CONGRESS
ಮಹಿಳೆಯರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ: ‘ಋತುತಾರೆ’ ಯೋಜನೆ ಜಾರಿ, ರಾಯಭಾರಿಯಾಗಿ ನಟಿ ರಮ್ಯಾ ನೇಮಕ
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಮೂಲಕ ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡಿದ್ದ ರಾಜ್ಯ ಸರ್ಕಾರ, ಇದೀಗ ಅವರ ಆರೋಗ್ಯ ರಕ್ಷಣೆಯ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಮಹಿಳೆಯರ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಳಜಿಯನ್ನು ಗಮನದಲ್ಲಿಟ್ಟುಕೊಂಡು ‘ಋತುತಾರೆ’ ಎಂಬ ನೂತನ ಯೋಜನೆಯನ್ನು ಜಾರಿಗೆ ತಂದಿದೆ.
ಈ ಮಹತ್ವಾಕಾಂಕ್ಷಿ ಯೋಜನೆಯ ಬ್ರ್ಯಾಂಡ್ ಅಂಬಾಸಿಡರ್ (ರಾಯಭಾರಿ) ಆಗಿ ಸ್ಯಾಂಡಲ್‌ವುಡ್ ನಟಿ ರಮ್ಯಾ ಅವರನ್ನು ನೇಮಕ ಮಾಡಲಾಗಿದೆ.
ಸಚಿವರ ಸುದ್ದಿಗೋಷ್ಠಿ ಹಾಗೂ ಸಮಿತಿ ರಚನೆ
ವಿಧಾನಸೌಧದಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಹಾಗೂ ನಟಿ ರಮ್ಯಾ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಯೋಜನೆಯ ವಿವರಗಳನ್ನು ಹಂಚಿಕೊಂಡರು. “ಮಹಿಳೆಯರ ಆರೋಗ್ಯ ಸಂಬಂಧಿತ ಸಮಸ್ಯೆಗಳ ಬಗ್ಗೆ ಸಮಗ್ರ ಅಧ್ಯಯನ ನಡೆಸಿ, ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಮಹಿಳಾ ತಜ್ಞೆ ಡಾ. ಜೋಸ್ನಾ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಮಿತಿಯನ್ನು ರಚಿಸಲಾಗಿದೆ,” ಎಂದು ಸಚಿವ ಯು.ಟಿ. ಖಾದರ್ ತಿಳಿಸಿದರು.
ಮೆನೋಪಾಸ್ ಜಾಗೃತಿಗೆ ಆದ್ಯತೆ: ರಮ್ಯಾ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಟಿ ರಮ್ಯಾ, “ಮಹಿಳೆಯರನ್ನು ಹೆಚ್ಚಾಗಿ ಕಾಡುವ ‘ಮೆನೋಪಾಸ್’ (ಋತುಬಂಧ) ಸಮಸ್ಯೆಯ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಇತರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ, ಅದರಲ್ಲೂ ನಗರ ಪ್ರದೇಶದ ಮಹಿಳೆಯರಲ್ಲಿ ಮೆನೋಪಾಸ್ ಲಕ್ಷಣಗಳು ಬೇಗ ಕಾಣಿಸಿಕೊಳ್ಳುತ್ತವೆ ಮತ್ತು ಅನೇಕರು ಇದರಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಾರೆ,” ಎಂದರು.
“ನಮ್ಮ ಮನವಿಗೆ ತಕ್ಷಣ ಸ್ಪಂದಿಸಿ ರಾಜ್ಯ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿರುವುದು ಶ್ಲಾಘನೀಯ. ಈ ಯೋಜನೆಗೆ ನನ್ನನ್ನು ಬ್ರ್ಯಾಂಡ್ ಅಂಬಾಸಿಡರ್ ಆಗಿ ನೇಮಿಸಿರುವುದು ಅತ್ಯಂತ ಸಂತೋಷ ತಂದಿದೆ,” ಎಂದು ರಮ್ಯಾ ಹರ್ಷ ವ್ಯಕ್ತಪಡಿಸಿದರು.

CONGRESS
ಮಂಗಳೂರು ಹಳೆ ಬಂದರು ಪ್ರದೇಶಕ್ಕೆ ಸಿಎಂ ಭೇಟಿ: ಮೀನುಗಾರಿಕೆ ವ್ಯವಹಾರ ಸ್ಥಗಿತಗೊಳಿಸಿದ್ದಕ್ಕೆ ಆಕ್ರೋಶ, ತನಿಖೆಗೆ ಆದೇಶ
ಮಂಗಳೂರು, ಸೆ. 19: ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ಮಂಗಳೂರು ಮೀನುಗಾರಿಕಾ ಧಕ್ಕೆ ಹಳೆ ಬಂದರು ಪ್ರದೇಶಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕಮಾರ್ ಅವರು, ತಮ್ಮ ಭೇಟಿಯ ವೇಳೆ ಮೀನುಗಾರಿಕಾ ವ್ಯವಹಾರ ಹಾಗೂ ಚಟುವಟಿಕೆಗಳನ್ನು ಸ್ಥಗಿತಗೊಳಿಸಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಈ ಬಗ್ಗೆ ಕೂಡಲೇ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಕಮಿಷನರ್‌ಗೆ ಸೂಚನೆ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಅಧಿಕಾರಿಗಳೇ ಅಥವಾ ಪೊಲೀಸರೇ ಚಟುವಟಿಕೆಗಳನ್ನು ನಿಲ್ಲಿಸಿದ್ದರೆ ಅವರನ್ನು ಇಂದೇ ಅಮಾನತು ಮಾಡಲಾಗುವುದು ಎಂದು ಎಚ್ಚರಿಸಿದರು. ರಾಜ್ಯ ಹಾಗೂ ಹೊರರಾಜ್ಯಗಳಿಂದ ಬರುವ ಮೀನುಗಾರರು ಮತ್ತು ವ್ಯಾಪಾರಸ್ಥರಿಗೆ ತೊಂದರೆಯಾಗದಂತೆ ವ್ಯವಹಾರಗಳು ಎಂದಿನಂತೆ ಸುಗಮವಾಗಿ ನಡೆಯಬೇಕು ಎಂದು ಸಿಎಂ ತಿಳಿಸಿದರು. ಮೀನುಗಾರಿಕೆಯು ಆರ್ಥಿಕತೆಯ ದೊಡ್ಡ ಶಕ್ತಿಯಾಗಿದ್ದು, ಧಕ್ಕೆಯಲ್ಲಿ ವಾಹನಗಳ ಸಂಚಾರಕ್ಕೆ ಅನುಕೂಲ ಕಲ್ಪಿಸುವುದು, ಸುರಕ್ಷತೆ ಒದಗಿಸುವುದು ಹಾಗೂ ಸಣ್ಣ ದೋಣಿ ಮೀನುಗಾರರಿಗೆ ನೆರವು ನೀಡುವುದು ಸರ್ಕಾರದ ಕರ್ತವ್ಯ ಎಂದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ 35 ವರ್ಷಗಳಿಂದ ಅಳಿವೆ ಬಾಗಿಲಿಗೆ ಹೂಳೆತ್ತದೆ ಇರುವುದು ಅಪಾಯಕಾರಿಯಾಗಿದೆ ಎಂಬ ಮೀನುಗಾರರ ಅಳಲಿಗೆ ಸ್ಪಂದಿಸಿ, ಡ್ರೆಜಿಂಗ್ ಕಾರ್ಯ ಕೈಗೊಳ್ಳಲು ಕೇಂದ್ರ ಸರ್ಕಾರದ ತಾಂತ್ರಿಕ ಸಮಿತಿಯ ಸಲಹೆ ಪಡೆದು ಶೀಘ್ರವೇ ಸರ್ಕಾರವೇ ಸ್ವಂತ ಡ್ರೆಜಿಂಗ್ ಯಂತ್ರ ಖರೀದಿಸುವುದೋ ಅಥವಾ ಲೀಸ್‌ಗೆ ಪಡೆಯುವುದೋ ಎಂಬ ಬಗ್ಗೆ ತೀರ್ಮಾನಿಸುವುದಾಗಿ ಭರವಸೆ ನೀಡಿದರು. ಅಲ್ಲದೆ, ಕರಾವಳಿಯ ಅಭಿವೃದ್ಧಿಗೆ ಹೊಸ ಪಥದ ಚಿಂತನೆ ನಡೆಸಲಾಗಿದ್ದು, ಹೂಡಿಕೆದಾರರನ್ನು ಆಕರ್ಷಿಸಲು ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದರು.

ಕಸ್ತೂರಿ ರಂಗನ್ ವರದಿ ವಿಚಾರವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಜನಸಾಮಾನ್ಯರ ಬದುಕು ನಮಗೆ ಮುಖ್ಯವಾಗಿದ್ದು, ಹಿಂದೆಯೂ ನಾವು ಈ ವರದಿಯನ್ನು ತಿರಸ್ಕರಿಸಿದ್ದೇವೆ ಎಂದರು. ಕಾನೂನು ಚೌಕಟ್ಟಿನಲ್ಲಿ ಜನರಿಗೆ ಆಗುವ ಅನ್ಯಾಯ ತಪ್ಪಿಸಲು ವಾಸ್ತವ ಅಂಶಗಳನ್ನು ಅರಿಯಲು ಜನರ ಬಳಿಗೆ ಬಂದಿರುವುದಾಗಿ ತಿಳಿಸಿದರು. ಸಚಿವ ಸಂಪುಟದ ಅನುಮೋದನೆ ಕುರಿತು ಬಿಜೆಪಿ ಟೀಕೆಗಳಿಗೆ ಉತ್ತರಿಸಿ, “ನಾವು ನುಡಿದಂತೆ ನಡೆಯುತ್ತೇವೆ, ಅದೇ ನಮ್ಮ ಶಕ್ತಿ” ಎಂದು ಸ್ಪಷ್ಟಪಡಿಸಿದರು. ಈ ಭೇಟಿಯ ವೇಳೆ ಸಚಿವ ಯು.ಟಿ. ಖಾದರ್, ವಿವಿಧ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಮೀನುಗಾರಿಕಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
CONGRESS
ಮಂಗಳೂರು ಸಚಿವ ಸಂಪುಟ ಸಭೆ: ವಿವಿಧ ಸಂಘಟನೆಗಳ ಪ್ರತಿಭಟನೆ ಮತ್ತು ಬಿಗಿ ಭದ್ರತೆ
ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಶುಕ್ರವಾರ (ಸೆಪ್ಟೆಂಬರ್ 18) ಆಯೋಜಿಸಲಾದ ವಿಶೇಷ ಸಚಿವ ಸಂಪುಟ ಸಭೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟದ ಸಚಿವರು ಆಗಮಿಸಿದ ವೇಳೆ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದಲ್ಲಿ ವಿವಿಧ ಸಂಘಟನೆಗಳು ಭಾರಿ ಪ್ರತಿಭಟನೆ ನಡೆಸಿದವು. ಅಬ್ದುಲ್ ರಹೀಮಾನ್ ಕೊಲೆ ಆರೋಪಿಗಳಿಗೆ ಜಾಮೀನು ಮಂಜೂರಾಗಿರುವುದಕ್ಕೆ ರಾಜ್ಯ ಸರ್ಕಾರದ ವೈಫಲ್ಯವೇ ಕಾರಣವೆಂದು ಆರೋಪಿಸಿ ಎಸ್.ಡಿ.ಪಿ.ಐ. ಕಾರ್ಯಕರ್ತರು ಮಂಗಳೂರಿನ ರಾವ್ & ರಾವ್ ಸರ್ಕಲ್ ಬಳಿ ಕಪ್ಪುಪತಾಕೆ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಹಲವು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.
ಅದೇ ರೀತಿ, ಜೈಲ್ ಜಾಮರ್ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವಕೀಲರನ್ನು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ಹೊರಟ ಸಿ.ಪಿ.ಐ.ಎಂ. ಕಾರ್ಯಕರ್ತರನ್ನು ಪೊಲೀಸರು ತಡೆದು ವಶಕ್ಕೆ ಪಡೆದರು. ಇದರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ತುಳು ಸಂಘಟನೆಯವರು ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವಂತೆ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.

ಈ ಎಲ್ಲಾ ಬೆಳವಣಿಗೆಗಳ ನಡುವೆ, ಸಿಎಂ ಡಿ.ಕೆ. ಶಿವಕುಮಾರ್ ಅವರು ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಕದ್ರಿ ಶ್ರೀ ಮಂಜುನಾಥ ದೇವರ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪಡೀಲ್‌ನಲ್ಲಿರುವ ಪ್ರಜ್ಞಾಸೌಧದ ಎರಡನೇ ಮಹಡಿಯ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಒಟ್ಟು 33 ಮಂದಿ ಸಚಿವರಿಗೆ ಮತ್ತು ಮುಖ್ಯ ಕಾರ್ಯದರ್ಶಿಗಳು ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ಆಯಾ ಸಭಾಂಗಣದಲ್ಲೇ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ನಿಗದಿತ ಸಮಯಕ್ಕಿಂತ ಸಭೆ ಸ್ವಲ್ಪ ವಿಳಂಬವಾಗಿ ಆರಂಭವಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
CONGRESS
ಮಂಗಳೂರಿನಲ್ಲಿ ಐತಿಹಾಸಿಕ ರಾಜ್ಯ ವಿಶೇಷ ಸಚಿವ ಸಂಪುಟ ಸಭೆ: ಸಿಎಂ ಹಾಗೂ ಸಚಿವರ ಭೇಟಿ ಮತ್ತು ಕಾರ್ಯಕ್ರಮಗಳ ವರದಿ
ಮಂಗಳೂರು: ಕರಾವಳಿ ಜಿಲ್ಲೆ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಲಾಗಿರುವ ರಾಜ್ಯ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟ ಸಚಿವರು ಆಗಮಿಸಿದ್ದು, ನಗರದಲ್ಲಿ ಬಿರುಸಿನ ರಾಜಕೀಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಆರಂಭವಾಗಿವೆ.
ಕದ್ರಿ ದೇವಸ್ಥಾನ ಭೇಟಿ ಮತ್ತು ಗಾಂಧೀಜಿ ಸ್ಮರಣೆ
ಪ್ರವಾಸದ ಮೊದಲ ದಿನವಾದ ಶುಕ್ರವಾರ ಬೆಳಗ್ಗೆ ಮುಖ್ಯಮಂತ್ರಿಗಳು ಐತಿಹಾಸಿಕ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ, 1934ರಲ್ಲಿ ಮಹಾತ್ಮ ಗಾಂಧೀಜಿಯವರು ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಉಳಿದುಕೊಂಡಿದ್ದ ಐತಿಹಾಸಿಕ ಮನೆಯ ಸಮೀಪವಿರುವ ಗಾಂಧಿ ಸ್ಕ್ವೇರ್ ಕೆಫೆಗೆ ತೆರಳಿದರು.
ಯುವ ಕಂಟೆಂಟ್ ಕ್ರಿಯೇಟರ್ಸ್ ಜೊತೆ ಉಪಾಹಾರ ಹಾಗೂ ಸಂವಾದ
ಮಂಗಳೂರಿನ ಯುವ ಸೋಶಿಯಲ್ ಮೀಡಿಯಾ ಕಂಟೆಂಟ್ ಕ್ರಿಯೇಟರ್‌ಗಳೊಂದಿಗೆ ಕೆಫೆಯಲ್ಲಿ ಸಾಂಪ್ರದಾಯಿಕ ಉಪಾಹಾರ ಸವಿಯುತ್ತಾ ಸಿಎಂ ಸಂವಾದ ನಡೆಸಿದರು. ಮಂಗಳೂರು ಬನ್ಸ್, ದೋಸೆ ಸೇರಿದಂತೆ ಕರಾವಳಿಯ ವಿಶಿಷ್ಟ ಉಪಾಹಾರಗಳನ್ನು ಸವಿದ ಅವರು, “ಇಲ್ಲಿಗೆ ಬಂದಿರುವುದು ಬಹಳ ಸಂತೋಷ ತಂದಿದೆ” ಎಂದು ಹರ್ಷ ವ್ಯಕ್ತಪಡಿಸಿದರು.
ಜನರ ಬದುಕು ಮುಖ್ಯ – ಸಿಎಂ ಸ್ಪಷ್ಟನೆ
ಸರ್ಕಾರಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, “ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲೆಲ್ಲಿ ಕರೆದುಕೊಂಡು ಹೋಗುತ್ತಾರೋ ಅಲ್ಲಿಗೆ ಹೋಗುತ್ತೇನೆ. ಯಾರೂ ಗಾಬರಿಯಾಗಬೇಕಿಲ್ಲ; ನಮಗೆ ಜನರ ಬದುಕು ಮುಖ್ಯವೇ ಹೊರತು ಭಾವನೆಗಳ ಮೇಲೆ ರಾಜಕೀಯ ಮಾಡುವವರಲ್ಲ. ಎಲ್ಲರ ಚಿಂತನೆಯನ್ನೊಳಗೊಂಡು ನಮ್ಮ ಸರ್ಕಾರ ಕೆಲಸ ಮಾಡಲಿದೆ” ಎಂದು ಸ್ಪಷ್ಟಪಡಿಸಿದರು.
ಸಂಪುಟ ಸಭೆಗೆ ಭರ್ಜರಿ ಸ್ವಾಗತ ಮತ್ತು ಸಿದ್ಧತೆ
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಭವ್ಯ ಸ್ವಾಗತಕ್ಕೆ ಸಿದ್ಧತೆ ಕೈಗೊಳ್ಳಲಾಗಿದೆ. ಪಂಪ್‌ವೆಲ್‌ನಿಂದ ಪಡೀಲ್ ವರೆಗೆ ಚೆಂಡೆ ಬ್ಯಾಂಡ್‌ಗಳು ಹಾಗೂ ವಿವಿಧ ವೇಷಧಾರಿಗಳ ಸಾಂಸ್ಕೃತಿಕ ತಂಡಗಳು ರಸ್ತೆಯುದ್ದಕ್ಕೂ ಗಮನ ಸೆಳೆದವು. ಡಿಸಿ ಕಚೇರಿ ಮುಂದೆ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿದ್ದು, ಮುಖ್ಯಮಂತ್ರಿಗಳನ್ನು ಕಣ್ತುಂಬಿಕೊಳ್ಳಲು ರಸ್ತೆ ಬದಿ ಕಾದು ನಿಂತಿದ್ದಾರೆ.
-
accident2 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala8 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
