Connect with us

F.I.R.

ಮರಳು ಮಾಫಿಯಾಗೆ ‘ಗೂಂಡಾ ಕಾಯ್ದೆ’ ಶಾಕ್: ಸುಮ್ಮನೆ ಕೂರುವ ಖಾಕಿ ಪಡೆಗೂ ಬಿತ್ತು ಕಠಿಣ ಬಿಸಿ!

Published

on

ರಾಜ್ಯದಲ್ಲಿ ಅಕ್ರಮ ಮರಳು ದಂಧೆಗೆ ಇನ್ಮುಂದೆ ಸಂಪೂರ್ಣ ಬ್ರೇಕ್! ನಿಯಮ ಮೀರಿದರೆ ಜೈಲು ಗ್ಯಾರಂಟಿ, ಕಣ್ಣು ಮುಚ್ಚಿ ಕುಳಿತರೆ ಅಧಿಕಾರಿಗಳಿಗೂ ತೂಗುಕತ್ತಿ!

ಬೆಂಗಳೂರು: ರಾಜ್ಯದ ನೈಸರ್ಗಿಕ ಸಂಪತ್ತನ್ನು ಲೂಟಿ ಮಾಡುತ್ತಾ, ಕಾನೂನು ಸುವ್ಯವಸ್ಥೆಗೆ ಸವಾಲೊಡ್ಡುತ್ತಿದ್ದ ಮರಳು ಮಾಫಿಯಾದ ಬಹುತೇಕ ಕೊನೆಗಾಲ ಹತ್ತಿರವಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ, ಸಂಗ್ರಹಣೆ ಹಾಗೂ ಅಕ್ರಮ ಸಾಗಾಟದ ವಿರುದ್ಧ ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಕಾಯ್ದೆಯ ಅಸ್ತ್ರವನ್ನು ಪ್ರಯೋಗಿಸಲು ಮುಹೂರ್ತವಿಟ್ಟಿದೆ. ಇನ್ಮುಂದೆ ಧಂದೆಯಲ್ಲಿ ತೊಡಗುವ ಕಿಂಗ್‌ಪಿನ್‌ಗಳಿಗೆ ನೇರವಾಗಿ ‘ಗೂಂಡಾ ಕಾಯ್ದೆ’ ಅಡಿಯಲ್ಲೇ ಖೆಡ್ಡಾ ತೋಡಲು ನಿರ್ಧರಿಸಲಾಗಿದೆ!

ಗೃಹ ಸಚಿವರಿಂದ ಕಟ್ಟುನಿಟ್ಟಿನ ಸೂಚನೆ, ಡಿಜಿ-ಐಜಿಪಿ ಎಂ.ಎ. ಸಲೀಂ ಕಡೆಯಿಂದ ಸುತ್ತೋಲೆ!

ಗೃಹ ಸಚಿವರ ನಿರ್ದೇಶನದ ಮೇರೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು (DG & IGP) ಎಂ.ಎ. ಸಲೀಂ ಅವರು ರಾಜ್ಯದ ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳು, ಎಸ್‌ಪಿಗಳು ಹಾಗೂ ಕಮಿಷನರ್‌ಗಳಿಗೆ ಅತ್ಯಂತ ಗಂಭೀರ ಸ್ವರೂಪದ ವಿಶೇಷ ಸುತ್ತೋಲೆ ಹೊರಡಿಸಿದ್ದಾರೆ.

“ಅಕ್ರಮ ಮರಳು ಗಣಿಗಾರಿಕೆ ಕೇವಲ ರಾಜ್ಯದ ಸಂಪತ್ತಿನ ಲೂಟಿಯಷ್ಟೇ ಅಲ್ಲ, ಅದು ಸಾರ್ವಜನಿಕ ಹಿತಾಸಕ್ತಿ ಹಾಗೂ ಕಾನೂನು ಸುವ್ಯವಸ್ಥೆಗೆ ಬಿದ್ದ ದೊಡ್ಡ ಪೆಟ್ಟು. ಇದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ.” – ಪ್ರಿಯಾಂಕ್ ಖರ್ಗೆ, ಗೃಹ ಸಚಿವರು

ಮಾಫಿಯಾಗೆ ಮಾತ್ರವಲ್ಲ, ಕಣ್ಮುಚ್ಚಿ ಕೂರುವ ಪೊಲೀಸರಿಗೂ ತಟ್ಟಲಿದೆ ಬಿಸಿ!

ಇಲ್ಲಿಯವರೆಗೆ ಅಕ್ರಮ ಮರಳು ಸಾಗಾಟ ಕಂಡು ಕಂಡರೂ ಕಾಣದಂತೆ, ಮಾಫಿಯಾ ಜೊತೆ ಶಾಮೀಲಾಗಿ ಕಣ್ಮುಚ್ಚಿ ಕುಳಿತುಕೊಳ್ಳುತ್ತಿದ್ದ ಪೊಲೀಸ್ ಅಧಿಕಾರಿಗಳಿಗೂ ಈಗ ನಡುಕ ಶುರುವಾಗಿದೆ!

ಪೊಲೀಸರ ಮೇಲೇ ಬೀಳಲಿದೆ ಗದಾಪ್ರಹಾರ: ಅಕ್ರಮ ಮರಳು ದಂಧೆ ನಡೆಯುವ ವ್ಯಾಪ್ತಿಯ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳನ್ನೇ ಇದಕ್ಕೆ ನೇರ ಜವಾಬ್ದಾರರನ್ನಾಗಿ ಮಾಡಲಾಗುತ್ತದೆ. ಕರ್ತವ್ಯ ಲೋಪ ಎಸಗುವ ಅಥವಾ ಮಾಫಿಯಾಗೆ ಸಾಥ್ ನೀಡುವ ಅಧಿಕಾರಿಗಳ ವಿರುದ್ಧವೂ ಕಠಿಣ ಇಲಾಖಾ ತನಿಖೆ ಮತ್ತು ಶಿಸ್ತುಕ್ರಮ ಕೈಗೊಳ್ಳಲಾಗುವುದು.

ಕಟ್ಟುನಿಟ್ಟಿನ ಗಡಿ ಕಾವಲು & ಜಂಟಿ ಕಾರ್ಯಾಚರಣೆ:

ಟಾಸ್ಕ್ ಫೋರ್ಸ್ ಅಲರ್ಟ್: ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದ ಕಾರ್ಯಪಡೆಗಳು (Task Force) ಇನ್ಮುಂದೆ ದಿನದ 24 ಗಂಟೆಯೂ ಸಕ್ರಿಯವಾಗಿರಲಿವೆ. ಅಕ್ರಮ ಗಣಿಗಾರಿಕೆ ನಡೆಯುವ ‘ಹಾಟ್‌ಸ್ಪಾಟ್’ಗಳನ್ನು ಗುರುತಿಸಿ ನಿರಂತರ ನಿಗಾ ವಹಿಸಲಾಗುತ್ತದೆ.

ಇಲಾಖೆಗಳ ಸಮನ್ವಯ: ಗಣಿ ಮತ್ತು ಭೂವಿಜ್ಞಾನ, ಕಂದಾಯ, ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಲಿವೆ.

ರಾಜ್ಯಾಂತರ ಗಡಿಯಲ್ಲಿ ಸಿಂಹಸ್ವಪ್ನ: ಅಂತರರಾಜ್ಯ ಗಡಿಭಾಗಗಳಲ್ಲಿ ಹಗಲು-ರಾತ್ರಿ ಕಟ್ಟುನಿಟ್ಟಿನ ಚೆಕ್‌ಪೋಸ್ಟ್ ತಪಾಸಣೆ ನಡೆಸಲಿದ್ದು, ನೆರೆ ರಾಜ್ಯಗಳಿಗೆ ಅಕ್ರಮವಾಗಿ ಮರಳು ಸಾಗಿಸುವ ಲಾರಿ, ಟಿಪ್ಪರ್‌ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ.

ಖಡಕ್ ಎಚ್ಚರಿಕೆ:

ಇಷ್ಟು ದಿನ ಕಾನೂನಿನ ಕಣ್ಣಿಗೆ ಮಣ್ಣೆರಚಿ ನದಿ ತೀರಗಳನ್ನು ಕೊಳ್ಳೆ ಹೊಡೆಯುತ್ತಿದ್ದ ಮರಳು ದಂಧೆಕೋರರಿಗೆ ಈಗ ಕಾನೂನಿನ ನೈಜ ಶಕ್ತಿ ಏನೆಂಬುದು ತಿಳಿಯಲಿದೆ. ಅಕ್ರಮವಾಗಿ ಮರಳು ಎತ್ತಿದರೆ, ಸಂಗ್ರಹಿಸಿದರೆ ಅಥವಾ ಸಾಗಿಸಿದರೆ ಜೈಲು ಶಿಕ್ಷೆ ಹಾಗೂ ಆಸ್ತಿ ಜಪ್ತಿಯಂತಹ ಭಾರಿ ಬೆಲೆ ತೆರಬೇಕಾಗುತ್ತದೆ!

ಮಾಫಿಯಾದ ಆಟ ಇನ್ಮುಂದೆ ನಡೆಯಲ್ಲ… ಕಾನೂನಿನ ಬಲೆಗೆ ಬೀಳುವುದು ಖಚಿತ!

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

Bantawala

ದಕ್ಷಿಣ ಕನ್ನಡ: ರಾಯಿ ಸಮೀಪ ನದಿಯಲ್ಲಿ ಕೊಚ್ಚಿಹೋಗಿದ್ದ ವ್ಯಕ್ತಿಯ ಮೃತದೇಹ ಸಂಗಬೆಟ್ಟುವಿನಲ್ಲಿ ಪತ್ತೆ

Published

on

ಮಂಗಳೂರು: ಬಂಟ್ವಾಳ ತಾಲೂಕಿನ ರಾಯಿ ಸಮೀಪ ಶನಿವಾರ ತಡರಾತ್ರಿ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಹೋಗಿದ್ದ 48 ವರ್ಷದ ವ್ಯಕ್ತಿಯೊಬ್ಬರ ಮೃತದೇಹವು ಸೋಮವಾರ ಬೆಳಿಗ್ಗೆ ಸಂಗಬೆಟ್ಟು ಪ್ರದೇಶದಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತರನ್ನು ರಾಯಿ ನಿವಾಸಿ ಜೀವನ್ ಪಿಂಟೊ (48) ಎಂದು ಗುರುತಿಸಲಾಗಿದೆ.

ಘಟನೆಯ ವಿವರ: ಶನಿವಾರ ತಡರಾತ್ರಿ ಜೀವನ್ ಪಿಂಟೊ ಅವರು ತೋಡಿನ ಆಚೆಗಿರುವ ತಮ್ಮ ಮಾವನ ಮನೆಗೆ ತೆರಳಲು ಕಾಲುಸಂಕದ ಮೇಲೆ ನದಿ ದಾಟುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿತ್ತು. ಘಟನಾ ಸ್ಥಳದಲ್ಲಿ ಅವರ ಚಪ್ಪಲಿ ಹಾಗೂ ಟಾರ್ಚ್‌ಲೈಟ್ ಪತ್ತೆಯಾಗಿದ್ದರೂ, ಅವರು ನೀರಿಗೆ ಬಿದ್ದಿದ್ದಾರೋ ಅಥವಾ ಬೇರೆಡೆ ತೆರಳಿದ್ದಾರೋ ಎಂಬುದು ಅಧಿಕೃತವಾಗಿ ದೃಢಪಟ್ಟಿರಲಿಲ್ಲ.

ಸತತ ಶೋಧ ಕಾರ್ಯಾಚರಣೆ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಮತ್ತು ನದಿಯಲ್ಲಿ ಹರಿಯುತ್ತಿರುವ ಪ್ರಬಲ ನೀರಿನ ಸೆಳೆತದ ನಡುವೆಯೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಹಾಗೂ ಸ್ಥಳೀಯ ಮುಳುಗುತಜ್ಞರು ಮತ್ತು ಗ್ರಾಮಸ್ಥರು ಕಳೆದ ಎರಡು ದಿನಗಳಿಂದ ಜಂಟಿಯಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದರು.

ಸತತ ಕಾರ್ಯಾಚರಣೆಯ ಫಲವಾಗಿ ಸೋಮವಾರ ಬೆಳಿಗ್ಗೆ ಸಂಗಬೆಟ್ಟು ಸಮೀಪ ಅವರ ಮೃತದೇಹ ಪತ್ತೆಯಾಗಿದೆ. ತಕ್ಷಣವೇ ಮೃತದೇಹವನ್ನು ನದಿಯಿಂದ ಹೊರತೆಗೆದ ಅಧಿಕಾರಿಗಳು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಕಾನೂನು ಹಾಗೂ ಮರಣೋತ್ತರ ಪರೀಕ್ಷೆಯ ಪ್ರಕ್ರಿಯೆಗಳನ್ನು ಕೈಗೊಂಡಿದ್ದಾರೆ.

Continue Reading

Bantawala

ಬಸ್‌ನಲ್ಲಿ ಅಸಭ್ಯ ವರ್ತನೆ: ವಿಕೃತಕಾಮಿ ವೃದ್ಧ ಅರ್ಚಕನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಕೇಸ್‌ ದಾಖಲು!

Published

on

ಬಂಟ್ವಾಳ: ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಎದುರು ಖಾಸಗಿ ಅಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ವೃದ್ಧನೊಬ್ಬನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ:

ಜುಲೈ 30ರಂದು ಮಂಗಳೂರಿನ ಸ್ಟೇಟ್ ಬ್ಯಾಂಕ್‌ನಿಂದ ಉಪ್ಪಿನಂಗಡಿಗೆ ಹೊರಟಿದ್ದ ಖಾಸಗಿ ಬಸ್‌ನಲ್ಲಿ ಈ ಘಟನೆ ನಡೆದಿದೆ. ಮಧ್ಯಾಹ್ನ 2.10ರ ಸುಮಾರಿಗೆ ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ಬಸ್‌ ಏರಿದ್ದ ಸುಮಾರು 60–70 ವರ್ಷ ಪ್ರಾಯದ ವ್ಯಕ್ತಿಯೊಬ್ಬ, ಚಾಲಕನ ಎಡಭಾಗದ ಅಡ್ಡ ಸೀಟಿನಲ್ಲಿ ಕುಳಿತುಕೊಂಡಿದ್ದ. ಪ್ರಯಾಣದ ವೇಳೆ ಎದುರಿನ ಸೀಟಿನಲ್ಲಿದ್ದ ಮಹಿಳೆಯರಿಗೆ ಕಾಣುವಂತೆ ಅಸಭ್ಯವಾಗಿ ಗುಪ್ತಾಂಗ ಪ್ರದರ್ಶಿಸಿ ವಿಕೃತಿ ಮೆರೆದಿದ್ದಾನೆ.

ಮಹಿಳೆಯ ಧೈರ್ಯ, ವೈರಲ್ ವೀಡಿಯೋ:

ವೃದ್ಧನ ನೀಚ ಕೃತ್ಯವನ್ನು ಕಂಡು ಆಕ್ರೋಶಗೊಂಡ ಬಸ್‌ನಲ್ಲಿದ್ದ ಮಹಿಳೆಯೊಬ್ಬರು ಧೈರ್ಯದಿಂದ ತಮ್ಮ ಮೊಬೈಲ್‌ನಲ್ಲಿ ಆತನ ವಿಕೃತಿಯನ್ನು ವೀಡಿಯೋ ರೆಕಾರ್ಡ್ ಮಾಡಿದ್ದಾರೆ. ಇದನ್ನು ಗಮನಿಸಿದ ವೃದ್ಧ, ಮೆಲ್ಕಾರ್ ಜಂಕ್ಷನ್ ತಲುಪುತ್ತಿದ್ದಂತೆ ಗಾಬರಿಯಿಂದ ಬಸ್‌ನಿಂದ ಇಳಿದು ಪರಾರಿಯಾಗಿದ್ದ. ಬಳಿಕ ಈ ವಿಷಯ ಬಸ್ ಚಾಲಕನ ಗಮನಕ್ಕೂ ಬಂದಿತ್ತು. ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು ಆರೋಪಿಯ ಗುರುತು ಪತ್ತೆ ಹಚ್ಚಿದ್ದು, ಆತ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಸಾದಿಕುಕ್ಕು ಅಂಗನವಾಡಿ ಬಳಿಯ ನಿವಾಸಿ ಹಾಗೂ ವೃತ್ತಿಯಲ್ಲಿ ಅರ್ಚಕ ಎಂದು ತಿಳಿದುಬಂದಿದೆ.

ಬಂಟ್ವಾಳ ಠಾಣೆಯಲ್ಲಿ ದೂರು:

ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.ಕ್ರ. 107/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 75(2)ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

DEATH

ಉಪ್ಪಿನಂಗಡಿ: ನೇತ್ರಾವತಿ ನದಿ ದಡದಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ – ವಾರೀಸುದಾರರ ಪತ್ತೆಗೆ ಪೋಲಿಸ್ ಮನವಿ

Published

on

ಉಪ್ಪಿನಂಗಡಿ: ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ಹಿರ್ತಡ್ಕ ಎಂಬಲ್ಲಿ ಹರಿಯುವ ನೇತ್ರಾವತಿ ನದಿಯ ದಡದಲ್ಲಿ ಅಪರಿಚಿತ ಗಂಡಸಿನ ಮೃತದೇಹವೊಂದು ಪತ್ತೆಯಾಗಿದೆ.

ಆಗಸ್ಟ್ 02, 2026ರಂದು ಮಧ್ಯಾಹ್ನ ಸುಮಾರು 03:00 ಗಂಟೆಯ ವೇಳೆಗೆ ನದಿ ದಡದಲ್ಲಿ ಶವ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು ಮೃತದೇಹವನ್ನು ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೊಲೀಸರ ಮನವಿ:

ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಿಂದ ಪ್ರಕಟಣೆ ಹೊರಡಿಸಲಾಗಿದ್ದು, ಸಾರ್ವಜನಿಕರಲ್ಲಿ ಈ ಕೆಳಗಿನಂತೆ ಕೋರಲಾಗಿದೆ:

ಇತರ ಪೊಲೀಸ್ ಠಾಣೆಗಳಿಗೆ: ಯಾವುದೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ಗಂಡಸು ಕಾಣೆಯಾದ ಬಗ್ಗೆ ದೂರು ದಾಖಲಾಗಿದ್ದಲ್ಲಿ ತಕ್ಷಣವೇ ಉಪ್ಪಿನಂಗಡಿ ಠಾಣೆಗೆ ಮಾಹಿತಿ ನೀಡಲು ಕೋರಲಾಗಿದೆ.

ಸಾರ್ವಜನಿಕರಿಗೆ/ವಾರೀಸುದಾರರಿಗೆ: ಯಾರಾದರೂ ವ್ಯಕ್ತಿ ನಾಪತ್ತೆಯಾಗಿದ್ದು, ಮೃತರ ವಾರೀಸುದಾರರು ಅಥವಾ ಗುರುತು ತಿಳಿದವರು ಇದ್ದಲ್ಲಿ ತಕ್ಷಣವೇ ಉಪ್ಪಿನಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ವಿನಂತಿಸಲಾಗಿದೆ.

ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: ಉಪ್ಪಿನಂಗಡಿ ಪೊಲೀಸ್ ಠಾಣೆ: 9480805362

Continue Reading

Trending

Copyright © 2025 Deevatige

error: Content is protected !!