Connect with us

accident

ಬಿ.ಸಿ. ರೋಡ್‌ ಅಪಘಾತ ಸಾವು: ಸಂಚಾರ ವ್ಯವಸ್ಥೆ ಸುಧಾರಣೆ ಹಾಗೂ ಅನಧಿಕೃತ ವ್ಯಾಪಾರಿಗಳ ತೆರವಿಗೆ ಬಿ.ಜೆ.ಪಿ ಯುವ ಮೋರ್ಚಾ ಆಗ್ರಹ

Published

on

ಬಂಟ್ವಾಳ: ಇತ್ತೀಚೆಗೆ ಬಿ.ಸಿ. ರೋಡ್‌ನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆಯ ಬೆನ್ನಲ್ಲೇ, ಸಂಚಾರ ವ್ಯವಸ್ಥೆಯ ನ್ಯೂನತೆಗಳು ಹಾಗೂ ರಸ್ತೆ ಸುರಕ್ಷತೆಯ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಬಿ.ಜೆ.ಪಿ ಯುವ ಮೋರ್ಚಾ ವತಿಯಿಂದ ಪ್ರಮುಖ ಬೇಡಿಕೆಗಳನ್ನೊಳಗೊಂಡ ಮನವಿ ಪತ್ರವನ್ನು ಸಲ್ಲಿಸಲಾಗಿದೆ.

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹರಿಪ್ರಸಾದ್ ಅವರ ನೇತೃತ್ವದಲ್ಲಿ ಬಂಟ್ವಾಳ ನಗರ ಪೊಲೀಸ್ ವೃತ್ತ ನಿರೀಕ್ಷಕರಿಗೆ (Circle Inspector) ಈ ದೂರು/ಮನವಿ ಸಲ್ಲಿಸಲಾಗಿದ್ದು, ಕ್ಷೇತ್ರದಲ್ಲಿ ಹೆಚ್ಚಾಗುತ್ತಿರುವ ರಸ್ತೆ ಅಪಘಾತಗಳನ್ನು ತಡೆಯಲು ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.

ಮನವಿಯಲ್ಲಿ ಉಲ್ಲೇಖಿಸಲಾದ ಪ್ರಮುಖ ಅಂಶಗಳು:

ಡಿಜಿಟಲೀಕರಣ ಹಾಗೂ ಸಿ.ಸಿ. ಕ್ಯಾಮೆರಾ ಬಳಕೆ: ವೃತ್ತದ ಬಳಿ ಪೊಲೀಸರು ವಾಹನಗಳನ್ನು ತಡೆದು ನಿಲ್ಲಿಸಿ ದಾಖಲೆ ಪರಿಶೀಲನೆ (Document Verification) ನಡೆಸುವುದು ಹಾಗೂ ದಂಡ ವಿಧಿಸುವುದರಿಂದ ಅಪಘಾತದ ಸಂಭವ ಹೆಚ್ಚುತ್ತಿದೆ. ಆದ್ದರಿಂದ ವಾಹನ ಸವಾರರಿಗೆ ತೊಂದರೆಯಾಗದಂತೆ ಆಧುನಿಕ ಸಿ.ಸಿ. ಕ್ಯಾಮೆರಾ ಹಾಗೂ ಡಿಜಿಟಲ್ ವ್ಯವಸ್ಥೆಯ ಮೂಲಕವೇ ದಾಖಲೆ ಪರಿಶೀಲನೆ ನಡೆಸಬೇಕು.

ಸಿಗ್ನಲ್ ದೀಪಗಳ ಅಳವಡಿಕೆ: ನಾಲ್ಕು ಪ್ರಮುಖ ರಸ್ತೆಗಳು ಕೂಡುವ ಬಿ.ಸಿ. ರೋಡ್ ಜಂಕ್ಷನ್‌ನಲ್ಲಿ ಪ್ರಸ್ತುತ ಯಾವುದೇ ಟ್ರಾಫಿಕ್ ಸಿಗ್ನಲ್‌ಗಳಿಲ್ಲದೆ ವಾಹನ ಸವಾರರು ಗೊಂದಲಕ್ಕೊಳಗಾಗುತ್ತಿದ್ದಾರೆ. ಸವಾರರ ಸುರಕ್ಷತೆಗಾಗಿ ಕೂಡಲೇ ಸಂಚಾರ ಸಿಗ್ನಲ್ (Traffic Signals) ಅಳವಡಿಸಬೇಕು.

ಅನಧಿಕೃತ ತರಕಾರಿ/ಗಾಡಿ ವ್ಯಾಪಾರಿಗಳ ತೆರವು: ನಾರಾಯಣ ಗುರು ವೃತ್ತದ ರಸ್ತೆ ಇಕ್ಕೆಲಗಳಲ್ಲಿ ಅನಧಿಕೃತ ಗಾಡಿ ವ್ಯಾಪಾರಿಗಳು ಕಾರ್ಯಾಚರಿಸುತ್ತಿದ್ದು, ಗ್ರಾಹಕರು ತಮ್ಮ ವಾಹನಗಳನ್ನು ರಸ್ತೆಯಲ್ಲೇ ನಿಲ್ಲಿಸಿ ಖರೀದಿಸುವುದರಿಂದ ಸರಣಿ ಅಪಘಾತಗಳು ಸಂಭವಿಸುತ್ತಿವೆ. ಇಂತಹ ಅನಧಿಕೃತ ವ್ಯಾಪಾರಿಗಳನ್ನು ತಕ್ಷಣ ಸ್ಥಳದಿಂದ ತೆರವುಗೊಳಿಸಬೇಕು.

ಚತುಷ್ಪಥ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಮೆಲ್ಕಾರ್ ಪಡವಿನಿಂದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದವರೆಗಿನ ಚತುಷ್ಪಥ (Four-lane) ರಸ್ತೆ ನಿರ್ಮಾಣ ಕಾಮಗಾರಿಯನ್ನು ವಿಳಂಬ ಮಾಡದೇ ಶೀಘ್ರವಾಗಿ ಆರಂಭಿಸಿ ಪೂರ್ಣಗೊಳಿಸಬೇಕು.

ವಿವಿಧ ಇಲಾಖೆಗಳಿಗೂ ಪ್ರತಿಯ ರವಾನೆ: ಸಾರ್ವಜನಿಕರ ಜೀವ ರಕ್ಷಣೆ ಹಾಗೂ ಸಂಚಾರ ಸುಗಮಗೊಳಿಸುವ ನಿಟ್ಟಿನಲ್ಲಿ ಈ ಮನವಿಯ ಪ್ರತಿಗಳನ್ನು ಗೃಹ ಸಚಿವರು, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಬಂಟ್ವಾಳ ಶಾಸಕರು, ಜಿಲ್ಲಾಧಿಕಾರಿಗಳು, ತಹಸೀಲ್ದಾರರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನೆ ನಿರ್ದೇಶಕರು (NHAI) ಹಾಗೂ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿಗಳಿಗೆ ರವಾನಿಸಲಾಗಿದೆ

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

accident

ಕಾಸರಗೋಡು: ಸಿಡಿಲು ಬಡಿದು ಯುವಕ ಸಾವು – ದಾರುಣ ಘಟನೆ

Published

on

ಕಾಸರಗೋಡು: ಆದುರು ಪೊಲೀಸ್ ಠಾಣಾ ವ್ಯಾಪ್ತಿಯ ದೇಲಂಪಾಡಿ ಪಾಂಡಿ ಬಳವಂತಡ್ಕ ಎಂಬಲ್ಲಿ ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ.

ಕುಂಟಾರು ಉಯಿತಡ್ಕ ಮಾಯಿಲಾಂಕೋಟೆ ನಿವಾಸಿ ಅರಬಿ ಹಾಗೂ ನಫೀಸಾ ದಂಪತಿಯ ಪುತ್ರ ಮುಹಮ್ಮದ್ ನೌಫಲ್ (30) ಮೃತಪಟ್ಟವರು ಎಂದು ಗುರುತಿಸಲಾಗಿದೆ. ನೌಫಲ್ ಅವರು ಪಾಂಡಿ ಬಳವಂತಡ್ಕದಲ್ಲಿರುವ ತನ್ನ ಪತ್ನಿಯ ಮನೆಗೆ ಹೋಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಸಿಡಿಲು ಬಡಿದ ತಕ್ಷಣವೇ ಅವರನ್ನು ಮುಳ್ಳೇರಿಯಾ ಸಹಕಾರಿ ವೈದ್ಯಕೀಯ ಕೇಂದ್ರಕ್ಕೆ ದಾಖಲಿಸಲಾಯಿತಾದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಮೃತ ನೌಫಲ್ ಅವರು ತಿರುವನಂತಪುರದ ಜ್ಯೂಸ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆದುರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

accident

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ – ಪ್ರಾಣಾಪಾಯದಿಂದ ಪಾರು

Published

on

ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಅಪಘಾತಕ್ಕೀಡಾದ ಘಟನೆ ನಡೆದಿದೆ.

ಕರಿಕ್ಕಳ – ನಿಂತಿಕಲ್ ಮಧ್ಯೆ ಮುಚ್ಚಿಲ ಎಂಬಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಎದುರಿನಿಂದ ಹೋಗುತ್ತಿದ್ದ ಕಾರು ಸಡನ್ನಾಗಿ ಬ್ರೇಕ್‌ ಹಾಕಿದ ಪರಿಣಾಮ ಶಾಸಕರ ಕಾರು ಅದಕ್ಕೆ ಡಿಕ್ಕಿ ಹೊಡೆದಿದೆಯೆನ್ನಲಾಗಿದೆ.

ಅಪಘಾತದ ವಿವರ:
ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಕಾರು ಜಖಂಗೊಂಡಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

Continue Reading

accident

ಪುಂಜಾಲಕಟ್ಟೆ ಬಳಿ ಸಿಡಿಲು ಬಡಿದು ಮನೆ ಸಂಪೂರ್ಣ ಧ್ವಂಸ; ಮಹಿಳೆಗೆ ಗಂಭೀರ ಗಾಯ

Published

on

ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಅನಿಲ್ದಡ್ಡ ಎಂಬಲ್ಲಿ ಸೋಮವಾರ (ಅ.5) ಬೆಳಿಗ್ಗೆ ಸಂಭವಿಸಿದ ಭೀಕರ ಸಿಡಿಲು ಬಡಿತಕ್ಕೆ ಮನೆಯೊಂದು ಸಂಪೂರ್ಣ ಹಾನಿಗೊಂಡಿದ್ದು, ಮನೆಯಲ್ಲಿದ್ದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆಯ ವಿವರ: ಇಲ್ಲಿನ ನಿವಾಸಿ ನಾಗೇಶ್ ಕುಲಾಲ್ ಅವರ ಹಂಚಿನ ಮನೆಗೆ ಇಂದು ಬೆಳಿಗ್ಗೆ ಸಿಡಿಲು ಅಪ್ಪಳಿಸಿದೆ. ಸಿಡಿಲಿನ ತೀವ್ರತೆಗೆ ಇಡೀ ಮನೆ ಸಂಪೂರ್ಣವಾಗಿ ಕುಸಿದು ಬಿದ್ದಂತೆ ಹಾನಿಗೊಂಡಿದ್ದು, ಹೆಂಚಿನ ಭಾವಣೆ ಸಹಿತ ಮನೆಯೊಳಗಿನ ವಸ್ತುಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ.

ಅಡುಗೆ ಮನೆಯಲ್ಲಿದ್ದಾಗ ದುರ್ಘಟನೆ: ಘಟನೆ ಸಂಭವಿಸಿದ ಸಮಯದಲ್ಲಿ ಕುಶಾಲಾಕ್ಷಿ ಅವರು ಅಡುಗೆ ಮನೆಯಲ್ಲಿ ಕೆಲಸದಲ್ಲಿ ನಿರತರಾಗಿದ್ದಾಗ ಸಿಡಿಲು ಬಡಿದಿದೆ. ಆ ಸಮಯದಲ್ಲಿ ನಾಗೇಶ್ ಕುಲಾಲ್ ಅವರು ಸಮೀಪದಲ್ಲಿದ್ದ ತಂದೆಯ ಮನೆಗೆ ತೆರಳಿದ್ದರು. ಮನೆಯಲ್ಲಿ ಪತಿ-ಪತ್ನಿ ಇಬ್ಬರೇ ವಾಸವಿದ್ದು, ಅಕ್ಕಪಕ್ಕದಲ್ಲಿ ಬೇರೆ ಮನೆಗಳು ಇಲ್ಲದಿರುವುದರಿಂದ ಹೆಚ್ಚಿನ ಅನಾಹುತ ತಪ್ಪಿದೆ.

ಆಸ್ಪತ್ರೆಗೆ ದಾಖಲು: ಸಿಡಿಲು ಬಡಿತದಿಂದ ಗಂಭೀರವಾಗಿ ಗಾಯಗೊಂಡ ಕುಶಾಲಾಕ್ಷಿ ಅವರನ್ನು ತಕ್ಷಣವೇ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಲಾಯಿತು. ಬಳಿಕ ವೈದ್ಯರ ಸಲಹೆಯ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಮುಂದುವರಿದಿದೆ.

ಸ್ಥಳಕ್ಕೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading

ads (2)
ads (3)
ads (4)
ads (5)
ads (6)
ads (1)
ads (8)
ads (7)

Trending

Copyright © 2025 Deevatige

error: Content is protected !!