಲಾದ ಪ್ಲಾಸ್ಟಿಕ್ ರೈನ್‌ಕೋಟ್ ದಾರಿಯಲ್ಲಿ ಬಿದ್ದಿರುವುದು ಕಂಡುಬಂದಿದೆ.
ಅಷ್ಟೇ ಅಲ್ಲದೆ, ಅದರ ಪಕ್ಕದಲ್ಲೇ ಕಾಡಾನೆಯ ಹೆಜ್ಜೆ ಗುರುತುಗಳೂ ಪತ್ತೆಯಾಗಿದ್ದರಿಂದ ಆನೆ ದಾಳಿ ನಡೆಸಿರುವ ಅನುಮಾನ ಬಲಗೊಂಡಿತ್ತು. ಬಳಿಕ ಸ್ಥಳೀಯರು ಅರಣ್ಯ ಇಲಾಖೆಯ ಸಿಬ್ಬಂದಿಯೊಂದಿಗೆ ಶೋಧ ಮುಂದುವರಿಸಿದಾಗ ಸಮೀಪದ ಕಣಿವೆಯಲ್ಲಿ ಬಾಲಕೃಷ್ಣ ಗೌಡ ಅವರ ಮೃತದೇಹ ಪತ್ತೆಯಾಗಿದೆ.
ಅಧಿಕಾರಿಗಳ ಭೇಟಿ: ವಿಷಯ ತಿಳಿಯುತ್ತಿದ್ದಂತೆ ಭಾನುವಾರ ಸ್ಥಳಕ್ಕೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ಬಯ್ಯ ನಾಯ್ಕ, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಎಚ್.ಪಿ., ಉಪವಲಯ ಅರಣ್ಯಾಧಿಕಾರಿಗಳು, ಧರ್ಮಸ್ಥಳ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸಮರ್ಥ ಗಾಣಿಗೇರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.
ಅರಸಿನಮಕ್ಕಿ-ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಅವಿನಾಶ್ ಭಿಡೆ, ರಮೇಶ್ ಬೈರಕಟ್ಟ ಹಾಗೂ ಸದಸ್ಯರು, ಸ್ಥಳೀಯ ಸಾರ್ವಜನಿಕರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದರು.
ಸ್ಥಳದಲ್ಲೇ ಮೃತದೇಹದ ಮಹಜರು ನಡೆಸಿದ ಪೊಲೀಸರು, ಮರಣೋತ್ತರ ಪರೀಕ್ಷೆಗಾಗಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಅರಣ್ಯ ಇಲಾಖೆ ಹಾಗೂ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

-
Bantawala3 weeks agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime6 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime4 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala4 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
accident2 weeks agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
Bantawala7 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Bantawala4 weeks agoಮಂಚಿ ಮೋಂತಿಮಾರು: ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಕತ್ತಿಯಿಂದ ಮಾರಣಾಂತಿಕ ದಾಳಿ; ಯುವತಿ ಗಂಭೀರ
