Bantawala
ಕುಳ ಕಂದಾಯ ಕಛೇರಿಯಲ್ಲಿ ಧರಣ್ ದರ್ಭಾರ್..ನಾಗರಿಕರು ಹೈರಾಣ..ಜಿಲ್ಲಾಧಿಕಾರಿಗೆ ದೂರು..
ಬಂಟ್ವಾಳ: ತಾಲೂಕಿನ ಕುಳ ಗ್ರಾಮದ ಆಡಳಿತ ಅಧಿಕಾರಿಯ (VA) ಕಚೇರಿಯು ಸಾರ್ವಜನಿಕರ ಸೇವೆಗೆ ಇರಬೇಕಾದ ಸರ್ಕಾರಿ ಕಚೇರಿಯೋ ಅಥವಾ ಖಾಸಗಿ ವ್ಯಕ್ತಿಗಳ ಹಣ ವಸೂಲಿ ಕೇಂದ್ರವೋ ಎನ್ನುವ ಅನುಮಾನ ಈಗ ಸಾರ್ವಜನಿಕ ವಲಯದಲ್ಲಿ ತೀವ್ರವಾಗಿ ಕಾಡಲಾರಂಭಿಸಿದೆ. ಕಚೇರಿಯೊಳಗೆ ಧರಣ್ ಮಾಣಿ ಎಂಬ ಖಾಸಗಿ ಬ್ರೋಕರ್‌ನನ್ನು ಕಾನೂನುಬಾಹಿರವಾಗಿ ಕೂರಿಸಿಕೊಂಡು, ಅಮಾಯಕ ಗ್ರಾಮೀಣ ಜನರಿಂದ ಹಣ ಸುಲಿಗೆ ಮಾಡುತ್ತಿರುವ ಜಿಗಣೆ ದಂಧೆ ಬೆಳಕಿಗೆ ಬಂದಿದೆ.
ಕಚೇರಿ ಕೆಲಸಕ್ಕೆ ಬಂದರೆ ಜೇಬಿಗೆ ಕತ್ತರಿ!
ಕುಳ ಮತ್ತು ಇಡ್ಕಿದು ಜೋಡು ಗ್ರಾಮಗಳಾಗಿದ್ದು, ಇಲ್ಲಿನ ಕಂದಾಯ ಕಚೇರಿಗೆ ವಿವಿಧ ಕೆಲಸ ಕಾರ್ಯಗಳಿಗಾಗಿ ಬರುವ ಬಡ, ಅಮಾಯಕ ಜನರನ್ನು ಗುರಿಯಾಗಿಸಿಕೊಂಡು ಈ ದಲ್ಲಾಳಿ ಜಾಲ ಕಾರ್ಯಾಚರಣೆ ನಡೆಸುತ್ತಿದೆ. ಕಚೇರಿ ಕೆಲಸಗಳಿಗಾಗಿ ಬರುವ ಸಾರ್ವಜನಿಕರಿಂದ ರಾಜಾರೋಷವಾಗಿ ಹಣ ವಸೂಲಿ ಮಾಡಲಾಗುತ್ತಿದೆ. ಒಂದು ವೇಳೆ ಬೇಡಿಕೆಯಿಟ್ಟಷ್ಟು ಹಣ ನೀಡದಿದ್ದರೆ, ಅಂತವರ ಫೈಲ್‌ಗಳನ್ನು ಉದ್ದೇಶಪೂರ್ವಕವಾಗಿ ವಿಳಂಬ ಮಾಡಿಸಿ, ಜನ ಸಾಮಾನ್ಯರಿಗೆ ಮಾನಸಿಕ ಕಿರುಕುಳ ನೀಡಲಾಗುತ್ತಿದೆ ಎಂದು ಕುಳ ಗ್ರಾಮಸ್ಥರು ನೇರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಲ್ಲಾಳಿಗೆ ಗ್ರಾಮ ಸಹಾಯಕ ರಾಘವನ ‘ಶ್ರೀರಕ್ಷೆ’!
ಈ ಇಡೀ ಅಕ್ರಮ ದಂಧೆಯ ಹಿಂದೆ ಕುಳ ಗ್ರಾಮದ ಸಹಾಯಕನಾಗಿರುವ ಇಡೀದು ಗ್ರಾಮದ ರಾಘವ ಗೌಡ ಎಂಬಾತನ ಪೂರ್ಣ ಶ್ರೀರಕ್ಷೆ ಹಾಗೂ ಶಾಮೀಲಾತಿ ಇರುವುದು ಸಾಕ್ಷ್ಯಸಮೇತ ಬಹಿರಂಗವಾಗಿದೆ. ದಿನಾಂಕ 08/06/2026 ರಂದು ಬೆಳಿಗ್ಗೆ 9:18 ರ ಸುಮಾರಿಗೆ ಸ್ಥಳೀಯ ನಾಗರಿಕರಾದ ಸಚಿನ್ ಉರಿಮಜಲು ಅವರು ಕಚೇರಿಗೆ ಭೇಟಿ ನೀಡಿದಾಗ, ಗ್ರಾಮ ಸಹಾಯಕನ ಅಧಿಕೃತ ಪೀಠದಲ್ಲೇ ಈ ಬ್ರೋಕರ್ ಧರಣ್ ಆಸೀನನಾಗಿ ದರ್ಬಾರ್ ನಡೆಸುತ್ತಿದ್ದ ದೃಶ್ಯ ಕಂಡುಬಂದಿದೆ. ಇದನ್ನು ಸಚಿನ್ ಅವರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿಯಲು ಯತ್ನಿಸಿದಾಗ, ಗ್ರಾಮ ಸಹಾಯಕ ರಾಘವ ತಕರಾರು ಎಬ್ಬಿಸಿದ್ದಲ್ಲದೆ, ಕಚೇರಿಯ ಫೈಲ್/ಪುಸ್ತಕವನ್ನು ಮುಖಕ್ಕೆ ಅಡ್ಡ ಹಿಡಿದು ಅಕ್ರಮವನ್ನು ಮುಚ್ಚಿಹಾಕಲು ಹರಸಾಹಸ ಪಟ್ಟಿದ್ದಾನೆ!
ತನ್ನನ್ನು ವಿಎ (ಗ್ರಾಮ ಆಡಳಿತ ಅಧಿಕಾರಿ) ಮತ್ತು ರಾಘವ ಅವರೇ ಇಲ್ಲಿಗೆ ನೇಮಿಸಿದ್ದಾರೆ ಎಂದು ಸ್ವತಃ ದಲ್ಲಾಳಿ ಧರಣ್ ಒಪ್ಪಿಕೊಂಡಿರುವುದು ಕಂದಾಯ ಇಲಾಖೆಯೊಳಗಿನ ಭ್ರಷ್ಟಾಚಾರದ ಜಾಲವನ್ನು ಬಿಚ್ಚಿಟ್ಟಿದೆ.

ಜಾರಿಕೊಂಡ ಗ್ರಾಮ ಆಡಳಿತ ಅಧಿಕಾರಿ ಅನಿಲ್ ಕುಮಾರ್!
ಸರ್ಕಾರಿ ಕಚೇರಿಯಲ್ಲಿ ಖಾಸಗಿ ವ್ಯಕ್ತಿಯೊಬ್ಬ ಕುರ್ಚಿ ಹಾಕಿ ದರ್ಬಾರ್ ನಡೆಸುತ್ತಿರುವ ಬಗ್ಗೆ ಪತ್ರಿಕೆಯು ಗ್ರಾಮ ಆಡಳಿತ ಅಧಿಕಾರಿ (VA) ಅನಿಲ್ ಕುಮಾರ್ ಅವರನ್ನು ಪ್ರಶ್ನಿಸಿದಾಗ, ಅವರು ಜಾರಿಕೊಳ್ಳುವ ಉತ್ತರ ನೀಡಿದ್ದಾರೆ. “ನಾನು ಕುಳ ಗ್ರಾಮದಲ್ಲಿ ವಾರಕ್ಕೆ ಎರಡು ದಿನ ಮಾತ್ರ ಪ್ರಭಾರಿಯಾಗಿ ಕರ್ತವ್ಯ ನಿರ್ವಹಿಸುತ್ತೇನೆ. ಉಳಿದ ದಿನಗಳಲ್ಲಿ ಗ್ರಾಮ ಸಹಾಯಕ ರಾಘವ ಇರುತ್ತಾರೆ. ಕಚೇರಿಯೊಳಗೆ ದಲ್ಲಾಳಿ ಇರುವ ಬಗ್ಗೆ ನನಗೆ ತಿಳಿದಿಲ್ಲ, ನಾನು ಯಾರನ್ನೂ ನೇಮಿಸಿಲ್ಲ” ಎಂದು ದಿನಾಂಕ 10/06/2026 ರಂದು ಹೇಳಿಕೆ ನೀಡಿದ್ದಾರೆ. ಆದರೆ, ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿರುವುದರಿಂದಲೇ ಇಂತಹ ದಲ್ಲಾಳಿಗಳು ಸರ್ಕಾರಿ ಕಚೇರಿಗಳನ್ನು ತಮ್ಮ ಅಡ್ಡೆಯನ್ನಾಗಿ ಮಾಡಿಕೊಳ್ಳಲು ಸಾಧ್ಯವಾಗಿದೆ ಎಂದು ಸಾರ್ವಜನಿಕರು ಆಪಾದಿಸಿದ್ದಾರೆ.
ತಹಶೀಲ್ದಾರ್, ಜಿಲ್ಲಾಧಿಕಾರಿಗಳಿಗೆ ದೂರು: ಹೋರಾಟದ ಎಚ್ಚರಿಕೆ
ಅಮಾಯಕರನ್ನು ವಂಚಿಸಿ ಹಣ ವಸೂಲಿ ಮಾಡುತ್ತಿರುವ ಬ್ರೋಕರ್ ಧರಣ್‌ನನ್ನು ತಕ್ಷಣವೇ ಕಚೇರಿಯಿಂದ ತೆರವುಗೊಳಿಸಬೇಕು ಮತ್ತು ಆತನಿಗೆ ಕಚೇರಿಯೊಳಗೆ ಅಕ್ರಮವಾಗಿ ನೆಲೆಸಲು ಆಶ್ರಯ ನೀಡಿದ ಗ್ರಾಮ ಸಹಾಯಕ ರಾಘವ ವಿರುದ್ಧ ತಕ್ಷಣವೇ ಶಿಸ್ತು ಹಾಗೂ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ದೂರುದಾರರಾದ ಸಚಿನ್ ಉರಿಮಜಲು ಅವರು ಬಂಟ್ವಾಳ ತಹಶೀಲ್ದಾರರಿಗೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಹಾಗೂ ಮಂಗಳೂರು ಸಹಾಯಕ ಕಮಿಷನರ್ ಅವರಿಗೆ ಜಿಪಿಎಸ್ ಫೋಟೋ ಸಾಕ್ಷ್ಯಗಳ ಸಮೇತ ಲಿಖಿತ ದೂರು ಸಲ್ಲಿಸಿದ್ದಾರೆ.
“ಸರ್ಕಾರಿ ಕಚೇರಿಯನ್ನು ಇವರು ತಮ್ಮ ಹಿರಿಯರ ಖಾಸಗಿ ಆಸ್ತಿ ಎಂದುಕೊಂಡಿದ್ದಾರೆಯೇ? ಕೂಡಲೇ ಈ ಭ್ರಷ್ಟ ಜಾಲದ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಮಾಧ್ಯಮ ಮಿತ್ರರನ್ನು ಕರೆಸಿ ಸಾರ್ವಜನಿಕರನ್ನು ಒಟ್ಟುಗೂಡಿಸಿ ಉಗ್ರ ಪ್ರತಿಭಟನೆ ನಡೆಸಲಾಗುವುದು” ಎಂದು ದೂರುದಾರರು ಎಚ್ಚರಿಸಿದ್ದಾರೆ.



Bantawala
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷತೆಗೆ ಹನೀಫ್ ಬಗ್ಗುಮೂಲೆ ಅರ್ಜಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಸಾರಥ್ಯ ವಹಿಸಲು ಪಕ್ಷದ ಹಿರಿಯ, ನಿಷ್ಠಾವಂತ ಹಾಗೂ ನೇರ ನಡೆ-ನುಡಿಯ ಪ್ರಭಾವಿ ನಾಯಕ ಹನೀಫ್ ಬಗ್ಗುಮೂಲೆ ಅವರು ಅಧಿಕೃತವಾಗಿ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಮೂರು ದಶಕಗಳಿಂದ ಪಕ್ಷ ಹಾಗೂ ಸಮಾಜಸೇವೆಯಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇವರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ.
ಮೂರು ದಶಕಗಳ ಸುದೀರ್ಘ ರಾಜಕೀಯ ಪಯಣ
ಬಂಟ್ವಾಳ ತಾಲೂಕು ಕುಳ ಗ್ರಾಮದ ಬಗ್ಗುಮೂಲೆ ನಿವಾಸಿಯಾಗಿರುವ ಹನೀಫ್ ಅವರು ಕಳೆದ 30 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳಿಗೆ ಬದ್ಧರಾಗಿ ನಿರಂತರವಾಗಿ ಶ್ರಮಿಸಿದವರು. ಬಾಲ್ಯದಿಂದಲೇ ಸಾಮಾಜಿಕ ಕಳಕಳಿ ಬೆಳೆಸಿಕೊಂಡಿದ್ದ ಇವರು, ಪಕ್ಷದ ಧ್ವಜದಡಿಯಲ್ಲಿ ಉಚಿತ ಮೆಡಿಕಲ್ ಕ್ಯಾಂಪ್‌ಗಳು, ರಕ್ತದಾನ ಶಿಬಿರಗಳು, ಕ್ರೀಡಾ ಕೂಟಗಳು ಹಾಗೂ ಧಾರ್ಮಿಕ ಸಮಾರಂಭಗಳನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಜನಮಾನಸದಲ್ಲಿ ಆಪತ್ಬಾಂಧವನಾಗಿ ನೆಲೆಸಿದ್ದಾರೆ.
ಸಂಸ್ಥಾಪನಾ ಹೆಜ್ಜೆಗಳು ಮತ್ತು ವಹಿಸಿದ ಜವಾಬ್ದಾರಿಗಳು
ಇವರ ನಿಸ್ಪಕ್ಷಪಾತ ಸೇವೆ ಮತ್ತು ಸಂಘಟನಾ ಚತುರತೆಯನ್ನು ಗುರುತಿಸಿದ ಕಾಂಗ್ರೆಸ್ ಪಕ್ಷ, ಇವರಿಗೆ ವಿವಿಧ ಹಂತಗಳಲ್ಲಿ ಜವಾಬ್ದಾರಿಗಳನ್ನು ನೀಡಿ ಗೌರವಿಸಿದೆ:
ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸೇವಾದಳ: ಅಧ್ಯಕ್ಷರಾಗಿ 3 ವರ್ಷಗಳ ಕಾಲ ಯಶಸ್ವಿ ಸೇವೆ.
ಜಿಲ್ಲಾ ಕಾಂಗ್ರೆಸ್ ಸೇವಾದಳ: ಸಂಘಟನಾ ಕಾರ್ಯದರ್ಶಿಯಾಗಿ ಪಕ್ಷದ ತಳಮಟ್ಟದ ಸಂಘಟನೆ.
ಕೆಪಿಸಿಸಿ (KPCC): ರಾಜ್ಯ ಮಟ್ಟದ ಕಾರ್ಮಿಕ ವಿಭಾಗದ ಕಾರ್ಯದರ್ಶಿಯಾಗಿ ಶ್ರಮಿಕರ ಪರ ಧ್ವನಿ.
ರಾಷ್ಟ್ರೀಯ ರಾಜೀವ ಗಾಂಧಿ ಜ್ಯೋತಿಯಾತ್ರೆ ಸಮಿತಿ: ಪ್ರಸ್ತುತ ಪ್ರಧಾನ ಕಾರ್ಯದರ್ಶಿಯಾಗಿ ದೇಶಾದ್ಯಂತ ವ್ಯಾಪಕ ಕಾರ್ಯಾಚರಣೆ ಹಾಗೂ ಪಕ್ಷದ ಸಿದ್ಧಾಂತಗಳ ಪ್ರಚಾರ.
ಪ್ರಶಸ್ತಿ ಹಾಗೂ ಪುರಸ್ಕಾರ
ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಅಪಾರ ಜನಸೇವೆ ಸಲ್ಲಿಸಿರುವ ಹನೀಫ್ ಬಗ್ಗುಮೂಲೆ ಅವರ ನಿರಂತರ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ “ಗಡಿನಾಡ ರಾಜ್ಯ ಪ್ರಶಸ್ತಿ” ನೀಡಿ ಗೌರವಿಸಲಾಗಿದೆ.
ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸಲು ಮತ್ತು ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯಲು ತಮ್ಮ ಅನುಭವ ಮತ್ತು ಬದ್ಧತೆ ಸಹಕಾರಿಯಾಗಲಿದೆ ಎಂಬ ವಿಶ್ವಾಸದೊಂದಿಗೆ ಅವರು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದಾರೆ.

Bantawala
ದಕ್ಷಿಣ ಕನ್ನಡ: ರಾಯಿ ಸಮೀಪ ನದಿಯಲ್ಲಿ ಕೊಚ್ಚಿಹೋಗಿದ್ದ ವ್ಯಕ್ತಿಯ ಮೃತದೇಹ ಸಂಗಬೆಟ್ಟುವಿನಲ್ಲಿ ಪತ್ತೆ
ಮಂಗಳೂರು: ಬಂಟ್ವಾಳ ತಾಲೂಕಿನ ರಾಯಿ ಸಮೀಪ ಶನಿವಾರ ತಡರಾತ್ರಿ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಹೋಗಿದ್ದ 48 ವರ್ಷದ ವ್ಯಕ್ತಿಯೊಬ್ಬರ ಮೃತದೇಹವು ಸೋಮವಾರ ಬೆಳಿಗ್ಗೆ ಸಂಗಬೆಟ್ಟು ಪ್ರದೇಶದಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರನ್ನು ರಾಯಿ ನಿವಾಸಿ ಜೀವನ್ ಪಿಂಟೊ (48) ಎಂದು ಗುರುತಿಸಲಾಗಿದೆ.
ಘಟನೆಯ ವಿವರ: ಶನಿವಾರ ತಡರಾತ್ರಿ ಜೀವನ್ ಪಿಂಟೊ ಅವರು ತೋಡಿನ ಆಚೆಗಿರುವ ತಮ್ಮ ಮಾವನ ಮನೆಗೆ ತೆರಳಲು ಕಾಲುಸಂಕದ ಮೇಲೆ ನದಿ ದಾಟುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿತ್ತು. ಘಟನಾ ಸ್ಥಳದಲ್ಲಿ ಅವರ ಚಪ್ಪಲಿ ಹಾಗೂ ಟಾರ್ಚ್‌ಲೈಟ್ ಪತ್ತೆಯಾಗಿದ್ದರೂ, ಅವರು ನೀರಿಗೆ ಬಿದ್ದಿದ್ದಾರೋ ಅಥವಾ ಬೇರೆಡೆ ತೆರಳಿದ್ದಾರೋ ಎಂಬುದು ಅಧಿಕೃತವಾಗಿ ದೃಢಪಟ್ಟಿರಲಿಲ್ಲ.

ಸತತ ಶೋಧ ಕಾರ್ಯಾಚರಣೆ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಮತ್ತು ನದಿಯಲ್ಲಿ ಹರಿಯುತ್ತಿರುವ ಪ್ರಬಲ ನೀರಿನ ಸೆಳೆತದ ನಡುವೆಯೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಹಾಗೂ ಸ್ಥಳೀಯ ಮುಳುಗುತಜ್ಞರು ಮತ್ತು ಗ್ರಾಮಸ್ಥರು ಕಳೆದ ಎರಡು ದಿನಗಳಿಂದ ಜಂಟಿಯಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದರು.
ಸತತ ಕಾರ್ಯಾಚರಣೆಯ ಫಲವಾಗಿ ಸೋಮವಾರ ಬೆಳಿಗ್ಗೆ ಸಂಗಬೆಟ್ಟು ಸಮೀಪ ಅವರ ಮೃತದೇಹ ಪತ್ತೆಯಾಗಿದೆ. ತಕ್ಷಣವೇ ಮೃತದೇಹವನ್ನು ನದಿಯಿಂದ ಹೊರತೆಗೆದ ಅಧಿಕಾರಿಗಳು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಕಾನೂನು ಹಾಗೂ ಮರಣೋತ್ತರ ಪರೀಕ್ಷೆಯ ಪ್ರಕ್ರಿಯೆಗಳನ್ನು ಕೈಗೊಂಡಿದ್ದಾರೆ.
Bantawala
ಬಸ್‌ನಲ್ಲಿ ಅಸಭ್ಯ ವರ್ತನೆ: ವಿಕೃತಕಾಮಿ ವೃದ್ಧ ಅರ್ಚಕನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಕೇಸ್ ದಾಖಲು!
ಬಂಟ್ವಾಳ: ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಎದುರು ಖಾಸಗಿ ಅಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ವೃದ್ಧನೊಬ್ಬನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯ ವಿವರ:
ಜುಲೈ 30ರಂದು ಮಂಗಳೂರಿನ ಸ್ಟೇಟ್ ಬ್ಯಾಂಕ್‌ನಿಂದ ಉಪ್ಪಿನಂಗಡಿಗೆ ಹೊರಟಿದ್ದ ಖಾಸಗಿ ಬಸ್‌ನಲ್ಲಿ ಈ ಘಟನೆ ನಡೆದಿದೆ. ಮಧ್ಯಾಹ್ನ 2.10ರ ಸುಮಾರಿಗೆ ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ಬಸ್ ಏರಿದ್ದ ಸುಮಾರು 60–70 ವರ್ಷ ಪ್ರಾಯದ ವ್ಯಕ್ತಿಯೊಬ್ಬ, ಚಾಲಕನ ಎಡಭಾಗದ ಅಡ್ಡ ಸೀಟಿನಲ್ಲಿ ಕುಳಿತುಕೊಂಡಿದ್ದ. ಪ್ರಯಾಣದ ವೇಳೆ ಎದುರಿನ ಸೀಟಿನಲ್ಲಿದ್ದ ಮಹಿಳೆಯರಿಗೆ ಕಾಣುವಂತೆ ಅಸಭ್ಯವಾಗಿ ಗುಪ್ತಾಂಗ ಪ್ರದರ್ಶಿಸಿ ವಿಕೃತಿ ಮೆರೆದಿದ್ದಾನೆ.
ಮಹಿಳೆಯ ಧೈರ್ಯ, ವೈರಲ್ ವೀಡಿಯೋ:
ವೃದ್ಧನ ನೀಚ ಕೃತ್ಯವನ್ನು ಕಂಡು ಆಕ್ರೋಶಗೊಂಡ ಬಸ್‌ನಲ್ಲಿದ್ದ ಮಹಿಳೆಯೊಬ್ಬರು ಧೈರ್ಯದಿಂದ ತಮ್ಮ ಮೊಬೈಲ್‌ನಲ್ಲಿ ಆತನ ವಿಕೃತಿಯನ್ನು ವೀಡಿಯೋ ರೆಕಾರ್ಡ್ ಮಾಡಿದ್ದಾರೆ. ಇದನ್ನು ಗಮನಿಸಿದ ವೃದ್ಧ, ಮೆಲ್ಕಾರ್ ಜಂಕ್ಷನ್ ತಲುಪುತ್ತಿದ್ದಂತೆ ಗಾಬರಿಯಿಂದ ಬಸ್‌ನಿಂದ ಇಳಿದು ಪರಾರಿಯಾಗಿದ್ದ. ಬಳಿಕ ಈ ವಿಷಯ ಬಸ್ ಚಾಲಕನ ಗಮನಕ್ಕೂ ಬಂದಿತ್ತು. ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು ಆರೋಪಿಯ ಗುರುತು ಪತ್ತೆ ಹಚ್ಚಿದ್ದು, ಆತ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಸಾದಿಕುಕ್ಕು ಅಂಗನವಾಡಿ ಬಳಿಯ ನಿವಾಸಿ ಹಾಗೂ ವೃತ್ತಿಯಲ್ಲಿ ಅರ್ಚಕ ಎಂದು ತಿಳಿದುಬಂದಿದೆ.
ಬಂಟ್ವಾಳ ಠಾಣೆಯಲ್ಲಿ ದೂರು:
ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.ಕ್ರ. 107/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 75(2)ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
-
Bantawala3 weeks agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್‌ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime6 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime4 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala4 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
accident2 weeks agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
Bantawala7 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Bantawala4 weeks agoಮಂಚಿ ಮೋಂತಿಮಾರು: ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಕತ್ತಿಯಿಂದ ಮಾರಣಾಂತಿಕ ದಾಳಿ; ಯುವತಿ ಗಂಭೀರ
