Connect with us

DEATH

🛑 BREAKING NEWS: ನಿರಂಜನ ರೈ ಮಠಂತಬೆಟ್ಟು ಅವರ ನಿಧನ: ಕಂಬಳ ಕ್ಷೇತ್ರ ಹಾಗೂ ಸಾಂಸ್ಕೃತಿಕ ರಂಗದ ಧ್ರುವತಾರೆ ಅಸ್ತಂಗತ

Published

on

ಪುತ್ತೂರು: ಕಂಬಳ ಕ್ಷೇತ್ರದ ಹಿರಿಯ ಸಂಘಟಕರು, ಪ್ರಸಿದ್ಧ ವೀಕ್ಷಕ ವಿವರಣೆಗಾರರು ಹಾಗೂ ಸಾಮಾಜಿಕ, ಧಾರ್ಮಿಕ ಮುಖಂಡರಾದ ನಿರಂಜನ ರೈ ಮಠಂತಬೆಟ್ಟು ಅವರು ಜುಲೈ 8 ರಂದು ತಾಲೂಕು ಕಚೇರಿಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಅಗಲಿಕೆಯಿಂದ ಕರಾವಳಿಯ ಸಾಂಸ್ಕೃತಿಕ ಮತ್ತು ಸಾಮಾಜಿಕ ರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.

ಘಟನೆಯ ವಿವರ:
ಅವರು ಇಂದು ಮಧ್ಯಾಹ್ನ ತಾಲೂಕು ಕಚೇರಿಗೆ ಅಧಿಕೃತ ಕೆಲಸದ ನಿಮಿತ್ತ ಆಗಮಿಸಿದ್ದರು. ಈ ವೇಳೆ ಅವರಿಗೆ ಏಕಾಏಕಿ ತೀವ್ರ ಅಸ್ವಸ್ಥತೆ ಕಾಣಿಸಿಕೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲು ಪ್ರಯತ್ನಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ

ಬಹುಮುಖಿ ಸೇವೆ ಮತ್ತು ಸಕ್ರಿಯತೆ:
ಅಗಲಿದ ಮುಖಂಡ ನಿರಂಜನ ರೈ ಅವರು ಸಮಾಜದ ವಿವಿಧ ರಂಗಗಳಲ್ಲಿ ಅತ್ಯಂತ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು

ಭೂ ನ್ಯಾಯ ಮಂಡಳಿ: ಪುತ್ತೂರು ತಾಲೂಕು ಭೂ ನ್ಯಾಯ ಮಂಡಳಿಯ (Land Tribunal) ಸಕ್ರಿಯ ಸದಸ್ಯರಾಗಿ ಜನಸಾಮಾನ್ಯರ ಕಂದಾಯ ಮತ್ತು ಭೂಮಿ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುತ್ತಿದ್ದರು.

ಧಾರ್ಮಿಕ ಕ್ಷೇತ್ರ: ಶ್ರೀ ಮಹಿಷಮರ್ದಿನಿ ದೇವಸ್ಥಾನ, ಕೋಡಿಂಬಾಡಿ

ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಐತಿಹಾಸಿಕ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಅವರು ಸೇವೆ ಸಲ್ಲಿಸುತ್ತಿದ್ದರು.

ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಅಭಿವೃದ್ಧಿ ಕೆಲಸಗಳಲ್ಲಿ ಮುಂಚೂಣಿಯಲ್ಲಿದ್ದರು.

ಜಾನಪದ ಕ್ರೀಡೆ: ಕಂಬಳ ಕ್ಷೇತ್ರ ಮತ್ತು ಕೋಟಿ-ಚೆನ್ನಯ ಕಂಬಳ ಸಮಿತಿ

ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳದ ಹಿರಿಯ ತೀರ್ಪುಗಾರರಾಗಿ ಮತ್ತು ಪ್ರಸಿದ್ಧ ವೀಕ್ಷಕ ವಿವರಣೆಗಾರರಾಗಿ (Commentator) ದಶಕಗಳ ಕಾಲ ಸೇವೆ ಸಲ್ಲಿಸಿದ್ದರು.

ಪುತ್ತೂರಿನ ಪ್ರಖ್ಯಾತ “ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿ”ಯ ಉಪಾಧ್ಯಕ್ಷರಾಗಿ ಹಾಗೂ ಸಕ್ರಿಯ ಸಂಘಟಕರಾಗಿ ಕಂಬಳ ಕ್ರೀಡೆಯ ಬೆಳವಣಿಗೆಗೆ ಶ್ರಮಿಸಿದ್ದರು.

ಭಾಷೆ ಮತ್ತು ಸಂಸ್ಕೃತಿ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾಗಿ ತುಳು ಭಾಷೆ, ಸಂಸ್ಕೃತಿ ಮತ್ತು ಜಾನಪದ ಕಲೆಗಳ ಉಳಿವಿಗಾಗಿ ಕೆಲಸ ಮಾಡಿದ್ದರು.

ಸ್ವತಃ ನಾಟಕ ಕಲಾವಿದರಾಗಿಯೂ ರಂಗಭೂಮಿಯಲ್ಲಿ ಗುರುತಿಸಿಕೊಂಡಿದ್ದರು.

ಸಾರ್ವಜನಿಕ ಮತ್ತು ರಾಜಕೀಯ ಕ್ಷೇತ್ರ

ಪುತ್ತೂರು ತಾಲೂಕು ಭೂ ನ್ಯಾಯ ಮಂಡಳಿಯ (Land Tribunal) ಸದಸ್ಯರಾಗಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿ ಸ್ಥಳೀಯ ರಾಜಕೀಯ ಮತ್ತು ಸಮಾಜ ಸೇವೆಯಲ್ಲಿ ಸದಾ ಸಕ್ರಿಯರಾಗಿದ್ದರು.

ತಮ್ಮ ಬಹುಮುಖ ಪ್ರತಿಭೆ, ಸೌಮ್ಯ ಸ್ವಭಾವ, ದಕ್ಷ ಸಂಘಟನಾ ಚತುರತೆಯಿಂದ ಎಲ್ಲರ ಪ್ರೀತಿಪಾತ್ರರಾಗಿದ್ದ ನಿರಂಜನ ರೈ ಅವರ ಹಠಾತ್ ನಿಧನಕ್ಕೆ ರಾಜಕೀಯ ಗಣ್ಯರು, ಕಂಬಳಾಭಿಮಾನಿಗಳು ಹಾಗೂ ಧಾರ್ಮಿಕ ಮುಖಂಡರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ




ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

accident

ಬಂಟ್ವಾಳ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಣೆಯಲ್ಲಿ ದುರ್ಘಟನೆ; ಕೌಟುಂಬಿಕ ಕಲಹದ ಹಿನ್ನೆಲೆ ಮಕ್ಕಳನ್ನು ಬಾವಿಗೆ ಎಸೆದ ತಾಯಿ – ಒಂದು ಮಗು ಸಾವು, ಮತ್ತೊಂದು ಮಗು ಆಸ್ಪತ್ರೆಗೆ ದಾಖಲು

Published

on

ಬಂಟ್ವಾಳ: ದಿನಾಂಕ: 19.09.2026ರಂದು ಮಧ್ಯಾಹ್ನ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಪೆರ್ಣೆ ಮೈರಕಟ್ಟೆಯಲ್ಲಿ ನಡೆದ ದೊಡ್ಡ ದುರಂತವೊಂದು ಬೆಳಕಿಗೆ ಬಂದಿದೆ. ಪೆರ್ಣೆಯಲ್ಲಿ ವಾಸ್ತವವಿರುವ ಸಿನಾನ್ (32) ಹಾಗೂ ನೂರುನ್ನಿಸಾ (28) ಎಂಬ ದಂಪತಿಗಳ ನಡುವೆ ಫೋನ್ ಕರೆಯಲ್ಲಿ ವೈವಾಹಿಕ ಕಲಹ ನಡೆದಿದ್ದು, ಈ ವೇಳೆ ಕೋಪಗೊಂಡ ಆರೋಪಿತೆ ನೂರುನ್ನಿಸಾ ಮನೆಯಲ್ಲಿದ್ದ ಆಕೆಯ ಸುಮಾರು ಮೂರುವರೆ ವರ್ಷದ ಮಗು ಹಾಗೂ ಗಂಡನ ತಂಗಿಯ ಮಗುವನ್ನು ಮನೆ ಸಮೀಪದ ಕುಡಿಯುವ ನೀರಿನ ಬಾವಿಗೆ ಎಸೆದಿರುವುದಾಗಿ ಎಸ್‌ಪಿ ಮಾಹಿತಿ ನೀಡಿದ್ದಾರೆ.

ಆದರೆ, ಬೆಳಿಗ್ಗೆ ಸ್ಥಳೀಯ ವಾಹಿನಿಗಳಲ್ಲಿ ಹಾಗೂ ಆರಂಭಿಕ ವರದಿಗಳಲ್ಲಿ ಮಕ್ಕಳು ಆಟವಾಡುತ್ತಾ ಆಕಸ್ಮಿಕವಾಗಿ ಬಾವಿಗೆ ಬಿದ್ದಿವೆ ಎಂದು ಪ್ರಸಾರವಾಗಿತ್ತು. ಪ್ರತ್ಯಕ್ಷದರ್ಶಿಗಳು ಹಾಗೂ ಆರಂಭಿಕ ಮಾಹಿತಿಯಂತೆ, ಪೆರ್ಣೆ ಮೈರಕಟ್ಟೆಯಲ್ಲಿ ಮಕ್ಕಳು ಬಾವಿಯ ಸಮೀಪವಿದ್ದ ವೇಳೆ ಆಲಿಯಾ (4) ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದು, ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ರಕ್ಷಿಸಿ ಮೇಲಕ್ಕೆ ಕರೆತಂದಿದ್ದರು. ಬಳಿಕ ಮತ್ತೊಂದು ಮಗು ಕೂಡ ಬಾವಿಗೆ ಬಿದ್ದಿರುವ ಬಗ್ಗೆ ಆಲಿಯಾ ಮಾಹಿತಿ ನೀಡಿದ್ದಾಳೆ ಎನ್ನಲಾಗಿದ್ದು, ಸ್ಥಳೀಯರು ಪರಿಶೀಲಿಸಿದಾಗ ರಬೀಹ್ (2) ಬಾವಿಯಲ್ಲಿ ಬಿದ್ದಿರುವುದು ಗಮನಕ್ಕೆ ಬಂದಿತ್ತು. ತಕ್ಷಣ ಮೇಲಕ್ಕೆತ್ತಿ ಆಸ್ಪತ್ರೆಗೆ ಕರೆದೊಯ್ದರೂ ರಬೀಹ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಪ್ರಸಾರವಾಗಿತ್ತು.

ನೈಜ ಸತ್ಯ ಬಯಲುಗೊಳಿಸಿದ ಪೊಲೀಸರು:

ಸ್ಥಳೀಯ ಮಾದ್ಯಮಗಳಲ್ಲಿ ಆರಂಭದಲ್ಲಿ ಆಕಸ್ಮಿಕ ಸಾವು ಎಂದು ಬಿತ್ತರವಾಗಿದ್ದರೂ, ಪೊಲೀಸ್ ತನಿಖೆಯಿಂದ ಅಸಲಿ ವಿಚಾರ ಹೊರಬಂದಿದೆ. ದಂಪತಿಗಳ ನಡುವಿನ ಫೋನ್ ಕರೆಯ ಕೌಟುಂಬಿಕ ಕಲಹದ ರಭಸದಲ್ಲಿ ಕೋಪಗೊಂಡ ಆರೋಪಿತೆ ನೂರುನ್ನಿಸಾ ತಾನೇ ಸ್ವತಃ ಮಕ್ಕಳನ್ನು ಬಾವಿಗೆ ಎಸೆದಿರುವುದು ಎಸ್‌ಪಿ ನೀಡಿರುವ ಅಧಿಕೃತ ಮಾಹಿತಿಯಿಂದ ತಿಳಿದುಬಂದಿದೆ. ಸ್ಥಳೀಯರು ಸ್ಥಳಕ್ಕೆ ಆಗಮಿಸಿ ಮಕ್ಕಳನ್ನು ಮೇಲಕ್ಕೆ ಎತ್ತಿದ1ರ ಪೈಕಿ ಗಂಡನ ತಂಗಿಯ ಮಗು (ರಬೀಹ್ – 3) ಮೃತಪಟ್ಟಿದ್ದು, ಆರೋಪಿತೆಯ ಮಗು (ಆಲಿಯಾ – 4) ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ.

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 121/2026 ರಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿತೆ ನೂರುನ್ನಿಸಾಳನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Continue Reading

DEATH

ಬೆಳಗಾವಿ: ಆಸ್ತಿಗಾಗಿ ಆಕ್ರೋಶ; ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ-ಮಗಳ ಬರ್ಬರ ಹತ್ಯೆ

Published

on

ಬೆಳಗಾವಿ: ಆಸ್ತಿ ದಾಖಲೆಗಳನ್ನು ಪಡೆದುಕೊಳ್ಳಲು ಗ್ರಾಮ ಪಂಚಾಯಿತಿಗೆ ಬಂದಿದ್ದ ಮಾಜಿ ಯೋಧ ಹಾಗೂ ಅವರ ಪುತ್ರಿಯನ್ನು ಸಂಬಂಧಿಕರೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅವರಾದಿ ಗ್ರಾಮದಲ್ಲಿ ನಡೆದಿದೆ.

ಮಾಜಿ ಯೋಧ ರುದ್ರಪ್ಪ ಕುಂದರಗಿ (67) ಮತ್ತು ಅವರ ಪುತ್ರಿ ಶಶಿಕಲಾ ಕುಂದರಗಿ (26) ಹತ್ಯೆಗೀಡಾದ ದುರ್ದೈವಿಗಳು. ಈ ಭೀಕರ ದಾಳಿಯಲ್ಲಿ ರುದ್ರಪ್ಪ ಅವರ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಹಿನ್ನೆಲೆ:

ಮೃತರಾದ ರುದ್ರಪ್ಪ ಹಾಗೂ ಅವರ ಅಣ್ಣತಮ್ಮಂದಿರ ನಡುವೆ 38 ಗುಂಟೆ ಆಸ್ತಿಗೆ ಸಂಬಂಧಿಸಿದಂತೆ ದೀರ್ಘಕಾಲದಿಂದ ವ್ಯಾಜ್ಯವಿತ್ತು ಎನ್ನಲಾಗಿದೆ. ಈ ಆಸ್ತಿಯನ್ನು ಮೂವರಿಗೆ ಹಂಚಿಕೆ ಮಾಡುವಂತೆ ನ್ಯಾಯಾಲಯವೂ ಆದೇಶ ನೀಡಿತ್ತು. ಆದರೆ, ರುದ್ರಪ್ಪ ಅವರಿಗೆ ಸೇರಿದ್ದ ಜಮೀನನ್ನು ಅವರು ಈಗಾಗಲೇ ಮಾರಿಕೊಂಡಿದ್ದು, ಉಳಿದ ಜಮೀನಿನಲ್ಲೂ ತಮಗೆ ಪಾಲು ಬೇಕು ಎಂದು ಸಹೋದರರು ಪಟ್ಟು ಹಿಡಿದಿದ್ದರು. ರುದ್ರಪ್ಪ ಅವರ ಹೆಸರಿನಲ್ಲಿ ಆಸ್ತಿ ಮುಂದುವರಿದಿರುವ ವಿಚಾರವೇ ಈ ಮಾರಣಾಹೋಮಕ್ಕೆ ಪ್ರಮುಖ ಕಾರಣ ಎಂದು ತಿಳಿದುಬಂದಿದೆ.

ಪಂಚಾಯಿತಿ ಒಳಗಡೆಯೇ ಕೃತ್ಯ:

ಧಾರವಾಡದಿಂದ ಬಾಡಿಗೆ ಕಾರಿನಲ್ಲಿ ಗ್ರಾಮಕ್ಕೆ ಬಂದಿದ್ದ ರುದ್ರಪ್ಪ, ಆಸ್ತಿ ಪಾಲುದಾರಿಕೆ ಹಾಗೂ ದಾಖಲೆಗಳನ್ನು ಪಡೆದುಕೊಳ್ಳಲು ಅವರಾದಿ ಗ್ರಾಮ ಪಂಚಾಯಿತಿಗೆ ತೆರಳಿದ್ದರು. ರುದ್ರಪ್ಪ ಪಂಚಾಯಿತಿಗೆ ಬಂದಿರುವ ಸುದ್ಧಿ ತಿಳಿದು ಸ್ಥಳಕ್ಕೆ ಆಗಮಿಸಿದ ಅವರ ಸಹೋದರರಾದ ಬಸಪ್ಪ ಕುಂದರಗಿ, ಸಂಗಪ್ಪ ಕುಂದರಗಿ ಹಾಗೂ ಸಂಗಪ್ಪ ಅವರ ಪುತ್ರ ಮಡಿವಾಳಪ್ಪ ಕುಂದರಗಿ ಏಕಾಏಕಿ ದಾಳಿ ನಡೆಸಿದ್ದಾರೆ.

ಗ್ರಾಮ ಪಂಚಾಯಿತಿ ಕಚೇರಿಯ ಒಳಗಡೆಯೇ ಕೊಡಲಿ, ಕುಡಗೋಲು ಸೇರಿದಂತೆ ಮಾರಕಾಸ್ತ್ರಗಳಿಂದ ರುದ್ರಪ್ಪ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಈ ವೇಳೆ ತಂದೆಯನ್ನು ರಕ್ಷಿಸಲು ಮುಂದಾದ ಪುತ್ರಿ ಶಶಿಕಲಾ ಅವರ ಮೇಲೂ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಇಬ್ಬರನ್ನೂ ನಿರ್ದಯವಾಗಿ ಹತ್ಯೆ ಮಾಡಿದ್ದಾರೆ.

ಈ ಸಂಬಂಧ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಪಂಚಾಯಿತಿ ಕಚೇರಿಯಲ್ಲೇ ನಡೆದ ಈ ಜೋಡಿ ಹತ್ಯೆಯು ಇಡೀ ಗ್ರಾಮದಲ್ಲಿ ತೀವ್ರ ಆತಂಕ ಹಾಗೂ ಶೋಕಮೂಡಿಸಿದೆ.

ಇಬ್ಬರ ಆಸ್ತಿಯಲ್ಲೂ ಪಾಲು ಕೇಳಿದ್ದಕ್ಕೆ ಕುಪಿತಗೊಂಡಿದ್ದ ಇಬ್ಬರು ಸಹೋದರರು, ಇಂದು ಜಮೀನು ದಾಖಲು ಮಾಡಲು ಗ್ರಾಮ ಪಂಚಾಯತ್​ಗೆ ರುದ್ರಪ್ಪ ಬಂದಿದ್ದರು. ಈ ವೇಳೆಯೇ ದಾಳಿ ಮಾಡಿ ತಂದೆ-ಮಗಳನ್ನು ಕೊಲೆ ಮಾಡಿದ್ದಾರೆ. ಬಳಿಕ ಆರೋಪಿಗಳು ಅಲ್ಲಿಂದ ಪರಾರಿ ಆಗಿದ್ದಾರೆ ಅಂತಾ ಸ್ಥಳೀಯರು ಹೇಳಿದ್ದಾರೆ.

ತಂದೆ-ಮಗಳ ಕೊಲೆ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯ ಪೊಲೀಸರಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಮೃತದೇಹಗಳನ್ನು ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಜೋಡಿ ಕೊಲೆಯಿಂದ ಅವರಾದಿ ಗ್ರಾಮದಲ್ಲಿ ಜನರು ಬೆಚ್ಚಿಬಿದ್ದಿದ್ದಾರೆ. ಸ್ಥಳದಲ್ಲಿ ನೂರಾರು ಜನರು ಜಮಾವಣೆಗೊಂಡಿದ್ದಾರೆ.

Continue Reading

Bantawala

ವಿಟ್ಲ ಕಸಬಾ ಗ್ರಾಮದ ಕೈಂತಿಲ ನಿವಾಸಿ, ಮಾಜಿ ಎಪಿಎಂಸಿ ಅಧ್ಯಕ್ಷ ಸಂಕಪ್ಪ ಗೌಡ ನಿಧನ

Published

on

ವಿಟ್ಲ: ವಿಟ್ಲ ಕಸಬಾ ಗ್ರಾಮದ ಕೈಂತಿಲ ನಿವಾಸಿ, ಮಾಜಿ ಎಪಿಎಂಸಿ ಅಧ್ಯಕ್ಷರೂ ಹಾಗೂ ಮಾಜಿ ಗ್ರಾಮ ಪಂಚಾಯತ್ ಸದಸ್ಯರೂ ಆಗಿರುವ ಸಂಕಪ್ಪ ಗೌಡ (67) ಅವರು ಇಂದು ಮುಂಜಾನೆ ತಮ್ಮ ಸ್ವಗೃಹದಲ್ಲಿ ನಿಧನರಾದರು.

ಅವರು ಕಳೆದ ಕೆಲವು ದಿನಗಳಿಂದ ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಭಾರತೀಯ ಜನತಾ ಪಕ್ಷದ (BJP) ನಿಷ್ಠಾವಂತ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದ ಅವರು, ಸಾರ್ವಜನಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಜನಪರ ಕಾಳಜಿಯೊಂದಿಗೆ ಸೇವೆ ಸಲ್ಲಿಸಿದ್ದರು. ಅವರ ಅಗಲಿಕೆಯಿಂದ ಪಕ್ಷಕ್ಕೆ ಹಾಗೂ ಸ್ಥಳೀಯ ಸಮುದಾಯಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.

ಮೃತರು ಪತ್ನಿ, ನಾಲ್ವರು ಪುತ್ರರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Continue Reading

Trending

Copyright © 2025 Deevatige

error: Content is protected !!