accident
ಬರಿಮಾರ್ ಎಂಬಲ್ಲಿ ಶಾಲಾ ಬಸ್ ದುರಂತ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ಆಡಳಿತ ಮಂಡಳಿ ಮುಖ್ಯಸ್ಥರ ವಿರುದ್ಧ ಎಫ್ಐಆರ್ ದಾಖಲು!
- ಇನ್ಶೂರೆನ್ಸ್, ಎಫ್ಸಿ (FC) ಇಲ್ಲದೆ ರಸ್ತೆಗಿಳಿದಿತ್ತು ಶಾಲಾ ವಾಹನ
- ಬೇರೆ ಟ್ರಸ್ಟ್ ಹೆಸರಲ್ಲಿದ್ದ ಬಸ್ ಬಳಸಿ ವಿದ್ಯಾರ್ಥಿಗಳ ಜೀವದ ಜೊತೆ ಆಟ: ಪೊಲೀಸ್ ತನಿಖೆಯಲ್ಲಿ ಸತ್ಯಾಸತ್ಯತೆ ಬಹಿರಂಗ
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬರಿಮಾರ್ ಎಂಬಲ್ಲಿ ಜುಲೈ 22 ರಂದು ಶಾಲಾ ವಾಹನದ ಮೇಲೆ ಮರ ಬಿದ್ದು ಮಗುವೊಂದು ಮೃತಪಟ್ಟು, ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದ ಭೀಕರ ಘಟನೆಗೆ ಸಂಬಂಧಿಸಿದಂತೆ ತನಿಖೆ ತೀವ್ರಗೊಂಡಿದ್ದು, ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದ ಆಡಳಿತ ಮಂಡಳಿ ಮುಖ್ಯಸ್ಥರು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.

ಆರ್ಟಿಒ ವರದಿಯಲ್ಲಿ ಬಯಲಾಯ್ತು ಘೋರ ನಿರ್ಲಕ್ಷ್ಯ:
ಘಟನೆಯ ಬಳಿಕ ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಾದೇಶಿಕ ಸಾರಿಗೆ ಅಧಿಕಾರಿಯಿಂದ (RTO) ವಾಹನದ (KA 20 C 5438) ದಾಖಲೆಗಳ ಪರಿಶೀಲನೆ ನಡೆಸಿದಾಗ ಆಘಾತಕಾರಿ ವಿಚಾರಗಳು ಬೆಳಕಿಗೆ ಬಂದಿವೆ.
ದಾಖಲೆಗಳಿಲ್ಲದೆ ಸಂಚಾರ: ಘಟನೆ ನಡೆದ ಸಮಯದಲ್ಲಿ ಸದ್ರಿ ಶಾಲಾ ವಾಹನಕ್ಕೆ ಯಾವುದೇ ಚಾಲ್ತಿಯಲ್ಲಿರುವ ವಿಮಾ ಪತ್ರ (Insurance) ಹಾಗೂ ಅರ್ಹತಾ ಪತ್ರ (Fitness Certificate – FC) ಇರಲಿಲ್ಲ. (ಅರ್ಹತಾ ಪತ್ರ ಮತ್ತು ಇನ್ಶೂರೆನ್ಸ್ 2021-2022ರಲ್ಲೇ ಮುಕ್ತಾಯಗೊಂಡಿರುವುದು ಆರ್ಟಿಒ ದಾಖಲೆಯಿಂದ ತಿಳಿದುಬಂದಿದೆ).
ಮಾಲಕತ್ವದ ಗೋಲ್ಮಾಲ್: ಈ ವಾಹನವು ಶ್ರೀರಾಮ ವಿದ್ಯಾಕೇಂದ್ರದ ಹೆಸರಿನಲ್ಲಿ ನೋಂದಣಿಯಾಗಿರದೆ, ‘ಆಶ್ರಯ ಚಾರಿಟೇಬಲ್ ಟ್ರಸ್ಟ್’ (ಉಡುಪಿ) ಎಂಬ ಬೇರೆ ಟ್ರಸ್ಟ್ನ ಮಾಲಕತ್ವದಲ್ಲಿದೆ.
ಆಡಳಿತ ಮಂಡಳಿ ವಿರುದ್ಧ ಎಫ್ಐಆರ್:
ಅಗತ್ಯ ಮೂಲಭೂತ ದಾಖಲೆಗಳೇ ಇಲ್ಲದೆ, ವಿದ್ಯಾರ್ಥಿಗಳ ಭದ್ರತೆ ಮತ್ತು ಸುರಕ್ಷತೆಯನ್ನು ಗಾಳಿಗೆ ತೂರಿ ಅತ್ಯಂತ ಬೇಜವಾಬ್ದಾರಿಯಿಂದ ವಾಹನವನ್ನು ಸಾರ್ವಜನಿಕ ರಸ್ತೆಯಲ್ಲಿ ಚಲಾಯಿಸಲು ಕಾರಣರಾದ ಶ್ರೀರಾಮ ವಿದ್ಯಾ ಕೇಂದ್ರ ಕಲ್ಲಡ್ಕದ ಆಡಳಿತ ಮಂಡಳಿ ಮುಖ್ಯಸ್ಥರು ಹಾಗೂ ಇತರರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 109/2026, ಕಲಂ 125 BNS, ಹಾಗೂ 196, 192(1) IMV ಕಾಯ್ದೆಯಡಿ ಹೊಸ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (SP) ತಿಳಿಸಿದ್ದಾರೆ.
ಆರಂಭದಲ್ಲಿ ಈ ಘಟನೆಗೆ ಸಂಬಂಧಿಸಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಯುಡಿಆರ್ ಸಂಖ್ಯೆ: 35/2026 ಕಲಂ 194 BNS ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆಡಳಿತ ಮಂಡಳಿಯ ನಿರ್ಲಕ್ಷ್ಯ ಸಾಬೀತಾದ ಹಿನ್ನೆಲೆಯಲ್ಲಿ ಗಂಭೀರ ಕಾನೂನು ಕ್ರಮ ಜರುಗಿಸಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ explode: ತರಾತುರಿಯಲ್ಲಿ ದಾಖಲೆ ನವೀಕರಣಕ್ಕೆ ಆಡಳಿತ ಮಂಡಳಿ ಮುಗಿಲು!
ಮರ ಬಿದ್ದು ಅಮಾಯಕರಾದ ಬಾಲಕಿ ಮೃತಪಟ್ಟ ಭೀಕರ ದುರಂತ ಸಂಭವಿಸಿ ಎರಡು ದಿನಗಳ ಬಳಿಕ, ಶಾಲಾ ವಾಹನಕ್ಕೆ ಸೂಕ್ತ ದಾಖಲೆಗಳೇ ಇಲ್ಲದಿರುವ ಸತ್ಯಾಂಶ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.

ಈ ವಿಚಾರ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಶಾಲಾ ಆಡಳಿತ ಮಂಡಳಿ, ಜುಲೈ 24, 2026 ರಂದು ತರಾತುರಿಯಲ್ಲಿ ಬಂಟ್ವಾಳ ಸಾರಿಗೆ ಕಚೇರಿಗೆ (RTO) ಧಾವಿಸಿ ಸಂಸ್ಥೆಯ ಇತರ ಶಾಲಾ ವಾಹನಗಳ ದಾಖಲೆಗಳನ್ನು ಸರಿಪಡಿಸಲು ಮುಂದಾಗಿರುವುದು ಲಭ್ಯವಿರುವ ಆರ್ಟಿಒ ದಾಖಲೆಗಳಿಂದ ಸ್ಪಷ್ಟವಾಗಿ ಸಾಬೀತಾಗಿದೆ. ಅಲ್ಲಿಯವರೆಗೂ ಇತರ ಬಸ್ಸುಗಳ ಪರವಾನಿಗೆ ನವೀಕರಣ ಮಾಡದೇ ಆಡಳಿತ ಮಂಡಳಿ ತನ್ನ ಘೋರ ಬೇಜವಾಬ್ದಾರಿತನವನ್ನು ಮುಂದುವರಿಸಿತ್ತು ಎಂಬುದು ಈಗ ಬಹಿರಂಗಗೊಂಡಿದೆ.

ಸಾರ್ವಜನಿಕರು ಹಾಗೂ ಪೋಷಕರ ತೀವ್ರ ಆಕ್ರೋಶ:
ಶಾಲಾ ಆಡಳಿತ ಮಂಡಳಿಗಳು ಕೇವಲ ಹಣಗಳಿಕೆಯನ್ನೇ ಉದ್ದೇಶವಾಗಿಟ್ಟುಕೊಳ್ಳದೇ, ಅಮಾಯಕ ವಿದ್ಯಾರ್ಥಿಗಳ ಜೀವ ಮತ್ತು ಸುರಕ್ಷತೆಯೊಂದಿಗೆ ಚೆಲ್ಲಾಟವಾಡುವುದನ್ನು ಇನ್ನಾದರೂ ತಕ್ಷಣವೇ ನಿಲ್ಲಿಸಬೇಕು. ರಸ್ತೆಯಲ್ಲಿ ಓಡಾಡುವ ಪ್ರತಿಯೊಂದು ಶಾಲಾ ವಾಹನದ ಬಿಗಿ ತಪಾಸಣೆ ನಡೆಸಬೇಕು ಮತ್ತು ಇಂತಹ ಬೇಜವಾಬ್ದಾರಿ ಆಡಳಿತ ಮಂಡಳಿಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಬೇಕು ಎಂದು ಆಕ್ರೋಶಗೊಂಡ ಪೋಷಕರು ಹಾಗೂ ಸಾರ್ವಜನಿಕರು ಗಂಭೀರವಾಗಿ ಒತ್ತಾಯಿಸಿದ್ದಾರೆ.
accident
ಬಂಟ್ವಾಳ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಣೆಯಲ್ಲಿ ದುರ್ಘಟನೆ; ಕೌಟುಂಬಿಕ ಕಲಹದ ಹಿನ್ನೆಲೆ ಮಕ್ಕಳನ್ನು ಬಾವಿಗೆ ಎಸೆದ ತಾಯಿ – ಒಂದು ಮಗು ಸಾವು, ಮತ್ತೊಂದು ಮಗು ಆಸ್ಪತ್ರೆಗೆ ದಾಖಲು
ಬಂಟ್ವಾಳ: ದಿನಾಂಕ: 19.09.2026ರಂದು ಮಧ್ಯಾಹ್ನ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಪೆರ್ಣೆ ಮೈರಕಟ್ಟೆಯಲ್ಲಿ ನಡೆದ ದೊಡ್ಡ ದುರಂತವೊಂದು ಬೆಳಕಿಗೆ ಬಂದಿದೆ. ಪೆರ್ಣೆಯಲ್ಲಿ ವಾಸ್ತವವಿರುವ ಸಿನಾನ್ (32) ಹಾಗೂ ನೂರುನ್ನಿಸಾ (28) ಎಂಬ ದಂಪತಿಗಳ ನಡುವೆ ಫೋನ್ ಕರೆಯಲ್ಲಿ ವೈವಾಹಿಕ ಕಲಹ ನಡೆದಿದ್ದು, ಈ ವೇಳೆ ಕೋಪಗೊಂಡ ಆರೋಪಿತೆ ನೂರುನ್ನಿಸಾ ಮನೆಯಲ್ಲಿದ್ದ ಆಕೆಯ ಸುಮಾರು ಮೂರುವರೆ ವರ್ಷದ ಮಗು ಹಾಗೂ ಗಂಡನ ತಂಗಿಯ ಮಗುವನ್ನು ಮನೆ ಸಮೀಪದ ಕುಡಿಯುವ ನೀರಿನ ಬಾವಿಗೆ ಎಸೆದಿರುವುದಾಗಿ ಎಸ್ಪಿ ಮಾಹಿತಿ ನೀಡಿದ್ದಾರೆ.

ಆದರೆ, ಬೆಳಿಗ್ಗೆ ಸ್ಥಳೀಯ ವಾಹಿನಿಗಳಲ್ಲಿ ಹಾಗೂ ಆರಂಭಿಕ ವರದಿಗಳಲ್ಲಿ ಮಕ್ಕಳು ಆಟವಾಡುತ್ತಾ ಆಕಸ್ಮಿಕವಾಗಿ ಬಾವಿಗೆ ಬಿದ್ದಿವೆ ಎಂದು ಪ್ರಸಾರವಾಗಿತ್ತು. ಪ್ರತ್ಯಕ್ಷದರ್ಶಿಗಳು ಹಾಗೂ ಆರಂಭಿಕ ಮಾಹಿತಿಯಂತೆ, ಪೆರ್ಣೆ ಮೈರಕಟ್ಟೆಯಲ್ಲಿ ಮಕ್ಕಳು ಬಾವಿಯ ಸಮೀಪವಿದ್ದ ವೇಳೆ ಆಲಿಯಾ (4) ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದು, ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ರಕ್ಷಿಸಿ ಮೇಲಕ್ಕೆ ಕರೆತಂದಿದ್ದರು. ಬಳಿಕ ಮತ್ತೊಂದು ಮಗು ಕೂಡ ಬಾವಿಗೆ ಬಿದ್ದಿರುವ ಬಗ್ಗೆ ಆಲಿಯಾ ಮಾಹಿತಿ ನೀಡಿದ್ದಾಳೆ ಎನ್ನಲಾಗಿದ್ದು, ಸ್ಥಳೀಯರು ಪರಿಶೀಲಿಸಿದಾಗ ರಬೀಹ್ (2) ಬಾವಿಯಲ್ಲಿ ಬಿದ್ದಿರುವುದು ಗಮನಕ್ಕೆ ಬಂದಿತ್ತು. ತಕ್ಷಣ ಮೇಲಕ್ಕೆತ್ತಿ ಆಸ್ಪತ್ರೆಗೆ ಕರೆದೊಯ್ದರೂ ರಬೀಹ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಪ್ರಸಾರವಾಗಿತ್ತು.

ನೈಜ ಸತ್ಯ ಬಯಲುಗೊಳಿಸಿದ ಪೊಲೀಸರು:
ಸ್ಥಳೀಯ ಮಾದ್ಯಮಗಳಲ್ಲಿ ಆರಂಭದಲ್ಲಿ ಆಕಸ್ಮಿಕ ಸಾವು ಎಂದು ಬಿತ್ತರವಾಗಿದ್ದರೂ, ಪೊಲೀಸ್ ತನಿಖೆಯಿಂದ ಅಸಲಿ ವಿಚಾರ ಹೊರಬಂದಿದೆ. ದಂಪತಿಗಳ ನಡುವಿನ ಫೋನ್ ಕರೆಯ ಕೌಟುಂಬಿಕ ಕಲಹದ ರಭಸದಲ್ಲಿ ಕೋಪಗೊಂಡ ಆರೋಪಿತೆ ನೂರುನ್ನಿಸಾ ತಾನೇ ಸ್ವತಃ ಮಕ್ಕಳನ್ನು ಬಾವಿಗೆ ಎಸೆದಿರುವುದು ಎಸ್ಪಿ ನೀಡಿರುವ ಅಧಿಕೃತ ಮಾಹಿತಿಯಿಂದ ತಿಳಿದುಬಂದಿದೆ. ಸ್ಥಳೀಯರು ಸ್ಥಳಕ್ಕೆ ಆಗಮಿಸಿ ಮಕ್ಕಳನ್ನು ಮೇಲಕ್ಕೆ ಎತ್ತಿದ1ರ ಪೈಕಿ ಗಂಡನ ತಂಗಿಯ ಮಗು (ರಬೀಹ್ – 3) ಮೃತಪಟ್ಟಿದ್ದು, ಆರೋಪಿತೆಯ ಮಗು (ಆಲಿಯಾ – 4) ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ.
ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 121/2026 ರಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿತೆ ನೂರುನ್ನಿಸಾಳನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
accident
ಕನ್ಯಾನ: ಮದ್ಯದ ನಶೆಯಲ್ಲಿ 18 ಚಕ್ರದ ಲಾರಿ ಚಾಲನೆ – ವಿದ್ಯುತ್ ಕಂಬಕ್ಕೆ ಡಿಕ್ಕಿ, ಅದೃಷ್ಟವಶಾತ್ ತಪ್ಪಿದ ಅನಾಹುತ
ಕನ್ಯಾನ: ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಂಕ್ರೀಟ್ ರಸ್ತೆಯಲ್ಲಿ ನಿಯಮ ಮೀರಿ ಸಂಚರಿಸುತ್ತಿದ್ದ 18 ಚಕ್ರಗಳ ಬೃಹತ್ ಬಾಕ್ಸೈಟ್ ಸಾಗಾಟದ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಪಘಾತ ಎಸಗಿದ ಘಟನೆ ನಡೆದಿದೆ.
ಕನ್ಯಾನದಿಂದ ಪಾದೆಕಲ್ಲು ಪೆರೋಡಿ ಸರವು ಪ್ರದೇಶಕ್ಕೆ ಬಾಕ್ಸೈಟ್ (ಮಣ್ಣು) ಸಾಗಿಸಲು ತೆರಳುತ್ತಿದ್ದ AP 39 VD 8043 ಸಂಖ್ಯೆಯ ಬೃಹತ್ ಲಾರಿಯನ್ನು ಚಿಕ್ಕಬಳ್ಳಾಪುರ ಬಾಗೇಪಲ್ಲಿ ಮೂಲದ ನಾಗರಾಜ್ ಎಂಬಾತ ಮದ್ಯದ ನಶೆಯಲ್ಲಿ ಚಲಾಯಿಸುತ್ತಿದ್ದ ಎನ್ನಲಾಗಿದೆ. ಚಾಲಕನ ನಿರ್ಲಕ್ಷ್ಯದಿಂದಾಗಿ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಕಂಬ ಛಿದ್ರಗೊಂಡು ತಂತಿಗಳ ಸಹಿತ ಲಾರಿಯ ಮೇಲೆ ಬಿದ್ದಿದೆ. ಆದಾಗ್ಯೂ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸ್ಥಳೀಯ ನಿವಾಸಿಗಳು ಮದ್ಯ ಸೇವಿಸಿ ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿದ ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಗ್ರಾಮಸ್ಥರ ತೀವ್ರ ಆಕ್ರೋಶ:
ಗ್ರಾಮಾಂತರ ಕಾಂಕ್ರೀಟ್ ರಸ್ತೆಯಲ್ಲಿ 12.5 ಟನ್ ಸಾಮರ್ಥ್ಯದ (6 ಚಕ್ರಗಳ) ವಾಹನಗಳಿಗಿಂತ ಹೆಚ್ಚಿನ ಭಾರದ ಸರಕು ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಹೀಗಿದ್ದರೂ ಸಾರಿಗೆ ನಿಯಮಗಳನ್ನು ಗಾಳಿಗೆ ತೂರಿ ಬೃಹತ್ 18 ಚಕ್ರದ ಲಾರಿಗಳು ಅಕ್ರಮವಾಗಿ ಸಂಚರಿಸುತ್ತಿದ್ದರೂ ಕನ್ಯಾನ ಗ್ರಾಮ ಪಂಚಾಯತ್ ಯಾವುದೇ ಕ್ರಮ ಕೈಗೊಳ್ಳದೆ ಮೌನ ವಹಿಸಿದೆ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳೀಯರು ನೀಡಿದ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ
accident
ಉಳ್ಳಾಲ: ಬೈಕ್-ಸ್ಕೂಟರ್ ಮುಖಾಮುಖಿ ಡಿಕ್ಕಿ – ಮಿದುಳು ನಿಷ್ಕ್ರಿಯಗೊಂಡ ಯುವಕನಿಂದ ಅಂಗಾಂಗ ದಾನಕ್ಕೆ ಕುಟುಂಬಸ್ಥರ ನಿರ್ಧಾರ
ಉಳ್ಳಾಲ : ಉಳ್ಳಾಲದ ಕೊರಗಜ್ಜನ ಆದಿಕ್ಷೇತ್ರದ ಕಟ್ಟೆಯ ಬಳಿ ಸಂಭವಿಸಿದ ಭೀಕರ ಬೈಕ್-ಸ್ಕೂಟರ್ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡಿರುವ (Brain Dead) ಯುವಕನೊಬ್ಬನ ಅಂಗಾಂಗಗಳನ್ನು ದಾನ ಮಾಡಲು ಕುಟುಂಬಸ್ಥರು ಧೈರ್ಯಮಾಡಿ ಮುಂದೆ ಬಂದಿದ್ದಾರೆ.
ಉಳ್ಳಾಲದ ಆಯೆರೆಬೆಟ್ಟು ನಿವಾಸಿಗಳಾದ ಗೋಪಾಲ ಮತ್ತು ವೇದಾವತಿ ದಂಪತಿಯ ಕಿರಿಯ ಪುತ್ರ ವರ್ಷಿತ್ ಕುಲಾಲ್ (21) ಮಿದುಳು ನಿಷ್ಕ್ರಿಯಗೊಂಡ ಯುವಕ.
ಅಪಘಾತ ಸಂಭವಿಸಿದ್ದು ಹೇಗೆ? ವರ್ಷಿತ್ ಅವರು ಸೋಮವಾರ ರಾತ್ರಿ ಸುಮಾರು 7.30ರ ವೇಳೆಗೆ ಉಳ್ಳಾಲದಿಂದ ತನ್ನ ಮನೆ ಕಡೆಗೆ ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಉಳ್ಳಾಲದ ಕೊರಗಜ್ಜನ ಆದಿಕ್ಷೇತ್ರದ ಬಳಿಯ ದುರ್ಗಾ ಆಟೋ ವರ್ಕ್ಸ್ ಶಾಪ್ ಮುಂಭಾಗದಲ್ಲಿ ರಾಣಿಪುರದಿಂದ ಉಳ್ಳಾಲ ಕಡೆಗೆ ಬರುತ್ತಿದ್ದ ಸ್ಕೂಟರ್ಗೆ ಇವರ ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಬೈಕ್ನಿಂದ ರಸ್ತೆಗೆ ಬಿದ್ದ ವಕ್ಷಿತ್ ಅವರ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿತ್ತೆಂದು ತಿಳಿದುಬಂದಿದೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಹಾಗೂ ಅಂಗಾಂಗ ದಾನ: ತಕ್ಷಣ ಗಾಯಾಳು ವಕ್ಷಿತ್ ಅವರನ್ನು ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಿ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಅವರ ಮಿದುಳು ನಿಷ್ಕ್ರಿಯಗೊಂಡಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ವೈದ್ಯರ ಸಲಹೆಯ ಮೇರೆಗೆ ವರ್ಷಿತ್ ಅವರ ಪೋಷಕರು ಮತ್ತು ಕುಟುಂಬಸ್ಥರು ಮಗನ ಅಂಗಾಂಗಗಳನ್ನು ದಾನ ಮಾಡಲು ಒಪ್ಪಿಗೆ ಸೂಚಿಸಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಈಗಾಗಲೇ ವಿವಿಧ ಆಸ್ಪತ್ರೆಗಳಿಂದ ಮೂತ್ರಪಿಂಡ, ಯಕೃತ್ತು, ಹೃದಯ ಹಾಗೂ ಶ್ವಾಸಕೋಶಗಳಿಗೆ ಬೇಡಿಕೆ ಬಂದಿದ್ದು, ಇಂದು ‘ಗ್ರೀನ್ ಕಾರಿಡಾರ್’ (Green Corridor) ಅಥವಾ ‘ಯೂರೋ ಟ್ರಾಫಿಕ್’ ವ್ಯವಸ್ಥೆಯ ಮೂಲಕ ಈ ಅಂಗಾಂಗಗಳನ್ನು ಸಂಬಂಧಪಟ್ಟ ಆಸ್ಪತ್ರೆಗಳಿಗೆ ರವಾನಿಸುವ ಪ್ರಕ್ರಿಯೆ ನಡೆಯಲಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಅಪಘಾತದಲ್ಲಿ ಸ್ಕೂಟರ್ ಸವಾರ ಧೀರಜ್ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದುರ್ಘಟನೆಯಲ್ಲಿ ಮಿದುಳು ನಿಷ್ಕ್ರಿಯಗೊಂಡಿರುವ ವರ್ಷಿತ್ ಅವರು ಅವಿವಾಹಿತರಾಗಿದ್ದು, ಫ್ಯಾಬ್ರಿಕೇಷನ್ ಕೆಲಸ ಮಾಡುತ್ತಿದ್ದರು. ಅವರು ತಂದೆ, ತಾಯಿ ಹಾಗೂ ಒಬ್ಬ ಸಹೋದರನನ್ನು ಅಗಲಿದ್ದಾರೆ.
ಈ ಘಟನೆಯ ಕುರಿತು ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ
-
accident1 month agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala8 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
