Connect with us

crime

ಮತ್ತೆ ಸದ್ದು ಮಾಡಿದ ಮುತ್ತಪ್ಪ ರೈ ಪುತ್ರನ ಲ್ಯಾಂಬೋರ್ಗಿನಿ; ಏರ್‌ಪೋರ್ಟ್ ರಸ್ತೆಯಲ್ಲಿ ಅತಿವೇಗ, ಬೆಂಕಿ ಉಗುಳಿದ ಕಾರಿಗೆ ಪೊಲೀಸರ ನೋಟಿಸ್!

Published

on

ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಅವರ ಐಷಾರಾಮಿ ಲ್ಯಾಂಬೋರ್ಗಿನಿ ಕಾರು ಮತ್ತೆ ಸುದ್ದಿಯಲ್ಲಿದೆ. ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ ಅತಿವೇಗವಾಗಿ ಚಾಲನೆ ಮಾಡಿ, ಕರ್ಕಶ ಶಬ್ದದೊಂದಿಗೆ ಸೈಲೆನ್ಸರ್‌ನಲ್ಲಿ ಬೆಂಕಿ ಉಗುಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ದೇವನಹಳ್ಳಿ ಸಂಚಾರಿ ಪೊಲೀಸರು ರಿಕ್ಕಿ ರೈ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

ಏನಿದು ಘಟನೆ?

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ KA 05 NR 0009 ನೋಂದಣಿ ಸಂಖ್ಯೆಯ ಲ್ಯಾಂಬೋರ್ಗಿನಿ ಕಾರು ಅತ್ಯಂತ ಅಪಾಯಕಾರಿ ರೀತಿಯಲ್ಲಿ ಸಂಚರಿಸುತ್ತಿತ್ತು. ಕಾರಿನ ಸೈಲೆನ್ಸರ್‌ನಿಂದ ಬೆಂಕಿ ಹೊರಬರುತ್ತಿದ್ದ ದೃಶ್ಯವನ್ನು ಹಿಂಬದಿಯ ವಾಹನ ಸವಾರರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪೊಲೀಸರು ದಾಖಲಿಸಿರುವ ಸೆಕ್ಷನ್‌ಗಳು:

ಮೋಟಾರು ವಾಹನ ಕಾಯ್ದೆಯ ನಿಯಮಗಳನ್ನು ಗಾಳಿಗೆ ತೂರಿ ಚಲಾಯಿಸಿದ ಹಿನ್ನೆಲೆಯಲ್ಲಿ ಕಲಂ 184: ಅಪಾಯಕಾರಿ ಮತ್ತು ನಿರ್ಲಕ್ಷ್ಯದ ಚಾಲನೆ. ಕಲಂ 52: ವಾಹನದಲ್ಲಿ ಅನಧಿಕೃತ ಬದಲಾವಣೆ (Modification). ಕಲಂ 190(2): ಶಬ್ದ ಮಾಲಿನ್ಯ ಮತ್ತು ನಿಯಮಗಳ ಉಲ್ಲಂಘನೆ. ಕಲಂ 177: ಸಂಚಾರಿ ನಿಯಮಗಳ ಸಾಮಾನ್ಯ ಉಲ್ಲಂಘನೆ. ಕಲಂಗಳಡಿ ಕೇಸ್ ದಾಖಲಿಸಲಾಗಿದೆ:

“ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟುಮಾಡುವ ರೀತಿಯಲ್ಲಿ ವಾಹನ ಚಾಲನೆ ಮಾಡಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದ್ದು, ಕಠಿಣ ಕ್ರಮ ಕೈಗೊಳ್ಳಲಾಗುವುದು.” – ದೇವನಹಳ್ಳಿ ಸಂಚಾರಿ ಪೊಲೀಸರು.

ಮೂರು ದಿನಗಳ ಗಡುವು

ದೇವನಹಳ್ಳಿ ಸಂಚಾರಿ ಪೊಲೀಸರು ರಿಕ್ಕಿ ರೈಗೆ ನೋಟಿಸ್ ಜಾರಿ ಮಾಡಿದ್ದು, ಮುಂದಿನ ಮೂರು ದಿನಗಳ ಒಳಗಾಗಿ ಸಂಬಂಧಪಟ್ಟ ವಾಹನ ಮತ್ತು ಅಗತ್ಯ ದಾಖಲಾತಿಗಳೊಂದಿಗೆ ಠಾಣೆಗೆ ಹಾಜರಾಗಲು ಸೂಚಿಸಿದ್ದಾರೆ. ಒಂದು ವೇಳೆ ನಿಗದಿತ ಸಮಯದಲ್ಲಿ ಹಾಜರಾಗದಿದ್ದರೆ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಹಿಂದೆಯೂ ಸೀಜ್ ಆಗಿದ್ದ ಕಾರು!

ಇದೇ ವರ್ಷ ಮಾರ್ಚ್ 21 ರಂದು ಬೆಂಗಳೂರಿನ ಅನಿಲ್ ಕುಂಬ್ಳೆ ಸರ್ಕಲ್ ಹಾಗೂ ಕಬ್ಬನ್ ರಸ್ತೆಯಲ್ಲಿ ಇದೇ ಲ್ಯಾಂಬೋರ್ಗಿನಿ ಕಾರಿನಲ್ಲಿ ಡ್ರಿಫ್ಟಿಂಗ್ ಮಾಡಿದ್ದಕ್ಕಾಗಿ ಕಬ್ಬನ್ ಪಾರ್ಕ್ ಪೊಲೀಸರು ಕಾರನ್ನು ಸೀಜ್ ಮಾಡಿದ್ದರು. ಬಳಿಕ ನ್ಯಾಯಾಲಯದ ಅನುಮತಿ ಪಡೆದು ಕಾರನ್ನು ಬಿಡಿಸಿಕೊಂಡು ಬರಲಾಗಿತ್ತು. ಆದರೆ ಈಗ ಮತ್ತೆ ಅದೇ ಕಾರು ರಸ್ತೆಯಲ್ಲಿ ಪುಂಡಾಟಿಕೆ ಮೆರೆದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ

“ಚಾಲನಾ ನೈಪುಣ್ಯತೆ” ಎಂಬ ವಕೀಲರ ವಾದಕ್ಕೆ ಅಪಹಾಸ್ಯ!

ಹಳೆಯ ಪ್ರಕರಣದ ವಿಚಾರಣೆ ವೇಳೆ ರಿಕ್ಕಿ ರೈ ಪರ ವಕೀಲರು ಕೋರ್ಟ್‌ನಲ್ಲಿ ಮಂಡಿಸಿದ್ದ ವಾದ ಭಾರಿ ಅಪಹಾಸ್ಯಕ್ಕೆ ಗುರಿಯಾಗಿತ್ತು. “ಅಂದು ಬೆಂಗಳೂರಿನ ರಸ್ತೆ ಸರಿಯಿರಲಿಲ್ಲ, ಹಾಗಾಗಿ ಕಾರು ಸ್ಕಿಡ್ ಆಗಿತ್ತು. ಆ ಸಂದರ್ಭದಲ್ಲಿ ನಮ್ಮ ಕಕ್ಷಿದಾರರು (ರಿಕ್ಕಿ ರೈ) ಅಪಘಾತವಾಗದಂತೆ ತಡೆಯಲು ತಮ್ಮ ಅದ್ಭುತ ಚಾಲನಾ ನೈಪುಣ್ಯತೆಯನ್ನು ಮೆರೆದಿದ್ದರು” ಎಂದು ವಕೀಲರು ಸಮರ್ಥಿಸಿಕೊಂಡಿದ್ದರು. ಈ ವಾದ ಸಾರ್ವಜನಿಕವಾಗಿ ಅಪಹಾಸ್ಯಕ್ಕೆ ಗುರಿಯಾಗಿತ್ತು. ತದನಂತರ ರಿಕ್ಕಿ ರೈ ನ್ಯಾಯಾಲಯದ ಮುಂದೆ ಹಾಜರಾಗಿ ದಂಡ ಪಾವತಿಸಿ ಪ್ರಕರಣದಿಂದ ಮುಕ್ತಿ ಪಡೆದಿದ್ದರು.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

arrest

ಬೆಳ್ತಂಗಡಿ: ಅಕ್ರಮ ಕೋಳಿಅಂಕ ಜೂಜಾಟದ ಅಡ್ಡೆಗೆ ಪೋಲಿಸ್ ದಾಳಿ – ಇಬ್ಬರ ಬಂಧನ, ಸೊತ್ತುಗಳು ಜಪ್ತಿ

Published

on

ಬೆಳ್ತಂಗಡಿ: ತಾಲೂಕಿನ ಬಂದಾರು ಗ್ರಾಮದ ನಿರ್ಮಡ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿಅಂಕ ಜೂಜಾಟದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಸಂಭವಿಸಿದೆ.

ಧರ್ಮಪ್ಪ ಗೌಡ (38) (ಬಂದಾರು ಗ್ರಾಮದ ನಿರ್ಮಡ ನಿವಾಸಿ) ಮತ್ತು ಹರೀಶ್ ಎಸ್. (30) (ಪುತ್ತೂರು ತಾಲೂಕಿನ ನೆಕ್ಕಿಲಾಡಿ ಗ್ರಾಮದ ಬೆಳ್ಳೂರು ನಿವಾಸಿ) ಬಂಧಿತ ಆರೋಪಿಗಳು.

ದಾಳಿಯ ವಿವರ:

ಆಗಸ್ಟ್ 3ರಂದು ಸಂಜೆ ಸುಮಾರು 5:15ರ ವೇಳೆಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್. ಗಾಣಿಗೇರ ಅವರ ನೇತೃತ್ವದ ಪೊಲೀಸ್ ತಂಡ ನಿರ್ಮಡ ಪ್ರದೇಶಕ್ಕೆ ದಾಳಿ ನಡೆಸಿತು. ಈ ವೇಳೆ ಆರೋಪಿಗಳು ಕೋಳಿಗಳ ಕಾಲಿಗೆ ಬಾಳು (ಸಣ್ಣ ಕತ್ತಿ) ಕಟ್ಟಿ, ಪರಸ್ಪರ ಕಾದಾಟಕ್ಕೆ ಬಿಟ್ಟು ಹಣವನ್ನು ಪಣವಾಗಿಟ್ಟುಕೊಂಡು ಜೂಜಾಟದಲ್ಲಿ ತೊಡಗಿರುವುದು ಪತ್ತೆಯಾಗಿದೆ.

ಪೊಲೀಸರನ್ನು ಕಂಡ ತಕ್ಷಣವೇ ಸ್ಥಳದಲ್ಲಿದ್ದ ಕೆಲವರು ಕಾಲ್ಕಿತ್ತಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ವಶಪಡಿಸಿಕೊಂಡ ಸೊತ್ತುಗಳು:

ದಾಳಿಯ ವೇಳೆ ಪೊಲೀಸರು ಜೂಜಾಟಕ್ಕೆ ಬಳಸಿದ್ದ ₹350 ನಗದು, 2 ಬಾಳುಗಳು (ಸಣ್ಣ ಕತ್ತಿ), ವಿವಿಧ ತಳಿಯ 4 ಕೋಳಿಗಳು ಹಾಗೂ 3 ದ್ವಿಚಕ್ರ ವಾಹನಗಳು ಸೇರಿದಂತೆ ಒಟ್ಟು ₹74,370 ಮೌಲ್ಯದ ಸ್ವತ್ತುಗಳನ್ನು ಜಪ್ತಿ ಮಾಡಿದ್ದಾರೆ.

ಪ್ರಕರಣ ದಾಖಲು:

ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ BNS ಕಲಂ 112, ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 87 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ – 1960ರ ಕಲಂ 11(1) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ\

Continue Reading

Bantawala

ಬಸ್‌ನಲ್ಲಿ ಅಸಭ್ಯ ವರ್ತನೆ: ವಿಕೃತಕಾಮಿ ವೃದ್ಧ ಅರ್ಚಕನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಕೇಸ್‌ ದಾಖಲು!

Published

on

ಬಂಟ್ವಾಳ: ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಎದುರು ಖಾಸಗಿ ಅಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ವೃದ್ಧನೊಬ್ಬನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ:

ಜುಲೈ 30ರಂದು ಮಂಗಳೂರಿನ ಸ್ಟೇಟ್ ಬ್ಯಾಂಕ್‌ನಿಂದ ಉಪ್ಪಿನಂಗಡಿಗೆ ಹೊರಟಿದ್ದ ಖಾಸಗಿ ಬಸ್‌ನಲ್ಲಿ ಈ ಘಟನೆ ನಡೆದಿದೆ. ಮಧ್ಯಾಹ್ನ 2.10ರ ಸುಮಾರಿಗೆ ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ಬಸ್‌ ಏರಿದ್ದ ಸುಮಾರು 60–70 ವರ್ಷ ಪ್ರಾಯದ ವ್ಯಕ್ತಿಯೊಬ್ಬ, ಚಾಲಕನ ಎಡಭಾಗದ ಅಡ್ಡ ಸೀಟಿನಲ್ಲಿ ಕುಳಿತುಕೊಂಡಿದ್ದ. ಪ್ರಯಾಣದ ವೇಳೆ ಎದುರಿನ ಸೀಟಿನಲ್ಲಿದ್ದ ಮಹಿಳೆಯರಿಗೆ ಕಾಣುವಂತೆ ಅಸಭ್ಯವಾಗಿ ಗುಪ್ತಾಂಗ ಪ್ರದರ್ಶಿಸಿ ವಿಕೃತಿ ಮೆರೆದಿದ್ದಾನೆ.

ಮಹಿಳೆಯ ಧೈರ್ಯ, ವೈರಲ್ ವೀಡಿಯೋ:

ವೃದ್ಧನ ನೀಚ ಕೃತ್ಯವನ್ನು ಕಂಡು ಆಕ್ರೋಶಗೊಂಡ ಬಸ್‌ನಲ್ಲಿದ್ದ ಮಹಿಳೆಯೊಬ್ಬರು ಧೈರ್ಯದಿಂದ ತಮ್ಮ ಮೊಬೈಲ್‌ನಲ್ಲಿ ಆತನ ವಿಕೃತಿಯನ್ನು ವೀಡಿಯೋ ರೆಕಾರ್ಡ್ ಮಾಡಿದ್ದಾರೆ. ಇದನ್ನು ಗಮನಿಸಿದ ವೃದ್ಧ, ಮೆಲ್ಕಾರ್ ಜಂಕ್ಷನ್ ತಲುಪುತ್ತಿದ್ದಂತೆ ಗಾಬರಿಯಿಂದ ಬಸ್‌ನಿಂದ ಇಳಿದು ಪರಾರಿಯಾಗಿದ್ದ. ಬಳಿಕ ಈ ವಿಷಯ ಬಸ್ ಚಾಲಕನ ಗಮನಕ್ಕೂ ಬಂದಿತ್ತು. ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು ಆರೋಪಿಯ ಗುರುತು ಪತ್ತೆ ಹಚ್ಚಿದ್ದು, ಆತ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಸಾದಿಕುಕ್ಕು ಅಂಗನವಾಡಿ ಬಳಿಯ ನಿವಾಸಿ ಹಾಗೂ ವೃತ್ತಿಯಲ್ಲಿ ಅರ್ಚಕ ಎಂದು ತಿಳಿದುಬಂದಿದೆ.

ಬಂಟ್ವಾಳ ಠಾಣೆಯಲ್ಲಿ ದೂರು:

ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.ಕ್ರ. 107/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 75(2)ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

arrest

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಖ್ಯಾತ ವಾರಂಟ್ ಆರೋಪಿ ಉಮ್ಮರ್ ನವಾಫ್ ಬಂಧನ: ಮಂಗಳೂರು ಪೊಲೀಸರ ಕಾರ್ಯಾಚರಣೆ

Published

on

ಮಂಗಳೂರು: ಕಳೆದ 7 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ, 30ಕ್ಕೂ ಹೆಚ್ಚು ವಾರಂಟ್ ಹಾಗೂ 13ಕ್ಕೂ ಅಧಿಕ ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ವಾರಂಟ್ ಆರೋಪಿಯನ್ನು ಮಂಗಳೂರು ದಕ್ಷಿಣ ಉಪವಿಭಾಗದ ವಿಶೇಷ ಕರ್ತವ್ಯ ಪಡೆ ಪೊಲೀಸರು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಉಳ್ಳಾಲ ತಾಲೂಕಿನ ಮಾರ್ಗತಲೆ ಮೂಲದ, ಪ್ರಸ್ತುತ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಕುಂಡಪ್ಪು ನಿವಾಸಿ ಉಮ್ಮರ್ ನವಾಫ್ (33) ಬಂಧಿತ ಆರೋಪಿ.

30ಕ್ಕೂ ಹೆಚ್ಚು ವಾರಂಟ್, ಪ್ರೋಕ್ಲಮೇಷನ್ ಜಾರಿ

ಬಂಧಿತ ಉಮ್ಮರ್ ನವಾಫ್ ವಿರುದ್ಧ ಕೊಲೆ ಯತ್ನ, ಅಪಹರಣ, ದರೋಡೆ, ಹಫ್ತಾ ವಸೂಲಿ, ಸಾರ್ವಜನಿಕ ಆಸ್ತಿಗೆ ಹಾನಿ ಹಾಗೂ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ವಿಚಾರಗಳಿಗೆ ಸಂಬಂಧಿಸಿದಂತೆ ಉಳ್ಳಾಲ, ಪಣಂಬೂರು ಹಾಗೂ ಬರ್ಕೆ ಪೊಲೀಸ್ ಠಾಣೆಗಳಲ್ಲಿ 13ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು.

ಪ್ರಕರಣಗಳ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಈತನ ವಿರುದ್ಧ ಘನ ನ್ಯಾಯಾಲಯವು 30ಕ್ಕೂ ಹೆಚ್ಚು ವಾರಂಟ್‌ಗಳನ್ನು ಹೊರಡಿಸಿತ್ತು. ಅಲ್ಲದೆ, ಉಳ್ಳಾಲ ಠಾಣೆಯ ಮೂರು ಪ್ರಕರಣಗಳಲ್ಲಿ ಈತನ ವಿರುದ್ಧ ನ್ಯಾಯಾಲಯದ ಆದೇಶದಂತೆ ‘ಪ್ರೋಕ್ಲಮೇಷನ್’ ಜಾರಿಗೊಳಿಸಲಾಗಿತ್ತು ಹಾಗೂ ಒಂದು ಪ್ರಕರಣದಲ್ಲಿ ಎಲ್.ಪಿ.ಸಿ (LPC) ಮಾಡಲಾಗಿತ್ತು.

ಆರೋಪಿ ಉಮ್ಮರ್ ನವಾಫ್ ಮೇಲಿರುವ ಪ್ರಕರಣಗಳ ವಿವರಗಳು:

  1. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 222/17):
    • ಕಲಂಗಳು: 143, 147, 148 (ಕಾನೂನುಬಾಹಿರ ಗುಂಪುಗಾರಿಕೆ, ಗಲಭೆ), 341 (ಅಕ್ರಮ ತಡೆ), 504, 506 (ಶಾಂತಿ ಭಂಗ, ಜೀವ ಬೆದರಿಕೆ), 324 (ಹಾಕಾಹಾಕಿ/ಹೊಡೆದಾಟ) ಮತ್ತು 307 (ಕೊಲೆ ಯತ್ನ).
  2. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 23/17):
    • ಕಲಂಗಳು: 427 IPC (ಆಸ್ತಿಗೆ ಹಾನಿ) ಮತ್ತು KPDLP ಕಾಯ್ದೆಯ 2(a), 2(b) (ಸಾರ್ವಜನಿಕ ಆಸ್ತಿ ನಷ್ಟ ತಡೆ ಕಾಯ್ದೆ).
  3. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 247/14):
    • ಕಲಂಗಳು: 448 (ಅಕ್ರಮ ಪ್ರವೇಶ) ಮತ್ತು 395 (ದರೋಡೆ).
  4. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 289/17):
    • ಕಲಂಗಳು: 504, 506, 364(a) (ಅಪಹರಣ ಮತ್ತು ಕಪ್ಪಕ್ಕೆ ಬೇಡಿಕೆ), 387 (ಹಫ್ತಾ ವಸೂಲಿಗೆ ಬೆದರಿಕೆ), 395 (ದರೋಡೆ), 149 IPC.
  5. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 276/15) – (ನ್ಯಾಯಾಲಯದಿಂದ LPC ಮಾಡಲಾದ ಪ್ರಕರಣ):
    • ಕಲಂಗಳು: 143, 144, 148, 448, 451, 452 (ಅಕ್ರಮ ಮನೆ ಪ್ರವೇಶ), 326, 307 (ಕೊಲೆ ಯತ್ನ), 397 (ಮಾರಕ ಆಯುಧದೊಂದಿಗೆ ದರೋಡೆ/ಕಳವು), 506, 149 IPC.
  6. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 206/2012) – (ಪ್ರೋಕ್ಲಮೇಷನ್ ಜಾರಿಯಾದ ಪ್ರಕರಣ):
    • ಕಲಂಗಳು: 143, 147, 148, 323, 427, 504, 506, 149 IPC.
  7. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 27/2017) – (ಪ್ರೋಕ್ಲಮೇಷನ್ ಜಾರಿಯಾದ ಪ್ರಕರಣ):
    • ಕಲಂಗಳು: 387 IPC (ಭಯ ಹುಟ್ಟಿಸಿ ಹಣ/ಆಸ್ತಿ ವಸೂಲಿ ಮಾಡುವುದು).
  8. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 103/2021):
    • ಕಲಂಗಳು: 364 IPC (ಕೊಲೆ ಮಾಡುವ ಉದ್ದೇಶದಿಂದ ಅಪಹರಣ).
  9. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 71/23):
    • ಕಲಂಗಳು: 504, 506, 307 (ಕೊಲೆ ಯತ್ನ), 324, 427 IPC.
  10. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 183/17) – (ಪ್ರೋಕ್ಲಮೇಷನ್ ಜಾರಿಯಾದ ಪ್ರಕರಣ):
    • ಕಲಂಗಳು: 143, 147, 148, 448, 504, 324, 323, 506, 427 R/w 149 IPC.
  11. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 159/23):
    • ಕಲಂಗಳು: 341, 394 (ಕಳವು ಮಾಡುವಾಗ ಗಾಯಗೊಳಿಸುವುದು), 307 (ಕೊಲೆ ಯತ್ನ) R/w 34 IPC.
  12. ಪಣಂಬೂರು ಪೊಲೀಸ್ ಠಾಣೆ (PNB ಮೊ.ನಂ 158/2012):
    • ಕಲಂಗಳು: 379 IPC (ಕಳವು).
  13. ಬರ್ಕೆ ಪೊಲೀಸ್ ಠಾಣೆ (ಮೊ.ನಂ 04/15):
    • ಕಲಂಗಳು: 353 (ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ), 427 R/w 34 IPC.

ಪೊಲೀಸರ ಸಕಾಲಿಕ ಕಾರ್ಯಾಚರಣೆ

ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ (ACP) ಮಾರ್ಗದರ್ಶನದಲ್ಲಿ, ದಕ್ಷಿಣ ಉಪವಿಭಾಗ ಕಚೇರಿಯ ವಿಶೇಷ ಕರ್ತವ್ಯ ಪಡೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದಿನಾಂಕ 02-08-2026 ರಂದು ಸುಳಿವು ಆಧರಿಸಿ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಕಚೇರಿಯ ಪತ್ರಿಕಾ ಪ್ರಕಟಣೆ ತಿಳಿಸಿದೆ.

Continue Reading

Trending

Copyright © 2025 Deevatige

error: Content is protected !!