Connect with us

Belthangady

ಧರ್ಮಸ್ಥಳ ಪ್ರಕರಣ : 200 ಕೋಟಿ ಷಡ್ಯಂತ್ರದ ಆರೋಪ – ಚಿನ್ನಯ್ಯನ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್

Published

on

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಸಂಸ್ಕಾರ ಪ್ರಕರಣದ ತನಿಖೆಯನ್ನು ಶೀಘ್ರ ಪೂರ್ಣಗೊಳಿಸಲು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ನಿರ್ದೇಶಿಸುವಂತೆ ಕೋರಿ ಆರೋಪಿ ಸಿ.ಎನ್. ಚಿನ್ನಯ್ಯ (ಚಿನ್ನಯ್ಯ) ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ.

ಪ್ರಕರಣದ ಅಂತಿಮ ವರದಿಯನ್ನು 2025ರ ನವೆಂಬರ್‌ನಲ್ಲಿ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದು, ಇದೇ ಜುಲೈ 15ರಂದು ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ವರದಿ ಸಲ್ಲಿಸಲಾಗಿದೆ ಎಂದು ಎಸ್‌ಐಟಿ ಪರ ವಕೀಲರು ಹೇಳಿಕೆ ಪರಿಗಣಿಸಿ ನ್ಯಾಯಾಲಯ ಅರ್ಜಿ ವಿಲೇವಾರಿ ಮಾಡಿತು. ಪ್ರಕರಣ ಸಂಬಂಧಿಸಿದಷ್ಟು ಕ್ರಮ ಕೈಗೊಳ್ಳಲು ಎಸ್‌ಐಟಿಗೆ ನಿರ್ದೇಶಿಸುವಂತೆ ಕೋರಿ ಮಂಡ್ಯ ಮೂಲದ, ಪ್ರಸ್ತುತ ಧರ್ಮಸ್ಥಳದಲ್ಲಿ ವಾಸ್ತವ್ಯ ಹೊಂದಿರುವ ಸಿ.ಎನ್. ಚಿನ್ನಯ್ಯ (50) ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಜು.21ರಂದು ವಿಚಾರಣೆ ನಡೆಸಿತು.

ಎಸ್‌ಐಟಿ ತನಿಖೆ ಹಾಜರಾದ ಎಸ್‌ಪಿ ಬಿ.ಎನ್. ಜಗದೀಶ್ ಅವರು, ಶೀಘ್ರ ತನಿಖೆ ಪೂರ್ಣಗೊಳಿಸಲು ಎಸ್‌ಐಟಿಗೆ ನಿರ್ದೇಶಿಸಬೇಕು ಎನ್ನುವುದು ಅರ್ಜಿದಾರರ ಮನವಿಯಾಗಿದೆ. ಆದರೆ, ಪ್ರಕರಣಕ್ಕೆ ಸಂಬಂಧಿಸಿದಂತೆ 2025 ನವೆಂಬರ್‌ನಲ್ಲಿ ವಿಚಾರಣಾ ನ್ಯಾಯಾಲಯಕ್ಕೆ ಅಂತಿಮ ತನಿಖಾ ವರದಿ ಸಲ್ಲಿಸಲಾಗಿದೆ. ಹೆಚ್ಚುವರಿಯಾಗಿ ಎಫ್‌ಎಸ್‌ಎಲ್ ವರದಿಯನ್ನು 2026ರ ಜುಲೈ 15ರಂದು ಸಲ್ಲಿಸಲಾಗಿದೆ. ಆದ್ದರಿಂದ ಅರ್ಜಿದಾರರ ಪರಿಗಣಿಸಬಹುದಾದ ಯಾವುದೇ ವಿಚಾರಗಳು ಉಳಿದಿಲ್ಲ. ಇಲ್ಲಿ ಅರ್ಜಿಯನ್ನು ಬಾಕಿ ಉಳಿಸಿಕೊಳ್ಳುವ ಅಗತ್ಯವಿಲ್ಲ. ಒಂದು ವೇಳೆ, ಅಂತಿಮ ವರದಿಯ ಬಗ್ಗೆ ಆಕ್ಷೇಪಣೆಗಳಿದ್ದರೆ ಯಾರು ಬೇಕಿದ್ದರೂ ಆ ವರದಿಯನ್ನು ಪ್ರಶ್ನಿಸಬಹುದು ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಇದನ್ನು ಆಲಿಸಿದ ನ್ಯಾಯಪೀಠ, ರಾಜ್ಯ ಸರ್ಕಾರದ ಪ್ರಕಾರ 2025ರ ನವೆಂಬರ್ ತಿಂಗಳಲ್ಲಿ ವಿಚಾರಣಾ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲಾಗಿದ್ದು ಹಾಗೂ ಎಫ್‌ಎಸ್‌ಎಲ್ ವರದಿ ಜುಲೈ 15ರಂದು ಸಲ್ಲಿಸಲಾಗಿದೆ. ಇದರಿಂದಾಗಿ, ಅಂತಿಮ ವರದಿ ಸಲ್ಲಿಸುವ ಸಂಪೂರ್ಣ ಪ್ರಕ್ರಿಯೆಯು ಪೂರ್ಣಗೊಂಡಿದ್ದು, ಹಾಲಿ ಅರ್ಜಿ ಹಾಗೂ ಅದರಲ್ಲಿನ ಮನವಿಗಳು ನಿರರ್ಥಕವಾಗಿದೆ ಎಂದು ಆದೇಶಿಸಿತು.

ರಮಾ ನಾಗರಾಜ್, ಜಯಂತ್ ಮಧ್ಯಂತರ ಅರ್ಜಿಗಳೂ ಇತ್ಯರ್ಥ

ಇದೇ ವೇಳೆ ಅರ್ಜಿಯಲ್ಲಿ ತಮ್ಮ ವಿರುದ್ಧ ಅನಗತ್ಯ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಲಾಗಿದೆ ಎಂದು ಆಕ್ಷೇಪಿಸಿ ಚಿತ್ರದುರ್ಗದ ರಮಾ ನಾಗರಾಜ್ ಹಾಗೂ ಜಯಂತ್ ಎಂಬುವರು ಸಲ್ಲಿಸಿದ್ದ ಮಧ್ಯಂತರ ಅರ್ಜಿಗಳನ್ನೂ ನ್ಯಾಯಾಲಯ ಇತ್ಯರ್ಥಪಡಿಸಿದೆ. ರಿಟ್ ಅರ್ಜಿಯಲ್ಲಿ ತಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಧ್ಯಂತರ ಅರ್ಜಿದಾರರ ಮನವಿಯಾಗಿದೆ.

ಅರ್ಜಿಯಲ್ಲಿ ಅಭದ್ರತಾ ಇನ್ಯಾವುದೇ ರೀತಿಯಲ್ಲಿ ಮಾಡಲಾಗದ ಸುಳ್ಳು ಹೇಳಿಕೆಯಿಂದ ಮಧ್ಯಂತರ ಅರ್ಜಿದಾರರಿಗೆ ಅಪಖ್ಯಾತಿ ಉಂಟಾಗಿದೆ, ಕಾನೂನುನಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಅವರಿಗೆ ಸದಾ ಮುಕ್ತ ಅವಕಾಶವಿರುತ್ತದೆ. ಅರ್ಜಿಯಲ್ಲಿ ಅವರು ಇರುವ ಮಾಡಲಾದ ಆರೋಪಗಳ ಕುರಿತು ಈ ನ್ಯಾಯಾಲಯ ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿಲ್ಲ ಎಂದು ನ್ಯಾಯಪೀಠ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಪ್ರಕರಣದ ಹಿನ್ನೆಲೆ : ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಜೈಲಿಗೆ ಕಳಿಸಲು ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸಂಗಡಿಗರು ಷಡ್ಯಂತ್ರ ನಡೆಸಿದ್ದರು. ಇದು 200 ಕೋಟಿ ರೂ. ಮೊತ್ತದ ಯೋಜನೆಯಾಗಿದೆ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಹೇಳಿಕೆ ನೀಡಿದರೆ ನನಗೆ 50 ಲಕ್ಷ ರೂ. ನೀಡುವುದಾಗಿ ತಿಳಿಸಿದ್ದರು.

ಈ ಕುರಿತು ನಾನು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೆ. ಆದರೆ, ಷಡ್ಯಂತ್ರದಾರರ ವಿರುದ್ಧ ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ. ಅಷ್ಟೇ ಅಲ್ಲ, ನ್ಯಾಯಾಂಗವನ್ನು ವಂಚಿಸಿದ ಹಾಗೂ ರಾಜ್ಯ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ್ದಕ್ಕಾಗಿ ಪಿತೂರಿದಾರರ ವಿರುದ್ಧ ಪ್ರತ್ಯೇಕ ಅಪರಾಧ ಪ್ರಕರಣ ದಾಖಲಿಸಿಲ್ಲ ಎಂದು ಅರ್ಜಿಯಲ್ಲಿ ಆಕ್ಷೇಪಿಸಿದ್ದರು.

ಅಲ್ಲದೇ, ಪ್ರಾಥಮಿಕ ತನಿಖಾ ವರದಿಯಲ್ಲಿ ಉಲ್ಲೇಖಿಸಲಾದ ವ್ಯಕ್ತಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದು ಮತ್ತು ತನಿಖೆಯನ್ನು ಪೂರ್ಣಗೊಳಿಸದಿರುವುದು, ವಿಶೇಷ ತನಿಖಾ ತಂಡ ತನ್ನ ಕಾನೂನುಬದ್ಧ ಜವಾಬ್ದಾರಿಗಳನ್ನು ನಿಭಾಯಿಸಲು ವಿಫಲವಾಗಿದೆ ಎಂಬುದನ್ನು ತೋರಿಸುತ್ತದೆ.

ಆದ್ದರಿಂದ, ಧರ್ಮಸ್ಥಳ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 39/2025 ರಲ್ಲಿ ಷಡ್ಯಂತ್ರಕಾರರ ವಿರುದ್ಧ ಕ್ರಮ ಕೈಗೊಂಡು ಅಂತಿಮ ವರದಿ ಸಲ್ಲಿಸಬೇಕು. ಪ್ರಕರಣದ ಒಳಸಂಚು, ಷಡ್ಯಂತ್ರಕಾರರು ನನಗೆ ನೀಡಿರುವ ದೈಹಿಕ ಮತ್ತು ಮಾನಸಿಕ ಕಿರುಕುಳ ಹಾಗೂ ಜೀವ ಬೆದರಿಕೆ ಹಾಕಿರುವುದರ ಬಗ್ಗೆ 2025ರ ಡಿಸೆಂಬರ್ 18ರಂದು ನಾನು ದಾಖಲಿಸಿದ ದೂರಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಲು ಧರ್ಮಸ್ಥಳ ಪೊಲೀಸರಿಗೆ ನಿರ್ದೇಶಿಸಬೇಕು. ಎಸ್‌ಐಟಿಯು ಶೀಘ್ರವಾಗಿ ತನಿಖೆ ಪೂರ್ಣಗೊಳಿಸಿ ಬೆಳ್ತಂಗಡಿ ನ್ಯಾಯಾಲಯದ ಮುಂದೆ ಅತ್ಯಂತ ಶೀಘ್ರದಲ್ಲಿ ಅಂತಿಮ ವರದಿ ಸಲ್ಲಿಸಲು ನಿರ್ದೇಶಿಸಬೇಕು ಎಂದು ಚಿನ್ನಯ್ಯ ಹೈಕೋರ್ಟ್‌ಗೆ ಮನವಿ ಮಾಡಿದ್ದರು.

ಈ ಅರ್ಜಿಯನ್ನು ಜೂನ್ 11ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್, ರಾಜ್ಯ ಸರ್ಕಾರ ಹಾಗೂ ಎಸ್‌ಐಟಿಗೆ ನೋಟಿಸ್ ಜಾರಿ ಮಾಡಿ, ತನಿಖೆಯ ಸ್ಥಿತಿಗತಿ ಮತ್ತು ಅಂತಿಮ ವರದಿ ಯಾವಾಗ ಸಲ್ಲಿಕೆಯಾಗುತ್ತದೆ ಎಂಬ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿತ್ತು.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

Belthangady

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು – ಕಾರ್ಮಿಕರ ಮೇಲೆ ಅನುಮಾನ

Published

on

ಬೆಳ್ತಂಗಡಿ: ಮನೆಯವರು ಸಂಬಂಧಿಕರ ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು ಸುಮಾರು 15.82 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 1.80 ಲಕ್ಷ ರೂ. ನಗದು ಕಳವು ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಆಲಂದಿಲದಲ್ಲಿ ನಡೆದಿದೆ.

ಆಲಂದಿಲ ನಿವಾಸಿ ನೌಫಾಲ್ ಬಿ.ಎಂ. (34) ಎಂಬವರು ಈ ಬಗ್ಗೆ ದೂರು ನೀಡಿದ್ದಾರೆ.

ಘಟನೆಯ ವಿವರ:
ಅವರು ನೀಡಿದ ದೂರಿನಂತೆ ಸೆ. 13 ರಂದು ಮಧ್ಯಾಹ್ನ ಸುಮಾರು 1.45ಕ್ಕೆ ಪತ್ನಿ, ಮಕ್ಕಳು ಹಾಗೂ ತಾಯಿಯನ್ನು ಸಂಬಂಧಿಕರ ಗೃಹಪ್ರವೇಶ ಕಾರ್ಯಕ್ರಮಕ್ಕೆ ಗುರುವಾಯನಕೆರೆಗೆ ಕಳುಹಿಸಿದ ಬಳಿಕ ನೌಫಾಲ್ ಕೂಡ ಮನೆಗೆ ಬೀಗ ಹಾಕಿ ತರಕಾರಿ ವ್ಯಾಪಾರದ ಕೆಲಸಕ್ಕಾಗಿ ಬೆಳ್ತಂಗಡಿಗೆ ತೆರಳಿದ್ದರು.

ಸೆ.14 ರಂದು ಫಾಲ್ಸ್ ಸೀಲಿಂಗ್ ವೈರಿಂಗ್ ಕೆಲಸಕ್ಕಾಗಿ ಕಾರ್ಮಿಕರನ್ನು ಮನೆಗೆ ಕರೆಸಲಾಗಿತ್ತು. ಮದ್ದಡ್ಕದ ಫಾರೂಕ್ ಎಂಬವರು ಕುದ್ರಡ್ಕದ ಅಶ್ರಫ್ ಹಾಗೂ ಶಿರ್ಲಾಲಿನ ಸುಲೈಮಾನ್ ಅವರನ್ನು ಕರೆದುಕೊಂಡು ಬಂದು ಮನೆಯಲ್ಲಿ ಕೆಲಸ ಮಾಡಿದ್ದರು. ಈ ವೇಳೆ ನೌಫಾಲ್ ಅವರ ತಮ್ಮ ಮಹಮ್ಮದ್ ನೌಷಾದ್ ಮನೆಯಲ್ಲಿದ್ದರು.

ಅದೇ ದಿನ ರಾತ್ರಿ ಸುಮಾರು 8.30ಕ್ಕೆ ನೌಫಾಲ್ ಕುಟುಂಬದೊಂದಿಗೆ ಮನೆಗೆ ವಾಪಸ್ ಬಂದಾಗ, ಬೆಡ್‌ರೂಂನ ಗೋದ್ರೇಜ್‌ನಲ್ಲಿ ಇಟ್ಟಿದ್ದ ಚಿನ್ನದ ಬಾಕ್ಸ್ ಕಾಣೆಯಾಗಿರುವುದು ಗಮನಕ್ಕೆ ಬಂದಿದೆ.

ಪರಿಶೀಲನೆ ನಡೆಸಿದಾಗ 32 ಗ್ರಾಂ ಮತ್ತು 26 ಗ್ರಾಂ ತೂಕದ ಎರಡು ಚಿನ್ನದ ಸರಗಳು, ಮಗುವಿನ ಚಿನ್ನದ ಸರ, ಕಾಲುಚೈನು, ಬ್ರೇಸ್ಲೆಟ್ ಸೇರಿದಂತೆ 15 ಲಕ್ಷ 82 ಸಾವಿರ ರೂ. ಮೌಲ್ಯದ ಒಟ್ಟು 113 ಗ್ರಾಂ ತೂಕದ ಚಿನ್ನಾಭರಣ ಹಾಗೂ 1.80 ಲಕ್ಷ ರೂ. ನಗದು ಕಳವಾಗಿರುವುದು ಬೆಳಕಿಗೆ ಬಂದಿದೆ.

ಇದಲ್ಲದೆ ನೌಫಾಲ್ ಅವರ ತಾಯಿಯ ಗೋದ್ರೇಜ್‌ನಲ್ಲಿದ್ದ ಒಟ್ಟು 7 ಗ್ರಾಂ ತೂಕದ ಮೂರು ಉಂಗುರಗಳೂ ಕಾಣೆಯಾಗಿರುವುದು ಪತ್ತೆಯಾಗಿದೆ.

ಮನೆಯ ಗೋದ್ರೇಜ್‌ನ ಕೀ ಗೋದ್ರೇಜ್‌ನಲ್ಲಿಯೇ ಇದ್ದು, ಮನೆಯವರು ಹೊರಗಿದ್ದ ಅವಧಿಯಲ್ಲಿ ಯಾರೋ ಮನೆಗೆ ಪ್ರವೇಶಿಸಿ ಗೋದ್ರೇಜ್ ತೆರೆದು ಕಳವು ಮಾಡಿರುವ ಬಗ್ಗೆ ದೂರಿನಲ್ಲಿ ತಿಳಿಸಲಾಗಿದೆ.

ವೈರಿಂಗ್ ಕೆಲಸಕ್ಕೆ ಬಂದಿದ್ದ ಅಶ್ರಫ್, ಫಾರೂಕ್ ಹಾಗೂ ಸುಲೈಮಾನ್ ಅವರ ಮೇಲೆ ಅನುಮಾನವಿರುವುದಾಗಿ ನೌಫಾಲ್ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸೆ.15 ರಂದು ಕಲಂ 331(3), 331(4), 305 BNS-2023 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Continue Reading

arrest

ಬೆಳ್ತಂಗಡಿ: ದಲಿತ ಕುಟುಂಬದ ಜಮೀನಿಗೆ ಅಕ್ರಮ ಪ್ರವೇಶಿಸಿ ಅಶ್ಲೀಲ ಪ್ರದರ್ಶನ – ಆರೋಪಿ ಬಂಧನ

Published

on

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದಲ್ಲಿ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಸೇರಿದ ಜಮೀನಿಗೆ ಅಕ್ರಮ ಪ್ರವೇಶಿಸಿ ಕೃತ್ಯವೆಸಗಿ, ದಲಿತ ಕುಟುಂಬದ ಮಹಿಳೆಯರ ಮುಂದೆ ಪಂಚೆ ಎತ್ತಿ ಮರ್ಮಾಂಗ ಪ್ರದರ್ಶಿಸಿ ವಿಕೃತಿ ಮೆರೆದ ವಿಲಕ್ಷಣ ಪ್ರಕರಣ ನಡೆದಿದ್ದು, ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ ಪಟ್ಟಾಡಿ ಮನೆಯ ಅಬ್ದುಲ್ ಹನೀಫ್ ಹುಸೇನ್ (50) ಎಂದು ಗುರುತಿಸಲಾಗಿದೆ.

ಘಟನೆ ವಿವರ:

ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಪಡ್ಯಾರಬೆಟ್ಟು ಎಂಬಲ್ಲಿ ಸುಮಾರು 40 ವರ್ಷಗಳಿಗಿಂತಲೂ ಹೆಚ್ಚು ಕಾಲದಿಂದ ವಾಸ್ತವ್ಯವಿದ್ದು ಕೃಷಿ ಚಟುವಟಿಕೆ ನಡೆಸಿಕೊಂಡು ಬರುತ್ತಿದ್ದ ಪರಿಶಿಷ್ಟ ಜಾತಿಯ ಕುಟುಂಬದ ಸ್ವಾಧೀನದ ಜಾಗದಲ್ಲಿ ಸಿಮೆಂಟ್ ಕಂಬ ಹಾಗೂ ತಂತಿ ಬೇಲಿ ಹಾಕಿ ಕುಟುಂಬ ಕೃಷಿ ಕಾರ್ಯದಲ್ಲಿ ತೊಡಗಿತ್ತು.

ಸೆ.7 ರಂದು ಸ್ಥಳೀಯ ನಿವಾಸಿ ಹನೀಫ್ ಎಂಬಾತ ಏಕಾಏಕಿ ಆ ಜಾಗಕ್ಕೆ ಅತಿಕ್ರಮ ಪ್ರವೇಶಿಸಿ, ಜಾತಿ ನಿಂದನೆ ಮಾಡಿ ಅವಾಚ್ಯ ಮತ್ತು ಅಶ್ಲೀಲ ಪದಗಳಿಂದ ನಿಂದಿಸಿದ್ದಾನೆ. ಬಡ ಕುಟುಂಬ ಹಾಕಿದ್ದ ಸಿಮೆಂಟ್ ಬೇಲಿ ಕಂಬ ಹಾಗೂ ತಂತಿ ಬೇಲಿಯನ್ನು ಕಿತ್ತೆಸೆದು, ಅಡಿಕೆ ಹಾಗೂ ಬಾಳೆ ಗಿಡಗಳನ್ನು ಮುರಿದು ದಾಂಧಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

ಈ ವೇಳೆ ಕೆಲಸದಲ್ಲಿ ತೊಡಗಿದ್ದ ದಲಿತ ಕುಟುಂಬದ ಮಹಿಳೆಯರು ದಾಂಧಲೆಯ ಘಟನೆಯನ್ನು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ ಆರೋಪಿ ಹನೀಫ್ ಮಹಿಳೆಯರ ಎದುರು ಬಂದು ತಾನು ಉಟ್ಟಿದ್ದ ಪಂಚೆಯನ್ನು ಎತ್ತಿ ಒಳ ಉಡುಪನ್ನು ಜಾರಿಸಿ ತನ್ನ ಗುಪ್ತಾಂಗವನ್ನು ತೋರಿಸುತ್ತಾ ಸಾರ್ವಜನಿಕವಾಗಿ ವಿಕೃತಿಯನ್ನು ಮೆರೆದಿದ್ದಾನೆ. “ನಿಮ್ಮನ್ನು ಇದರಿಂದಲೇ ಅತ್ಯಾಚಾರ ಮಾಡುತ್ತೇನೆ, ಈ ಜಾಗ ಬಿಟ್ಟು ಹೋಗದಿದ್ದರೆ ನಿಮ್ಮನ್ನು ಕೊಲ್ಲದೆ ಬಿಡುವುದಿಲ್ಲ” ಎಂದು ಬೆದರಿಕೆ ಹಾಕಿ ಮಹಿಳೆಯರನ್ನು ಬೆನ್ನಟ್ಟಿಕೊಂಡು ಬಂದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದೂರು ಮತ್ತು ಬಂಧನ:

ಈತನ ವಿಕೃತಿಯಿಂದ ಭಯಗೊಂಡ ಬಡ ಕುಟುಂಬವು ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ವೇಣೂರು ಪೊಲೀಸ್ ಠಾಣೆಗೆ ತೆರಳಿ ವಿಡಿಯೋ ಚಿತ್ರೀಕರಣದ ದೃಶ್ಯಾವಳಿ ಸಾಕ್ಷ್ಯಾಧಾರಗಳೊಂದಿಗೆ ಸೆ.8 ರಂದು ದೂರು ನೀಡಿದೆ.

ದೂರಿನ ಅನ್ವಯ ವೇಣೂರು ಠಾಣೆಯಲ್ಲಿ ದಲಿತ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಹಾಗೂ ಬಿಎನ್ಎಸ್ 329(3), 352, 351(2), 75(1), 324(4) ರಂತೆ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡ ವೇಣೂರು ಪೊಲೀಸರು ಆರೋಪಿಯನ್ನು ಸಂಜೆ ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

40 ವರ್ಷಗಳಿಂದ ಕೃಷಿ ಮಾಡಿಕೊಂಡು ಬಂದಿದ್ದ ಬಡ ಪರಿಶಿಷ್ಟ ಕುಟುಂಬದ ಮೇಲೆ ದೌರ್ಜನ್ಯ ನಡೆಸಿ, ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದ ಆರೋಪಿಗೆ ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರ ಸಂಘಟಿತ ಹೋರಾಟದ ಫಲವಾಗಿ ಕಾನೂನಿನ ತಕ್ಕ ಪಾಠ ಕಲಿಸಿದಂತಾಗಿದ್ದು, ಈ ಹೋರಾಟಕ್ಕೆ ರಾಜ್ಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ.

Continue Reading

accident

ಬೆಳ್ತಂಗಡಿ: ಕಾರು ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ; ಕಾರು ಚಾಲಕನಿಗೆ ಗಂಭೀರ ಗಾಯ

Published

on

ಕೊಕ್ಕಡ: ಧರ್ಮಸ್ಥಳದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳದ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ, ಕಾರು ಹಾಗೂ ಬಸ್ಸಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿರುವ ಘಟನೆ ಸೆ. 12ರ ಶನಿವಾರ ಕೊಕ್ಕಡ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಬಸ್ಸಿನಲ್ಲಿದ್ದ ಮೂವರು ಪ್ರಯಾಣಿಕರು ಹಾಗೂ ಕಾರಿನಲ್ಲಿದ್ದ ಹಲವರು ಗಾಯಗೊಂಡಿದ್ದು, ಈ ವೇಳೆ ಕಾರು ಚಾಲಕನ ಕೈ ಮುರಿತವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading

Trending

Copyright © 2025 Deevatige

error: Content is protected !!