Connect with us

drugs

ವಿಟ್ಲ ಪೊಲೀಸರಿಂದ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಮತ್ತು ಜಾಗೃತಿ ಜಾಥಾ

Published

on

ವಿಟ್ಲ ಪೊಲೀಸರಿಂದ ಮಾದಕ ದ್ರವ್ಯ ವಿರೋಧಿ ದಿನಾಚರಣೆ: ಅಡ್ಯನಡ್ಕದಲ್ಲಿ ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ

ವಿಟ್ಲ: ಅಂತಾರಾಷ್ಟ್ರೀಯ ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನದ ಅಂಗವಾಗಿ ವಿಟ್ಲ ಪೊಲೀಸ್ ಠಾಣೆಯ ವತಿಯಿಂದ ಕೇಪು ಗ್ರಾಮದ ಅಡ್ಯನಡ್ಕ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಹಯೋಗದೊಂದಿಗೆ ಗುರುವಾರ (ಜೂನ್ 25) ಬೃಹತ್ ಜಾಗೃತಿ ಕಾರ್ಯಕ್ರಮ ಹಾಗೂ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.

ಅಡ್ಯನಡ್ಕ ಪೇಟೆಯಿಂದ ಕರ್ಣಾಟಕ ಬ್ಯಾಂಕ್‌ ಶಾಖೆಯವರೆಗೆ ನಡೆದ ಈ ಜಾಗೃತಿ ಜಾಥಾದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು. ಯುವ ಸಮುದಾಯವನ್ನು ಮಾದಕ ವಸ್ತುಗಳಿಂದ ದೂರವಿಡಲು ಮತ್ತು ಮಾದಕ ಮುಕ್ತ ಸಮಾಜವನ್ನು ನಿರ್ಮಿಸುವ ನಿಟ್ಟಿನಲ್ಲಿ “ಡ್ರಗ್ಸ್ ಮುಕ್ತ ಭಾರತ”, “ಮಾದಕ ವಸ್ತುಗಳ ವಿರುದ್ಧ ಕರ್ನಾಟಕ” ಎಂಬ ಘೋಷಣೆಗಳನ್ನು ಕೂಗುತ್ತಾ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ದುಷ್ಪರಿಣಾಮಗಳ ಬಗ್ಗೆ ಕಾನೂನು ಮಾಹಿತಿ ನೀಡಲಾಯಿತು. ವ್ಯಸನ ಮುಕ್ತ ಭಾರತವನ್ನು ನಿರ್ಮಿಸುವಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಪಾತ್ರ ಅತ್ಯಂತ ದೊಡ್ಡದಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಈ ಸಂದರ್ಭದಲ್ಲಿ ತಿಳಿಸಿದರು.

ಬಾರ್ ಮತ್ತು ವೈನ್ ಶಾಪ್ ಮಾಲಿಕರ ಸಭೆ

ಅಪ್ರಾಪ್ತರಿಗೆ ಮದ್ಯ ಮಾರಾಟ ಮಾಡಿದರೆ ಕಠಿಣ ಕ್ರಮ: ವಿಟ್ಲದಲ್ಲಿ ಬಾರ್, ವೈನ್ ಶಾಪ್ ಮಾಲಿಕರಿಗೆ ಪೊಲೀಸರ ಖಡಕ್ ಎಚ್ಚರಿಕೆ

ವಿಟ್ಲ: ಅಪ್ರಾಪ್ತ ವಯಸ್ಕರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಅವರ ಪ್ರವೇಶಕ್ಕೆ ಅವಕಾಶ ನೀಡುವುದು ಕಂಡುಬಂದಲ್ಲಿ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವಿಟ್ಲ ಪೊಲೀಸರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಜೂನ್ 25ರಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ಠಾಣಾ ವ್ಯಾಪ್ತಿಯ ಬಾರ್ ಎಂಡ್ ರೆಸ್ಟೋರೆಂಟ್ ಹಾಗೂ ವೈನ್ ಶಾಪ್ ಮಾಲಿಕರ ಮಹತ್ವದ ಸಭೆಯನ್ನು ನಡೆಸಲಾಯಿತು. ವಿಟ್ಲ ಪೊಲೀಸ್ ನಿರೀಕ್ಷಕರಾದ (ಪಿಐ) ಪ್ರಕಾಶ್ ದೇವಾಡಿಗ ರವರ ಮಾರ್ಗದರ್ಶನದಲ್ಲಿ, ಉಪನಿರೀಕ್ಷಕರಾದ (ಪಿಎಸ್ ಐ) ರಾಮಕೃಷ್ಣ ರವರ ನೇತೃತ್ವದಲ್ಲಿ ಈ ಸಭೆ ಜರುಗಿತು.

ಸಭೆಯಲ್ಲಿ ಮಾಲಿಕರಿಗೆ ಪ್ರಮುಖವಾಗಿ ಈ ಕೆಳಗಿನ ಸೂಚನೆಗಳನ್ನು ನೀಡಲಾಯಿತು:

ಅಪ್ರಾಪ್ತ ವಯಸ್ಕರಿಗೆ ಮದ್ಯದ ಅಂಗಡಿಗಳಿಗೆ ಪ್ರವೇಶ ನೀಡುವುದನ್ನು ಹಾಗೂ ಮದ್ಯ ಸೇವನೆ ಒದಗಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಸರ್ಕಾರದಿಂದ ವಿತರಿಸಿರುವ ಅಧಿಕೃತ ವಯಸ್ಸಿನ ಪುರಾವೆ ಅಥವಾ ಗುರುತಿನ ಚೀಟಿ (ID Card) ಇಲ್ಲದೆ ಯಾವುದೇ ಸಂಶಯಾಸ್ಪದ ವ್ಯಕ್ತಿಯನ್ನು ಮದ್ಯ ಮಾರಾಟ ಮಾಡುವ ಸಂಸ್ಥೆ ಅಥವಾ ಜಾಗಗಳಿಗೆ ಪ್ರವೇಶಿಸಲು ಅನುಮತಿಸಬಾರದು.

ನಿಯಮಗಳನ್ನು ಉಲ್ಲಂಘಿಸಿ ಅಪ್ರಾಪ್ತರಿಗೆ ಮದ್ಯ ಪೂರೈಸುವುದು ಅಥವಾ ಅದಕ್ಕೆ ಬೆಂಬಲ ನೀಡುವುದು ಕಂಡುಬಂದಲ್ಲಿ ಮಾಲಿಕರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ವಿವರವಾಗಿ ತಿಳಿಸಿದರು.




ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

drugs

ಕಾಲೇಜು ವಿದ್ಯಾರ್ಥಿಗಳಲ್ಲಿ ಡ್ರಗ್ಸ್ ವ್ಯಸನ ತಡೆಗೆ ಪೊಲೀಸ್ ಇಲಾಖೆಯ ಯಶಸ್ವಿ ಕಾರ್ಯಾಚರಣೆ: ಶೇ. 80ರಷ್ಟು ವಿದ್ಯಾರ್ಥಿಗಳು ವ್ಯಸನ ಮುಕ್ತ!

Published

on

ಮಂಗಳೂರು: ನಗರದ ವಿವಿಧ ಕಾಲೇಜುಗಳಲ್ಲಿ ಡ್ರಗ್ಸ್ ಬಳಕೆ ವಿರುದ್ಧ ಪೊಲೀಸ್ ಇಲಾಖೆ ಮತ್ತು ಕಾಲೇಜು ಆಡಳಿತ ಮಂಡಳಿ ಜಂಟಿಯಾಗಿ ಹಮ್ಮಿಕೊಂಡಿರುವ ವಿಶೇಷ ಕಾರ್ಯಾಚರಣೆ ಸಕಾರಾತ್ಮಕ ಫಲಿತಾಂಶ ನೀಡುತ್ತಿದ್ದು, ಶೇ. 80ರಷ್ಟು ವಿದ್ಯಾರ್ಥಿಗಳು ಡ್ರಗ್ಸ್ ಚಟದಿಂದ ಸಂಪೂರ್ಣವಾಗಿ ಹೊರಬಂದಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಈ ವರ್ಷದ ಜನವರಿಯಿಂದ ಇಲ್ಲಿಯವರೆಗೆ ಮಂಗಳೂರು ನಗರದ 150 ಕಾಲೇಜುಗಳಲ್ಲಿ ಒಟ್ಟು 8,500ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಡ್ರಗ್ಸ್ ಪರೀಕ್ಷೆ (ಡ್ರಗ್ ಟೆಸ್ಟ್) ನಡೆಸಲಾಗಿದೆ. ಈ ಪರೀಕ್ಷೆಯಲ್ಲಿ 98 ಜನ ವಿದ್ಯಾರ್ಥಿಗಳು ಡ್ರಗ್ಸ್ ಸೇವಿಸಿರುವುದು ಪತ್ತೆಯಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಅವರೆಲ್ಲರಿಗೂ ಕೌನ್ಸೆಲಿಂಗ್ ನೀಡಲಾಗಿತ್ತು.

ನಂತರ, ಕೌನ್ಸೆಲಿಂಗ್ ಪಡೆದಿದ್ದ ವಿದ್ಯಾರ್ಥಿಗಳ ಸ್ಥಿತಿಗತಿ ಹಾಗೂ ಫಲಿತಾಂಶವನ್ನು ಪರಿಶೀಲಿಸಲು ಇತ್ತೀಚೆಗೆ ವಿಶೇಷ ಡ್ರಗ್ ಟೆಸ್ಟ್ ಅಭಿಯಾನ ನಡೆಸಲಾಗಿದ್ದು, ಈ ವೇಳೆ ಮೊದಲ ಹಂತದಲ್ಲಿ ಪಾಸಿಟಿವ್ ಬಂದಿದ್ದ 50 ವಿದ್ಯಾರ್ಥಿಗಳನ್ನು ಮರುಪರೀಕ್ಷೆಗೆ ಒಳಪಡಿಸಲಾಯಿತು. ಅದರಲ್ಲಿ ಶೇ. 80ರಷ್ಟು ಅಂದರೆ 38 ಜನ ವಿದ್ಯಾರ್ಥಿಗಳು ಸಂಪೂರ್ಣವಾಗಿ ನೆಗೆಟಿವ್ ಬಂದಿದ್ದು, ತಾವು ಇನ್ನು ಮುಂದೆ ಡ್ರಗ್ಸ್ ಸೇವಿಸುವುದಿಲ್ಲ ಎಂದು ತಿಳಿಸಿ ವ್ಯಸನ ಮುಕ್ತರಾಗಿರುವುದು ದೃಢಪಟ್ಟಿದೆ.

ಉಳಿದ 12 ವಿದ್ಯಾರ್ಥಿಗಳ ಮೇಲೂ ಪೋಷಕರು ಮತ್ತು ಕಾಲೇಜು ಆಡಳಿತ ಮಂಡಳಿಯು ನಿರಂತರ ನಿಗಾ ವಹಿಸಿ, ಹೆಚ್ಚಿನ ಕೌನ್ಸೆಲಿಂಗ್ ಹಾಗೂ ಮಾರ್ಗದರ್ಶನ ನೀಡುವಂತೆ ಸೂಚಿಸಲಾಗಿದೆ. ಕಾಲೇಜು ಆಡಳಿತ ಮಂಡಳಿ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಹಕಾರದಿಂದ ಶೇ. 80ರಷ್ಟು ಡ್ರಗ್ಸ್ ವ್ಯಸನಿಗಳನ್ನು ವ್ಯಸನ ಮುಕ್ತರನ್ನಾಗಿ ಮಾಡಲು ಸಾಧ್ಯವಾಗಿದ್ದು, ಮುಂದೆಯೂ ಎಲ್ಲರ ಸಹಕಾರವನ್ನು ಪೊಲೀಸ್ ಇಲಾಖೆ ಕೋರುತ್ತದೆ

Continue Reading

arrest

ಭಾರಿ ಪ್ರಮಾಣದ ಮಾದಕವಸ್ತು ಸಾಗಾಟ ಜಾಲ ಪತ್ತೆ; ₹1.05 ಕೋಟಿಗೂ ಅಧಿಕ ಮೌಲ್ಯದ ಸೊತ್ತು ವಶ, ಓರ್ವನ ಬಂಧನ

Published

on

​ಬಂಟ್ವಾಳ: ಹಾಸನ ಕಡೆಯಿಂದ ಮಂಗಳೂರು ಕಡೆಗೆ ಅಕ್ರಮವಾಗಿ ಮಾದಕವಸ್ತು (ಡ್ರಗ್ಸ್) ಸಾಗಿಸುತ್ತಿದ್ದ ಬೃಹತ್ ಜಾಲವನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇದಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಸುಮಾರು ₹1,05,59,450/- (ಒಂದು ಕೋಟಿಗೂ ಅಧಿಕ) ಅಂದಾಜು ಮೌಲ್ಯದ ಮಾದಕವಸ್ತು ಹಾಗೂ ಇತರೆ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
​ಬಂಧಿತ ಆರೋಪಿಯನ್ನು ಬೆಂಗಳೂರಿನ ಕೆಂಗೇರಿ ನಿವಾಸಿ ಮಹಮ್ಮದ್ ಅಮೀರ್ ಜರ್ತಾಬ್ (35) ಎಂದು ಗುರುತಿಸಲಾಗಿದೆ.

​ಕಾರ್ಯಾಚರಣೆಯ ವಿವರ:
​ದಿನಾಂಕ 16.08.2026 ರಂದು ತಡರಾತ್ರಿ ಹಾಸನ ಕಡೆಯಿಂದ ಮಂಗಳೂರು ಕಡೆಗೆ ಕಾರಿನಲ್ಲಿ ಮಾದಕವಸ್ತು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಮಂಜುನಾಥ ಟಿ. ಅವರಿಗೆ ಲಭಿಸಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಸಿಬ್ಬಂದಿಗಳು ಬಂಟ್ವಾಳ ತಾಲೂಕು ಕಡೇಶಿವಾಲಯ ಗ್ರಾಮದ ಅಮೈ ಎಂಬಲ್ಲಿ ಬರುತ್ತಿದ್ದ KA-01-MA-1284 ನೋಂದಣಿ ಸಂಖ್ಯೆಯ ಕಾರನ್ನು ತಡೆದು ಪರಿಶೀಲನೆ ನಡೆಸಿದ್ದಾರೆ.
​ವಾಹನ ಚಾಲಕ ಮಹಮ್ಮದ್ ಅಮೀರ್ ಜರ್ತಾಬ್‌ನನ್ನು ತೀವ್ರ ವಿಚಾರಣೆಗೊಳಪಡಿಸಿದಾಗ ಆತ ಕಾರಿನಲ್ಲಿ ಮಾದಕವಸ್ತು ಸಾಗಿಸುತ್ತಿರುವುದಾಗಿ ಒಪ್ಪಿಕೊಂಡಿದ್ದಾನೆ.

ವಶಪಡಿಸಿಕೊಂಡ ಸೊತ್ತುಗಳ ವಿವರ:
​ಕಾರನ್ನು ಕೂಲಂಕಷವಾಗಿ ತಪಾಸಣೆ ನಡೆಸಿದಾಗ ಕೆಳಗಿನ ಸೊತ್ತುಗಳು ಪತ್ತೆಯಾಗಿವೆ:
​MDMA (ಮಾದಕವಸ್ತು): 538.63 ಗ್ರಾಂ (ಅಂದಾಜು ಮೌಲ್ಯ: ₹53,86,300/-)
​ಕೊಕೈನ್: 99.12 ಗ್ರಾಂ (ಅಂದಾಜು ಮೌಲ್ಯ: ₹49,56,000/-)
​ಇತರ ಸಾಮಗ್ರಿಗಳು: ಮಾದಕವಸ್ತು ಪ್ಯಾಕ್ ಮಾಡಲು ಬಳಸುತ್ತಿದ್ದ ಖಾಲಿ ಪ್ಲಾಸ್ಟಿಕ್ ಡಬ್ಬಿಗಳು, ಡಿಜಿಟಲ್ ತೂಕದ ಯಂತ್ರ, ಸಾಗಾಟಕ್ಕೆ ಬಳಸಿದ ಕಾರು ಹಾಗೂ ಇತರೆ ಸಾಮಗ್ರಿಗಳು.
​ಒಟ್ಟು ವಶಪಡಿಸಿಕೊಂಡ ಸೊತ್ತುಗಳ ಅಂದಾಜು ಮೌಲ್ಯ: ₹1,05,59,450/-

ಬಂಟ್ವಾಳ ಉಪವಿಭಾಗದ ಎಎಸ್ಪಿ ಐಪಿಎಸ್ ಯಶ್ ಕುಮಾರ್ ಶರ್ಮ ಅವರ ಮಾರ್ಗದರ್ಶನದಲ್ಲಿ, ಬಂಟ್ವಾಳ ಪೊಲೀಸ್ ಇನ್‌ಸ್ಪೆಕ್ಟರ್ ಅನಂತ ಪದ್ಮನಾಭ ಅವರ ನೇತೃತ್ವದಲ್ಲಿ, ಗ್ರಾಮಾಂತರ ಠಾಣೆಯ ಎಸ್‌ಐ ಮಂಜುನಾಥ ಟಿ. ಹಾಗೂ ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಲೋಕೇಶ್ ,ಅಶೋಕ್, ರಾಘವೇಂದ್ರ, ಪ್ರಶಾಂತ್, ಬಸವರಾಜ್, ನಜೀರ್, ಶ್ರೀಧರ್, ಮಾರುತಿ, ಕುಮಾರ್ ಹಾಗೂ ವಿವೇಕ್ ಭಾಗವಹಿಸಿದ್ದರು.
​ಪ್ರಕರಣ ದಾಖಲು:
​ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 113/2026, ಕಲಂ: 8(C) r/w 22(C), 21(ಬಿ) NDPS ACT 1985 ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಮುಂದುವರಿಸಿದ್ದಾರೆ.

Continue Reading

arrest

ಬಂಟ್ವಾಳ ಗ್ರಾಮಾಂತರ ಪೊಲೀಸರ ಭರ್ಜರಿ ಕಾರ್ಯಾಚರಣೆ: ಲಕ್ಷಾಂತರ ಮೌಲ್ಯದ ಡ್ರಗ್ಸ್‌ನೊಂದಿಗೆ ಮೂವರ ಬಂಧನ!

Published

on

ಬಂಟ್ವಾಳ: ನಿಷೇಧಿತ ಮಾದಕ ದ್ರವ್ಯ ಮಾರಾಟ ಹಾಗೂ ಸಾಗಾಟದ ವಿರುದ್ಧ ಸಮರ ಸಾರಿರುವ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ, ಭರ್ಜರಿ ಕಾರ್ಯಾಚರಣೆ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಎಂಡಿಎಂಎ (MDMA) ಮತ್ತು ಗಾಂಜಾವನ್ನು ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಆಗಸ್ಟ್ 12, 2026 ರಂದು ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಆಲಂಪುರಿ ಬಳಿಯ ‘ಸಾಲು ಮರದ ತಿಮ್ಮಕ್ಕ ರಾಷ್ಟ್ರೀಯ ಉದ್ಯಾನವನ’ದ ರಸ್ತೆ ಪಕ್ಕದಲ್ಲಿ ದಾಳಿ ನಡೆಸಿದ ಪೊಲೀಸರು ಈ ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ.

ವಶಪಡಿಸಿಕೊಂಡ ಸೊತ್ತುಗಳ ವಿವರ

  • ಎಂ.ಡಿ.ಎಂ.ಎ (MDMA): 22.57 ಗ್ರಾಂ (ಮೌಲ್ಯ ಸುಮಾರು ₹2,25,000)
  • ಗಾಂಜಾ: 30.34 ಗ್ರಾಂ
  • ವಾಹನ: ಡ್ರಗ್ಸ್ ಸಾಗಾಟಕ್ಕೆ ಬಳಸಿದ್ದ ಸ್ವಿಫ್ಟ್ ಕಾರು (ಮೌಲ್ಯ ಸುಮಾರು ₹2,00,000)
  • ಮೊಬೈಲ್ : 5 ಫೋನ್‌ಗಳು

ಒಟ್ಟು ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ: ಸುಮಾರು ₹4,90,000/-

ಬಂಧಿತ ಆರೋಪಿಗಳ ವಿವರ

  1. ನಾಶೀರ್ ಹುಸೇನ್ (37), ತಂದೆ: ದಿ. ಅಬ್ದುಲ್ ರಹಿಮಾನ್, ವಾಸ: ವಲಚ್ಚಿಲ್, ಅಡ್ಯಾರು ಗ್ರಾಮ, ಮಂಗಳೂರು ತಾಲೂಕು.
  2. ಮಹಮ್ಮದ್ ಜುನೈದ್ (38), ತಂದೆ: ಎಸ್. ಇಬ್ರಾಹಿಂ, ವಾಸ: ಕಲ್ಲಡ್ಕ ಪ್ರಾಥಮಿಕ ಶಾಲೆಯ ಬಳಿ, ಗೋಳ್ತಮಜಲು ಗ್ರಾಮ, ಬಂಟ್ವಾಳ ತಾಲೂಕು.
  3. ಮೊಹಮ್ಮದ್ ಅಫ್ರೀದಿ (24), ತಂದೆ: ಕೆ. ಸಿರಾಜ್, ವಾಸ: ವಿಶ್ವಾಸ್ ಲೇಔಟ್, ಕಂಕನಾಡಿ, ಮಂಗಳೂರು ತಾಲೂಕು.

ಕಾರ್ಯಾಚರಣೆ ನಡೆಸಿದ ತಂಡ

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಅರುಣ್ ಕೆ. ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅನಿಲ್ ಕುಮಾರ್ ಭೂಮರಡ್ಡಿ ಅವರ ಮಾರ್ಗದರ್ಶನದಲ್ಲಿ, ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ (ASP) ಯಶ್ ಕುಮಾರ್ ಶರ್ಮಾ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

ತಂಡದಲ್ಲಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿ:

  • ಇನ್ಸ್‌ಪೆಕ್ಟರ್: ಅನಂತ ಪದ್ಮನಾಭ ಕೆ.ವಿ.
  • ಪಿ.ಎಸ್.ಐ: ರನ್ನ ಗೌಡ ಎಸ್. ಪಾಟೀಲ್
  • ಪ್ರೊ. ಪಿ.ಎಸ್.ಐ: ಶಿವರಾಮ್, ಫಕೀರಪ್ಪ
  • ಸಿಬ್ಬಂದಿಗಳು: ಉದಯ ರೈ, ರಾಧಾಕೃಷ್ಣ ಕೆ, ಪ್ರವೀಣ್ ರೈ, ಪ್ರಶಾಂತ್, ಲೋಕೇಶ್, ವಿವೇಕ್ ರೈ, ಕುಮಾರ್, ಬಸವರಾಜ್, ಶ್ರೀಧರ್ ಮತ್ತು ಧನ್ಯಶ್ರೀ.
  • ತಾಂತ್ರಿಕ ವಿಭಾಗ: ಕಾರ್ಯಾಚರಣೆಗೆ ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ್ ಹಾಗೂ ಸಂಪತ್ ಸಹಕರಿಸಿದ್ದಾರೆ.

ಯಶಸ್ವಿ ಕಾರ್ಯಾಚರಣೆ ನಡೆಸಿದ ಇಡೀ ತಂಡದ ಕ್ಷಿಪ್ರ ಕ್ರಮವನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಶಂಸಿಸಿದ್ದಾರೆ.

Continue Reading

Trending

Copyright © 2025 Deevatige

error: Content is protected !!