Bantawala
ಗಡಿಭಾಗದ ಗಣಿ ದಂಧೆ ಬಯಲಿಗೆಳೆದ ಬೆನ್ನಲ್ಲೇ ವಿಟ್ಲ ಪೊಲೀಸರ ಬಿರುಗಾಳಿ ದಾಳಿ; ದೀವಟಿಗೆ ಡಿಜಿಟಲ್ ಮೀಡಿಯಾ ಇಂಪ್ಯಾಕ್ಟ್
ಬಂಟ್ವಾಳ: ಕೇರಳ ಗಡಿ ಭಾಗದ ಬಾಯಾರು ಪ್ರದೇಶದಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿದೆ ಎಂದು ದಾಖಲೆ ಸಹಿತ ಪ್ರಸಾರ ಮಾಡಿದ ದೀವಟಿಗೆ ವರದಿಯ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ವಿಟ್ಲ ಪೊಲೀಸರು, ಕರೋಪಾಡಿ ಗ್ರಾಮದ ಮುಗುಳಿ ಎಂಬಲ್ಲಿ ಇನ್ನೊಂದು ಅಕ್ರಮವಾಗಿ ನಡೆಯುತ್ತಿದ್ದ ಕೆಂಪುಕಲ್ಲು ಮತ್ತು ಮಣ್ಣು ಗಣಿಗಾರಿಕೆ ಸ್ಥಳಕ್ಕೆ ದಾಳಿ ನಡೆಸಿ, ಕೋಟ್ಯಂತರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಪರವಾನಿಗೆ ಇರುವುದು ಕನ್ಯಾನ ಮತ್ತು ಕರೋಪಾಡಿ ಗ್ರಾಮದ ಪಾದೆಕಲ್ಲು ಪೆರೋಡಿ ಸರವು ಪ್ರದೇಶದ ಗುಡ್ಡಗಳಿಗೆ. ಆದರೆ, ವಾಸ್ತವದಲ್ಲಿ ಮಣ್ಣು ಎತ್ತುತ್ತಿರುವುದು ಕನ್ಯಾನ-ಕರೋಪಾಡಿಗೆ ಹೊಂದಿಕೊಂಡಿರುವ ಕೇರಳ ರಾಜ್ಯದ ‘ಬಾಯಾರ್’ ಭಾಗದ ಗುಡ್ಡಗಳಿಂದ! ಎಂಬುವುದಾಗಿ ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಗಣಿಗಾರಿಕೆಯ ದಂಧೆಯನ್ನು ಜುಲೈ 1 ರಂದು ‘ದೀವಟಿಗೆ ಡಿಜಿಟಲ್ ಮೀಡಿಯಾ’ ದಾಖಲೆ ಸಮೇತ ಜಗಜ್ಜಾಹೀರು ಮಾಡಿತ್ತು. ಈ ತನಿಖಾ ವರದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸ್ ಇಲಾಖೆ, ಮರುದಿನವೇ (ಜುಲೈ 2) ಇನ್ನೊಂದು ಅಕ್ರಮ ದಂಧೆಯ ಅಡ್ಡೆಗೆ ಲಗ್ಗೆ ಇಟ್ಟು ಭರ್ಜರಿ ಬೇಟೆಯಾಡಿದೆ.
ಮಾಧ್ಯಮ ವರದಿಗೆ ತಲ್ಲಣಿಸಿದ ಗಣಿ ಮಾಫಿಯಾ: ಬಿರುಗಾಳಿ ದಾಳಿ!
ಜುಲೈ 2ರಂದು ಸಂಜೆ ವಿಟ್ಲ ಠಾಣಾ ಪೊಲೀಸ್ ಉಪನಿರೀಕ್ಷಕರಾದ ರಾಮಕೃಷ್ಣ ಅವರಿಗೆ ಕರೋಪಾಡಿ ಗ್ರಾಮದ ಮುಗುಳಿ ಎಂಬಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಪಿಎಸ್‌ಐ ಮತ್ತು ಸಿಬ್ಬಂದಿಗಳ ತಂಡ ಸ್ಥಳಕ್ಕೆ ಧಾವಿಸಿದೆ.
ಪೊಲೀಸ್ ವಾಹನ ಬರುತ್ತಿರುವುದನ್ನು ದೂರದಿಂದಲೇ ಗಮನಿಸಿದ ಗಣಿ ಮಾಫಿಯಾದ ಆಸಾಮಿಗಳು ಮತ್ತು ಕಾರ್ಮಿಕರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಪೊಲೀಸರು ಜಾಗವನ್ನು ಪರಿಶೀಲಿಸಿದಾಗ ಅಲ್ಲಿ ಯಾವುದೇ ಪರವಾನಗಿ ಇಲ್ಲದೆ, ಕಾನೂನುಬಾಹಿರವಾಗಿ ಕೆಂಪುಕಲ್ಲು ಗಣಿಗಾರಿಕೆ ಮಾಡುತ್ತಿರುವುದು ಪತ್ತೆಯಾಗಿದೆ. ಗಣಿಗಾರಿಕೆಗೆ ಬಳಸುತ್ತಿದ್ದ ಯಂತ್ರೋಪಕರಣಗಳನ್ನು ಪೊಲೀಸರು ಸ್ಥಳದಲ್ಲೇ ವಶಪಡಿಸಿಕೊಂಡಿದ್ದಾರೆ.
ವೇ-ಬ್ರಿಡ್ಜ್ ನಿರ್ಮಿಸಿ ಕೋಟ್ಯಂತರ ರೂ. ಮಣ್ಣು ಲೂಟಿ!
ಪೊಲೀಸರು ಸುತ್ತಮುತ್ತಲಿನ ಪ್ರದೇಶವನ್ನು ಜಾಲಾಡಿದಾಗ ಮತ್ತೊಂದು ಶಾಕಿಂಗ್ ಸತ್ಯ ಬೆಳಕಿಗೆ ಬಂದಿದೆ. ಕಲ್ಲು ಗಣಿಗಾರಿಕೆ ನಡೆಯುತ್ತಿದ್ದ ಸ್ಥಳದ ಸಮೀಪದಲ್ಲೇ ಬೃಹತ್ ಪ್ರಮಾಣದಲ್ಲಿ ಅಕ್ರಮ ಮಣ್ಣು ಗಣಿಗಾರಿಕೆಯೂ ನಡೆಯುತ್ತಿತ್ತು!
ಅಚ್ಚರಿಯ ವಿಷಯವೆಂದರೆ, ಇಲ್ಲಿಂದ ಸಾಗಣೆಯಾಗುವ ಮಣ್ಣಿನ ಲಾರಿಗಳನ್ನು ತೂಕ ಮಾಡಲು ದಂಧೆಕೋರರು ಗಣಿಗಾರಿಕೆ ಸ್ಥಳದಲ್ಲೇ ಅನಧಿಕೃತವಾಗಿ ವೇ-ಬ್ರಿಡ್ಜ್ (Way Bridge) ಮತ್ತು ಕಟ್ಟಡವನ್ನು ನಿರ್ಮಿಸಿಕೊಂಡಿದ್ದರು. ಗಡಿ ದಾಟುತ್ತಿದ್ದ ಮಣ್ಣಿನ ದಂಧೆ ಎಷ್ಟು ವ್ಯವಸ್ಥಿತವಾಗಿ ಮತ್ತು ಹಗಲು ದರೋಡೆಯಂತೆ ನಡೆಯುತ್ತಿತ್ತು ಎಂಬುದಕ್ಕೆ ಈ ವೇ-ಬ್ರಿಡ್ಜ್ ಸಾಕ್ಷಿಯಾಗಿದೆ. ಸ್ಥಳದಲ್ಲಿದ್ದ ಲಾರಿಗಳು ಮತ್ತು ಮಣ್ಣು ಅಗೆಯುವ ಯಂತ್ರೋಪಕರಣಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
## ಮುಖ್ಯ ಆರೋಪಿ ಮುಳಿಗದ್ದೆ ಝಕಾರಿಯಾ ವಿರುದ್ಧ ಎಫ್‌ಐಆರ್
ಯಾವುದೇ ಕಾನೂನುಬದ್ಧ ಪರವಾನಗಿ ಇಲ್ಲದೆ ಗಣಿಗಾರಿಕೆ ನಡೆಸುತ್ತಿದ್ದ ಮುಖ್ಯ ಆರೋಪಿ ಮುಳಿಗದ್ದೆ ಝಕಾರಿಯಾ ಹಾಗೂ ಆತನ ಸಹಚರರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಗಂಭೀರ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ದಾಖಲಾದ ಪ್ರಕರಣದ ವಿವರಗಳು:
ಈ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ಸಂಖ್ಯೆ ಅ.ಕ್ರ: 148/2026 ರಂತೆ ಪ್ರಕರಣ ದಾಖಲಾಗಿದೆ. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) 2023 ರ ಕಲಂ 303(2) (ಕಳವು/ಅಕ್ರಮ ವಶ), ಗಣಿ ಮತ್ತು ಖನಿಜಗಳ ನಿಯಂತ್ರಣ ಹಾಗೂ ಅಭಿವೃದ್ಧಿ ಕಾಯ್ದೆ (MMDR ACT) 1957 ರ ಕಲಂ 4(1), 21 ಹಾಗೂ ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಾವಳಿ (KMCR) 1994 ರ ಕಲಂ 3, 44 ರ ಅಡಿಯಲ್ಲಿ ಗಂಭೀರ ಮೊಕದ್ದಮೆ ಹೂಡಲಾಗಿದೆ. ಪ್ರಸ್ತುತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ (SP) ಮಾರ್ಗದರ್ಶನದಲ್ಲಿ ವಿಟ್ಲ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ತಲೆಮರೆಸಿಕೊಂಡಿರುವ ಮುಖ್ಯ ಆರೋಪಿ ಮುಳಿಗದ್ದೆ ಝಕಾರಿಯಾ ಮತ್ತು ಆತನ ಸಹಚರರ ಪತ್ತೆಗೆ ಬಲೆ ಬೀಸಿದ್ದಾರೆ
ದೀವಟಿಗೆ ಡಿಜಿಟಲ್ ಮೀಡಿಯಾದ ಜವಾಬ್ದಾರಿಯುತ ಪತ್ರಿಕೋದ್ಯಮಕ್ಕೆ ಜಯ!
ಕೇರಳ ಗಡಿಭಾಗದ ಕರೋಪಾಡಿಯಲ್ಲಿ ಪರವಾನಗಿಯ ಹೆಸರಿನಲ್ಲಿ ಕರ್ನಾಟಕದ ಗಡಿಯೊಳಗೆ ನುಗ್ಗಿ ಬಾಕ್ಸೈಟ್ ಹಾಗೂ ಇನ್ನಿತರ ನೈಸರ್ಗಿಕ ಸಂಪತ್ತನ್ನು ಲೂಟಿ ಮಾಡಲಾಗುತ್ತಿದೆ ಎಂದು ನಿರ್ಭೀತಿಯಿಂದ ದೀವಟಿಗೆ ಡಿಜಿಟಲ್ ಮೀಡಿಯಾ ಜುಲೈ 1 ರಂದು ತನಿಖಾ ವರದಿಯನ್ನು ಪ್ರಸಾರ ಮಾಡಿತ್ತು. ಮಾಧ್ಯಮದ ವರದಿಗೆ 24 ಗಂಟೆಗಳ ಒಳಗಾಗಿ ಜಿಲ್ಲಾ ಪೊಲೀಸ್ ಇಲಾಖೆ ಸ್ಪಂದಿಸಿ, ಇಷ್ಟೊಂದು ದೊಡ್ಡ ಮಟ್ಟದ ಅಕ್ರಮ ಅಡ್ಡೆಯನ್ನು ಧ್ವಂಸಗೊಳಿಸಿರುವುದು ಸಾರ್ವಜನಿಕ ವಲಯದಲ್ಲಿ ಭಾರೀ ಶ್ಲಾಘನೆಗೆ ಪಾತ್ರವಾಗಿದೆ. ದೀವಟಿಗೆಯ ಜನಪರ ಹಾಗೂ ಜವಾಬ್ದಾರಿಯುತ ಪತ್ರಿಕೋದ್ಯಮಕ್ಕೆ ಸಂದ ಮತ್ತೊಂದು ದೊಡ್ಡ ಜಯ ಇದಾಗಿದೆ.



Bantawala
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷತೆಗೆ ಹನೀಫ್ ಬಗ್ಗುಮೂಲೆ ಅರ್ಜಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಸಾರಥ್ಯ ವಹಿಸಲು ಪಕ್ಷದ ಹಿರಿಯ, ನಿಷ್ಠಾವಂತ ಹಾಗೂ ನೇರ ನಡೆ-ನುಡಿಯ ಪ್ರಭಾವಿ ನಾಯಕ ಹನೀಫ್ ಬಗ್ಗುಮೂಲೆ ಅವರು ಅಧಿಕೃತವಾಗಿ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಮೂರು ದಶಕಗಳಿಂದ ಪಕ್ಷ ಹಾಗೂ ಸಮಾಜಸೇವೆಯಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇವರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ.
ಮೂರು ದಶಕಗಳ ಸುದೀರ್ಘ ರಾಜಕೀಯ ಪಯಣ
ಬಂಟ್ವಾಳ ತಾಲೂಕು ಕುಳ ಗ್ರಾಮದ ಬಗ್ಗುಮೂಲೆ ನಿವಾಸಿಯಾಗಿರುವ ಹನೀಫ್ ಅವರು ಕಳೆದ 30 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳಿಗೆ ಬದ್ಧರಾಗಿ ನಿರಂತರವಾಗಿ ಶ್ರಮಿಸಿದವರು. ಬಾಲ್ಯದಿಂದಲೇ ಸಾಮಾಜಿಕ ಕಳಕಳಿ ಬೆಳೆಸಿಕೊಂಡಿದ್ದ ಇವರು, ಪಕ್ಷದ ಧ್ವಜದಡಿಯಲ್ಲಿ ಉಚಿತ ಮೆಡಿಕಲ್ ಕ್ಯಾಂಪ್‌ಗಳು, ರಕ್ತದಾನ ಶಿಬಿರಗಳು, ಕ್ರೀಡಾ ಕೂಟಗಳು ಹಾಗೂ ಧಾರ್ಮಿಕ ಸಮಾರಂಭಗಳನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಜನಮಾನಸದಲ್ಲಿ ಆಪತ್ಬಾಂಧವನಾಗಿ ನೆಲೆಸಿದ್ದಾರೆ.
ಸಂಸ್ಥಾಪನಾ ಹೆಜ್ಜೆಗಳು ಮತ್ತು ವಹಿಸಿದ ಜವಾಬ್ದಾರಿಗಳು
ಇವರ ನಿಸ್ಪಕ್ಷಪಾತ ಸೇವೆ ಮತ್ತು ಸಂಘಟನಾ ಚತುರತೆಯನ್ನು ಗುರುತಿಸಿದ ಕಾಂಗ್ರೆಸ್ ಪಕ್ಷ, ಇವರಿಗೆ ವಿವಿಧ ಹಂತಗಳಲ್ಲಿ ಜವಾಬ್ದಾರಿಗಳನ್ನು ನೀಡಿ ಗೌರವಿಸಿದೆ:
ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸೇವಾದಳ: ಅಧ್ಯಕ್ಷರಾಗಿ 3 ವರ್ಷಗಳ ಕಾಲ ಯಶಸ್ವಿ ಸೇವೆ.
ಜಿಲ್ಲಾ ಕಾಂಗ್ರೆಸ್ ಸೇವಾದಳ: ಸಂಘಟನಾ ಕಾರ್ಯದರ್ಶಿಯಾಗಿ ಪಕ್ಷದ ತಳಮಟ್ಟದ ಸಂಘಟನೆ.
ಕೆಪಿಸಿಸಿ (KPCC): ರಾಜ್ಯ ಮಟ್ಟದ ಕಾರ್ಮಿಕ ವಿಭಾಗದ ಕಾರ್ಯದರ್ಶಿಯಾಗಿ ಶ್ರಮಿಕರ ಪರ ಧ್ವನಿ.
ರಾಷ್ಟ್ರೀಯ ರಾಜೀವ ಗಾಂಧಿ ಜ್ಯೋತಿಯಾತ್ರೆ ಸಮಿತಿ: ಪ್ರಸ್ತುತ ಪ್ರಧಾನ ಕಾರ್ಯದರ್ಶಿಯಾಗಿ ದೇಶಾದ್ಯಂತ ವ್ಯಾಪಕ ಕಾರ್ಯಾಚರಣೆ ಹಾಗೂ ಪಕ್ಷದ ಸಿದ್ಧಾಂತಗಳ ಪ್ರಚಾರ.
ಪ್ರಶಸ್ತಿ ಹಾಗೂ ಪುರಸ್ಕಾರ
ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಅಪಾರ ಜನಸೇವೆ ಸಲ್ಲಿಸಿರುವ ಹನೀಫ್ ಬಗ್ಗುಮೂಲೆ ಅವರ ನಿರಂತರ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ “ಗಡಿನಾಡ ರಾಜ್ಯ ಪ್ರಶಸ್ತಿ” ನೀಡಿ ಗೌರವಿಸಲಾಗಿದೆ.
ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸಲು ಮತ್ತು ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯಲು ತಮ್ಮ ಅನುಭವ ಮತ್ತು ಬದ್ಧತೆ ಸಹಕಾರಿಯಾಗಲಿದೆ ಎಂಬ ವಿಶ್ವಾಸದೊಂದಿಗೆ ಅವರು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದಾರೆ.

Bantawala
ದಕ್ಷಿಣ ಕನ್ನಡ: ರಾಯಿ ಸಮೀಪ ನದಿಯಲ್ಲಿ ಕೊಚ್ಚಿಹೋಗಿದ್ದ ವ್ಯಕ್ತಿಯ ಮೃತದೇಹ ಸಂಗಬೆಟ್ಟುವಿನಲ್ಲಿ ಪತ್ತೆ
ಮಂಗಳೂರು: ಬಂಟ್ವಾಳ ತಾಲೂಕಿನ ರಾಯಿ ಸಮೀಪ ಶನಿವಾರ ತಡರಾತ್ರಿ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಹೋಗಿದ್ದ 48 ವರ್ಷದ ವ್ಯಕ್ತಿಯೊಬ್ಬರ ಮೃತದೇಹವು ಸೋಮವಾರ ಬೆಳಿಗ್ಗೆ ಸಂಗಬೆಟ್ಟು ಪ್ರದೇಶದಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರನ್ನು ರಾಯಿ ನಿವಾಸಿ ಜೀವನ್ ಪಿಂಟೊ (48) ಎಂದು ಗುರುತಿಸಲಾಗಿದೆ.
ಘಟನೆಯ ವಿವರ: ಶನಿವಾರ ತಡರಾತ್ರಿ ಜೀವನ್ ಪಿಂಟೊ ಅವರು ತೋಡಿನ ಆಚೆಗಿರುವ ತಮ್ಮ ಮಾವನ ಮನೆಗೆ ತೆರಳಲು ಕಾಲುಸಂಕದ ಮೇಲೆ ನದಿ ದಾಟುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿತ್ತು. ಘಟನಾ ಸ್ಥಳದಲ್ಲಿ ಅವರ ಚಪ್ಪಲಿ ಹಾಗೂ ಟಾರ್ಚ್‌ಲೈಟ್ ಪತ್ತೆಯಾಗಿದ್ದರೂ, ಅವರು ನೀರಿಗೆ ಬಿದ್ದಿದ್ದಾರೋ ಅಥವಾ ಬೇರೆಡೆ ತೆರಳಿದ್ದಾರೋ ಎಂಬುದು ಅಧಿಕೃತವಾಗಿ ದೃಢಪಟ್ಟಿರಲಿಲ್ಲ.

ಸತತ ಶೋಧ ಕಾರ್ಯಾಚರಣೆ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಮತ್ತು ನದಿಯಲ್ಲಿ ಹರಿಯುತ್ತಿರುವ ಪ್ರಬಲ ನೀರಿನ ಸೆಳೆತದ ನಡುವೆಯೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಹಾಗೂ ಸ್ಥಳೀಯ ಮುಳುಗುತಜ್ಞರು ಮತ್ತು ಗ್ರಾಮಸ್ಥರು ಕಳೆದ ಎರಡು ದಿನಗಳಿಂದ ಜಂಟಿಯಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದರು.
ಸತತ ಕಾರ್ಯಾಚರಣೆಯ ಫಲವಾಗಿ ಸೋಮವಾರ ಬೆಳಿಗ್ಗೆ ಸಂಗಬೆಟ್ಟು ಸಮೀಪ ಅವರ ಮೃತದೇಹ ಪತ್ತೆಯಾಗಿದೆ. ತಕ್ಷಣವೇ ಮೃತದೇಹವನ್ನು ನದಿಯಿಂದ ಹೊರತೆಗೆದ ಅಧಿಕಾರಿಗಳು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಕಾನೂನು ಹಾಗೂ ಮರಣೋತ್ತರ ಪರೀಕ್ಷೆಯ ಪ್ರಕ್ರಿಯೆಗಳನ್ನು ಕೈಗೊಂಡಿದ್ದಾರೆ.
Bantawala
ಬಸ್‌ನಲ್ಲಿ ಅಸಭ್ಯ ವರ್ತನೆ: ವಿಕೃತಕಾಮಿ ವೃದ್ಧ ಅರ್ಚಕನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಕೇಸ್ ದಾಖಲು!
ಬಂಟ್ವಾಳ: ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಎದುರು ಖಾಸಗಿ ಅಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ವೃದ್ಧನೊಬ್ಬನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯ ವಿವರ:
ಜುಲೈ 30ರಂದು ಮಂಗಳೂರಿನ ಸ್ಟೇಟ್ ಬ್ಯಾಂಕ್‌ನಿಂದ ಉಪ್ಪಿನಂಗಡಿಗೆ ಹೊರಟಿದ್ದ ಖಾಸಗಿ ಬಸ್‌ನಲ್ಲಿ ಈ ಘಟನೆ ನಡೆದಿದೆ. ಮಧ್ಯಾಹ್ನ 2.10ರ ಸುಮಾರಿಗೆ ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ಬಸ್ ಏರಿದ್ದ ಸುಮಾರು 60–70 ವರ್ಷ ಪ್ರಾಯದ ವ್ಯಕ್ತಿಯೊಬ್ಬ, ಚಾಲಕನ ಎಡಭಾಗದ ಅಡ್ಡ ಸೀಟಿನಲ್ಲಿ ಕುಳಿತುಕೊಂಡಿದ್ದ. ಪ್ರಯಾಣದ ವೇಳೆ ಎದುರಿನ ಸೀಟಿನಲ್ಲಿದ್ದ ಮಹಿಳೆಯರಿಗೆ ಕಾಣುವಂತೆ ಅಸಭ್ಯವಾಗಿ ಗುಪ್ತಾಂಗ ಪ್ರದರ್ಶಿಸಿ ವಿಕೃತಿ ಮೆರೆದಿದ್ದಾನೆ.
ಮಹಿಳೆಯ ಧೈರ್ಯ, ವೈರಲ್ ವೀಡಿಯೋ:
ವೃದ್ಧನ ನೀಚ ಕೃತ್ಯವನ್ನು ಕಂಡು ಆಕ್ರೋಶಗೊಂಡ ಬಸ್‌ನಲ್ಲಿದ್ದ ಮಹಿಳೆಯೊಬ್ಬರು ಧೈರ್ಯದಿಂದ ತಮ್ಮ ಮೊಬೈಲ್‌ನಲ್ಲಿ ಆತನ ವಿಕೃತಿಯನ್ನು ವೀಡಿಯೋ ರೆಕಾರ್ಡ್ ಮಾಡಿದ್ದಾರೆ. ಇದನ್ನು ಗಮನಿಸಿದ ವೃದ್ಧ, ಮೆಲ್ಕಾರ್ ಜಂಕ್ಷನ್ ತಲುಪುತ್ತಿದ್ದಂತೆ ಗಾಬರಿಯಿಂದ ಬಸ್‌ನಿಂದ ಇಳಿದು ಪರಾರಿಯಾಗಿದ್ದ. ಬಳಿಕ ಈ ವಿಷಯ ಬಸ್ ಚಾಲಕನ ಗಮನಕ್ಕೂ ಬಂದಿತ್ತು. ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು ಆರೋಪಿಯ ಗುರುತು ಪತ್ತೆ ಹಚ್ಚಿದ್ದು, ಆತ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಸಾದಿಕುಕ್ಕು ಅಂಗನವಾಡಿ ಬಳಿಯ ನಿವಾಸಿ ಹಾಗೂ ವೃತ್ತಿಯಲ್ಲಿ ಅರ್ಚಕ ಎಂದು ತಿಳಿದುಬಂದಿದೆ.
ಬಂಟ್ವಾಳ ಠಾಣೆಯಲ್ಲಿ ದೂರು:
ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.ಕ್ರ. 107/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 75(2)ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
-
Bantawala3 weeks agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್‌ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime6 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime4 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala4 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
accident2 weeks agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
Bantawala7 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Bantawala4 weeks agoಮಂಚಿ ಮೋಂತಿಮಾರು: ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಕತ್ತಿಯಿಂದ ಮಾರಣಾಂತಿಕ ದಾಳಿ; ಯುವತಿ ಗಂಭೀರ
