karkala
ಲಂಚದ ಆರೋಪ: ಕಾರ್ಕಳ ಡಿವೈಎಸ್‌ಪಿ, ಸರ್ಕಲ್ ಇನ್ಸ್‌ಪೆಕ್ಟರ್ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳು ಅಮಾನತು!
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಪೊಲೀಸ್ ಇಲಾಖೆಯನ್ನೇ ತಲ್ಲಣಗೊಳಿಸುವಂತಹ ಘಟನೆಯೊಂದು ನಡೆದಿದ್ದು, ಲಂಚದ ಬೇಡಿಕೆಯಿಟ್ಟ ಆರೋಪದ ಮೇಲೆ ಮೂವರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಲಾಗಿದೆ (Suspended).
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ರಹಸ್ಯ ಕಾರ್ಯಾಚರಣೆಯ (Sting Operation) ವಿಡಿಯೋ ಆಧರಿಸಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಈ ಕಠಿಣ ಕ್ರಮ ಕೈಗೊಂಡಿದೆ.
ಅಮಾನತಾದ ಅಧಿಕಾರಿಗಳ ವಿವರ:
- ವಿಜಯ ಪ್ರಸಾದ್ – ಡಿವೈಎಸ್‌ಪಿ (DySP), ಕಾರ್ಕಳ
- ಸಂದೀಪ್ – ಸರ್ಕಲ್ ಇನ್ಸ್‌ಪೆಕ್ಟರ್ (CPI), ಕಾರ್ಕಳ
- ಶಿವಾನಂದ – ಡಿವೈಎಸ್‌ಪಿ ಕಚೇರಿ ಸಿಬ್ಬಂದಿ
ಘಟನೆಯ ಹಿನ್ನೆಲೆ
ಕಾರ್ಕಳ ಪೊಲೀಸ್ ಕಚೇರಿಯಲ್ಲೇ ಅಕ್ರಮ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡಲು ಹಾಗೂ ವಿವಿಧ ಪ್ರಕರಣಗಳ ಇತ್ಯರ್ಥಕ್ಕಾಗಿ ಲಕ್ಷಾಂತರ ರೂಪಾಯಿ ಲಂಚದ ಬೇಡಿಕೆ ಇಡಲಾಗಿದೆ ಎನ್ನಲಾದ ವೀಡಿಯೋಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದವು. ಸಾರ್ವಜನಿಕ ವಲಯದಲ್ಲಿ ಇಲಾಖೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ, ಹಿರಿಯ ಅಧಿಕಾರಿಗಳು ತಕ್ಷಣವೇ ಘಟನೆಯ ಕುರಿತು ತನಿಖೆಗೆ ಆದೇಶಿಸಿದ್ದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಹರಿರಾಮ್ ಶಂಕರ್ ಸ್ಪಷ್ಟನೆ
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಉಡುಪಿ ಜಿಲ್ಲಾ ಎಸ್‌ಪಿ ಹರಿರಾಮ್ ಶಂಕರ್, “ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋ ಹಾಗೂ ಬಂದಿರುವ ಗಂಭೀರ ಆರೋಪಗಳ ಆಧಾರದ ಮೇಲೆ ಹೆಚ್ಚುವರಿ ಎಸ್‌ಪಿ (Addl SP) ಅವರಿಂದ ತಕ್ಷಣವೇ ಪ್ರಾಥಮಿಕ ತನಿಖೆ ನಡೆಸಲಾಗಿದೆ. ಅವರು ಸಲ್ಲಿಸಿದ ವರದಿಯ ಅನ್ವಯ, ಇಲಾಖಾ ಶಿಸ್ತು ಕ್ರಮ ಪೂರ್ಣಗೊಳ್ಳುವವರೆಗೆ ಕಾರ್ಕಳ ಡಿವೈಎಸ್‌ಪಿ ವಿಜಯ ಪ್ರಸಾದ್, ಸಿಪಿಐ ಸಂದೀಪ್ ಮತ್ತು ಸಿಬ್ಬಂದಿ ಶಿವಾನಂದ ಅವರನ್ನು ಅಮಾನತುಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.
ಪೊಲೀಸ್ ಕಚೇರಿಯಲ್ಲೇ ನಡೆದ ಈ ಲಂಚದ ಪ್ರಕರಣ ಸಾರ್ವಜನಿಕವಾಗಿ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಇಲಾಖಾ ಮಟ್ಟದ ಹೆಚ್ಚಿನ ತನಿಖೆ ಪ್ರಸ್ತುತ ಮುಂದುವರಿದಿದೆ
accident
ಬ್ರೇಕಿಂಗ್ ನ್ಯೂಸ್: ಕಾರ್ಕಳ – ಮೂಡುಬಿದ್ರೆ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ; ಮಾಜಿ ಸಚಿವ ರಮಾನಾಥ ರೈ ಹಾಗೂ ಕಾರು ಚಾಲಕ ಪ್ರಾಣಾಪಾಯದಿಂದ ಪಾರು
ಕಾರ್ಕಳ: ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು ಜಂಕ್ಷನ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಬಿ. ರಮಾನಾಥ ರೈ ಹಾಗೂ ಅವರ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರ್ಕಳದಿಂದ ಮೂಡುಬಿದ್ರೆಯತ್ತ ವೇಗವಾಗಿ ಸಾಗುತ್ತಿದ್ದ ಖಾಸಗಿ ಬಸ್ ಮತ್ತು ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರಿನ (KA 70 A 0099) ನಡುವೆ ಮುಖಾಮುಖಿ ಭೀಕರ ಡಿಕ್ಕಿ ಸಂಭವಿಸಿದೆ.

ಘಟನೆಯ ವಿವರ ಹಾಗೂ ರಕ್ಷಣಾ ಕಾರ್ಯ: ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಾಜುಗಳು ಪುಡಿಯಾಗಿವೆ. ಕಾರಿನ ಒಳಗೆ ಏರ್‌ಬ್ಯಾಗ್‌ಗಳು ತೆರೆದುಕೊಂಡಿದ್ದರೂ ಸಹ, ಡಿಕ್ಕಿಯ ತೀವ್ರತೆಯಿಂದಾಗಿ ಮುಂಭಾಗದಲ್ಲಿ ಕುಳಿತಿದ್ದ ಮಾಜಿ ಸಚಿವ ರಮಾನಾಥ ರೈ ಹಾಗೂ ಕಾರು ಚಾಲಕ ಒಳಗೆ ಸಿಲುಕಿಕೊಂಡಿದ್ದರು. ಘಟನಾ ಸ್ಥಳದಲ್ಲಿದ್ದ ಸ್ಥಳೀಯರು ಮತ್ತು ಸಾರ್ವಜನಿಕರು ತಕ್ಷಣವೇ ಧಾವಿಸಿ ಬಂದು, ಅತ್ಯಂತ ಪ್ರಯಾಸಪಟ್ಟು ಅವರನ್ನ ಕಾರಿನಿಂದ ಹೊರತೆಗೆದಿದ್ದಾರೆ.

ಆಸ್ಪತ್ರೆಗೆ ದಾಖಲು: ಅಪಘಾತದಲ್ಲಿ ಗಾಯಗೊಂಡಿರುವ ರಮಾನಾಥ ರೈ ಹಾಗೂ ಕಾರು ಚಾಲಕರನ್ನು ತಕ್ಷಣವೇ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಬಸ್ ಹಾಗೂ ಕಾರಿನಲ್ಲಿದ್ದ ಇತರೆ ಕೆಲವು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯರು ಅವರನ್ನು ಆಸ್ಪತ್ರೆಗೆ ಸೇರಿಸಲು ನೆರವಾಗಿದ್ದಾರೆ.
ರಮಾನಾಥ ರೈಯವರು ಒಡಿಯೂರಿನಲ್ಲಿ ನಡೆದ ಒಡಿಯೂರು ಶ್ರೀ ವಿಕಾಸವಾಹಿನಿ ಸಂಭ್ರಮ ಹಾಗೂ ನೇರಳಕಟ್ಟೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಂಗಳೂರಿನ ಕಾರ್ಯಕ್ರಮದ ಮುಗಿಸಿ ಕಾರ್ಕಳದ ಮತ್ತೊಂದು ಸಮಾರಂಭಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
arrest
ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಫೇಸ್‌ಬುಕ್‌ನಲ್ಲಿ ಜಾತಿ ನಿಂದನೆ, ಜೀವಬೆದರಿಕೆ: ಕಾರ್ಕಳದಲ್ಲಿ ಆರೋಪಿ ಬಂಧನ
ಕಾರ್ಕಳ: ಸಾಮಾಜಿಕ ಜಾಲತಾಣದಲ್ಲಿ ರಾಜ್ಯದ ಗೃಹ ಸಚಿವರ ವಿರುದ್ಧ ಅವಹೇಳನಕಾರಿ ಹಾಗೂ ಜಾತಿ ನಿಂದನೆಯ ಕಮೆಂಟ್ ಮಾಡಿ, ದ್ವೇಷ ಹರಡಲು ಯತ್ನಿಸಿದ ಆರೋಪದ ಮೇಲೆ ಕಾರ್ಕಳ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಕೆರ್ವಾಶೆ ನಲ್ಕೆದಬೆಟ್ಟು ನಿವಾಸಿ, ಭೋಜ ಬಂಗೇರ ಅವರ ಪುತ್ರ ಸುದೀರ್ ಬಂಗೇರ (48) ಬಂಧಿತ ಆರೋಪಿ.
ಪ್ರಕರಣದ ಹಿನ್ನೆಲೆ: ಫೇಸ್‌ಬುಕ್‌ನ “NAMMA KARLA” ಎಂಬ ಪೇಜ್‌ನಲ್ಲಿ ಗೃಹ ಸಚಿವರ ಕುರಿತಾದ ಪೋಸ್ಟ್ ಒಂದಕ್ಕೆ ಆರೋಪಿ ಸುದೀರ್ ಬಂಗೇರ ಅವಹೇಳನಕಾರಿ ಕಮೆಂಟ್ ಮಾಡಿದ್ದನು. ಕಮೆಂಟ್‌ನಲ್ಲಿ ದಲಿತ ಸಮುದಾಯಕ್ಕೆ ಸೇರಿದ ಸಚಿವರ ಜಾತಿಯನ್ನು ಉಲ್ಲೇಖಿಸಿ ನಿಂದನೆ ಮಾಡಲಾಗಿತ್ತು. ಇದು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವ ಹಾಗೂ ವಿವಿಧ ಸಮುದಾಯಗಳ ನಡುವೆ ದ್ವೇಷ ಮತ್ತು ವೈರತ್ವ ಸೃಷ್ಟಿಸುವ ಉದ್ದೇಶದಿಂದ ಕೂಡಿದೆ ಎಂದು ಸುರೇಶ್ ಎಂಬುವವರು ಕಾರ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ದಾಖಲಾದ ಪ್ರಕರಣಗಳು: ದೂರಿನ ಅನ್ವಯ ಕಾರ್ಕಳ ನಗರ ಪೊಲೀಸರು ಅಪರಾಧ ಸಂಖ್ಯೆ 82/2026 ರಂತೆ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 351(3), 196, 353(2) ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ (SC/ST Act) ಕಲಂ 3(1)(r) ಮತ್ತು 3(1)(u) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸುವ ಪ್ರಕ್ರಿಯೆ ಕೈಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ



crime
ಕಾರ್ಕಳ: ಮನೆ ಕಳ್ಳತನ ಪ್ರಕರಣ 24 ಗಂಟೆಯೊಳಗೆ ಭೇದಿಸಿದ ಪೊಲೀಸರು; ಇಬ್ಬರ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ
ಕಾರ್ಕಳ: ನಗರದ ಪತ್ತೊಂಜಿ ಕಟ್ಟೆಯ ಮನೆಯೊಂದರಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಕಾರ್ಕಳ ನಗರ ಪೊಲೀಸರು ಕೇವಲ 24 ಗಂಟೆಯೊಳಗೆ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಘಟನೆಯ ವಿವರ: ಪತ್ತೊಂಜಿ ಕಟ್ಟೆಯ ನಿವಾಸಿ ಶಂಕರ ಕುಲಾಲ್ ಅವರು ಏಪ್ರಿಲ್ 23ರ ಬೆಳಿಗ್ಗೆ ಮನೆಯಿಂದ ಹೊರಗಡೆ ಹೋಗಿದ್ದ ಸಂದರ್ಭದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಏಪ್ರಿಲ್ 24ರ ಸಂಜೆ 6 ಗಂಟೆಯ ಒಳಗಿನ ಅವಧಿಯಲ್ಲಿ ಮನೆಯ ಬಾಗಿಲು ಮೀಟಿ ಒಳನುಗ್ಗಿದ ಕಳ್ಳರು, ಕಪಾಟಿನಲ್ಲಿದ್ದ ಸುಮಾರು 2.64 ಲಕ್ಷ ರೂ. ಮೌಲ್ಯದ ಚಿನ್ನದ ನೆಕ್ಲೆಸ್, ಉಂಗುರಗಳು ಹಾಗೂ ಜುಮ್ಕಿ ಸೇರಿದಂತೆ ವಿವಿಧ ಆಭರಣಗಳನ್ನು ದೋಚಿದ್ದರು. ಈ ಬಗ್ಗೆ ಶಂಕರ ಕುಲಾಲ್ ಅವರು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಮಿಂಚಿನ ಕಾರ್ಯಾಚರಣೆ: ಪ್ರಕರಣ ದಾಖಲಾಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದರು. ಕಾರ್ಕಳ ಉಪವಿಭಾಗದ ಡಿವೈಎಸ್ಪಿ ವಿಜಯಪ್ರಸಾದ್ ಅವರ ಮಾರ್ಗದರ್ಶನದಲ್ಲಿ, ಪೊಲೀಸ್ ನಿರೀಕ್ಷಕ ಮಂಜಪ್ಪ ಡಿ.ಆರ್., ಪಿಎಸ್ಐಗಳಾದ ಮುರುಳೀಧರ ನಾಯ್ಕ, ಶಿವಕುಮಾರ್ ಎಸ್.ಆರ್. ಹಾಗೂ ಸಿಬ್ಬಂದಿಗಳ ತಂಡ ತನಿಖೆ ನಡೆಸಿ ಕೇವಲ 24 ಗಂಟೆಯೊಳಗೆ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ.
ಬಂಧಿತರು ಮತ್ತು ವಶಪಡಿಸಿಕೊಂಡ ಸೊತ್ತು:
ಆನಂದ ಕುಲಾಲ್ (40) ಬೈರಂಪಳ್ಳಿ ಗ್ರಾಮದ ನಿವಾಸಿಯಾಗಿದ್ದು, ಕಳ್ಳತನ ಮಾಡಿದ ಪ್ರಮುಖ ಆರೋಪಿ. ಜಯರಾಮ ಆಚಾರ್ಯ (54) ಅಜೆಕಾರು ಮರ್ಣೆ ಗ್ರಾಮದ ನಿವಾಸಿಯಾಗಿದ್ದು, ಕಳವು ಮಾಡಿದ ಚಿನ್ನವನ್ನು ವಿಲೇವಾರಿ ಮಾಡಲು ಸಹಕರಿಸಿದ ಆರೋಪದಡಿ ಬಂಧಿಸಲಾಗಿದೆ.
ಆರೋಪಿಗಳಿಂದ ಒಟ್ಟು 39 ಗ್ರಾಂ ತೂಕದ, ಅಂದಾಜು 5.60 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಅತ್ಯಲ್ಪ ಅವಧಿಯಲ್ಲಿ ಕಳ್ಳರನ್ನು ಪತ್ತೆಹಚ್ಚಿದ ಪೊಲೀಸ್ ತಂಡದ ಕಾರ್ಯವೈಖರಿಗೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.



-
accident2 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala8 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
