murder
ಪ್ರಿಯಕರನ ಜೊತೆ ಸಂಸಾರ, ವಿಮೆ ಹಣದ ಆಸೆ: ಹಾವಿನಿಂದ ಕಚ್ಚಿಸಿ ಪತಿಯ ಹತ್ಯೆಗೈದ ಪತ್ನಿ ಬಂಧನ!
ಪ್ರಿಯಕರನೊಂದಿಗೆ ಬದುಕು ಕಟ್ಟಿಕೊಳ್ಳಲು ಪತ್ನಿ ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆ ಮಾಡುವುದು ನಡೆಯುತ್ತಲೇ ಇದೆ. ಇದೀಗ ಇನ್ನಷ್ಟು ಬೆಚ್ಚಿ ಬೀಳಿಸುವ ಹೊಸ ಸಂಚಿನಿಂದ ಮಾಡಿದ ಆಘಾತಕಾರಿ ಕೊಲೆಯೊಂದನ್ನು ಪತ್ನಿ ಮಾಡಿರುವುದು ಬೆಳಕಿಗೆ ಬಂದಿದೆ.
ಮೀರತ್: ಪ್ರಿಯಕರನೊಂದಿಗೆ ಹೊಸ ಜೀವನ ಆರಂಭಿಸುವ ದುರಾಸೆ ಹಾಗೂ ಪತಿಯ ಹೆಸರಲ್ಲಿದ್ದ ಜೀವ ವಿಮೆ (Life Insurance) ಹಣಕ್ಕೆ ಕಣ್ಣಿಟ್ಟು, ಪತಿಯನ್ನೇ ಹಾವಿನಿಂದ ಕಚ್ಚಿಸಿ ಕೊಲೆ ಮಾಡಿದ್ದ ಕೌರ್ಯದ ಘಟನೆಯೊಂದು ಉತ್ತರ ಪ್ರದೇಶದ ಮೀರತ್ನಲ್ಲಿ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕೇವಲ 24 ಗಂಟೆಗಳಲ್ಲಿ ಭೇದಿಸಿ, ಮೃತನ ಪತ್ನಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಅತುಲ್ ಕೊಲೆಯಾದ ದುರದೃಷ್ಟಕರ ಪತಿ. ಘಟನೆಗೆ ಸಂಬಂಧಿಸಿದಂತೆ ಆತನ ಪತ್ನಿ ದಾಮಿನಿ, ಪ್ರಿಯಕರ ತುಷಾರ್ ಹಾಗೂ ಆತನಿಗೆ ಸಹಕರಿಸಿದ ಸೋನು ಮತ್ತು ಉದಯ್ ಎಂಬವರನ್ನು ಪೊಲೀಸರು ಕಷ್ಟಡಿಗೆ ಪಡೆದಿದ್ದಾರೆ.
ಹಾಲಿನಲ್ಲಿ ನಿದ್ರೆ ಮಾತ್ರೆ, ಬಳಿಕ ಹಾವಿನಿಂದ ಕಚ್ಚಿಸಿ ಕೊಲೆ!
ಪೋಲಿಸರ ತನಿಖೆಯ ಪ್ರಕಾರ, ಮೃತ ಅತುಲ್ ಪತ್ನಿ ದಾಮಿನಿ ‘ಕೃಷ್ಣ ಕಿಡ್ಸ್ ಸ್ಕೂಲ್’ ಎಂಬ ಪ್ಲೇ-ಸ್ಕೂಲ್ ನಡೆಸುತ್ತಿದ್ದರು. ಅಲ್ಲಿ ವಾಹನ ಚಾಲಕನಾಗಿ ಕೆಲಸ ಮಾಡುತ್ತಿದ್ದ ತುಷಾರ್ ಎಂಬಾತನೊಂದಿಗೆ ದಾಮಿನಿಗೆ ಅಕ್ರಮ ಸಂಬಂಧ ಬೆಳೆದಿತ್ತು. ಪತಿಯನ್ನು ದಾರಿಯಿಂದ ತಪ್ಪಿಸಿ, ಪ್ರಿಯಕರನೊಂದಿಗೆ ಬಾಳುವ ಉದ್ದೇಶ ಹಾಗೂ ಪತಿಯ ಜೀವ ವಿಮೆ ಹಣವನ್ನು ಗಿಟ್ಟಿಸಿಕೊಳ್ಳಲು ಇಬ್ಬರೂ ಸೇರಿ ಅತುಲ್ನನ್ನು ಕೊಲ್ಲಲು ಸ್ಕೆಚ್ ಹಾಕಿದ್ದರು.

ಯೋಜನೆಯಂತೆ, ದಾಮಿನಿ ಪತಿ ಅತುಲ್ ಅವರಿಗೆ ಹಾಲಿನಲ್ಲಿ ನಿದ್ರೆ ಮಾತ್ರೆ ಬೆರೆಸಿ ನೀಡಿದ್ದಳು. ಅತುಲ್ ಗಾಢ ನಿದ್ರೆಗೆ ಜಾರುತ್ತಿದ್ದಂತೆ, ಪ್ರಿಯಕರ ತುಷಾರ್ ವಿಷಪೂರಿತ ಹಾವನ್ನು ತಂದುಕೊಟ್ಟಿದ್ದ. ಆ ಹಾವಿನಿಂದ ಅತುಲ್ ಅವರಿಗೆ ಕಚ್ಚಿಸಿ, ಕೊಲೆ ಮಾಡಲಾಗಿತ್ತು. ಹಾವಿನ ಕಡಿತದಿಂದಲೇ ಮೃತಪಟ್ಟಿದ್ದಾರೆ ಎಂದು ಬಿಂಬಿಸಿ, ಸಾವನ್ನು ಸಹಜ ಘಟನೆಯಂತೆ ತೋರಿಸುವುದು ಆರೋಪಿಗಳ ತಂತ್ರವಾಗಿತ್ತು.
24 ಗಂಟೆಯಲ್ಲೇ ಬಲೆಗೆ ಬಿದ್ದ ಆರೋಪಿಗಳು
ಅತುಲ್ ಅವರ ಸಾವಿನ ಕುರಿತು ಕುಟುಂಬಸ್ಥರಿಗೆ ಹಾಗೂ ಪೊಲೀಸರಿಗೆ ಅನುಮಾನ ವ್ಯಕ್ತವಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತನಿಖೆ ಚುರುಕುಗೊಳಿಸಿದಾಗ ಪತ್ನಿ ದಾಮಿನಿ ಮತ್ತು ಪ್ರಿಯಕರ ತುಷಾರ್ ಅವರ ಅಸಲಿ ಬಣ್ಣ ಬಯಲಾಗಿದೆ.
ವಿಷಪೂರಿತ ಹಾವನ್ನು ತರಲು ತುಷಾರ್ಗೆ ಸೋನು ಹಾಗೂ ಉದಯ್ ಎಂಬುವವರು ನೆರವಾಗಿದ್ದರು ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ. ಸದ್ಯ ನಾಲ್ವರೂ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ
court
ಧರ್ಮಸ್ಥಳ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಸುಪ್ರೀಂ ಕೋರ್ಟ್ನಿಂದ ಮರುತನಿಖೆಗೆ ಐತಿಹಾಸಿಕ ಆದೇಶ
ಕರ್ನಾಟಕವನ್ನು ಬೆಚ್ಚಿಬೀಳಿಸಿದ್ದ ಮತ್ತು ದಶಕಗಳಿಂದ ನ್ಯಾಯಕ್ಕಾಗಿ ಹೋರಾಟ ನಡೆದಿದ್ದ ಧರ್ಮಸ್ಥಳದ 17 ವರ್ಷದ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಹಾಗೂ ಐತಿಹಾಸಿಕ ಆದೇಶ ಹೊರಡಿಸಿದೆ. ಪ್ರಕರಣವನ್ನು ಮರುತನಿಖೆ ನಡೆಸುವಂತೆ ಸೂಚಿಸಿರುವ ಸರ್ವೋಚ್ಚ ನ್ಯಾಯಾಲಯ, ಹೊಸದಾಗಿ ವಿಶೇಷ ತನಿಖಾ ತಂಡವನ್ನು (SIT) ರಚಿಸುವಂತೆ ನಿರ್ದೇಶಿಸಿದೆ. ಅಲ್ಲದೆ, ಕೇವಲ ಮೂರು ತಿಂಗಳ ಒಳಗೆ ತನಿಖೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಕಟ್ಟುನಿಟ್ಟಿನ ಗಡುವು ವಿಧಿಸಿದೆ. ಈ ಪ್ರಕರಣದಲ್ಲಿ ಈಗಾಗಲೇ ಸಿಬಿಐ ನ್ಯಾಯಾಲಯದಿಂದ ಖುಲಾಸೆಗೊಂಡಿರುವ ಸಂತೋಷ್ ರಾವ್ ಅವರನ್ನು ಹೊಸ ಎಸ್ಐಟಿ ಮರುತನಿಖೆ ಮಾಡುವಂತಿಲ್ಲ ಅಥವಾ ವಿಚಾರಣೆಗೆ ಒಳಪಡಿಸುವಂತಿಲ್ಲ ಎಂದು ಮಹತ್ವದ ಆದೇಶ ಹೊರಡಿಸಿದೆ
ಪ್ರಕರಣದ ಹಿನ್ನೆಲೆ ಮತ್ತು ಸುಪ್ರೀಂ ಕೋರ್ಟ್ ತೀರ್ಪಿನ ಪ್ರಮುಖ ಮುಖ್ಯಾಂಶಗಳು:
ಘಟನೆಯ ಹಿನ್ನೆಲೆ: 2012ರ ಅಕ್ಟೋಬರ್ನಲ್ಲಿ ಉಜಿರೆಯ ಎಸ್ಡಿಎಂ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸೌಜನ್ಯಾ ಕಾಲೇಜಿನಿಂದ ಮನೆಗೆ ಮರಳುವಾಗ ನಾಪತ್ತೆಯಾಗಿದ್ದರು. ಅಕ್ಟೋಬರ್ 10ರಂದು ಧರ್ಮಸ್ಥಳದ ಮಣ್ಣಸಂಕ ಎಂಬಲ್ಲಿ ಆಕೆಯ ಅರ್ಧನಗ್ನ ಮೃತದೇಹ ಪತ್ತೆಯಾಗಿತ್ತು.
ತನಿಖಾ ವೈಫಲ್ಯ ಮತ್ತು ಆಕ್ರೋಶ: ಸ್ಥಳೀಯ ಪೊಲೀಸರು ಮಾನಸಿಕ ಅಸ್ವಸ್ಥ ಸಂತೋಷ್ ರಾವ್ ಎಂಬಾತನನ್ನು ಬಂಧಿಸಿದ್ದರು. ಆದರೆ ಇದು ಪ್ರಭಾವಿಗಳನ್ನು ರಕ್ಷಿಸಲು ನಡೆಸಿದ ನಾಟಕ ಎಂದು ಸಾರ್ವಜನಿಕರು ಮತ್ತು ಸೌಜನ್ಯಾ ಕುಟುಂಬ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಸಾರ್ವಜನಿಕ ಪ್ರತಿಭಟನೆಯ ಬಳಿಕ ಪ್ರಕರಣವು ಸಿಐಡಿ ಹಾಗೂ ನಂತರ ಸಿಬಿಐ ತನಿಖೆಗೆ ಹಸ್ತಾಂತರಗೊಂಡಿತ್ತು. ಆದರೆ ಸಿಬಿಐ ಕೂಡ ಆರೋಪಿಯನ್ನು ಖುಲಾಸೆಗೊಳಿಸಿತ್ತು.
ಹೈಕೋರ್ಟ್ ಆದೇಶ ಹಾಗೂ ಸುಪ್ರೀಂ ಮೆಟ್ಟಿಲು: ಸಿಬಿಐ ತೀರ್ಪನ್ನು ಪ್ರಶ್ನಿಸಿ ಹಾಗೂ ಮರುತನಿಖೆಗೆ ಕೋರಿ ಸೌಜನ್ಯಾ ತಾಯಿ ಕುಸುಮಾವತಿ ಗೌಡ ಅವರು ಕರ್ನಾಟಕ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಕುಸುಮಾವತಿ ಗೌಡ ಅವರು ಸುಪ್ರೀಂ ಕೋರ್ಟ್ನಲ್ಲಿ ವಿಶೇಷ ಮೇಲ್ಮನವಿ ಅರ್ಜಿ (SLP) ದಾಖಲಿಸಿದ್ದರು.
ಸಿಬಿಐ ತನಿಖೆಗೆ ತೀವ್ರ ತರಾಟೆ: ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ಕುಮಾರ್ ಹಾಗೂ ನ್ಯಾಯಮೂರ್ತಿ ಸಂಜೀವ್ ಸಚ್ದೇವ್ ಅವರನ್ನೊಳಗೊಂಡ ಪೀಠವು, ಸಿಬಿಐ ತನಿಖೆಯ ಕಳಪೆ ಕಾರ್ಯವೈಖರಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. “ಸಿಬಿಐ ತನಿಖಾಧಿಕಾರಿ ನ್ಯಾಯಾಧೀಶರಂತೆ ವರ್ತಿಸಿದ್ದು, ಯಾವುದೇ ಸ್ವತಂತ್ರ ತನಿಖೆ ನಡೆಸದೆ ಹಿಂದಿನ ತನಿಖೆಯನ್ನೇ ಆಧರಿಸಿ ವರದಿ ಸಲ್ಲಿಸಿದ್ದಾರೆ” ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿ ತೀರ್ಪು ಕಾಯ್ದಿರಿಸಿತ್ತು.
ಹೊಸ ತಿರುವು ಹಾಗೂ ಮುಂದಿನ ಹೆಜ್ಜೆಗಳು:
ಹೊಸ ತನಿಖೆ: 2012ರ ಧರ್ಮಸ್ಥಳದ 17 ವರ್ಷದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಆದೇಶಿಸಿದೆ.
ಎಸ್ಐಟಿ (SIT) ರಚನೆ: ಈ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (SIT) ರಚಿಸಬೇಕು ಮತ್ತು ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಬೇಕು ಎಂದು ನಿರ್ದೇಶಿಸಲಾಗಿದೆ.
ಸಿಬಿಐ ಹಾಗೂ ಹಳೇ ಸಿಬ್ಬಂದಿಗೆ ನಿರ್ಬಂಧ: ಈ ಹಿಂದೆ ತನಿಖೆ ನಡೆಸಿದ್ದ ಸಿಬಿಐ (CBI) ಅಥವಾ ಹಿಂದಿನ ತನಿಖಾ ತಂಡದಲ್ಲಿದ್ದ ಯಾವುದೇ ಪೊಲೀಸರನ್ನು ಹೊಸ ಎಸ್ಐಟಿಗೆ ನೇಮಿಸುವಂತಿಲ್ಲ.
ಸಂತೋಷ್ ರಾವ್ ವಿಚಾರಣೆಗೆ ತಡೆ: ಈ ಪ್ರಕರಣದಲ್ಲಿ ಈಗಾಗಲೇ ಸಿಬಿಐ ನ್ಯಾಯಾಲಯದಿಂದ ಖುಲಾಸೆಗೊಂಡಿರುವ ಸಂತೋಷ್ ರಾವ್ ಅವರನ್ನು ಹೊಸ ಎಸ್ಐಟಿ ಮರುತನಿಖೆ ಮಾಡುವಂತಿಲ್ಲ ಅಥವಾ ವಿಚಾರಣೆಗೆ ಒಳಪಡಿಸುವಂತಿಲ್ಲ.
3 ತಿಂಗಳ ಡೆಡ್ಲೈನ್: ಹೊಸ ಎಸ್ಐಟಿ ತಂಡವು ಪ್ರಕರಣದ ಮರುತನಿಖೆಯನ್ನು ಪೂರ್ಣಗೊಳಿಸಿ, ಆದೇಶದಂತೆ ನಿಗದಿತ ಮೂರು ತಿಂಗಳೊಳಗೆ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಬೇಕಿದೆ.
ಹಿನ್ನೆಲೆ: ಸೌಜನ್ಯಾ ತಾಯಿ ಕುಸುಮಾವತಿ ಅವರು ಸಲ್ಲಿಸಿದ್ದ ವಿಶೇಷ ಅನುಮತಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಸಂಜೀವ್ ಸಚ್ದೇವ್ ಅವರ ಪೀಠ ಈ ಆದೇಶ ನೀಡಿದೆ. ಒಂದು ದಶಕದ ಬಳಿಕ ಈ ಹೊಸ ತನಿಖಾ ಚೌಕಟ್ಟು ರೂಪುಗೊಂಡಿದೆ.
ಈ ಮಹತ್ವದ ತೀರ್ಪಿನಿಂದಾಗಿ ಕಳೆದ 14 ವರ್ಷಗಳಿಂದ ನ್ಯಾಯಕ್ಕಾಗಿ ಪರಿತಪಿಸುತ್ತಿರುವ ಸೌಜನ್ಯಾ ಕುಟುಂಬಕ್ಕೆ ಹಾಗೂ ಮೃತ್ಯುವಿಗೆ ನ್ಯಾಯ ಸಿಗುವ ಭರವಸೆ ಮತ್ತು ನಿರೀಕ್ಷೆಗಳು ಗರಿಗೆದರಿವೆ
accident
ಬಂಟ್ವಾಳ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಣೆಯಲ್ಲಿ ದುರ್ಘಟನೆ; ಕೌಟುಂಬಿಕ ಕಲಹದ ಹಿನ್ನೆಲೆ ಮಕ್ಕಳನ್ನು ಬಾವಿಗೆ ಎಸೆದ ತಾಯಿ – ಒಂದು ಮಗು ಸಾವು, ಮತ್ತೊಂದು ಮಗು ಆಸ್ಪತ್ರೆಗೆ ದಾಖಲು
ಬಂಟ್ವಾಳ: ದಿನಾಂಕ: 19.09.2026ರಂದು ಮಧ್ಯಾಹ್ನ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಪೆರ್ಣೆ ಮೈರಕಟ್ಟೆಯಲ್ಲಿ ನಡೆದ ದೊಡ್ಡ ದುರಂತವೊಂದು ಬೆಳಕಿಗೆ ಬಂದಿದೆ. ಪೆರ್ಣೆಯಲ್ಲಿ ವಾಸ್ತವವಿರುವ ಸಿನಾನ್ (32) ಹಾಗೂ ನೂರುನ್ನಿಸಾ (28) ಎಂಬ ದಂಪತಿಗಳ ನಡುವೆ ಫೋನ್ ಕರೆಯಲ್ಲಿ ವೈವಾಹಿಕ ಕಲಹ ನಡೆದಿದ್ದು, ಈ ವೇಳೆ ಕೋಪಗೊಂಡ ಆರೋಪಿತೆ ನೂರುನ್ನಿಸಾ ಮನೆಯಲ್ಲಿದ್ದ ಆಕೆಯ ಸುಮಾರು ಮೂರುವರೆ ವರ್ಷದ ಮಗು ಹಾಗೂ ಗಂಡನ ತಂಗಿಯ ಮಗುವನ್ನು ಮನೆ ಸಮೀಪದ ಕುಡಿಯುವ ನೀರಿನ ಬಾವಿಗೆ ಎಸೆದಿರುವುದಾಗಿ ಎಸ್ಪಿ ಮಾಹಿತಿ ನೀಡಿದ್ದಾರೆ.

ಆದರೆ, ಬೆಳಿಗ್ಗೆ ಸ್ಥಳೀಯ ವಾಹಿನಿಗಳಲ್ಲಿ ಹಾಗೂ ಆರಂಭಿಕ ವರದಿಗಳಲ್ಲಿ ಮಕ್ಕಳು ಆಟವಾಡುತ್ತಾ ಆಕಸ್ಮಿಕವಾಗಿ ಬಾವಿಗೆ ಬಿದ್ದಿವೆ ಎಂದು ಪ್ರಸಾರವಾಗಿತ್ತು. ಪ್ರತ್ಯಕ್ಷದರ್ಶಿಗಳು ಹಾಗೂ ಆರಂಭಿಕ ಮಾಹಿತಿಯಂತೆ, ಪೆರ್ಣೆ ಮೈರಕಟ್ಟೆಯಲ್ಲಿ ಮಕ್ಕಳು ಬಾವಿಯ ಸಮೀಪವಿದ್ದ ವೇಳೆ ಆಲಿಯಾ (4) ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದು, ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ರಕ್ಷಿಸಿ ಮೇಲಕ್ಕೆ ಕರೆತಂದಿದ್ದರು. ಬಳಿಕ ಮತ್ತೊಂದು ಮಗು ಕೂಡ ಬಾವಿಗೆ ಬಿದ್ದಿರುವ ಬಗ್ಗೆ ಆಲಿಯಾ ಮಾಹಿತಿ ನೀಡಿದ್ದಾಳೆ ಎನ್ನಲಾಗಿದ್ದು, ಸ್ಥಳೀಯರು ಪರಿಶೀಲಿಸಿದಾಗ ರಬೀಹ್ (2) ಬಾವಿಯಲ್ಲಿ ಬಿದ್ದಿರುವುದು ಗಮನಕ್ಕೆ ಬಂದಿತ್ತು. ತಕ್ಷಣ ಮೇಲಕ್ಕೆತ್ತಿ ಆಸ್ಪತ್ರೆಗೆ ಕರೆದೊಯ್ದರೂ ರಬೀಹ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಪ್ರಸಾರವಾಗಿತ್ತು.

ನೈಜ ಸತ್ಯ ಬಯಲುಗೊಳಿಸಿದ ಪೊಲೀಸರು:
ಸ್ಥಳೀಯ ಮಾದ್ಯಮಗಳಲ್ಲಿ ಆರಂಭದಲ್ಲಿ ಆಕಸ್ಮಿಕ ಸಾವು ಎಂದು ಬಿತ್ತರವಾಗಿದ್ದರೂ, ಪೊಲೀಸ್ ತನಿಖೆಯಿಂದ ಅಸಲಿ ವಿಚಾರ ಹೊರಬಂದಿದೆ. ದಂಪತಿಗಳ ನಡುವಿನ ಫೋನ್ ಕರೆಯ ಕೌಟುಂಬಿಕ ಕಲಹದ ರಭಸದಲ್ಲಿ ಕೋಪಗೊಂಡ ಆರೋಪಿತೆ ನೂರುನ್ನಿಸಾ ತಾನೇ ಸ್ವತಃ ಮಕ್ಕಳನ್ನು ಬಾವಿಗೆ ಎಸೆದಿರುವುದು ಎಸ್ಪಿ ನೀಡಿರುವ ಅಧಿಕೃತ ಮಾಹಿತಿಯಿಂದ ತಿಳಿದುಬಂದಿದೆ. ಸ್ಥಳೀಯರು ಸ್ಥಳಕ್ಕೆ ಆಗಮಿಸಿ ಮಕ್ಕಳನ್ನು ಮೇಲಕ್ಕೆ ಎತ್ತಿದ1ರ ಪೈಕಿ ಗಂಡನ ತಂಗಿಯ ಮಗು (ರಬೀಹ್ – 3) ಮೃತಪಟ್ಟಿದ್ದು, ಆರೋಪಿತೆಯ ಮಗು (ಆಲಿಯಾ – 4) ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ.
ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 121/2026 ರಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿತೆ ನೂರುನ್ನಿಸಾಳನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
DEATH
ಬೆಳಗಾವಿ: ಆಸ್ತಿಗಾಗಿ ಆಕ್ರೋಶ; ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ-ಮಗಳ ಬರ್ಬರ ಹತ್ಯೆ
ಬೆಳಗಾವಿ: ಆಸ್ತಿ ದಾಖಲೆಗಳನ್ನು ಪಡೆದುಕೊಳ್ಳಲು ಗ್ರಾಮ ಪಂಚಾಯಿತಿಗೆ ಬಂದಿದ್ದ ಮಾಜಿ ಯೋಧ ಹಾಗೂ ಅವರ ಪುತ್ರಿಯನ್ನು ಸಂಬಂಧಿಕರೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅವರಾದಿ ಗ್ರಾಮದಲ್ಲಿ ನಡೆದಿದೆ.
ಮಾಜಿ ಯೋಧ ರುದ್ರಪ್ಪ ಕುಂದರಗಿ (67) ಮತ್ತು ಅವರ ಪುತ್ರಿ ಶಶಿಕಲಾ ಕುಂದರಗಿ (26) ಹತ್ಯೆಗೀಡಾದ ದುರ್ದೈವಿಗಳು. ಈ ಭೀಕರ ದಾಳಿಯಲ್ಲಿ ರುದ್ರಪ್ಪ ಅವರ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಹಿನ್ನೆಲೆ:
ಮೃತರಾದ ರುದ್ರಪ್ಪ ಹಾಗೂ ಅವರ ಅಣ್ಣತಮ್ಮಂದಿರ ನಡುವೆ 38 ಗುಂಟೆ ಆಸ್ತಿಗೆ ಸಂಬಂಧಿಸಿದಂತೆ ದೀರ್ಘಕಾಲದಿಂದ ವ್ಯಾಜ್ಯವಿತ್ತು ಎನ್ನಲಾಗಿದೆ. ಈ ಆಸ್ತಿಯನ್ನು ಮೂವರಿಗೆ ಹಂಚಿಕೆ ಮಾಡುವಂತೆ ನ್ಯಾಯಾಲಯವೂ ಆದೇಶ ನೀಡಿತ್ತು. ಆದರೆ, ರುದ್ರಪ್ಪ ಅವರಿಗೆ ಸೇರಿದ್ದ ಜಮೀನನ್ನು ಅವರು ಈಗಾಗಲೇ ಮಾರಿಕೊಂಡಿದ್ದು, ಉಳಿದ ಜಮೀನಿನಲ್ಲೂ ತಮಗೆ ಪಾಲು ಬೇಕು ಎಂದು ಸಹೋದರರು ಪಟ್ಟು ಹಿಡಿದಿದ್ದರು. ರುದ್ರಪ್ಪ ಅವರ ಹೆಸರಿನಲ್ಲಿ ಆಸ್ತಿ ಮುಂದುವರಿದಿರುವ ವಿಚಾರವೇ ಈ ಮಾರಣಾಹೋಮಕ್ಕೆ ಪ್ರಮುಖ ಕಾರಣ ಎಂದು ತಿಳಿದುಬಂದಿದೆ.
ಪಂಚಾಯಿತಿ ಒಳಗಡೆಯೇ ಕೃತ್ಯ:
ಧಾರವಾಡದಿಂದ ಬಾಡಿಗೆ ಕಾರಿನಲ್ಲಿ ಗ್ರಾಮಕ್ಕೆ ಬಂದಿದ್ದ ರುದ್ರಪ್ಪ, ಆಸ್ತಿ ಪಾಲುದಾರಿಕೆ ಹಾಗೂ ದಾಖಲೆಗಳನ್ನು ಪಡೆದುಕೊಳ್ಳಲು ಅವರಾದಿ ಗ್ರಾಮ ಪಂಚಾಯಿತಿಗೆ ತೆರಳಿದ್ದರು. ರುದ್ರಪ್ಪ ಪಂಚಾಯಿತಿಗೆ ಬಂದಿರುವ ಸುದ್ಧಿ ತಿಳಿದು ಸ್ಥಳಕ್ಕೆ ಆಗಮಿಸಿದ ಅವರ ಸಹೋದರರಾದ ಬಸಪ್ಪ ಕುಂದರಗಿ, ಸಂಗಪ್ಪ ಕುಂದರಗಿ ಹಾಗೂ ಸಂಗಪ್ಪ ಅವರ ಪುತ್ರ ಮಡಿವಾಳಪ್ಪ ಕುಂದರಗಿ ಏಕಾಏಕಿ ದಾಳಿ ನಡೆಸಿದ್ದಾರೆ.
ಗ್ರಾಮ ಪಂಚಾಯಿತಿ ಕಚೇರಿಯ ಒಳಗಡೆಯೇ ಕೊಡಲಿ, ಕುಡಗೋಲು ಸೇರಿದಂತೆ ಮಾರಕಾಸ್ತ್ರಗಳಿಂದ ರುದ್ರಪ್ಪ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಈ ವೇಳೆ ತಂದೆಯನ್ನು ರಕ್ಷಿಸಲು ಮುಂದಾದ ಪುತ್ರಿ ಶಶಿಕಲಾ ಅವರ ಮೇಲೂ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಇಬ್ಬರನ್ನೂ ನಿರ್ದಯವಾಗಿ ಹತ್ಯೆ ಮಾಡಿದ್ದಾರೆ.
ಈ ಸಂಬಂಧ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಪಂಚಾಯಿತಿ ಕಚೇರಿಯಲ್ಲೇ ನಡೆದ ಈ ಜೋಡಿ ಹತ್ಯೆಯು ಇಡೀ ಗ್ರಾಮದಲ್ಲಿ ತೀವ್ರ ಆತಂಕ ಹಾಗೂ ಶೋಕಮೂಡಿಸಿದೆ.
ಇಬ್ಬರ ಆಸ್ತಿಯಲ್ಲೂ ಪಾಲು ಕೇಳಿದ್ದಕ್ಕೆ ಕುಪಿತಗೊಂಡಿದ್ದ ಇಬ್ಬರು ಸಹೋದರರು, ಇಂದು ಜಮೀನು ದಾಖಲು ಮಾಡಲು ಗ್ರಾಮ ಪಂಚಾಯತ್ಗೆ ರುದ್ರಪ್ಪ ಬಂದಿದ್ದರು. ಈ ವೇಳೆಯೇ ದಾಳಿ ಮಾಡಿ ತಂದೆ-ಮಗಳನ್ನು ಕೊಲೆ ಮಾಡಿದ್ದಾರೆ. ಬಳಿಕ ಆರೋಪಿಗಳು ಅಲ್ಲಿಂದ ಪರಾರಿ ಆಗಿದ್ದಾರೆ ಅಂತಾ ಸ್ಥಳೀಯರು ಹೇಳಿದ್ದಾರೆ.
ತಂದೆ-ಮಗಳ ಕೊಲೆ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯ ಪೊಲೀಸರಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಮೃತದೇಹಗಳನ್ನು ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಜೋಡಿ ಕೊಲೆಯಿಂದ ಅವರಾದಿ ಗ್ರಾಮದಲ್ಲಿ ಜನರು ಬೆಚ್ಚಿಬಿದ್ದಿದ್ದಾರೆ. ಸ್ಥಳದಲ್ಲಿ ನೂರಾರು ಜನರು ಜಮಾವಣೆಗೊಂಡಿದ್ದಾರೆ.
-
accident2 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala9 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
