murder
ಕುಂದಾಪುರದಲ್ಲಿ ಭೀಕರ ಕೊಲೆ: ಉದ್ಯಮಿಗೆ ನಡುರಸ್ತೆಯಲ್ಲೇ ನಾಡಕೋವಿಯಿಂದ ಗುಂಡಿಕ್ಕಿ ಹತ್ಯೆ
ಕುಂದಾಪುರ: ಹಣಕಾಸಿನ ವೈಷಮ್ಯ ಮತ್ತು ಕ್ಷುಲ್ಲಕ ಸವಾಲಿನ ಹಿನ್ನೆಲೆಯಲ್ಲಿ ಉದ್ಯಮಿಯೊಬ್ಬರನ್ನು ನಾಡಕೋವಿಯಿಂದ ಗುಂಡಿಕ್ಕಿ ಭೀಕರವಾಗಿ ಕೊಲೆ ಮಾಡಲಾಗಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ಹೋಲಿ ರೋಸರಿ ಚರ್ಚ್ ರಸ್ತೆಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ.
ಬಾರ್ಕೂರು-ಕಚ್ಚೂರು ಮೂಲದ ಉದ್ಯಮಿ, ‘ಮುನ್ನಾ’ ಎಂದೂ ಕರೆಯಲ್ಪಡುತ್ತಿದ್ದ ಐವನ್ ರಿಚರ್ಡ್ ಮಸ್ಕರೇನಸ್ (45) ಕೊಲೆಯಾದ ದುರ್ದೈವಿ. ಕೃತ್ಯ ಎಸಗಿದ ಕನ್ನಡಕುದ್ರು ನಿವಾಸಿ ಡೆರಿಕ್ ಎಂಬಾತ ಸ್ಥಳದಿಂದ ಪರಾರಿಯಾಗಿದ್ದು, ಆತನ ಬಂಧನಕ್ಕೆ ಪೊಲೀಸರು ಶೋಧ ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ.
ಘಟನೆಯ ವಿವರ: ಪೊಲೀಸ್ ಮೂಲಗಳ ಪ್ರಕಾರ, ಮೃತ ಐವನ್ ಹಾಗೂ ಆರೋಪಿ ಡೆರಿಕ್ ನಡುವೆ ತೀವ್ರ ಹಣಕಾಸಿನ ದ್ವೇಷವಿತ್ತು. ಜುಲೈ 30ರ ತಡರಾತ್ರಿ ಇಬ್ಬರ ನಡುವೆ ಫೋನ್ನಲ್ಲಿ ತೀವ್ರ ಮಾತಿನ ಚಕಮಕಿ ನಡೆದು, ಪರಸ್ಪರ ಸವಾಲು ಹಾಕಿಕೊಳ್ಳಲಾಗಿತ್ತು. ಈ ವೇಳೆ “ತಾಕತ್ತಿದ್ದರೆ ಚರ್ಚ್ ರೋಡಿಗೆ ಬಾ” ಎಂದು ಡೆರಿಕ್, ಐವನ್ಗೆ ಕರೆ ನೀಡಿದ್ದ.
ಕುಡಿತದ ಮತ್ತಿನಲ್ಲಿದ್ದ ಐವನ್, ಶುಕ್ರವಾರ ಮುಂಜಾನೆ ಸುಮಾರು 3:30 ರ ವೇಳೆಗೆ ತಮ್ಮ ಸಂಗಾತಿ ಲಲಿತಾ ಅವರೊಂದಿಗೆ ಕಾರಿನಲ್ಲಿ ಕುಂದಾಪುರದ ಚರ್ಚ್ ರಸ್ತೆಗೆ ಬಂದಿದ್ದಾರೆ. ಲಿಲಿತಾ ಕಾರಿನಲ್ಲಿಯೇ ಕುಳಿತಿದ್ದು, ಅಲ್ಲಿ ಅವರಿಬ್ಬರ ಮದ್ಯೆ ಮತ್ತೆ ಗಲಾಟೆಯ ಮಾತುಗಳು ನಡೆದಿದೆ. ಗಲಾಟೆ ಜೋರಾಗಿದೆ. ಆ ಸಂದರ್ಭಕ್ಕೆ ಡೆರಿಕ್ ತನ್ನಲ್ಲಿದ್ದ ನಾಡಕೋವಿನಿಂದ ಐವನ್ ಕಡೆಗೆ ಗುಂಡು ಹಾರಿಸಿದ್ದಾನೆ. ಗುಂಡು ಐವನ್ ಅವರ ತೊಡೆಯ ಭಾಗಕ್ಕೆ ಹೊಕ್ಕಿದ್ದು, ತೀವ್ರ ರಕ್ತಸ್ರಾವದಿಂದಾಗಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಆರೋಪಿ ಅಲ್ಲಿಂದ ಕಾಲ್ಕಿತ್ತಿದ್ದಾನೆ.
ಪೊಲೀಸ್ ತನಿಖೆ ತೀವ್ರ: ಘಟನೆಯ ವೇಳೆ ಜೊತೆಯಲ್ಲಿದ್ದ ಲಲಿತಾ ಅವರು ಆರೋಪಿಯನ್ನು ಗುರುತಿಸಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಕುಂದಾಪುರ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು, ಎಫ್ಎಸ್ಎಲ್ (FSL) ಹಾಗೂ ಸೊಕೋ (SOCO) ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿ ಡೆರಿಕ್ ಬಂಧನಕ್ಕೆ ಬಲೆ ಬೀಸಿದ್ದಾರೆ.
arrest
ಕೊಲೆ ಮಾಡಿದ ಸ್ನೇಹಿತನೇ ಕನಸಿನಲ್ಲಿ ದೆವ್ವವಾಗಿ ಕಾಡಿದ! ಭಯ ತಾಳಲಾರದೆ ಪೊಲೀಸರಿಗೆ ಶರಣಾದ ಆರೋಪಿ
ಮದ್ಯದ ಪಾರ್ಟಿ ವೇಳೆ ಸ್ನೇಹಿತನನ್ನೇ ಹೊಡೆದು ಕೊಂದಿದ್ದ ಯುವಕ; 15 ದಿನಗಳ ಕಾಲ ನಿದ್ರೆಯಲ್ಲೂ ಕಾಡಿದ ಮೃತ ಸ್ನೇಹಿತನ ನೆನಪು – ಕೊನೆಗೆ ಕೊಲೆ ರಹಸ್ಯ ಬಯಲು
ಮುಂಬೈ: ಮದ್ಯದ ಪಾರ್ಟಿ ವೇಳೆ ಉಂಟಾದ ಜಗಳದಲ್ಲಿ ಸ್ನೇಹಿತನನ್ನೇ ಹೊಡೆದು ಕೊಲೆಗೈದು, ಮೃತದೇಹವನ್ನು ಚೀಲದಲ್ಲಿ ತುಂಬಿ ನಿರ್ಜನ ಪ್ರದೇಶದಲ್ಲಿ ಎಸೆದಿದ್ದ ಯುವಕನೊಬ್ಬ, ಕೊನೆಗೆ ಮೃತ ಸ್ನೇಹಿತ ಕನಸಿನಲ್ಲಿ ಪದೇಪದೇ ಬಂದು ಕಾಡುತ್ತಿದ್ದಾನೆಂಬ ಭಯದಿಂದ ಪೊಲೀಸರ ಮುಂದೆ ಶರಣಾಗಿ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ.
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಡೊಂಬಿವ್ಲಿ ನಿವಾಸಿ, ಹೌಸ್ಕೀಪಿಂಗ್ ಕೆಲಸಗಾರ ಪ್ರಭು ಕಾರ್ಕಡೆ (24) ಬಂಧಿತ ಆರೋಪಿ. ಎರಡು ವಾರಗಳ ಹಿಂದೆ ಡೊಂಬಿವ್ಲಿ ಸಮೀಪದ ಮೋಥಾ ಗ್ರಾಮದಲ್ಲಿ ಪಲ್ಲವ್ ಅಲಿಯಾಸ್ ವಿಶಾಲ್ ಮಧುಕರ್ ಕದಮ್ (43) ಎಂಬವರ ಮೃತದೇಹ ಪತ್ತೆಯಾಗಿತ್ತು ಎಂದು ಹಿರಿಯ ಪೊಲೀಸ್ ಇನ್ಸ್ಪೆಕ್ಟರ್ ಪ್ರಫುಲ್ಲ ಜಾಧವ್ ತಿಳಿಸಿದ್ದಾರೆ.
ಪೊಲೀಸರ ವಿಚಾರಣೆ ವೇಳೆ ಪ್ರಭು ನೀಡಿದ ಹೇಳಿಕೆಯ ಪ್ರಕಾರ, ಸ್ನೇಹಿತ ಕದಮ್ ಅವರ ಮನೆಯಲ್ಲೇ ಇಬ್ಬರೂ ಮದ್ಯಪಾನ ಮಾಡುತ್ತಿದ್ದಾಗ ಜಗಳ ಉಂಟಾಗಿತ್ತು. ಈ ವೇಳೆ ಆಕ್ರೋಶಗೊಂಡ ಪ್ರಭು, ಕದಮ್ ಅವರನ್ನು ಹೊಡೆದು ಕೊಲೆ ಮಾಡಿದ್ದಾನೆ.ಆತ ಮೃತಪಟ್ಟಿದ್ದ. ಸ್ನೇಹಿತ ಮೃತಪಟ್ಟಿರುವುದನ್ನು ಕಂಡು ಗಾಬರಿಗೊಂಡ ಪ್ರಭು, ತಕ್ಷಣ ತನ್ನ ಬಾಡಿಗೆ ಮನೆಯ ಮಾಲೀಕ ಸಂದೇಶ್ ಮ್ಹಾತ್ರೆ ಎಂಬಾತನ ಸಹಾಯ ಕೋರಿದ್ದಾನೆ. ಅವರಿಬ್ಬರೂ ಸೇರಿ ವಿಶಾಲ್ ಅವರ ಮೃತದೇಹವನ್ನು ಚೀಲವೊಂದರಲ್ಲಿ ತುಂಬಿ, ರಾತ್ರೋರಾತ್ರಿ ಹತ್ತಿರದ ನಿರ್ಜನ ಪ್ರದೇಶದಲ್ಲಿ ಎಸೆದು ಸಾಕ್ಷ್ಯ ನಾಶಪಡಿಸಿದ್ದರು. ಬಳಿಕ ಪರಾರಿಯಾಗಿದ್ದಾನೆ.
ಕೊಲೆ ಮಾಡಿದ ಬಳಿಕ ಯಾರಿಗೂ ಅನುಮಾನ ಬಾರದಂತೆ ಆರಾಮವಾಗಿದ್ದ ಪ್ರಭುವಿಗೆ ಕೆಲವೇ ದಿನಗಳಲ್ಲಿ ಭಯ ಶುರುವಾಗಿದೆ. ಮೃತಪಟ್ಟ ಸ್ನೇಹಿತ ವಿಶಾಲ್ ಪದೇಪದೇ ಕನಸಿನಲ್ಲಿ ಬಂದು ಕಾಡುತ್ತಿದ್ದ. ಸುಮಾರು 15 ದಿನಗಳ ಕಾಲ ಸರಿಯಾಗಿ ನಿದ್ರೆ ಮಾಡಲೂ ಸಾಧ್ಯವಾಗದೆ ತೀವ್ರ ಆತಂಕಕ್ಕೆ ಒಳಗಾಗಿದ್ದ ಎಂದು ಆತ ಪೊಲೀಸರಿಗೆ ತಿಳಿಸಿದ್ದಾನೆ.
ಕನಸಿನ ಭಯ ಹಾಗೂ ಪಶ್ಚಾತ್ತಾಪದಿಂದ ಕಂಗೆಟ್ಟ ಪ್ರಭು, ಕೊನೆಗೆ ತಾನಾಗಿಯೇ ಪೊಲೀಸರ ಬಳಿಗೆ ತೆರಳಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡು ಶರಣಾಗಿದ್ದಾನೆ. ಸೋಮವಾರ ಆತನನ್ನು ಬಂಧಿಸಲಾಗಿದೆ. ಅಲ್ಲದೆ, ಮೃತದೇಹ ಎಸೆದಿದ್ದ ಸ್ಥಳವನ್ನೂ ಪೊಲೀಸರಿಗೆ ತೋರಿಸಿದ್ದಾನೆ.
ಈ ಸಂಬಂಧ ವಿಷ್ಣು ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 103(1)ರ ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
arrest
ಬಂಟ್ವಾಳ ವಗ್ಗದಲ್ಲಿ ಕೌಟುಂಬಿಕ ಕಲಹ: ಹೆಂಡತಿಯನ್ನು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ; ಗಂಡನ ಬಂಧನ
ಬಂಟ್ವಾಳ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗಂಡನೇ ಹೆಂಡತಿಯನ್ನು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ ಮಾಡಿರುವ ದಾರುಣ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗದಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಿವಾಸಿ ಸಂಜೀವಕುಮಾರ್ (36) ಬಂಧಿತ ಆರೋಪಿ. ಬೆಳಗಾವಿ ಅಥಣಿ ನಿವಾಸಿ ಅರುಣ್ ಮಹಾದೇವ್ ದೇಸಂಗಿ (26) ಎಂಬವರು ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯ ವಿವರ: ಪಿರ್ಯಾದಿದಾರರ ಸಹೋದರಿಯಾದ ಸುನೀತಾ ಮಹಾದೇವ್ ದೇಸಂಗಿ (34) ಎಂಬವರನ್ನು ಜಮಖಂಡಿ ನಿವಾಸಿ ಸಂಜೀವಕುಮಾರ್ಗೆ ಮದುವೆ ಮಾಡಿಕೊಡಲಾಗಿದ್ದು, ದಂಪತಿಗಳು ಬಂಟ್ವಾಳದ ವಗ್ಗದಲ್ಲಿ ವಾಸವಾಗಿದ್ದರು. ದಂಪತಿಗಳ ನಡುವೆ ವೈವಾಹಿಕ ಕಲಹ ನಡೆಯುತ್ತಿದ್ದು, ಈ ಹಿಂದೆ ಸಂಬಂಧಿಕರು ಸೇರಿ ರಾಜಿ ಸಂಧಾನ ಮಾಡಿದ್ದರು.
ಪ್ರಸವದ ಬಳಿಕ ತವರು ಮನೆಯಲ್ಲಿದ್ದ ಸುನೀತಾರವರನ್ನು ಆರೋಪಿ ಸಂಜೀವಕುಮಾರ್ ಕಳೆದ ಅಕ್ಟೋಬರ್ 4ರಂದು ಬಂಟ್ವಾಳದ ತನ್ನ ಮನೆಗೆ ಕರೆತಂದಿದ್ದನು. ಬಳಿಕ ಅಕ್ಟೋಬರ್ 22ರಂದು ಸುನೀತಾರವರು ತಮ್ಮ ಸಹೋದರನಿಗೆ (ಪಿರ್ಯಾದಿದಾರರಿಗೆ) ಕರೆ ಮಾಡಿ, ಗಂಡನು ತನಗೆ ಕಿರುಕುಳ ನೀಡಿ ಹಲ್ಲೆ ನಡೆಸುತ್ತಿರುವುದಾಗಿ ಅಳಲು ತೋಡಿಕೊಂಡಿದ್ದರು.
ಮುಂದುವರಿದು, ಅಕ್ಟೋಬರ್ 23ರಂದು ಮುಂಜಾನೆ ಆರೋಪಿ ಸಂಜೀವಕುಮಾರ್ ಪಿರ್ಯಾದಿದಾರರಿಗೆ ದೂರವಾಣಿ ಕರೆ ಮಾಡಿ, ಸುನೀತಾರವರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಿಸುತ್ತಿರುವುದಾಗಿ ತಿಳಿಸಿದ್ದಾನೆ. ತಕ್ಷಣವೇ ಪಿರ್ಯಾದಿದಾರರು ಬಂದು ನೋಡಿದಾಗ ಸುನೀತಾ ಮೃತಪಟ್ಟಿರುವುದು ಕಂಡುಬಂದಿದೆ. ಮೃತಳ ಶರೀರವನ್ನು ಪರಿಶೀಲಿಸಿದಾಗ ಹಲ್ಲೆ ನಡೆಸಿದ ಗಾಯಗಳು ಹಾಗೂ ರಕ್ತದ ಗುರುತುಗಳು ಪತ್ತೆಯಾಗಿವೆ.
ಪೊಲೀಸ್ ತನಿಖೆ ಮತ್ತು ಬಂಧನ: ಆರೋಪಿ ಸಂಜೀವಕುಮಾರ್ ಕೌಟುಂಬಿಕ ಕಲಹದ ಕಾರಣದಿಂದ ಅಕ್ಟೋಬರ್ 22ರ ರಾತ್ರಿಯಿಂದ ಅಕ್ಟೋಬರ್ 23ರ ಮುಂಜಾನೆ ಸಮಯದೊಳಗೆ ಸುನೀತಾರಿಗೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 142/2026, ಕಲಂ: 103 BNS 2023 ರಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿ ಸಂಜೀವಕುಮಾರ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಯನ್ನು ಶೀಘ್ರವೇ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
jail
ಮೈಸೂರು ದಸರಾ ವೇಳೆ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ: ಅಪರಾಧಿ ಕಾರ್ತಿಕ್ ದೋಷಿ ಎಂದು ಸಾಬೀತು, ಇಂದು ಶಿಕ್ಷೆ ಪ್ರಕಟ
ಮೈಸೂರು: ಕಳೆದ ವರ್ಷ ಮೈಸೂರು ದಸರಾ ಮಹೋತ್ಸವದ ಸಂಭ್ರಮದ ನಡುವೆಯೇ ನಡೆದಿದ್ದ ಅತ್ಯಂತ ಭೀಕರ ಮತ್ತು ಮನುಕುಲವೇ ತಲೆತಗ್ಗಿಸುವಂತಹ ಘಟನೆಯಲ್ಲಿ, 9 ವರ್ಷದ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಆರೋಪಿ ಕಾರ್ತಿಕ್ (32) ದೋಷಿ ಎಂದು ಮೈಸೂರು ಶೀಘ್ರಗತಿ ವಿಶೇಷ ನ್ಯಾಯಾಲಯವು ತೀರ್ಪು ನೀಡಿದೆ.
ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಕಳೆದ ವರ್ಷ ಗುಲ್ಬರ್ಗಾದಿಂದ (ಕಲಬುರಗಿ) ಬಡ ಕುಟುಂಬವೊಂದು ಮೈಸೂರಿಗೆ ಬಲೂನ್ ಮಾರಾಟ ಮಾಡಲು ಬಂದಿತ್ತು. ದಸರಾ ವಸ್ತುಪ್ರದರ್ಶನದ (Exhibition) ಬಳಿ ಟೆಂಟ್ ಹಾಕಿಕೊಂಡು ವಾಸವಿದ್ದ ಈ ಕುಟುಂಬದ 9 ವರ್ಷದ ಬಾಲಕಿಯನ್ನು ಆರೋಪಿ ಕಾರ್ತಿಕ್ ಮಧ್ಯರಾತ್ರಿ ಎಳೆದೊಯ್ದು, ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿದ್ದನು.
ಈ ಘಟನೆಯು ಇಡೀ ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಹಾಗೂ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ನಜರಬಾದ್ ಠಾಣೆಯ ಪೊಲೀಸರು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕೇವಲ 24 ಗಂಟೆಗಳ ಒಳಗಾಗಿ ಆರೋಪಿ ಕಾರ್ತಿಕ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಮೈಸೂರಿನ ಸಿದ್ದಲಿಂಗಪುರದ ನಿವಾಸಿಯಾಗಿರುವ ಈತ, ಮೈಸೂರು-ಕೊಳ್ಳೇಗಾಲ ಮಾರ್ಗದ ಬಸ್ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದನು.
ಪ್ರಕರಣದ ವಿಚಾರಣೆ ನಡೆಸಿದ ಮೈಸೂರು ಶೀಘ್ರಗತಿ ವಿಶೇಷ ನ್ಯಾಯಾಲಯವು ಆರೋಪಿ ವಿರುದ್ಧದ ಅಪರಾಧ ಕೃತ್ಯ ಸಾಬೀತುಗೊಂಡಿರುವುದಾಗಿ ತೀರ್ಪು ನೀಡಿದೆ. ವಿಶೇಷವೆಂದರೆ, ಕಳೆದ ವರ್ಷ ದಸರಾ ಸಮಯದಲ್ಲೇ ಈ ಹೀನಾಯ ಕೃತ್ಯ ಜರುಗಿತ್ತು, ಈಗ ಮತ್ತೊಮ್ಮೆ ದಸರಾ ಮಹೋತ್ಸವದ ಸಂಭ್ರಮವಿರುವ ವೇಳೆಯಲ್ಲೇ ನ್ಯಾಯಾಲಯವು ತೀರ್ಪು ಪ್ರಕಟಿಸಿದ್ದು, ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗುವ ಹಾದಿಯಲ್ಲಿದೆ.
-
accident3 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala4 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime9 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime7 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala7 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala10 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident4 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident6 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
