Connect with us

Politics

ಪುಣಚ ಗ್ರಾಮದ ಎಸ್‌ಟಿ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿದ ಶಾಸಕ ಅಶೋಕ್ ರೈ; ಬಡವರನ್ನು ಮುಂದಿಟ್ಟು ರಾಜಕೀಯ ಮಾಡುವ ತಂತ್ರ ಬಯಲು

Published

on

ಬಿಜೆಪಿಯ ರಾಜಕೀಯ ಲಾಭಕ್ಕೆ ಬಲಿಪಶುಗಳಾಗಿದ್ದ ಮುಗ್ಧ ಮಹಿಳೆಯರು; ಶಾಸಕರ ನಡೆಗೆ ಹರ್ಷ, ಕಣ್ಣೀರು ಹಾಕಿದ ಫಲಾನುಭವಿಗಳು

ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ರೈ ಅವರನ್ನು ರಾಜಕೀಯವಾಗಿ ಮಟ್ಟ ಹಾಕಲು ದಲಿತರನ್ನು ಗುರಾಣಿಯಾಗಿ ಬಳಸಿಕೊಂಡ ಬಿಜೆಪಿಯ ತಂತ್ರವೀಗ ಸಂಪೂರ್ಣವಾಗಿ ಬಯಲಾಗಿದೆ. ಪುಣಚ ಗ್ರಾಮದ ದೇವಿನಗರದ ಎಸ್‌ಟಿ ಕಾಲನಿಯ ಮೂರು ಮುಗ್ಧ ಕುಟುಂಬಗಳಿಗೆ ಕೊನೆಗೂ ಶಾಸಕ ಅಶೋಕ್ ರೈ ಅವರು ಹಕ್ಕು ಪತ್ರ ವಿತರಿಸುವ ಮೂಲಕ ತಾವೊಬ್ಬ ನಿಜವಾದ ಜನನಾಯಕ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

ರಾಜಕೀಯ ಲಾಭಕ್ಕಾಗಿ ಪ್ರತಿಭಟನೆಯ ನಾಟಕ: 2021 ರಲ್ಲೇ ಪುಣಚಾ ಗ್ರಾಮದ ದೇವಿನಗರ ಎಸ್‌ಟಿ ಕಾಲನಿಯ ಪ್ರೇಮ, ಬೇಬಿ ಹಾಗೂ ವಿಜಯಲಕ್ಷ್ಮೀ ಎಂಬ ಮೂರು ಕುಟುಂಬಗಳು ತಮ್ಮ ಮನೆಯ ಅಡಿಸ್ಥಳದ ಹಕ್ಕು ಪತ್ರಕ್ಕಾಗಿ 94 ಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದವು. ಅಂದಿನ ಬಿಜೆಪಿ ಶಾಸಕ ಸಂಜೀವ ಮಠಂದೂರು ಅವರ ಬಳಿ ಹೋದರೂ ಇವರಿಗೆ ಹಕ್ಕು ಪತ್ರ ಸಿಕ್ಕಿರಲಿಲ್ಲ. ಆದರೆ ಅಶೋಕ್ ರೈ ಅವರು ಶಾಸಕರಾದ ಬಳಿಕ, ಈ ಬಡ ಕುಟುಂಬಗಳ ಮನವಿಗೆ ಸ್ಪಂದಿಸಿ ಕಡತವನ್ನು ವಿಲೇವಾರಿ ಮಾಡುವಂತೆ ತಹಶಿಲ್ದಾರ್‌ಗೆ ಸೂಚನೆ ನೀಡಿದ್ದರು.

ಎಲ್ಲವೂ ಸಿದ್ಧಗೊಂಡು ಹಕ್ಕು ಪತ್ರ ಕೈಸೇರುವ ಕೊನೆಯ ಕ್ಷಣದಲ್ಲಿ, ಗಿರಿಧರ್ ನಾಯ್ಕ್ ನೇತೃತ್ವದಲ್ಲಿ ಈ ಮುಗ್ಧರನ್ನು ಹಾದಿತಪ್ಪಿಸಲಾಯಿತು. “ಅಶೋಕ್ ರೈ ನಿಮಗೆ ಹಕ್ಕು ಪತ್ರ ಕೊಡುವುದಿಲ್ಲ, ಪ್ರತಿಭಟನೆ ಮಾಡಿ” ಎಂದು ನಂಬಿಸಿ, ಬಂಟ್ವಾಳ ತಾಲೂಕು ಕಚೇರಿಯ ಮುಂದೆ ಇವರನ್ನು ಮೂರು ದಿನಗಳ ಕಾಲ ಧರಣಿ ಕೂರಿಸಲಾಗಿತ್ತು. ಈ ಪ್ರತಿಭಟನೆಯಲ್ಲಿ ಬಿಜೆಪಿ ಮಾಜಿ ಶಾಸಕ ಸಂಜೀವ ಮಠಂದೂರು ಸೇರಿದಂತೆ ಹಲವು ಬಿಜೆಪಿ ನಾಯಕರು ಭಾಗವಹಿಸಿ, ಶಾಸಕರನ್ನು ಹಾಗೂ ಅವರ ತಂದೆಯವರನ್ನು ವೈಯಕ್ತಿಕವಾಗಿ ನಿಂದಿಸಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸಿದ್ದರು.

ಗಿರಿಧರ್ ನಾಯ್ಕ್ ಹಾಗೂ ಬಿಜೆಪಿಯ ಉಲ್ಟಾ ಹೊಡೆದ ತಂತ್ರ: ಪ್ರತಿಭಟನೆಯ ನಾಟಕ ಮುಗಿದ ಬಳಿಕ ಬಿಜೆಪಿ ನಾಯಕರು ಹಾಗೂ ಗಿರಿಧರ್ ನಾಯ್ಕ್ ಈ ಬಡ ಮಹಿಳೆಯರನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದರು. ಆದರೆ ತದನಂತರ ಗಿರಿಧರ್ ನಾಯ್ಕ್ ಶಾಸಕರ ಕಚೇರಿಗೆ ಬಂದು, “ನನಗೆ ವಿಷಯವೇ ಗೊತ್ತಿಲ್ಲ, ನಾನು ಪ್ರತಿಭಟನೆ ನಡೆಸಿಲ್ಲ, ನಾನು ಅಪ್ಪಟ ಕಾಂಗ್ರೆಸ್ಸಿಗ” ಎಂದು ಉಲ್ಟಾ ಹೊಡೆದು ಬಡವರನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳಿದ್ದರು.

ಫಲಾನುಭವಿಗಳ ಕಣ್ಣೀರು ಮತ್ತು ಸತ್ಯದ ದರ್ಶನ: ತಮಗೆ ಹಕ್ಕು ಪತ್ರ ಸಿಕ್ಕಿದ ಬಳಿಕ ಕಣ್ಣೀರು ಹಾಕಿದ ಫಲಾನುಭವಿಗಳಾದ ಪ್ರೇಮ, ಬೇಬಿ ಮತ್ತು ವಿಜಯಲಕ್ಷ್ಮೀ, “ನಾವು ಬಡವರು, ತಿಳುವಳಿಕೆ ಇಲ್ಲದೆ ಬಿಜೆಪಿಯವರ ಹಾಗೂ ಗಿರಿಧರ್ ನಾಯ್ಕ್ ಮಾತು ಕೇಳಿ ಮೋಸ ಹೋದೆವು. ನಮ್ಮನ್ನು ಅವರ ರಾಜಕೀಯ ಲಾಭಕ್ಕಾಗಿ ಬಲಿಪಶು ಮಾಡಿದರು. ಶಾಸಕರ ತಂದೆಗೆ ಕೆಟ್ಟ ಪದಗಳಿಂದ ಬೈದದ್ದು ಒಳ್ಳೆಯದಲ್ಲ. ನಾವು ಮೊದಲೇ ಶಾಸಕ ಅಶೋಕ್ ರೈ ಅವರ ಬಳಿ ಮಾತನಾಡಿದ್ದರೆ ಇಷ್ಟೆಲ್ಲಾ ರಾದ್ದಾಂತ ಆಗುತ್ತಿರಲಿಲ್ಲ” ಎಂದು ತಮಗಾದ ಅನ್ಯಾಯವನ್ನು ನೆನೆದು ಕಣ್ಣೀರು ಹಾಕಿದ್ದಾರೆ.

ಬಡವರನ್ನು ಮುಂದಿಟ್ಟು ರಾಜಕೀಯ ಮಾಡಲಾರೆ: ಶಾಸಕ ಅಶೋಕ್ ರೈ ಹಕ್ಕು ಪತ್ರ ವಿತರಿಸಿ ಮಾತನಾಡಿದ ಶಾಸಕ ಅಶೋಕ್ ರೈ, “ಬಡವರನ್ನು ಮುಂದಿಟ್ಟು ರಾಜಕೀಯ ಮಾಡುವ ಜಾಯಾಮಾನ ನಮ್ಮದಲ್ಲ. 2021 ರಲ್ಲೇ ಅರ್ಜಿ ಹಾಕಿದ್ದರೂ ಈ ಬಡವರಿಗೆ ಬಿಜೆಪಿಯವರು ಹಕ್ಕು ಪತ್ರ ಕೊಟ್ಟಿರಲಿಲ್ಲ. ನಾನು ಶಾಸಕನಾದ ಬಳಿಕ ಕಡತ ವಿಲೇವಾರಿ ಮಾಡಿಸಿ ಹಕ್ಕು ಪತ್ರ ಕೊಡುವಷ್ಟರಲ್ಲಿ ಇವರನ್ನು ಪ್ರಚೋದಿಸಿ ಪ್ರತಿಭಟನೆ ಮಾಡಿಸಿದರು. ಬಡವರ ಮನೆ ಬೆಳಗಬೇಕೆಂಬುದೇ ನನ್ನ ಕನಸು. ಅವರ ಮುಗ್ಧತೆಯನ್ನು ರಾಜಕೀಯ ಲಾಭಕ್ಕೆ ಬಳಸುವ ನೀಚ ರಾಜಕೀಯ ದೇವರು ಮೆಚ್ಚುವ ಕೆಲಸವಲ್ಲ” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಇದೀಗ ಮೂರೂ ಬಡ ಕುಟುಂಬಗಳಿಗೆ ನ್ಯಾಯ ಸಿಕ್ಕಿದ್ದು, ಶಾಸಕ ಅಶೋಕ್ ರೈ ಅವರು ಹಕ್ಕು ಪತ್ರಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿದ್ದಾರೆ. ಹಕ್ಕು ಪತ್ರ ವಿತರಿಸುವ ಈ ಸಾರ್ಥಕ ಕ್ಷಣವನ್ನು ಚಿತ್ರದಲ್ಲಿ ಸ್ಪಷ್ಟವಾಗಿ ಕಾಣಬಹುದಾಗಿದ್ದು, ಶಾಸಕರು ಫಲಾನುಭವಿ ಮಹಿಳೆಯರಿಗೆ ದಾಖಲೆಗಳನ್ನು ಹಸ್ತಾಂತರಿಸುತ್ತಿರುವುದು ದಾಖಲಾಗಿದೆ.




ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

award

ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಐತಿಹಾಸಿಕ ಮಾನ್ಯತೆ: ಕರಾವಳಿಯಲ್ಲಿ ಹಬ್ಬದ ವಾತಾವರಣ

Published

on

ಮಂಗಳೂರು: ತುಳು ಭಾಷಿಕರ ಹಲವು ದಶಕಗಳ ಹೋರಾಟ ಹಾಗೂ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಐತಿಹಾಸಿಕ ಜಯ ಸಿಕ್ಕಿದೆ. ಶ್ರೀಮಂತ ಪರಂಪರೆಯ ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡುವುದಾಗಿ ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.

ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯ ಬಳಿಕ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಈ ಮಹತ್ವದ ತೀರ್ಮಾನವನ್ನು ಪ್ರಕಟಿಸಿದರು.

ಸಂವಿಧಾನದ 8ನೇ ಪರಿಚ್ಛೇದ ಸೇರ್ಪಡೆಗೆ ಬಲ: ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು, ಪ್ರಾಚೀನ ಹಾಗೂ ಆಧುನಿಕ ಸಾಹಿತ್ಯಿಕ ಸಮೃದ್ಧತೆಯನ್ನು ಹೊಂದಿರುವ ಅಪೂರ್ವ ಭಾಷೆಯಾಗಿದೆ. ರಾಜ್ಯ ಸರ್ಕಾರದಿಂದ ಎರಡನೇ ಅಧಿಕೃತ ಭಾಷಾ ಸ್ಥಾನಮಾನ ಲಭಿಸಿರುವುದು, ಭಾರತೀಯ ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಭಾಷೆಯನ್ನು ಸೇರ್ಪಡೆಗೊಳಿಸುವ ಹೋರಾಟಕ್ಕೆ ಮತ್ತಷ್ಟು ಪ್ರಬಲ ವೇದಿಕೆಯಾಗಲಿದೆ.

ನಿರಂತರ ಹೋರಾಟಕ್ಕೆ ಸಿಕ್ಕ ಫಲ: ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಮುಖವಾಗಿ ಮಾತನಾಡುವ ತುಳುವಿಗೆ ಹೆಚ್ಚುವರಿ ಅಧಿಕೃತ ಭಾಷಾ ಮಾನ್ಯತೆ ನೀಡಬೇಕೆಂದು ದಶಕಗಳಿಂದ ತುಳು ಸಾಹಿತ್ಯ ಅಕಾಡೆಮಿ, ತುಳು ಪರ ಸಂಘಟನೆಗಳು, ಸಾಹಿತಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸರ್ಕಾರದ ಮೇಲೆ ನಿರಂತರವಾಗಿ ಒತ್ತಡ ಹೇರುತ್ತ ಬಂದಿದ್ದರು.

ತಜ್ಞರ ಸಮಿತಿಯ ವರದಿ ಆಧಾರ: ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡುವ ಸಾಧಕ-ಬಾಧಕಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಹಿರಿಯ ಶಿಕ್ಷಣ ತಜ್ಞ ಡಾ. ಎಂ. ಮೋಹನ್ ಆಳ್ವ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯು ಹೊರ ರಾಜ್ಯಗಳಲ್ಲಿನ ಭಾಷಾ ನೀತಿ ಮಾದರಿಗಳನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ವಿಸ್ತೃತ ವರದಿಯನ್ನು ಸಲ್ಲಿಸಿತ್ತು. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈಗ ತುಳುವರ ಬಹುಕಾಲದ ಕನಸು ನನಸಾಗಿದ್ದು, ಕರಾವಳಿ ಭಾಗದಲ್ಲಿ ಹರ್ಷೋದ್ಗಾರ ವ್ಯಕ್ತವಾಗಿದೆ.

Continue Reading

CONGRESS

ಮಂಗಳೂರು ಸಚಿವ ಸಂಪುಟ ಸಭೆ: ವಿವಿಧ ಸಂಘಟನೆಗಳ ಪ್ರತಿಭಟನೆ ಮತ್ತು ಬಿಗಿ ಭದ್ರತೆ

Published

on

ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಶುಕ್ರವಾರ (ಸೆಪ್ಟೆಂಬರ್ 18) ಆಯೋಜಿಸಲಾದ ವಿಶೇಷ ಸಚಿವ ಸಂಪುಟ ಸಭೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟದ ಸಚಿವರು ಆಗಮಿಸಿದ ವೇಳೆ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದಲ್ಲಿ ವಿವಿಧ ಸಂಘಟನೆಗಳು ಭಾರಿ ಪ್ರತಿಭಟನೆ ನಡೆಸಿದವು. ಅಬ್ದುಲ್ ರಹೀಮಾನ್ ಕೊಲೆ ಆರೋಪಿಗಳಿಗೆ ಜಾಮೀನು ಮಂಜೂರಾಗಿರುವುದಕ್ಕೆ ರಾಜ್ಯ ಸರ್ಕಾರದ ವೈಫಲ್ಯವೇ ಕಾರಣವೆಂದು ಆರೋಪಿಸಿ ಎಸ್.ಡಿ.ಪಿ.ಐ. ಕಾರ್ಯಕರ್ತರು ಮಂಗಳೂರಿನ ರಾವ್ & ರಾವ್ ಸರ್ಕಲ್ ಬಳಿ ಕಪ್ಪುಪತಾಕೆ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಹಲವು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.

ಅದೇ ರೀತಿ, ಜೈಲ್ ಜಾಮರ್ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವಕೀಲರನ್ನು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ಹೊರಟ ಸಿ.ಪಿ.ಐ.ಎಂ. ಕಾರ್ಯಕರ್ತರನ್ನು ಪೊಲೀಸರು ತಡೆದು ವಶಕ್ಕೆ ಪಡೆದರು. ಇದರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ತುಳು ಸಂಘಟನೆಯವರು ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವಂತೆ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.

ಈ ಎಲ್ಲಾ ಬೆಳವಣಿಗೆಗಳ ನಡುವೆ, ಸಿಎಂ ಡಿ.ಕೆ. ಶಿವಕುಮಾರ್ ಅವರು ಸಚಿವ ಸಂಪುಟದ ‌ ಸಹೋದ್ಯೋಗಿಗಳೊಂದಿಗೆ ಕದ್ರಿ ಶ್ರೀ ಮಂಜುನಾಥ ದೇವರ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪಡೀಲ್‌ನಲ್ಲಿರುವ ಪ್ರಜ್ಞಾಸೌಧದ ಎರಡನೇ ಮಹಡಿಯ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಒಟ್ಟು 33 ಮಂದಿ ಸಚಿವರಿಗೆ ಮತ್ತು ಮುಖ್ಯ ಕಾರ್ಯದರ್ಶಿಗಳು ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ಆಯಾ ಸಭಾಂಗಣದಲ್ಲೇ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ನಿಗದಿತ ಸಮಯಕ್ಕಿಂತ ಸಭೆ ಸ್ವಲ್ಪ ವಿಳಂಬವಾಗಿ ಆರಂಭವಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

Continue Reading

CONGRESS

ಮಂಗಳೂರಿನಲ್ಲಿ ಐತಿಹಾಸಿಕ ರಾಜ್ಯ ವಿಶೇಷ ಸಚಿವ ಸಂಪುಟ ಸಭೆ: ಸಿಎಂ ಹಾಗೂ ಸಚಿವರ ಭೇಟಿ ಮತ್ತು ಕಾರ್ಯಕ್ರಮಗಳ ವರದಿ

Published

on

ಮಂಗಳೂರು: ಕರಾವಳಿ ಜಿಲ್ಲೆ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಲಾಗಿರುವ ರಾಜ್ಯ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟ ಸಚಿವರು ಆಗಮಿಸಿದ್ದು, ನಗರದಲ್ಲಿ ಬಿರುಸಿನ ರಾಜಕೀಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಆರಂಭವಾಗಿವೆ.

ಕದ್ರಿ ದೇವಸ್ಥಾನ ಭೇಟಿ ಮತ್ತು ಗಾಂಧೀಜಿ ಸ್ಮರಣೆ

ಪ್ರವಾಸದ ಮೊದಲ ದಿನವಾದ ಶುಕ್ರವಾರ ಬೆಳಗ್ಗೆ ಮುಖ್ಯಮಂತ್ರಿಗಳು ಐತಿಹಾಸಿಕ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ, 1934ರಲ್ಲಿ ಮಹಾತ್ಮ ಗಾಂಧೀಜಿಯವರು ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಉಳಿದುಕೊಂಡಿದ್ದ ಐತಿಹಾಸಿಕ ಮನೆಯ ಸಮೀಪವಿರುವ ಗಾಂಧಿ ಸ್ಕ್ವೇರ್ ಕೆಫೆಗೆ ತೆರಳಿದರು.

ಯುವ ಕಂಟೆಂಟ್‌ ಕ್ರಿಯೇಟರ್ಸ್‌ ಜೊತೆ ಉಪಾಹಾರ ಹಾಗೂ ಸಂವಾದ

ಮಂಗಳೂರಿನ ಯುವ ಸೋಶಿಯಲ್ ಮೀಡಿಯಾ ಕಂಟೆಂಟ್‌ ಕ್ರಿಯೇಟರ್‌ಗಳೊಂದಿಗೆ ಕೆಫೆಯಲ್ಲಿ ಸಾಂಪ್ರದಾಯಿಕ ಉಪಾಹಾರ ಸವಿಯುತ್ತಾ ಸಿಎಂ ಸಂವಾದ ನಡೆಸಿದರು. ಮಂಗಳೂರು ಬನ್ಸ್, ದೋಸೆ ಸೇರಿದಂತೆ ಕರಾವಳಿಯ ವಿಶಿಷ್ಟ ಉಪಾಹಾರಗಳನ್ನು ಸವಿದ ಅವರು, “ಇಲ್ಲಿಗೆ ಬಂದಿರುವುದು ಬಹಳ ಸಂತೋಷ ತಂದಿದೆ” ಎಂದು ಹರ್ಷ ವ್ಯಕ್ತಪಡಿಸಿದರು.

ಜನರ ಬದುಕು ಮುಖ್ಯ – ಸಿಎಂ ಸ್ಪಷ್ಟನೆ

ಸರ್ಕಾರಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, “ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲೆಲ್ಲಿ ಕರೆದುಕೊಂಡು ಹೋಗುತ್ತಾರೋ ಅಲ್ಲಿಗೆ ಹೋಗುತ್ತೇನೆ. ಯಾರೂ ಗಾಬರಿಯಾಗಬೇಕಿಲ್ಲ; ನಮಗೆ ಜನರ ಬದುಕು ಮುಖ್ಯವೇ ಹೊರತು ಭಾವನೆಗಳ ಮೇಲೆ ರಾಜಕೀಯ ಮಾಡುವವರಲ್ಲ. ಎಲ್ಲರ ಚಿಂತನೆಯನ್ನೊಳಗೊಂಡು ನಮ್ಮ ಸರ್ಕಾರ ಕೆಲಸ ಮಾಡಲಿದೆ” ಎಂದು ಸ್ಪಷ್ಟಪಡಿಸಿದರು.

ಸಂಪುಟ ಸಭೆಗೆ ಭರ್ಜರಿ ಸ್ವಾಗತ ಮತ್ತು ಸಿದ್ಧತೆ

ಸಚಿವ ಸಂಪುಟ ಸಭೆಗೆ ಕ್ಷಣಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಭವ್ಯ ಸ್ವಾಗತಕ್ಕೆ ಸಿದ್ಧತೆ ಕೈಗೊಳ್ಳಲಾಗಿದೆ. ಪಂಪ್‌ವೆಲ್‌ನಿಂದ ಪಡೀಲ್ ವರೆಗೆ ಚೆಂಡೆ ಬ್ಯಾಂಡ್‌ಗಳು ಹಾಗೂ ವಿವಿಧ ವೇಷಧಾರಿಗಳ ಸಾಂಸ್ಕೃತಿಕ ತಂಡಗಳು ರಸ್ತೆಯುದ್ದಕ್ಕೂ ಗಮನ ಸೆಳೆದವು. ಡಿಸಿ ಕಚೇರಿ ಮುಂದೆ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿದ್ದು, ಮುಖ್ಯಮಂತ್ರಿಗಳನ್ನು ಕಣ್ತುಂಬಿಕೊಳ್ಳಲು ರಸ್ತೆ ಬದಿ ಕಾದು ನಿಂತಿದ್ದಾರೆ.

Continue Reading

Trending

Copyright © 2025 Deevatige